Author: admin

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ ಅವರು,  ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಾಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ ಎಂದಿದ್ದಾರೆ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ನಿಧನರಾಗಿದ್ದಾರೆ. ಜನವರಿ 7, 1938 ರಲ್ಲಿ ಜನಿಸಿದ್ದ ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಮೃತದೇಹ ಮಲ್ಲೇಶ್ವರಂ ನಿವಾಸದಲ್ಲಿದ್ದು, ಪೊಲೀಸರು ಭದ್ರತೆ ವ್ಯವಸ್ಥೆ ಮಾಡುತ್ತಿದ್ದಾರೆ. ಹಲವು ಗಣ್ಯರು ಈಗ ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಿಕ್ಕಿ (ಯು) ಗ್ರಾಮದ ಕಾಲೇಜು ಓದುತಿದ್ದ ಬಾಲಕಿ ವಂದನಾ ಗಣೇಶ್ ಪಾವಾರ (21) ಅನ್ನುವವಳು ಪಟ್ಟಣದ ಬಿಸಿಎಂ ವಸತಿ ನಿಲಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಶನಿವಾರ ರಾತ್ರಿ ಪಟ್ಟಣದಲ್ಲಿ ಜರುಗಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಖಾಸಗಿ ಕಟ್ಟಡದಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ರಾತ್ರಿ ಊಟದ ಸಮಯದಲ್ಲಿ  ನೇಣಿಗೆ ಶರಣಾಗಿದ್ದಾಳೆ. ಮೃತ ಬಾಲಕಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ನಲ್ಲಿ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತಿದ್ದಳು ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಔರಾದ್ ಪೊಲೀಸ್ ಠಾಣೆಯ ಪೊಲೀಸರು ಆಗಮಿಸಿ ಎಲ್ಲ ಮಾಹಿತಿಗಳನ್ನು ಕಲೆಹಾಕಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಸಾವಿಗೆ ನಿಖರವಾದ ಕಾರಣ ಗೊತ್ತಾಗಿಲ್ಲ . ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಬೀದರ್ : ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಇ–ಪಾವತಿ ಅಭಿಯಾನ (ವಾರಸುದಾರರ ಹಕ್ಕು ಬದಲಾವಣೆ) ಆಂದೋಲನ ಜಾರಿಗೆ ತಂದಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಔರಾದ್ ನ ತಹಶೀಲ್ದಾರ್ ಮಹೇಶ ಪಾಟೀಲ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮರಣ ಹೊಂದಿದ ಪಟ್ಟೆದಾರರ ಹೆಸರು ತೆಗೆದು, ಅವರ ಕಾನೂನು ಬದ್ಧ ವಾರಸುದಾರರ ಹೆಸರು ಸೇರಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ದರಿಂದ ಎಲ್ಲ ರೈತರು ಮೃತರ ಮರಣ ಪ್ರಮಾಣ ಪತ್ರ, ಕುಟುಂಬದ ವಂಶವೃಕ್ಷ, ಆಧಾರ್ ಕಾರ್ಡ್ ಹಾಗೂ ಪಹಣಿಯೊಂದಿಗೆ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ. ಮರಣ ಹೊಂದಿದ ಪಟ್ಟೆದಾರರ ಹೆಸರು ಪಹಣಿಯಲ್ಲಿ ಮುಂದುವರಿದರೆ, ಬ್ಯಾಂಕ್ ಲೋನ್, ಬೆಳೆ ಪರಿಹಾರ, ಬೆಳೆ ವಿಮೆ, ಪಿಎಂ ಕಿಸಾನ್ ಯೋಜನೆ, ಬೀಜ, ಗೊಬ್ಬರ ಹಾಗೂ ಇತರೆ ಸರ್ಕಾರಿ ಸೌಲಭ್ಯ ಸಿಗುವುದಿಲ್ಲ. ಹೀಗಾಗಿ ಎಲ್ಲ ರೈತರು ಇ-ಪಾವತಿ ಖಾತೆ ಅಭಿಯಾನದ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.  ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ…

Read More

ಬೀದರ್ : ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಆದೇಶಿಸಿದೆ. ಭಾಲ್ಕಿ ತಾಲ್ಲೂಕಿನ ಮೇಹಕರ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಅಳವಾಯಿ ಗ್ರಾಮದಲ್ಲಿ 2024 ರಲ್ಲಿ ಪೋಕ್ಸೋ ಪ್ರಕರಣಕ್ಕೆ ಒಳಪಡುವ ಘಟನೆ ನಡೆದಿತ್ತು. ಈ ಘಟನೆ ವಿರುದ್ಧ ಮೇಹಕರ್ ಪೊಲೀಸ್ ಠಾಣೆಯಲ್ಲಿ ಅಂದಿನ ಎಎಸ್ ಐ ಚಂದ್ರಕಾಂತ್ ಅವರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದರು. ಮುಂದಿನ ತನಿಖೆಯನ್ನು ಭಾಲ್ಕಿ ಗ್ರಾಮೀಣ ಪೊಲೀಸ್ ವೃತ ನಿರೀಕ್ಷಕ ಜಿ.ಎಸ್.ಬಿರಾದಾರ್ ಅವರು ವಹಿಸಿಕೊಂಡು ಪ್ರಕರಣದ ತನಿಖೆಯನ್ನು ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಬಿ.ಕೆ.ಕೋಮಲಾ ಅವರು ಅಪರಾಧಿಯನ್ನು ಶಿಕ್ಷೆಗೆ ಒಳಪಡಿಸಿ ಆದೇಶಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಚೆನ್ನೈ: ಕಮಲ್ ಸರ್ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದೆ. ಹಾಗಾಗೀ ಅವರ ಸಿನಿಮಾ ಬಿಡುಗಡೆಗೆ ವಿರೋಧ ವ್ಯಕ್ತವಾಯಿತು. ಕಮಲ್ ಸರ್ ಕ್ಷಮೆ ಕೇಳಬೇಕಿತ್ತು ಎಂದು ಚೆನ್ನೈನಲ್ಲಿ ತಮಿಳು ಮಾಧ್ಯಮಗಳ ಪ್ರಶ್ನೆಗೆ ಖಡಕ್ ಉತ್ತರ ನೀಡಿದ್ದಾರೆ. ಪ್ರೇಮ್ ನಿರ್ದೇಶನದ, ನಟ ಧ್ರುವ ಸರ್ಜಾ ಅಭಿನಯದ ಕೆಡಿ ಚಿತ್ರದ ಇತ್ತೀಚಿಗೆ ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಶುಕ್ರವಾರ ಚೆನ್ನೈನಲ್ಲಿ ಪ್ರಚಾರದ ಭಾಗವಾಗಿ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದೇ ಇರುವ ತಮಿಳು ಮಾಧ್ಯಮಗಳ ಪ್ರಶ್ನೆಗೆ ಕನ್ನಡದಲ್ಲಿಯೇ ಪ್ರೇಮ್ ಉತ್ತರಿಸಿದ್ದಾರೆ. ನಾವೇನು ಬೇರೆ ದೇಶದಲ್ಲಿಲ್ಲ. ಇನ್ನೂರು–ಮುನ್ನೂರು ಕಿಲೋ ಮೀಟರ್ ದೂರದಲ್ಲಿದ್ದೇವೆ ಅಷ್ಟೇ. ಎಲ್ಲರೂ ಒಂದೇ. ತಾಯಿಗೆ ಯಾರಾದರೂ ಬೈದರೆ ಸುಮ್ಮನಿರುತ್ತಾರಾ? ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಎಲ್ಲಾ ತಮಿಳು ಸಿನಿಮಾಗಳು ಚೆನ್ನಾಗಿ ಓಡುತ್ತವೆ. ನಾನೂ ತಮಿಳು ಸಿನಿಮಾಗಳನ್ನು ನೋಡುತ್ತೇನೆ. ಕರ್ನಾಟಕದಲ್ಲಿ ತಮಿಳು ಸಿನಿಮಾಗಳ ಬಿಡುಗಡೆಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಕಮಲ್ ಸರ್ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದೆ. ಹಾಗಾಗೀ ಅವರ ಸಿನಿಮಾ…

Read More

ಬೆಂಗಳೂರು: ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಾನು ಖಾಸಗಿ ಕಾರ್ಯಕ್ರಮ ನಿಮಿತ್ತ ಶಿರಡಿ ಮತ್ತಿತರ ಕಡೆ ಭೇಟಿ ನೀಡಿದ್ದೇನೆ. ಆದರೆ ಕೆಲವು ಟಿವಿ ಚಾನೆಲ್ ಮತ್ತಿತರ ಮಾಧ್ಯಮಗಳಲ್ಲಿ ಹೈಕಮಾಂಡ್ ಬುಲಾವ್ ಮೇರೆಗೆ ದಿಲ್ಲಿಗೆ ತೆರಳಿದ್ದೇನೆ ಎಂದು ವರದಿ ಆಗಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ವಿಚಾರ. ನನ್ನ ಖಾಸಗಿ ಕಾರ್ಯಕ್ರಮಗಳಿಗೆ ರಾಜಕೀಯ ಬಣ್ಣ ಹಚ್ಚುವುದು ಸಲ್ಲದು ಎಂದು ಹೇಳಿದ್ದಾರೆ. ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆ.ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿಯವರು ಭೇಟಿಗೆ ಸಮಯ ನೀಡಿರಲಿಲ್ಲ. ಭೇಟಿಗೆ ಕಾದು ಕುಳಿತು ಅವಕಾಶ ಸಿಗದೇ ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದರು. ಅದರೆ, ಇದೀಗ ದಿಢೀರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ಹಲವು ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಕೊರಟಗೆರೆ : ಕರ್ನಾಟಕದ 234 ತಾಲ್ಲೂಕಿನಲ್ಲಿ ಈಗಾಗಲೇ ನಮ್ಮ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಾಂತ ಪ್ರವಾಸ ಕೈಗೊಂಡಿದ್ದೇನೆ ಎಂದು ನಮ್ಮ ಕರ್ನಾಟಕ ರಾಜ್ಯ ಅಹಿಂದ ಜನಪರ ವೇದಿಕೆ ರಾಜ್ಯಾಧ್ಯಕ್ಷ ನಗರ‍್ಲು ನರಸಿಂಹಪ್ಪ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಮ್ಮ ಕರ್ನಾಟಕ ರಾಜ್ಯ ಅಹಿಂದ ಜನಪರ ವೇದಿಕೆ ನೂತನ ತಾಲ್ಲೂಕು ಘಟಕ ಉದ್ಘಾಟನಾ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಉದ್ಯೋಗ ರೂಪಿಸಿಕೊಳ್ಳಲು ಮುಂದಾದ ಯುವಕರಿಗೆ ಸಂಘಟನೆ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲದ ರೂಪದಲ್ಲಿ ನೀಡಲಾಗುವುದು. ಅಹಿಂದ ತತ್ವವನ್ನು ಅನುಸರಿಸಿ ನೊಂದವರಿಗೆ ಸಾಮಾಜಿಕ ಶೈಕ್ಷಣ ಕ ಆರ್ಥಿಕ ಸಮಾನತೆ ಸಿಗುವಂತೆ ಮಾಡುವ ಉದ್ದೇಶ ಹೊಂದಿದೆ ಈ ಸಂಘಟನೆ ಪಕ್ಷಾತೀತವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಮತ್ತು ತಾಲೂಕು ಅಧ್ಯಕ್ಷ ಸಿದ್ದಲಿಂಗಯ್ಯ, ಟಿ.ಬಿ. ಮಾತನಾಡಿ, ಅಲ್ಪಾಸಂಖ್ಯಾತರು, ಹಿಂದುಳಿದ ವರ್ಗಗಳ, ತಳ ಮಟ್ಟದ ಜನರನ್ನ ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ…

Read More

ಸರಗೂರು:  ಶಾಸಕ ಅನಿಲ್ ಚಿಕ್ಕಮಾದುರವರ ವಿರುದ್ಧ ವಿರೋಧ ಪಕ್ಷದ ಮುಖಂಡರು ಅಭಿವೃದ್ಧಿ ಕೆಲಸ ನೋಡೋಕೆ ಆಗದೇ ಇತರ ಪಿತ್ತೂರಿ ನಡೆಸುತ್ತಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪ್ರದಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಮತ್ತು ಮುಖಂಡರು ಸಾರ್ವಜನಿಕರಿಗೆ ಶಾಸಕರ ವಿರುದ್ಧ ಲೋಕಲ್ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ.  ಆದರೆ ಜನರಿಗೆ ಸತ್ಯಾಂಶ ಗೊತ್ತಿಲ್ಲ. ಗೊತ್ತಾಗಿದರೆ ಶಾಸಕರ ವಿರುದ್ಧ ಮಾತನಾಡುವುದಿಲ್ಲ. ತಾಲೂಕಿನ ಕಬಿನಿ, ತಾರಕ, ನುಗು ಜಲಾಶಯಗಳ ಹಿನ್ನೀರು ಪ್ರದೇಶಗಳಲ್ಲಿ ರೆಸಾರ್ಟ್ ರಾಜಕೀಯ ನಾಯಕರಿಗೆ ಮಾಡಿಸಿಕೊಂಡಿದ್ದಾರೆ ಎಂದು ಜಾಲತಾಣ ಮತ್ತು ಮಾಧ್ಯಮಗಳು ವರದಿ ಮಾಡಿದ್ದಾರೆ. ಅವುಗಳಲ್ಲಿ ಯಾವುದೇ ಸತ್ಯಾಂಶ  ದಾಖಲೆಗಳು ಇಲ್ಲದೆ ಶಾಸಕರ ವಿರೋಧಿಗಳು ಆರೋಪ ಮಾಡಿದ್ದಾರೆ ಅಷ್ಟೇ. ತಾಲೂಕಿನ ಬಗ್ಗೆ ಎಲ್ಲಾ ಸಮುದಾಯದ ಪ್ರತಿ ಒಂದು ಗ್ರಾಮಗಳಿಗೆ ಭೇಟಿ ನೀಡಿ ಕೇಳಿದರೂ ನಮ್ಮ ಶಾಸಕ ಅನಿಲ್ ಚಿಕ್ಕಮಾದು ರವರ ಬಗ್ಗೆ ಗ್ರಾಮದ ಮುಖಂಡರು ಹಾಗೂ ಮಹಿಳೆಯರು ಹೇಳುತ್ತಾರೆ. ನಮ್ಮ…

Read More

ಸರಗೂರು:  ತಾಲೂಕಿನ ಸರಗೂರು ಸಮೀಪದ ಗೊಂತಗಾಲದ ಹುಂಡಿ ಬಳಿಯಲ್ಲಿ ಚಲಿಸುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಗೆ ನುಗ್ಗಿದ ಘಟನೆ ಗುರುವಾರ ರಾತ್ರಿ ನಡೆದಿದೆ. ವಿಚಾರ ಗಮನಕ್ಕೆ ಬಂದ ಕೂಡಲೇ ಶಾಸಕ ಅನಿಲ್ ಕುಮಾರ್ ಎಚ್.ಡಿ.ಕೋಟೆಯ ಸಾರ್ವಜನಿಕರ ಆಸ್ಪತ್ರೆಯಲ್ಲಿ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ಬಗ್ಗೆ ವಿಚಾರಿಸಿ ಮಾತನಾಡಿದರು. ತಾಲೂಕಿನ ಯಾವುದೇ ಸಮಯದಲ್ಲಿ ಈಥರ ಘಟನೆಗಳು ನಡೆಯಬಾರದಾಗಿತ್ತು . ಕೆಎಸ್ಸಾರ್ಟಿಸಿ ವ್ಯವಸ್ಥಾಪಕರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಬಸ್ ನ ಅಪಘಾತ ಸಂಭವಿಸಿರುವ ಗಾಯಾಳಗಳಿಗೆ ಜವಾಬ್ದಾರಿಯನ್ನು ಇಲಾಖೆಯವರು ಉಳಿಸಿಕೊಳ್ಳಬೇಕೆಂದು ಸೂಚನೆ ನೀಡಿದರು. ಬೊಂತಗಾಲದ ಹುಂಡಿ ಬಳಿಯಲ್ಲಿ ಗುರುವಾರ ಸಂಜೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸರಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕೆರೆಯ ನೀರಿಗೆ ನುಗ್ಗಿದ ಘಟನೆ ನಡೆದಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ 7 ಮಂದಿ ಗಾಯಾಳುಗಳನ್ನು ಸರಗೂರು ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ಪೊಲೀಸರು ಸ್ಥಳಾಂತರಿಸಿದರು. ಬಾಲಕನೊಬ್ಬ ಸೇರಿದಂತೆ 3 ಮಂದಿಯನ್ನು ಮೈಸೂರು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾನೂನು ಕ್ರಮ…

Read More