Author: admin

ಹಾಸನ:  ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದ್ದು, ಇಂದು ಮತ್ತೊಬ್ಬರ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದು, ಕಳೆದ 1 ತಿಂಗಳಿನ ಅಂತರದಲ್ಲಿ ಜಿಲ್ಲೆಯಲ್ಲಿ 16 ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಸರಗೂರು:  ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ, ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರೂ ಸ್ಮರಿಸುವಂತದ್ದು’ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ ಮೋಹನಕುಮಾರಿ  ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕೆಂಪೇಗೌಡ ಜಯಂತಿಯನ್ನು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶುಕ್ರವಾರದಂದು ಹಮ್ಮಿಕೊಂಡ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಕೆಂಪೇಗೌಡರು ದೂರದೃಷ್ಟಿಯಿಂದ ಬೆಂಗಳೂರನ್ನು ಕಟ್ಟಿದರು. ಎಲ್ಲಾ ಸಮುದಾಯದವರು ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮಾಡಿದ್ದಾರೆ’ ಎಂದರು. ಧಾರ್ಮಿಕ, ಸಾಂಸ್ಕೃತಿಕ, ಜಾನಪದ ಕಲೆಗಳ ಬೆಳೆವಣಿಗೆ ಜೊತೆಗೆ ಎಲ್ಲಾ ಸಮುದಾಯದವರಿಗೆ ಅಧಿಕಾರ,ಶಿಕ್ಷಣ, ಸವಲತ್ತನ್ನು ನಾಡಪ್ರಭು ಕೆಂಪೇಗೌಡರು ನೀಡಿದ್ದರು’ ಎಂದು ಹೇಳಿದರು. ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಗ್ರಾಪಂ ಸದಸ್ಯ ಮಾಜಿ ಅಧ್ಯಕ್ಷ ಸುಧೀರ್ ಮಾತನಾಡಿ, ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯುಳ್ಳ ಆಡಳಿತಗಾರನಾಗಿದ್ದು, ಕೆರೆಗಳ ನಿರ್ಮಾಣಗಳ ಮೂಲಕ ಕೃಷಿ ಅಭಿವೃದ್ಧಿ…

Read More

ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳು ಸಾವಿಗೀಡಾಗಿದ್ದು, ತನಿಖಾ ತಂಡ ಆದಷ್ಟು ಬೇಗ ಸತ್ಯವನ್ನು ಬಹಿರಂಗಪಡಿಸಬೇಕು ಮತ್ತು ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶುಕ್ರವಾರ ಒತ್ತಾಯಿಸಿದ್ದಾರೆ. ಮಲೆ ಮಹದೇಶ್ವರರ ವಾಹನವೆಂದು ಹುಲಿಯನ್ನು ಪೂಜಿಸುವ ಬೆಟ್ಟದ ಸನ್ನಿಧಿಯಲ್ಲೇ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಸಾವನ್ನಪ್ಪಿರುವ ಸುದ್ದಿ ಅತ್ಯಂತ ಆಘಾತಕಾರಿ, ಅಮಾನವೀಯ ಹಾಗೂ ಭಕ್ತರ ಮನಸ್ಸಿಗೆ ಘಾಸಿ ತರಿಸಿರುವ ಘಟನೆಯಾಗಿದೆ. ಹುಲಿಗಳ ಸಾವಿಗೆ ವಿಷ ಪ್ರಾಶನವಾಗಿದ್ದರೆ ಅದು ಅತ್ಯಂತ ಹೇಯ ಹಾಗೂ ಖಂಡನೀಯ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ರಚಿಸಿರುವ ತನಿಖಾ ತಂಡ ಶೀಘ್ರ ಸತ್ಯಾಂಶವನ್ನು ಬಯಲಿಗೆಳೆದು ದುಷ್ಕರ್ಮಿಗಳನ್ನು ಬಂಧಿಸಲಿ ಎಂದು ಒತ್ತಾಯಿಸುವೆ’ ಎಂದು ಅವರು ‘X’ ನಲ್ಲಿ ಪೋಸ್ಟ್ ಮಾಡಿದ್ದಾರೆ. ಹುಲಿಗಳು ಸಾವಿಗೀಡಾದ ಸ್ಥಳದ ಬಳಿಯೇ ಹಸುವಿನ ಮೃತದೇಹ ಪತ್ತೆಯಾಗಿದ್ದು, ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ವಿಷಪ್ರಾಶನ…

Read More

ಶಿವಮೊಗ್ಗ: ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೃಷ್ಣಪ್ಪ (55) ಮತ್ತು ಅವರ ಪತ್ನಿ ವಿನೋದ (42) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್‌ ನ ವೈರ್‌ ಸಂಪರ್ಕವಾಗಿದ್ದು, ಮಳೆಯಿಂದ ನೆಂದಿದ್ದ ತಂತಿಯಲ್ಲಿ ಬಟ್ಟೆ ಒಣಗಿಸಲು ಹಾಕಲು ವಿನೋದ ಮುಂದಾಗಿದ್ದು, ಈ ವೇಳೆ ವಿದ್ಯುತ್ ಶಾಕ್ ತಗುಲಿದೆ. ಅವರನ್ನು ರಕ್ಷಿಸಲು ಹೋದ ಕೃಷ್ಣಪ್ಪ ಅವರಿಗೂ ವಿದ್ಯುತ್ ಶಾಕ್ ಹೊಡೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್ ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರ‌ನಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮೈಸೂರು: ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ‌ಯಲ್ಲಿ ಗುರುವಾರ  ಸುಮಾರು 20ಕ್ಕೂ ಹೆಚ್ಚು ಮಕ್ಕಳಿಗೆ ಹುಚ್ಚುನಾಯಿ ಕಚ್ಚಿರುವ ಘಟನೆ  ನಡೆದಿದೆ. ಹುಚ್ಚು ನಾಯಿಯ ಹಾವಳಿಯಿಂದ ಬೇಸತ್ತ ಜನರು ಒಂದು ಹುಚ್ಚು ನಾಯಿಯನ್ನು ಕೊಂದು ಹಾಕಿದ್ದಾರೆ. ಇನ್ನೂ ಎರಡು ಹುಚ್ಚು ನಾಯಿಗಳು ಸುತ್ತಾಡುತ್ತಾ ಭೀತಿ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಮೈಸೂರಿನ ಮೇಟಗಳ್ಳಿ ದೇವಾಲಯದ ಬಸವ ಹುಚ್ಚುನಾಯಿ ಕಚ್ಚಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿತ್ತು. ಕೆಲವು ದಿನಗಳ ಹಿಂದೆ ಬಸವನಿಗೆ ಹುಚ್ಚುನಾಯಿ ಕಚ್ಚಿತ್ತು. ಸ್ಥಳೀಯರು ಸೇರಿ ಬಸವನನ್ನು ಕಟ್ಟಿ ಹಾಕಿ ಚಿಕಿತ್ಸೆ ಕೊಡಿಸಿ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ ರೇಬಿಸ್​ ಹೆಚ್ಚಾಗಿ ಬಸವ ನಾಯಿಯಂತೆ ಶಬ್ದ ಮಾಡುತ್ತಾ ಸ್ಥಳೀಯರಿಗೆ ಭೀತಿ ಉಂಟು ಮಾಡಿತ್ತು. ಪಶುವೈದ್ಯರು ಬಸವನಿಗೆ ಚಿಕಿತ್ಸೆ ಪ್ರಾರಂಭಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಸವ ಮೃತಪಟ್ಟಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮೃತಪಟ್ಟ ಐದು ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಎಂಬುದು ದೃಢಪಟ್ಟಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮರಾಜನಗರ ಸಿಸಿಎಫ್ ಹೀರಾಲಾಲ್ ಅವರು, ಮೃತ ತಾಯಿ ಹುಲಿಗೆ 8 ವರ್ಷಗಳಾಗಿದ್ದು, ಮರಿಗಳು ಸುಮಾರು 10 ತಿಂಗಳು ವಯೋಮಾನದವಾಗಿವೆ ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಐವರು ದನಗಾಹಿಗಳನ್ನು‌ ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಲಿಗಳ ಕಳೇಬರ ಪತ್ತೆಯಾದ ಅಣತಿ ದೂರದಲ್ಲೇ ಹಸುವಿನ ಮೃತದೇಹ ಸಿಕ್ಕಿದ್ದು, ಕ್ರಿಮಿನಾಶಕ ಸಿಂಪಡಣೆ ಮಾಡಿರುವುದು ತಿಳಿದುಬಂದಿದೆ. ವಿಷ ಹಾಕಿದ್ದ ಹಸುವನ್ನು ತಿಂದು ಹುಲಿಗಳು ಅಸುನೀಗಿರುವುದು ಪ್ರಾಥಮಿಕ ತನಿಖೆ ವೇಳೆ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಮೈಸೂರು: 6 ತಿಂಗಳಿಂದ ಸಂಬಳ ನೀಡದ ಹಿನ್ನೆಲೆಯಲ್ಲಿ ಉದ್ಯೋಗಿಯೊಬ್ಬ ಸರ್ಕಾರಿ ಕಚೇರಿಯ ಕೊಠಡಿಯಲ್ಲಿನ ಫ್ಯಾನ್‌ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನಡೆದಿದೆ. ಹೊರ ಗುತ್ತಿಗೆ ನೌಕರ ದೀಪಕ್ ಆತ್ಮಹತ್ಯೆಗೆ ಯತ್ನಿಸಿದ ಉದ್ಯೋಗಿ. ಕಳೆದ 6 ತಿಂಗಳಿಂದ ಸಂಬಳ ನೀಡದ್ದಕ್ಕೆ ಬೇಸರಗೊಂಡಿದ್ದ ಉದ್ಯೋಗಿ ದೀಪಕ್‌ ಕೆಲಸಕ್ಕೆ ಬಂದ ವೇಳೆ ಉಪ ನಿರ್ದೇಶಕರನ್ನು ಪ್ರಶ್ನೆ ಮಾಡಿದ್ದಾನೆ. ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕಚೇರಿಯಲ್ಲೇ ನೇಣಿಗೆ ಶರಣಾಗಲು ಯತ್ನಿಸಿ ಟವೆಲ್ ನಿಂದ ಫ್ಯಾನ್‌ಗೆ ಬಿಗಿದುಕೊಳ್ಳಲು ಮುಂದಾಗಿದ್ದಾನೆ. ತಕ್ಷಣ ದೀಪಕ್‌ನನ್ನು ಸಹ ಸಿಬ್ಬಂದಿ ತಡೆದು ವಾಪಸ್ ಕಳುಹಿಸಿದ್ದಾರೆ. ಇದೇ ವಿಚಾರಕ್ಕೆ ನಾಲ್ಕು ತಿಂಗಳ ಹಿಂದೆ ದೀಪಕ್ ಕೈ ಕೊಯ್ದುಕೊಂಡಿದ್ದ. ಘಟನೆ ನಂತರ ಈ ದಿನವೇ ಸಂಬಳ ಹಾಕಲಾಗುತ್ತೆ ಎಂದು ಸಹಾಯಕ ನಿರ್ದೇಶಕ ಭಾಸ್ಕರ್ ನಾಯಕ್ ಹೇಳಿದ್ದಾರೆ. ಆತ ಹೊರ ಗುತ್ತಿಗೆ ನೌಕರ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾನೆ. ಮನೆಯ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ. ಇನ್ನು…

Read More

ಬೆಂಗಳೂರು: ಸೆಪ್ಟಂಬರ್ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ ಎನ್ನುವ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ಇಂದು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹವಿಲ್ಲ. ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆಯನ್ನು ನಿರ್ಲಕ್ಷಿಸಿ ಎಂದಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು. ರಾಜಣ್ಣ ಅವರ ಹೇಳಿಕೆಯನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂಬ ಪ್ರಶ್ನೆಗೆ, ಅದನ್ನು ನಿರ್ಲಕ್ಷಿಸುವುದು ಒಳ್ಳೆಯದು. ಪಕ್ಷದಲ್ಲಿ ಆಂತರಿಕ ಕಲಹವಿಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:   ಎತ್ತಿನಹೊಳೆ ಕಾಮಗಾರಿ ಮೂಲಕ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈಗ ಬಂದು ನೋಡಲಿ, ನಾವು ನೀರು ಹರಿಸುವ ವ್ಯವಸ್ಥೆಗೆ ಚಾಲನೆ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣಿನಿಂದ ನೋಡಲಿ ಎಂದು ಇಂದು ಎತ್ತಿನಹೊಳೆ ಕಾಮಗಾರಿ ಮೂಲಕ ನೀರನ್ನು ಹರಿಸಿದ್ದೇವೆ ಎಂದು ಹೇಳಿದರು. ಕಾಮಗಾರಿಗೆ ಪೂರಕವಾಗಿರುವಂತಹ ಅರಣ್ಯ ಭೂಮಿಯನ್ನು ಕೂಡ ಈಗಾಗಲೇ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ಎತ್ತಿನಹೊಳೆ ಕಾಮಗಾರಿ ಮೂಲಕ ಹರಿದು ಬರುತ್ತಿರುವ ಕನಿಷ್ಠ ಮೂರು ಟಿಎಂಸಿ ನೀರನ್ನು ಸಂಗ್ರಹಿಸಲು ಚಿಕ್ಕಬಳ್ಳಾಪುರ ಹಾಗೂ ಕೊರಟಗೆರೆ ಗಡಿಭಾಗದಲ್ಲಿ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು. ಈ ರೀತಿ ನೀರು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಚಿಕ್ಕಬಳ್ಳಾಪುರ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ನೀರು ಕೊಡಲು ಕಷ್ಟವಾಗಲಿದೆ ಎಂದು ಹೇಳಿದರು. ನಮ್ಮತುಮಕೂರಿನ…

Read More

ಹಾಸನ: ಕಳೆದ 1 ತಿಂಗಳಿನಲ್ಲಿ ಹಾಸನದಲ್ಲಿ 15 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ  22 ವರ್ಷದ ಮತ್ತೊಬ್ಬಳು ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ 22 ವರ್ಷದ ಪದವೀಧರೆ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ–ರೂಪ ದಂಪತಿಯ ಪುತ್ರಿ ಸುಪ್ರಿಯಾ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು ಮುಕ್ತ ವಿವಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದರು. ನಿನ್ನೆ ಸುಪ್ರಿಯಾಗೆ ಎದೆನೋವು ಕಾಣಿಸಿಕೊಂಡಿದ್ದು ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಕೂಡಲೇ ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಸುಪ್ರಿಯಾ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More