Author: admin

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆ ಗುರುವಾರ ತುಮಕೂರು ಜಿಲ್ಲೆಯ ಬುಕ್ಕಪಟ್ಟಣ ಚಿಂಕಾರ ವನ್ಯಜೀವಿ ಅಭಯಾರಣ್ಯದಲ್ಲಿ ಅತಿಕ್ರಮಣಗೊಂಡಿದ್ದ 300 ಎಕರೆ ಭೂಮಿಯನ್ನು ವಶಪಡಿಸಿಕೊಂಡಿದೆ. ಮುತ್ತುಗದಹಳ್ಳಿ ಅಂಬರಪುರದ ಸರ್ವೆ ಸಂಖ್ಯೆ 46 ರಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಅರಣ್ಯ ಹಕ್ಕು ಕಾಯ್ದೆಯಡಿ 1926 ರಲ್ಲಿ ಅರಣ್ಯ ಭೂಮಿ ಎಂದು ಘೋಷಿಸಲಾಯಿತು. ಅರಣ್ಯ ಇಲಾಖೆಯ ದಾಖಲೆಗಳ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಇದು ಅತಿದೊಡ್ಡ ಪ್ರಮಾಣದಲ್ಲಿ ವಶಪಡಿಸಿಕೊಂಡ ಅರಣ್ಯ ಭೂಮಿಯಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತಿಪಟೂರು: ತಾಲ್ಲೂಕಿನ ಪುರಾಣ ಪ್ರಸಿದ್ದ ಐತಿಹಾಸಿಕ ಪುಣ್ಯಕ್ಷೇತ್ರ ಗಂಗನಘಟ್ಟದ ಶ್ರೀ ವಡ್ಡುಗಲ್ಲು ರಂಗನಾಥಸ್ವಾಮಿ ಯವರ ಬ್ರಹ್ಮ ರಥೋತ್ಸವವು ಜುಲೈ 7ರಂದು ಸಂಜೆ ಜರುಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಾತ್ರಾ ಮಹೋತ್ಸವು ಜುಲೈ 5 ರಂದು ಪ್ರಾರಂಭವಾಗಿ ಸಂಜೆ 6 ಗಂಟೆಗೆ ಭಗವದನುಜ್ಙೆ, ವಿಶ್ವೇಕ್ಸೇನಾರಾಧನೆ, ವಾಸುದೇವ ಪುಣ್ಯಾಹ ವಾಚನ, ರಕ್ಷಾ ಬಂಧನ, ಮೃತ್‌ಸಂಗ್ರಹಣೆ, ಅಂಕುರಾರ್ಪಣೆ, ಗರುಡಧ್ವಜ ಪ್ರತಿಷ್ಠೆ. ಜುಲೈ 6 ರಂದು ಬೆಳಗ್ಗೆ ಧ್ವಜಾರೋಹಣ, ಚತುಸ್ಥಾನಾರ್ಚನೆ, ಅಭಿಷೇಕ, ನಂದಾದೀಪ ಸ್ಥಾಪನೆ, ಅಗ್ನಿ ಪ್ರತಿಷ್ಠೆ, ಮಹಾಮಂಗಳಾರತಿ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 5 ಗಂಟೆಗೆ ರಥಕ್ಕೆ ಕಲಶ ಸ್ಥಾಪನೆ, ಚತುಸ್ಥಾನಾರ್ಚನೆ, ಗಜೇಂದ್ರ ಮೋಕ್ಷ, ಶ್ರೀಲಕ್ಷ್ಮೀ ಕಲ್ಯಾಣೋತ್ಸವ. ಜುಲೈ 7ರಂದು ಬೆಳಗ್ಗೆ ಚತುಸ್ಥಾನಾರ್ಚನೆ, ಸಹಸ್ರನಾಮಾರ್ಚನೆ, ಸಂಜೆ 4:30ಕ್ಕೆ ಬ್ರಹ್ಮ ರಥೋತ್ಸವ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ. ನಂತರ ಸಂಜೆ 7 ಗಂಟೆಗೆ ಶಯನೋತ್ಸವ ಮತ್ತು ಜುಲೈ 8 ರ ಬೆಳಗ್ಗೆ ಬೆಳಗ್ಗೆ ಚತುಸ್ಥಾನಾರ್ಚನೆ, ಧ್ವಜ ಅವರೋಹಣ, ಮಹಾಪೂರ್ಣಾಹುತಿ, ಅಶ್ವವಾಹನೋತ್ಸವಗಳು ಜರುಗಲಿವೆ…

Read More

ಅಕ್ರಾ:  ಪ್ರಧಾನಿ ನರೇಂದ್ರ ಮೋದಿ ಅವರಿಗೆ “ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವ” ಕ್ಕಾಗಿ ದೇಶದ ರಾಷ್ಟ್ರೀಯ ಗೌರವವಾದ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಯನ್ನು ಬುಧವಾರ ಘಾನಾದ ಅಧ್ಯಕ್ಷ ಜಾನ್ ಡ್ರಾಮಾನಿ ಮಹಾಮ ಅವರಿಂದ ಪ್ರದಾನ ಮಾಡಿದರು. ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರಶಸ್ತಿಗೆ ಭಾಜನರಾಗಿರುವುದು ಗೌರವ ತಂದಿದೆ ಎಂದು ಪ್ರಧಾನಿ ಎಕ್ಸ್‌ ನಲ್ಲಿ ಹೇಳಿದ್ದಾರೆ. ತಮ್ಮ ಸ್ವೀಕಾರ ಭಾಷಣದಲ್ಲಿ, ಈ ಪ್ರಶಸ್ತಿ ತಮಗೆ ಅತ್ಯಂತ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ ಎಂದು ಮೋದಿ ಹೇಳಿದರು. 140 ಕೋಟಿ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿಯನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿದ ಅವರು, ಎರಡು ದೇಶಗಳ ಯುವಕರ ಆಕಾಂಕ್ಷೆಗಳು ಮತ್ತು ಉಜ್ವಲ ಭವಿಷ್ಯ, ಘಾನಾ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ಅವರ ಶ್ರೀಮಂತ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ವೈವಿಧ್ಯತೆಗೆ…

Read More

ಸರಗೂರು:  ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಂಧತ್ವ ನಿವಾರಣೆಗಾಗಿ ಇಂದಿನಿಂದ  ರಾಜ್ಯಾದ್ಯಂತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು  ಜುಲೈ 3ರಂದು ರಾಜ್ಯದಲ್ಲಿ ಒಟ್ಟು 393 ಕೇಂದ್ರಗಳಲ್ಲಿ ಏಕಕಾಲದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು. ತಾಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಈ ಕಾರ್ಯ ಕ್ರಮದಲ್ಲಿ ಮೊದಲಿಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನ ನಿತ್ಯದ ಚಟುವಟಿಕೆಯಲ್ಲಿ ಮನೆ ಮನೆ ಭೇಟಿ ನೀಡಿ ಪ್ರಾಥಮಿಕ ತಪಾಸಣೆ ಮಾಡುತ್ತಾರೆ, ತಪಾಸಣೆಯಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳಿಸುವುದು, ಅಗತ್ಯ ಚಿಕಿತ್ಸೆಗೆ ನೆರವು ಮಾಡಿ ಕೊಡುವುದು ಎಂದರು. ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು  1,470 ಕನ್ನಡಕಗಳು ಬಂದಿರುತ್ತವೆ. ಇದರಲ್ಲಿ1,092 ಫಲಾನುಭವಿಗಳಿಗೆ…

Read More

ಮೈಸೂರು:  ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ ಎಂದು ಸಂಸದ ಯದುವೀರ್ ಒಡೆಯರ್  ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗವಾಗಿದೆ. ಚಾಮುಂಡಿ ಬೆಟ್ಟದಲ್ಲೂ ವಸ್ತ್ರ ಸಂಹಿತೆ ಜಾರಿಯಾಗಬೇಕು ಎಂದರು. ತಿರುಪತಿ ಮಾದರಿ ಚಾಮುಂಡಿ ಬೆಟ್ಟದಲ್ಲೂ ಮೊಬೈಲ್ ನಿರ್ಬಂಧ ಮಾಡಬೇಕು. ಇತ್ತೀಚಿಗೆ ಕೆಲವರು ಗೊತ್ತಿದ್ದೋ ಗೊತ್ತಿಲ್ಲದೋ ದೇವಿಯ ಮೂಲ ವಿಗ್ರಹದ ವೀಡಿಯೋ ಮಾಡುತ್ತಿದ್ದಾರೆ. ಇದು ಧಾರ್ಮಿಕ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕಾನೂನನ್ನು ಜಾರಿ ಮಾಡಬೇಕು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರ  ಒಳ ಮೀಸಲಾತಿ ಜಾರಿಗೊಳಿಸದೆ ಇರುವ ಹುನ್ನಾರ ನಡೆಸಿದಂತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮಾಧುಸ್ವಾಮಿ ಅವರ ಸಮಿತಿ ರಚಿಸಿ ಒಳ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಿತ್ತು. ಅದನ್ನು ಕೂಡಲೇ ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು. ಮಾಡದೆ ಇದ್ದಲ್ಲಿ ಆಗಸ್ಟ್ 1ರಿಂದ ನಾವು ರಾಜ್ಯದ ಉದ್ದಗಲಕ್ಕೂ ಹೋರಾಟ ಮಾಡುತ್ತೇವೆ. ರಾಜ್ಯ ಸರಕಾರದ ವಿರುದ್ಧ ಅಸಹಕಾರ ಚಳವಳಿ ಮಾಡಲು ತಯಾರಿದ್ದೇವೆ ಎಂದು ಎಚ್ಚರಿಸಿದರು. ಅಸ್ಪಶ್ಯರು ತಮ್ಮ ಬದುಕಿಗಾಗಿ– ಉಳಿವಿಗಾಗಿ ದೊಡ್ಡ ಆಂದೋಲನ ಮಾಡಲು ಸಿದ್ಧರಿದ್ದೇವೆ ಎಂದು ಪ್ರಕಟಿಸಿದರು. ಇದೇ 31ರೊಳಗೆ ಜಾರಿ ಆಗದಿದ್ದರೆ 30 ಜಿಲ್ಲೆಗಳಲ್ಲೂ ಅಸಹಕಾರ ಚಳವಳಿ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವುದಾಗಿ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆಗಬೇಕೆಂಬ ಆಸೆ ನನಗೂ ಇದೆ, ಒಂದು ದಿನ ಡಿ.ಕೆ.ಶಿವಕುಮಾರ್ ಶ್ರಮಕ್ಕೆ ಪ್ರತಿಫಲ ಸಿಗಲಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʻಐ ಹ್ಯಾವ್ ನೋ ಅದರ್ ಆಪ್ಷನ್ʼ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಒಬ್ಬ ಶಿಸ್ತಿನ ಸಿಪಾಯಿ. ಇದನ್ನ ಹಿಂದೆಯೂ ಹೇಳಿದ್ದಾರೆ, ಈಗಲೂ ಹೇಳಿದ್ದಾರೆ.. ಮುಂದೆಯೂ ಹೇಳುತ್ತಾರೆ. ಪಕ್ಷದ ಶಿಸ್ತನ್ನ ಪಾಲಿಸಿದ್ದಾರೆ. ಡಿ.ಕೆ ಶಿವಕುಮಾರ್ ರದ್ದು ಅಸಹಾಯಕತೆ ಅಲ್ಲ. ಪಕ್ಷಕ್ಕೆ ಗೌರವ ಕೊಡೋದು, ನಾಯಕತ್ವಕ್ಕೆ ಗೌರವ ಕೊಡೋದು. ಪಕ್ಷದ ಅಧ್ಯಕ್ಷರಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ನನಗೂ ಅವರು ಸಿಎಂ ಆಗಬೇಕು ಎಂಬ ಆಸೆ ಇದೆ. ಯಾವಾಗ ಏನು ಎಂಬುದನ್ನ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು. ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು , ಸಿಎಂ ಹೇಳಿರೋದ್ರಲ್ಲಿ ತಪ್ಪೇನಿದೆ? ಸಿಎಂ ಆಗಿರೋರು ಸಿಎಂ ಆಗಿ…

Read More

ಬೀದರ್:  ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಕಮಲನಗರ ಪೊಲೀಸ್ ಠಾಣಾ ಪೊಲೀಸರು,  ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 18 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ   ಪ್ರದೀಪ್ ಗುಂಟಿ ಮಾರ್ಗದರ್ಶನದಂತೆ ಕಮಲನಗರ ಪೊಲೀಸ್ ಠಾಣಾ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕರ್ನಾಟಕ–ಮಹಾರಾಷ್ಟ್ರ ಗಡಿಯ ಹತ್ತಿರ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪಿ.ಎಸ್.ಐ ಚಂದ್ರಶೇಖರ,  ತಮ್ಮ ಸಿಬ್ಬಂದಿ ರವರೊಂದಿಗೆ  ಶಿವಾನಂದ, ಆಹಾರ ನಿರೀಕ್ಷಕರು, ತಹಸಿಲ್ ಕಛೇರಿ ಕಮಲನಗರ ರವರ ಸಮಕ್ಷಮ ದಾಳಿ ನಡೆಸಿದರು. 61,200 ಮೌಲ್ಯದ ಅಕ್ಕಿ ಹಾಗೂ 5,00,000 ರೂ. ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

*  ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಯೋಜನೆ *  ಉತ್ಪಾದನಾ ವಲಯ ಮತ್ತು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಿಗೆ ಪ್ರೋತ್ಸಾಹಧನ ನೀಡುವತ್ತ ಗಮನ ಹರಿಸಲಿದೆ *  ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರು ಎರಡು ಕಂತುಗಳಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ವೇತನವನ್ನು ಪಡೆಯಲಿದ್ದಾರೆ *  ಒಂದು ಲಕ್ಷ ಕೋಟಿ ರೂ. ನಿಧಿಯನ್ನು ಹೊಂದಿರುವ ಈ ಯೋಜನೆಯು ಎರಡು ವರ್ಷಗಳಲ್ಲಿ 3.5 ಕೋಟಿಗಿಂತ ಅಧಿಕ ಉದ್ಯೋಗಗಳ ಸೃಷ್ಟಿಗೆ ಬೆಂಬಲ ನೀಡಲಿದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಉದ್ಯೋಗ ಆಧರಿತ ಪ್ರೋತ್ಸಾಹಧನ'(ಇಎಲ್‌ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ: ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ…

Read More

ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಪೊಲೀಸ್ ಇಲಾಖೆಯ ಮನೋಬಲಕ್ಕೆ ಧಕ್ಕೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯನವರೇ  ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ್ಮ ಅಧಿಕಾರದ ದರ್ಪವೋ, ಮದವೋ, ದುರಹಂಕಾರವೋ, ವಿಫಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾತಾಳವೋ, ಅದನ್ನ ನಿಮ್ಮ ಆತ್ಮಾವಲೋಕನಕ್ಕೆ ಬಿಡುತ್ತೇನೆ ಎಂದಿದ್ದಾರೆ. ನಿಮ್ಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಶಾಹಿಯ ಆತ್ಮಸ್ಥೈರ್ಯ ಕುಸಿದಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ. ನಿಮ್ಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ಒಂದು ರೀತಿ ತಮ್ಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ. ಇನ್ನಾದರೂ ಈ ಭಂಡ ಬಾಳು ಬಿಡಿ.…

Read More