Author: admin

ಬೀದರ್ : 2025–26ನೇ ಶೈಕ್ಷಣಿಕ ವರ್ಷದ ಪ್ರೌಢ ಶಾಲಾ ವಿಭಾಗದಲ್ಲಿ ಔರಾದ್ ನ ನಾಲಂದಾ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಶೋಭಾ ತಂದೆ ಸಂತೋಷ್ ಎಂಬ ವಿದ್ಯಾರ್ಥಿನಿಯು ಬಾಲಕಿಯರ ಕುಸ್ತಿ ಪಂದ್ಯದಲ್ಲಿ ಜಿಲ್ಲಾ ಮಟ್ಟದಲ್ಲಿ ಅಪ್ರತಿಮ ಸಾಧನೆಗೈದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನ ಬೆಳಕುಣಿ (ಬಿಎಚ್) ಗ್ರಾಮದ ನಿವಾಸಿಯಾದ ಶೋಭಾ, ಜಿಲ್ಲಾ ಮಟ್ಟದ ಬಾಲಕಿಯರ ಕುಸ್ತಿ ಪಂದ್ಯದಲ್ಲಿ ತನ್ನ ಎದುರಾಳಿಯನ್ನು ಸೋಲಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ಶಾಲೆಗೆ ಕೀರ್ತಿ ತಂದಿದ್ದಾಳೆಅವಳ ಈ ಸಾಧನೆಯನ್ನು ಶ್ಲಾಘಿಸಿ ಶಾಲೆಯ ಶಿಕ್ಷಕರು ಆಕೆಯನ್ನು ಸನ್ಮಾನ ಮಾಡಿದ್ದಾರೆ. ವಿದ್ಯಾರ್ಥಿನಿ ಶೋಭಾ  ಅವರನ್ನು ಎಸ್ ಪಿ ಕೆ ಸಂಸ್ಥೆಯ ಅಧ್ಯಕ್ಷ ಕೆ.ಪುಂಡಲೀಕ ರಾವ್, ಶಾಲೆಯ ಮುಖ್ಯಗುರು ಜಗನ್ನಾಥ್ ಬಿರಾದಾರ್, ದೈಹಿಕ ಶಿಕ್ಷಕ ಸುನೀಲಕುಮಾರ್ ವಾಗಮೋಡೆ, ಸಹ ಶಿಕ್ಷಕರಾದ ದಿಲೀಪಕುಮಾರ್ ಮೇತ್ರೆ, ಮಲ್ಲಿಕಾರ್ಜುನ್ ಕೋಟೆ, ಪರಮೇಶ್ವರ್ ಬಿರಾದಾರ್, ಸಿದ್ಧಾರ್ಥ ಕಾಂಬಳೆ, ಅಸ್ಪಾಕಮಿಯ್ಯಾ ಬೇಗ್ ಹಾಗೂ ಸಹ ಶಿಕ್ಷಕಿಯರಾದ ಪ್ರೀಯಾ ಬಿರಾದಾರ್, ಜ್ಯೋತಿ ಘೂಳೆ ಹಾಗೂ…

Read More

ಬೆಳಗಾವಿ: ದ್ವೇಷಭಾಷಣದ ಆರೋಪದ ಮೇಲೆ ತುಮಕೂರು ನಗರ ಠಾಣೆ ಪೊಲೀಸರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಶನಿವಾರ ನಡೆದ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್‌ ಭಾಗವಹಿಸಿದ್ದರು. ಈ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಭಾನುವಾರ ರಾತ್ರಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ. ಅನ್ಯಕೋಮಿನ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪೊಲೀಸ್ ಸಿಬ್ಬಂದಿ ರಘುನಾಥ್ ಕೊಟ್ಟ ದೂರಿನ ಮೇರೆಗೆ ಪೊಲೀಸರು ಎಫ್‌ ಐಆ‌ರ್ ದಾಖಲಿಸಿಕೊಂಡಿದ್ದಾರೆ. ಮದ್ದೂರಿನಲ್ಲಿ ನನ್ನ ವಿರುದ್ಧ 70ನೇ ಪ್ರಕರಣ ದಾಖಲಾಗಿದೆ. ತುಮಕೂರಿನಲ್ಲಿ 71ನೇ ಪ್ರಕರಣ ದಾಖಲಾಗಬಹುದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ 71ನೇ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿ ಮಾದರಿಯಲ್ಲೇ ರಾಜ್ಯದಲ್ಲೂ ಹೆಚ್ಚು ಹೊಗೆ ಹೊರಸೂಸುವ ಹಳೆ ವಾಹನಗಳನ್ನು ಗುಜರಿಗೆ ಹಾಕುವ ಪ್ಲಾನ್‌ ರೆಡಿಯಾಗುತ್ತಿದೆ. ಪರಿಸರಕ್ಕೆ ಮಾರಕವಾಗುವಂತಹ 15 ವರ್ಷಗಳು ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ನಿರ್ಧಾರವನ್ನು ಈಗಾಗಲೇ ಕೇಂದ್ರ ಸರ್ಕಾರ ಕೈಗೊಂಡಿದೆ. ದೇಶದಲ್ಲೇ ಅತಿ ಹೆಚ್ಚು ಪರಿಸರ ಮಾಲಿನ್ಯವಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಸ್ಕ್ರ್ಯಾಪ್‌ ಪಾಲಿಸಿಯನ್ನು ಜಾರಿಗೊಳಿಸಲಾಗಿದೆ. ಇದೀಗ ದೆಹಲಿ ಮಾದರಿಯಲ್ಲೇ ರಾಜ್ಯದಲ್ಲ್ಲೂ 15 ವರ್ಷ ಮೇಲ್ಪಟ್ಟ ವಾಹನಗಳನ್ನು ಸ್ಕ್ರ್ಯಾಪ್‌ ಮಾಡುವ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ವರದಿಯಾಗಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲೂ ಸ್ಕ್ರ್ಯಾಪ್‌ ಪಾಲಿಸಿಯನ್ನು ಸಾರಿಗೆ ಇಲಾಖೆ ಜಾರಿಗೊಳಿಸಿದೆ. 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವಂತೆ ಈಗಾಗಲೇ ನೋಟೀಸ್‌‍ ನೀಡಲಾಗಿದೆ. ಟೂ ಸ್ಟ್ರೋಕ್‌ ಆಟೋಗಳ ಜತೆಗೆ 15 ವರ್ಷ ತುಂಬಿರೋ ಲಾರಿಗಳನ್ನೂ ಸ್ಕ್ರ್ಯಾಪ್‌ ಮಾಡುವಂತೆ ಸೂಚಿಸಲಾಗಿದೆ. ಸ್ಕ್ರ್ಯಾಪ್‌ ಪಾಲಿಸಿಗೆ ವಾಹನದ ಮಾದರಿ ಆಧರಿಸಿ ಸಾರಿಗೆ ಇಲಾಖೆ ಪರಿಹಾರ ನೀಡುತ್ತಿದೆ. ಮೊದಲ ಹಂತದಲ್ಲಿ ಸರ್ಕಾರಿ ವಾಹನಗಳ ಸ್ಕ್ರ್ಯಾಪ್‌ ಮಾಡಲು ತೀರ್ಮಾನ ಮಾಡಿರುವ…

Read More

ಹಾದನೂರು ಚಂದ್ರ ಸರಗೂರು: ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ನೆರವಾಗುವ ಸಲುವಾಗಿ ತಮ್ಮ ಸ್ವಂತ ಹಣ ಹಾಗೂ ಪ್ರದೇಶವನ್ನು ಬಡಗಿಯೊಬ್ಬರು ತಮ್ಮ ಸುತ್ತಲಿನ ಹತ್ತಾರು ಹಳ್ಳಿಗಳ ಶಾಲೆಗಳಿಗೆ ಮಂದ ಬೆಂಚು, ಕುರ್ಚಿ ಪೂರೈಸುವ ಮೂಲಕ ಮಾದರಿಯಾಗಿದ್ದಾರೆ. ನಂಜನಗೂಡಿನ ಹೆಡಿಯಾಲ ಗ್ರಾಪಂ ವ್ಯಾಪ್ತಿಯ ಮಡುವಿನಹಳ್ಳಿ ಗ್ರಾಮದ ಮಂಟೇಲಿಂಗಾಚಾರ್  ತಾವು ಕಲಿತಿರುವ ಮರಗೇಲಸದ ಕಸುಬಿನ ಮೂಲಕ ಜೀವನ ನಿರ್ವಹಣೆ ಮಾಡುತ್ತಿದ್ದು, ಇದರೊಂದಿಗೆ ಕಳೆದ 8 ವರ್ಷಗಳಿಂದ ಸರಕಾರಿ ಶಾಲೆಗಳಿಗೆ ಅವಶ್ಯಕ ಪರಿಕರಗಳನ್ನು ಉಚಿತವಾಗಿ ನೀಡುವ ಮೂಲಕ 9 ನೇ ವರ್ಷಕ್ಕೆ ಕಾಲಿಟ್ಟಿದ್ದು, ಸಮಾಜದ ಗಮನ ಸೆಳೆದಿದ್ದಾರೆ. 8 ವರ್ಷಗಳ ಹಿಂದೆ ಕುಡಿತದ ಚಟ ಬಿಟ್ಟು, ಕುಡಿತದ ಹಣವನ್ನು ಸಂಗ್ರಹಣೆ ಮಾಡಿ ಹಿಂದುಳಿದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ಪೀಠೋಪಕರಣಗಳನ್ನು ಮಾಡಿ ಕೊಡುತ್ತಾ ಬರುವ ಕುಶಲಕಾರ್ಮಿ 8 ವರ್ಷಗಳಿಂದ ಕುಡಿತದ ಚಟ ಬಿಟ್ಟು ಕುಡಿತದ ಹಣವನ್ನು ಸಂಗ್ರಹಣೆ ಮಾಡಿಕೊಂಡು ಹಿಂದುಳಿದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ  ಪೀಠೋಪಕರಣಗಳನ್ನು ಮಾಡಿ ಕೊಡುತ್ತಾ ಸಮಾಜಕ್ಕೆ ಮಾದರಿಯಾಗಿದ್ದಾರೆ. ಬಡತನದಲ್ಲಿ ಇದ್ದರೂ,…

Read More

ಬೀದರ್: ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಬೀದರ್ ಹಾಗೂ ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕತ್ವ ಯೋಜನೆ ಜಾರಿಯಲ್ಲಿದೆ. ಆದ್ದರಿಂದ ಇಂದು ಬೀದರ್  ಜಿಲ್ಲೆಯ ಹಳ್ಳದಕೇರಿ ಗ್ರಾಮದ ಅಂಗನವಾಡಿ ಕೇಂದ್ರ 1ರಲ್ಲಿ ಪೋಷಕತ್ವ ಯೋಜನೆ ಕುರಿತು ಮಾಹಿತಿ ನೀಡಲಾಯಿತು. ಪೋಷಕತ್ವ ಯೋಜನೆ ಅಡಿಯಲ್ಲಿ ಮಗುವಿನ ಪಾಲನೆ ಘೋಷಣೆ ರಕ್ಷಣೆಗಾಗಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮತ್ತು ಬೋಸ್ಕೋ ಬೆಂಗಳೂರು ಮತ್ತು ಡಾನ್ ಬಾಸ್ಕೋ ಬೀದರ್ ಇವರ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪೋಷಕತ್ವ ಯೋಜನೆ ಕುರಿತು ಎಂದರೆ ಜೈವಿಕ ಕುಟುಂಬವಲ್ಲದ ಬೇರೊಂದು ಕುಟುಂಬಕ್ಕೆ ತಾತ್ಕಾಲಿಕ ಅಥವಾ ವಿಸ್ತರಿಸಲ್ಪಟ್ಟ ಅವಧಿಯವರೆಗೆ 2 ವರ್ಷಕ್ಕೆ ಮೀರದ ಅವಧಿಯವರೆಗೆ ಬಾಲ ನ್ಯಾಯ ಕಾಯ್ದೆ 2005ರ ಕಲಂ 44ರ ಪ್ರಕಾರ ಮಗುವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಬೀದರ್ ಜಿಲ್ಲೆಯ ಡಾನ್ ಬೋಸ್ಕೋ ಪೋಷಕತ್ವ ಯೋಜನೆಯ ಸಂಯೋಜಕರಾದ ರಮೇಶ್ ಅವರು ತಿಳಿಸಿದರು.…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಗ್ರಾಮದ ಮರಿಯ ಕೃಪಾ ದವಾಖಾನೆ, ದೀಪಾಲಿಯ ಸಮಾಜ ಸೇವಾ ಸಂಸ್ಥೆ ಸಂತಪೂರ, ಆರ್ಬಿಟ್ ಸಮಾಜ ಸೇವಾ ಹುಮ್ನಾಬಾದ್, ಹಾಗೂ ಎಸ್.ಬಿ.ಪಾಟೀಲ್ ದಂತ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಬೀದರ್, ಇವರ ಸಂಯುಕ್ತ ಆಶ್ರಯದಲ್ಲಿ ಇಂದು  ಸಂತಪೂರನ ಮರಿಯ ಕೃಪಾ ಆಸ್ಪತ್ರೆಯಲ್ಲಿ ಉಚಿತ ದಂತ ತಪಾಸಣಾ ಆರೋಗ್ಯ ಶಿಬಿರ ಕಾರ್ಯಕ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂತಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ದಂತ ವೈದ್ಯಾಧಿಕಾರಿಗಳಾದ ರೇಣುಕಾರವರು ಉದ್ಘಾಟಿಸಿ ಮಾತನಾಡಿದರು. ಎಸ್.ಬಿ.ಪಾಟೀಲ್ ದಂತ ಮಹಾವಿದ್ಯಾಲಯದ ಎಚ್ ಓ ಡಿ ಸಿದ್ದಣ ಗೌಡ ಅವರು ದಂತ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ವಿಶೇಷ ಉಪನ್ಯಾಸ ಮಂಡಿಸಿದರು ಮತ್ತು ಜಾಗೃತಿಗೊಳಿಸಿದರು. ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಔರಾದ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಮುಖಂಡರಾದ ಸುಧಾಕರ್ ಕೊಳ್ಳುರ ಅವರು ಮಾತನಾಡಿ, ದೀಪಾಲಯ ಸಂಸ್ಥೆ ಇತರ ಸಾಮಾಜಿಕ ಕಾರ್ಯಗಳಿಗೆ ಹೆಸರಾಗಿದೆ ಎಂದು ಶ್ಲಾಘನೀಯ ವ್ಯಕ್ತಪಡಿಸಿದ್ದರು. ಹೋಲಿ ಕ್ರಾಸ್ ಚರ್ಚ್ ಫಾದರ್ ಕ್ಲಿವನ್ ಗೋಮ್ಸ್ ಅಧ್ಯಕ್ಷತೆ ವಹಿಸಿಕೊಂಡು…

Read More

ಸರಗೂರು: ಸತ್ವಯುತ ಆಹಾರ ಸೇವನೆ ಮಾಡುವುದು ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹಾದನೂರು ಪ್ರಕಾಶ್  ಹೇಳಿದರು. ತಾಲೂಕಿನ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಹಾದನೂರು ಗ್ರಾಮದ ಅಂಗನವಾಡಿ ಸಭಾಂಗಣದಲ್ಲಿ ಸೋಮವಾರದಂದು ಬಡಗಲಪುರ ಆರೋಗ್ಯ ಕೇಂದ್ರ ಹಾಗೂ ಮಕ್ಕಳ ಜಾಗೃತಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಪೌಷ್ಟಿಕ ಶಿಬಿರ ಸಪ್ತಾಹ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿಯ ದೇಹದಲ್ಲಿ ಸರಾಗವಾಗಿ ರಕ್ತ ಸಂಚಲನೆಯಾಗುತ್ತಿದ್ದರೆ ಅಂಥಹ ವ್ಯಕ್ತಿ ಆರೋಗ್ಯವಾಗಿರುತ್ತಾನೆ.  ಪೌಷ್ಟಿಕಾಂಶಯುಕ್ತ ಆಹಾರದ ಕೊರತೆಯಿಂದ ಗ್ರಾಮೀಣ ಪ್ರದೇಶದ ಮಹಿಳೆ ಮತ್ತು ಮಕ್ಕಳು ಸಾವನ್ನಪ್ಪುತ್ತಿದ್ದು. ಅಂಗನವಾಡಿ ಕಾರ್ಯಕರ್ತೆಯರು ಪೌಷ್ಟಿಕ ಆಹಾರ ವಿತರಣೆಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು ಎಂದು  ಹೇಳಿದರು. ಗ್ರಾಮೀಣ ಭಾಗದಲ್ಲಿ ಇರುವಂತಹ ಗರ್ಭಿಣಿಯರು ಸತ್ವಯುತ ಆಹಾರ ಸೇವನೆಯಿಂದ ಮುಂದೆ ಜನಿಸುವ ಮಗುವಿಗೆ ಮತ್ತು ತಾಯಿಗೆ ಒಳ್ಳೆಯದಾಗುತ್ತದೆ. ಈ ಕುರಿತಂತೆ ಗರ್ಭಿಣಿ ಮಹಿಳೆಯರಿಗೆ ಸೂಕ್ತ ಮಾರ್ಗದರ್ಶನ ನೀಡುವ ಮಹತ್ತರ ಜವಬ್ದಾರಿ ಅಂಗನವಾಡಿ ಕಾರ್ಯಕರ್ತೆಯರ ಮೇಲಿದೆ ಎಂದು ತಿಳಿಸಿದರು.…

Read More

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ನೀಡಿದ್ದ ದೂರಿನ ಅನ್ವಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಸೇರಿ 15 ಮಂದಿ ವಿರುದ್ದ ಭಾನುವಾರ ಪ್ರಕರಣ ದಾಖಲಾಗಿದೆ. ಅರಣ್ಯ ಇಲಾಖೆ ಡಿಆರ್​​ ಎಫ್ ಒ ಜ್ಞಾನಶೇಖರ್, ಡಿಆರ್ ​​ಎಫ್ ಒ ಕಾರ್ತಿಕ್​ ಯಾದವ್​, ಎಸಿಎಫ್ ಸುರೇಶ್,‌ ಡಿಆರ್​​ ಎಫ್ ಒ ಶಿವಕುಮಾರ್ ಇತರ ನೌಕರರಾದ ಶಿವಣ್ಣ, ಸುಚಿತ್ರ, ಸುಬ್ರಹ್ಮಣ್ಯ, ನಾಗೇಶ್, ಸೋಮು, ಪ್ರವೀಣ್, ಮಣಿಕಂಠ, ವಿನಯ್ ಕುಮಾರ್, ಸಂತೋಷ್, ರಾಜಪ್ಪ ಹಾಗೂ ಬಸವೇಗೌಡ ಎಂಬುವರ ವಿರುದ್ದ ಎಫ್​ ಐಆರ್​ ದಾಖಲು ಮಾಡಲಾಗಿದೆ. ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ಕಮಲಮ್ಮ ಎಂಬುವರು, ಅರಣ್ಯ ಇಲಾಖೆಯವರು ತನ್ನ ಕೈ ಹಿಡಿದು ಎಳೆದಾಡಿ, ಕಪಾಳಕ್ಕೆ ಹೊಡೆದು, ತಳ್ಳಿ ಬೀಳಿಸಿದ್ದಾರೆ. ಅಲ್ಲದೆ, ನನ್ನ ಮಗ ಗಂಗಾಧರ ಸ್ವಾಮಿ ಮತ್ತು ನಮ್ಮ ಜಮೀನಿನ ಬಾಜುದಾರರಾದ ರಘು, ಪ್ರದೀಪ್, ರೇವಣ್ಣ ಅವರುಗಳಿಗೆ ಕೈನಿಂದ ಹೊಡೆದು ನನ್ನ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಕತ್ತು…

Read More

ತಿಪಟೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಪಾರದರ್ಶಕವಾಗಿದ್ದು ಮಾದರಿಯಾಗಿದೆ ಎಂದು ಬಳುವನೆರಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ರಾಂಚ್ ಮ್ಯಾನೇಜರ್ ನಿರಂಜನ್ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ತಿಪಟೂರು ತಾಲೂಕು, ಸಾರ್ಥವಳ್ಳಿ ವಲಯದ ಬಲುವನೆರಳು ಸಾಮಾನ್ಯ ಗ್ರಾಹಕ ಸೇವಾಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು,  ತಿಪಟೂರು ತಾಲೂಕಿನಲ್ಲಿ ಒಟ್ಟು 3,800 ಸಂಘಗಳಿಗೆ ಎಸ್.ಬಿ.ಐ. ಬ್ಯಾಂಕಿನ ಮೂಲಕ ಆರ್ಥಿಕ ವ್ಯವಹಾರ ನೀಡುತ್ತಿದ್ದು, ಮರುಪಾವತಿ ಉತ್ತಮವಾಗಿದೆ ಎಂದರು. ಸಂಘದ ಪಾಲುದಾರ ಬಂಧುಗಳಿಗೆ ಸದಸ್ಯರ ಸಮ್ಮುಖದಲ್ಲಿ ಒಪ್ಪಿಗೆ ಪಡೆದು ಸದಸ್ಯರ ಬೆರಳಚ್ಚು ಪಡೆಯುವುದರ ಮೂಲಕ  ಸದಸ್ಯರಿಗೆ ನೇರವಾಗಿ ರಾಷ್ಟ್ರೀಕೃತ ಬ್ಯಾಂಕಿನ ಮೂಲಕ ಆರ್ಥಿಕ ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭ ಸಾಮಾನ್ಯ ಗ್ರಾಹಕ ಸೇವಾ ಕೇಂದ್ರದಲ್ಲಿ ಸೌಂದರ್ಯ ತಂಡದ ಸದಸ್ಯರಿಗೆ ಸಾಲ ವಿತರಣೆಯಾದ ಬಗ್ಗೆ ದಾಖಲಾತಿಯನ್ನು ವಿತರಿಸಿದರು. ಈ ಸಂದರ್ಭ ತಾಲೂಕಿನ ಯೋಜನಾಧಿಕಾರಿಯವರಾದ ಉದಯ್ ಕೆ., ಕಚೇರಿ ಹಣಕಾಸು ಪ್ರಬಂಧಕರಾದ ರೇವಣ್ಣ ಎಂ. ಹಾಗೂ…

Read More

ಔರಾದ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ ರಸ್ತೆ ಸಮಸ್ಯೆಯ ಬಗ್ಗೆ ನಿನ್ನೆ(ಭಾನುವಾರ) ನಮ್ಮತುಮಕೂರು ಸವಿವರವಾದ ವರದಿಯೊಂದನ್ನು ಪ್ರಕಟಿಸಿತ್ತು. ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆ ನಿರ್ಮಾಣದ ಭರವಸೆಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ. ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ. ಸ್ವಲ್ಪ ಮಳೆ ಬಂದರೂ ಸಹ ರಸ್ತೆ ಕೆಸರುಮಯವಾಗಿ ಅಕ್ಷರಶಃ ಗದ್ದೆಯಾಗಿ ಮಾರ್ಪಡುತ್ತಿದೆ. ಈ ವಿಚಾರದ ಬಗ್ಗೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಗಮನಕ್ಕೆ ಹಲವಾರು ಬಾರಿ ಸಾರ್ವಜನಿಕರು ತಂದರೂ ಅವರು ಕ್ರಮಕೈಗೊಳ್ಳದೇ ನಿರ್ಲಕ್ಷ್ಯವಹಿಸಿರುವುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ: ಗಾಢ ನಿದ್ದೆಯಲ್ಲಿರುವ ಅಧಿಕಾರಿಗಳು ನಿನ್ನೆ ವರದಿ ಪ್ರಕಟಗೊಂಡ ಬೆನ್ನಲ್ಲೇ ಔರಾದ್ ತಾಲ್ಲೂಕು ಪಂಚಾಯಿತಿ ಅಧಿಕಾರಿ ಇಓ ಅವರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕರೆ ಮಾಡಿ…

Read More