Subscribe to Updates
Get the latest creative news from FooBar about art, design and business.
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
Author: admin
ಬಿಗ್ ಸ್ಟೋರಿ/ತುಮಕೂರು: ಜಿಲ್ಲೆಯಲ್ಲಿ ಹಣ ಮತ್ತು ಮದ್ಯದ ಆಸೆಗಾಗಿ ನಡೆದಿದ್ದ ಮೂರು ಭೀಕರ ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಅಶೋಕ್ ಕೆ.ವಿ ತಿಳಿಸಿದ್ದಾರೆ. ನಗರದ ಎಸ್ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 7 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರಕರಣ 1: 15 ಲಕ್ಷ ವಿಮೆ ಹಣಕ್ಕಾಗಿ ಸ್ವಂತ ತಮ್ಮನನ್ನೇ ಕೊಂದ ಅಣ್ಣ! ರಸ್ತೆ ಅಪಘಾತದಂತೆ ಬಿಂಬಿಸಿ ಮುಚ್ಚಿಹಾಕಲು ಯತ್ನಿಸಿದ್ದ ಭೀಕರ ಕೊಲೆ ಪ್ರಕರಣವನ್ನು ಪಟ್ಟನಾಯಕನಹಳ್ಳಿ ಪೊಲೀಸರು ಕೇವಲ 12 ಗಂಟೆಗಳಲ್ಲಿ ಭೇದಿಸಿದ್ದಾರೆ. ಜೂನ್ 20ರಂದು ಹೊಸನಹಳ್ಳಿ-ಬಡೇನಹಳ್ಳಿ ಗೇಟ್ ಮಧ್ಯೆ ಬೈಕ್ ಸಮೇತ ರಮೇಶ್ (35) ಎಂಬುವವರ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದು ಅನುಮಾನಾಸ್ಪದ ಸಾವು ಎಂದು ದಾಖಲಾಗಿತ್ತು. ಆದರೆ ತನಿಖೆ ಮತ್ತು ಮರಣೋತ್ತರ ಪರೀಕ್ಷೆಯ ವರದಿಯಿಂದ ಇದು ಕೊಲೆ ಎಂಬುದು ಬೆಳಕಿಗೆ ಬಂದಿದೆ. ಮೃತ ರಮೇಶ್ ಹೆಸರಿನಲ್ಲಿ 15 ಲಕ್ಷ ರೂ. ಎಲ್ಐಸಿ ವಿಮೆ…
ಮಧುಗಿರಿ : ಬಾಲ್ಯಾವಸ್ಥೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಇತರರಿಗೆ ರಕ್ತದಾನ ಮಾಡಲು ರಕ್ತ ಪರೀಕ್ಷೆ ಬಹಳ ಮುಖ್ಯ ಎಂದು ಮಾಜಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯಪಟ್ಟರು. ತಾಲ್ಲೂಕಿನ ಮಿಡಿಗೇಶಿಯ ಕೆಪಿಎಸ್ ಶಾಲೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಮಧುಗಿರಿ, ಶ್ರೀ ರಾಘವೇಂದ್ರ ಆಸ್ಪತ್ರೆ, ಗುರುಶ್ರೀ ಆಸ್ಪತ್ರೆ, ಹಾಗೂ ಶ್ರೀ ಸತ್ಯಸಾಯಿ ಆಸ್ಪತ್ರೆ ಮಧುಗಿರಿ ಇವರ ಸಹಯೋಗದಲ್ಲಿ ಸುತ್ತಲಿನ ಹತ್ತಾರು ಗ್ರಾಮದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ರಕ್ತ ಪರೀಕ್ಷೆ ನಡೆಸಿ ಮಾತನಾಡಿ, ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಶಿಕ್ಷಣದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಇಂದು ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಉಚಿತ ರಕ್ತ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತ ಪರೀಕ್ಷೆ ಉದ್ದೇಶವನ್ನು ನೀವು ತಿಳಿಯಬೇಕಿದ್ದು, ಅಪಘಾತ ಹಾಗೂ ಶಸ್ತ್ರಚಿಕಿತ್ಸೆ ಸಮಯದಲ್ಲಿ ಗಾಯಾಳುಗಳಿಗೆ ನೆರವಾಗಲು ಅಥವಾ ಸ್ವತಃ ನಿಮಗೇ ರಕ್ತದ ನೆರವು ಬೇಕಾದಲ್ಲಿ ರಕ್ತದ ಗುಂಪಿನ ಬಗ್ಗೆ ತಿಳಿದಿರಬೇಕು. ಇದು ಬಹಳ ಮುಖ್ಯ.…
ತುಮಕೂರು : ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 41 ಸರ್ಕಾರಿ ನೌಕರರ ವರ್ಗಾವಣೆ ಮಾಡಲಾಯಿತು. 2025–26 ನೇ ಸಾಲಿನ ಗ್ರೇಡ್–1 ಕಾರ್ಯದರ್ಶಿ 15 ನೌಕರರು, ಗ್ರೇಡ್– 2 ಕಾರ್ಯದರ್ಶಿ 15 ನೌಕರರು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು 11 ಜನ ಸೇರಿ ಒಟ್ಟು 41 ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಜಿಲ್ಲಾ ಪಂಚಾಯಿತಿಯಲ್ಲಿ ಜರುಗಿಸಲಾಯಿತು. ವರ್ಗಾವಣೆ ಪ್ರಕ್ರಿಯೆಯು ಆನ್ಲೈನ್ ಕೌನ್ಸಿಲಿಂಗ್ ಮೂಲಕ ನಡೆಸಲಾಗಿದ್ದು, ನೌಕರರ ಸಮಕ್ಷಮದಲ್ಲಿಯೇ ವರ್ಗಾವಣೆ ಆದೇಶಗಳನ್ನು ವಿತರಿಸಲಾಯಿತು. ಈ ಪ್ರಕ್ರಿಯೆಯಲ್ಲಿ ತುಮಕೂರು ಜಿಲ್ಲಾ ಪಂಚಾಯಿತಿ ಗ್ರೇಡ್ — 2 ಕಾರ್ಯದರ್ಶಿ ಮತ್ತು ದ್ವಿತಿಯ ದರ್ಜೆ ಲೆಕ್ಕ ಸಹಾಯಕರ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿಗಳು ಹಾಗೂ ಉಪ ಕಾರ್ಯದರ್ಶಿ (ಅಭಿವೃದ್ಧಿ) ಸಂಜೀವಪ್ಪ ಕೆ.ಪಿ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿಗಳು ಭಾಗಿಯಾಗಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲುಕುಂಟೆ ಗ್ರಾಮದ ಕೆರೆ ಹಿಂಭಾಗದಲ್ಲಿರುವ ತಮ್ಮ ಜಮೀನಿನಲ್ಲಿನ ಕರಂಟ್ ರೂಮ್ ಬಳಿ ಇದ್ದಾಗ ಯಾರೋ ಅಪರಿಚಿತ ಅಸಾಮಿಗಳು ವೃದ್ದೆ ರತ್ನಮ್ಮ ಕೋಂ ಮುದ್ದಬಸಪ್ಪ (72 ವರ್ಷ) ರವರ ಕೈ–ಕಾಲುಗಳನ್ನು ಕಟ್ಟಿ ಹಾಕಿ, ಬಾಯಿಗೆ ಬಟ್ಟೆಯನ್ನು ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿ. ಮೃತಳ ಮೈ–ಮೇಲಿದ್ದ 55 ಗ್ರಾಂ ಚಿನ್ನದ ಗುಂಡುಗಳು, ಒಂದು ಜೊತೆ ಚಿನ್ನದ ಓಲೆ ಮತ್ತು ಮೂಗುನತ್ತನ್ನು ಕಿತ್ತುಕೊಂಡು ಹೋಗಿದ್ದು, ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ.135/2026 ಕಲಂ.103(1), 309(4) ಬಿ.ಎನ್.ಎಸ್ ರೀತ್ಯಾ ಪ್ರಕರಣ ದಾಖಲಿಸಿಕೊಂಡು ಆರೋಪಿಗಳು ಮತ್ತು ಮಾಲು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಲು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಅವರ ಮಾರ್ಗದರ್ಶನದಲ್ಲಿ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಸಿ.ಗೋಪಾಲ್ ಹಾಗೂ ಪುರುಷೋತ್ತಮ್ ಎಂ.ಎಲ್.ರವರ ನೇತೃತ್ವದಲ್ಲಿ ಮಧುಗಿರಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರುಗಳಾದ ಮಂಜುನಾಥ್ ರವರ ಮಾರ್ಗಸೂಚನೆ ಮೇರೆಗೆ ಕೊರಟಗೆರೆ ವೃತ್ತ ನಿರೀಕ್ಷಕರಾದ ಪುರುಷೋತ್ತಮ್…
ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ. ಕಾಳಹುಂಡಿ ಗ್ರಾಮದ ಜಯಮ್ಮ ಗಾಯಗೊಂಡ ದುರ್ದೈವಿ. ಅಪಘಾತದ ಭೀಕರ ದೃಶ್ಯ ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಗಾಯಾಳು ಜಯಮ್ಮ ಅವರು ತಮ್ಮ ಸಂಬಂಧಿಕರೊಂದಿಗೆ ಬೆಂಗಳೂರಿನಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ಮರಳುತ್ತಿದ್ದರು. ಸರಗೂರು ಬಸ್ ನಿಲ್ದಾಣದಿಂದ ಚಿಕ್ಕಬರಗಿ ಮಾರ್ಗವಾಗಿ ಕಾಳಹುಂಡಿ ಗ್ರಾಮಕ್ಕೆ ತೆರಳುವ ಬಸ್ ಹತ್ತಲು ಮುಂದಾಗಿದ್ದಾರೆ. ಈ ವೇಳೆ ಬಸ್ನಲ್ಲಿ ಸಾರ್ವಜನಿಕರ ದಟ್ಟಣೆ ಹೆಚ್ಚಾಗಿತ್ತು ಎನ್ನಲಾಗಿದೆ. ಪ್ರಯಾಣಿಕರು ಪೂರ್ಣವಾಗಿ ಹತ್ತುವ ಮುನ್ನವೇ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದರಿಂದ, ಜಯಮ್ಮ ಅವರು ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಬಸ್ಸಿನ ಮುಂಭಾಗದ ಟೈರ್ ಜಯಮ್ಮ ಅವರ ಕಾಲಿನ ಮೇಲೆ ಹರಿದಿದ್ದು, ಚರ್ಮ ಹಾಗೂ ಮೂಳೆ ಸಂಪೂರ್ಣವಾಗಿ ಹೊರಬಂದು ಗಂಭೀರ ಸ್ವರೂಪದ ಗಾಯಗಳಾಗಿವೆ. ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯೇ ನೇರ ಕಾರಣ ಎಂದು ಆರೋಪಿಸಿ…
ಸರಗೂರು: ಸ್ಥಳೀಯ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮವು ಅತ್ಯುತ್ತಮ ಶೈಕ್ಷಣಿಕ ಬೆಂಬಲವನ್ನು ನೀಡುತ್ತದೆ ಎಂದು ಅದಿಕರ್ನಾಟಕ ಮಹಾಸಭಾದ ಮಾಜಿ ಅಧ್ಯಕ್ಷರಾದ ಸರಗೂರು ಶಿವಣ್ಣ ಅವರು ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದ 4ನೇ ವಾರ್ಡಿನಲ್ಲಿರುವ ‘ವಿಶ್ವ ಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘ’ದ ಕಚೇರಿಯಲ್ಲಿ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು. “ವಿದ್ಯಾರ್ಥಿ ನಿಲಯದ ಮಕ್ಕಳು ಹಾಗೂ ಸ್ಥಳೀಯ ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಪ್ರಜೆಗಳಾಗಬೇಕು. ಮುಂದೆ ಒಳ್ಳೆಯ ಉದ್ಯೋಗವನ್ನು ಪಡೆದು, ಸಮಾಜದಲ್ಲಿ ಗೌರವಾನ್ವಿತ ಸ್ಥಾನ ಗಳಿಸಬೇಕು. ಪ್ರತಿಯೊಬ್ಬರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟಿರುವ ಆದರ್ಶ ಮಾರ್ಗದಲ್ಲಿ ನಡೆಯಬೇಕು” ಎಂದು ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಇದೇ ವೇಳೆ ಸಂಘದ ಸದಸ್ಯರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಮುಂದೆಯೂ…
ಸಿರಾ: ದೇಶದಲ್ಲಿಯೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಲು ಕರ್ನಾಟಕ ಸರ್ಕಾರವು ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಗೊಳಿಸಲು ಈ ಮನೆ ಮನೆ ಪೊಲೀಸ್ ಪರಿಕಲ್ಪನೆಯು ಅತಿ ಹೆಚ್ಚು ಪರಿಣಾಮಕಾರಿಯಾಗಿದೆ. ಪೊಲೀಸರೆಂದರೆ ಭಯ ಬೇಡ. ಅವರನ್ನು ಸಮುದಾಯದ ಭಾಗವಾಗಿ ಕಾಣಿ ಎಂದು ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಶ್ರೀನಿವಾಸ್ ಡಿಜೆ ಹೇಳಿದರು. ತಾಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ವತಿಯಿಂದ ಚಿಕ್ಕನಹಳ್ಳಿ ಶ್ರೀ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ನಡೆದ ಮನೆ ಮನೆ ಪೊಲೀಸ್ ಸಮೂಹ ಮುಖ್ಯಸ್ಥರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳ್ಳಂಬೆಳ್ಳ ಪಿಎಸ್ ಐ ಭೈರೇಗೌಡ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಸರಗಳ್ಳತನ, ಮನೆಗಳ್ಳತನ ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದು ಇದರ ಬಗ್ಗೆ ಸಮೂಹಗಳ ಮುಖ್ಯಸ್ಥರು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಪೊಲೀಸರು ಮತ್ತು ನಾಗರಿಕ ಜಗತ್ತಿನ ನಡುವಿನ ಅಂತರವನ್ನು ಕಡಿಮೆ ಮಾಡಿ, ಅವರ…
ತುಮಕೂರು: ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇ–ಪೌತಿ, 1 ರಿಂದ 5 ದಾಖಲೆಗಳ ನಿರ್ವಹಣೆ, ಅನುಬಂಧ, ಕಂದಾಯ ಗ್ರಾಮ, ಆರ್ ಟಿ ಸಿ ತಿದ್ದುಪಡಿ, ತಹಶೀಲ್ದಾರ್ ನ್ಯಾಯಾಲಯ ಪ್ರಕರಣಗಳ ಬಾಕಿ, ಮಾಜಿ ಸೈನಿಕರ ಭೂ ಮಂಜೂರು ಪ್ರಸ್ತಾವನೆಗಳು, ಅರಣ್ಯ ಭೂಮಿ ಸಂಬಂಧಿತ ಎಸ್ ಐಟಿ ವರದಿ, ಕೆರೆಗಳ ಮಾಪನ ಹಾಗೂ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಕುರಿತು ಸಮಗ್ರವಾಗಿ ಪರಿಶೀಲಿಸಲಾಯಿತು. ನಿಗದಿತ ಅವಧಿಯೊಳಗೆ ಪ್ರಕರಣಗಳನ್ನು ವಿಲೇವಾರಿ ಮಾಡಿ, ಭೂ ದಾಖಲೆಗಳ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಭೂ ಸುರಕ್ಷಾ ಯೋಜನೆ, ಸಿಸಿಎಂಎಸ್, ಸಾರ್ವಜನಿಕ ಹಾಗೂ ಧಾರ್ಮಿಕ ಸ್ಮಶಾನಗಳಿಗೆ ಜಮೀನು ಮಂಜೂರು, ಒತ್ತುವರಿ ತೆರವು, ಗ್ರಾಮೀಣ ಆಶ್ರಯ ಯೋಜನೆಯಡಿ ಜಮೀನು ಮಂಜೂರು, ರದ್ದತಿ ಹಾಗೂ ಪರ್ಯಾಯ ಜಮೀನು ಪ್ರಸ್ತಾವನೆಗಳ ಕುರಿತು ಚರ್ಚಿಸಲಾಯಿತು. ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆ ಒದಗಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಸ್ತಾವನೆಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಮತ್ತು ಬಾಕಿ ಇರುವ…
ತಿಪಟೂರು: ತಾಲೂಕಿನ ಈರಲಗೆರೆ ಮತ್ತು ಕಿಬ್ಬನಹಳ್ಳಿ ಭಾಗದ ಖಾತೆದಾರರು ಹಾಗೂ ಬಗರ್ ಹುಕುಂ ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮತ್ತು ಬೆಸ್ಕಾಂ (BESCOM) ಇಲಾಖೆಯನ್ನು ಖಾಸಗೀಕರಣಗೊಳಿಸುತ್ತಿರುವುದನ್ನು ವಿರೋಧಿಸಿ ವಿವಿಧ ರೈತಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಸಬಾ ಹೋಬಳಿಯ ಈರಲಗೆರೆ ಗ್ರಾಮದಿಂದ ಉಪ ವಿಭಾಗಾಧಿಕಾರಿಗಳ (AC) ಕಚೇರಿಯವರೆಗೆ ನೂರಾರು ರೈತರು ಕಾಲ್ನಡಿಗೆ ಜಾಥಾ ನಡೆಸಿ, ತಾಲೂಕು ಕಚೇರಿ ಆವರಣದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಅರಣ್ಯ ಇಲಾಖೆಯಿಂದ ಅನಗತ್ಯ ಕಿರುಕುಳ: ದೇವರಾಜು ತಿಮ್ಮಾಪುರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ದೇವರಾಜು ತಿಮ್ಮಾಪುರ ಅವರು, “ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕೆಲವು ಹಳೆಯ ಭಾಗಗಳು, ಈರಲಗೆರೆ, ಕಾಗೇಹಳ್ಳಿ ಕಾವಲು, ಹಾಲ್ಕುರಿಕೆಯ ಅಮೃತ್ ಮಹಲ್ ಕಾವಲು, ರುದ್ರಾಪುರ ಮತ್ತು ಕೊಡಿಗೇಹಳ್ಳಿ ಗ್ರಾಮಗಳ ರೈತರು 30ರಿಂದ 40 ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿದ್ದಾರೆ. ಬ್ಯಾಂಕುಗಳಿಂದ…
ಕುಣಿಗಲ್: ಮನೆಯ ಬೀಗ ಮುರಿದು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿ, ಆ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಖತರ್ನಾಕ್ ಕಳ್ಳ ದಂಪತಿಯನ್ನು ಕುಣಿಗಲ್ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬೆಂಗಳೂರಿನ ರಾಮಚಂದ್ರಪುರ ನಿವಾಸಿಗಳಾದ ಮಂಜುನಾಥ್ ಅಲಿಯಾಸ್ ಕೋಳಿ ಫಯಾಜ್ (40) ಹಾಗೂ ಆತನ ಪತ್ನಿ ಅನಿತಾ (36) ಬಂಧಿತ ಆರೋಪಿಗಳು. ಬಂಧಿತರಿಂದ 30 ಗ್ರಾಂ ಚಿನ್ನದ ಬಳೆಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೊಂಚು ಹಾಕಿ 30 ಲಕ್ಷ ರೂ. ದೋಚಿದ್ದ ಕಳ್ಳ! ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ಕಾಲನಿಯ ನಿವಾಸಿ ರಿಜ್ವಾನ್ ಎಂಬುವವರ ಕುಟುಂಬವು ಮೇ 28ರ ಬಕ್ರೀದ್ ಹಬ್ಬ ಮುಗಿಸಿ, ಮೇ 29ರಂದು ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ತೆರಳಿತ್ತು. ಇದೇ ಸಮಯಕ್ಕಾಗಿ ಹೊಂಚು ಹಾಕುತ್ತಿದ್ದ ಮಂಜುನಾಥ್, ಕಾಲನಿಯಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡಿದ್ದನು. ಮೇ 29ರ ರಾತ್ರಿ 11:30ರ ಸುಮಾರಿಗೆ ರಿಜ್ವಾನ್ ಅವರ ಮನೆಯ…