Subscribe to Updates
Get the latest creative news from FooBar about art, design and business.
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
- ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
- ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
- ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
- ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
- ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್ ಜಿ ಯೋಜನೆ ಜಾರಿ : ಜಿಪಂ ಸಿಇಒ
Author: admin
ಕೊರಟಗೆರೆ : ಭಾರತ ವಿಶ್ವದಲ್ಲಿಯೇ ಯುವ ಬಲಿಷ್ಠ ಮತ್ತು ಸದೃಢ ರಾಷ್ಟ್ರವಾಗಿದೆ. ಈ ಬಲಿಷ್ಠ ರಾಷ್ಟ್ರವನ್ನು ಮಣಿಸಲು ಅನ್ಯ ದೇಶಗಳು ಡ್ರಗ್ಸ್ ಮೂಲಕ ದೇಶಕ್ಕೆ ಕಾಲಿಟ್ಟಿವೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು. ತುಮಕೂರು ಜಿಲ್ಲಾ ಪೋಲಿಸ್, ಮಧುಗಿರಿ ಉಪ ವಿಭಾಗ, ಕೊರಟಗೆರೆ ಪೋಲಿಸ್ ಠಾಣೆ ವತಿಯಿಂದ ಸ್ಕೌಟ್ಸ್ ಅಂಡ್ ಗೈಡ್ಸ್ ಸಹಯೋಗದಲ್ಲಿ ವಿದ್ಯಾರ್ಥಿಗಳ ಜೊತೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದವರೆಗೆ ‘‘ವಿಶ್ವ ಮಾದಕ ದ್ರವ್ಯಗಳ ವಿರೋಧಿ’’ ದಿನದ ಬಗ್ಗೆ ಹಮ್ಮಿಕೊಳ್ಳಲಾದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಶೇ.೫೮ ರಿಂದ ೬೦%ರಷ್ಟು ಮಂದಿ ಯುವಕರಿರುವ ಬಲಿಷ್ಠ ದೇಶ ಭಾರತ. ಕಳೆದ ಎರಡು ದಶಕದಲ್ಲಿ ಆರ್ಥಿಕತೆ, ಸಾಮಾಜಿಕತೆ, ಶೈಕ್ಷಣಿಕತೆ ಗುಣಮಟ್ಟವನ್ನು ಕುಗ್ಗಿಸಲು ಅನ್ಯ ದೇಶಗಳಿಂದ ಮಾದಕ ವಸ್ತುಗಳು ಹೆಚ್ಚಾಗಿ ರಫ್ತು ಆಗುತ್ತಿವೆ. ೧೯೮೭ ಡಿ.೭ರಂದು ವಿಶ್ವ ಸಂಸ್ಥೆಯು ಸಾಮಾನ್ಯ ಸಭೆಯಲ್ಲಿ ಜೂ.೨೬ರಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರಪಯೋಗ ಮತ್ತು ಕಾನೂನು ಬಾಹಿರ…
ಬೀದರ್ : ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್ ಗಳ ಸುಮಾರು 430 ಕೋಟಿ ರೂ. ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಸಚಿವರಾದ ಈಶ್ವರ್ ಖಂಡ್ರೆ ಮತ್ತು ರಹೀಮ್ ಖಾನ್ ಅವರು ಒತ್ತಾಯಿಸಿದ್ದಾರೆ. ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ನಡೆದ ಹಳ್ಳಿಖೇಡ್ ನ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸುವ ಮತ್ತು ಕಾರ್ಖಾನೆಯು ವಿವಿಧ ಸಹಕಾರಿ ಬ್ಯಾಂಕ್ ನಿಂದ ಪಡೆದಿರುವ ಸಾಲದ ಮರುಪಾವತಿ ಕುರಿತ ಸಭೆಯಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ ಅವರು, ಈ ಹಿಂದೆಯೂ ಬಿ ಎಸ್ ಎಸ್ ಕೆ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶ ಆಗಿದೆ. ಆದರೆ ತಾರ್ಕಿಕ ಅಂತ್ಯ ಕಂಡಿಲ್ಲ. ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರಿಗೆ ದಂಡನೆ ಆಗಬೇಕು ಎಂದು ಆಗ್ರಹಿಸಿದರು ಕಾರ್ಖಾನೆಯು ಡಿಸಿಸಿ ಬ್ಯಾಂಕ್ ನಿಂದ 115…
ಮೈಸೂರು: ಮೈಸೂರಿನ ಹೆಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಡ್ಯಾಂಗೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿದ್ದರು. ಇದೇ ವೇಳೆ ಕಬಿನಿ ಡ್ಯಾಂನಲ್ಲಿ ಶಿವಣ್ಣ ಜೊತೆ ಫೋಟೊಗೆ ಅಭಿಮಾನಿಗಳು ಮುಗಿಬಿದ್ದರು. ರಸ್ತೆಯಲ್ಲಿ ಹೋಗುವಾಗ ಹಾಡಿ ಮಕ್ಕಳನ್ನ ಕಂಡು ಮಕ್ಕಳ ಜೊತೆ ಶಿವಣ್ಣ ದಂಪತಿ ಫೋಟೊ ತೆಗೆಸಿಕೊಂಡರು. ಕೆಲ ದಿನಗಳ ಹಿಂದಷ್ಟೇ ತಮ್ಮ 40ನೇ ವರ್ಷದ ಸಿನಿ ಪ್ರಯಾಣದ ಸಂಭ್ರಮವನ್ನು ಶಿವರಾಜ್ ಕುಮಾರ್ ಆಚರಿಸಿದ್ದರು. ಸುಮಾರು 125 ಚಿತ್ರಗಳಲ್ಲಿ ನಟಿಸಿರುವ ಶಿವರಾಜ್ ಕುಮಾರ್ ಅವರು ಈಗಲೂ ಐದಕ್ಕೂ ಹೆಚ್ಚು ಸಿನಿಮಾಗಳು ಅವರ ಕೈಯಲ್ಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ರಾಜ್ಯ ಸರ್ಕಾರವನ್ನು ಟೀಕಸಿದ್ದಾರೆ. ಮಾಗಡಿಯ ಮತ್ತೀಕೆರೆ ಗ್ರಾಮದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಮೂಲಭೂತ ಸೌಲಭ್ಯಗಳಿಗೆ ಶಾಶ್ವತವಾಗಿ ಅನುದಾನವನ್ನು ಒದಗಿಸಬೇಕು. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು. ಬೆಂಗಳೂರಿನ ಹಲವು ರಸ್ತೆಗಳು ಮತ್ತು ಫ್ಲೈಓವರ್ ಗಳ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ನಿಂತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ರಸ್ತೆಗಳಲ್ಲಿ ಇರೋದು ಗುಂಡಿಗಳೋ ಇಲ್ಲವೇ ಬಾವಿಗಳೋ ಗೊತ್ತಾಗುವುದಿಲ್ಲ, ಇಂತಹ ಸ್ಥಿತಿಯನ್ನು ಸರಿಪಡಿಸಲು ಸರ್ಕಾರ ಗಮನಹರಿಸಬೇಕು ಎಂದು ಛಾಟಿ ಬೀಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಆಯುಕ್ತ ಬಿ. ದಯಾನಂದ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿರುವ ಜಿಲ್ಲಾಧಿಕಾರಿ ಜಿ. ಜಗದೀಶ ಅವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸದ್ಯ, ಜಿಲ್ಲಾಧಿಕಾರಿ ಜಗದೀಶ್ ನೀಡಿದ್ದ ನೋಟಿಸ್‌ಗೆ ಸಂಬಂಧಿಸಿದಂತೆ ಅವರು ತನಿಖೆಗೆ ಹಾಜರಾಗಿ ಪ್ರಶ್ನೆ ಗೆ ಉತ್ತರ ನೀಡಿ ಅವರು ತೆರಳಿದಿದ್ದಾರೆ. ಜಿಲ್ಲಾಧಿಕಾರಿಗಳು ಬಿ ದಯಾನಂದ ಅವರಿಗೆ, ಕಬ್ಬನ್ ಪಾರ್ಕ್ ಇನ್ಸ್‌ಪೆಕ್ಟರ್ ನಿಮಗೆ ಮಾಹಿತಿ ನೀಡಿದ್ದಾರಾ?. ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಬರುತ್ತಾರೆ ಎಂದು ನಿರೀಕ್ಷೆ ಇತ್ತಾ? ಒಂದು ವೇಳೆ ನಿರೀಕ್ಷೆ ಇಟ್ಟಿದ್ದಾರೆ ಯಾಕೆ ನೀವು ಸರಿಯಾದ ರೀತಿ ಬಂದೋಬಸ್ ಮಾಡಲಿಲ್ಲ?. ನೀವು ಆರ್ ಸಿಬಿ ತಂಡಕ್ಕೆ ಅಥವಾ ಡಿಎನ್ ಎ ತಂಡಕ್ಕೆ ನೋಟಿಸ್ ನೀಡಿದ್ದೀರಾ?. ನಿಮಗೆ ಸಾವಿನ ಬಗ್ಗೆ ಯಾವಾಗ ತಿಳಿಯಿತು? ಎಂದೆಲ್ಲಾ ಪ್ರಶ್ನೆಗಳನ್ನು ಕೇಳಿ…
ತಿಪಟೂರು: ತಾಲ್ಲೂಕಿನ ಹಳೇಪಾಳ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ಜನಜಾಗೃತಿ ಕಾರ್ಯಕ್ರಮದಡಿಯಲ್ಲಿ ಶಾಲಾ ಮಕ್ಕಳಿಗೆ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಜನಜಾಗೃತಿ ವೇದಿಕೆ ಸದಸ್ಯರಾದ ಶ್ಯಾಮಸುಂದರ್, ಈಗಿನ ಯುವ ಪೀಳಿಗೆ ಹಾಗೂ ವಿದ್ಯಾರ್ಥಿಗಳು ತಾವು ಸ್ವತಂತ್ರರು ಎಂಬ ಕುರುಡು ಭಾವನೆಗಳಿಗೊಳಪಟ್ಟು ಗಾಂಜಾ, ಹೆರಾಯಿನ್, ಬ್ರೌನ್ ಶುಗರ್ ಹಾಗೂ ಸಿಂಥಟಿಕ್ ಡ್ರಗ್ಸ್ ಗಳಂತ ಮಾಹಾಮಾರಿ ಮಾದಕ ವಸ್ತುಗಳಿಗೆ ಬಲಿಯಾಗಿ ತಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿಮಿತಗಳನ್ನು ಕಳೆದುಕೊಳ್ಳುವುದರೊಟ್ಟಿಗೆ, ಆರ್ಥಿಕವಾಗಿ ದಿವಾಳಿಯಾಗುವುದರೊಟ್ಟಿಗೆ ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡಿ ತಮ್ಮ ಅತ್ಯಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆಂದು ಕಳವಳ ವ್ಯಕ್ತಪಡಿಸಿದರು. ತಾಲ್ಲೂಕು ಯೋಜನಾಧಿಕಾರಿ ಉದಯ್ ಕೆ. ಮಾತನಾಡಿ, ಸಾಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಎಲ್ಲಾ ವಿಭಾಗದಲ್ಲಿಯೂ ರಾಜ್ಯದ ಜನತೆಯ ಒಳಿತಿಗೆ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಲೇ ಬಂದಿದ್ದಾರೆ. ಗ್ರಾಮಾಭಿವೃದ್ಧಿ…
ತುಮಕೂರು: ಮಗು ಮಾತಾಡುವ ಮೊದಲು ನೋಡಿ ಕಲಿಯುತ್ತದೆ, ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ–ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ –2025” ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮದ ಕುರಿತು ಚರ್ಚಿಸಲು, ಇದನ್ನು ಅಧ್ಯಯನ ಮಾಡುವ ಯುವ ಮನಸ್ಸುಗಳೊಂದಿಗೆ ಸಂವಾದ ನಡೆಸಲು, ಇಂತಹ ಮಾಧ್ಯಮ ಹಬ್ಬದಲ್ಲಿ ಭಾಗವಹಿಸುತ್ತಿರುವುದು ನನಗೆ ಹೆಮ್ಮೆ ಮತ್ತು ಸಂತೋಷದ ವಿಚಾರ. ಹೊಸ ಪತ್ರಕರ್ತರಲ್ಲಿ ಅಧ್ಯಯನಶೀಲತೆ ಮತ್ತು ಗ್ರಹಿಕೆಯ ಕೊರತೆ ಇರುವುದನ್ನು ನಾನು ಗಮನಿಸಿದ್ದೇನೆ. ಪತ್ರಕರ್ತರಾಗುವವರಿಗೆ ಮಗುವಿನ ಮನಸ್ಸು ಮುಖ್ಯ. ಪ್ರತಿಯೊಂದು ಮಗುವೂ ಮಾತಾಡುವ ಮೊದಲು ನೋಟದ ಮೂಲಕವೇ ತಿಳಿಯುತ್ತದೆ, ಅರಿಯುತ್ತದೆ, ಗ್ರಹಿಸುತ್ತದೆ. ಹೀಗಾಗಿ ನೋಟದ ಮೂಲಕ ಕಲಿಯುವುದು ಸಹಜವಾದ, ನೈಸರ್ಗಿಕವಾದ ಪ್ರಕ್ರಿಯೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದೇ ಪದೇ ಕುವೆಂಪು ಅವರ ಒಂದು…
ತುಮಕೂರು: ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನ ಕುರಿತಂತೆ, ಜಿಲ್ಲಾ ಪಂಚಾಯತ್ ತುಮಕೂರು ಸಭಾಂಗಣದಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ, ಜಲ ಜೀವನ್ ಮಿಷನ್ ಯೋಜನೆಯ ಎಲ್ಲಾ 10 ತಾಲೂಕುಗಳ ಗುತ್ತಿಗೆದಾರರ ಸಭೆಯನ್ನು ಆಯೋಜನೆ ಮಾಡಲಾಗಿತ್ತು, ಸದರಿ ಸಭೆಯಲ್ಲಿ ಗುತ್ತಿಗೆದಾರರ ಸಮಸ್ಯೆಗಳನ್ನು ಕುರಿತಂತೆ, ಕಾಮಗಾರಿಗಳನ್ನು ತುರ್ತಾಗಿ ಮುಕ್ತಾಯಗೊಳಿಸಲು ಸುದೀರ್ಘವಾಗಿ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು. ಗುತ್ತಿಗೆದಾರರು ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಕೈಗೊಂಡು ವಿಳಂಬ ಮಾಡದೆ ನಿಗದಿತ ಕಾಲಾವಧಿಯಲ್ಲಿ ಮುಕ್ತಾಯ ಮಾಡಿ ಹರ್ ಘರ್ ಜಲ್ ಘೋಷಣೆ ಮಾಡಿ ಗ್ರಾಮ ಪಂಚಾಯಿತಿ್ಗೆ ಹಸ್ತಾಂತರ ಮಾಡಲು ತಿಳಿಸಲಾಯಿತು. ಬಾಕಿ ಇರುವ ಕಾಮಗಾರಿಗಳ ಬಿಲ್ ಗಳ ಪ್ರಸ್ತಾವನೆಗಳನ್ನು ಎಲ್ಲಾ ಉಪ ವಿಭಾಗಗಳಿಂದ ಪಡೆದು 1 ವಾರದೊಳಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಬಿಲ್ ಪಾವತಿಗೆ ಅಗತ್ಯ ಕ್ರಮವಹಿಸಲು ಕಾರ್ಯಪಾಲಕ ಇಂಜಿನಿಯರ್ ರವರಿಗೆ ಸೂಚನೆ ನೀಡಲಾಯಿತು. EOT ಪ್ರಸ್ತಾವನೆಗಳನ್ನು ಯೋಜನೆ ಮಾರ್ಗಸೂಚಿ ಪ್ರಕಾರ ಪ್ರಸ್ತಾವನೆಗಳನ್ನು ಸಿದ್ಧಪಡಿಸಿ 15 ದಿವಸದೊಳಗಾಗಿ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಿ, ಅನುಮೋದನೆ ಪಡೆಯಲು ಕಾರ್ಯಪಾಲಕ ಇಂಜಿನಿಯರ್…
ಬೀದರ್: 2025–26 ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಳಿರಾಮ್ ಕುಶಾಲರಾವ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಇತ್ಯಾದಿ ಉತ್ತೇಜನ ಯೋಜನೆ, ಎಂಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್ ಯೋಜನೆ, ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್‌ಎಂ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಹರಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅರ್ಹರು SSP (https://ssp.karnataka.gov.in ) ಹಾಗೂ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in ) ಮೂಲಕ ಆ.30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 89513 91061 ಗೆ ಸಂಪರ್ಕಿಸಬಹುದು ಎಂದು…
ಚಿಕ್ಕೋಡಿ: ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ರೇಣುಕಾ ಸಂಜಯ್ ಬಂಡಗಾರ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಟವಾಡುತ್ತಿದ್ದ ವೇಳೆ ಏಕಾಏಕಿ ಈಕೆಗೆ ಹೃದಯಾಘಾತವಾಗಿದೆ. ತಕ್ಷಣ ಶಾಲೆಯ ಶಿಕ್ಷಕರು ಹಾಗೂ ಪೋಷಕರು ಆಸ್ಪತ್ರೆಗೆ ರವಾನಿಸಲು ಯತ್ನಿಸಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಸಣ್ಣ ವಯಸ್ಸಿನಲ್ಲೇ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಘಟನೆ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW