Subscribe to Updates
Get the latest creative news from FooBar about art, design and business.
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
- ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
- ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
Author: admin
ಕೊರಟಗೆರೆ : ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದೇವಾಲಯಕ್ಕೆ 800 ವರ್ಷಗಳ ಇತಿಹಾಸವಿದೆ. ರಾಜ್ಯದ ಅನೇಕ ಭಾಗಗಳಲ್ಲಿ ಸ್ವಾಮಿಯ ಭಕ್ತರಿದ್ದಾರೆ. ಸಮಿತಿಯು ರಾಜ ಗೋಪುರ ಅಭಿವೃದ್ಧಿಗೆ ತೀರ್ಮಾನಿಸಿದ್ದು, ಭಕ್ತರ ಸಹಕಾರ ಅಗತ್ಯವಾಗಿದೆ ಎಂದು ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ವಿ.ರಾಮಮೂರ್ತಿ ತಿಳಿಸಿದರು. ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಾಲಯ ರಾಜಗೋಪುರ ನೀಲಿನಕ್ಷೆ ಈಗಾಗಲೇ ಸಿದ್ದವಾಗಿದೆ. 45 ಅಡಿ ಎತ್ತರ, 23 ಅಡಿ ಅಗಲ, ಬಾಗಿಲು ಕಲ್ಲು ಎತ್ತರ 16 ಅಡಿಯನ್ನು ಹೊಂದಿದೆ. ರಾಜಗೋಪುರ ಅಭಿವೃದ್ಧಿಗೆ ಗಾರೆ, ಸುಣ್ಣ, ಚಿನ್ನ, ಇಟ್ಟಿಗೆ, ಕಲ್ಲು, ಸಿಮೆಂಟ್ ಬಳಸಲಿದ್ದು, ಮುಜುರಾಯಿ ಇಲಾಖೆ ಒಳಪಟ್ಟ ದೇವಾಲಯವಾದ್ದರಿಂದ 10 ಲಕ್ಷ ನೀಡುವಂತೆ ಸಮಿತಿಯು ಈಗಾಗಲೇ ಮನವಿ ಮಾಡಿದೆ ಎಂದು ಹೇಳಿದರು. ಗುತ್ತಿಗೆದಾರ ಮಹಾಲಿಂಗಪ್ಪ ಮಾತನಾಡಿ, ಕೊರಟಗೆರೆ ತಾಲ್ಲೂಕು ಪುಣ್ಯಕ್ಷೇತ್ರಗಳ ಬೀಡು. ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯ ತನ್ನದೇ ಆದ ಇತಿಹಾಸವನ್ನು…
ಸರಗೂರು: ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇತ್ತೀಚೆಗೆ ನಡೆದ ಧೀವರು ಮತ್ತು ಜಾತಿ ಗಣತಿ ಕುರಿತು ಒಂದು ಸಮಾಲೋಚನೆ ನಡೆಯಿತು. ಆ ಸಭೆಯಲ್ಲಿ ಹಿರಿಯರಾದ ಮಧು ಗಣಪತಿ ರಾವ್ ಡಾ.ಜಿ.ಡಿ.ನಾರಾಯಣಪ್ಪ ಶಿವಾನಂದ ಕುಗ್ವೆ ಧರ್ಮರಾಜು ಮಂಜಪ್ಪ ಡಿ.ಆರ್.ಮೋಹನ್ ಚಂದ್ರಗುತ್ತಿ ಇನ್ನೂ ಹಲವಾರು ಮುಖಂಡರು ಭಾಗವಹಿಸಿ ಆ ಸಭೆಯಲ್ಲಿ ಜಾತಿ ಗಣತಿಯನ್ನು ಧೀವರು ಎಂದು ನಮೂದಿಸಬೇಕು ಎಂದು ನಿರ್ಣಯ ಮಾಡಿದ್ದಾರೆ ಅದು ಸರಿಯಲ್ಲ. ಸರ್ಕಾರ ಸೌಲಭ್ಯಗಳನ್ನು ಪಡೆಯಲು ಅನುಕೂಲವ ನಿಟ್ಟಿನಲ್ಲಿ ನಾವುಗಳು ಧೀವರು ಅನ್ನೋ ಬದಲು ಈಡಿಗ ಎಂದು ಜಾತಿ ಆದಾಯ ಪತ್ರ ನಮೂದಿಸಿ. ಆದ್ದರಿಂದ ಶಿವಮೊಗ್ಗ, ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಾಗಿರುವುದರಿಂದ ನಮ್ಮ ಸಮಾಜದವರು ಇರುವುದರಿಂದ ಈಡಿಗ ಎಂದು ನಮೂದಿಸಬೇಕು ಎಂದು ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆ ಆರ್ಯ ಈಡಿಗ ಸಮಾಜದ ಸಂಘಟನಾ ಕಾರ್ಯದರ್ಶಿ ಹಾಗೂ ಸರಗೂರು ತಾಲೂಕು ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎಸ್.ಎನ್.ನಾಗರಾಜು ಒತ್ತಾಯಿಸಿದರು. 12ನೆ ಶತಮಾನದಲ್ಲಿ ಹೆಂಡದ ಮಾರಾಯ ಸೇಂದಿಯನ್ನು ಇಳಿಸಿ ವ್ಯಾಪಾರ ಮಾಡುತ್ತ ಬಂದಿದ್ದರು ಅದಾದ…
ಕೊರಟಗೆರೆ : ಕೊರಟಗೆರೆ ಪಟ್ಟಣದ ಬೀದಿಗಳಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಾಯಿಗಳು ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು, ಮಹಿಳೆಯರ ಮೇಲೆ ಹಲ್ಲೆ ನಡೆಸುತ್ತಿದ್ದು, ಸಾರ್ವಜನಿಕರು ಪಟ್ಟಣದ ರಸ್ತೆಯಲ್ಲಿ ಓಡಾಡಲು ಭಯ ಉಂಟು ಮಾಡುವ ವಾತಾವರಣ ನಿರ್ಮಾಣವಾಗಿದೆ. ಕೊರಟಗೆರೆ ಪಟ್ಟಣದಲ್ಲಿ ಮಾಂಸ ಮತ್ತು ಚಿಕನ್ ಮಾರಾಟ ಅಂಗಡಿಗಳ ಬಳಿ ಹಾಗೂ ಮಾರಮ್ಮ ದೇವಾಲಯ, ಕಟ್ಟೆಗಣಪತಿ ದೇವಾಲಯ ರಸ್ತೆ, ದೊಡ್ಡಪೇಟೆ ಸೇರಿದಂತೆ ಪಟ್ಟಣದ ಎಲ್ಲಾ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ಬೀದಿನಾಯಿಗಳು, ಗುಂಪು–ಗುಂಪುಗಳಾಗಿ ಓಡಾಡುತ್ತಿದ್ದು 10 ರಿಂದ 15 ನಾಯಿಗಳು ಗುಂಪುಗಳಾಗಿ ಓಡಾಡುವುದರಿಂದ ಸಾರ್ವಜನಿಕರಿಗೆ ಭಯದ ವಾತಾವರಣ ಉಂಟಾಗಿದೆ. ರಸ್ತೆಗಳಲ್ಲಿ ಮಾಂಸ ಮತ್ತು ಚಿಕನ್ ಮಾರಾಟ ಅಂಗಡಿಗಳ ಮುಂದೆ ಹಸಿ ಮಾಂಸ ಮತ್ತು ಹೊಟೇಲ್‌ಗಳ ಮುಂದೆ ತ್ಯಾಜ್ಯಗಳನ್ನು ಬಿಸಾಡುವುದರಿಂದ ಅವುಗಳನ್ನು ತಿನ್ನುವ ನಾಯಿಗಳು ಗುಂಪು–ಗುಂಪಾಗಿ ಪಟ್ಟಣದ ರಸ್ತೆಗಳಲ್ಲಿ ಓಡಾಡುತ್ತಿದ್ದು ಹಸಿ ಮಾಂಸ ತಿಂದ ನಾಯಿಗಳು ರಸ್ತೆಯಲ್ಲಿ ಓಡಾಡುವ ಮನಷ್ಯರ ಮೇಲೂ ದಾಳಿ ನಡೆಸುತ್ತಿವೆ, ಮುಂಜಾನೆ ಮತ್ತು ಸಂಜೆ ನಡೆದಾಡುವವರನ್ನು ದ್ವಿಚಕ್ರ ವಾಹನ ಸವಾರರನ್ನು ಶಾಲೆಗೆ ಹೋಗುವ ವಿದ್ಯಾರ್ಥಿಗಳನ್ನು…
ಸರಗೂರು: ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿ ಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಳ್ಳಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು. ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ…
ಚಿಕ್ಕಮಗಳೂರು: ಮಗ ಪಿಕಪ್ ಸಹಿತವಾಗಿ ಭದ್ರಾ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆಯಿಂದ ನೊಂದು ಮಗನ ಮೃತದೇಹ ಸಿಗುವುದಕ್ಕೂ ಮೊದಲೇ ತಾಯಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನ ರವಿಕಲಾ (48) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಸಾವನ್ನಪ್ಪಿದ್ದರು. ಈ ವೇಳೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ನಗರದ ಖಾಸಗಿ ಶಾಲೆಯೊಂದರ ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಗುರುವಾರ (ಜು.24) ಪ್ರಕರಣ ದಾಖಲಾಗಿದೆ. ಜು.23ರಂದು ಬಾಲಕಿ ಎಂದಿನಂತೆ ಶಾಲೆಗೆ ಹೋಗಿ ಮನೆಗೆ ಮರಳಿದ್ದಳು. ಮಗಳ ಶಾಲಾ ಉಡುಪು ತಾಯಿ ಬದಲಿಸುತ್ತಿರುವ ವೇಳೆ ರಕ್ತಸ್ರಾವವಾಗಿರುವುದು ತಾಯಿಗೆ ಗೊತ್ತಾಗಿದೆ. ಹೀಗಾಗಿ ವೈದ್ಯರ ಬಳಿ ಹೋಗಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಮಹಿಳಾ ಠಾಣೆಗೆ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೋಷಕರು ನೀಡಿದ ದೂರಿನ ಮೇರೆಗೆ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ಮಗಳನ್ನು ಚುಡಾಯಿಸಿದ್ದನ್ನ ಪ್ರಶ್ನಿಸಿದ ತಂದೆಗೆ ಆರೋಪಿ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಚಾಕು ಹಾಕಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೊರಟಗೆರೆ ತಾಲೂಕ್ ಸಿಎನ್ ದುರ್ಗಾ ಹೋಬಳಿ ಬೋರಪ್ಪನಹಳ್ಳಿ ಗ್ರಾಮದಲ್ಲಿ ದುರ್ಘಟನೆ ಜರುಗಿದ್ದು, ಶಾಲಾ ವಿದ್ಯಾರ್ಥಿನಿಯನ್ನ ಅನಾವಶ್ಯಕವಾಗಿ ರೇಗಿಸುತ್ತಿದ್ದ ಯುವಕನನ್ನ ಪ್ರಶ್ನಿಸಿದ ತಂದೆ ಗಿರೀಶ್ ಎಂಬುವರ ಮೇಲೆ ಮೂರು ಜನ ದಾಳಿ ನಡೆಸಿ, ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡುವ ಯತ್ನ ಮಾಡಲಾಗಿದೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿಯನ್ನ ಇದೇ ಗ್ರಾಮದ ಪೃಥ್ವಿರಾಜ್ ಎಂಬ ಯುವಕ ಪದೇ ಪದೇ ಚುಡಾಯಿಸುವುದನ್ನು ಪ್ರಶ್ನಿಸಿದ ತಂದೆ ಗಿರೀಶ್ ನನ್ನ ಆರೋಪಿ ಪೃಥ್ವಿರಾಜ್, ಅಣ್ಣ ತಿಮ್ಮೇಗೌಡ ಹಾಗೂ ತಂದೆ ಹನುಮಂತರಾಯ ಎಂಬುವರು ಏಕಾಏಕಿ ಕ್ರಿಕೆಟ್ ಬ್ಯಾಟ್ ನಿಂದ ತಲೆಗೆ ಹೊಡೆದು ನಂತರ ಚಾಕುವಿನಿಂದ ಭುಜ ಭಾಗ ಹಾಗೂ ತೊಡೆ ಸೇರಿದಂತೆ ಹಲವು ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನಪಟ್ಟರು…
ಕೊರಟಗೆರೆ : ಇತಿಹಾಸ ಪ್ರಸಿದ್ಧ ಶ್ರೀ ಮೀನ ಗೊಂದಿ ಮಲೇ ರಂಗನಾಥ ಸ್ವಾಮಿ ದೇವಾಲಯದಲ್ಲಿ ಜು.26 ರಿಂದ ಪ್ರತಿ ಶನಿವಾರ ಶ್ರಾವಣ ಮಾಸದ ಮಹೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು 9 ಮಂದಿ ಬುಡ್ಕಟ್ಟಿನ ಅಣ್ಣತಮ್ಮಂದಿರು ಮನವಿ ಮಾಡಿಕೊಂಡಿದ್ದಾರೆ . ಅವರು ಪ್ರತಿಕಾ ಪ್ರಕಟಣೆ ನೀಡಿ, ಮಧುಗಿರಿ ತಾಲೂಕಿನ ಬಂದ್ರಹಳ್ಳಿ ತೇರಿನ ಬೀದಿ ಒಲಬು ಇಲ್ಲಿ ಪ್ರತಿಷ್ಠಾಪನೆಗೊಂಡಿರುವ ಇತಿಹಾಸ ಪ್ರಸಿದ್ಧ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಶ್ರಾವಣ ಮಾಸದ ಮೊದಲ ಶನಿವಾರ ಜು.26 ರಿಂದ ದೇವಾಲಯದಲ್ಲಿ ಶ್ರೀ ಮೀನಾ ಗೊಂದಿ ಶ್ರೀ ಮಲೆ ರಂಗನಾಥ ಸ್ವಾಮಿ ಗೆ ಪ್ರತಿ ಶ್ರಾವಣ ಶನಿವಾರ ವಿಶೇಷವಾಗಿ ಅಭಿಷೇಕ ಸ್ವಾಮಿಗೆ ವಿಶೇಷ ಅಲಂಕಾರ ಬೆಳಿಗ್ಗೆ 6 ಗಂಟೆ ಯಿಂದ ರಾತ್ರಿ 6 ಗಂಟೆಯವರೆಗೆ ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ಏರ್ಪಡಿಸಲಾಗುದು 9 ಮಂದಿ ಬುಡ್ಕಟ್ಟಿನ ಅಣ್ಣ-ತಮ್ಮಂದಿರು ತಿಳಿಸಿದ್ದಾರೆ. ಶ್ರೀ ಮೀನಗೊಂದಿ ಮಲೆ ರಂಗನಾಥ ಸ್ವಾಮಿ…
ಸರಗೂರು: ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಜಿಲ್ಲೆಯ ನಾನಾ ದೇವಾಲಯಗಳಲ್ಲಿ ಭಕ್ತರು ದಾಂಗುಡಿ ಇಟ್ಟಿದ್ದರು. ಅದರಲ್ಲೂ ಶಿವನ ದೇವಾಲಯಗಳಿಗಂತೂ ಪೂರ್ಣ ಬೇಡಿಕೆ. ಸಹಸ್ರಾರು ಮಂದಿ ಭಕ್ತರು ಶ್ರದ್ಧಾ, ಭಕ್ತಿಯಿಂದ ಪೂಜೆ ಸಲ್ಲಿಸಿದರು ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದ ತಾಯಿಗೆ ಹಾಗೂ ಶ್ರೀ ಕ್ಷೇತ್ರ ಬೇಲದಕುಪ್ಪೆ ಮಹದೇಶ್ಶವರ ದೇವಸ್ಥಾನದಗಳಲ್ಲಿ ಭೀಮನ ಅಮಾವಾಸ್ಯೆಯನ್ನು ದೇವಾಲಯಗಳಿಗೆ ಪೂಜೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. ಗುರುವಾರ ಬೆಳಗಿನಿಂದಲೇ ಭಕ್ತಾದಿಗಳು ದೇವಾಲಯಗಳತ್ತ ಹೆಜ್ಜೆ ಹಾಕಿದರು. ಪ್ರತಿ ಅಮಾವಾಸ್ಯೆಯ ಸಂದರ್ಭದಲ್ಲೂ ತಾಲೂಕಿನ ದೇವಾಲಯಗಳಿಗೆ ತೆರಳಿ, ಪೂಜೆ ಸಲ್ಲಿಸುವುದು ವಾಡಿಕೆ. ಮಾಮೂಲಿಗಿಂತ ಇಂದು ಜ್ಯೋರ್ತಿಭೀಮೇಶ್ವರ ವ್ರತದ ಹಿನ್ನೆಲೆಯಲ್ಲಿ ತಾಲೂಕಿಯಲ್ಲಿ ಹಬ್ಬದ ವಾತಾವರಣ ಕಂಡುಬಂತು. ಕಾಲಿಡಲೂ ಜಾಗವಿಲ್ಲದಂತೆ ಜನಸ್ತೋಮ ದೇವಾಲಯಗಳಲ್ಲಿ ನೆರೆದಿದ್ದು, ವಿಶೇಷವಾಗಿತ್ತು. ಚಿಕ್ಕ ದೇವಮ್ಮನಾ ಬೆಟ್ಟ ಹಾಗೂ ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ, ಪಾಲ್ಗೊಂಡಿದ್ದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನ ಭೀಮನ ಅಮಾವಾಸ್ಯೆ ಪೂಜೆಗೆ ಪ್ರಸಿದ್ಧಿ. ಇಲ್ಲಿಗೆ ಜಿಲ್ಲೆ ಸೇರಿದಂತೆ ನಾನಾ ಗ್ರಾಮಗಳಿಂದ ಆಗಮಿಸಿದ ಭಕ್ತರು ದೇವರದರ್ಶನ ಪಡೆದರು. ಸಾವಿರಾರು ಭಕ್ತಾದಿಗಳಿಗೆ ಗ್ರಾಮಸ್ಥರಿಂದ…
ಬೀದರ್ : ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸುನಿಲ್ ಕುಮಾರ್ ಪ್ರಭಾ, ಚಂದ್ರಪ್ರಕಾಶ್ ಪ್ರಭಾ ಅವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. 2 ಕೋಟಿ 24 ಲಕ್ಷ 57 ಸಾವಿರ ರೂ. ಮೌಲ್ಯದ ಒಟ್ಟು ಸ್ಥಿರ ಆಸ್ತಿ ಪತ್ತೆಯಾಗಿದ್ದು, ಅದರಲ್ಲಿ 3 ಸೈಟ್, ಒಂದು ಮನೆ ಮತ್ತು ಕೃಷಿ ಭೂಮಿ ಸೇರಿದೆ. ಅದೇ ರೀತಿ ಒಟ್ಟು 2 ಕೋಟಿ 35 ಲಕ್ಷ 23 ಸಾವಿರ 897 ರೂ. ಯ ಚರ ಆಸ್ತಿ ಪತ್ತೆಯಾಗಿದ್ದು, ಇದರಲ್ಲಿ 15 ಲಕ್ಷ 75 ಸಾವಿರ 660 ರೂ. ನಗದು, 1 ಕೋಟಿ 26 ಲಕ್ಷ 60 ಸಾವಿರ ರೂ. ಮೌಲ್ಯದ ಆಭರಣ ವಸ್ತು, 12 ಲಕ್ಷ 50 ಸಾವಿರ ರೂ. ಮೌಲ್ಯದ ಆಭರಣ ವಸ್ತು, 12 ಲಕ್ಷ 50…