Author: admin

ಔರಾದ್: ಮಲೇರಿಯಾ ವಿರೋಧಿ ಮಾಸಾಚರಣೆ ದಿನದ ಅಂಗವಾಗಿ ತಾಲೂಕಿನ ಏಕಂಬಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಧೋಳ (ಬಿ) ಪ್ರಾಥಮಿಕ ಆರೋಗ್ಯ ಕೇಂದ್ರದ (PHC) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ರೋಗದ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಯಿತು. ರೋಗ ಹರಡುವಿಕೆ, ಅದರ ಪ್ರಮುಖ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಪರಿಸರ ಸ್ವಚ್ಛತೆಯ ಮಹತ್ವದ ಕುರಿತು ಆರೋಗ್ಯ ಇಲಾಖೆಯ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮಳೆಗಾಲದಲ್ಲಿ ಎಲ್ಲೂ ನೀರು ನಿಂತುಕೊಳ್ಳದಂತೆ ಜಾಗ್ರತೆ ವಹಿಸುವುದು, ಸೊಳ್ಳೆ ಕಡಿತದಿಂದ ಸ್ವತಃ ರಕ್ಷಿಸಿಕೊಳ್ಳುವುದು ಹಾಗೂ ವೈಯಕ್ತಿಕ ಮತ್ತು ಸುತ್ತಮುತ್ತಲಿನ ಆರೋಗ್ಯದ ಬಗ್ಗೆ ಸದಾ ಎಚ್ಚರಿಕೆ ವಹಿಸುವುದು ಅತ್ಯಗತ್ಯ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು. ಈ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಸಿಎಚ್‌ಒ ಕೌಶಿಕ ಕೇದಾರೆ, ಎಚ್‌ಐಒ ನಾಗನಾಥ ಕುಂಬರ್, ಆಶಾ ಕಾರ್ಯಕರ್ತೆಯರಾದ ಮಹಾದೇವಿ ಹಾಗೂ ಸುಲಾಖಾ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು…

Read More

ಸರಗೂರು: “ನಮ್ಮ ಸನಾತನ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ ‘ಯೋಗ’ ಆಗಿದ್ದು, ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ” ಎಂದು ಲಯನ್ಸ್ ಅಕಾಡೆಮಿ ಶಾಲೆಯ ಪ್ರಾಂಶುಪಾಲರಾದ ದಾಸಚಾರಿ ತಿಳಿಸಿದರು. ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ನಮ್ಮ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯದ ರಕ್ಷಣೆಗೆ ಯೋಗ ಅತ್ಯಂತ ಸಹಕಾರಿಯಾಗಿದೆ. ಇಂದಿನ ಆಧುನಿಕ ಜೀವನಶೈಲಿ ಹಾಗೂ ಆಹಾರ-ವಿಹಾರಗಳ ವೈಪರೀತ್ಯದಿಂದಾಗಿ ನಾವು ಅನೇಕ ಮಾನಸಿಕ ಒತ್ತಡಗಳಿಗೆ ಒಳಗಾಗುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸುಖ-ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸಲು ಯೋಗ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಅವರು ಆಶಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕಿ ಪದ್ಮಶ್ರೀ ಅವರು, “ಯೋಗದಿಂದ ದೇಹ, ಮನಸ್ಸು ಮತ್ತು ಆರೋಗ್ಯ ಸುಸ್ಥಿರವಾಗಿರಲು ಸಾಧ್ಯ. ಯೋಗವು ಎಲ್ಲಾ ರೋಗಗಳಿಗೂ ರಾಮಬಾಣವಿದ್ದಂತೆ. ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಕೆಲವು…

Read More

ಸರಗೂರು: ತಾಲೂಕಿನ ಹಳೆಹೇಗ್ಗುಡಿಲು ಗ್ರಾಮದಲ್ಲಿ ಸೋಮವಾರದಂದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕಾಡುಹಂದಿ ಏಕಾಏಕಿ ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗ್ರಾಮದ ಸಿದ್ದಯ್ಯ ಎಂಬುವರ ಮಗ ಸುರೇಶ್ ಕಾಡುಹಂದಿ ದಾಳಿಗೆ ಒಳಗಾದ ದುರ್ದೈವಿ ರೈತರಾಗಿದ್ದಾರೆ. ಸುರೇಶ್ ಅವರು ತಮ್ಮ ಜಮೀನಿನಲ್ಲಿ ಪೈಪ್ಲೈನ್ ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದಾಗ, ಪೊದೆಗಳ ಮರೆಯಿಂದ ಬಂದ ಕಾಡುಹಂದಿ ಏಕಾಏಕಿ ಇವರ ಮೇಲೆರಗಿದೆ. ಹಂದಿಯ ದಾಳಿಯ ಭೀಕರತೆಗೆ ರೈತನ ತೊಡೆಯ ಭಾಗ ಸೀಳಿಹೋಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಸುರೇಶ್ ಅವರ ಕಿರುಚಾಟವನ್ನು ಕೇಳಿದ ಅಕ್ಕಪಕ್ಕದ ಜಮೀನಿನ ರೈತರು ತಕ್ಷಣ ಧಾವಿಸಿ ಬಂದು, ಜೋರಾಗಿ ಕೂಗಾಡಿ ಕಾಡುಹಂದಿಯನ್ನು ಕಾಡಿನ ಕಡೆಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಗಾಯಾಳುವನ್ನು ತಕ್ಷಣವೇ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಸದ್ಯ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ವಿರುದ್ಧ ಆಕ್ರೋಶ: ಘಟನೆಯಿಂದ ಆಕ್ರೋಶಗೊಂಡ ಹಳೆಹೇಗ್ಗುಡಿಲು ಗ್ರಾಮಸ್ಥರು ಹಾಗೂ…

Read More

ತುಮಕೂರು: ಜಿಲ್ಲೆಯ ಸರ್ಕಾರಿ ಹಾಸ್ಟೆಲ್ ಗಳಲ್ಲಿ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಮಕ್ಕಳ ನಿರ್ವಹಣೆಯಲ್ಲಿ ನ್ಯೂನ್ಯತೆ ಕಂಡು ಬಂದರೆ ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ಹಾಸ್ಟೆಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ. ಈ ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಸಮಸ್ಯೆಗಳು ಕಂಡು ಬಂದರೆ ಸಂಬಂಧ ಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರತಿನಿತ್ಯ ವಿದ್ಯಾರ್ಥಿ ನಿಲಯದ ವಿಜಯ ಪಾಲಕರು ಕರ್ತವ್ಯ ಆಪ್ ಬಳಸಿ ತಮ್ಮ ಹಾಜರಾತಿಯನ್ನು ಹಾಕಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿ ವಾಸವಿದ್ದು ಅದರ ದೃಢೀಕರಣವನ್ನು ಇಲಾಖೆಗೆ ಸಲ್ಲಿಸಬೇಕು. ನಿಲಯ ಪಾಲಕರು ಶನಿವಾರ ಮತ್ತು ಭಾನುವಾರ ಹಾಸ್ಟೆಲ್ ಗಳಿಗೆ ಭೇಟಿ ನೀಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ಸದರಿ ದೂರುಗಳನ್ನು ಪರಿಶೀಲಿಸಿ…

Read More

 ರಾಘವೇಂದ್ರ ಅಡಿಗ ಎಚ್ಚೆನ್. ನಟಿ, ನಿರ್ಮಾಪಕಿ, ನಿರ್ದೇಶಕಿ ಸುಷ್ಮಾ ವೀರ್ ಈಗ ರಂಗಗೀತೆ ಪರಂಪರೆಗೆ ಹೊಸಲೇಪನ ಕೊಡಲು  ಮುಂದಾಗಿದ್ದಾರೆ. ಇತ್ತೀಚೆಗೆ ತಮ್ಮ ವೀರ ಕಥಾಕರ ಎಂಬ ಸಂಸ್ಥೆ ಮೂಲಕ “ವೀರ ರಂಗ ಸಂಭ್ರಮ K5” ಎಂಬ ಸಮಾರಂಭ ಆಯೋಜನೆ ಮಾಡಿದ್ದರು. ಈ ಸಮಾರಂಭದಲ್ಲಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡನ್ನು ಬಿಡುಗಡೆ ಮಾಡಲಾಯಿತು. ವರನಟ ಡಾ.ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ಹಾಗೂ ಅಳಿಯ ಎಸ್ ಎ ಗೋವಿಂದರಾಜು ಈ ಹಾಡನ್ನು ಅನಾವರಣ ಮಾಡಿದರು. ನಿರ್ದೇಶಕ ಪಿ.ಶೇಷಾದ್ರಿ, ನಟ ಸುಚೇಂದ್ರ ಪ್ರಸಾದ್, ಡಾ.ಸಿ.ಸೋಮಶೇಖರ್, ನಟ ಸುಂದರರಾಜ್, ಕೊಂಡಜ್ಜಿ ಮೋಹನ್, ಪ್ರಕಾಶ್ ರಾಘವಾಚಾರ್ ಹಾಗೂ ಡಾ.ಚಂದ್ರಶೇಖರ್ ಕಂಬಾರ ಅವರ ಪುತ್ರಿ ಜಯಶ್ರೀ ಸೇರಿದಂತೆ ಅನೇಕ ಗಣ್ಯರು ಹಾಗೂ ಗುಬ್ಬಿ ವೀರಣ್ಣ ಅವರ ಕುಟುಂಬದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿಕೊಂಡಿರುವ ರಂಗಗೀತೆ ಇದ್ದಾಗಿದೆ. ಹಾಡಿನ ಲೋಕಾರ್ಪಣೆಯ ನಂತರ ಅತಿಥಿಗಳು ಹಾಗೂ ಸುಷ್ಮಾ ವೀರ್…

Read More

ಸರಗೂರು: ಪಟ್ಟಣದ ಜೈನ ಸಮಾಜದ 1008 ಅನಂತನಾಥ ತೀರ್ಥಂಕರರ ನೂತನ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಹಾಗೂ ಧಾಮಸಂಪ್ರೋಕ್ಷಣೆ ಮಹೋತ್ಸವವು ಭಾನುವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಹೋತ್ಸವದ ಅಂಗವಾಗಿ ಜಿನ ಚೈತ್ಯಾಲಯದಲ್ಲಿ ಬೆಳಿಗ್ಗೆ ಅಗ್ರೋದಕ, ಕಳಶ ಸ್ಥಾಪನೆ, ಇಂದ್ರ ಪ್ರತಿಷ್ಠೆ ಹಾಗೂ ಕಂಕಣ ಧಾರಣೆಯೊಂದಿಗೆ ಧಾರ್ಮಿಕ ವಿಧಿಗಳು ಆರಂಭಗೊಂಡವು. ನಂತರ ನಿತ್ಯ ಪೂಜಾವಿಧಿಗಳು ನಡೆದವು. ಇದೇ ವೇಳೆ ಪರಮ ಪೂಜ್ಯ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರು ಸರಗೂರು ಪಟ್ಟಣಕ್ಕೆ ಮಂಗಳ ಪ್ರವೇಶ ಮಾಡಿದಾಗ, ಭಕ್ತರು ಭವ್ಯ ಮೆರವಣಿಗೆಯ ಮೂಲಕ ಜಿನ ಚೈತ್ಯಾಲಯಕ್ಕೆ ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಬಳಿಕ ಧಾಮ ಸಂಪ್ರೋಕ್ಷಣೆ, ಚತುರ್ದಿಕ್ಷು ಹೋಮ ಹಾಗೂ 1008 ಅನಂತನಾಥ ತೀರ್ಥಂಕರರಿಗೆ ಬಿಂಬಶುದ್ಧಿ ಮತ್ತು ನವಕಳಶ ಪಂಚಾಮೃತ ಮಹಾಭಿಷೇಕ ಪೂಜೆಗಳು ನಡೆದವು. ಕಾರ್ಯಕ್ರಮದ ಪೂರ್ವಭಾವಿಯಾಗಿ ವಿವಿಧ ಕಲಶಗಳನ್ನು ಹರಾಜು ಮಾಡಲಾಗಿದ್ದು, ಭಕ್ತರು ಉತ್ಸಾಹದಿಂದ ಪಾಲ್ಗೊಂಡು ವಿಶೇಷ ಅಭಿಷೇಕ ಸೇವೆಯಲ್ಲಿ ಭಾಗಿಯಾದರು. ಮಧ್ಯಾಹ್ನ ನಡೆದ ಧಾರ್ಮಿಕ ಸಭೆಯಲ್ಲಿ ಭಕ್ತಾದಿಗಳಿಗೆ ಆಶೀರ್ವಚನ ನೀಡಲಾಯಿತು. ಕಾರ್ಯಕ್ರಮದಲ್ಲಿ ಭುವನಕೀರ್ತಿ ಭಟ್ಟಾರಕ…

Read More

ಬೆಂಗಳೂರು: ಸ್ನೇಹಾಲಯ ಈ ಕ್ರಿಯೇಷನ್ಸ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿರುವ, ತೀವ್ರ ಕುತೂಹಲ ಕೆರಳಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ‘ಚಂದ್ರಗಿರಿ’ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿದೆ. ಹೊಸಕೋಟೆ, ವೈಟ್ ಫೀಲ್ಡ್ ಹಾಗೂ ಬೆಳ್ಳಿಕೆರೆ ಸುತ್ತಮುತ್ತಲಿನ ಸುಂದರ ಮತ್ತು ರಹಸ್ಯಮಯ ಪರಿಸರದಲ್ಲಿ ಸಿನಿಮಾದ ಪ್ರಮುಖ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಈ ಚಿತ್ರದ ಕಥಾಹಂದರವು ವಿಚಿತ್ರ ಚಂದ್ರಗಿರಿ ಎಂಬ ಊರಿನ ಸುತ್ತ ಸುತ್ತುತ್ತದೆ, ಅಲ್ಲಿ ಪ್ರತಿ ಅಮಾವಾಸ್ಯೆಯಂದು ನಿಗೂಢ ಆತ್ಮಹತ್ಯೆಗಳು ನಡೆಯುತ್ತಿರುತ್ತವೆ. ಈ ನಿರಂತರ ಸಾವಿನ ರಹಸ್ಯವನ್ನು ಭೇದಿಸಲು ನಾಲ್ಕು ಜನ ಧೈರ್ಯಶಾಲಿಗಳು ಆ ಊರಿಗೆ ಬರುತ್ತಾರೆ. ಅಲ್ಲಿ ಅವರಿಗೆ ಎದುರಾಗುವ ಅನಿರೀಕ್ಷಿತ ಸವಾಲುಗಳು, ಭಯಾನಕ ಸಮಸ್ಯೆಗಳು ಹಾಗೂ ಅವುಗಳಿಂದ ಅವರು ಹೇಗೆ ರೋಚಕವಾಗಿ ಪಾರಾಗುತ್ತಾರೆ ಎಂಬ ಕೌತುಕದ ಹೂರಣವನ್ನು ಈ ಚಿತ್ರ ಒಳಗೊಂಡಿದೆ. ಚಿತ್ರಕ್ಕೆ ರಾಜೀವ್ ಕೃಷ್ಣ ಗಾಂಧಿ ಅವರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಚಿತ್ರದಲ್ಲಿ ಸ್ಯಾಂಡಲ್‌ವುಡ್‌ ನ ಪ್ರಮುಖ ನಟರ ದಂಡೇ ಇದ್ದು, ಉಗ್ರಮ್…

Read More

ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ ಸಮಾಜದಲ್ಲಿ ಆಶಾದಾಯಕ ಬದಲಾವಣೆ ಸಾಧ್ಯವಾಗುತ್ತದೆ. ಇದೇ ನಿಟ್ಟಿನಲ್ಲಿ ಟೀಮ್ ಈಶ್ವರ್ ಮಲ್ಪೆ ಮತ್ತೊಂದು ಮಹತ್ವದ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಉಚಿತ ತಪಾಸಣೆ ಹಾಗೂ ಶ್ರವಣ ಯಂತ್ರಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತುಮಕೂರು ಜಿಲ್ಲಾ ಘಟಕ, ರೋಟರಿ ತುಮಕೂರು ಪ್ರೇರಣ ಮತ್ತು ಇನ್ನರ್ ವೀಲ್ ಕ್ಲಬ್ ತುಮಕೂರು ಸಂಯುಕ್ತ ಆಶ್ರಯದಲ್ಲಿ ಜೂನ್ 27 ಮತ್ತು 28ರಂದು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಎರಡು ದಿನಗಳ ಉಚಿತ ಶ್ರವಣ ತಪಾಸಣಾ ಶಿಬಿರ ನಡೆಯಲಿದೆ. ವಯೋಸಹಜ ಸಮಸ್ಯೆಗಳು, ಅನಾರೋಗ್ಯ ಅಥವಾ ಇತರೆ ಕಾರಣಗಳಿಂದ ಕೇಳುವ ಸಾಮರ್ಥ್ಯ ಕುಂದಿರುವ ಅನೇಕರು ಆರ್ಥಿಕ ಸಂಕಷ್ಟದಿಂದ ಸೂಕ್ತ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇಂತಹವರ ನೆರವಿಗೆ ಮುಂದಾಗಿರುವ ಟೀಮ್ ಈಶ್ವರ್…

Read More

ತುಮಕೂರು: ವಯೋಸಹಜ ಸಮಸ್ಯೆಗಳು, ಅಪಘಾತಗಳು ಹಾಗೂ ವಿವಿಧ ಆರೋಗ್ಯ ಕಾರಣಗಳಿಂದ ಶ್ರವಣ ಸಾಮರ್ಥ್ಯ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶ್ರವಣ ಸಮಸ್ಯೆಯಿಂದ ಬಳಲುತ್ತಿರುವವರಿಗೆ ನೆರವಾಗುವ ಉದ್ದೇಶದಿಂದ ತುಮಕೂರಿನಲ್ಲಿ ಜೂನ್ 27ರಂದು ಉಚಿತ ಶ್ರವಣ ತಪಾಸಣೆ ಹಾಗೂ ಶ್ರವಣ ಯಂತ್ರಗಳ ಸಹಾಯಧನ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ತುಮಕೂರು ಜಿಲ್ಲಾ ಘಟಕ, ರೋಟರಿ ತುಮಕೂರು ಪ್ರೇರಣ ಹಾಗೂ ಇನ್ನರ್ ವೀಲ್ ಕ್ಲಬ್ ತುಮಕೂರು ಸಂಯುಕ್ತ ಆಶ್ರಯದಲ್ಲಿ, ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಈ ಶಿಬಿರ ನಡೆಯಲಿದ್ದು, ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಬಾಳನಕಟ್ಟೆ ರಸ್ತೆಯಲ್ಲಿರುವ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸಲಾಗುತ್ತದೆ. ಶ್ರವಣ ಸಮಸ್ಯೆ ನಿರ್ಲಕ್ಷಿಸಿದರೆ ಅಪಾಯ: ತಜ್ಞರ ಪ್ರಕಾರ, ಆರಂಭಿಕ ಹಂತದಲ್ಲೇ ಶ್ರವಣ ಸಮಸ್ಯೆಯನ್ನು ಗುರುತಿಸಿ ಚಿಕಿತ್ಸೆ ಪಡೆಯುವುದರಿಂದ ಜೀವನಮಟ್ಟವನ್ನು ಸುಧಾರಿಸಬಹುದು. ವಯೋವೃದ್ಧರು ಮಾತ್ರವಲ್ಲದೆ ಯುವಕರು ಹಾಗೂ ಮಕ್ಕಳು ಕೂಡ ಶ್ರವಣ ಸಮಸ್ಯೆಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶೇ.40ರಷ್ಟು ಸಹಾಯಧನ: ಶ್ರವಣ ಸಮಸ್ಯೆಯಿಂದ…

Read More

ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಪ್ರತಿ ಕ್ಷೇತ್ರದಲ್ಲಿ ಇಬ್ಬರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯು 10,000 ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಈ ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರಬೇಕು. ಅರ್ಜಿಯನ್ನು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಅರ್ಜಿಯೊಂದಿಗೆ ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರತಿಭೆ ಹೊಂದಿರುವ ಬಗ್ಗೆ ಪ್ರಮುಖ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕಾ ತುಣುಕು / ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಅಂತರಾಷ್ಟ್ರೀಯ / ರಾಷ್ಟ್ರೀಯ / ರಾಜ್ಯ ಮಟ್ಟದಲ್ಲಿ ಭಾಗವಹಿಸಿರುವ / ಪ್ರಶಸ್ತಿ ಪಡೆದಿರುವ ಮಾಹಿತಿ ಲಗತ್ತಿಸಬೇಕು. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ಮಕ್ಕಳಿಗೆ ಪುನಃ ಪ್ರಶಸ್ತಿ ನೀಡಲು ಅವಕಾಶವಿರುವುದಿಲ್ಲ. ಸಾಧಿಸಿರುವ…

Read More