Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2025-26ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ:- ಬಿ.ಎ-ರೂ.9,240/-., ಬಿ.ಕಾಂ- ರೂ.9,790, ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-13,640/-., ಬಿ.ಸಿ.ಎ/ಬಿ.ಎಸ್ಸಿ-ರೂ.26,290/-., ಬಿ.ಎಸ್.ಡಬ್ಲ್ಯೂ-ರೂ.14,190/-., ಎಂ.ಎ-ರೂ.11,660/-., ಎಂ.ಸಿ.ಜೆ-ರೂ.17,820/-., ಎಂ.ಕಾಂ-ರೂ.13,640/-., ಎಂ.ಬಿ.ಎ–ರೂ.32,890/-., ಎಂ.ಎಸ್ಸಿ/ಎಂ.ಸಿ.ಎ-ರೂ.32,670/-., ಎಂ.ಎಸ್.ಡಬ್ಲ್ಯೂ-ರೂ.23,430/-., ಎಂ.ಎಲ್.ಐ.ಎಸ್ಸಿ-ರೂ.19,965/-ಗಳಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಸೆಪ್ಟೆಂಬರ್ 15 ಕೊನೆಯ ದಿನಾಂಕ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ…
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮರಣದಂಡನೆಯನ್ನು ಬುಧವಾರ ನಿಗದಿಪಡಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್ ಮೂಲದ ಪ್ರಿಯಾ, ಜುಲೈ 2017 ರಲ್ಲಿ ಯೆಮೆನ್ ಪ್ರಜೆಯೊಬ್ಬರ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿ ಈ ಶಿಕ್ಷೆಗೆ ಗುರಿಯಾಗಿದ್ದರು. ಯೆಮನ್ ನ ಸ್ಥಳೀಯ ಅಧಿಕಾರಿಗಳು ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ ಎಂಬುವುದಾಗಿ ಮೂಲಗಳು ತಿಳಿಸಿವೆ. 2020 ರಲ್ಲಿ, ಯೆಮೆನ್ ನ್ಯಾಯಾಲಯವು ಅವರಿಗೆ ಮರಣದಂಡನೆ ವಿಧಿಸಿತು ಮತ್ತು ದೇಶದ ಸುಪ್ರೀಂ ನ್ಯಾಯಾಂಗ ಮಂಡಳಿಯು ನವೆಂಬರ್ 2023 ರಲ್ಲಿ ಅವರ ಮೇಲ್ಮನವಿಯನ್ನು ವಜಾಗೊಳಿಸಿತು. 38 ವರ್ಷದ ನರ್ಸ್ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಸೂಫಿ ನಾಯಕ ಶೇಖ್ ಹಬೀಬ್ ಉಮರ್ ಬಿನ್ ಹಫೀಜ್ ಅವರ ಪ್ರತಿನಿಧಿಗಳು ಮತ್ತು ಮಹ್ದಿ ಅವರ ಕುಟುಂಬದ ನಡುವೆ ಧಮರ್ ನಲ್ಲಿ ಮಾತುಕತೆ ನಡೆಯುತ್ತಿರುವುದರಿಂದ ಮರಣದಂಡನೆ…
ಬೆಂಗಳೂರು: ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಆರ್ ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್, ನನಗೂ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ನನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಹೇಳಿದ್ದಾರೆ. ಕೊಲೆಯಾದವನು ಮತ್ತು ಕೊಲೆ ಮಾಡಿದ ಆರೋಪಿಗಳು ನನಗೆ ಗೊತ್ತಿಲ್ಲ. ದೂರು ನೀಡಿದವರು ನನಗೆ ಗೊತ್ತಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್ ಎಆರ್ ದಾಖಲಿಸಬಹುದೇ ಎಂದು ಪ್ರಶ್ನಿಸಿದರು. ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ನನಗೆ ಈ ವಿಚಾರ ಗೊತ್ತಾಯಿತು. ನನಗೆ ಸಂಬಂಧ ಇಲ್ಲದ ಪ್ರಕರಣದಲ್ಲಿ ನನ್ನ ಹೆಸರು ಬಂದಿದೆ. ಎಫ್ ಐಆರ್ ನಿಂದ ನನ್ನ ಹೆಸರು ತೆಗೆಯಲು ನಾನು ಕಾನೂನು ಸಮರ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್ ಅವರಿಗೂ ಮನವಿ ಮಾಡುತ್ತೇನೆ ಎಂದು ತಿಳಿಸಿದರು. ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ಮಂಗಳವಾರ ರಾತ್ರಿ ಶಿವಪ್ರಕಾಶ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಶಿವಪ್ರಕಾಶ್ ತಾಯಿ ವಿಜಯಕ್ಷ್ಮಿ ಭಾರತಿನಗರ ಠಾಣೆಗೆ ದೂರು ನೀಡಿದ್ದು…
ರಾಮನಗರ: ಡಿಜಿಟಲ್ ಅರೆಸ್ಟ್ ಬೆದರಿಕೆಯಿಂದ ನೊಂದು ಬೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕೆಲಗೆರೆ ಗ್ರಾಮದಲ್ಲಿ ನಡೆದಿದೆ. ಬೆಸ್ಕಾಂ ಸಿಬ್ಬಂದಿ 42 ವರ್ಷದ ಕುಮಾರ್ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ತಮ್ಮ ಡೆತ್ ನೋಟ್ ನಲ್ಲಿ ಡಿಜಿಟಲ್ ಅರೆಸ್ಟ್ ಕಿರುಕುಳದ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್‌ನಲ್ಲಿ ಬೆಸ್ಕಾಂ ಹೊರಗುತ್ತಿಗೆ ನೌಕರರನಾಗಿ ಕುಮಾರ್ ಕೆಲಸ ಮಾಡುತ್ತಿದ್ದರು. ವಿಕ್ರಮ್ ಗೋಸ್ವಾಮಿ ಎಂಬಾತ ವೀಡಿಯೋ ಕಾಲ್ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ ಎಂದು ಬೆದರಿಸಿದ್ದ. ಕೇಸ್ ನಿಂದ ಕೈಬಿಡಲು ಅಕೌಂಟ್ ಗೆ ಹಣ ಹಾಕು ಎಂದು ಬೆದರಿಸಿದ್ದ. ಸುಮಾರು 11 ಲಕ್ಷ ಹಣವನ್ನ ತನ್ನ ಅಕೌಂಟ್ ಗೆ ಹಾಕಿಸಿಕೊಂಡಿದ್ದ. ಆದರೆ ಮತ್ತೆ ಹಣ ನೀಡುವಂತೆ ಬೆದರಿಸಿದ್ದ. ಕಿರುಕುಳಕ್ಕೆ ಬೇಸತ್ತ ಕುಮಾರ್ ಡೆತ್‌ನೋಟ್ ಬರೆದು ನೇಣಿಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಸರಗೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳ ಮೂಲಕ ಜನರ ಏಳಿಗೆಯ ಮೂಲಕ ದೇಶದ ಉನ್ನತಿ ಕಾರ್ಯವನ್ನು ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರು ಮಾಡುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ವಿ.ಭಾಸ್ಕರ್ ತಿಳಿಸಿದರು. ತಾಲೂಕಿನ ದಡದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ದಂದು ಪರಿಸರ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 11 ಸಾವಿರ ದೇವಸ್ಥಾನಗಳಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಜೀರ್ಣೋದ್ಧಾರ ಮಾಡುವುದಕ್ಕೆ ಸಹಾಯ ಮಾಡಿಕೊಂಡು ಬರುತ್ತಿದ್ದಾರೆ ಎಂದರು. ಕಾಡಿನಲ್ಲಿ ಹಣ್ಣು ಹಂಪಲುಗಳನ್ನು ನೀಡುವ ಮರಗಳ ಕ್ಷೀಣತೆಯಿಂದಾಗಿ ವನ್ಯಪ್ರಾಣಿಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿವೆ. ಗ್ರಾಮೀಣ ಭಾಗದಲ್ಲಿ ತುರ್ತು ಸಂದರ್ಭದಲ್ಲಿ ಸೇವಾ ಮನೋಭಾವದಿಂದ ಧಾವಿಸುವವರು ಇದ್ದರೆ ಅದು ಶೌರ್ಯ ವಿಪತ್ತು ಘಟಕ, ಅವರ ಎಲ್ಲಾ ಕಾರ್ಯಗಳು ಮಾದರಿ, ಮುಂದಿನ ಭವಿಷ್ಯಾಕ್ಕಾಗಿ ಮಾಡಬೇಕಾದ ದೊಡ್ಡ ಆಸ್ತಿ ಎಂದರೆ ಸ್ವಚ್ಚ ಪರಿಸರ. ಒಬ್ಬ ವಿದ್ಯಾರ್ಥಿ ಒಂದು ಗಿಡ ನೆಡುವ ಸಂಕಲ್ಪ ಮಾಡಬೇಕು. ಆಗ ಮಾತ್ರ ನಮ್ಮ ಸ್ವಚ್ಚ ನಿರ್ಮಲ ಪರಿಸರದ ನಿರ್ಮಾಣದ ಕನಸು…
ಸರಗೂರು: ಜುಲೈ 18ರಂದು ರಾಜ್ಯಾದ್ಯಂತ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ಕೂಡಗಿ ಗೋವಿಂದರಾಜು ತಿಳಿಸಿದ್ದಾರೆ. ತಾಲ್ಲೂಕಿನ ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಶುಕ್ರವಾರದಂದು ಬೆಳಗ್ಗೆ 11 ಗಂಟೆಗೆ ಸರ್ಕಾರದಿಂದ ದರಖಾಸ್ತು ಮೂಲಕ ಮಜೂರಾತಿ ಮಾಡಿರುವ ವಿತರಣೆ ಮಾಡದೆ ಇರುವ ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ಹಮ್ಮಿಕೊಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ದರಖಾಸ್ತು ಭೂಮಿ ಸಕ್ರಮೀಕರಣವು ಆಯಾ ಕ್ಷೇತ್ರದ ಶಾಸಕರುಗಳ ಅಧ್ಯಕ್ಷತೆ ಹೊಂದಿರುವ ಸಮಿತಿಗಳು ನಿರ್ಲಕ್ಷತೆಯಿಂದ ಸರಿಯಾಗಿ ಕೆಲಸ ನಿರ್ವಹಿಸದೆ ಫಾರಂ 53 54 57 ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಮತ್ತು ತಳಸಮುದಾಯಗಳ ಅರ್ಜಿಗಳು ರಾಶಿಗಟ್ಟಲೆ ಕೊಳೆಯುತ್ತಾ ಬಿದ್ದಿವೆ. ಬಾಬಾ ಸಾಹೇಬರ ಸೈದ್ಯಾಂತಿಕಾ ನೆಲೆಯಲ್ಲಿ ದಲಿತ ಚಳುವಳಿಗಳು ಹಿಂದಿನಿಂದಲೂ ಭೂಮಿ ಶಿಕ್ಷಣ ವಸತಿ ಹಾಗೂ ಉದ್ಯೋಗ ಮತ್ತು ಮೂಲಭೂತ ಅವಶ್ಯಕತೆಗಾಗಿ ಆಳುವ ಪ್ರಭುತ್ವದೊಂದಿಗೆ ನಿರಂತರ ಸಂಘರ್ಷ ನಡೆಸುತ್ತಲೇ ಬಂದಿದೆ. ಆದರೆ ಆಳುವ ಸರ್ಕಾರ ತನ್ನ ವಿಫಲತೆಯನ್ನು…
ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ ಅಂತ್ಯ ಸಂಸ್ಕಾರ ನಡೆದಿದೆ. ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರೋಜಾದೇವಿ ಅವರ ಕುಟುಂಬಸ್ಥರು, ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ರಸ್ತೆಯಲ್ಲಿ ಮಲಗಿದ್ದ ನಾಯಿಯ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿ ಅಮಾನವೀಯತೆಯಿಂದ ವರ್ತಿಸಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಜುಲೈ 13ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಸ್ತೆಯ ಪಕ್ಕದ ಜಾಗದಲ್ಲಿ ನಾಯಿ ಮಲಗಿತ್ತು. ಈ ವೇಳೆ ಅಲ್ಲಿಗೆ ಬಂದ ಕಾರು, ಸ್ವಲ್ಪ ಹೊತ್ತು ಮುಂದೆಯೇ ನಿಂತಿತ್ತು. ನಂತರ ಚಾಲಕ ಏಕಾಏಕಿ ನಾಯಿಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾನೆ. ಇದರಿಂದ ನಾಯಿ ಗಂಭೀರವಾಗಿ ಗಾಯಗೊಂಡಿದೆ. ಉದ್ದೇಶಪೂರ್ವಕವಾಗಿಯೇ ನಾಯಿಯ ಮೇಲೆ ಕಾರು ಹತ್ತಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿರುವ ಸಾರ್ವಜನಿಕರು ಕಾರಿನ ಚಾಲಕನ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೋಲಾರ: KSRTC ನೌಕರರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಬಾಬಾಜಾನ್ (53) ಮೃತಪಟ್ಟವರಾಗಿದ್ದಾರೆ. ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಬಾಬಾಜಾನ್ ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಕೂಡ ಕರ್ತವ್ಯ ನಿಭಾಯಿಸಿ ಮನೆಗೆ ತೆರಳಿದ್ದರು. ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಬಾಬಾಜಾನ್ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಶಿವಮೊಗ್ಗ: ಶಿಷ್ಟಾಚಾರ ಉಲ್ಲಂಘನೆ ಮತ್ತು ಕಾರ್ಯಕ್ರಮವನ್ನು ರಾಜ್ಯ ಸಚಿವರು ಮತ್ತು ಶಾಸಕರು ಬಹಿಷ್ಕರಿಸಿದ್ದಾರೆ ಎಂಬ ಆರೋಪದ ನಡುವೆಯೇ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸೋಮವಾರ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣವಾಗಿರುವ ದೇಶದ ಎರಡನೇ ಅತಿ ಉದ್ದದ ಮತ್ತು ರಾಜ್ಯದ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆಯನ್ನು ಉದ್ಘಾಟಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬರಗೋಡ್ಲು ಮತ್ತು ಕಳಸವಳ್ಳಿ ಗ್ರಾಮಗಳ ನಡುವೆ 473 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆಯು, ಒಟ್ಟು 2.44 ಕಿ.ಮೀ. ಉದ್ದವಿದೆ. ಹೊಸ ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿಯ ಹೆಸರನ್ನಿಟ್ಟ ಗಡ್ಕರಿ, ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಮತ್ತು ಯೋಜಿಸಲಾಗಿರುವ ಹೆದ್ದಾರಿ ಯೋಜನೆಗಳನ್ನು ಪಟ್ಟಿ ಮಾಡಿದರು. 5 ಲಕ್ಷ ಕೋಟಿ ರೂ. ಮೌಲ್ಯದ ಈ ಯೋಜನೆಗಳು ಕೇಂದ್ರ ಸರ್ಕಾರದ ಅಧಿಕಾರಾವಧಿಯ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ಭರವಸೆ ನೀಡಿದರು. 2,041 ಕೋಟಿ ರೂ. ಮೌಲ್ಯದ ಒಂಬತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ನಿತಿನ್ ಗಡ್ಕರಿಯವರು ಚಾಲನೆ…