Subscribe to Updates
Get the latest creative news from FooBar about art, design and business.
- ಇಪಿಎಫ್ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
- ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
- ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
- ಸರಗೂರು: 9ನೇ ವಾರ್ಡ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
- ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
Author: admin
ಕೊಪ್ಪಳ: ಮುಸ್ಲಿಮ್ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭ ಮಾಡುವುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೊಪ್ಪಳ ನಗರದ ಕುರುಬರ ಓಣಿಯಲ್ಲಿನ ಕೊಲೆಯಾದ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಮಸೀದಿ ಮುಂದೆಯೇ ಗವಿಸಿದ್ದಪ್ಪ ನಾಯಕ ಕೊಲೆಯಾಗಿದೆ. ಕೊಲೆ ಮಾಡುವಾಗ ತಡೆಯುವ ಕೆಲಸ ಅಲ್ಲಿದ್ದವರು ಮಾಡಿಲ್ಲ. ಕೊಲೆ ಮಾಡಿದ ಆರೋಪಿ ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ಈಗ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಮಚ್ಚು ಹಿಡಿದು ಓಡಾಡುವವರಿಗೆ ಸರ್ಕಾರ ಬೆಂಬಲ ನೀಡುತ್ತದೆ ಅಂತ ಆರೋಪಿಸಿದರು. ಲವ್ ಜಿಹಾದ್ ಮಾಡಿದಾಗ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುತ್ತದೆ. ಸರ್ಕಾರ ಮುಸ್ಲಿಂರಿಗೆ ಮಾತ್ರ ರಕ್ಷಣೆ ನೀಡುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಕೋಲಾರ: ಅಪ್ರಾಪ್ತ ವಯಸ್ಸಿನ ಬಾಲಕನ ಅತ್ಯಾಚಾರದಿಂದ 18 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಘಟನೆ ಕೆಜಿಎಫ್ ಉರಿಗಾಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ 8 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಯುವತಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಉರಿಗಾಂ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಯುವತಿ 17 ವರ್ಷದವಳಾಗಿನಿಂದಲೇ ಬಾಲಕ ಅತ್ಯಾಚಾರ ಎಸಗುತ್ತಾ ಬಂದಿದ್ದಾನೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಬೆಂಗಳೂರಿನ ಬೊಮ್ಮಸಂದ್ರದ ಸೂರ್ಯ ನಗರದಲ್ಲಿ 80,000 ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ ಹೊಂದಿರುವ ವಿಶ್ವ ದರ್ಜೆಯ ಕ್ರೀಡಾ ಸಂಕೀರ್ಣವನ್ನು ನಿರ್ಮಿಸುವ ಕರ್ನಾಟಕ ವಸತಿ ಮಂಡಳಿ(ಕೆಎಚ್‌ಬಿ)ಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಅನುಮೋದನೆ ನೀಡಿದ್ದಾರೆ. ಬೊಮ್ಮಸಂದ್ರದಲ್ಲಿ ತಲೆ ಎತ್ತಲಿರುವ ಈ ಸ್ಟೇಡಿಯಂ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ನರೇಂದ್ರ ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರಿಗೆ ಸ್ಥಳಾವಕಾಶ ಕಲ್ಪಿಸುತ್ತದೆ. ಒಟ್ಟು 1,650 ಕೋಟಿ ರೂಪಾಯಿ ಯೋಜನೆಗೆ ರಾಜ್ಯ ಸರ್ಕಾರದ ಆರ್ಥಿಕ ಬೆಂಬಲವಿಲ್ಲದೆ ಕೆಎಚ್‌ಬಿ ಸಂಪೂರ್ಣವಾಗಿ ಹಣವನ್ನು ನೀಡುತ್ತದೆ. ಪ್ರಸ್ತಾವಿತ ಕ್ರೀಡಾ ಸಂಕೀರ್ಣ 100 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು, ಇದು ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಿಗೆ ಅವಕಾಶ ಕಲ್ಪಿಸುತ್ತದೆ. ಕ್ರಿಕೆಟ್ ಕ್ರೀಡಾಂಗಣದ ಜೊತೆಗೆ, ಇದು ಎಂಟು ಒಳಾಂಗಣ ಮತ್ತು ಎಂಟು ಹೊರಾಂಗಣ ಕ್ರೀಡೆಗಳು, ಅತ್ಯಾಧುನಿಕ ಜಿಮ್, ತರಬೇತಿ ಕೇಂದ್ರ, ಈಜುಕೊಳ, ಅತಿಥಿ ಗೃಹಗಳು, ಹಾಸ್ಟೆಲ್ ಗಳು, ತ್ರೀ–ಸ್ಟಾರ್ ಮತ್ತು ಫೈವ್–ಸ್ಟಾರ್ ಹೋಟೆಲ್ ಗಳು ಹಾಗೂ…
ಹಾಸನ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನೊಂದ ಯುವತಿಯ ಸಹೋದರ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವೀಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ವೀಡಿಯೋ ನೋಡಿದಾಗ ತನ್ನ ಅಕ್ಕನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ವೀಡಿಯೋ ಕಳುಹಿಸಿ ನಂತರ ದುರುಳರು ಡಿಲೀಟ್ ಮಾಡಿದ್ದರು. ಆದರೆ ಅಷ್ಟುಹೊತ್ತಿಗಾಗಲೇ ಸಂತ್ರಸ್ತೆ ಸಹೋದರ ವೀಡಿಯೋವನ್ನು ತನ್ನ ಸ್ನೇಹಿತನ ಮೊಬೈಲ್ ಗೆ ಫಾರ್ವರ್ಡ್ ಮಾಡಿದ್ದ. ಘಟನೆ ಸಂಬಂಧ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷ, ಉಮ್ರಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲು ಹೋಗುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ಬೆಂಗಳೂರಿನ ಲಗ್ಗೆರೆ ಬಳಿ ನಡೆದಿದೆ. ಗೀತಾ (23) ಗೀತಾ ಎರಡೂವರೆ ತಿಂಗಳ ಹಿಂದಷ್ಟೇ ಸುನೀಲ್ ಎಂಬವರನ್ನು ವಿವಾಹವಾಗಿದ್ದರು. ಶುಕ್ರವಾರ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಅರಿಶಿಣ ಕುಂಕುಮ ಪಡೆಯಲೆಂದು ನಂದಿನಿ ಲೇಔಟ್‌ನಲ್ಲಿರುವ ನಾದಿನಿ ಮನೆಗೆ ದಂಪತಿ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಲಗ್ಗೆರೆ ಬ್ರಿಡ್ಜ್ ಬಳಿ ಬೈಕ್ ಗೆ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗೀತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಡ ಸುನೀಲ್ ಗೆ ಗಾಯಗಳಾಗಿವೆ. ಘಟನೆ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಅಪಘಾತ ಸಂಬಂಧ ಲಾರಿ ಚಾಲಕ ಸುರೇಶ್ ನನ್ನು ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: 3.15 ಕೋಟಿ ರೂ. ಹಣ ಪಡೆದು ವಂಚನೆ ಮಾಡಿರುವುದಾಗಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಪಡೆದಿರುವುದಾಗಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ರಾಘವೇಂದ್ರ ಹೆಗ್ಗಡೆ ಎಂಬುವವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಧ್ರುವ ಸರ್ಜಾ ಹಾಗೂ ರಾಘವೇಂದ್ರ ಹೆಗ್ಡೆ 2016ರಿಂದ 2018ರವರೆಗೆ ಜೊತೆಗೆ ಕೆಲಸ ಮಾಡಿದ್ದರು. ಧ್ರುವ ಸರ್ಜಾ ಅವರೇ ರಾಘವೇಂದ್ರ ಹೆಗ್ಡೆ ಭೇಟಿ ಮಾಡಿ ಸಿನಿಮಾ ಮಾಡುವುದಾಗಿ ಹೇಳಿದ್ದರು. ಸೋಲ್ಜರ್ ಎಂಬ ಸಿನಿಮಾ ಮಾಡುವುದಾಗಿ ಧ್ರುವ ಸರ್ಜಾ ಸ್ಕ್ರಿಪ್ಟ್ ಮಾಡಿದ್ದರು. ಆದರೆ ಧ್ರುವ ಸರ್ಜಾ ಒಪ್ಪಂದಕ್ಕೆ ಸಹಿ ಹಾಕುವ ಮೊದಲೇ 3.15 ಕೋಟಿ ರೂ. ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ. ರಾಘವೇಂದ್ರ ಹೆಗ್ಡೆ ಹೆಚ್ಚಿನ ಬಡ್ಡಿಗೆ 3.15 ಕೋಟಿ ಸಾಲ ಪಡೆದು, ಧ್ರುವ ಒಡೆತನದ…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣದಲ್ಲಿ ಶುಕ್ರವಾರವು ಸಹ ಮತ್ತೆ ಕೊರಟಗೆರೆ ತಾಲ್ಲೂಕಿನ ಸುತ್ತ–ಮುತ್ತಲಿನ 12 ಸ್ಥಳಗಳಲ್ಲಿ ಮಹಿಳೆಯ ಶವದ ತುಂಡಿನ ಪಾಕೇಟ್ ಜೊತೆಯಲ್ಲಿ ಕಬ್ಬಿಣದ ಮೇಟಲ್ ಪೀಸ್‌ಗಳು ಸಹ ಪೊಲೀಸರಿಗೆ ಸ್ಥಳ ಪರಿಶೀಲನೆ ವೇಳೆ ದೊರೆತಿವೆ. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಸೇರಿದಂತೆ 8 ಕಡೆ ಮಹಿಳೆಯ ಕೈಗಳು ಮತ್ತು ದೇಹದ ಭಾಗಗಳು ಸಿಕ್ಕಿದ್ದವು. ಮತ್ತೆ ಶುಕ್ರವಾರ ರಾತ್ರಿ ಸಿದ್ದರಬೆಟ್ಟ ಮತ್ತು ಮಲ್ಲೇಕಾವು ಸುತ್ತಮುತ್ತ 10 ಕಡೆಯ ವಿವಿಧ ಸ್ಥಳಗಳಲ್ಲಿ ಕಪ್ಪು ಕವರ್ ನ ಪಾಕೇಟ್ ನಲ್ಲಿ ಮಹಿಳೆಯ ಕಾಲು, ದೇಹ ಸೇರಿದಂತೆ ತಲೆಯು ಸಹ ಪತ್ತೆಯಾಗಿದೆ. ಕೊರಟಗೆರೆಯ ಸಿದ್ದರಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಕಾಲುಗಳು ಪತ್ತೆಯಾಗಿದೆ, ಮರೇನಾಯಕನಹಳ್ಳಿ ಗ್ರಾಮದಲ್ಲಿ ಮಹಿಳೆಯ ಮಾಂಸದ ತುಂಡಿನ ಪ್ಯಾಕೆಟ್ ನಲ್ಲಿ ಹಸಿರು ಬಣ್ಣದ ಬಟ್ಟೆ ಪತ್ತೆ, ಗಟ್ಟಿತಿಮ್ಮನಹಳ್ಳಿ, ಮಲ್ಲೇಕಾವು, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಇಂದು ೧೨…
ಪಾವಗಡ: ತಾಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೋಟಗುಡ್ಡ ಕಡಪಲ ಕೆರೆ ಅರೆಕ್ಯಾತನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಜಾತ್ಯತೀತ ಜನತಾದಳ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಆರ್.ಸಿ.ಅಂಜನಪ್ಪ, ರಾಜ್ಯ ಕಮಿಟಿ ಸದಸ್ಯರಾದ ಎನ್.ತಿಮ್ಮಾರೆಡ್ಡಿ, ತಾಲೂಕ್ ಜೆಡಿಎಸ್ ಅಧ್ಯಕ್ಷರಾದ ಎನ್.ಎ.ಈರಣ್ಣ, ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಕೋಟುಗುಡ್ಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅಂಜಯ್ಯ, ಗೌರವ ಅಧ್ಯಕ್ಷರಾದ ರಾಜಶೇಖರಪ್ಪ, ಹೋಬಳಿ ಘಟಕದ ಅಧ್ಯಕ್ಷರಾದ ಹನುಮಂತ ರಾಯ, ಹೊಟ್ಟೆ ಬೊಮ್ಮನಹಳ್ಳಿ ಸರ್ವೇಶ್ವರ ರೆಡ್ಡಿ, ನಾಗರೆಡ್ಡಿ, ಉದಯ್ ಕುಮಾರ್, ಈರಣ್ಣ, ಮಂಜುನಾಥ ಇನ್ನಿತರೆ ಎಲ್ಲಾ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮೊಬೈಲ್ ಮುಖಾಂತರ ಆನ್ಲೈನ್ ಸದಸ್ಯತ್ವ ಮತ್ತು ಪುಸ್ತಕದಲ್ಲಿ ಸದಸ್ಯರ ಆಯ್ಕೆಯನ್ನು ಮಾಡಿ ದಾಖಲು ಮಾಡಲಾಯಿತು. ಎಲ್ಲಾ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆತಿದ್ದು ನೂರಾರು ಜನ ಕಾರ್ಯಕರ್ತರು ಮುಖಂಡರು ಪ್ರತಿ ಗ್ರಾಮದಲ್ಲಿ ಭಾಗವಹಿಸಿದ್ದರು. ರೈತ ಘಟಕದ ಗಂಗಾಧರ ನಾಯ್ಡು…
ಸರಗೂರು: ತಾಲೂಕಿನ ಹುಸ್ಕೂರು ಹಾಡಿಗೆ ಬಸ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯ ನೇತೃತ್ವದಲ್ಲಿ ಗುರುವಾರದಂದು ಪ್ರತಿಭಟನೆಯನ್ನು ಮಾಡಲಾಯಿತು. ಸಮಿತಿಯ ಸಂಚಾಲಕ ಸುನಿಲ್ ಟಿ.ಆರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸಂಪೂರ್ಣವಾಗಿ ಅರಣ್ಯ ಒಳಗೆ ಇರುವ ಈ ಹಾಡಿಗೆ ಕನಿಷ್ಠಪಕ್ಷ ಬೆಳಿಗ್ಗೆ 8:30ಕ್ಕೆ ಹಾಡಿಯಿಂದ ಸರಗೂರಿಗೆ ಹೊರಡುವಂತೆ ಹಾಗೂ ಸಂಜೆ 4 ಗಂಟೆಗೆ ಸರಗೂರಿನಿಂದ ಹುಸ್ಕೂರು ಹಾಡಿಗೆ ಬರುವಂತೆ ಬಸ್ ವ್ಯವಸ್ಥೆ ಮಾಡಬೇಕು. ಈಗಾಗಲೇ ದಡದಹಳ್ಳಿ ಮಾರ್ಗವಾಗಿ ಹೋಗುವ ಬಸ್ ಇಲ್ಲಿಗೆ ಬಂದು ಹೋಗುವಂತೆ ಮಾಡಬೇಕು. ಈ ವಿಚಾರವಾಗಿ ಐಟಿಡಿಪಿ ಇಲಾಖೆ,ಸಾರಿಗೆ ಇಲಾಖೆಯ ನಿರ್ಲಕ್ಷ್ಯ ಕಾರಣವಾಗಿದೆ. ಇದರಿಂದ ಬಡ ಆದಿವಾಸಿ ಜನರು ಹಾಗೂ ಅವರ ಮಕ್ಕಳು ಎಲ್ಲಾ ನಾಗರಿಕ ಸೌಲಭ್ಯ ಮತ್ತು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮುಂದಿನ ಹಂತದಲ್ಲಿ ಹುಸ್ಕೂರು ಹಾಡಿ ಜನರು ಸೇರಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗುವುದು. ಹಾಡಿಯ ಮುಖಂಡ ತಿರುಪತಿ ಮಾತನಾಡಿ, ಪ್ರತಿದಿನ ಆನೆ ಭಯದಿಂದ ನಡೆದುಕೊಂಡು…
ಕೊರಟಗೆರೆ: ವರಮಹಾಲಕ್ಷ್ಮಿ ಹಬ್ಬರ ಹಿನ್ನೆಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಭಕ್ತಾದಿಗಳ ಸಾಗರವೇ ಹರಿದು ಬಂದಿದೆ. ಬೆಳಗ್ಗೆ 6:00 ಯಿಂದಲೇ ಪಂಚಾಮೃತ ಅಭಿಷೇಕ ಕುಂಕುಮ ಅಭಿಷೇಕ ಹೂವಿನ ಅಭಿಷೇಕ ಸೇರದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು, ವಿವಿಧ ವಿಶೇಷ ಹೂಗಳಿಂದ ಗೊರವನಹಳ್ಳಿ ಮಹಾಲಕ್ಷ್ಮಿ ಮಂಟಪ ಹಾಗೂ ದೇವಿಯ ಅಲಂಕಾರ ಮಾಡಲಾಗಿತ್ತು. ದರ್ಶನಕ್ಕೆ ಬಂದ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಭಕ್ತಿಯಿಂದ ಬೇಡಿಕೊಂಡು ತಾಯಿ ಅಲಂಕಾರವನ್ನ ಕಣ್ತುಂಬಿಕೊಂಡರು. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರ ದಂಡು ಹರಿದು ಬಂತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ, ಹೋಮ–ಹವನ, ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆಗಳು ಜರುಗಿದವು. ಭಕ್ತರ ದರ್ಶನಕ್ಕೆ ಶ್ರೀಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ರಾಜ್ಯದ ನಾನಾ ಭಾಗದಿಂದ ಆಗಮಿಸಿ ಶ್ರೀಗಳು, ಗಣ್ಯರು, ಅಧಿಕಾರಿ ವರ್ಗ…