Subscribe to Updates
Get the latest creative news from FooBar about art, design and business.
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
- ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
- ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
Author: admin
ತುಮಕೂರು: DIGITAL ARREST ಬಗ್ಗೆ ತುಮಕೂರು ಪೊಲೀಸರು ಜಾಗೃತಿ ಮೂಡಿಸಿದ್ದು, ಸಾರ್ವಜನಿಕರಿಗೆ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ವಂಚಕರು Fedex ಕೊರಿಯರ್, Income Tax Officer, E.D, TRAI, ಅಧಿಕಾರಿಗಳೆಂದು ಹೇಳಿಕೊಂಡು ಅನಾಮಧೇಯ ಕರೆ ಅಥವಾ ವಿಡಿಯೋ ಕಾಲ್‌ಗಳನ್ನು ಮಾಡುತ್ತಾರೆ. ಈ ವಂಚಕರು ಅನಾಮಧೇಯ ಕರೆಗಳನ್ನು ಮಾಡಲು ಪ್ರಮುಖವಾಗಿ Whatsapp ಅಥವಾ Skype ನಂತಹ ಅಪ್ಲಿಕೇಶನ್ ಗಳನ್ನು ಬಳಸುತ್ತಾರೆ. ಸಾರ್ವಜನಿಕರನ್ನು ವಂಚಕರು ನಂಬಿಸುವ ವಿಧಾನ: * ಮೇಲ್ಕಂಡಂತೆ ಕರೆ ಮಾಡುವಾಗ ಸದರಿ ನಂಬರ್ ಗಳಿಗೆ ಪೊಲೀಸ್ ಅಥವಾ ಸಂಬಂಧಪಟ್ಟ ಇಲಾಖೆಯ ಚಿತ್ರಗಳನ್ನೇ D.P.ಯಾಗಿ ಬಳಸಿ ಸಾರ್ವಜನಿಕರು ನಂಬುವಂತೆ ಮಾಡುತ್ತಾರೆ. ವಿಡಿಯೋ ಕರೆ ಮಾಡುವಾಗ ಪೊಲೀಸ್ ಇಲಾಖೆಯ ಸಮವಸ್ತ್ರ ಹಾಗೂ ಹಿಂಬದಿಯಲ್ಲಿ ಇಲಾಖೆಯ ಬೋರ್ಡ್ ಅನ್ನು ಬಳಸಿ ನಂಬುವಂತೆ ಮಾಡುತ್ತಾರೆ. * ನೀವು ನಂಬಬಹುದಾದ ಯಾವುದೋ ಒಂದು ಅಪರಾಧವನ್ನು, ನೀವು ಮಾಡಿರುವುದಾಗಿ ನಂಬಿಸಿ ನಿಮ್ಮ ವಿರುದ್ಧ ವಾರೆಂಟ್ ಹೊರಡಿಸಿ ನಿಮ್ಮನ್ನು Digital Arrest ಮಾಡಿರುವುದಾಗಿ ಹೆದರಿಸುತ್ತಾರೆ. * ವಂಚಕರು ನೀವು ಯಾರೊಂದಿಗೂ ಅವರು ಕರೆ…
ಬೀದರ್: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಏಕಾದಶಿ ನಿಮಿತ್ತವಾಗಿ ಜು.5 ರಂದು ಬೀದರ್ ನಿಂದ ಪಂಢರಪುರಕ್ಕೆ ವಿಶೇಷ ರೈಲು ಕಲ್ಪಿಸಲಾಗಿದೆ. ಆಷಾಢ ಏಕಾದಶಿ ದಿನದಂದು ಮಹಾರಾಷ್ಟ್ರದ ಪಂಢರಪುರದಲ್ಲಿರುವ ವಿಠ್ಠಲ್ ರುಕ್ಮಿಣಿ ದೇವಸ್ಥಾನಕ್ಕೆ ಹೋಗಲಿರುವ ಭಕ್ತಾದಿಗಳ ಪ್ರಯಾಣಕ್ಕಾಗಿ ಈ ವಿಶೇಷ ರೈಲು ಒದಗಿಸಲಾಗಿದೆ. ವಿಶೇಷ ರೈಲು ಜು.5ರಂದು ಭಾಲ್ಕಿ ರೈಲು ನಿಲ್ದಾಣಕ್ಕೆ ರಾತ್ರಿ 9:15 ಗಂಟೆಗೆ ಬಂದು 9:17 ಗಂಟೆಗೆ ಪ್ರಯಾಣ ಮುಂದುವರಿಸಲಿದೆ. ನಂತರದಲ್ಲಿ ಬೀದರ್ ನಿಲ್ದಾಣಕ್ಕೆ ರಾತ್ರಿ 9:50 ಗಂಟೆಗೆ ತಲುಪಿ 9:52 ಗಂಟೆಗೆ ಹೊರಡಲಿದೆ. ಈ ರೈಲು ಪಂಢರಪುರಕ್ಕೆ ಜು.6ರಂದು ಬೆಳಿಗ್ಗೆ 8:15 ಗಂಟೆಗೆ ತಲುಪಲಿದೆ ಎಂದು ತಿಳಿದು ಬಂದಿದೆ. ಭಕ್ತರು ಈ ರೈಲಿನ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ಸಾಗರ್ ಖಂಡ್ರೆ ಅವರು ಕೋರಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ಟ್ರಸ್ಟ್ (ರಿ) ಗುಬ್ಬಿ , ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ತುಮಕೂರು ಮತ್ತು ತಾಲ್ಲೂಕು ಘಟಕ ಗುಬ್ಬಿ ಹಾಗೂ ಶ್ರೀಗಂಧ ಸಾಹಿತ್ಯ ಸಾಂಸ್ಕೃತಿಕ ಕಲಾ ಬಳಗ ತುಮಕೂರು ಇವರ ಸಹಯೋಗದಲ್ಲಿ 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಕನ್ನಡ ಭವನ ತುಮಕೂರಿನಲ್ಲಿ ನಡೆಯಿತು. ಸಮ್ಮೇಳನಾಧ್ಯಕ್ಷರಾದ ಗೀತಾ ಲೋಕೇಶ್ ಹಾಗೂ ಹೆಚ್.ಹೆಚ್.ವೆಂಕಟೇಶ್ ಅವರು ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ನಾಟಕ ಭಾರ್ಗವ ಕೆಂಪರಾಜು ಮೈಸೂರು ಅವರು ವಹಿಸಿದ್ದರು. ಆಶಯ ನುಡಿಯನ್ನು ಸಂಸ್ಥಾಪಕ ಅಧ್ಯಕ್ಷರು ಮತ್ತು ಸಾಹಿತ್ಯ ನಿಧಿ ಸಾಹಿತ್ಯ ಮಾಸ ಪತ್ರಿಕೆಯ ಸಂಪಾದಕರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕವಿಗೋಷ್ಠಿ ನಡೆಯಿತು. ಕಾಲ್ಗೆಜ್ಜೆ, ನಸುಕಿಗೊಂದು ಚುಟುಕು, ಅಂತರಾಳದ ಅಭಿವ್ಯಕ್ತಿ, ಹೃದಯ ಗದ್ದುಗೆ ಎಂಬ 4 ಪುಸ್ತಕಗಳ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಯತೀಶ್ ಹೆಚ್.ಸಿ ಗುಬ್ಬಿ ಕ.ಸಾ.ಪ ಅಧ್ಯಕ್ಷರು, ಲಕ್ಷ್ಮಿನಾರಾಯಣ, ಶ್ವೇತಾ ಆಲೂರು, ಕಾಂತರಾಜು ಗುಪ್ಪಟ್ನ, ಬಿದಲೊಟಿ ರಂಗನಾಥ್ ಕವಿಗೋಷ್ಠಿ ಅಧ್ಯಕ್ಷತೆ…
ತುಮಕೂರು: ಕ್ಯಾಂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿರುವ ತುಮಕೂರು ಜಿಲ್ಲೆಯ ಕುಣಿಗಲ್ ಬೈಪಾಸ್ ನಲ್ಲಿ ನಡೆದಿದೆ. ಮೃತರೆಲ್ಲರು ಮಾಗಡಿ ತಾಲೂಕಿನ ಮತ್ತಿಕೆರೆ ಗ್ರಾಮದವರಾಗಿದ್ದಾರೆ. ಸೀಬೆಗೌಡ, ಶೋಭಾ, ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಮಗನನ್ನ ಹಾಸ್ಟೆಲ್ ಗೆ ಬಿಟ್ಟು ಬರಲು ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ರಾಮನಗರ ಜಿಲ್ಲೆ ಮಾಗಡಿ ಪಟ್ಟಣದಲ್ಲಿ ವಾಸವಿದ್ದ ಸಿಬೇಗೌಡ, ಕುಣಿಗಲ್ ಹೊರವಲಯದ ಬಿದನಗೆರೆ ಬಳಿಯಿರುವ ವ್ಯಾಲಿ ಸ್ಕೂಲ್ ನಲ್ಲಿ 8ನೇ ತರಗತಿ ಓದುತ್ತಿದ್ದ ಮಗನನ್ನು ಭಾನುವಾರ ರಜೆ ಹಿನ್ನೆಲೆ, ಮಾಗಡಿಗೆ ತೆರಳಿದ್ದ ಭಾನುಕಿರಣ್ ಗೌಡ, ನಿನ್ನೆ ಊಟ ಮುಗಿಸಿ ಮಗನನ್ನ ಶಾಲೆಯ ಹಾಸ್ಟೆಲ್ ಗೆ ಬಿಟ್ಟು ಬರಲು ಕುಟುಂಬ ಸಮೇತರಾಗಿ ಬಂದಿದ್ದರು. ಈ ವೇಳೆ ಒನ್ ವೇ ಯಲ್ಲಿ ಬಂದ ಕ್ಯಾಂಟರ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜು…
ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು ಹಾದನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದರು. ತಾಲೂಕಿನ ಮುಳ್ಳೂರು ವಲಯದ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಗಲಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸುವುದಲ್ಲದೇ ಮನೆಯಲ್ಲಿ ಬಳಸಿದ ನೀರನ್ನು ಮರು ಬಳಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು. ಕೃಷಿ ಅಧಿಕಾರಿಗಳಾದ ಮಧುಸೂದನ್ ಅವರು ಪರಿಸರ ಸಂರಕ್ಷಣೆಗೆ ಪೂರಕವಾಗಿ ಗಿಡ ನಾಟಿ ಮಾಡುವಂಥದ್ದು ಹಾಗೂ ಮರ ಗಿಡಗಳ ಪಾಲನೆ ಪೋಷಣೆ ಮಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿರಮೇಶ್ ಗಿಡನಾಟಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಳ್ಳೂರು ವಲಯದ ಮೇಲ್ವಿಚಾರಕರದ ನರಸಿಂಹಮೂರ್ತಿ ರವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ…
ತುಮಕೂರು: ಬಿಜೆಪಿಯ ಲಾಲ್ ಕೃಷ್ಣ ಅಡ್ವಾಣಿ ಅವರು 75 ವರ್ಷ ಪೂರ್ಣಗೊಳಿಸಿದ ನಂತರ ಆ ಪಕ್ಷದಲ್ಲಿನ ನಿಯಮಾವಳಿ ಪ್ರಕಾರ ತೆರೆಮರೆಗೆ ಸರಿದಿದ್ದಾರೆ. ಅದೇ ರೀತಿ ಬಿಜೆಪಿ ಪಕ್ಷದಲ್ಲಿ ಸಾಕಷ್ಟು ಬದಲಾವಣೆಗಳು ರಾಷ್ಟ್ರಮಟ್ಟದಲ್ಲಿ ಆಗಬಹುದು ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ ಬಗೆಗಿನ ಕುರಿತು ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರು ನಿರ್ಧರಿಸಲಿದ್ದಾರೆ ಎಂದರು. ಪ್ರಸ್ತುತ ರಾಜಕೀಯ ಚಟುವಟಿಕೆಗಳಲ್ಲಿ ಸಾಕಷ್ಟು ಊಹಾಪೋಹಗಳು ಕೇಳಿ ಬರುತ್ತಿದ್ದು ಅದಕ್ಕೆ ಯಾವುದೇ ರೀತಿ ಅರ್ಥ ಕಲ್ಪಿಸಬೇಕಿಲ್ಲ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಪಕ್ಷ ಸಾಕಷ್ಟು ಸದೃಢವಾಗಿದೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದೆ ಕೆಲವು ಸಣ್ಣಪುಟ್ಟ ಬದಲಾವಣೆಗಳು ಆಗಬಹುದು ಆದರೆ ಕೆಲವು ಊಹಾಪೋಹಗಳು ಕೂಡ ಇದ್ದು ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು : ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ ಮನೆಯೊಳಗೇ ನುಗ್ಗಿದ್ದ ಪರಿಣಾಮ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ಮತ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಬಿ.ಎಚ್.ರಸ್ತೆಯ ಪಕ್ಕದಲ್ಲಿ ಜಮೀನಿನಲ್ಲಿ ಪುಟ್ಟಣ್ಣ ಎಂಬುವವರ ಮನೆಗೆ ಬಸ್ಸು ನುಗ್ಗಿದೆ. ಆಗುಂಬೆ ಯಿಂದ ಕೋಲಾರ ಹೋಗುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ 10ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಆತನ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಪತಿಯ ಮರ್ಡರ್ ಮಾಡಿರುವ ಘಟನೆ ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಶಂಕರಮೂರ್ತಿ(50) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಪತ್ನಿ ಸುಮಂಗಳ, ಪ್ರಿಯಕರ ನಾಗರಾಜು ಎಂಬುವನಿಂದ ಕೃತ್ಯ ಜೂನ್ 24ರಂದು ನಡೆದಿದೆ. ಶಂಕರಮೂರ್ತಿ ಅವರ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಂದು ಹಾಕಲಾಗಿತ್ತು. ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಸುಮಂಗಳ, ಪಕ್ಕದ ಕರಡಾಳುಸಂತೆ ಗ್ರಾಮದ ನಾಗರಾಜು ಜೊತೆ ಪ್ರೀತಿಸುತ್ತಿದ್ದಳು. ಕೊಲೆ ಮಾಡಿದ ಬಳಿಕ ಮೃತದೇಹವನ್ನ ಗೋಣಿಚೀಲದಲ್ಲಿ ತುಂಬಿ 30 ಕಿಲೋಮೀಟರ್ ದೂರ ಸಾಗಿಸಿರುವ ದುಷ್ಕರ್ಮಿಗಳು, ತುರುವೇಕೆರೆ ತಾಲೂಕಿನ ದಂಡನಿಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದರು. ಪೊಲೀಸ್ ಠಾಣೆಯಲ್ಲಿ ಮೊದಲಿಗೆ ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡಿದ್ದ ನೊಣವಿನಕೆರೆ ಪೊಲೀಸರು, ಅನುಮಾನಗೊಂಡು ಬಳಿಕ ಶಂಕರಮೂರ್ತಿಯ ತೋಟದ ತೆರಳಿ ಪರಿಶೀಲಿಸಿದ್ದರು. ಅಲ್ಲಿ ಶಂಕರಮೂರ್ತಿ ಮಲಗಿದ್ದ…
ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಕಂಪು ಪಸರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ದೊರೆತಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಸರಗೂರು: ಶಾಲೆಯ ಹಳೆಯ ನೆನಪುಗಳು ಪರಿಶ್ರಮ, ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ ಎಂದು ರಾಷ್ಟ್ರೀಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಸಮಾಜ ಸೇವಕರೂ ಆದ ಸೋಮಣ್ಣ ಅಭಿಪ್ರಾಯಪಟ್ಟರು. ತಾಲೂಕಿನ ಸಾಗರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರೆ ಗ್ರಾಮ ಪ್ರೌಢಶಾಲೆಯಲ್ಲಿ ಶನಿವಾರದಂದು ಗುರುವಂದನೆ ಕಾರ್ಯಕ್ರಮವನ್ನು ಪ್ರಾಥಮಿಕ ಮತ್ತು ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಗುರುವಂದನಾ, ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಅಂದಿನಿಂದ ಇಲ್ಲಿಯವರೆಗೂ ಸೇವೆ ಸಲ್ಲಿಸಿದ ಗುರುಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ವಿದ್ಯಾರ್ಥಿ ಜೀವನದ ನೂರಾರು ನೆನಪುಗಳು ಕಣ್ಣು ಮುಂದೆ ಬರುವಂತೆ ಮಾಡಿದೆ. ಗುರುವಿನ ಶ್ರೇಷ್ಠತೆ ವಿದ್ಯಾರ್ಥಿ ಜೀವನದಲ್ಲಿ ತಿಳಿಯುವುದಕ್ಕಿಂತ ವೃತ್ತಿ ಜೀವನದ ಪಯಣದಲ್ಲಿ ತಿಳಿಯುವುದು ಹೆಚ್ಚು ಎಂದರು. ಗುರುಗಳ ಮಾರ್ಗದರ್ಶನದಲ್ಲಿ ನಾವು ವಿದ್ಯೆ, ಸಂಸ್ಕಾರವನ್ನು ಕಲಿತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವುದರಿಂದ ಸಮಾಜದಲ್ಲಿ ದೊಡ್ಡಮಟ್ಟದಲ್ಲಿ ಬೆಳೆದಿದ್ದೇವೆ. ಗುರುಗಳು ನಮ್ಮ ಪಾಲಿಗೆ ದೇವರಿದ್ದಂತೆ. ಇಂದಿನ ಯುವ ಪೀಳಿಗೆ ಗುರುಗಳ ಮಾರ್ಗದಲ್ಲಿ ನಡೆದಾಗ ಸದೃಢ ಸಮಾಜ ನಿರ್ಮಾಣ ಮಾಡಲು…