Author: admin

ವಿಜಯಪುರ:  ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯತಿಯಿಂದ ಪೂರೈಕೆಯಾಗುವ ನೀರು ಕುಡಿದು ಕಳೆದ ಮೂರು ದಿನಗಳಿಂದ 30 ಕ್ಕೂ ಅಧಿಕ ಜನ ಅಸ್ವಸ್ಥಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯರ ತಂಡ ಗ್ರಾಮದಲ್ಲಿ ಬೀಡುಬಿಟ್ಟಿದೆ. ಎರಡು ಆ್ಯಂಬುಲೆನ್ಸ್ ಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ವಿಜಯಪುರ, ಬಸವನ ಬಾಗೇವಾಡಿ, ಬಾಗಲಕೋಟೆ ಆಸ್ಪತ್ರೆಗಳಲ್ಲಿ  ಅಸ್ವಸ್ಥಗೊಂಡವರು ದಾಖಲಾಗಿದ್ದಾರೆ. ಜೊತೆಗೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಓರ್ವನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ ಮಾಡಿಲಾಗಿದೆ.  ಊರಿನ ಬಹುತೇಕ ಜನರು ಆಸ್ಪತ್ರೆಗಳಲ್ಲಿ ಠಿಕಾಣಿ ಹೂಡಿದ್ದು, ದಿನೇ ದಿನೇ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಡೇಟಿಂಗ್‌ ಆ್ಯಪ್‌ ನ ಮೂಲಕ ಪರಿಚಯವಾಗಿದ್ದ ಉದ್ಯೋಗಿಯನ್ನು ಭೇಟಿಗೆ ಆಹ್ವಾನಿಸಿ, ಸುಲಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಯಲಹಂಕ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸಂಗೀತಾ ಸಹಾನಿ (36), ಬೀರಬಲ್ ಮಜ್ಜಗಿ(21), ಅಭಿಷೇಕ್(19), ಶ್ಯಾಮ್ ಸುಂದರ್ ಪಾಂಡೆ(20), ರಾಜು ಮಾನೆ (34) ಹಾಗೂ ಶರಣಬಸಪ್ಪ ಬಾಳಿಗೆರ್ (50) ಬಂಧಿತರು. ತೆಲಂಗಾಣ ರಾಜ್ಯದ ರಾಕೇಶ್‌ ರೆಡ್ಡಿ ಅವರು ನೀಡಿದ ದೂರು ಆಧರಿಸಿ ನಗರದ ವಿವಿಧ ಸ್ಥಳಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ. ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಟೆಕ್ಕಿಯನ್ನು ಲೈಂಗಿಕ ಸಂಪರ್ಕದ ಆಮಿಷವೊಡ್ಡಿ ತನ್ನ ರೂಮಿಗೆ ಕರೆದೊಯ್ದು, ಸ್ನೇಹಿತರ ಜೊತೆ ಸೇರಿ 2 ಲಕ್ಷ ರೂ. ದರೋಡೆ ಮಾಡಿದ್ದಾರೆ. 15 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ರಾಕೇಶ್ ರೆಡ್ಡಿ ಅವರು ಮಹದೇವಪುರದಲ್ಲಿ ಇರುವ ಬೋಯಿಂಗ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಂದ ಆರೋಪಿಗಳು ₹2 ಲಕ್ಷ ಸುಲಿಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಮಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಅಸಹಜ ಸಾವು ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ–ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದಾನೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಸೋಮವಾರ ತನಿಖೆಯನ್ನು ಚುರುಕುಗೊಳಿಸಿದ್ದು, ಶವಗಳನ್ನು ಹೂಳಲಾಗಿದೆ ಎಂಬ ಸಾಕ್ಷಿ–ದೂರುದಾರನ ಹೇಳಿಕೆ ಅನ್ವಯ ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಸೋಮವಾರ ಪರಿಶೀಲನೆ ನಡೆಸಿತು. ಸಾಕ್ಷಿ–ದೂರುದಾರರು ಸೋಮವಾರ ಬೆಳಿಗ್ಗೆ 11.30 ರ ಸುಮಾರಿಗೆ ಕಾನೂನು ಸಲಹೆಗಾರರೊಂದಿಗೆ ಬೆಳ್ತಂಗಡಿಯಲ್ಲಿರುವ ಎಸ್‌ ಐಟಿ ಕಚೇರಿಗೆ ಮುಸುಕುಧಾರಿ ವ್ಯಕ್ತಿಯಾಗಿ ಆಗಮಿಸಿದರು. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು, ಒಂದು ಗಂಟೆ ವಿಚಾರಣೆ ನಡೆಸಿ ಕೆಲವು ದಾಖಲಾತಿ ಕಾರ್ಯಗಳನ್ನು ಪೂರ್ಣಗೊಳಿಸಿದ ನಂತರ, ಸಾಕ್ಷಿ–ದೂರುದಾರ ವ್ಯಕ್ತಿಯನ್ನು ಮೊದಲಿಗೆ ನೇತ್ರಾವತಿ ಸ್ನಾನಘಟ್ಟ ಪ್ರದೇಶಕ್ಕೆ ಕರೆದೊಯ್ದರು, ಅಲ್ಲಿ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದ ಸ್ಥಳವನ್ನು ತೋರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ದೊಡ್ಡಬಳ್ಳಾಪುರ ದೇವಸ್ಥಾನಕ್ಕೆ ಹೋಗಿದ್ದ ವೇಳೆ ದುಷ್ಕರ್ಮಿಗಳು ಡ್ಯಾಗ್ರರ್ ತೋರಿಸಿ ನಟ ಪ್ರಥಮ್ ಗೆ ಡಿ ಬಾಸ್ ಅಭಿಮಾನಿಗಳು ಜೀವಬೆದರಿಕೆ ಹಾಕಿದ್ದರು ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಡಿ ಕಂಪೆನಿ ಹಾಗೂ ನಟ ಪ್ರಥಮ್ ನಡುವೆ ವಾರ್ ಮುಂದುವರಿದಿದೆ. ಪ್ರಥಮ್ ಆರೋಪಕ್ಕೆ ಡಿ ಕಂಪೆನಿ ಉತ್ತರ: ಪ್ರಥಮ್ ಮೇಲೆ ಹಲ್ಲೆ ಪ್ರಕರಣ ಸತ್ಯ ಹೊರ ಬಂದಿದೆ , ರೌಡಿಗಳ ಜೊತೆ ಹೋಗಿ ಅವರ ಕಾರ್ಯಕ್ರಮದಲ್ಲಿ ಅವರ ಹತ್ತಿರನೇ ತಿಂದು ಅವರಿಗೆ ರೇಗಿಸಿ ಬ್ರೆಡ್ ಚಿಪ್ಸ್ ಕೇಳಿ ಖಾರ ಬನ್ ತಿಂದ ಪ್ರಕರಣವಿದು, ನಮ್ಮ ಪ್ರಶ್ನೆ ದರ್ಶನ ಅವರು ಜೈಲಲ್ಲಿ ಇದ್ದಾಗ ಅಭಿಮಾನಿಗಳಿಗೆ ಪ್ರಚೋದನೆ ಹೇಳಿಕೆ ನೀಡಿ ಕಾಮೆಂಟ್ ಮಾಡಿದವರ ವಿರುದ್ಧ ಸಾಲು ಸಾಲು ದೂರು ದಾಖಲಿಸಿದ ಕುತಂತ್ರಿಗೆ ? ಹಲ್ಲೆ ನಡೆದರೂ ದೂರು ನೀಡಿದಷ್ಟು ಒಳ್ಳೆ ಮನಸ್ಸು ಇದೆಯಾ?  ಕಾರಣ ಇಷ್ಟೇ ಅಂದು ಪೊಲೀಸ್ ದೂರು ನೀಡಲು ವೈದ್ಯರ ವರದಿ ಬೇಕು ಸರ್ಕಾರಿ ಆಸ್ಪತ್ರೆಗೆ ಹೋದರೆ ವೈದ್ಯರ ಪರೀಕ್ಷೆಯಲ್ಲಿ ಕುಡಿದಿರುವುದು ಬೆಳಕಿಗೆ ಬರುತ್ತದೆ…

Read More

ದಾವಣಗೆರೆ:  ಪತಿಯನ್ನು ಹತ್ಯೆ ಮಾಡಿ ಕೇರಳಕ್ಕೆ ಪರಾರಿಯಾಗಿ ಪ್ರಿಯಕರನೊಂದಿಗೆ ವಾಸಿಸುತ್ತಿದ್ದ ಪತ್ನಿಯನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಲಕ್ಷ್ಮೀ (38) ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಪ್ರಿಯಕರ ತಿಪ್ಪೇಶ್ ನಾಯ್ಕ್ (42) ಮತ್ತು ಸಂತೋಷ್‌ (40)  ಬಂಧಿತ ಆರೋಪಿಗಳಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತ್ಯಾಗದಕಟ್ಟೆಯ ನಿವಾಸಿ ಲಕ್ಷ್ಮೀ ಮತ್ತು ಚನ್ನಗಿರಿ ತಾಲೂಕಿನ ಅಣ್ಣಾಪುರ ಗ್ರಾಮದ ನಿವಾಸಿಯಾಗಿದ್ದ ನಿಂಗಪ್ಪ ಮದುವೆಯಾಗಿ ಎಂಟು ವರ್ಷ ಕಳೆದಿದೆ. ಮದುವೆಯಾಗಿ ಎಂಟು ವರ್ಷ ಕಳೆದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಮಕ್ಕಳ ಭಾಗ್ಯ ಪಡೆಯಲು ಲಕ್ಷ್ಮೀ ಪತಿಯೊಂದಿಗೆ ಸುತ್ತದ ದೇವಾಲಯವಿರಲಿಲ್ಲ, ಹೋಗದ ಆಸ್ಪತ್ರೆಗಳಿರಲಿಲ್ಲ. ಕೊನೆಗೆ ಒಂದು ದಿನ ನಿಂಗಪ್ಪನಿಗೆ ಮಕ್ಕಳಾಗುವ ಯೋಗವಿಲ್ಲ ಎಂಬುದು ಗೊತ್ತಾಗಿದೆ. ನಿಂಗಪ್ಪ ಅಡಿಕೆ ಕೆಲಸ ಮಾಡುತ್ತಿದ್ದು ಆತನ ಸ್ನೇಹಿತರಾದ ತಿಪ್ಪೇಶ್ ನಾಯ್ಕ್​ ಹಾಗೂ ಸಂತೋಷ್ ಕೂಲಿ ಕೆಲಸಕ್ಕೆ ಬರುತ್ತಿದ್ದರು. ಆಗ, ತಿಪ್ಪೇಶ್ ನಾಯ್ಕ್​ಗೆ ಲಕ್ಷ್ಮೀಯ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿ, ಅನೈತಿಕ ಸಂಬಂಧ ಬೆಳದಿದೆ. ಇದರ ಪರಿಣಾಮವಾಗಿ ಲಕ್ಷ್ಮೀ ಗರ್ಭಿಣಿಯಾಗಿದ್ದಳು. ತನಗೆ ಮಕ್ಕಳು…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದ ನಟಿ ರಮ್ಯಾ ವಿರುದ್ಧ ನಟ ದರ್ಶನ್ ಫ್ಯಾನ್ಸ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್​ ಮತ್ತು​ ನಟಿ ರಮ್ಯಾ ನಡುವೆ ವಾರ್ ಆರಂಭಗೊಂಡಿದೆ. ಮೃತನ ಫ್ಯಾಮಿಲಿ ಪರ ನಿಂತ ನನಗೆ ದರ್ಶನ್​ ಫ್ಯಾನ್ಸ್ ಅಶ್ಲೀಲ ಮೆಸೇಜ್​​ಗಳನ್ನ ಕಳಿಸುತ್ತಿದ್ದಾರೆ ಎಂದು ನಟಿ ರಮ್ಯಾ ಆರೋಪ ಮಾಡಿದ್ದಾರೆ. ಅಲ್ಲದೇ ದರ್ಶನ್​ ಅಭಿಮಾನಿಗಳು ಈ ಮಟ್ಟಕ್ಕೆ ಇಳಿಯಬಾರದು ಎಂದು ರಮ್ಯಾ ಕಿಡಿಕಾರಿದ್ದಾರೆ. ಈ ಸಂಬಂಧ  ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಟ ದರ್ಶನ್ ಫ್ಯಾನ್ಸ್ ಕಮೆಂಟ್ ಬಗ್ಗೆ ನಟಿ ರಮ್ಯಾ ಅವರು ಮೊದಲು ದೂರು ನೀಡಲಿ ಬಳಿಕ ಪೊಲೀಸರು ಏನು ಕ್ರಮ‌ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತಾರೆ. ಸೈಬರ್ ಕ್ರೈಂ ಅವರು ಯಾವುದು ಸೆನ್ಸಿಟೀವ್ ಇರುತ್ತೆ ಅಂತವರನ್ನ ಬ್ಲಾಕ್ ಮಾಡ್ತಾರೆ. ಇಲ್ಲವೇ ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತಾರೆ ಎಂದು ಪರಮೇಶ್ವರ್​ ಹೇಳಿದ್ದಾರೆ. ಈ ಬಗ್ಗೆ ದೂರು ಯಾರಾದ್ರು…

Read More

ಬೆಂಗಳೂರು: ಎಸ್‌ ಸಿಎಸ್‌ಪಿ/ಟಿಎಸ್‌ ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು. ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದ್ದಾರೆ. ಒಂದು ಕಡೆ…

Read More

ಮೈಸೂರು: ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಹೇಳಿಕೆಗೆ ಸಿಎಂ ಪುತ್ರ ಹಾಗೂ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ಯಾವುದೇ ಕಾರಣಕ್ಕೂ ಕ್ಷಮೆ ಕೇಳೋದಿಲ್ಲ ಎಂದು ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾಲ್ವಡಿ ಅವರ ಕೊಡುಗೆಗಳನ್ನ ಗೌಣ ಮಾಡಬೇಕು ಅಂತ ಹೇಳಿಲ್ಲ. ಮೈಸೂರು ಅಭಿವೃದ್ಧಿಗೆ ನಾಲ್ವಡಿ ಅವರನ್ನ ಬಿಟ್ರೆ ಹೆಚ್ಚು ಅನುದಾನ ಕೊಟ್ಟಿರುವುದು ಸಿಎಂ ಸಿದ್ದರಾಮಯ್ಯ ಅಂತ ಹೇಳಿದ್ದೇನೆ. ನಮ್ಮಪ್ಪ ಮುಖ್ಯಮಂತ್ರಿಯಾದ ಮೇಲೆ ಕೊಟ್ಟಷ್ಟು ಅನುದಾನವನ್ನ ಬೇರೆ ಯಾವ ಮುಖ್ಯಮಂತ್ರಿಗಳೂ ಕೊಟ್ಟಿಲ್ಲ. ಅದನ್ನ ಮಾತ್ರ ನಾನು ಹೇಳಿದ್ದು. ಬಹಿರಂಗವಾಗಿ ಕ್ಷಮೆ ಕೇಳುವುದಿಲ್ಲ ಎಂದು ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ದಿನಾಂಕ: 28—07–2025 ರಂದು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಭೆಯನ್ನು ಕಾರಣಾಂತರದಿಂದ ದಿನಾಂಕ: 29–07–2025 ರಂದು ಟೌನ್‌ಹಾಲ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಮಯ ಬೆಳಗ್ಗೆ 11.00 ಗಂಟೆಗೆ ಮುಂದೂಡಲಾಗಿದೆ. ಈ ಸಭೆಯನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐ.ಪಿ.ಎಸ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಉಪಾಧೀಕ್ಷಕರುಗಳ ಸಮ್ಮುಖದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಾಗಬೇಕಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್: ರಾಜ್ಯಗಳು ಒಳಮೀಸಲಾತಿ ಜಾರಿ ಮಾಡಬಹುದೆಂದು 2024 ರ ಆ.1 ರಂದು ಸುಪ್ರಿಂ ಕೋರ್ಟ್ ತೀರ್ಪು ನೀಡಿತ್ತು. ಆ ತೀರ್ಪಿಗೆ ಬರುವ ಆ.1 ಕ್ಕೆ ಒಂದು ವರ್ಷ ತುಂಬುತ್ತದೆ. ಆದರೂ ನಮ್ಮ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಲಿಲ್ಲ. ಹಾಗಾಗಿ ಬರುವ ಆ.1 ರಂದು ಅರೆಬೆತ್ತಲೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಕಾರ್ಯಾಧ್ಯಕ್ಷ ಫರ್ನಾಂಡೀಸ್ ಹಿಪ್ಪಳಗಾಂವ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಕುಂಟು ನೆಪವೊಡ್ಡಿ ವಿಳಂಬ ಮಾಡುತ್ತಿದೆ. ಇದುವರೆಗೆ ಕೇವಲ 80 ರಷ್ಟು ಮಾತ್ರ ಜಾತಿ ಜನಗಣತಿ ಮಾಡಲಾಗಿದೆ. ಬೆಂಗಳೂರಲ್ಲಂತೂ ಅದು ಶೇ. 40 ರಷ್ಟು ಕೂಡ ದಾಟಲಿಲ್ಲ ಎಂದು ಆರೋಪಿಸಿದರು. ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ ಹಾಗೆ ಸಿಎಂ ಸಿದ್ದರಾಮಯ್ಯ ಕೇಳುತ್ತಿದ್ದಾರೆ. ಅವರಿಗೆ ಒಳಮೀಸಲಾತಿ ಜಾರಿ ಮಾಡುವ ಮನಸ್ಸಿಲ್ಲ. ಮಾದಿಗ ಸಮುದಾಯದ ಸಚಿವರಿಗೆ ಮಾನ,…

Read More