Author: admin

ಬೆಂಗಳೂರು: ಬಹಳ ದಿನಗಳ ಬಳಿಕ ಧರ್ಮಸ್ಥಳದ ಬಂಗ್ಲಗುಡ್ಡದಲ್ಲಿ ವಿಶೇಷ ತನಿಖಾ ದಳ(ಎಸ್ ಐಟಿ) ಪರಿಶೀಲನೆಗೆ ನಡೆಸಿದ್ದು, ಸೌಜನ್ಯ ಅವರ ಮಾವ ವಿಠಲ್‌ ಗೌಡ ಬಂಗ್ಲಗುಡ್ಡ ಪ್ರದೇಶದಲ್ಲಿ ಮೂಳೆಗಳು ಪತ್ತೆಯಾಗಿರುವ ಬಗ್ಗೆ ನೀಡಿರುವ ಹೇಳಿಕೆಯ ಬೆನ್ನಲ್ಲೇ ಈ ಕಾರ್ಯಾಚರಣೆ ಆರಂಭವಾಗಿದೆ. ಸುಮಾರು 50 ರಿಂದ 60 ಮಂದಿಯ ತಂಡ ಬಂಗ್ಲೆಗುಡ್ಡ ದಟ್ಟ ಅರಣ್ಯ ಪ್ರದೇಶವನ್ನು ಪ್ರವೇಶಿಸಿ ಶೋಧ ನಡೆಸುತ್ತಿದೆ. ಎಸ್‌ ‍ಐಟಿಯ ತನಿಖಾಧಿಕಾರಿ ಜಿತೇಂದ್ರಕುಮಾರ ದಯಾಮ ಹಾಗೂ ಎಸ್‌‍ಪಿ ಸೈಮನ್‌ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ಹಾಗೂ ಪಂಚನಾಮೆ ಮಾಡಲಾಗಿದೆ. ತಂಡದಲ್ಲಿ ಅರಣ್ಯ ಇಲಾಖೆಯ 13ಕ್ಕೂ ಹೆಚ್ಚು ಅಧಿಕಾರಿ ಹಾಗೂ ಸಿಬ್ಬಂದಿಗಳಿದ್ದರು. ಕ್ರೈಂ ಸೀನ್‌ನ 9ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಬಾಂಬ್‌ ಪತ್ತೆಗಾಗಿ ಬಳಸುವ ಮೆಟಲ್‌ ಡಿಟೆಕ್ಟರ್‌ ಯಂತ್ರಗಳನ್ನು ಉಪಯೋಗಿಸಲಾಗಿದೆ. ವೈದ್ಯರು, ಕಂದಾಯ ಇಲಾಖೆಯ ಕೆಲ ಹಂತದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು, ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಈ ತಂಡದಲ್ಲಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕಲಬುರಗಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಿರುವ ಬೆಳೆಹಾನಿಯನ್ನು ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ವಾರದಲ್ಲಿ ಈ ಸಮೀಕ್ಷೆ ಪೂರ್ಣಗೊಂಡು ವರದಿ ಸಲ್ಲಿಕೆಯಾಗಲಿದೆ. ಆ ಬಳಿಕ ಬೆಳೆನಷ್ಟ ಪರಿಹಾರ ಪಾವತಿಸುವುದಾಗಿ ಹೇಳಿದರು. ಈ ಬಾರಿ ಅದೃಷ್ಟವಶಾತ್‌ ರಾಜ್ಯದ ಹಲವು ಕಡೆ ವಾಡಿಕೆಗಿಂತ ಶೇ. 4ರಷ್ಟು ಹೆಚ್ಚು ಮಳೆಯಾಗಿದೆ. ಬೀದರ್‌, ಕಲಬುರಗಿ, ಯಾದಗಿರಿ ಸೇರಿ ಹಲವಾರು ಜಿಲ್ಲೆಗಳಲ್ಲಿ ಬೆಳೆನಷ್ಟ ಹೆಚ್ಚಾಗಿದೆ. ಕೂಡಲೇ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳೆ ನಷ್ಟದ ಬಗ್ಗೆ ಮಧ್ಯಂತರ ವರದಿ ಪಡೆದಿಲ್ಲ. ಜಂಟಿ ಸಮೀಕ್ಷೆಯ ಅಂತಿಮ ವರದಿ ಪಡೆದು, ಬಳಿಕ ಕ್ರಮ ಕೈಗೊಳ್ಳಲಾಗುವುದು. 2024-25ನೇ ಸಾಲಿಗೆ ಬೆಳೆವಿಮೆ ಯೋಜನೆಯಡಿ 656 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಇದು ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಬೆಳೆ…

Read More

ಬೀದರ್: ಮನೆಯ ಮೂರನೇ ಮಹಡಿಯಿಂದ ತಳ್ಳಿ 6 ವರ್ಷದ ಬಾಲಕಿ ಶಾನವಿಯನ್ನು ಕೊಂದ ಆರೋಪದಲ್ಲಿ ಮಲತಾಯಿಯನ್ನು ಬಂಧಿಸಲಾಗಿದ್ದು, ಆಕೆ ತನಿಖೆಯಲ್ಲಿ ತಪ್ಪೊಪ್ಪಿಕೊಂಡಿದ್ದಾಳೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ. ಆ.22 ರಂದು ಶಾನವಿ ಮೃತಪಟ್ಟ ಘಟನೆ ಮೊದಲು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾಳೆ ಎಂದು ಪ್ರಕರಣ ದಾಖಲಾಗಿತ್ತು. ಆದರೆ, ಸೆ.13ರಂದು ಸಾರ್ವಜನಿಕರು ಒದಗಿಸಿದ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ, ಮಲತಾಯಿ ಉದ್ದೇಶಪೂರ್ವಕವಾಗಿ ತಳ್ಳಿರುವುದು ಬಹಿರಂಗವಾಗಿದೆ. ನಂತರ ಶಾನವಿಯ ಅಜ್ಜಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಾಲಾಗಿತ್ತು ಆರೋಪಿಯನ್ನು ಅದೇ ದಿನ ಬಂಧಿಸಿ ವಿಚಾರಣೆ ನಡೆಸಿದಾಗ, ಶಾನವಿಯನ್ನು ತಳ್ಳಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ತನಿಖೆಯಲ್ಲಿ ತಿಳಿದುಬಂದಂತೆ, ಆರೋಪಿಣಿ ಮೃತ ಶಾನವಿಯ ತಂದೆಯ ಎರಡನೇ ಹೆಂಡತಿ. ಶಾನವಿ ಮೊದಲ ಹೆಂಡತಿಯ ಮಗಳು. ಆರೋಪಿಗೆ ಈಗಾಗಲೇ ಎರಡು ಅವಳಿ ಮಕ್ಕಳು ಇದ್ದು, ಮುಂದಿನ ದಿನಗಳಲ್ಲಿ ಆಸ್ತಿ ಹಂಚಿಕೆಯಲ್ಲಿ ಶಾನವಿಗೂ ಪಾಲು ಸಿಗಬಹುದೆಂಬ ಭಯದಿಂದಲೇ ಈಕೆಯು ಮಗುವನ್ನು ಕೊಂದಿರುವುದು ಸ್ಪಷ್ಟವಾಗಿದೆ ಎಂದು…

Read More

ಚಾಮರಾಜನಗರ: ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ ನಡೆದಿದೆ. ಸುಮಂತ್ (22), ನಿತಿನ್ ಕುಮಾರ್ (16) ಸಾವನ್ನಪ್ಪಿದ ದುರ್ದೈವಿಗಳು.  ಲಾರಿಗೆ ಟೊಮ್ಯಾಟೊ ತುಂಬಿಕೊಂಡು ಹೋಗುತ್ತಿದ್ದ ಆಟೋ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ ರಸ್ತೆಗೆ ಟೊಮ್ಯಾಟೊ ಬಾಕ್ಸ್‌ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಳೆಪಿಳ್ಳಾರಿ ಸಮೀಪದ ಜಮೀನಿನಿಂದ ಕಬ್ಬು ತುಂಬಿಸಿಕೊಂಡ ಲಾರಿ ಕಾರ್ಖಾನೆಗೆ ತೆರಳಲು ರಸ್ತೆಯ ಬಳಿ ನಿಂತಿತ್ತು. ಈ ಸಂದರ್ಭದಲ್ಲಿ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ ಹಿಂಬದಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಮತ್ತೆ ಹೆಚ್ಚುವರಿಯಾಗಿ 18,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಆದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇವಲ 5,428 ಶಿಕ್ಷಕರನ್ನು ಮಾತ್ರ ನೇಮಕ ಮಾಡಿತ್ತು ಎಂದರು. ಶಾಲಾ ಕೊಠಡಿಗಳ ಶಿಥಿಲಾವಸ್ಥೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದು ಕೇವಲ ನಮ್ಮ ಸರಕಾರದ ಅವಧಿಯಲ್ಲಿ ಸೃಷ್ಟಿಯಾದ ಸಮಸ್ಯೆಯಲ್ಲ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, ಎಲ್ಲಾ ಶಾಲೆಗಳಲ್ಲೂ ಸಮಸ್ಯೆಗಳಿಲ್ಲ ಎಂದು ಹೇಳುತ್ತಿಲ್ಲ. ಈ ಹಿಂದಿನ ಸರಕಾರ ಯಾವುದೇ ಕೊಠಡಿಯನ್ನು ಕಟ್ಟಿಲ್ಲ. ನೇಮಕ ಕೂಡ ಮಾಡಿಲ್ಲ. ನಾವೂ ಅಧಿಕಾರಕ್ಕೆ ಬಂದ ಮೇಲೆ ವಿವೇಕ ಯೋಜನೆಯಡಿ 8,200 ಕೊಠಡಿ ಪೂರ್ಣ ಮಾಡಿದ್ದೇವೆ. ಮತ್ತೆ 3000 ಸಾವಿರ ಕೊಠಡಿ ನಿರ್ಮಾಣಕ್ಕೆ ತೀರ್ಮಾನಿಸಲಾಗಿದೆ. ಅಲ್ಲದೇ ನೂತನವಾಗಿ 800 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ ಎಂದು…

Read More

ಬೆಂಗಳೂರು: ಹೃದಯಾಘಾತವಾಗಿದ್ದರೂ, ತಾನು ಚಲಾಯಿಸುತ್ತಿದ್ದ ಬಸ್ಸನ್ನು ಸುರಕ್ಷಿತವಾಗಿ ನಿಲ್ಲಿಸಿ 45ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿ ಕೆಎಸ್ ಆರ್’ ಟಿಸಿ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದಿದ್ದಾರೆ. ರಾಜೀವ್ ಬೀರಸಾಲ್ (56) ಹೃದಯಾಘಾತದಿಂದ ಮೃತರಾದ ಚಾಲಕರಾಗಿದ್ದಾರೆ. ಇವರು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನವರಾಗಿದ್ದು, ಸುಮಾರು 20 ವರ್ಷಗಳಿಂದ ಕೆಎಸ್‌ ಆರ್‌ ಟಿಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್ಆರ್ ​​ಟಿಸಿ ರಾಜಹಂಸ ಬಸ್’ನ್ನು ರಾಜೀವ್ ಬೀರಸಾಲ್ ಅವರು ಚಲಾಯಿಸುತ್ತಿದ್ದರು.  ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ರಾಜೀವ್ ಬೀರಸಾಲ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಬಸ್ಸನ್ನು ಹೆದ್ದಾರಿಯ ಒಂದು ಬದಿಯಲ್ಲಿ ನಿಲ್ಲಿಸಿದ್ದಾರೆ. ಇದರಿಂದ ಸಂಭಾವ್ಯ ಅಪಘಾತ ತಪ್ಪಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಿಲ್ಲಿಸಿದ ಕೂಡಲೇ ರಾಜೀವ್ ಅವರು ಕೆಳಗೆ ಬಿದ್ದಿದ್ದು, ಇದನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಆ್ಯಂಬುಲೆನ್ಸ್ ​ಗೆ ಕರೆ ಮಾಡಿದ್ದಾರೆ. ಆ್ಯಂಬುಲೆನ್ಸ್ ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್…

Read More

ಬೀದರ್: ಮಲತಾಯಿಯೊಬ್ಬಳು ತನ್ನ ಮಗಳನ್ನು ಮನೆಯ ಮೇಲ್ಛಾವಣಿಯಿಂದ ತಳ್ಳಿ ಕೊಂದ ಘಟನೆ ನಗರದ ನ್ಯೂ ಆದರ್ಶ ಕಾಲೋನಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕಿಯನ್ನು ಶಾನವಿ (7) ಎಂದು ಗುರುತಿಸಲಾಗಿದೆ. ಈ ಘಟನೆ ಕುರಿತು ಶಾನವಿಯ ಅಜ್ಜಿ ವಿಜಯಶ್ರೀ ಅವರು ನೀಡಿದ ದೂರಿನಲ್ಲಿ, ಆ. 27 ರಂದು ಮನೆ ಮೇಲ್ಛಾವಣಿಯಿಂದ ಮೊಮ್ಮಗಳು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟಿದ್ದಳು. ಮೊದಲು ನಾವು ಕಾಲು ಜಾರಿ ಬಿದ್ದಿರಬಹುದು ಎಂದುಕೊಂಡಿದ್ದೆವು. ಆದರೆ ಪಕ್ಕದ ಮನೆಯ ಸಿಸಿಟಿವಿ ದೃಶ್ಯದಲ್ಲಿ ನನ್ನ ಸೊಸೆ ರಾಧಾ ಆಕೆಯನ್ನು ಮೇಲ್ಛಾವಣಿಯಿಂದ ತಳ್ಳಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ ಶಾನವಿ, ನನ್ನ ಮಗನ ಮೊದಲ ಹೆಂಡತಿ ಗಾಯತ್ರಿಯ ಮಗಳು. ನನ್ನ ಮಗ ಮತ್ತು ರಾಧಾಳದ್ದು ಎರಡನೇ ಮದುವೆ. ಇವರಿಬ್ಬರಿಗೆ ಜವಳಿ ಮಕ್ಕಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಇಬ್ಬರು ಮಕ್ಕಳಿಗೆ ತೊಂದರೆ ಆಗಬಹುದು ಎಂದುಕೊಂಡು ರಾಧಾಳು ಶಾನವಿಯ ಮೇಲೆ ದ್ವೇಷ ಬೆಳೆಸಿಕೊಂಡಿದ್ದಳು. ಆ ದ್ವೇಷದಿಂದಲೇ ಆಕೆಯನ್ನು ಮೇಲ್ಛಾವಣಿಯಿಂದ ತಳ್ಳಿದ್ದಾಳೆ ಎಂದು ಅಜ್ಜಿ ದೂರಿನಲ್ಲಿ ಆರೋಪಿಸಿದ್ದಾರೆ…

Read More

ಬೀದರ್: ಜಿಲ್ಲೆಯ ಚಿಂತಾಕಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಕರಂಜಿ (ಬಿ) ಗ್ರಾಮದ ಹೊಲದಲ್ಲಿ ಗಾಂಜಾ ಬೆಳೆಯುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೀದರ್ ಜಿಲ್ಲಾ ಪೊಲೀಸರು 8 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಐಪಿಎಸ್ ಅವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಸಲಾಯಿತು.  ಕಾರ್ಯಾಚರಣೆಯಲ್ಲಿ ಡ್ರೋನ್ ಕ್ಯಾಮರಾವನ್ನು ಬಳಸಿರುವುದು ವಿಶೇಷವಾಗಿತ್ತು. ಕಾರ್ಯಾಚರಣೆಯಲ್ಲಿ  ಅಂಬೀಶ ವಾಗಮೋರೆ, ಪಿಎಸ್‌ ಐ ಡಿಸಿಆ ರ್‌ಬಿ ಘಟಕ ಬೀದರ್, ಡಿ.ಎಸ್‌.ಬಿ ಘಟಕ ಗುಂಡಪ್ಪಾ ರೆಡ್ಡಿ, ಎ.ಎಸ್‌.ಐ, ಸಿ.ಹೆಚ್.ಸಿ ಸಂತೋಷ, ಸಿ.ಪಿ.ಸಿ ಸಂತೋಷ ಮತ್ತು ಡ್ರೋನ್ ಕ್ಯಾಮರಾ ಆಪರೇಟರ್ ಸಿ.ಹೆಚ್‌.ಸಿ ರಾಜಕುಮಾರ ಜೊತೆಗೆ ಚಿಂತಾಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಚಂದ್ರಶೇಖರ ನಿರ್ಣೆ ಅವರ ಸಿಬ್ಬಂದಿಯಾದ ಸಿದ್ದೇಶ್ವರ, ಶ್ರೀಪತಿ, ಗೋರಖ, ಸದೋಜಾತ, ಸಂತೋಷ, ಮಾಣಿಕ  ಭಾಗಿಯಾಗಿದ್ದರು. ಹೊಲದಲ್ಲಿ ಪತ್ತೆಯಾದ ಗಾಂಜಾದ ತೂಕ 8 ಕೆ.ಜಿ 120 ಗ್ರಾಂ ನಷ್ಟಿದ್ದು 8,12,000 ರೂ.…

Read More

ಕೊರಟಗೆರೆ : ಜಾತಿ ಗಣತಿ ಸಮೀಕ್ಷೆಯಲ್ಲಿ ಕುಂಚಿಟಿಗ ಜನಾಂಗದ ಬಂಧುಗಳು ನಂ.೯ ಜಾತಿ ಕಾಲಂ ನಲ್ಲಿ ಕುಂಚಿಟಿಗ ಎಂದು ಹಾಗೂ ಕೋಡ್ ನಂಬರ್‌ನಲ್ಲಿ ಎ–0795 ಎಂದು ಕಡ್ಡಾಯವಾಗಿ ನಮೂದಿಸಬೇಕೆಂದು ಎಲೆರಾಂಪುರದ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಹನುಮಂತನಾಥ ಸ್ವಾಮೀಜಿ ತಿಳಿಸಿದರು. ಅವರು ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕುಂಚಿಟಗರ ಸಂಘ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೆಪ್ಟೆಂಬರ್ 22 ರಿಂದ ಹಮ್ಮಿಕೊಂಡಿರುವ ಜಾತಿ ಜನಗಣತಿ ಸಮೀಕ್ಷೆಯಲ್ಲಿ ಕುಂಚಿಟಿಗ ಜನಾಂಗದವರು ಯಾವುದೇ ಕುಲ ಪಂಗಡಗಳನ್ನು ಹೇಳದೆ ಕಾಲಂ ನಂಬರ್ 9 ರಲ್ಲಿ ಕುಚಂಟಿಗ ಎಂದೇ ಬರೆಸಬೇಕು, ಕಾಲಂ ನಂಬರ್ 8 ರಲ್ಲಿ  ಧರ್ಮದಲ್ಲಿ ಹಿಂದೂ ಎಂದು ಹಾಗೂ ಕೋಡ್ ನಂಬರ್ ನಲ್ಲಿ ಎ–೦೭೯೫ ಎಂದು ನಮೂದಿಸುವುದು ಬಿಟ್ಟರೆ ಮತ್ತೇ ಯಾವುದೆ ಕುಲ ಮತ್ತು ಬೆಡಗುಗಳನ್ನ ಹೇಳಬೇಡಿ ಇದರಿಂದ ಕುಂಚಿಟಿಗರು ಕೇಂದ್ರದ ಹಿಂದುಳಿದ ಆಯೋಗದ ಪಟ್ಟಿಗೆ ಸೇರಲು ಅನುಕೂಲವಾಗುತ್ತದೆ, ಕುಂಚಿಟಿಗರು ರಾಜ್ಯದಲ್ಲಿ ಸುಮಾರು 35 ಲಕ್ಷ…

Read More

ತುಮಕೂರು: ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ FITWEL TOOLS AND FORGINGS PRIVATE LIMITED ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮವನ್ನು ಸೋಮವಾರ ಮಧ್ಯಾಹ್ನ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್ ಹಾಗೂ ಹೆಚ್ಚುವರಿ ಪೊಲೀಸ್ ಅಧಿಕಾರಿ ಗೋಪಾಲ್ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಸಂಚಾರ ನಿಯಮ ಪಾಲನೆಯ ಅವಶ್ಯಕತೆ, ರಸ್ತೆ ಸುರಕ್ಷತೆಯ ಜವಾಬ್ದಾರಿ ಹಾಗೂ ಅಪಘಾತ ತಡೆ ಕುರಿತ ಸಂದೇಶ ನೀಡಿದರು. ಕಂಪನಿಯ ಮ್ಯಾನೇಜರ್ ಧನಂಜಯ್ ಎಂ. ಅವರು ಸಂಸ್ಥೆ ಸದಾ ತನ್ನ ಕಾರ್ಮಿಕರ ಹಿತಾಸಕ್ತಿಗೆ ಬದ್ಧವಾಗಿದೆ ಎಂದು ತಿಳಿಸಿದರು. ಕಂಪನಿಯ ಮಾಲೀಕರಾದ ಅನಂತ್ ಡಿ.ಎಸ್. ಅವರು CSR ನಿಧಿಯಡಿ 10 ಬ್ಯಾರಿಕೇಡ್‌ ಗಳು ಹಾಗೂ ಸೋಲಾರ್ ಬ್ಲಿಂಕರ್ ಲೈಟ್‌ ಗಳನ್ನು ಜಿಲ್ಲಾ ಪೊಲೀಸ್ ಇಲಾಖೆಗೆ ಹಸ್ತಾಂತರಿಸಿದರು. ಸಂಚಾರ ಅಪಘಾತಗಳನ್ನು ತಡೆಯಲು ಈ ನೆರವು ಮಹತ್ವದ್ದೆಂದು ಪೊಲೀಸರು ಪ್ರಶಂಸೆ ವ್ಯಕ್ತಪಡಿಸಿದರು. ಪ್ರತಿದಿನ ಸುಮಾರು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಸಂಚರಿಸುವ ಕರ್ನಾಟಕ ಹ್ಯಾಂಡ್ ಟೂಲ್ಸ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಈ…

Read More