Author: admin

ಸರಗೂರು:   ತಾಲ್ಲೂಕು ಚಿಕ್ಕದೇವಮ್ಮನ ಬೆಟ್ಟದ ಸುತ್ತಮುತ್ತಲು ಕಳೆದ ಅನೇಕ ವರ್ಷಗಳಿಂದ ಕಾಡಾನೆಗಳ ಹಾವಳಿ ಹಾಗೂ ಕಾಡು ಪ್ರಾಣಿಗಳಿಂದ ರೈತರು ಬೆಳೆದಂತಹ ಬೆಳೆಗಳು ಸಂಪೂರ್ಣವಾಗಿ ನಾಶವಾಗುತ್ತಿದ್ದರೂ ಸಹ ಅರಣ್ಯಾಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷದಿಂದ ಪ್ರತಿಯೊಬ್ಬ ರೈತರೂ ಸಹ ಲಕ್ಷಾಂತರ ರುಪಾಯಿ ಸಾಲಗಾರನಾಗಿ ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುತ್ತಮುತ್ತಲ ಗ್ರಾಮಗಳಾದ ಲಂಕೆ, ಮನುಗನಹಳ್ಳಿ, ಹುಣಸಹಳ್ಳಿ, ಹೂವಿನಕೊಳ, ಅಲ್ಲಯ್ಯನಪುರ, ಬಸಾಪುರ, ಚಂದ್ರವಾಡಿ, ನಲ್ಲಿತಾಳಪುರ, ರಾಜೂರು, ಕಟ್ಟೆಹುಣಸೂರು, ನಂಜೀಪುರ, ಕುಂದೂರು, ಕಲ್ಲಂಬಾಳು ಹಾಗೂ ದಡದಹಳ್ಳಿ ಗ್ರಾಮದ ರೈತರು ಬೆಳೆದಂತಹ ಬೆಳೆ ಕಾಡುಪ್ರಾಣಿಗಳಿಂದ, ಕೈಗೆ ಬಂದತಹ ತುತ್ತು ಬಾಯಿಗೆ ಇಲ್ಲದಂತಾಗಿದೆ. ಇತ್ತ ಅರಣ್ಯಾಧಿಕಾರಿಗಳು ಬೆಳೆನಾಶಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ಬೆಳೆ ನಷ್ಟ ನೀಡದೆ ಪರಿಹಾರವಾಗಿ ವರ್ಷಾನುಗಟ್ಟಲೆ ಕಾಯಿಸಿದ ನಂತರ ಬೆಳೆ ನಷ್ಟದ ಶೇ. 5% ನಷ್ಟನ್ನು ಮಾತ್ರ ಪರಿಹಾರದ ರೂಪವಾಗಿ ರೈತರಿಗೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಅರಣ್ಯಾಧಿಕಾರಿಗಳ ಈ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷವನ್ನು ಖಂಡಿಸಿ ಎಲ್ಲಾ…

Read More

ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ ಎಂ.ಬಿ.ಮ‌ಹದೇವ ಮತ್ತು ಬಿ ಮಟಕರೆ ಗ್ರಾಪಂ ಪಿಡಿಒ ಉಪಾಧ್ಯಕ್ಷೆಯಾಗಿ ಭಾಗ್ಯಮ್ಮ ಆಯ್ಕೆಯಾದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರದಂದು ಪ.ಜಾತಿ ಮತ್ತು ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಭೆ ನಡೆಸಿ ನಂತರ ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್  ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಪ್ರಕಾಶ್,  ನಮ್ಮ ಪ.ಜಾತಿ ಮತ್ತು ಪ.ಪಂಗಡ  ಸರ್ಕಾರಿ ನೌಕರರು ಶಿಸ್ತು, ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು. ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರದ್ದು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ನೂತನ…

Read More

ಸರಗೂರು: ತಾ.ಪಂ. ಮತ್ತು ಜಿ.ಪಂ. ಚುನಾವಣೆ ನಡೆಸುವಲ್ಲಿ ಸರ್ಕಾರ ನಿರ್ಲಕ್ಷ್ಯ  ವಹಿಸಿದೆ ಎಂದು ಸರಗೂರು ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಸರಗೂರು ಕೃಷ್ಣ  ಆರೋಪಿಸಿದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಯಾಗುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು ಕೆಲಸಕಾರ್ಯಗಳು ಕುಂಠಿತವಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡುವಂತಾಗಿದೆ ಎಂದು ಅವರು ಹೇಳಿದರು. ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ, ಸ್ಥಳೀಯ ಸಂಘ ಸಂಸ್ಥೆಗಳ ಚುನಾವಣೆ ಇದುವರೆಗೂ ಸರ್ಕಾರ ನಡೆಸದೇ ಇರುವುದು, ಸುಮಾರು ಐದು ವರ್ಷಗಳಿಂದಲೂ ಕಳೆದ ಬಿಜೆಪಿ ಸರ್ಕಾರದ ಆಡಳಿತದ ಎರಡು ಅವಧಿಯಲ್ಲೂ ಮತ್ತು ಈಗಿನ ಸರ್ಕಾರ ಈ ಚುನಾವಣೆಗಳನ್ನು ನಡೆಸುವಲ್ಲಿ ನಿರ್ಲಕ್ಷ್ಯ ತೋರುತ್ತಾ ಬಂದಿದೆ. ಇನ್ನು ಮುಂದಿನ ಅಭಿವೃದ್ದಿಯತ್ತ ಕೊಂಡೊಯ್ಯುವ ನಿರೀಕ್ಷೆಗಳೇ ಹುಸಿಯಾಗತೊಡಗಿದೆ ಎಂದು ಅವರು ಆರೋಪಿಸಿದರು. ಹಿಂದೆ ಈ ಚುನಾವಣೆಗಳನ್ನು ನಡೆಸುವ ಬಗ್ಗೆ ಚುನಾವಣಾ ಆಯೋಗವು ಹೈಕೋರ್ಟಿಗೆ ತನ್ನ ನಿಲುವಿನ ಪ್ರಸ್ತಾವನೆಯನ್ನು ಸಲ್ಲಿಸಿತು. ಅದರಂತೆ ಹೈಕೋರ್ಟ್ ಚುನಾವಣೆಗಳನ್ನು ನಡೆಸುವ ಬಗ್ಗೆ ತನ್ನ ಸೃಷ್ಟಿಕರಣ ನೀಡಲು ಕಳೆದ ಜುಲೈ ತಿಂಗಳ 11ನೇ ದಿನಾಂಕದ ಗಡುವನ್ನು ತಿರಸ್ಕರಿಸಿದಂತೆಯೇ…

Read More

ಬೀದರ್: ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಪುತ್ರ ಪ್ರತಿಕ್ ಚವ್ಹಾಣ್ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಔರಾದ್ ತಾಲ್ಲೂಕಿನ ಹೊಕ್ರಾಣಾ ಠಾಣೆಯಲ್ಲಿ ಪೊಲೀಸರು ದೂರು ಸ್ಥೀಕರಿಸಲು ನಿರಾಕರಿಸಿದ್ದರಿಂದ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾರೆ. ನಿಶ್ಚಿತಾರ್ಥ ಮಾಡಿಕೊಂಡು ಬಳಿಕ ಲೈಂಗಿಕವಾಗಿಯೂ ಬಳಸಿಕೊಂಡು ಮೋಸ ಮಾಡಿದ ಪ್ರತೀಕ್ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್   ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚಿಕ್ಕಮಗಳೂರು: ಖಾಸಗಿ ಬಸ್ ಪಲ್ಟಿಯಾದ ಪರಿಣಾಮ  25ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೀಕೆಂಡ್ ಹಿನ್ನೆಲೆ ಎಂ.ಎನ್.ಸಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ – ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವಿಜಯಪುರ:  ಸಾಲ ಪಡೆದ ಹಣ ವಾಪಸ್ ಕೊಡದ ಹಿನ್ನೆಲೆ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿ ಹಾಕಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ನಡೆದಿದೆ. ಕುಮಾರ್‌ ಗೌಡ ಬಿರಾದಾರ್ ಎಂಬಾತ ಓರ್ವ ವ್ಯಕ್ತಿಯ ಕಾಲಿಗೆ ಸರಪಳಿ ಕಟ್ಟಿ ಅಮಾನುಷವಾಗಿ ನಡೆದುಕೊಂಡಿದ್ದಾನೆ. ಕುಮಾರ್‌ ಗೌಡನ ಬಳಿ ವ್ಯಕ್ತಿಯೋರ್ವ 20 ಸಾವಿರ ರೂ. ಸಾಲ ಪಡೆದಿದ್ದ. ಇದೀಗ ಸಾಲದ ಹಣವನ್ನು ವಾಪಸ್ ಕೊಡದಿದ್ದಕ್ಕೆ ಆತನ ಕಾಲಿಗೆ ಸರಪಳಿ ಹಾಕಿ ಕಂಬಕ್ಕೆ ಕಟ್ಟಿ ಹಾಕಿದ್ದಾನೆ. ಈ ಕೃತ್ಯಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಚನ್ನಪಟ್ಟಣ: ಕುಟುಂಬದ ಗಲಾಟೆ ನಿಲ್ಲಿಸಲು ಬಂದ ಪೊಲೀಸ್ ಪೇದೆ  ತನ್ನ ಮೇಲೆ 4 ಬಾರಿ ಅತ್ಯಾಚಾರ ಮಾಡಿದ ಎಂದು ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ರಾಮನಗರದಲ್ಲಿ ಡಿಎಆರ್ ಪೇದೆಯೊಬ್ಬರ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದು, ಮಾತ್ರವಲ್ಲದೇ ತನ್ನಿಂದ 12 ಲಕ್ಷ ರೂ ಹಣ ಕೂಡ ಪಡೆದು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆ ಎಂ.ಕೆ.ದೊಡ್ಡಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಯಾವುದೋ ಗಲಾಟೆ‌ ಪ್ರಕರಣ ಸಂಬಂಧ ಸಂತ್ರಸ್ಥ ಮಹಿಳೆ 112 ಗೆ ಕರೆ ಮಾಡಿದ್ದರು. ಈ ವೇಳೆ ಸ್ಥಳಕ್ಕಾಗಮಿಸಿದ 112 ವಾಹನದ ಚಾಲಕ ಡಿಎಆರ್ ಪೇದೆ ಪುಟ್ಟಸ್ವಾಮಿ ಸಂತಸ್ಥ ಮಹಿಳೆಯ ಪರಿಚಯ ಮಾಡಿಕೊಂಡು ಸ್ನೇಹ ಬೆಳೆಸಿಕೊಂಡಿದ್ದ. ಬಳಿಕ ಆಕೆಯಿಂದ ಪೋನ್ ನಂಬರ್ ಪಡೆದು ಸಲುಗೆ ಬೆಳೆಸಿಕೊಂಡಿದ್ದ.  ಬಳಿಕೆ ಆಕೆಗೆ ಹತ್ತಿರವಾಗಿ ವಿವಿಧ ಸಂದರ್ಭಗಳಲ್ಲಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ರೀತಿ ಪೇದೆ ಪುಟ್ಟಸ್ವಾಮಿ ತನ್ನ ಮೇಲೆ ನಾಲ್ಕು…

Read More

ದಾವಣಗೆರೆ: ಚಾಕೊಲೇಟ್​​​ ಪಾನ್ ​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿರುವ ನಗರದ ಪೊಲೀಸರು, ಆತನ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ಯಾರೆಲಾಲ್ ಅಲಿಯಾಸ್ ರಾಜು (38) ಬಂಧಿತ ಆರೋಪಿ. ಆರೋಪಿಯು ದಾವಣಗೆರೆ ನಗರದ ರಾಮ್​ ಅಂಡ್​ ಕೋ ಸರ್ಕಲ್ ​ಲ್ಲಿ ರಾಜು ಪಾನ್‌ ಶಾಪ್​ ಹೆಸರಿಲ್ಲಿ ಅಂಗಡಿ ನಡೆಸುತ್ತಿದ್ದ. ಈತ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಿಶ್ರಿತ ಚಾಕೋಲೇಟ್​ ಪಾನ್​ ಮಾರಾಟ ಮಾಡುತ್ತಿದ್ದ. ಅಲ್ಲದೆ, ತನ್ನ ಅಪ್ರಾಪ್ತ ಮಗನ ಕೈಯಲ್ಲಿ ಗಾಂಜಾ ಮಿಶ್ರಿತ ಪಾನ್​ ಕೊಟ್ಟು ಕಾಲೇಜುಗಳ ಬಳಿ ಮಾರಾಟ ಮಾಡಿಸುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ಈ ದಂಧೆ ನಡೆಯುತ್ತಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಮ್​ ಅಂಡ್​ ಕೋ ವೃತ್ತದಲ್ಲಿ ಪಾನ್​ ಶಾಪ್​​ನಲ್ಲಿ ಗಾಂಜಾ ಮಿಶ್ರಿತ ಚಾಕೊಲೇಟ್​ ಪಾನ್ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಆಧರಿಸಿ ದಾಳಿ ನಡೆಸಿದ್ದೇವೆ. ಈ ಸಂದರ್ಭದಲ್ಲಿ 160 ಗಾಂಜಾ ಬೆರೆಸಿರುವ ಚಾಕೊಲೇಟ್ ಹಾಗೂ 1,115 ಗ್ರಾಂ ಗಾಂಜಾ…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಕೆಲಸದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಇಂದು ಆದೇಶ ಕಾಯ್ದಿರಿಸಿದ್ದಾರೆ. ಪ್ರಾಸಿಕ್ಯೂಷನ್ ಪರ ಎಸ್ಎಸ್ ಪಿ ಬಿ.ಎನ್.ಜಗದೀಶ್ ಹಾಗೂ ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಪರವಾಗಿ ಹಿರಿಯ ವಕೀಲ ನಳಿನಾ ಮಾಯಗೌಡ ಪ್ರತಿವಾದ ಮಂಡಿಸಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ಜುಲೈ 30ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ. ಜುಲೈ 30 ರಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಕೋರ್ಟ್​, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮೈಸೂರು: ಧರ್ಮಸ್ಥಳದಲ್ಲಿ ಸರಣಿ ಅತ್ಯಾಚಾರ, ಹತ್ಯೆ ಪ್ರಕರಣಗಳ ಬಗ್ಗೆ ಸಾಕ್ಷಿ ಹೇಳಲು ಮುಂದೆ ಬಂದಿರುವ ಅನಾಮಿಕ ವ್ಯಕ್ತಿಯೊಬ್ಬರ ಪ್ರಕರಣವನ್ನು ಎಸ್ ಐಟಿಗೆ ವಹಿಸಬೇಕು ಎನ್ನುವ ಒತ್ತಾಯ ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ತನಿಖೆ ನಡೆಸುತ್ತಿದ್ದು, ಕಾನೂನು ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದರು. ಪೊಲೀಸ್‌ ಇಲಾಖೆಯೊಂದಿಗೆ ಚರ್ಚಿಸಿ, ಎಸ್‌ ಐಟಿ ರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇನೆ.   ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More