Author: admin

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳು ಬಿಜೆಪಿ ಸರಕಾರದ ದುರಾಡಳಿತದ ಫಲ. ರಸ್ತೆಗುಂಡಿಗಳನ್ನು ಮುಚ್ಚಲು ನಾವು ಬದ್ಧರಾಗಿದ್ದು, ಇದಕ್ಕಾಗಿಯೇ ಮುಖ್ಯಮಂತ್ರಿಗಳು 750 ಕೋಟಿ ರೂ. ಅನುದಾನ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಖ್ಯಾತ ಸಾಹಿತಿ ಎಸ್ ಎಲ್ ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ನಗರದಲ್ಲಿ ರಸ್ತೆಗುಂಡಿ ವಿಚಾರವಾಗಿ ಬಿಜೆಪಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಗರದಲ್ಲಿ ರಸ್ತೆಗುಂಡಿಗಳಿರುವುದು ನಿಜ. ಅವುಗಳನ್ನು ಮುಚ್ಚಲು ನಾವು ಕಾರ್ಯಪ್ರವೃತ್ತರಾಗಿದ್ದೇವೆ. ಎಲ್ಲೆಲ್ಲಿ ರಸ್ತೆಗುಂಡಿಗಳಿವೆ ಎಂದು ಮಾಹಿತಿ ನೀಡಿ ಎಂದು ಸಾರ್ವಜನಿಕರು, ಪೊಲೀಸರಿಗೆ ನಾನೇ ಮನವಿ ಮಾಡಿದ್ದೇನೆ. ಬಿಜೆಪಿ ಸರ್ಕಾರ ದುರಾಡಳಿತದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ನಾವು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದರು. ಬೆಂಗಳೂರಿನ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ಅನುದಾನ ಕೊಟ್ಟಿಲ್ಲ ಎಂಬುದನ್ನು ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ಅರ್ಥಮಾಡಿಕೊಳ್ಳಬೇಕು. ನಾವು ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಪಾವತಿ ಮಾಡುತ್ತಿದ್ದರೂ ಅವರು ಅನುದಾನ…

Read More

ಬೆಂಗಳೂರು: ನಾಡಿನ ಹಿರಿಯ ಸಾಹಿತಿ ಸರಸ್ವತಿ ಸಮ್ಮಾನ್, ಪದ್ಮ ವಿಭೂಷಣ ಡಾ.ಎಸ್.ಎಲ್. ಭೈರಪ್ಪನವರ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಡಾ.ಎಸ್.ಎಲ್.ಭೈರಪ್ಪ ಅವರ ಅಂತಿಮ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೈರಪ್ಪ ಅವರು ಹೆಚ್ಚು ಸಮಯಗಳ ಕಾಲ ಮೈಸೂರಿನಲ್ಲಿಯೇ ಇದ್ದರು. ಮೈಸೂರು ಅವರ ನೆಚ್ಚಿನ ಸ್ಥಳ, ಹೀಗಾಗಿ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸಲಾಗುವುದು ಎಂದರು. ಇದಕ್ಕೂ ಮುನ್ನ ಭೈರಪ್ಪನವರ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಸಿಎಂ ಮಾತುಕತೆ ನಡೆಸಿದರು. ಭೈರಪ್ಪನವರ ಕೆಲವು ಕೃತಿಗಳನ್ನು ನಾನು ಓದಿದ್ದೇನೆ. ನನ್ನ ನೆಚ್ಚಿನ ಬರಹಗಾರರು ಅವರು, ಅವರ ಕಾದಂಬರಿಗಳು ಹಲವು ಭಾಷೆಗಳಿಗೆ ಅನುವಾದಗೊಂಡಿವೆ. ಕನ್ನಡದ ಯಾವ ಸಾಹಿತಿಯ ಯಾವ ಕೃತಿಗಳೂ ಇಷ್ಟು ಭಾಷೆಗೆ ಅನುವಾದಗೊಂಡಿಲ್ಲ ಎಂದರು. ಅವರಿಗೆ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಬಂದಿದ್ದವು. ಜ್ಞಾನಪೀಠ ಪ್ರಶಸ್ತಿಯೂ ಅವರಿಗೆ ಬರಬೇಕಿತ್ತು, ಅದಕ್ಕೆ ಅವರು ಅರ್ಹರಾಗಿದ್ದರು ಎಂದು ಅಭಿಪ್ರಾಯಪಟ್ಟರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ (ಎಐಸಿಟಿಇ) ಹಾಗೂ ಸಿದ್ಧಗಂಗಾ ಪದವಿ ಕಾಲೇಜು ವತಿಯಿಂದ ‘ಕೃತಕ ಬುದ್ಧಿಮತ್ತೆ (Artificial Intelligence) ಕುರಿತು ಸೆ.26 ಹಾಗೂ 27ರಂದು ಎರಡು ದಿನಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಶಿವಕುಮಾರಯ್ಯ ಬುಧವಾರ ತಿಳಿಸಿದರು. ‘ಕೃತಕ ಬುದ್ಧಿಮತ್ತೆ ಹಾಗೂ ಮಷಿನ್ ಲರ್ನಿಂಗ್ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿ, ಮುಂದಿನ ಸವಾಲುಗಳು, ಭವಿಷ್ಯದಲ್ಲಿ ಸಮಾಜಕ್ಕೆ ಯಾವ ರೀತಿಯಲ್ಲಿ ಉಪಯುಕ್ತ ಆಗಬಲ್ಲದು ಎಂಬ ಬಗ್ಗೆ ಸಂಶೋಧಕರು, ಶಿಕ್ಷಣ ತಜ್ಞರು, ಉದ್ಯಮಿಗಳು ಚರ್ಚೆ ನಡೆಸಲಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಐದು ಸಮಾನಾಂತರ ವೇದಿಕೆಗಳಲ್ಲಿ ನಿರ್ದಿಷ್ಟ ಕ್ಷೇತ್ರಗಳ ಬಗ್ಗೆ ಲೇಖನಗಳು ಮಂಡನೆಯಾಗಲಿವೆ. ಗುಣಮಟ್ಟದ ಲೇಖನಗಳನ್ನು ಆಯ್ಕೆ ಮಾಡಿಕೊಂಡು, ಜರ್ನಲ್‌ನಲ್ಲಿ ಪ್ರಕಟಿಸಲಾಗುವುದು. ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ನಿರ್ದೇಶಕ ಎಸ್.ಆರ್.ಮಹದೇವ ಪ್ರಸನ್ನ ಸಮ್ಮೇಳನ ಉದ್ಘಾಟಿಸುವರು. ತಾಂತ್ರಿಕ ಶಿಕ್ಷಣ ಪರಿಷತ್ ಸಲಹೆಗಾರ ಎನ್.ಎಚ್‌.ಸಿದ್ದಲಿಂಗಸ್ವಾಮಿ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು. ಕಾಲೇಜು ಪ್ರಾಂಶುಪಾಲ ನಿರಂಜನಮೂರ್ತಿ, ಸಮ್ಮೇಳನದ ಸಂಚಾಲಕಿ ಪ್ರೊ.ಮಮತ, ಸಹಸಂಚಾಲಕ…

Read More

ತುರುವೇಕೆರೆ: ತಾಲ್ಲೂಕಿನಲ್ಲಿ 15 ಸಾವಿರ ರಾಸುಗಳಿಗೆ ವಿಮೆ ಮಾಡಿಸಲಾಗುತ್ತಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಯ್ಯ ಹೇಳಿದರು. ತಾಲ್ಲೂಕಿನ ಕಸಬಾ ವ್ಯಾಪ್ತಿಯ ಮಾದಿಹಳ್ಳಿಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆವರಣದಲ್ಲಿ ಆ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿರುವ ರಾಸುಗಳಿಗೆ ವಿಮೆ ಮಾಡಿಸುವ ಸಲುವಾಗಿ ರಾಸುಗಳ ಕಿವಿಗಳಿಗೆ ಓಲೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ತಾಲ್ಲೂಕಿನಲ್ಲಿ ಸುಮಾರು 15 ಸಾವಿರ ರಾಸುಗಳಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಮಾಡಿಸಲಾಗುತ್ತಿದೆ. ರಾಸುಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ವಿಮೆ ಮಾಡಿಸಲಾಗುತ್ತಿದೆ. ಈ ಹಿಂದೆ 10 ಸಾವಿರದಿಂದ 60 ಸಾವಿರದ ವರೆಗೆ ವಿಮೆ ಇತ್ತು. ಆದರೆ ಈ ಬಾರಿಯಿಂದ 10 ಸಾವಿರದಿಂದ 70 ಸಾವಿರದವರೆಗೆ ವಿಮೆ ಸೌಲಭ್ಯ ವಿಸ್ತರಿಸಲಾಗಿದೆ ಎಂದರು. ತಾಲ್ಲೂಕಿನಲ್ಲಿ ಈ ವಿಮೆ ಮಾಡಿಸಲು ನಾಲ್ಕು ತಿಂಗಳು ಕಾಲಾವಕಾಶ ವಿದೆ. ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ರಾಸುಗಳಿಗೆ ವಿಮೆ ಮಾಡಿಸಲಾಗುತ್ತಿದೆ. ಇದಕ್ಕಾಗಿ ಈ ಬಾರಿ 30 ಕೋಟಿಯನ್ನು ಬಜೆಟ್‌ನಲ್ಲಿ ಮೀಸಲಿರಿಸಲಾಗಿದೆ ಎಂದು ಹೇಳಿದರು. ಇನ್ನೂರಕ್ಕೂ ಹೆಚ್ಚು…

Read More

ಮಧುಗಿರಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೃತಪಟ್ಟಿರುವ ದಾರುಣ ಘಟನೆ ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯಲ್ಲಿ ನಡೆದಿದೆ. ಕವಾಡಿಗರ ಪಾಳ್ಯ ನಿವಾಸಿ, ಚಿಕ್ಕವಜ್ರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವೀರಭದ್ರಯ್ಯ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಂಗಳವಾರ ಕವಾಡಿಗರ ಪಾಳ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ವೀರಭದ್ರಯ್ಯನವರಿಗೆ ಡಿಕ್ಕಿ ಹೊಡೆದಿದೆ.. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಗುರುವಾರ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವಾಹನದ ಪತ್ತೆಗೆ ಮುಂದಾಗಿದ್ದು, ತನಿಖೆ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಹಕಾರ ಕೃಷಿ ಪತ್ತಿನ ಸಹಕಾರ ಸಂಘ ನಿ.(ವಿ ಎಸ್ ಎಸ್ ಎನ್) ನಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು 50ಕ್ಕೂ ಹೆಚ್ಚು ಮುಗ್ಧ ಬಡ ಜನರಿಗೆ ಸಹಕಾರ ಸಂಘದ ನಿಯಮ ಮೀರಿ ನಕಲಿ ನಿಶ್ಚಿತ ಠೇವಣಿ ಬಾಂಡ್ ವಿತರಿಸಿ ವಂಚನೆ ಮಾಡಿರುವ ಘಟನೆ ನಡೆದಿದೆ.. ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿ ಸುಮಾರು ಅಂದಾಜು 70 ಲಕ್ಷ ರೂಪಾಯಿ ವಂಚನೆ ಆಗಿರುವುದು ಸಾಬೀತಾಗಿದ್ದು. ಸಹಕಾರ ಕ್ಷೇತ್ರಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರ ನಡೆದಿದೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಇದೆ ಮೊದಲ ಬಾರಿಗೆ ಇಂತಹ ದೊಡ್ಡ ಮಟ್ಟದ ಹಣದ ಮಹಾ ವಂಚನೆ ನಡೆದುರುವುದು ಸಹಕಾರ ಕ್ಷೇತ್ರಕ್ಕೆ ಅವಮಾನ ತಂದಿದೆ. ಬೆಂಡೋಣೆ ವಿ ಎಸ್ ಎಸ್ ಎನ್ ವ್ಯಾಪ್ತಿಯಲ್ಲಿನ ಗ್ರಾಮಿಣ ಭಾಗದ ಬಡ ಜನರಿಗೆ ಸಹಕಾರ ಸಂಘದ ನಿಯಮಗಳನ್ನು ಗಾಳಿಗೆ ತೂರಿ ಸುಮಾರು 50ಕ್ಕೂ ಹೆಚ್ಚು ನಕಲಿ…

Read More

ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಇಂದು(ಸೆಪ್ಟೆಂಬರ್ 24) ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಸಿಎಂ ಸಂತಾಪ: ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ.  ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.  ತಮ್ಮ‌ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ.   ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನಲ್ಲಿ ನಿರಂತರವಾಗಿ ಸುರುತ್ತಿರುವ ಮಳೆಯಿಂದಾಗಿ ಸಾಕಷ್ಟು ಹಾನಿ ಸಂಭವಿಸಿದೆ.  ತಾಲೂಕಿನ ಬೋರಾಳ ಗ್ರಾಮದಿಂದ ಮುಂಗನಾಳ ಗ್ರಾಮಕ್ಕೆ ಸಂಪರ್ಕ ಕಲಿಸುವ ರಸ್ತೆ ಮಧ್ಯ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಮತ್ತು ಸೇತುವೆ ಅಕ್ಕ–ಪಕ್ಕದ ಹೊಲಗಳಿಗೆ ನೀರು ನುಗ್ಗಿ ರೈತರ ಬೆಳೆನಾಶ ಆಗಿದೆ. ಜೊತೆಗೆ ಹೊಲದಲ್ಲಿರುವ ಮಣ್ಣು ಹರಿದುಕೊಂಡು ಹೋಗಿದೆ. ಈ ಹಿನ್ನೆಲೆಯಲ್ಲಿ ಬೋರಳ ಗ್ರಾಮಕ್ಕೆ ಕಾಂಗ್ರೆಸ್ ಯುವ ಮುಖಂಡರಾದ ಸುಧಾಕರ್ ಕೊಳ್ಳುರ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ರಸ್ತೆ ಸೇತುವೆ ಸರಿ ಮಾಡುವ ತಿಳಿಸಿದರು. ತಾಲೂಕಿನಲ್ಲಿ ಭಾರೀ ಮಳೆಯಿಂದ ರೈತರ ಹೊಲಗಳಿಗೆ ಹಾನಿಯಾಗಿದೆ. ಆದರೂ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ.  ಸರಿಯಾದ ಸಮೀಕ್ಷೆ ನಡೆಸುತ್ತಿಲ್ಲ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಿವಶಂಕರ ಮಣಿಗಂಪುರೆ, ಉಮಾಕಾಂತ ಸೋನೆ, ಮಾಧವ್ , ಸಮೃದ್ ಪಾಟೀಲ್,…

Read More

ಮಧುಗಿರಿ: ಪಟ್ಟಣದ ಗೊಬ್ಬರ ಅಂಗಡಿ ಮುಂಭಾಗ ಮಂಗಳವಾರ ತಾಲ್ಲೂಕಿನ ರೈತರು ಮುಗಿಬಿದ್ದು ಯೂರಿಯಾ ಖರೀದಿಸಿದರು. ಪಟ್ಟಣದ ಗೊಬ್ಬರದ ಅಂಗಡಿಗಳಿಗೆ ಯೂರಿಯಾ ಪೂರೈಕೆಯಾಗಿರುವ ವಿಷಯ ತಿಳಿದ ರೈತರು ತಮ್ಮ ಆಧಾರ್‌ ಕಾರ್ಡ್‌ಗಳನ್ನು ಕೈಯಲ್ಲಿ ಹಿಡಿದು ಸಾಲಿನಲ್ಲಿ ನಿಂತು ಖರೀದಿಗೆ ಮುಂದಾದರು. ಮಳೆ ಬಂದಾಗ ಯೂರಿಯಾಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಬೇಕಾಗುವಷ್ಟು ಗೊಬ್ಬರ ಕೊಡಬೇಕು. ಆದರೆ ಗೊಬ್ಬರದ ಅಂಗಡಿಗಳಲ್ಲಿ ಯೂರಿಯಾ ಗೊಬ್ಬರವೇ ಸಿಗುತ್ತಿಲ್ಲ. ಇದರಿಂದಾಗಿ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ರೈತ ಕೃಷ್ಣಪ್ಪ ಆಗ್ರಹಿಸಿದರು. ರೈತರಿಗೆ ಅಗತ್ಯವಿರುವ ಬೀಜ ಮತ್ತು ಯೂರಿಯಾ ಗೊಬ್ಬರಕ್ಕೆ ಸಾಕಷ್ಟು ಬೇಡಿಕೆಯಿದ್ದರೂ, ಸರ್ಕಾರ ಪೂರೈಸದೇ ನಿರ್ಲಕ್ಷ್ಯ ವಹಿಸಿರುವುದರಿಂದ ಈ ರೀತಿಯ ಸಮಸ್ಯೆ ಎದುರಾಗಿದೆ. ತಕ್ಷಣ ಸರ್ಕಾರವೇ ಈ ಸಮಸ್ಯೆ ತಿಳಿಗೊಳಿಸಬೇಕು ಎಂದು ರೈತ ರಂಗನಾಥಪ್ಪ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕುಣಿಗಲ್: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ನಾಗರಿಕರು ಗೌರವಿಸಬೇಕು. ಅಂತೆಯೇ ಪೌರಕಾರ್ಮಿಕರು ಪೌರರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕಿದೆ ಎಂದು ಶಾಸಕ ರಂಗನಾಥ್ ತಿಳಿಸಿದರು. ಪುರಸಭೆಯಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರಿಗೆ ನಿವೇಶನ ನೀಡಲು ಮೂರು ಎಕರೆ ಜಮೀನು ಗುರುತಿಸಲಾಗಿದ್ದು, ರಸ್ತೆ ಸಮಸ್ಯೆ ಬಗೆಹರಿಯದ ಕಾರಣ ವಿತರಣೆ ತಡವಾಗಿದ್ದು, ಸಮಸ್ಯೆ ಬಗೆಹರಿಸಲು ತಹಶೀಲ್ದಾರ್ ಅರವರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಒಂದು ತಿಂಗಳಲ್ಲಿ ಸಮಸ್ಯೆ ಬಗೆಹರಿಸಿ ನಿವೇಶನ ಹಂಚಿಕೆ ಕ್ರಮ ಕೈಗೊಳ್ಳಲಾಗುವುದು. ಎಲ್ಲೆಂದರಲ್ಲಿ ಕಸ ಸುರಿಯುವ ಪ್ರವೃತ್ತಿಗೆ ಕಡಿವಾಣ ಹಾಕಬೇಕು. ಜಾಗೃತಿ ಮೂಡಿಸಬೇಕಿದೆ, ದುಶ್ಚಟಗಳಿಂದ ದೂರವಿದ್ದು,, ಕೀಳರಿಮೆ ಬಿಟ್ಟು ಕರ್ತವ್ಯ ನಿರ್ವಹಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಲು ಸಲಹೆ ನೀಡಿದರು. ಆರೋಗ್ಯದ ದೃಷ್ಟಿಯಿಂದ ವಾರಕ್ಕೊಮೆ ಉಪವಾಸ ಮಾಡಿ, ದುಶ್ಚಟಗಳಿಂದ ದೂರವಿರಿ. ಪ್ರತಿವರ್ಷ ಉತ್ತಮ ಪೌರ ಕಾರ್ಮಿಕರಿಗೆ 25 ಸಾವಿರ ಬಹುಮಾನ ಘೋಷಣೆ ಮಾಡಿದರು. ಪುರಸಭೆ ಅಧ್ಯಕ್ಷೆ ಮಂಜುಳಾ ನಾಗರಾಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಅಸ್ಮಾ, ಪುರಸಭೆ ಸದಸ್ಯರು,…

Read More