Author: admin

ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಿಕೊಳ್ಳಬೇಕಿದೆ ತಹಶೀಲ್ದಾರ್ ಮಂಜುನಾಥ ಕೆ. ತಿಳಿಸಿದರು. ಕೊರಟಗೆರೆ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಇತ್ತೀಚಿಗೆ ಏರ್ಪಡಿಸಲಾಗಿದ್ದ ಪೋಲಿಯೋ ದಿನದ ವಿಶೇಷ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರಕಾರದ ಆದೇಶದಂತೆ ಹುಟ್ಟಿದ ದಿನದ ಮಗುವಿನಿಂದ ಹಿಡಿದು ಜೂ.28 ರಿಂದ ಜು.1ರ ತನಕ ಗ್ರಾಮೀಣದಲ್ಲಿ 142 ಕೇಂದ್ರ ಮತ್ತು ಪಟ್ಟಣದ 15 ವಾರ್ಡಿನಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಉಳಿದಂತೆ ಸಾರ್ವಜನಿಕ ಪ್ರದೇಶಗಳಾದ ಬಸ್‌ನಿಲ್ದಾಣ, ಗೊರವನಹಳ್ಳಿ ದೇವಾಲಯ, ಹೋಬಳಿ ಕೇಂದ್ರಗಳಲ್ಲಿಯೂ ಸಹ ಲಸಿಕೆ ಕಾರ್ಯಕ್ರಮ ನಡೆಯಲಿದೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಲಸಿಕೆಯಿಂದ ಯಾರು ಸಹ ವಂಚಿತರಾಗದೇ ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕಿದೆ. ಇದಾದ ನಂತರವು ಸಹ ಎರಡು ದಿನಗಳ ಕಾಲ ಮನೆಮನೆಗೆ ಲಸಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು. ವಿಶೇಷ ಸಭೆಯಲ್ಲಿ ತಾಪಂ ಇಓ ಅಪೂರ್ವ, ತಾಲೂಕು ಆರೋಗ್ಯಾಧಿಕಾರಿ…

Read More

ಕೊರಟಗೆರೆ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್‌ ಐ ತೀರ್ಥೇಶ್ ತಿಳಿಸಿದರು. ಪಟ್ಟಣದ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಅಂತರರಾಷ್ಟ್ರೀಯ ದಿನ’ದ ಅಂಗವಾಗಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ “ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಜಾಗೃತಿ ಅಭಿಯಾನ”ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯುವ ಜನತೆಯನ್ನು ಗುರಿಯಾಗಿಸಿಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವಿಧ ರೂಪದಲ್ಲಿ ಮಾದಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಮುಂದಾಗಿರುವುದು ದುರದೃಷ್ಟಕರ ಸಂಗತಿ ಎಂದ ಅವರು, ಮಾದಕ ವಸ್ತುಗಳ ಸಾಗಣೆ, ಸಂಗ್ರಹಣೆ ಹಾಗೂ ಜಮೀನುಗಳಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಬೆಳೆಯುವ ಪ್ರಕರಣಗಳನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಎಚ್ಚರಿಸಿದರು. ಇಂತಹ ಯಾವುದೇ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ…

Read More

ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ ಅಜೇಯ ಮನೋಬಲದ ಯಶೋಗಾಥೆಯನ್ನು ಒಳಗೊಂಡ ‘ಬಿ.ಕೆ.ಶ್ರೀನಿವಾಸ ಒಂದು ಅಸಾಮಾನ್ಯ ಜೀವನಯಾನ’ ಪುಸ್ತಕದ ಬಿಡುಗಡೆ ಸಮಾರಂಭವು ನಗರದ ಗಾಂಧಿ ಭವನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ನೊಣವಿನಕೆರೆ ಕಾಡು ಸಿದ್ದೇಶ್ವರ ಮಠದ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಮಹಾಸ್ವಾಮಿಗಳು ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರುಗಳಾದ ಕೆ.ವಿ. ಚಂದ್ರಶೇಖರ್, ಸಾ.ರಾ. ಗೋವಿಂದು, ಹಿರಿಯ ಪತ್ರಕರ್ತ ಜೋಗಿ, ಬಿಗ್ ಬಾಸ್ ಖ್ಯಾತಿಯ ಜಾಹ್ನವಿ ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಿ, ತಮ್ಮ ಜೀವನದ ಹಾದಿಯನ್ನು ನೆನೆದು ಭಾವುಕರಾಗಿ ಮಾತನಾಡಿದ ಬೆಂಕೋಶ್ರೀ, “ನಾನು ಕಡುಬಡತನದ ಕುಟುಂಬದಿಂದ ಬಂದವನು. ಗುಡಿಸಲಿನಲ್ಲಿ ಹುಟ್ಟಿ, ಕೇವಲ 9ನೇ ತರಗತಿಯವರೆಗೆ ಮಾತ್ರ ಓದಿದ ನನಗೆ ಸಿನಿಮಾದ ಮೇಲೆ ಅಪಾರ ಹುಚ್ಚಿತ್ತು. ಆ ಸಿನಿಮಾ ವ್ಯಾಮೋಹದಲ್ಲೇ ಗಳಿಸಿದ್ದರಲ್ಲಿ ಸ್ವಲ್ಪವನ್ನು…

Read More

ಗುಬ್ಬಿ: ಬಿಡದಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಬಂಡವಾಳ ಹಾಕಿಕೊಂಡು ಪಾಲುದಾರಿಕೆ ಪಡೆದಿರುವಂತೆ ಕಾಣುತ್ತಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಖೇದಿಸಿದರು. ಅವರು ಸಿ.ಎಸ್.ಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ 1.35 ಕೋಟಿ ರೂ.ಗಳ ವೆಚ್ಚದ ಮನೆಮನೆಗೆ ನಳ ಸಂಪರ್ಕ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಬಿಡದಿ ಬಳಿಯ ಟೌನ್ ಶಿಪ್ ಯೋಜನೆ ಭಾಗದ ರೈತರು ಕೇವಲ ಅರ್ಧ ಎಕರೆ ಜಮೀನು ಹೊಂದಿದ್ದಾರೆ. ಹಸು ಕಟ್ಟಿಕೊಂಡು ಬದುಕು ನಡೆಸಿದ್ದಾರೆ. ಅಂತಹ ಸಣ್ಣ ರೈತರ ತಲೆ ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡಲು ಮುಂದಾಗಿದೆ. ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವ ಬಿಡದಿ ಭಾಗದ ಯುವಕರಿಗೆ ಕೃಷಿ ಮತ್ತು ಹೈನುಗಾರಿಕೆ ಜೀವನ ಕಟ್ಟಿಕೊಟ್ಟಿದೆ. ಇಂತಹ ಯುವಕರ ಬದುಕಿನ ಜೊತೆ ಚಿಲ್ಲಾಟ ಸರಿಯಲ್ಲ. ದುಡ್ಡು ಹೊಡೆಯುವ ಸ್ಕೀಂ ಮಾಡುವ ಕೆಲಸ ಬಿಟ್ಟು ಸರ್ಕಾರ ರೈತಪರ ಕೆಲಸ ಮಾಡಬೇಕು ಎಂದರು. ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆಗೆ ಕುಮಾರಸ್ವಾಮಿ ಆಲೋಚನೆ ಮಾಡಿದ್ದರು. ಆದರೆ ಅಲ್ಲಿನ ರೈತರ ಒತ್ತಡಕ್ಕೆ ಮಣಿದು…

Read More

ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ನೀಡಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ತುಮಕೂರು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಉಪನಿರ್ದೇಶಕ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸೌಲಭ್ಯಕ್ಕಾಗಿ ಅರ್ಹ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಆಗಸ್ಟ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಜಾಲತಾಣ https://bcwd.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಸಂಪರ್ಕಿಸಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಇದೇ ಜೂ.28ರಂದು ಭಾನುವಾರ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ 5 ವರ್ಷದೊಳಗಿನ 1,86,831 ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಯೋಜಿಸಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ತಿಳಿಸಿದ್ದಾರೆ. ಬುಧವಾರ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು, ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಪೋಲಿಯೋ ನಿವಾರಣೆಯಾಗಿದೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಜೂನ್ 28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ಆಂದೋಲನ ರೂಪದಲ್ಲಿ ಕಾರ್ಯಕ್ರಮ ರೂಪಿಸಿರುವುದಾಗಿ ಅವರು ತಿಳಿಸಿದರು. 5 ವರ್ಷದೊಳಗಿನ 1,86,831 ಮಕ್ಕಳನ್ನು ಗುರುತಿಸಲಾಗಿದ್ದು, 1219 ಲಸಿಕಾ ಕೇಂದ್ರಗಳು ಹಾಗೂ 60 ಟ್ರಾನ್ಸಿಟ್ ಕೇಂದ್ರಗಳಲ್ಲಿ 5,122 ಲಸಿಕಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅಲ್ಲದೆ, 265 ಮೇಲ್ವಿಚಾರಕರನ್ನು ಲಸಿಕಾ ಕಾರ್ಯಕ್ರಮಕ್ಕೆ ನೇಮಿಸಿರುವುದಾಗಿ ಅವರು ತಿಳಿಸಿದರು. ಜಿಲ್ಲೆಯಾದ್ಯಂತ ಜೂನ್ 28ರಂದು ಲಸಿಕಾ ಭಾನುವಾರವಾಗಿದ್ದು, ಎಲ್ಲಾ ಕೇಂದ್ರಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ನಂತರ ಗ್ರಾಮಾಂತರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ದಿನ ಹಾಗೂ ನಗರ…

Read More

ತುಮಕೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ವಿಚಾರವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಗ್ರಾಮಾಂತರ ಘಟಕದ ವತಿಯಿಂದ ಬುಧವಾರ ತುಮಕೂರು ನಗರದ ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಬಿಜೆಪಿ ಶಾಸಕ ಅಡ್ಡಮತದಾನ ಮಾಡಿದ್ದಾರೆ ಎಂಬ ಆರೋಪದೊಂದಿಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಗೌರಿಶಂಕರ್ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ಗಳನ್ನು ಹಾಕಿರುವುದು ಖಂಡನೀಯ ಎಂದ ಬಿಜೆಪಿ ಮುಖಂಡರು, ಗ್ರಾಮಾಂತರ ಕಾರ್ಯಕರ್ತರು, ಇಂತಹ ಸುಳ್ಳು ಮಾಹಿತಿಗಳ ಮೂಲಕ ರಾಜಕೀಯ ದ್ವೇಷ ಹಬ್ಬಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಜಿಲ್ಲೆಯ ಬಿಜೆಪಿ ಶಾಸಕ ಯಾರು ಗೊತ್ತೇ? ಗೊತ್ತಿದ್ದರೆ ಕಾಮೆಂಟ್ ಮಾಡಿ ಎಂಬ ರೀತಿಯ ಪೋಸ್ಟ್ಗಳನ್ನು ಪ್ರಕಟಿಸಿರುವ ಸುರೇಶ್ ಮುದ್ದಪ್ಪ ಹಾಗೂ ವಿನು ವಿನೋದ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ಪೋಸ್ಟ್ ಗಳನ್ನು…

Read More

ತುಮಕೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) ಯೋಜನೆಯ ಕುರಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಗಿಡಕ್ಕೆ ನೀರೆರೆಯುವುದರ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ಚಾಲನೆ ನೀಡಿದರು. ತರಬೇತಿ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಜುಲೈ 01 ರಿಂದ ವಿಬಿಜಿ ರಾಮ್‌ ಜಿ ಯೋಜನೆ ಜಾರಿಗೆ ಬರಲಿದೆ. ಇದೇ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಮಾರ್ಗಸೂಚಿಗಳನ್ವಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಉದ್ದೇಶದಿಂದ ಎಲ್ಲಾ ವರ್ಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಸದರಿ ತರಬೇತಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಸಹಾಯಕ ನಿರ್ದೇಶಕರು, ಆಡಳಿತ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಿಬ್ಬಂದಿ ಹಾಜರಾಗಿದ್ದು, ತರಬೇತಿಯ ಎಲ್ಲಾ ಅಂಶಗಳನ್ನು ತಿಳಿದುಕೊಳ್ಳಬೇಕು ಎಂದರು. ಜುಲೈ 1 ರಿಂದ ಆರಂಭವಾಗುತ್ತಿರುವ ವಿಬಿಜಿ ರಾಮ್‌ಜಿ ಯೋಜನೆಯಲ್ಲಿ ಒಂದು ಅರ್ಹ ಗ್ರಾಮೀಣ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಉದ್ಯೋಗ…

Read More

ಔರಾದ್: ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾದ ಹಿನ್ನೆಲೆಯಲ್ಲಿ, ತಾಲೂಕು ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಜಂಟಿಯಾಗಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಔರಾದ್ ತಾಲ್ಲೂಕು ಪಂಚಾಯಿತ್ ಕಾರ್ಯನಿರ್ವಹಣಾಧಿಕಾರಿಗಳು (ಇಒ) ಮಾತನಾಡಿ, “ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಈಗಾಗಲೇ ಒಂದು ಕೈಪಂಪನ್ನು ದುರಸ್ತಿ ಮಾಡಿಕೊಡಲಾಗಿದೆ. ಗ್ರಾಮದಲ್ಲಿರುವ ಇನ್ನಷ್ಟು ನೀರಿನ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಲಾಗುವುದು,” ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಅರವಿಂದ ಮಲ್ಲೀಗೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶರಣಪ್ಪ ಗಾದಿಗೆ, ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತಿ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಕುಡಿಯುವ ನೀರಿಗಾಗಿ ತೀವ್ರ ತೊಂದರೆ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ ದಿನನಿತ್ಯ ಅಲೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಅದರಲ್ಲೂ ಗ್ರಾಮದ ದಲಿತರ ಓಣಿಯಲ್ಲಿ ಕಳೆದ ಹಲವಾರು ದಿನಗಳಿಂದ ಹನಿ ನೀರು ಬರುತ್ತಿಲ್ಲ…

Read More

ಸರಗೂರು: ಭಾರತೀಯ ಜನತಾ ಪಕ್ಷದ ಮೈಸೂರು ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷರಾಗಿ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರ ಸರಗೂರು ತಾಲ್ಲೂಕಿನ ಮನುಗನಹಳ್ಳಿಯ ಎಂ.ಪಿ. ಮಂಜುನಾಥ್ ಅವರು ನೇಮಕಗೊಂಡಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ಬಿ.ಯುವಿಜಯೇಂದ್ರ ಅವರ ಸೂಚನೆ ಮೇರೆಗೆ, ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಕುಂಬರಹಳ್ಳಿ ಸುಬ್ಬಣ್ಣ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮೈಸೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು. ಈ ವೇಳೆ ಮಾತನಾಡಿದ ಮುಖಂಡರು, “ಎಂ.ಪಿ. ಮಂಜುನಾಥ್ ಅವರ ಪಕ್ಷದ ಸಂಘಟನಾ ನಿಷ್ಠೆ, ತತ್ವ-ಸಿದ್ಧಾಂತಗಳ ಮೇಲಿನ ಬದ್ಧತೆ ಹಾಗೂ ಕ್ಷೇತ್ರದಲ್ಲಿ ಅವರು ನಿರಂತರವಾಗಿ ನಡೆಸಿಕೊಂಡು ಬಂದಿರುವ ಜನಪರ ಕಾರ್ಯಗಳನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ,” ಎಂದು ತಿಳಿಸಿದರು. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ರಾಜಕೀಯ ಪಯಣ ಆರಂಭಿಸಿದ ಮಂಜುನಾಥ್ ಅವರು ಇಂದು ಜಿಲ್ಲಾ ಮಟ್ಟದ ಪ್ರಮುಖ ಹುದ್ದೆಗೆ ತಲುಪಿರುವುದು ಇತರ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ತಮಗೆ ದೊರೆತಿರುವ ಹೊಸ ಜವಾಬ್ದಾರಿಯ ಬಗ್ಗೆ ಮಾತನಾಡಿದ ನೂತನ…

Read More