Subscribe to Updates
Get the latest creative news from FooBar about art, design and business.
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
Author: admin
ತುಮಕೂರು: ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ನಗರದಲ್ಲಿರುವ ಬಾಲ ಭವನವನ್ನು ಅತ್ಯಾಧುನಿಕವಾಗಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್, ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಜಿಲ್ಲಾ ಬಾಲಭವನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಮಕ್ಕಳಿಗೆ ವಿವಿಧ ಚಟುವಟಿಕೆಗಳ ಮೂಲಕ ಅವಕಾಶ ನೀಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಜಿಲ್ಲಾ ಬಾಲಭವನ ಅಭಿವೃದ್ಧಿಗೊಳಿಸಲು ಮಾಸ್ಟರ್ ಪ್ಲಾನ್ ರೂಪಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಡಾ.ಎಸ್.ಸಿದ್ದರಾಮಣ್ಣ ರವರಿಗೆ ನಿರ್ದೇಶನ ನೀಡಿದರು. 5–16 ವರ್ಷದ ಮಕ್ಕಳು ಬಾಲಭವನದಲ್ಲಿ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಬೇಕು. ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ರೂಪಿಸಬೇಕು. ಬಾಲ ಭವನ ಕಟ್ಟಡ ನೆಲಮಾಳಿಗೆ ನೀರಿನಿಂದ ಆವೃತಗೊಳ್ಳದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಉಪನಿರ್ದೇಶಕರಾದ ಡಾ ಎಸ್ ಸಿದ್ದರಾಮಣ್ಣ, ಜಿಲ್ಲಾ ಬಾಲಭವನ ಸಮಿತಿ, ವ್ಯವಸ್ಥಾಪಕರಾದ, ಚಿದಾನಂದ ಮೂರ್ತಿ, ಜಿಲ್ಲಾ ಮಕ್ಕಳ ರಕ್ಷಣಾ…
ಪಾವಗಡ: ತಾಲೂಕಿನ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ವಸತಿ ಶಾಲೆಗಳ ಪ್ರಾಂಶುಪಾಲರು ಶಾಸಕ ಎಚ್. ವಿ. ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಿದರು. ಶಾಸಕರ ತೋಟದ ಮನೆಗೆ ಭೇಟಿ ನೀಡಿದ ಕ್ಷೇತ್ರದ ವಿವಿಧ ವಸತಿ ಶಾಲೆಗಳ ಪ್ರಾಂಶುಪಾಲರ ನಿಯೋಗವು ಅಧಿಕೃತವಾಗಿ ಮನವಿ ಪತ್ರವನ್ನು ಹಸ್ತಾಂತರಿಸಿತು. ಶಾಲಾ ಆವರಣಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹೈಮಾಸ್ಕ್ ವಿದ್ಯುತ್ ದೀಪಗಳನ್ನು ಅಳವಡಿಸಬೇಕು, ಜಲ್ ಜೀವನ್ ಮಿಷನ್ ಯೋಜನೆಯಡಿ ವಸತಿ ಶಾಲೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಇತರೆ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಪ್ರಾಂಶುಪಾಲರು ಶಾಸಕರಲ್ಲಿ ವಿನಂತಿಸಿದರು. ಮನವಿಯನ್ನು ಸ್ವೀಕರಿಸಿ ಮಾತನಾಡಿದ ಶಾಸಕ ಎಚ್. ವಿ. ವೆಂಕಟೇಶ್ ಅವರು, “ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ಅವರ ಉಜ್ವಲ ಭವಿಷ್ಯ ನಮಗೆ ಮುಖ್ಯ. ವಸತಿ ಶಾಲೆಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಚರ್ಚೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು”…
ತಿಪಟೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ‘ಎಸ್ ಐಆರ್’ (SIR) ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಈ ಪ್ರಕ್ರಿಯೆಗೆ ಒಳಗಾಗುವ ಜನಸಾಮಾನ್ಯರಿಗೆ ಯಾವುದೇ ಅನಾನುಕೂಲ ಆಗದಂತೆ ಅಗತ್ಯ ದಾಖಲಾತಿಗಳ ಲಭ್ಯತೆಯ ಬಗ್ಗೆ ವ್ಯಾಪಕ ಜಾಗೃತಿ ಮೂಡಿಸಬೇಕಾಗಿದೆ ಎಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಸಿ.ಬಿ. ಶಶಿಧರ್ (ಟೂಡಾ) ತಿಳಿಸಿದರು. ನಗರದ ರೋಟರಿ ಭವನದಲ್ಲಿ ಜನಸ್ಪಂದನ ಟ್ರಸ್ಟ್ ಹಾಗೂ ವಿವಿಧ ಜನಪರ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಎಸ್ಐಆರ್’ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಅಕ್ಷರವಂಚಿತರು, ಅಲೆಮಾರಿಗಳು, ಆದಿವಾಸಿಗಳು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಹಿರಿಯ ನಾಗರಿಕರಿಗೆ ಈ ಪ್ರಕ್ರಿಯೆಯ ಬಗ್ಗೆ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ. ಮುಖ್ಯವಾಗಿ, ಸಾಮಾನ್ಯ ಮತದಾರರ ಮತ ಚಲಾಯಿಸುವ ಅಧಿಕಾರ ಮತ್ತು ಹಕ್ಕನ್ನು ಸಂರಕ್ಷಿಸುವುದೇ ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ ಎಂದು ಶಶಿಧರ್ ಹೇಳಿದರು. ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ನುಸುಳುಕೋರರನ್ನು ಪತ್ತೆ ಹಚ್ಚುವ ಕೆಲಸಕ್ಕಾಗಿ ಎಸ್ ಐಆರ್ ಪ್ರಕ್ರಿಯೆಯನ್ನು ಜಾರಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.…
ತುಮಕೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವತಿಯಿಂದ ಇಂದು ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ‘ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ’ (PM-VBRY) ಅಡಿಯಲ್ಲಿ ₹2,400 ಕೋಟಿಗೂ ಅಧಿಕ ಪ್ರೋತ್ಸಾಹಧನವನ್ನು ದೇಶದ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ನೇರವಾಗಿ ವಿತರಿಸಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಮುಖ್ಯ ಕಾರ್ಯಕ್ರಮ ಜರುಗಿದರೆ, ದೇಶದ ವಿವಿಧ 200 ಸ್ಥಳಗಳಲ್ಲಿ ಪ್ರಾದೇಶಿಕ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಇದರ ಅಂಗವಾಗಿ ತುಮಕೂರಿನ ಸಿದ್ದಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (SIT) ಕಾಲೇಜಿನ ಬಿರ್ಲಾ ಸಭಾಂಗಣದಲ್ಲಿ ಪ್ರಾದೇಶಿಕ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ: ತುಮಕೂರು ನಗರದ ಶಾಸಕರಾದ ಜಿ. ಬಿ. ಜ್ಯೋತಿ ಗಣೇಶ್ ಅವರು, ಈ ಪ್ರಾದೇಶಿಕ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಇಪಿಎಫ್ ಒ (EPFO) ಪ್ರಾದೇಶಿಕ ಕಚೇರಿಯ ಕಮಿಷನರ್-II ವಂಶಿ ಕೃಷ್ಣ ದಿಂಡಿ, ತುಮಕೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ…
ಶಿವಮೊಗ್ಗ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್–ಯುಜಿ 2026) ಯು ನಗರದಲ್ಲಿ ಜೂನ್ 21 ರಂದು ಮಧ್ಯಾಹ್ನ 2 ರಿಂದ ಸಂಜೆ 05.15 ರವರೆಗೆ ನಡೆಯಲಿದ್ದು ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ನೀಟ್(ಯುಜಿ)–2026 ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಿವಮೊಗ್ಗ ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು. ನಿಷೇಧಾಜ್ಞೆ ಜಾರಿ: ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಭದ್ರತೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ…
ಬಳ್ಳಾರಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೇಂದರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ (ಡಯಾಬಿಟಿಸ್) ಮತ್ತು ರಕ್ತದೊತ್ತಡದ (ಬಿಪಿ) ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು. ಆಧುನಿಕ ಜೀವನಶೈಲಿಯಲ್ಲಿ ಎದುರಾಗುವ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳಿಗೆ ಯೋಗ…
ಬಳ್ಳಾರಿ: ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸಿ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರು ವಿಶೇಷ ಹೆಜ್ಜೆ ಇಟ್ಟಿದ್ದಾರೆ. ಹಾಗಾಗಿ ಅವರು ತಮ್ಮ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕ್ಷೇತ್ರದ ಬಂಡಿಹಟ್ಟಿ ಮತ್ತು ಎತ್ತಿನ ಬೂದಿಹಾಳ್ ಗ್ರಾಮದ ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿಗಾಗಿ ತಲಾ 10 ಲಕ್ಷ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದು, ಶುಕ್ರವಾರ ಈ ಶಾಲೆಗಳನ್ನು ದತ್ತು ಪಡೆದುಕೊಂಡರು. ಆಯ್ಕೆಯಾದ ಎರಡು ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂ. ಗಳಂತೆ ಒಟ್ಟು 20 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿನ ಮೂಲಸೌಕರ್ಯ ಕೊರತೆಯನ್ನು ನೀಗಿಸುವುದು, ಡಿಜಿಟಲ್ ಕಲಿಕೆಗೆ ಉತ್ತೇಜನ ಮತ್ತು ಆಕರ್ಷಕ ಶಾಲಾ ವಾತಾವರಣ ನಿರ್ಮಾಣ ಮಾಡುವುದಾಗಿದೆ. ಈ ಅನುದಾನದಡಿ ಶಾಲಾ ಕಟ್ಟಡಗಳ ದುರಸ್ತಿ, ಸುಣ್ಣ-ಬಣ್ಣ, ಆಧುನಿಕ ಶೌಚಾಲಯಗಳ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಮ್ ಹಾಗೂ…
ಬಳ್ಳಾರಿ: ಸಮಾಜದಲ್ಲಿ ಮಹಿಳೆಯರಿಗಿರುವ ಹಲವು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರಿನ ಒಂದೆಡೆ ಸಂಸ್ಥೆಯ ಸಂಸ್ಥಾಪಕರಾದ ಡಾ.ಅಕ್ಕೈ ಪದ್ಮಶಾಲಿ ಅವರು ಹೇಳಿದರು. ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ವಿಶ್ವವಿದ್ಯಾಲಯದ ಇಂಗ್ಲೀಷ್ ಅಧ್ಯಯನ ವಿಭಾಗ, ಯುಜಿ ಇಂಗ್ಲೀಷ್ ಶಿಕ್ಷಕರ ಸಂಘ ಹಾಗೂ ಇಂಗ್ಲೀಷ್ ಹಳೆಯ ವಿದ್ಯಾರ್ಥಿಗಳು ಜಂಟಿಯಾಗಿ ಶುಕ್ರವಾರ ಆಯೋಜಿಸಲಾಗಿದ್ದ ‘ಬಾಡಿ ಆ್ಯಂಡ್ ಲಿಟ್ ರೆಚರ್’ ಒಂದು ದಿನದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ದೇವದಾಸಿಯರು, ದಲಿತ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ಸ್ವಾವಲಂಬಿ ಜೀವನ ನಡೆಸುವಂತರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಸಮಾಜದಲ್ಲಿ ವ್ಯಕ್ತಿ ಗೌರವ, ಹಕ್ಕು ಸ್ವಾತಂತ್ರ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಹಲವಾರು ನೈತಿಕ ವಿಚಾರಗಳ ಕುರಿತು ವಿದ್ಯಾರ್ಥಿಗಳು, ಸಂಶೋಧಕರು ಗಂಭೀರವಾಗಿ ಚಿಂತನೆ ನಡೆಸಿ, ಸಮಾಜದ ಪರಿವರ್ತನೆಗೆ ಮುಂದಾಗಬೇಕು ಎಂದು ಹೇಳಿದರು. ವಿವಿಯ ಕುಲಸಚಿವ ಪ್ರೊ.ವಿ.ಲೋಕೇಶ್, ಕಲಾ ನಿಕಾಯದ ಡೀನರಾದ ಪ್ರೊ.ರಾಬರ್ಟ್ ಜೋಸ್, ಯುಜಿ…
ನವದೆಹಲಿ: ದೇಶದ ಉದ್ಯೋಗಾಧಾರಿತ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲು ನಿರ್ಮಾಣವಾಗಿದ್ದು, ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM–Viksit Bharat Rozgar Yojana) ಅಡಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫಲಾನುಭವಿಗಳಿಗೆ ₹2,400 ಕೋಟಿ ಮೊತ್ತದ ಪ್ರೋತ್ಸಾಹಧನವನ್ನು ವಿತರಿಸಿದರು. ಈ ಯೋಜನೆಯ ಮೂಲಕ ದೇಶದಾದ್ಯಂತ ಈಗಾಗಲೇ ಸುಮಾರು 15 ಲಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗಿದ್ದು, ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವುದು, ಯುವಜನರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವುದು, ಕಾರ್ಮಿಕರನ್ನು ಸಂಘಟಿತ ವಲಯಕ್ಕೆ ಸೇರ್ಪಡೆಗೊಳಿಸುವುದು ಹಾಗೂ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, “ಪ್ರಧಾನಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಹೊಸ ಭಾರತದ ಗುರುತಾಗಿದೆ. ಯುವಜನರಿಗೆ ಅವಕಾಶಗಳು ಲಭಿಸುವ, ಕೈಗಾರಿಕೆಗಳಿಗೆ ಉತ್ತೇಜನ ದೊರೆಯುವ ಹಾಗೂ ಉದ್ಯೋಗ ಸೃಷ್ಟಿಯು ರಾಷ್ಟ್ರೀಯ ಅಭಿಯಾನವಾಗುವ ಭಾರತ ನಿರ್ಮಾಣಕ್ಕೆ ಈ ಯೋಜನೆ ನೆರವಾಗಲಿದೆ” ಎಂದು ಹೇಳಿದರು. “ಭಾರತವು ವಿಶ್ವದ ಅತ್ಯಂತ ಯುವ ರಾಷ್ಟ್ರಗಳಲ್ಲಿ ಒಂದಾಗಿದೆ. ಆದ್ದರಿಂದ ವಿಕಸಿತ…
ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಎಐಡಿಎಸ್ ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ತುಮಕೂರಿನ ಟೌನ್ ಹಾಲ್ ಬಳಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆಯಿತು. ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, NEET–2026ರ ಪ್ರಶ್ನೆಪತ್ರಿಕೆ ಸೋರಿಕೆ ಯಾವುದೋ ಆಕಸ್ಮಿಕ ಘಟನೆ ಅಲ್ಲ. 2022, 2024 ಹಾಗೂ ಈಗ 2026ರಲ್ಲೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಬಹಿರಂಗಪಡಿಸಿವೆ. ಪ್ರತಿ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಯುತ್ತಿದ್ದರೂ, ಕೇಂದ್ರ ಶಿಕ್ಷಣ ಸಚಿವರಿಂದ ಹಿಡಿದು NTA ಯ ಯಾರೊಬ್ಬರೂ ಜವಾಬ್ದಾರಿ ಹೊರುವುದಕ್ಕೆ ತಯಾರಿಲ್ಲ. ಭ್ರಷ್ಟಾಚಾರ ತಡೆಗಟ್ಟುವ ಹೆಸರಿನಲ್ಲಿ ಜಾರಿಯಾದ NEET ಇಂದು ಕೋಟ್ಯಂತರ ರೂಪಾಯಿಗಳ ಕೋಚಿಂಗ್ ಉದ್ಯಮಕ್ಕೆ ದಾರಿ ಮಾಡಿಕೊಟ್ಟಿದೆ. ಶಿಕ್ಷಣ ಹಕ್ಕಾಗಿರದೆ ವ್ಯಾಪಾರದ ವಸ್ತುವಾಗಿ ಮಾರ್ಪಡುತ್ತಿದೆ…