Author: admin

ಬೆಂಗಳೂರು: ಇಬ್ಬರು ಮಹಿಳೆಯರನ್ನು ಬಟ್ಟೆ ಬಿಚ್ಚಿಸಿ ಡಿಜಿಟಲ್ ಅರೆಸ್ಟ್ ಮಾಡಿಸಿದ ಘಟನೆ ವರದಿಯಾಗಿದೆ. ಕೆಲವು ಸೈಬರ್ ಅಪರಾಧಿಗಳು, ಮುಂಬೈ ಪೊಲೀಸ್ ಅಧಿಕಾರಿಗಳಂತೆ ನಟಿಸಿ, ಅವರನ್ನು ವಿವಸ್ತ್ರಗೊಳಿಸಿ ವೀಡಿಯೊ ಕರೆಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆ ಜುಲೈ 17, 2025 ರಂದು ನಡೆದಿದ್ದು, ಕೊಲಾಬಾ ಪೊಲೀಸ್ ಠಾಣೆಯ ಅಧಿಕಾರಿಗಳೆಂದು ಹೇಳಿಕೊಂಡ ವ್ಯಕ್ತಿಗಳು ಸಂತ್ರಸ್ತ ಮಹಿಳೆಯರಿಗೆ ಕರೆ ಮಾಡಿ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಕರೆ ಮಾಡಿದ ಆರೋಪಿಗಳು ಮಹಿಳೆಯೊಬ್ಬರು ಜೆಟ್ ಏರ್‌ ವೇಸ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಮತ್ತು ಹಣ ವರ್ಗಾವಣೆ, ಮಾನವ ಕಳ್ಳಸಾಗಣೆ ಮತ್ತು ಕೊಲೆಗೂ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿದರು. ನಿಖರವಾದ ಆಧಾರ್ ವಿವರಗಳನ್ನು ಉಲ್ಲೇಖಿಸಿ ಮತ್ತು ನಕಲಿ ಬಂಧನ ವಾರಂಟ್‌ಗಳೊಂದಿಗೆ ಬೆದರಿಕೆ ಹಾಕುವ ಮೂಲಕ, ಅವರು ಮಹಿಳೆಯರಲ್ಲಿ ಭಯವನ್ನು ಹುಟ್ಟುಹಾಕಿದರು ಮತ್ತು ಹಲವಾರು ಅವಮಾನಕರ ಮತ್ತು ಕಾನೂನುಬಾಹಿರ ಬೇಡಿಕೆಗಳಿಗೆ ಒಪ್ಪುವಂತೆ ಒತ್ತಾಯಿಸಿದರು ಎಂದು ವರದಿಯಾಗಿದೆ. ಆರ್‌ ಬಿಐ ಮತ್ತು ಸಿಬಿಐ ಮಾರ್ಗಸೂಚಿಗಳ ಅಡಿಯಲ್ಲಿ ಪರಿಶೀಲನಾ ವಿಧಾನಗಳನ್ನು ಉಲ್ಲೇಖಿಸಿ ವಂಚಕರು ಮಹಿಳೆಯೊಬ್ಬರ…

Read More

ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶಾತಿ‌ ಪಡೆಯಬಹುದಾಗಿದ್ದು, ಕರಾಮುವಿಯು ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಸೆಪ್ಟೆಂಬರ್ 15 ಕೊನೆಯ ದಿನಾಂಕ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಕರಾಮುವಿಯ ಈ ಮೇಲ್ಕಂಡ ಕೋರ್ಸ್ ಗಳಿಗೆ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ಧಿಸ್ಟ್ ಮತ್ತು ಪಾರ್ಸಿ)  ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಂತರ್ಜಾಲ https://dom.karnataka.gov.in  ದಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್…

Read More

ಬೀದರ್: ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದರ್ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತವಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿ ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 94823 00400 ಕರೆ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ನಡೆಯುವ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್ ಸಹಾಯವಾಣಿ 112ಗೆ ಅಥವಾ ಸಮೀಪದಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ. ಭಿಕ್ಷಾಟನೆ ನಿಷೇಧ ಕಾಯ್ದೆ 1975ರ ಪ್ರಕಾರ ಮೂರು ತಿಂಗಳು ಕಠಿಣ ಕಾರಗೃಹವಾಸ ಹಾಗೂ ದಂಡವನ್ನು ವಿಧಿಸಲಾಗುವುದು. ಅದೇ ರೀತಿ ಮಕ್ಕಳನ್ನು ಭಿಕ್ಷಾಟನೆಗೆ ಬಳಸಿದ್ದಲ್ಲಿ ಬಾಲನ್ಯಾಯ ಮಕ್ಕಳ ರಕ್ಷಣೆ…

Read More

ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಹಟ್ಟಿ ಬುಡಕಟ್ಟಿನ ಇಬ್ಬರು ಸಹೋದರರು ಒಬ್ಬ ಮಹಿಳೆಯೊಂದಿಗೆ ವಿವಾಹವಾಗಿದ್ದು, ಬಹುಪತಿತ್ವದ ಸಂಪ್ರದಾಯದ ಅಡಿಯಲ್ಲಿ ಈ ವಿವಾಹ ನೂರಾರು ಜನರ ಸಮ್ಮುಖದಲ್ಲಿ ನಡೆಯಿತು. ನವ ವಧು ಸುನೀತಾ ಚೌಹಾಣ್ ಮತ್ತು ವರರಾದ ಪ್ರದೀಪ್ ಮತ್ತು ಕಪಿಲ್ ನೇಗಿ ಅವರು ಯಾವುದೇ ಒತ್ತಡವಿಲ್ಲದೆ ಈ ಮದುವೆಯ ನಿರ್ಧಾರ ತೆಗೆದುಕೊಂಡಿದ್ದೇವೆ ಅಂತ ಹೇಳಿದರು. ಜುಲೈ 12 ರಂದು ಸಿರ್ಮೌರ್ ಜಿಲ್ಲೆಯ ಟ್ರಾನ್ಸ್–ಗಿರಿ ಪ್ರದೇಶದಲ್ಲಿ ನಡೆದ ಮೂರು ದಿನಗಳ ಮದುವೆ ಸಮಾರಂಭಕ್ಕೆ ಸ್ಥಳೀಯ ಜಾನಪದ ಹಾಡುಗಳು ಮತ್ತು ನೃತ್ಯಗಳು ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ನಡೆದವು. ಈ ವಿವಾಹ ಸಮಾರಂಭದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.  ಇನ್ನೂ ವಧು ಕುನ್ಹಾತ್ ಗ್ರಾಮದ ಸುನೀತಾ ಈ ಮದುವೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, ಈ ಸಂಪ್ರದಾಯದ ಬಗ್ಗೆ ತನಗೆ ಅರಿವಿತ್ತು ಮತ್ತು ಯಾವುದೇ ಒತ್ತಡವಿಲ್ಲದೆ ತನ್ನ ನಿರ್ಧಾರವನ್ನು ತೆಗೆದುಕೊಂಡೆ ಮತ್ತು ಈ ಬಂಧವನ್ನು ನಾನು ತುಂಬಾನೇ ಗೌರವಿಸುತ್ತೇನೆ  ಎಂದು ಹೇಳಿದರು. ಶಿಲೈ ಗ್ರಾಮದ ಪ್ರದೀಪ್…

Read More

ಸರಗೂರು: ಸದಾ ಸಮಾಜದ ಏಳಿಗೆಗಾಗಿ ದುಡಿಯುತ್ತಿರುವ ಆದಿ ಕರ್ನಾಟಕ ಮಹಾಸಭಾ ಸರಗೂರು ತಾಲೂಕು ಘಟಕದಿಂದ ಆಗಸ್ಟ್ 4 ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದಿ ಕರ್ನಾಟಕ ಮಹಾಸಭಾದ ತಾಲೂಕು ಶಿವಣ್ಣ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ಸಾಲಿನಲ್ಲಿಯೂ ಪ್ರತಿಭಾ ಮಕ್ಕಳನ್ನು ಪ್ರೋತ್ಸಾಹಿಸಿ, ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗಲೆಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಎಸ್‌ ಎಸ್‌ಎಲ್‌ ಸಿ, ಪಿಯು ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಸಲ್ಲಿಕೆಗೆ ಜು.30 ಕಡೆ ದಿನವಾಗಲಿದೆ. ಹೀಗಾಗಿ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಅಂಬೇಡ್ಕರ್ ಟ್ರಸ್ಟ್ ಸಂಪರ್ಕಿಸಬೇಕು ಎಂದು ಅವರು ಮನವಿ ಮಾಡಿದರು. ಅಂಬೇಡ್ಕರ್ ಟ್ರಸ್ಟ್, ಆದಿ ಕರ್ನಾಟಕ ಮಹಾಸಭಾ ಜಂಟಿಯಾಗಿ ಪಟ್ಟಣದ ಅಂಬೇಡ್ಕರ ಭವನದಲ್ಲಿ ಆ.4ರಂದು ಬೆಳಗ್ಗೆ 11ಕ್ಕೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ಶಾಸಕ…

Read More

ಸರಗೂರು:  ತಾಲೂಕಿನ ಬಿ ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಕವಾಡಿ ಗ್ರಾಮದ ನಾಗಪ್ಪ ಎಂಬುವರ ಮಗನಾದ ಪ್ರಸನ್ನ ಸೇರಿದ ಜಮೀನಲ್ಲಿ ಸೋಮವಾರದಂದು ಹುಲಿ ಹೆಜ್ಜೆ ಗುರುತು ಕಂಡು ಬಂಕವಾಡಿ ಗ್ರಾಮ ಹಾಗೂ ಸುತ್ತ ಮುತ್ತಲಿನ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಭಾನುವಾರಂದು ರಾತ್ರಿ ಹುಲಿ ಜಮೀನಿನಲ್ಲಿ ಕಾಣಿಸಿಕೊಂಡಿದೆ. ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತರು ಹುಲಿಯನ್ನು ಕಂಡು ಗಾಬರಿಗೊಂಡಿದ್ದಾರೆ. ಸೋಮವಾರ ಬೆಳಗ್ಗೆ ಗ್ರಾಮಸ್ಥರಿಗೆ ಹುಲಿ ಹೆಜ್ಜೆ ಗುರುತು ಕಂಡು ಬಂದಿದ್ದು, ಹುಲಿ ಜಮೀನಿನಲ್ಲೇ ಬೀಡು ಬಿಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಹುಲಿಯನ್ನು ಸೆರೆಹಿಡಿಯಲು ಮೊಳೆಯೂರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು  ಒತ್ತಾಯಿಸಿದ್ದಾರೆ.   ಹುಲಿ ಹೆಜ್ಜೆ ಗುರುತನ್ನು ಕಂಡು ಅತಂಕಕೊಳಗಿರುವ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.  ಆದರೆ ಅಧಿಕಾರಿಗಳು ತಮಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸುತ್ತಿದ್ದು, ಗ್ರಾಮಸ್ಥರ ಮನವಿಗೆ  ಸ್ಪಂದಿಸುತ್ತಿಲ್ಲ, ಸ್ಥಳಕ್ಕೂ ಬಂದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಕಳೆದ ಒಂದು ತಿಂಗಳಿನಿಂದ ಹುಲಿ ಹಾಗೂ ಆನೆಗಳು ಹಾವಳಿಯಿಂದ ದಿನನಿತ್ಯ ಜಮೀನಲ್ಲಿ…

Read More

ತುಮಕೂರು : ಜಿಲ್ಲೆಯ ಶಿರಾ ತಾಲ್ಲೂಕಿನ ಯಲಿಯೂರು ಗ್ರಾಮದ ವಾಸಿಯಾದ ರವೀಶ ವೈ.ಟಿ.  ತಾಲ್ಲೂಕು ಮೀನುಗಾರರ ಸಹಕಾರ ಸಂಘ ನಿಯಮಿತ ಯಲಿಯೂರು ಈ ಸಂಘದ ಅಧ್ಯಕ್ಷರಾಗಿದ್ದು, ಮಧುಗಿರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯದ ನಿರ್ದೇಶನದಂತೆ ಈ ಹಿಂದೆ ಸಂಘದ ಬ್ಯಾಂಕಿನ ವ್ಯವಹಾರಗಳನ್ನು ತಡೆ ಹಿಡಿದಿದ್ದು, ಬ್ಯಾಂಕಿನ ವ್ಯವಹಾರ ತಡೆಹಿಡಿದಿರುವುದನ್ನು ತೆರವುಗೊಳಿಸುವಂತೆ ಬ್ಯಾಂಕಿಗೆ ಪತ್ರ ಬರೆಯಲು ಮಧುಗಿರಿ ಉಪ ವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸಣ್ಣಪ್ಪಯ್ಯ ಮತ್ತು  ಪ್ರಥಮ ದರ್ಜೆ ಸಹಾಯಕ ರಾಘವೇಂದ್ರ ಪಿರ್ಯಾದಿ ರವೀಶ ವೈ ಟಿ ಇವರಿಂದ 20,000 ಸಾವಿರ ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ದೂರುದಾರನಾದ ರವೀಶ.ವೈ.ಟಿ. ಲಂಚದ ಹಣ ಕೊಡಲು ಇಷ್ಟವಿಲ್ಲದೇ ದಿನಾಂಕ : 21/07/2025 ರಂದು ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಪೊಲೀಸ್ ಇನ್ಸ್‌ ಪೆಕ್ಟರ್ ರಾಜು ಟಿ. ಮೊ.ನಂ:05/2025 ಕಲಂ–7(0) ಭ್ರಷ್ಟಾಚಾರ ಪ್ರತಿಬಂಧಕ ಅಧಿನಿಯಮ–1988 (ತಿದ್ದುಪಡಿ–2018) ರಂತೆ ಪ್ರಕರಣ ದಾಖಲಿಸಿಕೊಂಡು, ಟ್ರ್ಯಾಪ್ ಕಾರ್ಯಾಚರಣೆ…

Read More

ಸರಗೂರು:  ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ದೇವನಹಳ್ಳಿ ಚನ್ನರಾಯಪಟ್ಟಣ ಭೂ ಹೋರಾಟ ಸಮಿತಿಯಿಂದ ರೈತ ಹುತಾತ್ಮ ದಿನ ಆಚರಿಸಲಾಯಿತು. ಈ ವೇಳೆ  ಸರಳವಾಗಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು . ನಂತರ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಚನ್ನನಾಯಕ, ಶಿಕ್ಷಣ ಚನ್ನರಾಯಪಟ್ಟಣದ 1777 ಎಕರೆ ಭೂಸ್ವಾಧೀನವನ್ನು ಕೈಬಿಟ್ಟಿದ್ದು ಇದನ್ನು ಕೂಡಲೇ ಗೆಜೆಟ್ ಮಾತಿನಂತೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಅಧಿವೇಶನದಲ್ಲಿ ವಾಪಸ್ಸು ಪಡೆಯಬೇಕು ಎಪಿಎಂಸಿ ಕಾಯ್ದೆಯನ್ನು ಮತ್ತಷ್ಟು ರೈತಪರ ಗಟ್ಟಿಗೊಳಿಸಬೇಕು ಎಂದು ತಿಳಿಸಿದರು. ರೈತ ಸಂಘದ ಯುವ ಘಟಕದ ಅಧ್ಯಕ್ಷ ನವೀನ್ ಹಳೆಹೆಗ್ಗುಡಿಲು ಮಾತನಾಡಿ, ಕೇಂದ್ರ ನ್ಯಾಷನಲ್ ಕೃಷಿ ಮಾರುಕಟ್ಟೆ, ಪ್ರೇಮ್ ವರ್ಕ್ ನೀತಿಯನ್ನು ತಿರಸ್ಕರಿಸ ಬೇಕು ಹಾಗೇನೆ ವಿದ್ಯುತ್ ಖಾಸಗೀಕರಣವನ್ನು ರಾಜ್ಯದಲ್ಲಿ ಜಾರಿಗೆ ತರಬಾರದು. ಕಾರ್ಮಿಕತಿದ್ದುಪಡಿ ಕೋಡ್ ಗಳನ್ನು ರಾಜ್ಯದಲ್ಲಿ ಜಾರಿ ಮಾಡಬಾರದು. ರಸ ಗೊಬ್ಬರದ ಕೊರತೆಯನ್ನು ಸರಿಪಡಿಸಬೇಕು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಡಬೇಕು.…

Read More

ಸರಗೂರು:  ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ 84 ನೇ ವರ್ಷದ ಹುಟ್ಟು ಹಬ್ಬವನ್ನು, ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ನೀಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು,  ವೈಯಕ್ತಿಕ ಜೀವನ ಮತ್ತು ರಾಜಕೀಯ ಬದುಕಿನಲ್ಲಿ ಮಹತ್ವದ ಮೈಲುಗಲ್ಲು ಸ್ಥಾಪಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್‌ ನಲ್ಲೇ ಅತ್ಯಂತ ಹಿರಿಯರು ಎನಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಜುಲೈ 21 ಸೋಮವಾರ 83 ವಸಂತಗಳನ್ನು ಪೂರೈಸಿ 84 ವರ್ಷಕ್ಕೆ ಕಾಲಿಡುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ರಾಜಕೀಯ ಬದುಕಿನಲ್ಲಿ 50 ವರ್ಷಗಳ ಸುದೀರ್ಘ ಹಾದಿ ಕ್ರಮಿಸಿ, ಐದು ದಶಕಗಳ ಸಾರ್ವಜನಿಕ ಬದುಕು ಪೂರೈಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ ಎಂದರು. ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲ್ಲೂಕು ಉಪಾಧ್ಯಕ್ಷ ಶ್ರೀನಿವಾಸ ಮಾತನಾಡಿ, 5 ದಶಕಗಳ ಪಕ್ಷ ನಿಷ್ಠೆಯ…

Read More

ಕೊರಟಗೆರೆ : ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಕೋಳಾಲ ಗ್ರಾಮದಲ್ಲಿ ಮಂಗಳವಾರ ಬೆ.12 ಗಂಟೆ ಸುಮಾರಿಗೆ ಕೋಳಾಲ ಪೋಲಿಸ್ ಠಾಣೆ ರಸ್ತೆ ಕಡೆಯಿಂದ ಬಂದ ಗೊಬ್ಬರದ ಲಾರಿ ಬ್ರೇಕ್ ಫೇಲ್ಯೂರ್ ನಿಂದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬೈರವೇಶ್ವರ ಬೇಕರಿಗೆ ನುಗ್ಗಿದ್ದು, ಈ ದುರಂತದಲ್ಲಿ ಬೇಕರಿ ಮುಂದೆಯಿದ್ದ  ರಂಗಶಾಮಯ್ಯ(70), ಬೈಲಪ್ಪ(65), ಜಯಣ್ಣ(55) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮಾಜಿ ತಾ.ಪಂ. ಸದಸ್ಯೆ ಸಿದ್ದಗಂಗಮ್ಮ ಪ್ರಜ್ಞಾಹೀನಗೊಂಡಿದ್ದು, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬುದು ತಿಳಿದು ಬಂದಿದೆ. ಬೇಕರಿ ಮಾಲೀಕನು ಈ ದುರಂತದಿಂದ ಪಾರಾಗಿದ್ದು. ಹಿಂದೆಯೂ ಕೂಡ ಇದೇ ರೀತಿ ನಡೆದ ಉದಾಹರಣೆ ಇದೆ. ರೋಡ್ ಹಂಪ್ ಇಲ್ಲದ ಕಾರಣ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸ್ಥಳೀಯ ಸಾರ್ವಜನಿಕರು ಸಂಭಂದಪಟ್ಟ ಅಧಿಕಾರಿಗಳ ವಿರುದ್ದ…

Read More