Subscribe to Updates
Get the latest creative news from FooBar about art, design and business.
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
Author: admin
ಕೊರಟಗೆರೆ: ಮನುಷ್ಯನ ಬದುಕಿಗೆ ಧರ್ಮ ಪರಿಪಾಲನೆ ಬಹುಮುಖ್ಯ ಎಂದು ಬಾಳೇಹೊನ್ನೂರು ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಚನ್ನರಾಯನದುರ್ಗ ಹೋಬಳಿ ಸಿದ್ದರಬೆಟ್ಟದ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದಲ್ಲಿ ಭಾನುವಾರ ಏರ್ಪಡಿಸಲಾಗಿದ್ದ 20ನೆ ವಾರ್ಷಿಕೋತ್ಸವ ಮತ್ತು ಜನಜಾಗೃತಿ ಧರ್ಮ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಧರ್ಮ, ಸಂಸ್ಕೃತಿ ಮತ್ತು ಸಂಸ್ಕಾರ ಜನರ ನಿಜವಾದ ಆಸ್ತಿ. ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ ಎಂದು ಕರೆ ಕೊಟ್ಟರು. ಸಿದ್ದರಬೆಟ್ಟ ಶ್ರೀಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಮಾಜದಲ್ಲಿ ಸಾಮೂಹಿಕ ವಿವಾಹವು ವಿಶೇಷ ಪಾತ್ರ ವಹಿಸಿದೆ. ಸಿದ್ದರಬೆಟ್ಟ ಶ್ರೀಮಠಕ್ಕೆ ಭಕ್ತ ಸಮೂಹವೇ ಶ್ರೀರಕ್ಷೆ ಎಂದು ಹೇಳಿದರು. ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಸಿದ್ದರಬೆಟ್ಟ ಶ್ರೀಮಠದ 20ನೆ ವಾರ್ಷಿಕೋತ್ಸವ ಕಾರ್ಯಕ್ರಮ ಇತಿಹಾಸದ ಪುಟ ಸೇರಿದೆ. ಶ್ರೀ ಕ್ಷೇತ್ರದ ಪ್ರತಿಯೊಬ್ಬ ಸಹ ಷೇಧಧಿ ಗುಣ ಹೊಂದಿದೆ ಎಂದು ಹೇಳಿದರು. ವೇದಿಕೆಯಲ್ಲಿ ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಪೀಠಾಧ್ಯಕ್ಷರು, ಮಾಲಿಮಠ, ಹಿರೇಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ, ತಂಗನಹಳ್ಳಿಯ…
ತುರುವೇಕೆರೆ: ದಲಿತ ಸಂಘರ್ಷ ಸಮಿತಿ ಹಾಗೂ ತಾಲೂಕು ರೈತ ಸಂಘದ ವತಿಯಿಂದ ಟಾಟಾ ಪವರ್ ಕಂಪನಿಗೆ ವಿದ್ಯುತ್ ವಿತರಣಾ ಪರವಾನಗಿ ನೀಡಿ ಖಾಸಗೀಕರಣ ಮಾಡುವುದರ ವಿರುದ್ಧ ಜೂನ್ 24 ರಂದು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿ.ಎಸ್.ಎಸ್. ಜಿಲ್ಲಾ ಸಂಘಟನಾ ಸಂಚಾಲಕ ದಂಡಿನಶಿವರ ಕುಮಾರ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, “ವಿದ್ಯುತ್ ಉತ್ಪಾದನೆಯಲ್ಲಿ ಸರ್ಕಾರ ಲಾಭಾಂಶದಲ್ಲಿದ್ದು, ಇಂತಹ ಕಂಪನಿಯನ್ನು ಖಾಸಗಿ ಒಡೆತನಕ್ಕೆ ಮಾರುತ್ತಿರುವ ಸರ್ಕಾರದ ನಡೆ ಬಹಳ ದುಷ್ಕೃತ್ಯವಾದದ್ದು. ಇದರಿಂದ ರೈತರ ಪಂಪ್ ಸೆಟ್ ಗಳ ಮೇಲೆ ತೀವ್ರ ಹೊಡೆತ ಬೀಳಲಿದೆ. ರಾಜ್ಯದ ಜನತೆಯ ಹಿತ ಕಾಪಾಡಲು ಮತ್ತು ರೈತರಿಗೆ ಅನ್ಯಾಯವಾಗುವುದನ್ನು ತಪ್ಪಿಸಲು ತಾಲೂಕಿನ ಎಲ್ಲಾ ಸಾರ್ವಜನಿಕರು ಜೂನ್ 24ರ ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗುವುದು,” ಎಂದರು. ಈ ಸಂದರ್ಭದಲ್ಲಿ ತಾಲೂಕು ರೈತಸಂಘದ ಅಧ್ಯಕ್ಷ ಶ್ರೀನಿವಾಸ್…
ತುಮಕೂರು: ರಾಜ್ಯದಲ್ಲಿರುವ ಪ್ರತಿಯೊಂದು ಮಠಮಾನ್ಯಗಳೂ ‘ಪುಸ್ತಕ ದಾಸೋಹ’ ನಡೆಸುವ ಮೂಲಕ ಜನರ ಬಳಿಗೆ ಪುಸ್ತಕಗಳನ್ನು ಕೊಂಡೊಯ್ಯುವ ಕೆಲಸ ಮಾಡಬೇಕು ಎಂದು ರಾಜ್ಯ ವೈಜ್ಞಾನಿಕ ಪರಿಷತ್ತಿನ ಅಧ್ಯಕ್ಷರಾದ ಹುಲಿಕಲ್ ನಟರಾಜ್ ಅವರು ಕರೆ ನೀಡಿದ್ದಾರೆ. ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟದ ರಂಭಾಪುರಿ ಶಾಖಾಮಠದ 20ನೇ ವಾರ್ಷಿಕೋತ್ಸವ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಪುಸ್ತಕ ದಾಸೋಹ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಪುಸ್ತಕಗಳು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮನ್ನು ಸುಜ್ಞಾನವಂತರನ್ನಾಗಿಸುತ್ತವೆ ಎಂದು ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು. ಓದುವ ಸಂಸ್ಕೃತಿ ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ, ಜನರ ಮನಸ್ಸನ್ನು ಮತ್ತೆ ಪುಸ್ತಕಗಳ ಕಡೆಗೆ ತಿರುಗಿಸುವ ಜವಾಬ್ದಾರಿಯನ್ನು ಪ್ರತಿಯೊಂದು ಮಠವೂ ತೆಗೆದುಕೊಳ್ಳಬೇಕು ಎಂದು ಅವರು ಆಶಯ ವ್ಯಕ್ತಪಡಿಸಿದರು. ರಂಭಾಪುರಿ ಶಾಖಾಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, “ತಾಲೂಕು ಗ್ರಂಥಾಲಯ ಮೇಲ್ವಿಚಾರಕರ ಸಂಘದ ವತಿಯಿಂದ ಮಠದಲ್ಲಿ ಯಶಸ್ವಿಯಾಗಿ ಪುಸ್ತಕ ದಾಸೋಹ ನಡೆಸಲಾಗುತ್ತಿದೆ. ಇಲ್ಲಿ ಭಕ್ತರು ಒಂದು ಪುಸ್ತಕವನ್ನು ನೀಡಿ, ಬದಲಿಗೆ ಎರಡು ಪುಸ್ತಕಗಳನ್ನು ಮನೆಗೆ ತೆಗೆದುಕೊಂಡು ಹೋಗಬಹುದು” ಎಂದು ತಿಳಿಸುತ್ತಾ,…
ತುಮಕೂರು: ದೈಹಿಕ ಒತ್ತಡ, ಮಾನಸಿಕ ಒತ್ತಡ, ಮೊಬೈಲ್ ಅವಲಂಬನೆ ಹಾಗೂ ಅನಾರೋಗ್ಯದಂತಹ ಸಮಸ್ಯೆಗಳಿಗೆ ಯೋಗ ಅತ್ಯಂತ ಅವಶ್ಯ ಸಾಧನ ಎಂದು ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ಸಚಿವ ವಿ.ಸೋಮಣ್ಣ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ ಹಾಗೂ ಶ್ರೀ ಪತಂಜಲಿ ಯೋಗ ಕೇಂದ್ರ ಇವರ ಸಹಯೋಗದಲ್ಲಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನರು ವಿವಿಧ ಕಾರಣಗಳಿಂದ ದೈಹಿಕ, ಮಾನಸಿಕ ಒತ್ತಡಗಳಿಂದ ಬಳಲುತ್ತಿದ್ದಾರೆ, ಅತಿಯಾದ ಮೊಬೈಲ್ ಅವಲಂಬನೆಯಿಂದಾಗಿ ಖಿನ್ನತೆಗೆ ಒಳಗಾಗಿ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಮಸ್ಯೆಗಳಿಗೆ ಯೋಗ ಒಂದೇ ಪರಿಹಾರವಾಗಿದೆ ಎಂದರು. ಕೊರೋನದಂತಹ ಸಾಂಕ್ರಾಮಿಕ ರೋಗದ ಪಿಡುಗಿನ ಸಂದರ್ಭದಲ್ಲಿ ಅದು ಜನರಿಗೆ ಅರಿವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗ ಉತ್ತಮ ಆರೋಗ್ಯ ತಂತ್ರ ಎಂಬುದನ್ನು ಜಗತ್ತಿನಾದ್ಯಂತ ಎಲ್ಲರೂ ಒಪ್ಪಿಕೊಂಡಿದ್ದಾರೆ. ಯೋಗ ಸಂಸ್ಕೃತಿಯನ್ನು ವಿಶ್ವದೆಡೆಗೆ ಕೊಂಡೊಯ್ದ ಕೀರ್ತಿ ಭಾರತ…
ಪಾವಗಡ: ಪಟ್ಟಣದ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ 12ನೇ ಯೋಗ ದಿನಾಚರಣೆಯನ್ನು ಭಾನುವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಕಾರ್ಯದರ್ಶಿ ಡಾ.ಜಿ. ವೆಂಕಟರಾಮಯ್ಯ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ಮಾತುಗಳನ್ನಾಡಿ, “ನಿತ್ಯ ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ಹಾಗೂ ಶಿಸ್ತು ರೂಢಿಸಿಕೊಳ್ಳಲು ಯೋಗ ಅತ್ಯುತ್ತಮ ಸಾಧನ” ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ನಾಗೇಂದ್ರ, ಎಲ್ಲಾ ವಿಭಾಗದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಯೋಗದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು. ವರದಿ: ನಂದೀಶ್ ನಾಯ್ಕ ಪಿ. ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿದೆ. ಈ ಸಾಧನೆ ಮಾಡಿರುವ ತುಮಕೂರು ಜಿಲ್ಲೆಯನ್ನು ಅಭಿನಂದಿಸಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗ್ ಪತ್ರ ಬರೆದಿದ್ದಾರೆ. ಅಧಿಕಾರಿಗಳಿಗೆ ಸಿಇಒ ಪ್ರಶಂಸೆ : ಇಲಾಖೆಯ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಕ ಅಧಿಕಾರಿ ಅಶ್ವಿಜ ಬಿ.ವಿ., ರೈತರ ಜಾನುವಾರುಗಳಿಗೆ ಲಸಿಕಾ ಅಭಿಯಾನದ ಪ್ರಗತಿಯಲ್ಲಿ ತುಮಕೂರು ಜಿಲ್ಲೆಯು ಪ್ರಥಮ ಸ್ಥಾನ ಪಡೆದಿರುವುದು ನಮಗೆಲ್ಲ ಸಂತಸ ತಂದಿದೆ. ಇದರ ಜೊತೆಗೆ ಅಧಿಕಾರಿಗಳಿಗೆ ಜವಾಬ್ದಾರಿ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿಯೂ ಇದೇ ರೀತಿ ರೈತರಿಗೆ ಹಾಗೂ ಸಾರ್ವಜನಿಕರಿಗೆ ಸರ್ಕಾರದ ಸೇವೆಗಳನ್ನು ಸಲ್ಲಿಸೋಣ ಎಂದರು. ತುಮಕೂರು ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಿಗೆ ಅಭಿನಂದನಾ ಪತ್ರ ಬರೆದಿರುವ ಶಿಲ್ಪಾ ನಾಗ್ ಅವರು ಅಭಿನಂದನಾ ಪತ್ರದಲ್ಲಿ ಒಂಬತ್ತನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದ ಅಭಿಯಾನವನ್ನು ದಿನಾಂಕ:…
ಸಿರಾ: ಮೀನು ಒಂದು ಪೌಷ್ಟಿಕ ಮತ್ತು ಪೋಷಕ ಆಹಾರ ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದರು. ನಗರದ ಮೀನುಗಾರಿಕಾ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮತ್ಸ್ಯ ಆಶ್ರಯ ಯೋಜನೆಯಡಿಯಲ್ಲಿ ಮೀನುಗಾರರಿಗೆ ಮನೆಗಳ ಹಕ್ಕು ಪತ್ರ ಹಾಗೂ ವಿವಿಧ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಿರಾ ಭಾಗದಲ್ಲಿ ಈ ಹಿಂದೆ ಮಳೆ ಬಂದು ಕೆರೆಗಳು ತುಂಬಿದಾಗ ಮಾತ್ರ ಮೀನಿನ ಮರಿಗಳನ್ನು ಸಾಕುವ ಮೂಲಕ ಮೀನು ಕೃಷಿ ನಡೆದಿತ್ತು. ಇದೀಗ ಕಳ್ಳಂಬೆಳ್ಳ, ಸಿರಾ, ಮುದ rollerskates ಸೇರಿದಂತೆ ಅನೇಕ ಕೆರೆಗಳಿಗೆ ಹೇಮಾವತಿಯ ನೀರು ಹರಿದ ಪರಿಣಾಮ ತಾಲೂಕಿನ ಬಹುತೇಕ ಕೆರೆಗಳಲ್ಲಿ ಮೀನು ಸಾಕಾಣಿಕೆಯು ಹೆಚ್ಚಾಗಿ ನಡೆಯುತ್ತಿದ್ದು ಮೀನು ಸಾಕಾಣಿಕೆದಾರರು ಆರ್ಥಿಕವಾಗಿ ಸದೃಢಗೊಳ್ಳಲು ಕಾರಣವಾಗಿದೆ ಎಂದರು. ಸಿರಾ ಭಾಗದಲ್ಲಿ ಅತಿ ಹೆಚ್ಚು ಮೀನು ಸಾಕಾಣಿಕೆಗೆ ಒತ್ತು ಸಿಗಲು ದಯಾನಂದ ಸಾಗರ್ ಅವರಂತಹ ಅನೇಕ ಮಂದಿಯ ಮೀನುಗಾರಿಕೆಯ ಕಾಳಜಿ ಕಾರಣವಾಗಿದೆ. ವಿವಿಧ ಉತ್ತಮ ತಳಿಯ ಮೀನು ಮರಿಗಳ ಸಾಕಣಿಕೆಗೆ ಗುತ್ತಿಗೆದಾರರು ಮುಂದಾಗಬೇಕು. ಮೀನುಗಾರರಿಗೆ ವಿವಿಧ…
ಬರಗೂರು: ತಾಲೂಕಿನ ಹುಲಿಕುಂಟೆ ಹೋಬಳಿಯ ಹೊಸಹಳ್ಳಿಯ ಗೇಟ್ ಬಳಿ ಅನುಮಾನಾಸ್ಪದವಾಗಿ ಪುರುಷ ಶವವೊಂದು ಪತ್ತೆಯಾಗಿದೆ. ಆಂಧ್ರಪ್ರದೇಶ ರಾಜ್ಯದ ಅಮರಾಪುರ ಮಂಡಲದ ನಿದ್ರಗಟ್ಟೆ ಗ್ರಾಮದ ನಿವಾಸಿ ರಮೇಶ್ ಅಲಿಯಾಸ್ ಕೆಂಗ ಎಂಬ ವ್ಯಕ್ತಿಯ ಶವ ಅಮರಾಪುರ ರಸ್ತೆಯ ಹೊಸಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಸ್ಥಳೀಯರು ರಸ್ತೆ ಬದಿಯಲ್ಲಿ ವ್ಯಕ್ತಿಯ ಶವ ಬಿದ್ದಿರುವುದನ್ನು ಗಮನಿಸಿ ತಕ್ಷಣವೇ ಪಟ್ಟನಾಯಕನ ಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ವ್ಯಕ್ತಿಯ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು,…
ತುಮಕೂರು: ನಗರದ 31ನೇ ವಾರ್ಡ್‌ನ ಜಯನಗರ ಪಶ್ಚಿಮ ಬಡಾವಣೆಯ 1ನೇ ಮುಖ್ಯರಸ್ತೆಯ 3ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ನಿರ್ಮಿಸುತ್ತಿರುವುದಕ್ಕೆ ಸ್ಥಳೀಯ ನಾಗರಿಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಇದು ಜಯನಗರ ಪೊಲೀಸ್ ಠಾಣೆಗೆ ಸಾರ್ವಜನಿಕರು ನೀಡಿದ್ದರು ಆದರೆ ಈಗ ಪಾಲಿಕೆ ನಮ್ಮ ಕ್ಲಿನಿಕ್ ಆರಂಭಿಸಲು ಹೊರಟಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ, ಈ ಸಂಬಂಧ ಬಡಾವಣೆಯ ನಿವಾಸಿಗಳು ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಅವರನ್ನು ಭೇಟಿಯಾಗಿ, ಆಸ್ಪತ್ರೆ ನಿರ್ಮಾಣಕ್ಕೆ ತಡೆ ಹಿಡಿಯುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ. ಪಾರ್ಕ್ ನಿರ್ಮಾಣಕ್ಕಾಗಿ ಮೀಸಲಿಟ್ಟಿರುವ ಜಾಗದಲ್ಲಿ ಆಸ್ಪತ್ರೆ ಸ್ಥಾಪನೆಗೆ ಅನುವು ಮಾಡಿಕೊಟ್ಟಿರುವುದು ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ಅನಾನುಕೂಲವನ್ನು ಉಂಟುಮಾಡುತ್ತದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಸಿರು ವಾತಾವರಣ ಮತ್ತು ಸಾರ್ವಜನಿಕರ ವಾಯುವಿಹಾರಕ್ಕೆ ಪಾರ್ಕ್ ಅತ್ಯಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಇಲ್ಲಿ ಆಸ್ಪತ್ರೆ ನಿರ್ಮಿಸಬಾರದು ಎಂದು ಅವರು ಒತ್ತಾಯಿಸಿದ್ದಾರೆ. ಶೆಟ್ಟಿಹಳ್ಳಿ ಮುಖ್ಯ ರಸ್ತೆಯಲ್ಲಿ ಆಸ್ಪತ್ರೆ ನಿರ್ಮಿಸಲು ಆಗ್ರಹ: ಆಸ್ಪತ್ರೆ ಅಥವಾ ಕ್ಲಿನಿಕ್‌ಗಳು ಸಾರ್ವಜನಿಕರಿಗೆ…
ಕುಣಿಗಲ್: ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆಯ ಅಟ್ಟಹಾಸ ಮುಂದುವರಿದಿದ್ದು, ಸಾಲಗಾರರ ಕಿರುಕುಳ ಹಾಗೂ ಮಾನ ಹರಾಜು ಹಾಕುವ ಬೆದರಿಕೆಗೆ ಮನನೊಂದು ಹರಿಕಥೆ ದಾಸರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ದೊಡ್ಡಮಳವಾಡಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಶನಿವಾರ (ಜೂನ್ 20) ನಡೆದಿದೆ. ದೊಡ್ಡಮಳವಾಡಿ ಗ್ರಾಮದ ನಿವಾಸಿ ಚಿಕ್ಕಣ್ಣ (40) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೃತ ಚಿಕ್ಕಣ್ಣ ಅವರು ಹರಿಕಥೆ ದಾಸರಾಗಿ ಗುರುತಿಸಿಕೊಂಡಿದ್ದರು. ಮೃತ ಚಿಕ್ಕಣ್ಣ ಅವರು ಭಕ್ತರಹಳ್ಳಿ ಪ್ರೌಢಶಾಲೆಯ ಎಸ್ ಡಿಎಂಸಿ ಅಧ್ಯಕ್ಷೆ ಮಮತಾ ಹಾಗೂ ಕುರುಡಿಹಳ್ಳಿ ಗ್ರಾಮದ ಜಯರತ್ನಮ್ಮ ಎಂಬುವವರಿಂದ ಶೇ. 10 ರ ಬಡ್ಡಿ ದರದಲ್ಲಿ ಸಾಲ ಪಡೆದಿದ್ದರು. ಸಾಲ ನೀಡುವಾಗ ಆರೋಪಿಗಳು ಭದ್ರತೆಗಾಗಿ ಬ್ಯಾಂಕ್ ಚೆಕ್ ಗಳನ್ನು ಪಡೆದುಕೊಂಡಿದ್ದರು. ಆದರೆ, ಸಾಲ ನೀಡಿದ ಕೆಲ ದಿನಗಳ ಬಳಿಕ ಮಮತಾ ಮತ್ತು ಜಯರತ್ನಮ್ಮ ಅವರು, “ನಮಗೆ ಶೇ. 30 ರಷ್ಟು ಬಡ್ಡಿ ನೀಡಬೇಕು, ಇಲ್ಲದಿದ್ದರೆ ತಕ್ಷಣ ಅಸಲು ಹಣ ವಾಪಸ್ ಕೊಡಬೇಕು” ಎಂದು ಚಿಕ್ಕಣ್ಣ ಅವರಿಗೆ…