Subscribe to Updates
Get the latest creative news from FooBar about art, design and business.
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
- ಬಾಬು ಜಗಜೀವನರಾಂ ಭವನ ನಿರ್ಮಿಸಲು 75 ಲಕ್ಷ ಹಣ ಮೀಸಲಿಡಲಾಗಿದೆ: ಶಾಸಕ ಸಿ.ಬಿ.ಸುರೇಶ್ ಬಾಬು
- ಮಧುಗಿರಿ: ಜೂ.28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
- ಕೊಡಿಗೇನಹಳ್ಳಿಯಲ್ಲಿ ಅಪರೂಪದ ಚಿಪ್ಪು ಹಂದಿ (ಪ್ಯಾಂಗೊಲಿನ್) ಪ್ರತ್ಯಕ್ಷ : ಜನರಲ್ಲಿ ಕುತೂಹಲ, ಆತಂಕ
- ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
- ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್ ಐ ತೀರ್ಥೇಶ್
- ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
Author: admin
ತುಮಕೂರು: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು–ಶೈಕ್ಷಣಿಕ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಹಾಗೂ ಸ್ವಾತಂತ್ರ‍್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಪಡೆಯಲಿಚ್ಛಿಸುವ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ತುಮಕೂರು ಒನ್ ಸೇವಾಕೇಂದ್ರಗಳ ಮೂಲಕ ಜೂನ್ 30ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.kmmd.karnataka.gov.in ಅಥವಾ ದೂ.ಸಂ.080-22374832, 8050770004, 8050770005 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಪಟ್ಟಣದ ಸಾರ್ವಜನಿಕ ಗ್ರಂಥಾಲಯ ಆವರಣದಲ್ಲಿ ರಾತ್ರಿಯಾದರೆ ಸಾಕು ಕುಡುಕರ ಅಡ್ಡವಾಗಿಬಿಡುತ್ತೆ. ಇದರಿಂದ ಮಹಿಳೆಯರಿಗೆ ಮತ್ತು ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡುತ್ತಿದ್ದಾರೆ. ಕೊರಟಗೆರೆ ಶಾಖಾ ಗ್ರಂಥಾಲಯ ಈಗ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ. ರಾತ್ರಿಯಾದರೆ ಸಾಕು ಮಧ್ಯಪಾನ, ಧೂಮಪಾನ, ಗುಟ್ಕ ಇತರೆ ಅನೈತಿಕ ಚಟವಟಿಕೆ ತಾಣವಾಗಿದ್ದು, ರಾತ್ರಿ ಅಪರಿಚಿತ ವ್ಯಕ್ತಿಗಳು ಗುಟ್ಕ ವಸ್ತುಗಳನ್ನು ಸೇವಿಸಿ ಗ್ರಂಥಾಲಯ ಮೆಟ್ಟಿಲು ಮತ್ತು ನೆಲದ ಮೇಲೆ ಉಗುಳಿರುವುದು ದುರ್ವಾಸನೆ ಬೀರುತ್ತಿದ್ದು ಅನಾರೋಗ್ಯಕ್ಕೆ ಎಡೆಮಾಡಿ ಕೊಟ್ಟಿದೆ. ಗುಟ್ಕ ವಸ್ತು ತಿಂದು ಉಗುಳಿದ ಮತ್ತು ಮದ್ಯಪಾನ ಸೇವಿಸಿ, ವಾಂತಿಯನ್ನು ಮಾಡಿರುವುದನ್ನ ಗ್ರಂಥಾಲಯ ಸಿಬ್ಬಂದಿಗಳು ಸ್ವಚ್ಚತೆ ಮಾಡುವಂತಹ ಸ್ಥಿತಿ ಸೃಷ್ಟಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ, ಇಂತಹ ಘಟನೆಗಳು ಮರುಕಳಿಸುತ್ತೀವೆ ಎಂದು ಓದುಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿ ಕಣ್ಗಾವಲಿನಲ್ಲಿಯೇ ಈ ಘಟನೆ: ಸಮಾಜ ಕಲ್ಯಾಣ ಇಲಾಖೆ ಬಳಿ ಇರುವ ಸಿಸಿ ಟಿವಿಯು ಗ್ರಂಥಾಲಯವನ್ನು ವೀಕ್ಷಿಸಲಿದೆ. ಸಿಸಿ ಟಿವಿ ಭಯವಿಲ್ಲದೇ…
ತುಮಕೂರು: ಜಿಲ್ಲೆಯಲ್ಲಿ ಅನ್ನಭಾಗ್ಯ, ಶಕ್ತಿ, ಗೃಹಲಕ್ಷ್ಮೀ, ಯುವನಿಧಿ, ಗೃಹಜ್ಯೋತಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಸಂಪೂರ್ಣವಾಗಿ ಸಹಕರಿಸಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಗುರುವಾರ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಮಾಹಿತಿ ನೀಡಿದ ನಂತರ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಪ್ರಗತಿಯ ಬಗ್ಗೆ ಪ್ರತಿ ತಿಂಗಳು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಭೆಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಶಾಲಾ–ಕಾಲೇಜು ಸಮಯದಲ್ಲಿ ಸೂಕ್ತ ಬಸ್ ಸೇವೆ ಲಭ್ಯವಿಲ್ಲದ ಕಾರಣ ವಿದ್ಯಾರ್ಥಿನಿಯರು ಶಕ್ತಿ ಯೋಜನೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬಸ್…
ತುಮಕೂರು: ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ, SMAM, ಮಹಾತ್ಮಗಾಂಧಿ ಉದ್ಯೋಗ ಖಾತ್ರಿ, ಜೇನುಕೃಷಿ ಸೇರಿದಂತೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ತೋಟಗಾರಿಕಾ ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೂಪ ಎನ್.ಎಸ್. ಮನವಿ ಮಾಡಿದ್ದಾರೆ. ಹನಿ ನೀರಾವರಿ : ಅಡಿಕೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಈ ಯೋಜನೆಯಡಿ 2 ಹೆಕ್ಟೇರ್‌ವರೆಗೆ ಸಾಮಾನ್ಯ ವರ್ಗ, ಪ.ಜಾತಿ/ಪ.ಪಂಗಡ ವರ್ಗಕ್ಕೆ ಶೇ.90ರಷ್ಟು ಸಹಾಯಧನ ನೀಡಲಾಗುವುದು. ಪ.ಜಾತಿ/ಪ.ಪಂಗಡ ರೈತರು ಹನಿ ನೀರಾವರಿ ಪಡೆದು 7 ವರ್ಷಗಳಾಗಿದ್ದಲ್ಲಿ ಮತ್ತೊಮ್ಮೆ ಸಹಾಯಧನ ಪಡೆಯಲು ಅರ್ಹರಿರುತ್ತಾರೆ. SMAM ಯೋಜನೆ : ಈ ಯೋಜನೆಯಡಿ ಪವರ್ ವೀಡರ್, ಬ್ರಷ್ ಕಟರ್, ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ದೋಟಿ, ಮತ್ತಿತರ ಯಂತ್ರೋಪಕರಣಗಳನ್ನು ಖರೀದಿಸಿದ ರೈತರಿಗೆ ಶೇ.40 ರಿಂದ 50ರವರೆಗೆ ಸಹಾಯಧನ ನೀಡಲಾಗುವುದು. ಮಹಾತ್ಮಗಾಂಧಿ ಉದ್ಯೋಗ ಖಾತ್ರಿ (ನರೇಗಾ)ಯೋಜನೆ: ನರೇಗಾ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ/ಪುನಶ್ಚೇತನ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುವುದು. ಜೇನುಕೃಷಿ:- ಜೇನುಕೃಷಿ ಯೋಜನೆಯಡಿ ರೈತರ…
ತುಮಕೂರು: ರುಡ್ ಸೆಟ್ ಸಂಸ್ಥೆ ವತಿಯಿಂದ ಜುಲೈ 14 ರಿಂದ ಬ್ಯೂಟಿ ಪಾರ್ಲರ್ ಕುರಿತು 35 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಪಡೆಯಲಿಚ್ಛಿಸುವ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹೊಂದಿರಬೇಕು. ತರಬೇತಿಯು ವಸತಿಯುತವಾಗಿದ್ದು, ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು. ಅವರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ಯಾಟ್ಸ್ ಹಾಗೂ ರೋಸ್ಟರ್ ತಂತ್ರಾಂಶ ನಿರ್ವಹಣೆ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿದರು. ದೇಶದ ಭವಿಷ್ಯವೇ ಮಾನವ ಸಂಪನ್ಮೂಲ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದ ಅವರು ದೇಶದ ಬಾಹ್ಯ ರಕ್ಷಣಾ ವ್ಯವಸ್ಥೆಯೇ ಆಗಲಿ, ಆಂತರಿಕ ಭದ್ರತೆಯನ್ನು ಒದಗಿಸುವ ಪೋಲೀಸ್ ವ್ಯವಸ್ಥೆಯೇ ಆಗಲಿ ಎಲ್ಲವೂ ಮೌಲ್ಯಯುತ ಶಿಕ್ಷಣದ ಮೇಲೆಯೇ ನಿಂತಿದೆ ಎಂದರು. ಕನಿಷ್ಟ ಹತ್ತು ಮೌಲ್ಯಗಳನ್ನು ಪರಿಗಣಿಸಿ ಪಠ್ಯಪುಸ್ತಕಗಳನ್ನು ರಚಿಸಿ ವಿದ್ಯಾರ್ಥಿಗಳಲ್ಲಿ ಮೌಲ್ಯ ಬಿತ್ತುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಬುನಾದಿ ಮೌಲ್ಯಯುತವಾಗಿದ್ದರೆ ಕಟ್ಟಡ ನಿರ್ಮಿಸುವುದು ಸರಳ ಎಂದರು. ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿಯವರ ನೇತೃತ್ವದಲ್ಲಿ ಜಿಲ್ಲಾ ಪಿಯು ವ್ಯವಸ್ಥೆ ಪರಿಣಾಮಕಾರಿ ಮೂಡಿ ಬರುತ್ತಿರುವುದು ಮೆಚ್ಚುವಂತದ್ದು…
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ವಿರೋಧಿ ಹೋರಾಟವನ್ನು ಕೈಬಿಡುವಂತೆ ಕೇಂದ್ರ ರೈಲ್ವೆ ಖಾತೆ ಸಚಿವ ಸೋಮಣ್ಣ ತಿಳಿಸಿದ್ದು, ಇನ್ನೊಂದು ತಿಂಗಳಲ್ಲಿ ಮುಖ್ಯಮಂತ್ರಿಗಳೊಂದಿಗೆ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ ಎಂದು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಕೇಂದ್ರ ಸಚಿವ ವಿ ಸೋಮಣ್ಣ ಅವರ ಮೇಲೆ ಸಂಪೂರ್ಣ ನಂಬಿಕೆ ಇಟ್ಟು ಹೋರಾಟವನ್ನು ಸ್ಥಗಿತಗೊಳಿಸಿದ್ದೇವೆ ಎಂದು ಹೇಳಿದ್ದಾರೆ. ಹೇಮಾವತಿ ನೀರನ್ನು ರಾಮನಗರಕ್ಕೆ ಅಥವಾ ಕುಣಿಗಲ್ ಗೆ ತೆಗೆದುಕೊಂಡು ಹೋಗಲು ನಮ್ಮ ಯಾವುದೇ ತಕರಾರು ಇಲ್ಲ ಎಂದು ಹೇಳಿದರು. ಯಾವುದೇ ಜಿಲ್ಲೆಗೂ ಅನ್ಯಾಯವಾಗಬಾರದು ಎಂಬ ಒತ್ತಾಸೆ ನಮ್ಮದಾಗಿದೆ. ಕೇಂದ್ರ ಸಚಿವ ಸೋಮಣ್ಣ ಅವರೊಂದಿಗೂ ಕೂಡ ನಾವು ಇರುತ್ತೇವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸ್ವಚ್ಛಂದವಾಗಿ ಆಟ–ಪಾಠ ಕಲಿಯಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿ ಅವರ ಬಾಲ್ಯವನ್ನು ಕಸಿಯುವುದು ಕಾನೂನು ಅಪರಾಧವೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ನಲಿವು, ಶಿಕ್ಷಣ, ವಿಶ್ರಾಂತಿ, ನೆಮ್ಮದಿಯನ್ನು ಕಸಿದುಕೊಳ್ಳುವ ಅನಿಷ್ಠ ಪದ್ಧತಿಯಾಗಿದೆ. ಅಂಕಿ–ಅಂಶದ ಪ್ರಕಾರ ವಿಶ್ವದಲ್ಲಿ 160 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕ ಪದ್ಧತಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಬಾಲ ಕಾರ್ಮಿಕ ಪದ್ಧತಿ ಕಾಯ್ದೆಯನ್ವಯ 14 ವರ್ಷದೊಳಗಿನ ಬಾಲ ಮಕ್ಕಳು ಹಾಗೂ 18 ವರ್ಷದೊಳಗಿನ ಕಿಶೋರ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನು ಅಪರಾಧ. ಮಕ್ಕಳು ಅವರ ಬಾಲ್ಯವನ್ನು ಸ್ವಚ್ಛಂದವಾಗಿ ಕಳೆಯಲು ಪೋಷಕರು…
ತುಮಕೂರು: ಪರಿಸರ ಹಸಿರಾಗಿದ್ದಲ್ಲಿ ಮಾತ್ರ ನಾವೆಲ್ಲಾ ಆರೋಗ್ಯವಾಗಿರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ತಿಳಿಸಿದರು. ಜಿಲ್ಲಾ ಪಂಚಾಯಿತಿ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಗುರುವಾರ ಸಂಜೆ ಹಮ್ಮಿಕೊಂಡಿದ್ದ ವಿಶ್ವಪರಿಸರ ದಿನ ಕಾರ್ಯಕ್ರಮವನ್ನು ನಗರದ ಅಮಾನಿಕೆರೆ ಪಾರ್ಕ್ನಲ್ಲಿ ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಶುದ್ಧ ನೀರು ಹಾಗೂ ಶುದ್ಧ ವಾತಾವರಣ ಪಡೆಯಬೇಕೆಂದರೆ ಪರಿಸರವನ್ನು ಹಸಿರುಗೊಳಿಸಬೇಕು. ಗಿಡವನ್ನು ನೆಡುವುದರೊಂದಿಗೆ ಅವುಗಳನ್ನು ಮಕ್ಕಳಂತೆ ಸಂರಕ್ಷಿಸುವುದು ಬಹು ಮುಖ್ಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅನುಪಮ ಹೆಚ್. ಮತ್ತು ದೇವರಾಜು ಸೇರಿದಂತೆ ವಿವಿಧ ನ್ಯಾಯಾಧೀಶರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ಪ್ರತಿನಿತ್ಯ ದಿನಪತ್ರಿಕೆ ಓದುವುದರಿಂದ ಜಗತ್ತಿನ ಆಗುಹೋಗು ತಿಳಿದುಕೊಳ್ಳುವುದು ಸಾಧ್ಯ ಎಂದು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ದಾಕ್ಷಾಯಿಣಿ ತಿಳಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗ ಮತ್ತು ಶಾಂತಿನಿಕೇತನ ಯುವವೃಂದ ಇವರ ಜಂಟಿ ಆಶ್ರಯದಲ್ಲಿ ನಡೆದ ಶಾಂತಿನಿಕೇತನ ಜ್ಞಾನ ಸ್ಪೂರ್ತಿ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಅವರು ಬಹುಮಾನ ವಿತರಿಸಿ ಮಾತನಾಡಿದರು. ಶಾಂತಿನಿಕೇತನ ಸಂಸ್ಥಾಪಕ ರಾಜೇಶ್ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಅರಿವನ್ನು ಮೂಡಿಸಲು ಶಾಂತಿನಿಕೇತನವು ರಸಪ್ರಶ್ನೆ ಕಾರ್ಯಕ್ರಮ ನಡೆಸುತ್ತಿದೆ. ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ತುಮಕೂರಿನ ಬೇರೆ ಬೇರೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಈಗಾಗಲೇ 30 ಸಂಚಿಕೆಗಳನ್ನು ಪೂರೈಸಿದೆ ಎಂದರು. ವ್ಯವಹಾರಾಡಳಿತ ವಿಭಾಗದ ಮುಖ್ಯಸ್ಥ ಡಾ.ಎಂ.ಡಿ.ಶ್ರೀನಿವಾಸ, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಹೊಸ ಆವಿಷ್ಕಾರದ ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ವಿಭಿನ್ನ ಕೌಶಲ್ಯ ಕಲಿತುಕೊಳ್ಳಬೇಕು ಎಂದರು. ಕಲಾ ಕಾಲೇಜಿನ ಇತಿಹಾಸ…