Subscribe to Updates
Get the latest creative news from FooBar about art, design and business.
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
Author: admin
ತುಮಕೂರು: ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸ್ ಟಿಟ್ಯೂಟ್ ಹಾಗೂ ಬೆಂಗಳೂರಿನ ಇನ್ಸ್ ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ಮೂಲಕ ನೀಡಲಾಗುವುದು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ, ಕೊಠಡಿ ಸಹಾಯಕ ಹಾಗೂ ಬಹು ಅಡುಗೆ ತಯಾರಕರ ಸಂಬಂಧ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 20 ರಿಂದ 45 ವರ್ಷದೊಳಗಿನವರಾಗಿರಬೇಕು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹುದ್ದೆಗೆ ಕನಿಷ್ಠ 10ನೇ ತರಗತಿ, ಕೊಠಡಿ ಸಹಾಯಕ ಹುದ್ದೆಗೆ 5ನೇ ತರಗತಿ ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ನಗರದ ಅಶೋಕ ರಸ್ತೆ, ರೆಡ್ ಕ್ರಾಸ್ ಭವನ, 1ನೇ ಮಹಡಿ,…
ಸಿರಾ: ತಾಲೂಕು ಗೊಲ್ಲ ನೌಕರರ ಬಳಗದ ವತಿಯಿಂದ ಗೊಲ್ಲ ಸಮುದಾಯದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮವನ್ನು ದಿನಾಂಕ ಜುಲೈ 19 ರಂದು ಸಿರಾ ನಗರದ ಪಪ್ಪಿ ವೈಟ್ ಪ್ಯಾಲೇಸ್ ನಲ್ಲಿ ಹಮ್ಮಿಕೊಳ್ಳಲಾಗಿದೆ. 2025–26 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇಕಡ 80ಕ್ಕಿಂತ ಹೆಚ್ಚು ಅಂಕ ಪಡೆದ ತಾಲೂಕಿನ ಗೊಲ್ಲ ಸಮುದಾಯದ ವಿದ್ಯಾರ್ಥಿಗಳು ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ವಿದ್ಯಾರ್ಥಿ ಪುರಸ್ಕಾರಕ್ಕಾಗಿ ಬರೆದ ಅರ್ಜಿ, ಅಂಕಪಟ್ಟಿ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್, ಜಾತಿ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 86184 75585 ಹಾಗೂ ಮೊ: 97406 53461 ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಜುಲೈ 10 ಆಗಿದ್ದು, ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ರೋಟರಿ ತುಮಕೂರು ಪ್ರೇರಣ, ಇನ್ನರ್ ವೀಲ್ ಕ್ಲಬ್ ತುಮಕೂರು ಹಾಗೂ ‘ಟೀಮ್ ಈಶ್ವರ್ ಮಲ್ಪೆ’ ಅವರ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ: ಜೂ.27 ಮತ್ತು 28ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಹೆಸರು ನೋಂದಣಿಗಾಗಿ ಸಂಪರ್ಕಿಸಿ: ಮೊಬೈಲ್ / ವಾಟ್ಸಾಪ್ ಸಂಖ್ಯೆ: +91 8951804399 ಸಂಪರ್ಕಿಸಬಹುದಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್.ಯೋಗೇಶ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು. ಅದನ್ನು ಬರವಣಿಗೆ ಎಂಬ ದೀಪದ ಬೆಳಕನ್ನು ಹಚ್ಚಿ ಹೊರಗೆ ತರಬೇಕು. ಬರವಣಿಗೆಯನ್ನು ಆರಂಭಿಸಲು ಯಾರೂ ಹಿಂಜರಿಯಬಾರದು ಎಂದು ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀಠದ ವತಿಯಿಂದ ಗುರುವಾರದಂದು ಆಯೋಜಿಸಿದ್ದ ಮಗಳು ಕಂಡಂತೆ ಕುವೆಂಪು ಎಂಬ ಶೀರ್ಷಿಕೆಯ ಆಪ್ತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಗಳು ಕಂಡಂತೆ ಕುವೆಂಪು ಪುಸ್ತಕ ಬರೆಯುವಾಗ ಮೊದಲು ಭಯವಿತ್ತು. ಆದರೆ ಬರೆಯಲು ಆರಂಭಿಸಿದ ಮೇಲೆ ಅದು ಮುಗಿಯುವವರೆಗೂ ತಿಳಿಯಲೇ ಇಲ್ಲ. ಕುವೆಂಪು ಅವರು ಮನೆಯಲ್ಲಿ ಎಲ್ಲರಂತೆ ಅತ್ಯಂತ ಸರಳ ವ್ಯಕ್ತಿಯಾಗಿದ್ದರು. ಮಕ್ಕಳ ವಿದ್ಯಾಭ್ಯಾಸ ಹಾಗೂ ಅವರ ಇಷ್ಟಗಳಿಗೆ ಕುವೆಂಪು ಸದಾ ಪ್ರೋತ್ಸಾಹ ನೀಡುತ್ತಿದ್ದರು. ಮಕ್ಕಳು ಏನನ್ನು ಸಾಧಿಸಬೇಕೆಂದುಕೊಳ್ಳುತ್ತಾರೋ ಅದಕ್ಕೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದರು ಎಂದರು. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವೆಂಕಟೇಶ್ವರಲು ಎಂ. ಮಾತನಾಡಿ ಉತ್ತಮವಾದ ದೂರದೃಷ್ಟಿ ಹಾಗೂ ಗುರಿಯನ್ನಿಟ್ಟುಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಯಾವುದೇ ಕೆಲಸವೂ ಅಸಾಧ್ಯವಲ್ಲ.…
ತುರುವೇಕೆರೆ: ತಾಲ್ಲೂಕು ಆಡಳಿತ, ತಾಲ್ಲೂಕು ಒಕ್ಕಲಿಗರ ಸಂಘ, ಒಕ್ಕಲಿಗ ನೌಕರರ ಸಂಘ, ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ, ಕೆಂಪೇಗೌಡ ಯುವ ಸೇನೆ ಮತ್ತು ನೇಗಿಲ ಯೋಗಿ ಸೇವಾ ಸಮಾಜದ ವತಿಯಿಂದ ನಾಡಪ್ರಭು ಕೆಂಪೇಗೌಡರ 517ನೇ ಜಯಂತ್ಯುತ್ಸವವನ್ನು ಜೂನ್ 27ರಂದು ಶನಿವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬಡಗರಹಳ್ಳಿ ತ್ಯಾಗರಾಜು ತಿಳಿಸಿದರು. ಅವರು ಪಟ್ಟಣದ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೂ.27ರ ಶನಿವಾರ ಬೆಳಗ್ಗೆ 10 ಘಂಟೆಗೆ ತಾಲ್ಲೂಕು ಕಚೇರಿ ಬಳಿ ದೇವೇಗೌಡರ ಪ್ರತಿಮೆ ಮುಂಭಾಗದಿಂದ ಕೆಂಪೇಗೌಡರ ಭಾವಚಿತ್ರವನ್ನು ವಿವಿಧ ಜಾನಪದ ಕಲಾತಂಡಗಳೊಂದಿಗೆ, ಸೋಮನ ಕುಣಿತ, ರಂಗ ಕುಣಿತ, ಕೋಲಾಟ, ಸಿಡಿಮದ್ದಿನ ಚಮತ್ಕಾರ ಮತ್ತು ನಗಾರಿ ಸಮೇತ ಮೆರವಣಿಗೆ ನಡೆಸಲಾಗುವುದು. ಅಲ್ಲದೆ 9:30 ಘಂಟೆಗೆ ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಯಲಿದೆ. ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಕೃಪಾಸಿರ್ವಾದದೊಂದಿಗೆ ಮಠದ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ…
ಬೆಂಗಳೂರು: ರಾಜ್ಯದಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳು ಹಾಗೂ ಸೂಪರ್ ಎಲ್ ನಿನೋ ಪರಿಣಾಮದಿಂದ ಉಂಟಾಗಬಹುದಾದ ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕೃತಿ ವಿಕೋಪ ನಿರ್ವಹಣೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈವರೆಗೆ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ಮಾಹಿತಿ ಪಡೆದು, ಮಳೆ ಕೊರತೆ, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚಿಸಿದರು. ಜಾಗತಿಕ ಹವಾಮಾನ ವೈಪರೀತ್ಯದ ಭಾಗವಾಗಿ ಸೂಪರ್ ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಉಂಟಾಗಬಹುದಾದ ಸಂಭವನೀಯ ಪರಿಣಾಮಗಳು, ಮಳೆಯ ಕೊರತೆಯಿಂದ ಜನರು ಎದುರಿಸಬಹುದಾದ ಸಮಸ್ಯೆಗಳು ಹಾಗೂ ರಾಜ್ಯದ ಕೆಲವು ಪ್ರದೇಶಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸಂಭವನೀಯ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಲಭ್ಯತೆ, ಜಾನುವಾರುಗಳಿಗೆ ಮೇವು, ಕೃಷಿ ಚಟುವಟಿಕೆಗಳ ನಿರ್ವಹಣೆ…
ತುಮಕೂರು: ಕೇಂದ್ರ ಸರ್ಕಾರದ ಕಾರ್ಮಿಕ ಕಲ್ಯಾಣ ಸಂಸ್ಥೆಯು ಬೀಡಿ ಕಾರ್ಮಿಕರು, ಗಣಿ ಕಾರ್ಮಿಕರು, ಸುಣ್ಣದ ಕಲ್ಲು ಹಾಗೂ ಸಿನಿಮಾ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಿದ್ದು, ಅರ್ಹರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2026–27ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಪದವಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಂಡು scholarships.gov.in ಮೂಲಕ ಅರ್ಜಿ ಸಲ್ಲಿಸಬಹುದು. 1 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ, ಪಿಯು, ಪದವಿ, ವೃತ್ತಿಪರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಕ್ಟೋಬರ್ 31ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 91482 40554 ಇವರನ್ನು ಸಂಪರ್ಕಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಉತ್ತಮವಾದ ಜಾಗದಲ್ಲಿ ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣವನ್ನು ಮೀಸಲಾಗಿಟ್ಟಿದ್ದು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು. ಪಟ್ಟಣದ ತೇರಂಶ್ರೀ ಭವನದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಕುಂದುಕೊರತೆ ಸಭೆಯಲ್ಲಿ ಪಾಲ್ಗೊಂಡು ದಲಿತ ಮುಖಂಡರ ಪ್ರಶ್ನೆಗೆ ಉತ್ತರಿಸಿದ ಅವರು, ಭವನ ನಿರ್ಮಿಸುವ ಜಾಗದಲ್ಲಿದ್ದ ಮರಗಳ ತೆರವು ಕಾರ್ಯವೂ ನಡೆಯುತ್ತಿದೆ ಎಂದರು. ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಪಡೆದು ಉತ್ತಮ ರೀತಿಯ ಎರಡು ಅಂತಸ್ತಿನ ಭವನವನ್ನು ನಿರ್ಮಿಸಲಾಗುವುದು ಎಂದರು. ಭವನ ನಿರ್ಮಾಣವಾದ ನಂತರ ಬಾಬುಜಗಜೀವನರಾಂರವರ ಪುತ್ತಳಿಯನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ತಹಶೀಲ್ದಾರ್ ಮಮತಾ ಎಂ ಮಾತನಾಡಿ, ಪುರಸಭೆಯ ಮುಖ್ಯಾಧಿಕಾರಿಯು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಕೆಲವು ಸಮಸ್ಯೆಗಳನ್ನು ಬಗೆಹರಿಸಿಲ್ಲವೆಂದು ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಎರಡು ಬಾರಿ ನೋಟಿಸ್ ನೀಡಿದ್ದು ಮುಂದಿನ ದಿನಗಳಲ್ಲಿ ಇನ್ನೊಂದು ಸಭೆ ಕರೆಯಲಾಗುವುದು ಎಂದರು. ರಾಜ್ಯ ಮಾದಿಗ ದಂಡೋರದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಮಧುಗಿರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ 0–5 ವರ್ಷದೊಳಗಿನ 14,230 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಪ್ರಭಾರ ತಹಶೀಲ್ದಾರ್ ಶ್ರೀನಿವಾಸ್ ತಿಳಿಸಿದರು. ಅವರು ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಜೂ. 28 ರಂದು ನಡೆಯುವ 2026ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಕುರಿತು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿ, ಪೋಲಿಯೋ ಹನಿಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪೋಷಕರು ಸ್ಥಳೀಯ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸಲು ಕೋರಿದರು. ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ಆನಂದ ಡಿ ಹಾಗೂ ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಪುರಸಭೆ, ವಿದ್ಯುತ್ ಇಲಾಖೆ, ಸಾರಿಗೆ ಮತ್ತು ರೋಟರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕಿನಾದ್ಯಂತ 133 ಪೋಲಿಯೋ ಬೂತ್ಗಳನ್ನು ತಾಲೂಕಿನ ಸರ್ಕಾರಿ ಆಸ್ಪತ್ರೆ, ಅಂಗನವಾಡಿ ಕೇಂದ್ರ ಮತ್ತು ಶಾಲೆಗಳಲ್ಲಿ ತೆರೆಯಲಾಗುತ್ತಿದೆ.…
ಮಧುಗಿರಿ : ತಾಲ್ಲೂಕಿನ ಕೊಡಿಗೇನಹಳ್ಳಿ ಗ್ರಾಮದಲ್ಲಿ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ Indian Pangolin (ಚಿಪ್ಪು ಹಂದಿ) ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಕುತೂಹಲದ ಜೊತೆಗೆ ಆತಂಕವೂ ಮೂಡಿಸಿದೆ. ದೇಹದ ತುಂಬಾ ಗಟ್ಟಿಯಾದ ಕೆರಾಟಿನ್ ಚಿಪ್ಪುಗಳಿಂದ ಆವೃತವಾಗಿರುವ ಈ ವಿಶಿಷ್ಟ ಪ್ರಾಣಿ ಗ್ರಾಮಸ್ಥರ ಗಮನ ಸೆಳೆದಿದ್ದು, ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಜನಜಂಗುಳಿ ಜಮಾಯಿಸಿತು. ಜನರ ಗದ್ದಲ ಮತ್ತು ಸದ್ದನ್ನು ಕೇಳಿದ ಪ್ಯಾಂಗೊಲಿನ್ ತನ್ನ ಸಹಜ ರಕ್ಷಣಾ ಕ್ರಮವಾಗಿ ಚೆಂಡಿನಂತೆ ಸುರುಳಿಯಾಗಿ ಸುತ್ತಿಕೊಂಡು ನಿಶ್ಚಲವಾಗಿ ಮಲಗಿರುವ ದೃಶ್ಯ ಕಂಡು ಬಂದಿತು. ಸಾಮಾನ್ಯವಾಗಿ ಕರ್ನಾಟಕದ ಗಡಿ ಭಾಗಗಳಾದ ಆಂಧ್ರ ಪ್ರದೇಶ, ತಮಿಳುನಾಡು ಹಾಗೂ ಗೋವಾ ಗಡಿಭಾಗಗಳಲ್ಲಿ, ಜೊತೆಗೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಚಾಮರಾಜನಗರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಪ್ರಭೇದದ ಪ್ಯಾಂಗೊಲಿನ್ ಗಳು ಕಂಡು ಬರುತ್ತವೆ. ಆದರೆ ಕೊಡಿಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂತಹ ಪ್ರಾಣಿ ಈ ಹಿಂದೆ ಕಾಣಿಸಿಕೊಂಡಿರದ ಕಾರಣ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಪ್ಯಾಂಗೊಲಿನ್ ಮನುಷ್ಯರಿಗೆ ಹಾನಿ…