Subscribe to Updates
Get the latest creative news from FooBar about art, design and business.
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
- ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
Author: admin
ಬೆಳ್ತಂಗಡಿ: ಅನಾಮಧೇಯ ವ್ಯಕ್ತಿಯೋರ್ವ ತಾನು ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರವೂ ಆತ ಗುರುತಿಸಿದ ಸ್ಥಳದಲ್ಲಿ ಅಗೆಯುವ ಕಾರ್ಯ ಮುಂದುವರಿದಿದೆ. ಸೋಮವಾರ ವಿಶೇಷ ತನಿಖಾ ತಂಡ ಎಸ್ ಐಟಿ ಅಧಿಕಾರಿಗಳ ಸಮ್ಮುಖದಲ್ಲಿ ಅನಾಮಧೇಯ ವ್ಯಕ್ತಿ 13 ಸ್ಥಳಗಳನ್ನು ಗುರುತಿಸಿದ್ದನು. ಆ ಸ್ಥಳಕ್ಕೆ ಮಾರ್ಕಿಂಗ್ ಮಾಡಲಾಗಿದ್ದು, ಪೊಲೀಸ್ ಭದ್ರತೆ ನೀಡಲಾಗಿದೆ. ನೇತ್ರಾವತಿ ದಡದಲ್ಲಿ ಸಾಕ್ಷಿದಾರ ಗುರುತಿಸಿದ 2 ಪಾಯಿಂಟ್ ಗಳಲ್ಲಿ ಮೃತದೇಹ ಸಿಕ್ಕಿಲ್ಲ, ಹಲವು ವರ್ಷಗಳ ಹಿಂದೆ ಈ ಪ್ರದೇಶಗಳಲ್ಲಿ ತಾನು ಹೂತಿರುವುದಾಗಿ ದೂರುದಾರ ಹೇಳಿದ್ದಾನೆ. ಮಳೆಗಾಲದಲ್ಲಿ ಪ್ರವಾಹದ ಸಂದರ್ಭದಲ್ಲಿ ಈ ಪ್ರದೇಶಗಳಿಂದ ಮೃತದೇಹ ಕೊಚ್ಚಕೊಂಡು ಹೋಗುವ ಸಾಧ್ಯತೆ ಅಥವಾ ಮೃತದೇಹದ ಮೇಲೆ ಮತ್ತಷ್ಟು ಮಣ್ಣು ಬಿದ್ದು ಮುಚ್ಚಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಇನ್ನುಳಿದ ಪಾಯಿಂಟ್ ಗಳಲ್ಲಿಯೂ ಮೃತದೇಹಕ್ಕಾಗಿ ತೀವ್ರ ಹುಡುಕಾಟ ಮುಂದುವರಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ಬಳ್ಳಾರಿ: ಕಸದ ವಾಹನ ಹರಿದು 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬಳ್ಳಾರಿಯ ಬಾಪೂಜಿ ನಗರದಲ್ಲಿ ನಡೆದಿದೆ. ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ ಏಸ್ ವಾಹನ ಹರಿದು ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತಪಟ್ಟಿದ್ದಾನೆ. ಬೆಳಗ್ಗೆ ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು. ಈ ವೇಳೆ, ರಸ್ತೆ ಬದಿ ಆಟ ಆಡುತ್ತಿದ್ದ ವಿಕ್ಕಿ ತಲೆ ಮೇಲೆ ವಾಹನ ಹರಿದಿದೆ. ಕೂಡಲೇ ಮಗುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆಸ್ಪತ್ರೆ ಮುಟ್ಟುವುದರಲ್ಲೇ ವಿಕ್ಕಿ ಸಾವನ್ನಪ್ಪಿದ್ದಾನೆ ಮಗುವನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇನ್ನೂ ಚಾಲಕನ ಅಜಾಗರೂಕತೆ ಹಾಗೂ ಅತಿ ವೇಗದಂದ ಮಗು ಬಲಿಯಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ದೊಡ್ಡಬಳ್ಳಾಪುರ: ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎ1 ಆರೋಪಿಯಾಗಿ ಬೇಕರಿ ರಘು ಹಾಗೂ ಎ2 ಆರೋಪಿಯಾಗಿ ಯಶಸ್ವಿನಿ ಹಾಗೂ ಇತರರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಜುಲೈ 22ರ ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ನಟ ಪ್ರಥಮ್ ಬಂದಿದ್ದರು. ಈ ವೇಳೆ ಪ್ರಥಮ್ ರನ್ನ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಈ ಘಟನೆ ನಡೆದು ಹಲವು ದಿನಗಳ ನಂತರ ಖುದ್ದು, ಪ್ರಥಮ್ ನೇರವಾಗಿ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಅವರನ್ನು ಭೇಟಿಯಾಗಿ ದೂರು ನೀಡಿದ್ದರು. ಪ್ರಥಮ್ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೀದರ್: ಜಿಲ್ಲೆಯ ಔರಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಔರಾದ್ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಜು.31ರಂದು ಬೆಳೆಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಪ್ರಭು ಚವ್ಹಾಣ್ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಎಂಎಲ್ಸಿ ವಿಜಯ್ ಸಿಂಗ್ ಸಸಿ ನೆಡುವ ಮೂಲಕ ಚಾಲನೆ ನೀಡುವರು. ಪತ್ರಕರ್ತ ದೇವಯ್ಯ ಗುತ್ತೇದಾರ್ ಉಪನ್ಯಾಸ ನೀಡುವರು. ಸಂಘದ ಜಿಲ್ಲಾಧ್ಯಕ್ಷ ಡಿ.ಕೆ. ಗಣಪತಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ. ತಹಶೀಲ್ದಾರ್ ಮಹೇಶ್ ಪಾಟೀಲ್, ತಾಪಂ ಇಒ ಶಿವಕುಮಾರ್ ಘಾಟೆ, ಸಿಪಿಐ ರಘುವೀರ ಸಿಂಗ್ ಠಾಕೂರ್, ಶರಣಪ್ಪ ಚಿಟಮೇ, ಶಿವಕುಮಾರ ಸ್ವಾಮಿ, ನಾಗಶೆಟ್ಟಿ ಧರಂಪುರೆ, ಪೃಥ್ವಿರಾಜ್ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಮೊಕ್ತೆದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ:…
ಸರಗೂರು: ಸರ್ಕಾರ ಪ್ರತಿ ಕುಟುಂಬದಲ್ಲಿರುವ ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಅನುಮೋದನೆ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿ ಮಾಡಿದೆ. ಅರ್ಹರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ಉಪ ತಹಸೀಲ್ದಾರ್ ಮಹದೇವ ಮೂರ್ತಿ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಪಂ ವ್ಯಾಪ್ತಿಯ ಮುಳ್ಳೂರು ಗ್ರಾಮದ ಅಂಬೇಡ್ಕರ್ ಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಸಾಮಾಜಿಕ ಭದ್ರತಾ ಯೋಜನೆಗಳ ಕಂದಾಯ ಅದಾಲತ್ ಹಾಗೂ ಪಿಂಚಣಿ ಈ ಪೌತಿ ಖಾತೆ ಅದಾಲತ್ ಮತ್ತು ಜನ ಸಂಪರ್ಕ ಸಭೆ ಸಭೆಯನ್ನು ಮಂಗಳವಾರದಂದು ಹಮ್ಮಿಕೊಂಡಿದ್ದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ ಎಂಬ ಕಾರಣದಿಂದ ಪ್ರತಿ ತಿಂಗಳ 15 ರೊಳಗೆ ಜನರ ಬಳಿ ಹೋಗಿ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ಅನು ಮೋದನೆ ಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.…
ದಿಯೋಘರ್: ಗ್ಯಾಸ್ ಸಿಲಿಂಡರ್ ತುಂಬಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯ ಪ್ರದೇಶದ ಬಳಿ ಕನ್ವಾರಿಯಾಗಳನ್ನು ಸಾಗಿಸುತ್ತಿದ್ದ ಬಸ್ ಗ್ಯಾಸ್ ಸಿಲಿಂಡರ್ ತುಂಬಿದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 19 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಾಗಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಿಂಡು 68 ವರ್ಷದ ವೃದ್ಧ ವ್ಯಕ್ತಿಯನ್ನು ಕಚ್ಚಿ ಕೊಂದು ಹಾಕಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಮ್ ಲೇಔಟ್ ನಲ್ಲಿ ಈ ಭೀಕರ ಘಟನೆ ವರದಿಯಾಗಿದ್ದು, ಬೀದಿನಾಯಿಗಳ ದಾಳಿಗೆ 71 ವರ್ಷದ ಸೀತಪ್ಪ ಎಂಬುವವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೀತಪ್ಪ ಅವರು ಸೋಮವಾರ ಬೆಳಗ್ಗೆ ವಾಕಿಂಗ್ಗೆ ಹೋಗುತ್ತಿದ್ದಾಗ 8 ರಿಂದ 9 ಬೀದಿನಾಯಿಗಳು ದಾಳಿ ಮಾಡಿದ್ದು, ಕೈ, ಕಾಲಿನ ಅರ್ಧ ಮಾಂಸವನ್ನೇ ಕಚ್ಚಿ ತಿಂದಿವೆ. ಅಷ್ಟೇ ಅಲ್ಲದೆ ಮುಖಕ್ಕೂ ಕಚ್ಚಿವೆ. ನಾಯಿಗಳ ದಾಳಿಗೆ ವೃದ್ಧ ಸೀನಪ್ಪ ಕೊನೆಯುಸಿರೆಳೆದಿದ್ದಾರೆ. ಸೋಮವಾರ ಬೆಳಗಿನ ಜಾವ 3 ಗಂಟೆಗೆ ಸೀತಪ್ಪ ಕಂಬಳಿ ಸುತ್ತಿಕೊಂಡು ವಾಕಿಂಗ್ ಮಾಡುತ್ತಿದ್ದರು. ಕಂಬಳಿಯಲ್ಲಿ ಸುತ್ತಿಕೊಂಡು ಓಡಾಡುತ್ತಿದ್ದ ಅವರನ್ನು ನೋಡಿ ಬೀದಿ ನಾಯಿಗಳು ಮುಗಿಬಿದ್ದಿವೆ. ಸೀತಪ್ಪ ಅವರ ಕೈ ಮತ್ತು ಇತರ ಭಾಗಗಳನ್ನು ನಾಯಿಗಳು ಪದೇ ಪದೇ ಕಚ್ಚಿದವು. ಬಳಿಕ ಸ್ಥಳೀಯರು ನಾಯಿಗಳನ್ನು ಓಡಿಸಿ, ಕೂಡಲೇ ಯಲಹಂಕದ ಸರ್ಕಾರಿ ಆಸ್ಪತ್ರೆಗೆ…
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಬಗ್ಗೆ ದೂರುದಾರ ಸಾಕ್ಷಿ ಗುರುತಿಸಿದ 13 ಸ್ಥಳಗಳಲ್ಲಿ ಇಂದು ಶವ ಹೊರ ತೆಗೆಯುವ ಕಾರ್ಯಾಚರಣೆ ಕಾರ್ಯ ಆರಂಭವಾಗಿದೆ. ಸೋಮವಾರ ಮೊದಲು ಗುರುತು ಮಾಡಿದ್ದ ಸ್ಥಳದಿಂದಲೇ ಸಮಾಧಿ ಅಗೆಯುವ ಕೆಲಸಕ್ಕೆ ಎಸ್ ಐಟಿ ಮುಂದಾಗಿದೆ. ಅದಕ್ಕಾಗಿ 12 ಕಾರ್ಮಿಕರನ್ನು ನಿಯೋಜನೆ ಮಾಡಿಕೊಂಡಿದೆ. ಗ್ರಾಮ ಪಂಚಾಯಿತಿಯಿಂದ 12 ಕಾರ್ಮಿಕರನ್ನ ನಿಯೋಜನೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಧರ್ಮಸ್ಥಳ ಗ್ರಾಪಂ ನಿಂದ ಉತ್ಖನನಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ. ಸ್ಟೆಲ್ಲಾ ವರ್ಗೀಸ್, ಕಂದಾಯ ಇಲಾಖೆ ಇತರ ಸಿಬ್ಬಂದಿಗಳೂ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಇಂದಿನಿಂದ ಸಮಾಧಿ ಅಗೆಯುವ ಕಾರ್ಯ ಶುರುವಾಗಲಿದೆ. ನೇತ್ರಾವತಿ ಸ್ನಾನಘಟ್ಟದ ಬಳಿ ಈಗಾಗಲೇ ಸಿಬ್ಬಂದಿಗಳು ಬಂದಿದ್ದು, 12 ಕಾರ್ಮಿಕರ ತಂಡ ಆರೆ, ಪಿಕಾಸಿ, ಗುದ್ದಲಿ ಜೊತೆಗೆ ಸಮಾಧಿ ಅಗೆಯಲು ಬೇಕಾದ ಎಲ್ಲ ಸಾಮಗ್ರಿಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ನಾಲ್ವರು ವೈದ್ಯರು, ಸಹಾಯಕ ಸಿಬ್ಬಂದಿ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಕೆಲವೇ ಕ್ಷಣಗಳಲ್ಲಿ ಇವರೆಲ್ಲರ ಸಮಕ್ಷಮದಲ್ಲಿ ಸಮಾಧಿ ಅಗೆಯುವ ಕೆಲಸ…
ಬೆಂಗಳೂರು: ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಬೆಂಗಳೂರಿನ ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಲಾರ ಮೂಲದ ಗಣೇಶ್, ಮುನಿರಾಜ್ ಮತ್ತು ಶಿವಕುಮಾರ್ ಬಂಧಿತರು ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಐದು ತಂಡ ರಚಿಸಿ ತನಿಖೆ ನಡೆಸಿದ್ದ ಕಲಾಸಿಪಾಳ್ಯ ಠಾಣೆ ಪೊಲೀಸರು ಸದ್ಯ ಮೂವರನ್ನು ಬಂಧಿಸುವ ಮೂಲಕ ಬಂಧಿತರಿಂದ 22 ಜಿಲೆಟಿನ್ ಜೆಲ್, 30 ಡಿಟೋನೇಟರ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ಕೆಲವು ಆರೋಪಿಗಳ ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ. ಇನ್ನು ಬಂಧಿತ ಆರೋಪಿಗಳ ವಿಚಾರಣೆ ವೇಳೆ ಕೆಲವು ಮಾಹಿತಿ ಬಹಿರಂಗಗೊಂಡಿವೆ. ಆರೋಪಿಗಳು ಸ್ಫೋಟಕಗಳನ್ನು ಬ್ಯಾಗ್ನಲ್ಲಿ ತೆಗೆದುಕೊಂಡು ಬಂದಿದ್ದಾರೆ. ನಂತರ ಬಸ್ ನಿಲ್ದಾಣದಲ್ಲಿರು ಶೌಚಾಲಯಕ್ಕೆ ತೆರಳಿದ್ದು, ಬ್ಯಾಗ್ಗಳನ್ನು ಹೊರಗಡೆ ಇಟ್ಟು ಹೋಗಿದ್ದಾರೆ. ಈ ವೇಳೆ ಹೊರ ಬಂದಾಗ ಅಲ್ಲಿ ಹೋಮ್ ಗಾರ್ಡ್ಸ್ ಇರುವುದನ್ನು ನೋಡಿ ಬೆದರಿ ಅಲ್ಲಿಯೇ ಬ್ಯಾಗ್ ಬಿಟ್ಟು ಹೋಗಿದ್ದಾರೆ ಎನ್ನುವ ಮಾಹಿತಿ ಪತ್ತೆಯಾಗಿದೆ. ಕೋಲಾರದಲ್ಲಿ ಜಿಲೆಟಿನ್ ಕಡ್ಡಿಗಳನ್ನು ಖರೀದಿಸಿದ್ದಾರೆ. ಆರೋಪಿಗಳು ಸ್ಫೋಟಕಗಳನ್ನು…
ಕಲಬುರಗಿ: ತಂದೆಯ ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸಿದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಂದೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ತಾಯಿ ದಿವ್ಯಾಂಗರಾಗಿದ್ದು, ಹೀಗಾಗಿ ಬಾಲಕಿಯೇ ತಂದೆಯ ಆರೈಕೆ ಬಂದಿದ್ದಳು. ಆ ಸಂದರ್ಭದಲ್ಲಿ ಆಸ್ಪತ್ರೆಯ ಸ್ವಚ್ಛತಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿಯೇ ಕೃತ್ಯ ಎಸಗಿದ್ದಾನೆ. ಬಾಲಕಿಯ ಆರ್ಥಿಕ ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ಸಿಬ್ಬಂದಿ ಸಂಪತ್ ಕಿವಡೇಕರ್ ಎಂಬಾತ ಆಕೆಯನ್ನು ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸದ್ಯ ಸಂಪತ್ ಕಿವಡೇಕರ್ ನನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC