Author: admin

ತುಮಕೂರು: ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ಜೀವಂತ ಮೀನು ಮಾರಾಟ ಮಳಿಗೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲು ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ದೊಡ್ಡ ಎಣ್ಣೆಗೆರೆ ಗ್ರಾಮ ಪಂಚಾಯತಿಯ ದೊಡ್ಡಹುಲ್ಲೇನಹಳ್ಳಿ, ಮತ್ತಿಘಟ್ಟ ಗ್ರಾಪಂ, ಮಾದಾಪುರ, ಬರಕನಾಳು ಗ್ರಾಪಂ, ಹಂದಿಗನಾಡು ಹಾಗೂ ರಾಮನಹಳ್ಳಿ ಗ್ರಾಪಂ, ಜಾಣೇಹಾ‌, ಶಿರಾ ತಾಲ್ಲೂಕು ರಾಮಲಿಂಗಪುರ ಗ್ರಾಪಂ, ಕುಂಬಾರಹಳ್ಳಿ, ಮಾರಗೊಂಡನಹಳ್ಳಿ, ಗೋಪಾಲದೇವರಹಳ್ಳಿ ಗ್ರಾಪಂ, ಬಟ್ಟಿಗಾನಹಳ್ಳಿ ಸಿದ್ಧಕೋಣ, ಚಿನ್ನೇನಹಳ್ಳಿ ಗ್ರಾಪಂ, ಜೋಡಿದೇವರಹಳ್ಳಿ, ಸಲುಪರಹಳ್ಳಿ: ಪಾವಗಡ ತಾಲ್ಲೂಕು ಪೋತಗಾನಹಳ್ಳಿ ಗ್ರಾಪಂ. ದಳವಾಯಿಹಳ್ಳಿ, ಹೊಸದುರ್ಗ, ಚಿಕ್ಕನಹಳ್ಳಿ ಗ್ರಾಪಂ, ಹನುಮನಬೆಟ್ಟ, ರಂಗಸಮುದ್ರ ಗ್ರಾ.ಪಂ. ರಂಗಸಮುದ್ರ, ಬೆಳ್ಳಿಬಟ್ಟು, ಮರಿದಾಸನಹಳ್ಳಿ ಗ್ರಾಪಂ. ಹನುಮಂತನಹಳ್ಳಿ, ನ್ಯಾಯದಗುಂಟೆ ಗ್ರಾಪಂ. ಹೊಟ್ಟೆಬೊಮ್ಮನಹಳ್ಳಿ, ಮಧುಗಿರಿ ತಾಲ್ಲೂಕು ಹೊಸಕೆರೆ ಗ್ರಾಪಂ, ಬಸವನಹಳ್ಳಿ, ಚಿಕ್ಕದಾಳವಟ್ಟ ಗ್ರಾ.ಪಂ. ವಿಟ್ಲಾಪುರ, ಕೊಡಿಗೇನಹಳ್ಳಿ ಗ್ರಾಪಂ, ಗುಟ್ಟೆ, ಸಿಂಗನಹಳ್ಳಿ ಗ್ರಾ.ಪಂ.…

Read More

ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು, ಸ್ವತಂತ್ರ ಸಂವಿಧಾನ ರಚನೆ ಮಾಡಿಕೊಂಡರೂ ನಗರಗಳು ಮಾತ್ರ ಸ್ವಚ್ಛವಾಗಿಲ್ಲ. ಸಂವಿಧಾನದ ಆಶಯದ ಅಡಿಯಲ್ಲಿ ಕೊಳೆಗೇರಿಗಳು ನವನಗರ ಆಗಬೇಕೆಂದು ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ ಪ್ರಕಾಶ್ ಎಂ. ಶೇಟ್ ತಿಳಿಸಿದರು. ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣ ಸಮಿತಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ಕನ್ನಡ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ `ಮನ-ಮನೆಗೂ ಸಂವಿಧಾನ ಕುರಿತು ಸಂವಾದ ಕಾರ್ಯಕ್ರಮ’ವನ್ನು ಸೋಮವಾರ ಉದ್ಘಾಟಿಸಿದರು. ಕೊಳಗೇರಿ ಎಂಬುದು ಭೌತಿಕವಾಗಿ ಮಾತ್ರವಲ್ಲದೆ, ಮಾನಸಿಕವಾಗಿಯೂ ಬದಲಾಗಬೇಕು. ಸಂವಿಧಾನದ ಆಶಯದ ಅಡಿಯಲ್ಲಿ ತಾರತಮ್ಯ ರಹಿತ ಸಮ ಸಮಾಜವನ್ನು ಕಟ್ಟಬೇಕು. ಹಾಗಾಗಿ ಈ ಮನ ಸಂವಿಧಾನ ಕಾರ್ಯಕ್ರಮ ಚಾಲನೆಯಾಗಿದೆ. ಅದರ ಅನುಕೂಲವನ್ನು ಪ್ರತಿಯೊಬ್ಬರು ಪಡೆದುಕೊಂಡು ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಹಾಗಾದರೆ ಮಾತ್ರ ಸಂವಿಧಾನಕ್ಕೆ ಸಂವಿಧಾನ ರಚನಕಾರರಿಗೆ ನಾವು ನೀಡುವ ಗೌರವವಾಗುತ್ತದೆ ಎಂದು ತಿಳಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಕನ್ನಡ ಸಹಪ್ರಾಧ್ಯಾಪಕ ಡಾ. ನಾಗಭೂಷಣ ಬಗ್ಗನಡು, ಭಾರತದಲ್ಲಿ 3600 ಕ್ಕೂ ಅಧಿಕ ಜಾತಿಗಳಿವೆ. ಸಾಕಷ್ಟು…

Read More

ತುಮಕೂರು: ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಒಂದು ಸಾವಿರ ಜನ ಆಟೋ, ಆಂಬುಲೆನ್ಸ್ ಹಾಗೂ ಟ್ಯಾಕ್ಸಿ ಚಾಲಕರಿಗೆ ಉಚಿತವಾಗಿ 10 ಲಕ್ಷ ರೂ. ಮೌಲ್ಯದ ಅಪಘಾತ ವಿಮಾ ಸೌಲಭ್ಯ ನೀಡಲಾಗುತ್ತಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಕ್ಷಿತ್ ಕರಿಮಣ್ಣೆ ತಿಳಿಸಿದ್ದಾರೆ. ನ.30ರಂದು ನಗರದ ಭದ್ರಮ್ಮ ವೃತ್ತದಲ್ಲಿ ಬೆಳಿಗ್ಗೆ 10:30ಕ್ಕೆ ಜನಸೈನ್ಯದಿಂದ ಕನ್ನಡ ರಾಜ್ಯೋತ್ಸವ ಏರ್ಪಡಿಸಲಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು, ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಕನ್ನಡ ಧ್ವಜಾರೋಹಣ ನೆರವೇರಿಸುವರು. ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಎರಿಸ್ವಾಮಿ ಅಧ್ಯಕ್ಷತೆವಹಿಸುವರು ಎಂದು ಹೇಳಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಎನ್.ಗೋವಿಂದರಾಜು, ಮುರಳಿಧರ ಹಾಲಪ್ಪ, ಇಟ್ಬಾಲ್‌ ಅಹ್ಮದ್, ನಗರಪಾಲಿಕೆ ಆಯುಕ್ತ ಅಶ್ವಿಜ, ಎಸ್ಪಿಕೆ.ವಿ.ಅಶೋಕ್, ಡಿವೈಎಸ್‌ ಪಿ ಚಂದ್ರಶೇಖರ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಜಿಲ್ಲಾ ಮಟ್ಟದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9:30 ಗಂಟೆಗೆ ನಗರದ ಟೌನ್‌ ಹಾಲ್‌ ನಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ದಿನಾಚರಣೆ ಪ್ರಯುಕ್ತ ಕಲಾ ತಂಡಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಿಗ್ಗೆ 11:30 ಗಂಟೆಗೆ ಎಂಪ್ರೆಸ್ ಕಾಲೇಜು ಆಡಿಟೋರಿಯಂನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ವಾದಿ ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರ ವಿ.ಎಲ್.ನರಸಿಂಹಮೂರ್ತಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ ಸಲಹೆಗಾರರಾದ ಹರೀಶ್ ಕರೆ ನೀಡಿದರು. ನಗರದ ಬಾಲಕರ ಸ.ಪ.ಪೂ.ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ 3.0 ಅಡಿ, ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ಶ್ವಾಸಕೋಶ, ಬಾಯಿ, ಗಂಟಲು, ಗರ್ಭಕೋಶ ಮೊದಲಾದ ಕ್ಯಾನ್ಸರ್ ರೋಗಗಳಿಗೆ ತುತ್ತಾಗಿ ಯುವ ಜನರು  ಜೀವವನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯವೆಂದರು. ಅದರಲ್ಲೂ 22% ಜನರು ಗುಟ್ಕಾ, ಪಾನ್ ಪರಾಗ್, ಜರ್ದಾ, ಹನ್ಸ್, ಬೀಡಾ, ಸಿಗರೇಟ್ ಮೊದಲಾದವುಗಳನ್ನು ಬಳಸುತ್ತಿರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಆರೋಗ್ಯಕ್ಕೆ ಹಾನಿಕರವಾದ ಇಂತಹ ದುಶ್ಚಟಗಳಿಗೆ ಹೆಚ್ಚು ಯುವಕರು ಬಲಿಯಾಗುತ್ತಿದ್ದಾರೆ. ಆದ ಕಾರಣ ಯುವ ಜನತ ಎಚ್ಚೆತ್ತುಕೊಂಡು ದುಶ್ಚಟಗಳಿಂದ ಮುಕ್ತರಾಗಲು ಸಲಹೆ ನೀಡಿದರು. ಪ್ರಾಂಶುಪಾಲರಾದ ಎಂ.ಡಿ.ಶಿವಕುಮಾರ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ಅರಿತು ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ…

Read More

ಸರಗೂರು:  ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರದಂದು ನ.26 ಸಂವಿಧಾನ ದಿನಾಚರಣೆ ಹಾಗೂ ಡಿ.6ರಂದು ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪೂರ್ವಭಾವಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂವಿಧಾನ ದಿನದ ಪೂರಕವಾಗಿ ಚರ್ಚಿಸಿದ ಆದಿಕರ್ನಾಟಕ ಮಹಾಸಭಾ  ಮಾಜಿ ಅಧ್ಯಕ್ಷ ಶಿವಣ್ಣ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಸಣ್ಣಸ್ವಾಮಿ, ಗೋವಿಂದರಾಜು ಮಾತನಾಡಿ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಸರ್ವ ಜನಾಂಗದ ಭಾಗವಹಿಸಿ ಮಾಡೋಣ ಪಟ್ಟಣದ ಮುಖ್ಯ ರಸ್ತೆಯಲ್ಲಿ  ಸಂವಿಧಾನ ರಥದ ಮೂಲಕ ಮೆರವಣಿಗೆ ಹೊರಟು ನಂತರ ಅಂಬೇಡ್ಕರ್ ಭವನದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಿ ಅಲ್ಲಿ ನುರಿತರಿಂದ ಸಂವಿಧಾನ ಮಹತ್ವದ ಬಗ್ಗೆ ಉಪನ್ಯಾಸ ಮಾಡಿಸಬೇಕು ಎಂದರು. ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಂವಿಧಾನ ಚೌಕಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು, ಹಾಗಾಗಿ ಯಾವುದೇ ಗೊಂದಲವಾಗದಂತೆ ಎಲ್ಲರೂ ಎಚ್ಚರಿಕೆಯಿಂದ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸೋಣ ಮತ್ತೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಮತ್ತು ಸಹಕಾರ ನೀಡಬೇಕು ಎಂದು ಎಚ್ಚರಿಸಿದರು. ಸಭೆಗೆ ಗೈರುಹಾಜರಿಯಾಗಿದ್ದ…

Read More

ತುಮಕೂರು: ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. 15ಕ್ಕೂ ಹೆಚ್ಚು ರಾಜ್ಯಗಳ ಸುಮಾರು 1,200 ಕರಾಟೆ ಪಟುಗಳು ಭಾಗವಹಿಸಿದ್ದರು. ಸಬ್‌ ಜೂನಿಯರ್, ಜೂನಿಯರ್ ಮತ್ತು ಸಿನಿಯರ್ ವಿಭಾಗದಲ್ಲಿ ಬಾಲಕ, ಬಾಲಕಿಯರು ಪಂದ್ಯಗಳು ನಡೆದವು. ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಹನುಮಂತನಾಥ ಸ್ವಾಮೀಜಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು. ಇದರಿಂದ ಮಕ್ಕಳ ಸಮಗ್ರ ವಿಕಾಸ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕನ್ನಡ ಸೇನೆಯ ಜಿಲ್ಲಾ ಅಧ್ಯಕ್ಷ ಧನಿಯಾಕುಮಾರ್, ಗುರುಕುಲ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ ಅಧ್ಯಕ್ಷ ಟಿ.ಎಸ್‌.ಮಧು ಜೈನ್‌, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್‌, ಕರಾಟೆ ಡೂ-ಟ್ರೈನಿಂಗ್ ಸ್ಕೂಲ್ ಅಧ್ಯಕ್ಷ ಪ್ರಕಾಶ್, ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ಪ್ರಕಾಶ್, ವೀರಶೈವ ಬ್ಯಾಂಕ್ ಉಪಾಧ್ಯಕ್ಷ ಹೆಬ್ಬಾಕ ಮಲ್ಲಿಕಾರ್ಜುನಯ್ಯ, ಮುಖಂಡರಾದ ಹಿಮಾನಂದನ್‌, ನೇತಾಜಿ ಶ್ರೀಧರ್, ಬೆಳಗುಂಬ ಮಂಜುನಾಥ್, ಲೋಕೇಶ್ ಆಚಾರ್ಯ, ಟಿ.ಕೆ.ಆನಂದ್‌…

Read More

ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 60 ವರ್ಷ ಯಶಸ್ವಿಯಾಗಿ ಮುಂದುವರಿದಿದೆ. ಇದರ ಪ್ರಯುಕ್ತ 8 ಅಡಿ ಎತ್ತರದ ಪುತ್ಥಳಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ ವತಿಯಿಂದ 1 ಕೋಟಿ ವೆಚ್ಚ ಮಾಡಲಾಗುತ್ತಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೂಜೆ ನೆರವೇರಿಸಿ ಮಾತನಾಡಿ, ಪುತ್ಥಳಿ ಜತೆಗೆ ವಿಶೇಷವಾಗಿ ಉದ್ಯಾನವನ ನಿರ್ಮಿಸಲಾಗುತ್ತದೆ. ಇದಕ್ಕೆ ಮಠದ ಹಳೇ ವಿದ್ಯಾರ್ಥಿಗಳು ಸಹ ಕೈಜೋಡಿಸಿದ್ದಾರೆ ಎಂದರು. ಪುತ್ಥಳಿ ಪ್ರತಿಷ್ಠಾಪನೆಗೆ ತಲಾ 10 ಲಕ್ಷ ನೀಡಲಾಗುವುದು ಎಂದು ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಭರವಸೆ ನೀಡಿದರು. ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ವಸ್ತು ಪ್ರದರ್ಶನದ ಕಾರ್ಯದರ್ಶಿ ಜಿ.ಗಂಗಾಧರಯ್ಯ, ಜಂಟಿ ಕಾರ್ಯದರ್ಶಿಗಳಾದ ಕೆಂ.ಬ.ರೇಣುಕಯ್ಯ, ಎಸ್‌.ಶಿವಕುಮಾರ್, ಸಿದ್ಧಗಂಗಾ ವಿದ್ಯಾಸಂಸ್ಥೆ ನಿರ್ದೇಶಕ ಜಯವಿಭವಸ್ವಾಮಿ, ಎಸ್‌ ಐಟಿ ಸಿಇಒ ಶಿವಕುಮಾರಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಪತ್ರಕರ್ತ…

Read More

ತುಮಕೂರು: ರೈತರು ಬದುಕು ಕಟ್ಟಿಕೊಳ್ಳಲು ನಗರಗಳ ಕಡೆಗೆ ವಲಸೆ ಬರುತ್ತಿದ್ದು, ಸರ್ಕಾರ ಇದನ್ನು ತಡೆಯಬೇಕು. ಹಳ್ಳಿಗಳಲ್ಲಿಯೇ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದಲ್ಲಿ ಶನಿವಾರ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಲ್ಪತರು ಉತ್ಸವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ಕೃಷಿ ಲಾಭದಾಯಕವಾಗಿಲ್ಲ, ರೈತರು ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ಬಂದಿದೆ. ಹೇಮಾವತಿ ನೀರು ಜಿಲ್ಲೆಗೆ ಬರದಿದ್ದರೆ ಇಲ್ಲಿನ ಜನರ ಪರಿಸ್ಥಿತಿ ಚಿಂತಾಜನಕವಾಗಿರುತ್ತಿತ್ತು. ಕುಡಿಯುವ ನೀರು, ಕೃಷಿ, ಅಂತರ್ಜಲ ವೃದ್ಧಿಗೆ ಹೇಮಾವತಿ ವರದಾನವಾಗಿ, ರೈತರ ಬದುಕು ಹಸನಾಗಿದೆ ಎಂದರು. ರೈತ ಹೋರಾಟಗಾರ ಗಂಗಾಧರ ಕಾಸರಘಟ್ಟ, ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಪಡೆಯಬೇಕು ಎಂಬ ಕಾರಣಕ್ಕೆ ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಆಹಾರ ವಿಷ ಮಾಡುತ್ತಿದ್ದೇವೆ. ಇದರಿಂದ ಜನರು ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಕೃಷಿಯಲ್ಲಿ ಈ ಹಿಂದಿನಂತೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು. ನಟರಾದ ಹನುಮಂತೇಗೌಡ, ಅರ್ಜುನ್ ಯೋಗೇಶ್‌ರಾಜ್,…

Read More

ತಿಪಟೂರು: ನಗರದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಶನಿವಾರ ರಾತ್ರಿ ಆಸ್ಥಾನ ಮಂಟಪದಿಂದ ಹೊರಟ ಮೆರವಣಿಗೆ ದೊಡ್ಡಪೇಟೆ, ಕನ್ನಿಕಾ ಪರಮೇಶ್ವರಿ ದೇವಾಸ್ಥಾನ ರಸ್ತೆ, ಕೋಟೆ, ನೀಲಕಂಠಸ್ವಾಮಿ ಸರ್ಕಲ್ ಮೂಲಕ ಸಾಗಿತು. ಭಾನುವಾರ ಮುಂಜಾನೆ ಗಾಂಧಿನಗರ, ಕಾರ್ಪೊರೇಷನ್ ರಸ್ತೆ, ರಾಮಮಂದಿರ ರಸ್ತೆ, ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಸಾಗಿ ಸಿಂಗ್ರಿ ನಂಜಪ್ಪ ವೃತ್ತದಿಂದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಅಮಾನಿಕೆರೆಯ ಬಳಿವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸತ್ಯಗಣಪತಿಗೆ ಕೊಬ್ಬರಿ, ಕಿತ್ತಳೆ, ಸೇಬು, ಕಜ್ಜಾಯ, ಸೇವಂತಿಗೆ, ಚಕ್ಕುಲಿ, ಕರಿಕಡುಬು, ಕರಿದ ಪದಾರ್ಥಗಳಿಂದ ಮಾಡಿದ ಭಾರಿ ಗಾತ್ರದ ಹಾರಗಳು ಸೇರಿದಂತೆ ವಿವಿಧ ಬಗೆಯ ದೊಡ್ಡ ಹಾರಗಳನ್ನು ಭಕ್ತರು ಸಮರ್ಪಸಿದರು. ಪ್ರತಿ ಅಂಗಡಿಗಳ ಮುಂದೆ ಮಾವಿನ ತೋರಣ, ಬಾಳೆಗಿಡಗಳ ಅಲಂಕಾರದೊಂದಿಗೆ ಅನ್ನದಾನ, ಫಲಹಾರ, ಮಜ್ಜಿಗೆ, ಪಾಯಸ ನೀಡಲಾಯಿತು. ನೂರಾರು ತೆಂಗಿನ ಕಾಯಿ ಈಡುಗಾಯಿ, ನಗರದ ರಸ್ತೆಯ ಮೇಲೆ ವಿವಿಧ ಬಣ್ಣದ ರಂಗೋಲಿ ಹಾಕಲಾಗಿತ್ತು. ಗಣೇಶೋತ್ಸವದಲ್ಲಿ ಕೋಲಾಟ,…

Read More