Subscribe to Updates
Get the latest creative news from FooBar about art, design and business.
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
Author: admin
ಸರಗೂರು: ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿ ಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಳ್ಳಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ…
ಚಿಕ್ಕಮಗಳೂರು: ಮಗ ಪಿಕಪ್ ಸಹಿತವಾಗಿ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆಯಿಂದ ನೊಂದು ಮಗನ ಮೃತದೇಹ ಸಿಗುವುದಕ್ಕೂ ಮೊದಲೇ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದರು. ಈ ವೇಳೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ. ಜು.23ರಂದು ಬಾಲಕಿ ಎಂದಿನಂತೆ ಶಾಲೆಗೆ ಹೋಗಿ ಮನೆಗೆ ಮರಳಿದ್ದಳು. ಮಗಳ ಶಾಲಾ ಉಡುಪು ತಾಯಿ ಬದಲಿಸುತ್ತಿರುವ ವೇಳೆ ರಕ್ತಸ್ರಾವವಾಗಿರುವುದು ತಾಯಿಗೆ ಗೊತ್ತಾಗಿದೆ. ಹೀಗಾಗಿ ವೈದ್ಯರ ಬಳಿ ಹೋಗಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಮಹಿಳಾ ಠಾಣೆಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ಮಗಳನ್ನು ಚುಡಾಯಿಸಿದ್ದನ್ನ ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲೂಕ್ ಸಿಎನ್ ದುರ್ಗಾ ಹೋಬಳಿ ಬೋರಪ್ಪನಹಳ್ಳಿ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು, ಶಾಲಾ ವಿದ್ಯಾರ್ಥಿನಿಯನ್ನ ಅನಾವಶ್ಯಕವಾಗಿ ರೇಗಿಸುತ್ತಿದ್ದ ಯುವಕನನ್ನ ಪ್ರಶ್ನಿಸಿದ ತಂದೆ ಗಿರೀಶ್ ಎಂಬುವರ ಮೇಲೆ ಮೂರು ಜನ ದಾಳಿ ನಡೆಸಿ, ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡುವ ಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿಯನ್ನ ಇದೇ ಗ್ರಾಮದ ಪೃಥ್ವಿರಾಜ್ ಎಂಬ ಯುವಕ ಪದೇ ಪದೇ ಚುಡಾಯಿಸುವುದನ್ನು ಪ್ರಶ್ನಿಸಿದ ತಂದೆ ಗಿರೀಶ್ ನನ್ನ ಆರೋಪಿ ಪೃಥ್ವಿರಾಜ್, ಅಣ್ಣ ತಿಮ್ಮೇಗೌಡ ಹಾಗೂ ತಂದೆ ಹನುಮಂತರಾಯ ಎಂಬುವರು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದು ನಂತರ ಚಾಕುವಿನಿಂದ ಭುಜ ಭಾಗ ಹಾಗೂ ತೊಡೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನಪಟ್ಟರು…
ಕೊರಟಗೆರೆ : ಇತಿಹಾಸ ಪ್ರಸಿದ್ಧ ಶ್ರೀ ಮೀನ ಗೊಂದಿ ಮಲೇ ರಂಗನಾಥ ಸ್ವಾಮಿ ದೇವಾಲಯದಲ್ಲಿ ಜು.26 ರಿಂದ ಪ್ರತಿ ಶನಿವಾರ ಶ್ರಾವಣ ಮಾಸದ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು 9 ಮಂದಿ ಬುಡ್ಕಟ್ಟಿನ ಅಣ್ಣತಮ್ಮಂದಿರು ಮನವಿ ಮಾಡಿಕೊಂಡಿದ್ದಾರೆ . ಅವರು ಪ್ರತಿಕಾ ಪ್ರಕಟಣೆ ನೀಡಿ, ಮಧುಗಿರಿ ತಾಲೂಕಿನ ಬಂದ್ರಹಳ್ಳಿ ತೇರಿನ ಬೀದಿ ಒಲಬು ಇಲ್ಲಿ ಪ್ರತಿಷ್ಠಾಪನೆಗೊಂಡಿರುವ ಇತಿಹಾಸ ಪ್ರಸಿದ್ಧ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರಾವಣ ಮಾಸದ ಮೊದಲ ಶನಿವಾರ ಜು.26 ರಿಂದ ದೇವಾಲಯದಲ್ಲಿ ಶ್ರೀ ಮೀನಾ ಗೊಂದಿ ಶ್ರೀ ಮಲೆ ರಂಗನಾಥ ಸ್ವಾಮಿ ಗೆ ಪ್ರತಿ ಶ್ರಾವಣ ಶನಿವಾರ ವಿಶೇಷವಾಗಿ ಅಭಿಷೇಕ ಸ್ವಾಮಿಗೆ ವಿಶೇಷ ಅಲಂಕಾರ ಬೆಳಿಗ್ಗೆ 6 ಗಂಟೆ ಯಿಂದ ರಾತ್ರಿ 6 ಗಂಟೆಯವರೆಗೆ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗುದು 9 ಮಂದಿ ಬುಡ್ಕಟ್ಟಿನ ಅಣ್ಣ-ತಮ್ಮಂದಿರು ತಿಳಿಸಿದ್ದಾರೆ. ಶ್ರೀ ಮೀನಗೊಂದಿ ಮಲೆ ರಂಗನಾಥ ಸ್ವಾಮಿ…
ಸರಗೂರು: ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯ ನಾನಾ ದೇವಾಲಯಗಳಲ್ಲಿ ಭಕ್ತರು ದಾಂಗುಡಿ ಇಟ್ಟಿದ್ದರು. ಅದರಲ್ಲೂ ಶಿವನ ದೇವಾಲಯಗಳಿಗಂತೂ ಪೂರ್ಣ ಬೇಡಿಕೆ. ಸಹಸ್ರಾರು ಮಂದಿ ಭಕ್ತರು ಶ್ರದ್ಧಾ, ಭಕ್ತಿಯಿಂದ ಪೂಜೆ ಸಲ್ಲಿಸಿದರು ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದ ತಾಯಿಗೆ ಹಾಗೂ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ಶವರ ದೇವಸ್ಥಾನದಗಳಲ್ಲಿ ಭೀಮನ ಅಮಾವಾಸ್ಯೆಯನ್ನು ದೇವಾಲಯಗಳಿಗೆ ಪೂಜೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. ಗುರುವಾರ ಬೆಳಗಿನಿಂದಲೇ ಭಕ್ತಾದಿಗಳು ದೇವಾಲಯಗಳತ್ತ ಹೆಜ್ಜೆ ಹಾಕಿದರು. ಪ್ರತಿ ಅಮಾವಾಸ್ಯೆಯ ಸಂದರ್ಭದಲ್ಲೂ ತಾಲೂಕಿನ ದೇವಾಲಯಗಳಿಗೆ ತೆರಳಿ, ಪೂಜೆ ಸಲ್ಲಿಸುವುದು ವಾಡಿಕೆ. ಮಾಮೂಲಿಗಿಂತ ಇಂದು ಜ್ಯೋರ್ತಿಭೀಮೇಶ್ವರ ವ್ರತದ ಹಿನ್ನೆಲೆಯಲ್ಲಿ ತಾಲೂಕಿಯಲ್ಲಿ ಹಬ್ಬದ ವಾತಾವರಣ ಕಂಡುಬಂತು. ಕಾಲಿಡಲೂ ಜಾಗವಿಲ್ಲದಂತೆ ಜನಸ್ತೋಮ ದೇವಾಲಯಗಳಲ್ಲಿ ನೆರೆದಿದ್ದು, ವಿಶೇಷವಾಗಿತ್ತು. ಚಿಕ್ಕ ದೇವಮ್ಮನಾ ಬೆಟ್ಟ ಹಾಗೂ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ, ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನ ಭೀಮನ ಅಮಾವಾಸ್ಯೆ ಪೂಜೆಗೆ ಪ್ರಸಿದ್ಧಿ. ಇಲ್ಲಿಗೆ ಜಿಲ್ಲೆ ಸೇರಿದಂತೆ ನಾನಾ ಗ್ರಾಮಗಳಿಂದ ಆಗಮಿಸಿದ ಭಕ್ತರು ದೇವರದರ್ಶನ ಪಡೆದರು. ಸಾವಿರಾರು ಭಕ್ತಾದಿಗಳಿಗೆ ಗ್ರಾಮಸ್ಥರಿಂದ…
ಬೀದರ್ : ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸುನಿಲ್ ಕುಮಾರ್ ಪ್ರಭಾ, ಚಂದ್ರಪ್ರಕಾಶ್ ಪ್ರಭಾ ಅವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 2 ಕೋಟಿ 24 ಲಕ್ಷ 57 ಸಾವಿರ ರೂ. ಮೌಲ್ಯದ ಒಟ್ಟು ಸ್ಥಿರ ಆಸ್ತಿ ಪತ್ತೆಯಾಗಿದ್ದು, ಅದರಲ್ಲಿ 3 ಸೈಟ್, ಒಂದು ಮನೆ ಮತ್ತು ಕೃಷಿ ಭೂಮಿ ಸೇರಿದೆ. ಅದೇ ರೀತಿ ಒಟ್ಟು 2 ಕೋಟಿ 35 ಲಕ್ಷ 23 ಸಾವಿರ 897 ರೂ. ಯ ಚರ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 15 ಲಕ್ಷ 75 ಸಾವಿರ 660 ರೂ. ನಗದು, 1 ಕೋಟಿ 26 ಲಕ್ಷ 60 ಸಾವಿರ ರೂ. ಮೌಲ್ಯದ ಆಭರಣ ವಸ್ತು, 12 ಲಕ್ಷ 50 ಸಾವಿರ ರೂ. ಮೌಲ್ಯದ ಆಭರಣ ವಸ್ತು, 12 ಲಕ್ಷ 50…
ಕೊರಟಗೆರೆ : ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ 44ನೇ ಜನ್ಮವರ್ಧಂತಿ ಅಂಗವಾಗಿ ಶ್ರೀ ಮಠದಲ್ಲಿ ವಿವಿಧ ಸಂಘ ಸಂಸ್ಥೆಗಳು, ಮಠದ ವಿದ್ಯಾರ್ಥಿಗಳು, ಗುರುಕುಲ ಸಾಧಕರಿಂದ ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀಗಳ 44ನೇ ಜನ್ಮವರ್ಧಂತಿ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 6 ಗಂಟೆಯಿಂದ ಶ್ರೀ ಕ್ಷೇತ್ರಧೀಪತಿ ಸಿದ್ದೇಶ್ವರಸ್ವಾಮಿ ಹಾಗೂ ಶ್ರೀಮಠದ ಕರ್ತೃ ಶ್ರೀ ಜಗದ್ಗುರು ರೇಣುಕಾಚಾರ್ಯರು, ಗಣಪತಿ ಮತ್ತು ವೀರಭದ್ರಸ್ವಾಮಿ ಅವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಮಹಾ ಮಂಗಳಾರತಿ ನಡೆಯಿತು. ನಂತರ 11 ಗಂಟೆಗೆ ಗುರುವಂದನಾ ಕಾರ್ಯಕ್ರಮದಲ್ಲಿ ಏಲೆರಾಂಪುರ ಕುಂಚಿಟಿಗೆ ಮಹಾಸಂಸ್ಥಾನ ಮಠದ ಡಾ,ಹನುಮಂತನಾಥಸ್ವಾಮೀಜಿ, ರಾಮಮೂರ್ತಿಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶ್ವರರು, ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ತುಮಕೂರು ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಪಕ್ಷಗಳು ಮುಖಂಡರುಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಶ್ರೀಮಠದ ಭಕ್ತರು ಭಾಗವಹಿಸಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ಪಾದ ಪೂಜೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳಿಂದ ಜನ್ಮವರ್ಧಂತಿ…
ಔರಾದ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ 3 ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿತು. ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ…
ಸರಗೂರು: ಕಾಡಂಚಿನ ಗ್ರಾಮ ಬಿ ಮಟಕೆರೆ ಈ ಭಾಗದಲ್ಲಿ ಗಿರಿಜನರು, ರೈತರು, ಕೂಲಿ ಕಾರ್ಮಿಕರು, ಹೆಚ್ಚಾಗಿದ್ದು ಇವರಿಗೆ ಅಗತ್ಯ ಇರುವ ಸೇವೆಗಳಾದ ಹೃದಯ ಸಂಬಂಧಿ ಮತ್ತು ಶ್ವಾಸಕೋಶ ಸಮಸ್ಯೆಗಳ ತಪಾಸಣೆ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್ ತಿಳಿಸಿದರು. ಹಾರ್ಟ್ ಸಂಸ್ಥೆ ಮೈಸೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್.ಡಿ ಕೋಟೆ, ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಿ. ಮಟಕೆರೆ, ಅವಾಂಟ್ ಆಸ್ಪತ್ರೆ ಮೈಸೂರು, ಎ. ಎಸ್. ಜಿ. ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಬುಧವಾರದಂದು ಬಿ ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸರಗೂರು ತಾಲೂಕಿನಲ್ಲಿ ಪ್ರಾಥಮಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಿದ್ದು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯ ಸುಧಾರಿಸಿಕೊಳ್ಳುವಂತೆ ತಿಳಿಸಿ ಹೇಳಿದರು. ನಂತರ ಮಾತನಾಡಿದ ಬಿ ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವದಾಸ್, ಹಣವನ್ನು…