Author: admin

ಕೊರಟಗೆರೆ : ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ 44ನೇ ಜನ್ಮವರ್ಧಂತಿ ಅಂಗವಾಗಿ ಶ್ರೀ ಮಠದಲ್ಲಿ ವಿವಿಧ ಸಂಘ ಸಂಸ್ಥೆಗಳು, ಮಠದ ವಿದ್ಯಾರ್ಥಿಗಳು, ಗುರುಕುಲ ಸಾಧಕರಿಂದ ಗುರುವಂದನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀಗಳ 44ನೇ ಜನ್ಮವರ್ಧಂತಿ ಕಾರ್ಯಕ್ರಮದ ಅಂಗವಾಗಿ ಪ್ರಾತಃಕಾಲ 6 ಗಂಟೆಯಿಂದ ಶ್ರೀ ಕ್ಷೇತ್ರಧೀಪತಿ ಸಿದ್ದೇಶ್ವರಸ್ವಾಮಿ ಹಾಗೂ ಶ್ರೀಮಠದ ಕರ್ತೃ ಶ್ರೀ ಜಗದ್ಗುರು ರೇಣುಕಾಚಾರ್ಯರು, ಗಣಪತಿ ಮತ್ತು ವೀರಭದ್ರಸ್ವಾಮಿ ಅವರಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಮತ್ತು ಮಹಾ ಮಂಗಳಾರತಿ ನಡೆಯಿತು. ನಂತರ 11 ಗಂಟೆಗೆ ಗುರುವಂದನಾ ಕಾರ್ಯಕ್ರಮದಲ್ಲಿ ಏಲೆರಾಂಪುರ ಕುಂಚಿಟಿಗೆ ಮಹಾಸಂಸ್ಥಾನ ಮಠದ ಡಾ,ಹನುಮಂತನಾಥಸ್ವಾಮೀಜಿ, ರಾಮಮೂರ್ತಿಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧ ಮಠಗಳ ಮಠಾಧೀಶ್ವರರು, ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ತುಮಕೂರು ಕ್ಷೇತ್ರದ ಶಾಸಕ ಜ್ಯೋತಿಗಣೇಶ್ ಸೇರಿದಂತೆ ವಿವಿಧ ಪಕ್ಷಗಳು ಮುಖಂಡರುಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಶ್ರೀಮಠದ ಭಕ್ತರು ಭಾಗವಹಿಸಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ಪಾದ ಪೂಜೆಯೊಂದಿಗೆ ಧಾರ್ಮಿಕ ವಿಧಿ ವಿಧಾನಗಳಿಂದ ಜನ್ಮವರ್ಧಂತಿ…

Read More

ಔರಾದ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್  ಪ್ರತಿಭಟನೆ ನಡೆಸಿತು. ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1.258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ 3 ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿತು. ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ…

Read More

ಸರಗೂರು: ಕಾಡಂಚಿನ ಗ್ರಾಮ ಬಿ ಮಟಕೆರೆ ಈ ಭಾಗದಲ್ಲಿ ಗಿರಿಜನರು, ರೈತರು, ಕೂಲಿ ಕಾರ್ಮಿಕರು, ಹೆಚ್ಚಾಗಿದ್ದು ಇವರಿಗೆ ಅಗತ್ಯ ಇರುವ ಸೇವೆಗಳಾದ ಹೃದಯ ಸಂಬಂಧಿ ಮತ್ತು ಶ್ವಾಸಕೋಶ ಸಮಸ್ಯೆಗಳ ತಪಾಸಣೆ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಟಿ.ರವಿಕುಮಾರ್ ತಿಳಿಸಿದರು. ಹಾರ್ಟ್ ಸಂಸ್ಥೆ ಮೈಸೂರು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹೆಚ್.ಡಿ ಕೋಟೆ, ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಾಮ ಪಂಚಾಯಿತಿ ಬಿ. ಮಟಕೆರೆ, ಅವಾಂಟ್ ಆಸ್ಪತ್ರೆ ಮೈಸೂರು, ಎ. ಎಸ್. ಜಿ. ಕಣ್ಣಿನ ಆಸ್ಪತ್ರೆ ಇವರ ಸಹಯೋಗದೊಂದಿಗೆ ಬುಧವಾರದಂದು  ಬಿ ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಸರಗೂರು ತಾಲೂಕಿನಲ್ಲಿ  ಪ್ರಾಥಮಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ  ಈ  ಶಿಬಿರವನ್ನು ಆಯೋಜಿಸಿದ್ದು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಂಡು ಆರೋಗ್ಯ ಸುಧಾರಿಸಿಕೊಳ್ಳುವಂತೆ  ತಿಳಿಸಿ ಹೇಳಿದರು. ನಂತರ ಮಾತನಾಡಿದ  ಬಿ ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವದಾಸ್,  ಹಣವನ್ನು…

Read More

ಸರಗೂರು:   ತಾಲ್ಲೂಕು  ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮತ್ತು ಶಾಮಿಯಾನ ಮಾಲಿಕರ ಸಂಘದ ನೂತನ ಅಧ್ಯಕ್ಷರಾಗಿ ವಾಸುಕಿ ನಾಗೇಶ್ ವರನ್ನು ಸಂಘದ ಪದಾಧಿಕಾರಿಗಳು ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಪಟ್ಟಣದ ಶಿವರಾತ್ರಿ ಶಿವಾನುಭವ ಮಂದಿರದ ಸೋಮವಾರದಂದು ಹೊರಾಂಗಣದಲ್ಲಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಸರಗೂರು ತಾಲ್ಲೂಕು  ವಿದ್ಯುತ್ ದೀಪಾಲಂಕಾರ ಹಾಗೂ ಧ್ವನಿವರ್ಧಕ ಮತ್ತು ಶಾಮಿಯಾನ ಮಾಲಿಕರು ಸೇರಿ ವಾಸುಕಿ ನಾಗೇಶ್ ರವರನ್ನು ಸರ್ವಾನುಮತದಿಂದ ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಿದರು, ಗೌರವಾಧ್ಯಕ್ಷರಾಗಿ  ಅನ್ನಪೂರ್ಣಶ್ವರಿ ಶಾಮಿಯಾನ ಮಾಲಿಕರಾದ ಎಸ್.ನಾರಾಯಣ್, ಉಪಾಧ್ಯಕ್ಷರಾಗಿ ಆದಿಶಕ್ತಿ ಗಣೇಶ್, ಬಸಾಪುರ ರೇವಣ್ಣ, ನ್ಯಾಷನಲ್ ಶಾಮಿಯಾನ ರಾಹೀಲ್ ಪಾಷ,  ಕಾರ್ಯದರ್ಶಿ ಆಗತ್ತೂರು ಪಿ.ಜವರನಾಯಕ, ಸಹಕಾರ್ಯದರ್ಶಿ ಜನನಿ ವಿಜಯ್ ಕುಮಾರ್, ಎಸ್. ಖಜಾಂಚಿ ಚೌಡೇಶ್ವರಿ ರಂಗಸ್ವಾಮಿ, ನಿರ್ದೆಶಕರಾಗಿ ಇಟ್ನಾ ಸಿದ್ದನಾಯಕ, ಮುಳ್ಳೂರು [ಕಡಜೆಟ್ಟ]ಅಶ್ವತ್ ನಾರಾಯಣ,  ಮುಳ್ಳೂರು ಪ್ರಕಾಶ್, ಮಹೇಶ್,  ಬಿ.ಮಟಕೆರೆ ಮಂಜು, ಹಾಗೂ ನಂದಿಗೌಡ್ರು, ಬಸಾಪುರ ಶಿವಣ್ಣ, ಕಬಿನಿ ಸುರೇಂದ್ರ, ಶಾಂತಿಪುರ ಹರೀಶ್, ಹೊಸ ಬಿದರಹಳ್ಳಿ ಚಿನ್ನಯ್ಯ, ಬೆದ್ದಲಪುರ ಸೋಮೇಶ,  ಕೊತ್ತೇಗಾಲ ನಂದಿ,  ಹೊಸಬೀರ್ವಾಳ್ ಕೇಬಲ್…

Read More

ತುಮಕೂರು: ತುಮಕೂರಿನ ಗೊಲನ ಎಂಟರ್‌ ಪ್ರೈಸಸ್‌ ನಲ್ಲಿ ಇದೀಗ ಉದ್ಯೋಗಾವಕಾಶಗಳು ಲಭ್ಯವಿದ್ದು, ಆಸಕ್ತರು ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಗುತ್ತಿಗೆ ಆಧಾರಿತ ಕೆಲಸಗಳಿಗೆ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಪುರುಷ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ನೀವು ಇಂದು ಕರೆ ಮಾಡಿದರೆ, ನಾಳೆಯೇ ಕೆಲಸಕ್ಕೆ ಸೇರ್ಪಡೆಗೊಳ್ಳಬಹುದಾಗಿದೆ. ಸೌಲಭ್ಯಗಳು: ಆಕರ್ಷಕ ವೇತನ (ಕರ್ನಾಟಕ ಕನಿಷ್ಠ ವೇತನ ಕಾಯ್ದೆ ಅನ್ವಯ) ಸರ್ಕಾರಿ ಅನುಮೋದಿತ ಸೌಲಭ್ಯಗಳು – ESI & EPF ಸುರಕ್ಷಿತ ಮತ್ತು ಉತ್ತಮ ಕೆಲಸದ ವಾತಾವರಣ ವಿದ್ಯಾರ್ಹತೆ: SSLC / PUC / ITI (ಪಾಸ್ / ಫೇಲ್ – ಎಲ್ಲರೂ ಅರ್ಜಿ ಹಾಕಬಹುದು) ಕೆಲಸದ ಸ್ಥಳಗಳು: ಅಂತರಸನಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ವಸಂತನರಸಾಪುರ ಕೈಗಾರಿಕಾ ಪ್ರದೇಶ, ತುಮಕೂರು ಸಂಪರ್ಕಿಸಿ ತಕ್ಷಣ: ‪+91 97417 17700 ‪+91 99863 16494 ‪+91 74831 08699 ‪+91 73489 53684 ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ಇದೇ ಆಗಸ್ಟ್1ಕ್ಕೆ ತೆರೆಗೆ ಬರುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದೆ. ಇನ್ನೂ ಚಿತ್ರ ನೋಡಲು ಯಶ್ ಬರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಪುಷ್ಪಾ ಉತ್ತರಿಸಿದ್ದಾರೆ. ಯಶ್‌ಗೆ ಹೇಳದೇ ಏನು ಮಾಡಿಲ್ಲ ಅವನಿಗೂ ಗೊತ್ತು. ಯಶ್ 25ವರ್ಷ ಆದ್ಮೇಲೆ ರಾಕಿಂಗ್ ಸ್ಟಾರ್ ಅಂತಾ ಗೊತ್ತಾಗಿದ್ದು ನಿಮಗೆ. ಅದರ ಹಿಂದೆ ಅವನು ಪಟ್ಟ ಶ್ರಮ ಎಷ್ಟಿದೆ ಅಂತಾ ನಮಗೆ ಗೊತ್ತು ಎಂದು ಅವರು ಹೇಳಿದರು. ಅವನೇ ಸಿನಿಮಾ ಪ್ರೊಡಕ್ಷನ್ ಮಾಡಲು ನಮಗೆ ಸ್ಫೂರ್ತಿ. ಮನೇಲಿರೋ ಬಾಸ್ (ಯಶ್) ಸಿನಿಮಾ ಮಾಡೋಕೆ ಸ್ಪೂರ್ತಿ ಎಂದಿದ್ದಾರೆ. ಸಿನಿಮಾ ಜನಕ್ಕೆ ಇಷ್ಟ ಆಗಲಿ ಗೆಲ್ಲಲಿ ಆಗ ಅವನು ಖುಷಿ ಪಡ್ತಾನೆ ಎಂದಿದ್ದಾರೆ. ಕೊತ್ತಲವಾಡಿ ಒಂದು ಹಳ್ಳಿಯಲ್ಲಿ ನಡೆಯುವ ಸಿನಿಮಾ. ಹಿಂದೆ ನನ್ನ ಮಗ ಯಶ್ ಕಿರಾತಕ ಸಿನಿಮಾ ಮಾಡಿದ್ದನ್ನ ಈಗಲೂ ನಮ್ಮೂರಿನ ಜನ ನೆನೆದುಕೊಳ್ತಾರೆ. ಆ ಬಗ್ಗೆ ಈಗಲೂ ಮಾತಾಡಿಕೊಳ್ತಾರೆ. ಹಾಗೆ ಈ ಕೊತ್ತಲವಾಡಿ ಸಿನಿಮಾ…

Read More

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ  ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ವಿವಿಧ ಶ್ರೇಣಿಯ 20 ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂಎ ಸಲೀಂ ಆದೇಶಿಸಿದ್ದಾರೆ. ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ. ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿವೈಎಸ್‌ಪಿ ಎ.ಸಿ. ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿವೈಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್‌ ಮಂಜುನಾಥ್, ಸಿಎಸ್‌ಪಿ ಇನ್‌ಸ್ಪೆಕ್ಟರ್‌ ಇ.ಸಿ. ಸಂಪತ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್‌ ಕೆ. ಕುಸುಮಧರ್, ಶಿರಸಿ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್‌ಸ್ಪೆಕ್ಟರ್ ಪಿ.ಡಿ. ಸವಿತ್ರ ತೇಜ್, ಸಿಎಸ್‌ಪಿ ಸಬ್‌ಇನ್‌ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ಇನ್‌ಸ್ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್ಎಂ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಅಂಕೋಲ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆರ್. ಸುಹಾಸ್, ಉತ್ತರ ಕನ್ನಡ ಮುಂಡಗೋಡ ಸಬ್‌ಇನ್‌ಸ್ಪೆಕ್ಟರ್ ವಿನೋದ್ ಎಸ್ ಕಾಳಪ್ಪನವರ್, ಮಂಗಳೂರು ಮೆಕ್ಸಾಂ…

Read More

ಪುಣೆ: ಗಂಡ ಕಾರಿಗಾಗಿ ಲೋನ್ ಮಾಡಿದ್ದು, ಇಎಂಐ ಇನ್ಸ್ಟಾಲ್‌ ಮೆಂಟ್ ತುಂಬುವುದಕ್ಕಾಗಿ ಹೆಂಡ್ತಿಗೆ ತನ್ನ ತವರಿನಿಂದ ಒಂದೂವರೆ ಲಕ್ಷ ರೂಪಾಯಿ ಕೇಳಿಕೊಂಡು ಬರುವಂತೆ ಕಿರುಕುಳ ನೀಡಿದ್ದಾನೆ. ಆದರೆ, ಹಣ ತರುವ ಸ್ಥಿತಿಯಲ್ಲಿಆಕೆ ಇರಲಿಲ್ಲ. ಇದರಿಂದ ಕೋಪಗೊಂಡ ಗಂಡ ಹೀನ ಕೆಲಸಕ್ಕೆ ಕೈ ಹಾಕಿದ್ದಾನೆ. ತನ್ನ ಬೇಡಿಕೆಗೆ ಬಗ್ಗದ ಪತ್ನಿಗೆ ಬುದ್ಧಿ ಕಲಿಸಲು ಪತಿ ಸ್ನಾನ ಗೃಹದಲ್ಲಿ ಕ್ಯಾಮರಾ ಫಿಕ್ಸ್ ಮಾಡಿ ಆಕೆ ಸ್ನಾನ ಮಾಡುತ್ತಿರುವ ದೃಶ್ಯವನ್ನು ಚಿತ್ರೀಕರಿಸಿಕೊಂಡಿದ್ದಾನೆ.  ಬಳಿಕ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಪುಣೆಯ ಅಂಬೇಗಾಂವ್‌ ನಲ್ಲಿ ಈ ಘಟನೆ ನಡೆದಿದ್ದು, 4 ವರ್ಷಗಳ ಹಿಂದೆಯಷ್ಟೇ ಈ ಮಹಿಳೆ ಆರೋಪಿ ಜೊತೆಗೆ ವಿವಾಹವಾಗಿದ್ದಳು. ಸದ್ಯ ಯುವತಿ ತನ್ನ ಗಂಡ ಸೇರಿದಂತೆ 6 ಜನರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಿಂಚುಹುಳುಗಳು ಈಗ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿವೆಯಂತೆ, ನಂಬಲಸಾಧ್ಯವಾದರೂ ಇದು ಸತ್ಯ.  ದೇಶದಲ್ಲಿನ ಒಟ್ಟಾರೆ ಮಿಂಚುಹುಳಗಳ ಪೈಕಿ ಶೇ.76ರಷ್ಚು ಮಿಂಚುಹುಳುಗಳು ಈಗಾಗಲೇ ನಶಿಸಿ ಹೋಗಿವೆ ಎಂದು ಅಧ್ಯಯನವೊಂದು ತಿಳಿಸಿದೆ. ಭಾರತೀಯ ವನ್ಯಜೀವಿ ಸಂಸ್ಥೆ (WII) ಸಹಯೋಗದೊಂದಿಗೆ ಇಬ್ಬರು ವಿಜ್ಞಾನಿಗಳು ನಡೆಸಿದ ಇತ್ತೀಚಿನ ರಾಷ್ಟ್ರವ್ಯಾಪಿ ಮಿಂಚುಹುಳುಗಳ ಜನಗಣತಿಯು ಕೇವಲ ಒಂದು ವರ್ಷದೊಳಗೆ ದೇಶಾದ್ಯಂತ ಅವುಗಳ ಸಂಖ್ಯೆಯಲ್ಲಿ ತೀವ್ರ ಮತ್ತು ಕಳವಳಕಾರಿ 76 ಪ್ರತಿಶತದಷ್ಟು ಕುಸಿತವನ್ನು ಬಹಿರಂಗಪಡಿಸಿದೆ. ಡೆಹ್ರಾಡೂನ್‌ನ ಗ್ರಾಫಿಕ್ ಎರಾ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ ಡಾ. ವೀರೇಂದ್ರ ಪ್ರಸಾದ್ ಉನಿಯಾಲ್ ಮತ್ತು ಡಾ. ನಿಧಿ ರಾಣಾ ಅವರು ಪ್ರಾರಂಭಿಸಿದ ಪ್ರವರ್ತಕ ರಾಷ್ಟ್ರವ್ಯಾಪಿ ಮಿಂಚುಹುಳು ಜನಗಣತಿಯ ನಂತರ ಈ ವಾಸ್ತವಾಂಶವು ಬೆಳಕಿಗೆ ಬಂದಿದೆ. ಈ ಸಂಯೋಜಿತ ಅಂಶಗಳು ಮಿಂಚುಹುಳುಗಳ ನೈಸರ್ಗಿಕ ಜೀವನ ಚಕ್ರವನ್ನು ತೀವ್ರವಾಗಿ ಅಡ್ಡಿಪಡಿಸುತ್ತಿವೆ ಮತ್ತು ಅವುಗಳ ಜನಸಂಖ್ಯೆಯನ್ನು ತೀವ್ರವಾಗಿ ಅಪಾಯಕ್ಕೆ ಸಿಲುಕಿಸುತ್ತಿವೆ ಎಂದು ಉನಿಯಾಲ್ ವಿವರಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಕೊಪ್ಪಳ:  ಪೈಪ್ ನ ಮೇಲೆ ತುಂಗಭದ್ರಾ ಎಡದಂಡೆ ಕಾಲುವೆ ದಾಟಲು ಮುಂದಾಗಿದ್ದ ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕರೆಕಲ್ ಕ್ಯಾಂಪ್ ಬಳಿಯಲ್ಲಿ ನಡೆದಿದೆ. ಚೈತ್ರಾ ಯಾದವ್(13) ನೀರುಪಾಲಾದ ಬಾಲಕಿಯಾಗಿದ್ದಾಳೆ.   ಕಾಲುವೆ ಎಡಭಾಗದಲ್ಲಿ ಬಾಲಕಿಯ ಪಾಲಕರು ಕುರಿಯ ಹಟ್ಟಿಯನ್ನು ಹಾಕಿಕೊಂಡಿದ್ದರು. ಕಾಲುವೆಗೆ ಅಡ್ಡಲಾಗಿ ಹಾಕಿರುವ ಪೈಪ್ ಮೂಲಕ ಕಾಲುವೆಯ ಬಲಭಾಗಕ್ಕೆ ಬಂದು, ತಮ್ಮ ದಿನಬಳಕೆ ವಸ್ತುಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಬಾಲಕಿಯು ಪೈಪ್ ಮೇಲಿಂದ ಕಾಲುವೆ ದಾಟಲು ಹೋಗಿದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಈ ದುರಂತ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕಿಗಾಗಿ ಹುಡುಕಾಟ ನಡೆಸಿದ್ದು, ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More