Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಮಂಡ್ಯ: ಒಂದೇ ಫ್ಯಾನ್ ಗೆ ನೇಣು ಬಿಗಿದುಕೊಂಡು ತಾಯಿ–ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದ ನೆಹರುನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ರಶ್ಮಿ (28) ಮತ್ತು ಆಕೆಯ 9 ವರ್ಷದ ಪುತ್ರಿ ಎಂದು ಗುರುತಿಸಲಾಗಿದೆ. ಪತಿಯಿಂದ ದೂರವಾಗಿದ್ದ ರಶ್ಮಿ ಮಂಡ್ಯದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಒಂಟಿ ಜೀವನದಿಂದ ಹತಾಶರಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ತಾಯಿ ಮತ್ತು ಮಗಳು ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಘಟನಾ ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮಂಡ್ಯ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ಸಾಲ ಬಾಧೆಗೆ ಹೆದರಿ ಮನನೊಂದ ರೈತಯೊಬ್ಬರು ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ದಂದು ಬೆಳಕಿಗೆ ಬಂದಿದೆ. ತಾಲೂಕಿನ ಮುಳ್ಳೂರು ಗ್ರಾಮ ನಿವಾಸಿ ಚನ್ನನಾಯಕ ಎಂಬುವರು ಮಗನಾದ ಗೋವಿಂದನಾಯಕ (50) ವರ್ಷದ ಮೃತಪಟ್ಟಿರುವ ವ್ಯಕ್ತಿ. ಗೋವಿಂದನಾಯಕ ಎಂಬುವನು ಸುಮಾರು 25 ವರ್ಷಗಳ ಹಿಂದೆ ಹೆಗ್ಗಡಪುರ ಗ್ರಾಮದಲ್ಲಿ ವಾಸವಾಗಿದ್ದು.ಇವನ್ನು ಕೆಲಸ ಮುಗಿಸಿಕೊಂಡು ಜಾನುವಾರುಗಳಿಗೆ 8 ಗಂಟೆ ಸಮಯಕ್ಕೆ ಹುಲ್ಲನ್ನು ತರುತ್ತಾನೆ ಎಂದು ಹೇಳಿ ಹೊರಗೆ ಹೋದವರು 11 ಗಂಟೆಯಾದರೂ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು. ಆದರೆ ನೆರವಾಗಿ ತಾಲೂಕಿನ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹೊಳೆಯ ಅಲ್ಲಿಂದ ತನ್ನ ಸ್ಕೂಟರ್ ನಲ್ಲಿ ತುಂಬಸೋಗೆ ಗ್ರಾಮದಲ್ಲಿರುವ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ. ಕಬಿನಿ ಹೊಳೆಯ ಸೇತುವೆಯಿಂದ ಹೊಳೆಗೆ ಹಾರಿ ಕಬಿನಿ ಜಲಾಶಯದ ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೊಳೆಯ ದಡದಲ್ಲಿ…
ನವದೆಹಲಿ: ಹೃದಯಾಘಾತದ ಸಾವು ಮತ್ತು ಕೊರೋನಾ ಲಸಿಕೆಗೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಹಲವು ವೈಜ್ಞಾನಿಕ ಅಧ್ಯಯನಗಳು ಸಾಬೀತು ಮಾಡಿವೆ ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಕೋವಿಡ್ ಲಸಿಕೆಯನ್ನು ಆತುರದ ಅನುಮೋದನೆಯೊಂದಿಗೆ ಸಾರ್ವಜನಿಕರಿಗೆ ವಿತರಣೆ ಮಾಡಿದ್ದು ಕೂಡ ಈ ಸಾವುಗಳಿಗೆ ಕಾರಣವಾಗಿರಬಹುದು ಎಂದು ಸಿದ್ದರಾಮಯ್ಯ ಮಂಗಳವಾರ ಹೇಳಿದ್ದರು. ಸಿಎಂ ಹೇಳಿಕೆ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಹಠಾತ್ ಆಗಿ ಸಂಭವಿಸುತ್ತಿರುವ ಸಾವುಗಳ ಬಗ್ಗೆ ದೇಶದ ಹಲವಾರು ಆರೋಗ್ಯ ಸಂಸ್ಥೆಗಳು ತನಿಖೆ ಮಾಡಿವೆ. ಇದರಲ್ಲಿ ಅಂತಹ ಯಾವುದೇ ಅಂಶವಿಲ್ಲ ಎಂದು ಹೇಳಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ನಡೆಸಿದ ಅಧ್ಯಯನಗಳಲ್ಲಿ ಕೋವಿಡ್–19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸಿವೆ. ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ ಉಂಟಾಗಿದ್ದು ಅಪರೂಪ. ಹೀಗಾಗಿ, ಹೃದಯಾಘಾತಕ್ಕೂ– ಲಸಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸಾರ್ವಜನಿಕ ಮತ್ತು ಪ.ಜಾತಿ, ಪ.ಪಂಗಡ ಸ್ಮಶಾನಕ್ಕೆ ಸರ್ಕಾರ ಭೂಮಿ ಮಂಜೂರು ಮಾಡಿದ್ದರೂ, ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಸ್ಮಶಾನ ಅಭಿವೃದ್ಧಿಯಾಗದೆ ಅಂತ್ಯ ಸಂಸ್ಕಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಸರ್ವೇ.ನಂ.43ರಲ್ಲಿ ಪ.ಜಾತಿ ಮತ್ತು ಪ.ಪಂಗಡ ಸ್ಮಶಾನಕ್ಕೆ 10 ಗುಂಟೆ, ಸಾರ್ವಜನಿಕ ಸ್ಮಶಾನಕ್ಕೆ 10 ಗುಂಟೆ ಜಮೀನು 2018ರಲ್ಲಿ ಮಂಜೂರು ಮಾಡಿದೆ. 2023–24ರಲ್ಲಿ ಗ್ರಾ.ಪಂಚಾಯ್ತಿಗೆ ಕಂದಾಯ ಇಲಾಖೆಯಿಂದ ಹಸ್ತಾಂತರವಾಗಿದೆ. ಆದರೂ ಈವರೆಗೂ ಗ್ರಾ.ಪಂ. ಅಧಿಕಾರಿಗಳು ಸಾರ್ವಜನಿಕ ಸ್ಮಶಾನವನ್ನು ಅಭಿವೃದ್ಧಿ ಮೀನಾಮೇಷ ಎಣಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದ್ದರೂ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲು ಗ್ರಾ.ಪಂ. ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೃತ ದೇಹವಿಟ್ಟು ಪ್ರತಿಭಟನೆ: ಬೈಚಾಪುರ ಗ್ರಾಮದಲ್ಲಿ ಕಳೆದ 2018ರಲ್ಲಿ ದಲಿತ ಕುಟುಂಬ ಒಂದರಲ್ಲಿ ಸಾವಿನ ಘಟನೆ ನಡೆದಾಗ ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ಮೃತದೇಹವನ್ನು ಗ್ರಾ.ಪಂ. ಎದುರು ಇಟ್ಟು ಪ್ರತಿಭಟನೆ ನಡೆಸಿದರು.…
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಗಾದಿಗೆ ಪೈಪೋಟಿ ಹೆಚ್ಚಾಗಿದ್ದು, ಕುದುರೆ ವ್ಯಾಪಾರ ಜೋರಾಗಲಿದೆ ಎಂದು ವಿಶ್ಲೇಷಿಸಿದರು. ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್ ಅವರು ಡಿಕೆಶಿಯವರಿಗೆ 100 ಜನ ಶಾಸಕರ ಬೆಂಬಲ ಇದೆ; ಅವರು ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆಯವರು ಸೇರಿ ಬೇರೆ ಬೇರೆ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿಗಳು ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳಕೊಂಡಿದ್ದಾರೆ ಎಂದರು. ಕುದುರೆ ವ್ಯಾಪಾರದ ಬಗ್ಗೆ ಮಾನ್ಯ…
ಧಾರವಾಡ: ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯವರಿಂದ ಅವಮಾನಕ್ಕೀಡಾಗಿದ್ದ ಎಎಸ್ ಪಿ ನಾರಾಯಣ ಬರಮಣ್ಣಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಎರಡು ಪುಟಗಳ ಪತ್ರ ಬರೆದಿದಿದ್ದಾರೆ. ಈ ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ. ಆದರೆ, ಇದರಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಇರುವುದರಿಂದ ಹಿರಿಯ ಅಧಿಕಾರಿಗಳು ನಾರಾಯಣ ಭರಮನಿ ಅವರ ಮನವೊಲಿಕೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಎಎಸ್ ಪಿ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಸಿಎಂ ಬಹಿರಂಗವಾಗಿ ಅಧಿಕಾರಿ ಜತೆ ಈ ರೀತಿ ನಡೆದುಕೊಂಡಿದ್ದಾರೆ. ಇನ್ನೂ ಆಂತರಿಕವಾಗಿ ಅವರು ಯಾವ ರೀತಿ ನಡೆದುಕೊಳ್ಳಬಹುದು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನವಿಲ್ಲ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾಯಕತ್ವದ ವಿಷಯದಲ್ಲಿ ಯಾವುದೇ ಭಿನ್ನಾಭಿಪ್ರಾಯ ಅಗತ್ಯವಿಲ್ಲ. ಅವರ ನಾಯಕತ್ವಕ್ಕೆ ಬೆಂಬಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಪಕ್ಷದ ಶಿಸ್ತು ಮುಖ್ಯ, ನನ್ನನ್ನು ಸಿಎಂ ಮಾಡುವಂತೆ ಯಾರನ್ನೂ ಕೇಳಿಲ್ಲ ಎಂದು ಹೇಳಿದರು ಮತ್ತು ನಾಯಕತ್ವ ಬದಲಾವಣೆಯ ವಿಷಯದ ಬಗ್ಗೆ ಸಾರ್ವಜನಿಕ ಹೇಳಿಕೆಗಳನ್ನು ನೀಡುವ ನಾಯಕರಿಗೆ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು. ಮಂಗಳವಾರ, ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿಕೆ ನೀಡುತ್ತಿರುವ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರಿಗೆ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ನಾನು ಅವರಿಗೆ ನೋಟಿಸ್ ನೀಡಿದ್ದೇನೆ. ಇತರರಿಗೂ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಪಕ್ಷದಲ್ಲಿ ಶಿಸ್ತು ಮುಖ್ಯ. ನನ್ನನ್ನು ಸಿಎಂ ಮಾಡಲು ನಾನು ಯಾರನ್ನೂ ನನ್ನ ಹೆಸರು ತೆಗೆದುಕೊಳ್ಳಲು ಕೇಳಿಲ್ಲ. ಅದರ ಅಗತ್ಯವಿಲ್ಲ. ಸಿಎಂ ಇರುವಾಗ, ಯಾವುದೇ ಭಿನ್ನಾಭಿಪ್ರಾಯದ ಅಗತ್ಯವಿಲ್ಲ ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ರಾಜ್ಯದಲ್ಲಿ ಕಳೆದ ಐದೂವರೆ ವರ್ಷಗಳಲ್ಲಿ 82 ಹುಲಿಗಳು ಮೃತಪಟ್ಟಿವೆ ಎಂದು ಆಘಾತ ವ್ಯಕ್ತಪಡಿಸಿರುವ ಸಚಿವ ಈಶ್ವರ್ ಖಂಡ್ರೆ(Ishwar Khandre )ಅವರು, ಈ ಎಲ್ಲಾ ಹುಲಿಗಳ ಸಾವಿನ ಬಗ್ಗೆ ವರದಿ ಸಲ್ಲಿಸುವಂತೆ ಅರಣ್ಯಾಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಸಚಿವರು, ಸಾವನ್ನಪ್ಪಿರುವ 82 ಹುಲಿಗಳ ಪೈಕಿ ಎಷ್ಟು ಹುಲಿಗಳು ಸಹಜವಾಗಿ ಸಾವನ್ನಪ್ಪಿವೆ? ಎಷ್ಟು ಹುಲಿಗಳು ಅಸಹಜವಾಗಿ ಮೃತಪಟ್ಟಿವೆ? ಅಸಹಜವಾಗಿ ಮೃತಪಟ್ಟ ಹುಲಿಗಳ ಸಾವಿಗೆ ಕಾರಣವೇನು? ಎಂಬ ಬಗ್ಗೆ ತನಿಖೆ ನಡೆದು ವರದಿ ಬಂದಿದೆಯೇ? ಎಂದು ಪ್ರಶ್ನಿಸಿದ್ದಾರೆ. ಮೃತಪಟ್ಟ ಯಾವುದಾದರೂ ಹುಲಿಗಳ ಅಂಗಾಂಗ ಅಂದರೆ ಉಗುರು, ಹಲ್ಲು ಇತ್ಯಾದಿ ತೆಗೆಯಲಾಗಿತ್ತೆ? ಹುಲಿಗಳ ಹತ್ಯೆ ಆಗಿದ್ದಲ್ಲಿ ನಿರ್ಲಕ್ಷ್ಯ ತೋರಿದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಕ್ರಮ ಆಗಿದೆಯೇ? ಎಷ್ಟು ಹುಲಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ? ಎಂಬ ವಿವರವನ್ನೂ ಕೇಳಿದ್ದಾರೆ. ಈವರೆಗೆ ಹುಲಿ ಹತ್ಯೆ ಪ್ರಕರಣಗಳಲ್ಲಿ ಎಷ್ಟು ಜನರಿಗೆ ಶಿಕ್ಷೆ ಆಗಿದೆ?…
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ಕಾರು ಹಾಗೂ ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಬ್ಬ ಸಾವನ್ನಪ್ಪಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ದ್ವೇಷ ಭಾಷಣ, ನಕಲಿ ಸುದ್ದಿಗಳ ದ್ವೇಷ ಭಾಷಣ, ನಕಲಿ ಸುದ್ದಿಗಳ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರುತ್ತಿದ್ದು, ಪೊಲೀಸರು ಇಂತಹ ಬೆಳವಣಿಗೆ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಮಂಗಳವಾರ ಆಯೋಜಿಸಿದ್ದ ವಿಶ್ವ ಪತ್ರಿಕಾ ದಿನಾಚರಣೆಯ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂದು ಹೇಳಿದರು. ನಮಗೆ ದ್ವೇಷವಿಲ್ಲದ ಸಮಾಜ ಬೇಕು, ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳು ಸಿಎಂ ಅಥವಾ ಪ್ರಧಾನಿಯನ್ನು ಮೆಚ್ಚಿಸುವಲ್ಲಿ ತೊಡಗಬಾರದು, ಸತ್ಯಗಳನ್ನಷ್ಟೇ ವರದಿ ಮಾಡಬೇಕು ಎಂದು ತಿಳಿಸಿದರು. ದಲಿತರು, ಒಬಿಸಿಗಳು ಮತ್ತು ದೀನದಲಿತರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡಬೇಕು, ಜನರ ಹಿತಾಸಕ್ತಿಗಳನ್ನು ಕಾಪಾಡಬೇಕು. ಪ್ರಜಾಪ್ರಭುತ್ವದಲ್ಲಿ, ಸ್ವತಂತ್ರ ಮತ್ತು ಮುಕ್ತ ಮಾಧ್ಯಮವು ಬಹಳ ಮುಖ್ಯ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…