Subscribe to Updates
Get the latest creative news from FooBar about art, design and business.
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
- ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
- ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
Author: admin
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಎರಡು ದಿನಗಳ ದೆಹಲಿ ಪ್ರವಾಸದ ಹಿನ್ನೆಲೆ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಸಮಯ ಸಿಕ್ಕರೆ ಹೈಕಮಾಂಡ್ ಭೇಟಿಯಾಗಿ ಅವರಿಗೆ ಕೈ ಮುಗಿದು ಬರುತ್ತೇನೆ ಎಂದರು. ಇನ್ನೂ ಎತ್ತಿನಹೊಳೆ ಯೋಜನೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಬೇಕು. ತುಮಕೂರು ಮತ್ತು ಹಾಸನ ವಿಚಾರದಲ್ಲಿ ಕೇಂದ್ರ ಅನುಮತಿ ಕೊಡಬೇಕಿದೆ. ಈ ವಿಷಯದ ಕುರಿತು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ಅರಣ್ಯ ಸಚಿವರ ಜೊತೆ ಕೇಂದ್ರ ಜಲ ಸಂಪನ್ಮೂಲ ಸಚಿವರು ಸಮಯ ಕೊಟ್ಟಿದ್ದಾರೆ. ಅವರ ಜೊತೆಗೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿ ಬರ್ಬರವಾಗಿ ಕೊಲೆಯಾಗಿರೋ ಘಟನೆ ತುಮಕೂರಿನ ಹೊರವಲಯದ ಅಂತರಸನಹಳ್ಳಿ ಬಳಿ ನಡೆದಿದೆ. ಮಂಡ್ಯ ಜಿಲ್ಲೆಯ ಗಣನೂರು ಗ್ರಾಮದ ಗೀತಾ (20) ಕೊಲೆಯಾದ ಮಹಿಳೆಯಾಗಿದ್ದಾರೆ. ಪತಿ ನವೀನ್ ಪತ್ನಿ ಗೀತಾಳನ್ನ ಕೊಲೆ ಮಾಡಿದ್ದಾನೆ. ಕುತ್ತಿಗೆ, ಮುಖ ಹಾಗೂ ಇತರೆ ಭಾಗಗಳಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ನಿನ್ನೆ ರಾತ್ರಿ ಕೌಟುಂಬಿಕ ಕಲಹದ ಕಾರಣ ಕೊಲೆಯಾಗಿದೆ ಎನ್ನಲಾಗಿದೆ. ನವೀನ್, ತುಮಕೂರು ತಾಲ್ಲೂಕಿನ ಅಮೃತಗಿರಿಯ ವಾಸಿಯಾಗಿದ್ದಾನೆ. ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರು ವಾಸ ಮಾಡ್ತಿದ್ರು. ನವೀನ್ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯಲ್ಲಿ ಕೆಲಸ ಮಾಡ್ತಿದ್ದನು. 2 ವರ್ಷದ ಹಿಂದೆ ಇಬ್ಬರಿಗೂ ಅಂತರ್ಜಾಲದಲ್ಲಿ ಪರಿಚಯ ಆಗಿ ಮದುವೆ ಆಗಿದ್ರು. ಪತಿ–ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ರಾತ್ರಿ ಗಲಾಟೆ ತಾರಕಕ್ಕೇರಿ ಮನೆಯಲ್ಲೇ ಕೊಲೆಯಾಗಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಕಳೆದ ನಾಲ್ಕು ತಿಂಗಳಿನಿಂದ ಗ್ರಾಮಸ್ಥರಲ್ಲಿ ಭಯಭೀತಿಗೊಳಿಸಿದ್ದ ಚಿರತೆ ಬೆಳಗಿನ ಜಾವ ಅರಣ್ಯ ಇಲಾಖೆ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಕರಿಕೆರೆ ಮಜುರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುತ್ತಮುತ್ತಲು ಜನಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಮೂರು ಚಿರತೆಗಳ ಪೈಕಿ ಒಂದು ಚಿರತೆ, ಬೋನಿಗೆ ಬಿದ್ದಿದೆ. ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯು ಅಂಚೆಕೊಪ್ಪಲು ಗ್ರಾಮದ ತೋಟದ ಸಾಲಿನಲ್ಲಿ ಬೋನನ್ನು ಇಡಲಾಗಿತ್ತು. ಆದರೆ ಸುಮಾರು ನಾಲ್ಕೈದು ದಿನ ಆದರೂ ಚಿರತೆಯ ಬೋನಿಗೆ ಬಿದ್ದಿರಲಿಲ್ಲ. ಇದರಿಂದಾಗಿ ಗ್ರಾಮಸ್ಥರು ಬೊನನ್ನು ಗ್ರಾಮದೊಳಗೆ ತಂದು ಇಟ್ಟಿದ್ದರು. ಮೂರು ದಿನಗಳ ನಂತರ ಇಂದು ಬೆಳಗಿನ ಜಾವ ಚಿರತೆ ಸೆರೆಯಾಗಿದೆ. ಚಿರತೆ ಬಿದ್ದ ಬೋನಿಗೆ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ಬೆಳಗ್ಗೆಯಿಂದಲೇ ಚಿರತೆಯನ್ನು ನೋಡಲು ಸಾಗರೋಪಾದಿಯಲ್ಲಿಆಗಮಿಸಿದ್ದರು. ಇನ್ನೂ ಎರಡು ಚಿರತೆಗಳು ಜನರ ಕಣ್ಣಿಗೆ ಕಂಡಿದ್ದು ಹಾಗಾಗಿ ಭಯದ ವಾತಾವರಣವು ಸಹ ಮೂಡಿದೆ. ಟಗರು ಕುರಿ ಬಾತುಕೋಳಿ ಕೋಳಿಯನ್ನು ತಿಂದಿದ್ದ ಚಿರತೆ ದಾಳಿಯಿಂದ ಗ್ರಾಮಸ್ಥ ಮಂಜುನಾಥ್ ಎಂಬವರಿಗೆ…
ಕೊಪ್ಪಳ: ‘ನಿಮಗೆ ಗ್ಯಾರಂಟಿ ಯೋಜನೆಯ ಅಕ್ಕಿ ಬ್ಯಾಡ ಅಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ನಿಂಗೆ ಉತ್ತಮ ರಸ್ತೆಗಳು ಬೇಕು ಅಂದರೆ ಅಕ್ಕಿ ಸೇರಿದಂತೆ ಎಲ್ಲವೂ ನಿಲ್ಲುತ್ತವೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದಾರೆ. ಕೊಪ್ಪಳದ ಕುಕನೂರು ತಾಲೂಕಿನ ರ್ಯಾವಣಿಕದಲ್ಲಿ ಪ್ರೌಢಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ. ನಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಕೊಡಿ ಎಂಬ ಮನವಿಯೊಂದಕ್ಕೆ ಬಸವರಾಜ ರಾಯರೆಡ್ಡಿ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಬಸವರಾಜ ರಾಯರೆಡ್ಡಿ ಅವರ ಮಾತುಗಳು ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬೀಳಲು ದಾರಿ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ತಂದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಅಲ್ಲದೆ ಹಲವು ಬಾರಿ ಹಲವು ಶಾಸಕರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತುಗಳನ್ನು ಆಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಸರಗೂರು: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಮಾಡುತ್ತಾ ಬಂದಿದ್ದಾರೆ. ಆದ್ದರಿಂದ ನಾವುಗಳು ಶಿವಾರ್ಚಕ ಎಂದು ಜಾತಿ ಗಣತಿಯಲ್ಲಿ ಬರೆಸಬೇಕು ಎಂದು ಶಿವಾರ್ಚಕ ಸಂಘದ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಕೃತ ಪಾಠಶಾಲೆ ಶೈವಾಗಮ ನಿವೃತ್ತ ಪ್ರಾಧ್ಯಾಪಕ ವಿದ್ವಾನ್ ಎಂ. ಮಲ್ಲಣ್ಣ ಸಮಾಜದವರಿಗೆ ಮನವರಿಕೆ ನೀಡಿದರು. ಪಟ್ಟಣದ ಜೈನ ಭವನದಲ್ಲಿ ಶನಿವಾರದಂದು ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಶಿವಾರ್ಚಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಸಂಘದ 2024–25 ನೇ ಸಾಲಿನ 10 ನೇ ವರ್ಷದ ವಾರ್ಷಿಕ ಸಭೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮೀಕ್ಷೆ ಮಾಡುವ ಸಮಯದಲ್ಲಿ ವೀರಶೈವ, ಲಿಂಗಾಯತ ಎಂದು ಬರಿಸಿ ಎಂದು ಹೇಳುತ್ತಾರೆ. ಆದರೆ ನಾವುಗಳು ಅದನ್ನು ಬದಿಗೆ ಸರಿಸಿ ಶಿವಾರ್ಚಕ ಎಂದು ಅವರವರ ಮಾತಿಗೆ ಕಡೆಗೆ ಹೋಗದೆ ಶಿವಾರ್ಚಕ ಎಂದು ಹೇಳಿ ಬರೆಸಬೇಕು ತಿಳಿಸಿದರು. ಈ ಸಮಾಜ ಅಸ್ತಿತ್ವಕ್ಕೆ ಬರಲು ಸುಮಾರು ವರ್ಷಗಳ ಕಾದಿದೆ. ಶಿವಾರ್ಚಕ ಸಮಾಜ ಏಳು ಜಿಲ್ಲೆಯಲ್ಲಿ ಮಾತ್ರ ಇದೆ. ಈ ಸಮಾಜ 1915 ರಲ್ಲಿ ಪ್ರಾರಂಭವಾಗಿದ್ದು, 35 ವರ್ಷದವರೆಗೆ ಸಮಾಜ…
ಸರಗೂರು: ತಾಲೂಕಿನಲ್ಲಿ ಯುವಕರು ಸೇರಿಕೊಂಡು ನಾಮಧಾರಿ ಗೌಡ ಸಂಘಗಳನ್ನು ಮಾಡಿಕೊಂಡು ಒಳ್ಳೆಯ ಕಾರ್ಯಕ್ರಮ ಮಾಡಿಕೊಂಡು ಎಂದು ಬರುತ್ತಿದ್ದಾರೆ. ಅದು ಸಂತೋಷದ ವಿಷಯ ಎಂದು ನಿವೃತ್ತ ಕೃಷಿ ಅಧಿಕಾರಿ ಕೃಷ್ಣಯ್ಯ ಹೇಳಿದರು. ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯದ ಭವನದಲ್ಲಿ ಭಾನುವಾರದಂದು ನಾಮಧಾರಿ ಗೌಡ ಯುವಕರ ಸಂಘದ 15ನೇ ವರ್ಷದ ವಾರ್ಷಿಕ ಮಹಾಸಭೆ ಹಾಗೂ SSLC ಮತ್ತು PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನಲ್ಲಿ ಮಾತ್ರ ಸಭೆ ಸಮಾರಂಭಗಳು ನಡೆಯುತ್ತವೆ. ಆದರೆ ಬೇರೆ ತಾಲೂಕಿನಲ್ಲಿ ನಾಮಧಾರಿಗೌಡರ ಸಭೆ ನಡೆಯುತ್ತಿಲ್ಲ ಎಂದು ನಾನು ಎಲ್ಲಿ ನೋಡಿಲ್ಲ ಎಂದು ತಿಳಿಸಿದರು. ಮುಂದಿನ ಸಭೆಗಳು ಮಾಡಿದರೆ, ಬೇರೆ ತಾಲೂಕಿನಿಂದ ನಮ್ಮ ಸಮಾಜದವರಿಗೆ ಆಹ್ವಾನ ನೀಡಿ ಬರಮಾಡಿಕೊಳ್ಳಿ. ಏಕೆಂದರೆ ಎರಡು ತಾಲ್ಲೂಕುಗಳಲ್ಲಿ ಸಭೆಗಳನ್ನು ಮಾಡುವುದನ್ನು ನೋಡಿ ಕಾರ್ಯಕ್ರಮವನ್ನು ಮಾಡಲಿ ನಾವು ಕೂಡ ಕಾರ್ಯಕ್ರಮ ಮಾಡಬೇಕು ಎನ್ನುವುದು ಅವರ ಮನದಲ್ಲಿ ಹುಟ್ಟಲಿ ಎಂದು ಸಲಹೆ ನೀಡಿದರು. ಸಂಘ ಪ್ರಾರಂಭದಲ್ಲಿ 20 ಜನ ಸದಸ್ಯರು…
ತುಮಕೂರು: ಪ್ರಪಂಚದ ಗಮನ ಸೆಳೆಯುವ ಮಟ್ಟಿಗೆ ಭಾರತ ಬದಲಾಗಿದ್ದು, ಶಿಕ್ಷಣ ಮತ್ತು ಯುವಕರ ಪಾತ್ರ ಹೆಚ್ಚಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಪಡೆದ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ 96 ಕೋಟಿ ಜನ ಇಂಟರ್ ನೆಟ್ ಬಳಸುತ್ತಿದ್ದಾರೆ. ಬೇರೆ ಯಾವ ದೇಶಗಳ ಜನರು ಇಷ್ಟೊಂದು ಇಂಟರ್ ನೆಟ್ ಬಳಸುತ್ತಿರುವ ಉದಾಹರಣೆಗಳಿಲ್ಲ. ಶಿಕ್ಷಣ ಸಾಕಷ್ಟು ಬದಲಾವಣೆ ತಂದಿದೆ. ಕರ್ನಾಟಕವು ಶೇ.75ರಷ್ಟು ಸಾಕ್ಷರತೆ ಪ್ರಮಾಣ ಹೊಂದಿದೆ. ಭಾರತ ಹೊರತುಪಡಿಸಿದರೆ ವೈದ್ಯರು, ಇಂಜಿನಿಯರ್ ಗಳ ಉತ್ಪಾದನೆಯಾವ ದೇಶದಲ್ಲಿಯೂ ಆಗುತ್ತಿಲ್ಲ. ಶಿಕ್ಷಣದಿಂದ ಇಷ್ಟೆಲ್ಲ ಬದಲಾವಣೆ ಸಾಧ್ಯವಾಗಿದೆ ಎಂದರು. ಪ್ರತಿಭಾ ಪುರಸ್ಕೃತರು ಶೇ. 90ರಷ್ಟು ಅಂಕ ಪಡೆದುಕೊಂಡಿದ್ದಾರೆ. ಕೆಲವು ವಿಷಯಗಳಲ್ಲಿ…
ತುಮಕೂರು: ದೇಶದ ಸ್ವಾತಂತ್ರ್ಯ ಹೋರಾಟಕದಲ್ಲಿ ಶೋಷಿತ ಸಮುದಾಯಗಳು ಮುಂಚೂಣಿಯಲ್ಲಿದ್ದವು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿಕೊಂಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು. ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 39ನೇ ಪುಣ್ಯಸ್ಮರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಪುಷ್ಪನಮನದ ಮೂಲಕ ಗೌರವ ಸಮರ್ಪಣೆ ಸಲ್ಲಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಉಳ್ಳವರು ಮುಂಚೂಣಿಯಲ್ಲಿ ಇರಲಿಲ್ಲ. ಶೋಷಿತ ಸಮುದಾಯದ ಜನರು ಹೆಚ್ಚಾಗಿ ಮುಂಚೂಣಿಯಲ್ಲಿದ್ದರು. ಬಾಬು ಜಗಜೀವನ್ ರಾಮ್ ಅವರು ನಾಯಕತ್ವ ವಹಿಸಿದ್ದರು. ಸ್ವಾತಂತ್ರ್ಯ ನೀಡುವುದಾದರೆ ಜನರ ಆಶೋತ್ತರಗಳನ್ನು ಈಡೇರಿಸಬೇಕು ಎಂದು ಬಾಬು ಜಗಜೀವನ್ ರಾಮ್ ಅವರು ಧೈರ್ಯವಾಗಿ ಹೇಳಿದ್ದನ್ನು ನಾವೆಲ್ಲ ಸ್ಮರಿಸಬೇಕು ಎಂದರು. ದೇಶದ ಮಹಾನ್ ನಾಯಕರ ಹುಟ್ಟುಹಬ್ಬ, ಪುಣ್ಯಸ್ಮರಣೆಯ ಆಚರಣೆಗಳು, ಅವರ ಆದರ್ಶಗಳನ್ನು ಸ್ಮರಿಸಿಕೊಳ್ಳಲು ಉಪಯೋಗವಾಗುತ್ತವೆ. ಅವರ ಜೀವನ ಚರಿತ್ರೆಯನ್ನು ನಾವು ಸ್ಮರಿಸಿದರೆ ಮುಂದಿನ ಪೀಳಿಗೆಗೂ ಗೊತ್ತಾಗುತ್ತದೆ. ನಾವೆಲ್ಲ ಹೋರಾಟದ ದಾರಿಯಲ್ಲಿ ಹೋಗುತ್ತಿದ್ದೇವೆ. ಇದಕ್ಕೆ ಬಾಬು…
ತುಮಕೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತುಮಕೂರಿನ ಖಾಸಗಿ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ನಾಜರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಜುಲೈ 1 ನೇ ತಾರೀಖು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಕೊಠಡಿಯಲ್ಲಿ ಬಾಂಡ್ ಪೇಪರ್ ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ ಸೇರಿದಂತೆ, ಡೆತ್ ನೋಟ್ ಮತ್ತು ಬಾಂಡ್ ಪೇಪರ್ ಪೊಲೀಸರ ವಶಕ್ಕೆ ಪಡೆದಿದ್ದಾರೆ. 4 ನೇ ಮಹಡಿಯಲ್ಲಿ ರೂಂ ಬಾಡಿಗೆ ಪಡೆದಿದ್ರು, ಲಾಡ್ಜ್ ರೂಂ ನಲ್ಲೇ ರೂಂ ನಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಕುಟುಂಬದ ಸಮಸ್ಯೆಗಳನ್ನ ಬರೆದಿಟ್ಟು ನನ್ನ ಸಾವಿಗೆ ನಾನೇ ಕಾರಣ ಎಂದು ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಾಗ, ಲಾಡ್ಜ್ ಸಿಬ್ಬಂದಿ…
ತುಮಕೂರು: ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನ ಹಾಡಹಗಲೇ ಚಾಕುವಿನಿಂದ ಚುಚ್ಚಿ ಭೀಕರ ಕೊಲೆ ಮಾಡಿರೋ ಘಟನೆ ತುಮಕೂರು ನಗರದ ಬಟವಾಡಿ ಬಳಿಯ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ತುಮಕೂರು ನಗರದ ಕೋತಿತೋಪು ನಿವಾಸಿ ನಫೀಸ್ ಅಹಮದ್(33) ಭೀಕರವಾಗಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಫೈರೋಜ್ ಪಾಷಾ ಎನ್ನುವ ವ್ಯಕ್ತಿಯು ಕೊಲೆ ಮಾಡಿದ್ದಾನೆ. ಕೊಲೆಯಾದ ನಫೀಸ್ ಅಹಮ್ಮದ್ ಟೈಲ್ಸ್ ಕೆಲಸ ಮಾಡ್ತಿದ್ದನು. ಆರೋಪಿ ಫೈರೋಜ್ ಪಾಷಾ, ಬೈಕ್ ಗ್ಯಾರೇಜ್ ಇಟ್ಟುಕೊಂಡಿದ್ದನು. ಆರೋಪಿ ಫೈರೋಜ್ ಪಾಷಾ ಎಂಬಾತನಿಂದ ಸಾಲವಾಗಿ ನಫೀಸ್ ಅಹಮ್ಮದ್ ನಿಂದ ಹಣ ಪಡೆದಿದ್ದನು. ಹಣದ ವಿಚಾರಕ್ಕೆ ಇಬ್ಬರ ನಡುವೆ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಎನ್ ಇಪಿಎಸ್ ಪೊಲೀಸ್ ಠಾಣೆ ಪೊಲೀಸರು ಹಾಗೂ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ಭೇಟಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಎನ್ ಇಪಿಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಆರೋಪಿ ಫೈರೋಜ್ ಪಾಷಾ ನನ್ನ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…