Author: admin

ಬೀದರ್ : ಮೊಹರಂ ಹಬ್ಬದ ಆಚರಣೆಯ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದಾರೆ. ಜಿಲ್ಲಾದ್ಯಂತ ಮೊಹರಂ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಹಬ್ಬವನ್ನು ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ–21 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ ಜಿಲ್ಲಾದ್ಯಂತ ಜು.6 ರ ಬೆಳಿಗ್ಗೆ 6 ಗಂಟೆಯಿಂದ ಜು.7 ರ ಬೆಳಿಗ್ಗೆ 6 ಗಂಟೆವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಅವರು ಆದೇಶಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಕರಂತೆ ಪಾಠ ಮಾಡಿದ ಅವರು, ಪ್ಲಾಸ್ಟಿಕ್ ನಿಂದ ಆಗುವ ಪರಿಣಾಮಗಳ ಬಗ್ಗೆ ತಿಳಿಸಿ ಹೇಳಿದರು. ಕಾಲೇಜಿನ ತರಗತಿ ಕೊಠಡಿ, ಲ್ಯಾಬ್, ಗ್ರಂಥಾಲಯ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಅಧ್ಯಾಪಕರು ಹಾಗೂ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಅವರ ಅಭಿಪ್ರಾಯ, ಅಗತ್ಯವಿರುವ ಸೌಲಭ್ಯ ಹಾಗೂ ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ಕನಸುಗಳ ಬಗ್ಗೆ ಹಂಚಿಕೊಂಡಾಗ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಪ್ರೇರಣಾದಾಯಕ ಮಾತು ಹೇಳಿ ಹುರಿದುಂಬಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಸೇರಿ…

Read More

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ದೈಹಿಕ ಸಂಪರ್ಕ ಬೆಳೆಸಿ, ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕ ಪರಾರಿಯಾಗಿದ್ದ ಬಿಜೆಪಿ ಮುಖಂಡನ ಪುತ್ರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ.ರಾವ್ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಮೈಸೂರಿನ ಟಿ ನರಸೀಪುರ ಎಂಬಲ್ಲಿ ವಶಕ್ಕೆ ಪಡೆದ ಪೊಲೀಸರು ಪುತ್ತೂರಿಗೆ ಕರೆದುಕೊಂಡು ಬಂದಿದ್ದಾರೆ. ಪುತ್ತೂರಿನ ಪ್ರಭಾವಿ ಮುಖಂಡ, ನಗರಸಭಾ ಸದಸ್ಯ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಎಫ್​ ಐಆರ್ ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ. ಆತನನ್ನು ವಶಕ್ಕೆ ಪಡೆಯಲು ಕಳೆದ ಕೆಲವು ದಿನಗಳಿಂದ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಮಗ ಕೃಷ್ಣ ಜೆ.ರಾವ್ ಹೈಸ್ಕೂಲ್​​ ನಿಂದಲೇ ಪರಿಚಿತರು. ಸದ್ಯ ಎಂಜಿನಿಯರಿಂಗ್ ಓದುತ್ತಿರುವ ಆರೋಪಿ ಕೃಷ್ಣ ಜೆ ರಾವ್ ಮದುವೆಯಾಗುವುದಾಗಿ ಭರವಸೆ ನೀಡಿ ಸಂತ್ರಸ್ತೆಯ ಜೊತೆ ದೈಹಿಕ ಸಂಪರ್ಕ ನಡೆಸಿದ್ದು, ಯುವತಿ ಗರ್ಭಿಣಿಯಾದ ನಂತರ ಮದುವೆಗೆ ನಿರಾಕರಿಸಿದ್ದು, ತಲೆಮರೆಸಿಕೊಂಡಿದ್ದ. ಸದ್ಯ…

Read More

ಬೆಂಗಳೂರು:   ಕುಣಿಗಲ್  ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ. ಎಲ್ಲಾ ತಾಲೂಕಿಗೂ ನೀರು ಒದಗಿಸಲು ಯೋಜನೆ ರೂಪಿಸಲಾಗಿದೆ  ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹೇಮಾವತಿ ಲಿಂಕ್ ಕೆನಾಲ್ ವಿಚಾರವಾಗಿ ಜನಪ್ರತಿನಿಧಿಗಳ ಸಭೆ ಕರೆದು, ಅವರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಹಿಂದೆ ಶಾಸಕರು ತಾಂತ್ರಿಕ ಸಮಿತಿ ರಚಿಸಿ ಎಂದಿದ್ದರು. ತಾಂತ್ರಿಕ ಸಮಿತಿ ವರದಿ ನಂತರ ಕಾಮಗಾರಿಗೆ ಮುಂದಾದರೂ ಮತ್ತೆ ಪ್ರತಿಭಟನೆ ಮಾಡಿದ್ದರು. ಅವರು ಪೈಪ್ ಲೈನ್ ಹಾಕಬೇಡಿ ತೆರೆದ ಕಾಲುವೆಯಲ್ಲಿ ನೀರು ತೆಗೆದುಕೊಂಡು ಹೋಗಿ ಎಂದು ಹೇಳುತ್ತಿದ್ದಾರೆ. ಪೈಪ್ ಲೈನ್ ಮಾಡುವುದು ಸರ್ಕಾರದ ತೀರ್ಮಾನ ಎಂದು ತಿಳಿಸಿದರು. ಕೇಂದ್ರ ಸಚಿವ ಸೋಮಣ್ಣ ಅವರು ಭಾರತೀಯ ವಿಜ್ಞಾನ ಸಂಸ್ಥೆ ತಜ್ಞರಿಂದ ಪರಿಶೀಲನೆಗೆ ಶಿಫಾರಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು. ನಮಗೆ ಕೇವಲ ಕುಣಿಗಲ್ ತಾಲೂಕು ಮಾತ್ರವಲ್ಲ. ಇಡೀ ತುಮಕೂರು ಜಿಲ್ಲೆಗೆ ನೀರು ಒದಗಿಸಬೇಕಿದ್ದು, ಅದಕ್ಕೆ ಪೂರಕವಾಗಿ ನಾನು ಯೋಜನೆ ಸಿದ್ಧಪಡಿಸಿದ್ದೇನೆ. ಜಿಲ್ಲೆಯ…

Read More

ವೈ.ಎನ್.ಹೊಸಕೋಟೆ: ಇಲ್ಲಿನ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಓರಿಗಾಮಿ ಮತ್ತು ಪಾಪಪ್ ಕಲೆಗಳ ಬಗ್ಗೆ ಪರಿಚಯ ಹಾಗೂ ಗಣಿತದ ಮಾದರಿಗಳನ್ನು ತಯಾರಿಸುವ ಬಗ್ಗೆ ಕಾರ್ಯಾಗಾರವನ್ನು ರಾಜ್ಯ ಸಂಪನ್ಮೂಲ ವ್ಯಕ್ತಿ ಮಧು ಶ್ರೀನಿವಾಸನ್ ಇವರ ನಿರ್ದೇಶನದಲ್ಲಿ ನಡೆಸಲಾಯಿತು. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಎನ್.ಆರ್. ಅಶ್ವಥ್ , ಅಧ್ಯಕ್ಷರಾದ ಇ.ವಿ. ಶ್ರೀಧರ್  ಹಾಗೂ ಮುಖ್ಯ ಶಿಕ್ಷಕರಾದ ಬಿ. ತಿಪ್ಪೇಸ್ವಾಮಿ  ವಿವಿಧ ಓರಿಗಾಮಿ ಚಟುವಟಿಕೆ ಮಾಡಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಧು ಶ್ರೀನಿವಾಸನ್ ರವರು ಪಾಪ್ ಅಪ್ ಕಲೆಯ ಮೂಲಕ  ವಿವಿಧ ಸಮತಲಾಕೃತಿಗಳು, ಘನಾಕೃತಿಗಳು, ಬೀಜಗಣಿತದ ಸೂತ್ರಗಳು ಪ್ರಮೇಯಗಳು ಮುಂತಾದವುಗಳನ್ನು ಪ್ರದರ್ಶಿಸಿ ಮಾಹಿತಿ ನೀಡಿದರು. ಶಾಲೆಯ ಸುಮಾರು 120 ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರುಗಳಾದ ಉಮರ್ ಫಾರೂಕ್, ವಿನೋದ್ ಕುಮಾರ್, ಅನಿಲ್ ಕುಮಾರ್  ಹಾಗೂ ಶಿಕ್ಷಕಿಯಾದ ಸೌಜನ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅನಿಲ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಸರಗೂರು:  ಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗಿದ್ದು, ಸಮಾಜದಲ್ಲಿನ ವಿಚಾರಗಳನ್ನು ಅರಿಯದೇ ಜೀವನ ನಿರ್ವಹಣೆ ಕಷ್ಟಸಾಧ್ಯವಾಗಿ ವಿಚಲಿತರಾಗುತ್ತಿದ್ದಾರೆ. ಆದ್ದರಿಂದ ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿಗಳನ್ನು ರೂಢಿಸಿಕೊಳ್ಳಬೇಕು ಎಂದು  ಸರಗೂರು ಆರಕ್ಷಕ ಠಾಣೆ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್  ಸಲಹೆ ನೀಡಿದರು. ಪಟ್ಟಣದ ಜೆಎಸ್ ಎಸ್ ಶಿವಾನುಭವ ಮಂಗಳ ಮಂಟಪದಲ್ಲಿ ಶುಕ್ರವಾರ ದಂದು  ಜೆಎಸ್ ಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ವತಿಯಿಂದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಗಣ್ಯರು ಕಾರ್ಯಕ್ರಮದ ಜ್ಯೋತಿ ಬೆಳಗಿಸುವ ಮೂಲಕ ಹಾಗೂ ಶ್ರೀಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ವಿದ್ಯಾರ್ಥಿನಿಯರು ತಮಗೆ ಎದುರಾಗುವ ತೊಂದರೆಗಳಿಂದ ಹೇಗೆ ರಕ್ಷಣೆಯನ್ನು ಪಡೆದುಕೊಳ್ಳಬೇಕು. ವಿದ್ಯಾರ್ಥಿನಿಯರು ಸಾಮಾಜಿಕ ಮಾಧ್ಯಮಗಳನ್ನು ಬಳಸಿದಾಗ ಉಂಟಾಗುವ ತೊಂದರೆಗಳ ಬಗ್ಗೆ ತಿಳಿಸಿದ ಅವರು,  ವಿದ್ಯಾರ್ಥಿನಿಯರ ಸುರಕ್ಷತೆಗೆ ಪೊಲೀಸ್ ಇಲಾಖೆ ಯಾವಾಗಲೂ ಸಿದ್ಧವಿದೆ ಎಂದು ತಿಳಿಸಿದರು. ಸರಗೂರು ಸಮುದಾಯದ ಆರೋಗ್ಯ ಕೇಂದ್ರ ಸ್ತ್ರೀರೋಗ ತಜ್ಞರು  ಭಾಗ್ಯಲಕ್ಷ್ಮಿ ಬಿ.…

Read More

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಆಡಳಿತಾರೂಢ ಮಿತ್ರ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಿದರೆ, ನಾನು ಐದೇ ನಿಮಿಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ(H.D.Kumaraswamy) ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಹಳೆಯ ಮಾತಿಗೆ ನಾನು ಈಗಲೂ ಬದ್ಧ. ಕಾಂಗ್ರೆಸ್ ಪಕ್ಷದವರಿಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ಶಕ್ತಿ ಇಲ್ಲ. ಧಿಕ್ಕರಿಸುವ ಶಕ್ತಿಯೂ ಇಲ್ಲ ಎಂದು ಅವರು ಟೀಕಿಸಿದರು. ತಮಿಳುನಾಡು ಸರ್ಕಾರವನ್ನು ಧಿಕ್ಕರಿಸಿ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಮುಂದಾದರೆ ಅದು ಸಾಧ್ಯವಾಗುತ್ತದೆ. ಕಾಂಗ್ರೆಸ್ ಕೈಯಲ್ಲಿ ಅದು ಸಾಧ್ಯವಿಲ್ಲ ಎಂದರು. ತಮಿಳುನಾಡು ಸರ್ಕಾರವನ್ನು ಒಪ್ಪಿಸದೆ ಮೇಕೆದಾಟು ಯೋಜನೆಯ ಕಚೇರಿ ತೆರೆದರೆ ಏನು ಪ್ರಯೋಜನ? ಮೇಕೆದಾಟು ಯೋಜನೆ ಜಾರಿಗೊಳಿಸುತ್ತೇವೆ ಎಂದು ಹೇಳಿದವರು ಕಾಂಗ್ರೆಸ್​​ನವರೇ ವಿನಹ ನಾನಲ್ಲ. ಯೋಜನೆ ಮಾಡುತ್ತೇವೆ ಎಂದು ಜನರಿಗೆ ಭರವಸೆ ನೀಡಿದವರು ಮಾಡಬೇಕು ತಾನೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಲಕ್ನೋ: ಉತ್ತರ ಪ್ರದೇಶದ  ಸಂಭಾಲ್‌ ಜಿಲ್ಲೆಯಲ್ಲಿ ಮದುವೆ ದಿಬ್ಬಣದ ಕಾರು ಭೀಕರ ಅಪಘಾತಕ್ಕೀಡಾಗಿ ವರ ಸಹಿತ 8 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಬೊಲೆರೊ ಎಸ್‌ ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವರ ಸೂರಜ್ (24), ವರನ ಅತ್ತಿಗೆ ಆಶಾ (26), ಆಶಾ ಅವರ ಮಗಳು ಐಶ್ವರ್ಯ (2), ಮನೋಜ್ ಅವರ ಮಗ ವಿಷ್ಣು (6), ಮತ್ತು ವರನ ಚಿಕ್ಕಮ್ಮ ಸೇರಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ. ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ…

Read More

ಮಂಗಳೂರು: ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿರುವ ಘಟನೆ  ನಡೆದಿದೆ. ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದೆ. ಜೊತೆಗೆ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇರುವುದಾಗಿ ಚರ್ಚೆಗಳು ನಡೆಯುತ್ತಿದೆ. ಘಟನೆ ಸಂಬಂಧ ಮೂಡಬಿದಿರೆ ಠಾಣೆಯಲ್ಲಿ ಎಫ್ ​​ಐಆರ್​ ದಾಖಲಾಗಿದೆ. ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಸಮಿತ್ ರಾಜ್ ಧರೆಗುಡ್ಡೆರನ್ನು ಮೂಡಬಿದಿರೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಅವರ ಮೊಬೈಲ್ ವಶಕ್ಕೆ ಪಡೆಯಲಾಗಿತ್ತು. ಪೊಲೀಸರು ದತ್ತಾಂಶಗಳನ್ನು ಎಕ್ಸ್‌ ಟ್ರಾಕ್ಟ್ ಮಾಡುತ್ತಿದ್ದ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ವಿಡಿಯೋಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇನ್ಸ್‌ ಪೆಕ್ಟರ್ ಸಂದೇಶ್ ​ರಿಂದ ದೂರು ನೀಡಲಾಗಿದ್ದು,  ಮೂಡಬಿದಿರೆ ಠಾಣೆಯಲ್ಲಿಈ ಸಂಬಂಧ ಪ್ರತ್ಯೇಕ ಎಫ್ ಐಆರ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದು, ಬಳಿಕ ಶುಕ್ರವಾರ ಬೆಳಿಗ್ಗೆ ಆಕೆಯನ್ನು  ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ನದಿಗೆ ಹಾರಿದ್ದಳು. ಬಳಿಕ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ… ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.…

Read More