Subscribe to Updates
Get the latest creative news from FooBar about art, design and business.
- ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
- ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
- ಆ.29: ಪಾವಗಡದಲ್ಲಿ ಉದ್ಯೋಗ ಮೇಳ
- ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
- ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
- ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
Author: admin
ಸರಗೂರು: ತಾಲೂಕಿನಲ್ಲಿ ಯಾವುದಾದರೂ ಕಾನೂನು ಬಾಹಿರ ಚಟುವಟಿಕೆಗಳು ನಿಮ್ಮ ಗಮನಕ್ಕೆ ಬಂದ ಕೂಡಲೇ ನಮ್ಮ ಗಮನಕ್ಕೆ ತನ್ನಿ ಅವರ ಮೇಲೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ವೃತ ನಿರೀಕ್ಷಕ ಪ್ರಸನ್ನ ಕುಮಾರ್ ತಿಳಿಸಿದರು. ಪಟ್ಟಣದ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಪತ್ರಕರ್ತರ ಸಭೆ ನಡೆಸಿ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದ ನಂತರ ಮಾತನಾಡಿದರು. ಸರಗೂರು ತಾಲೂಕು ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಅನೇಕ ಸಮಸ್ಯೆಗಳ ಬಗ್ಗೆ ಹಂತ ಹಂತವಾಗಿ ತಿಳಿದುಕೊಳ್ಳಲಾಗುವುದು, ಪಟ್ಟಣ ಇನ್ನಿತರ ಪ್ರದೇಶಗಳಲ್ಲಿ ಜೂಜಾಟ ,ಗಾಂಜಾ, ಅಕ್ರಮ ಲಾಟರಿ, ಅಕ್ರಮ ಮದ್ಯ ಮಾರಾಟ, ಸಂಚಾರ ಸಮಸ್ಯೆ, ಶಾಲಾ ಕಾಲೇಜಿನ ವ್ಯಾಪ್ತಿಯಲ್ಲಿ ಪುಂಡರ ಹಾವಳಿ, ಬಸ್ ನಿಲ್ದಾಣದಲ್ಲಿ ನೋ ಪಾರ್ಕಿಂಗ್ ನಲ್ಲಿ ಕಾರು ಬೈಕ್ ನಿಲ್ಲಿಸುವುದು, ಇನ್ನಿತರ ಸಮಸ್ಯೆಗಳನ್ನು ನಿಯಂತ್ರಿಸುವ ಕ್ರಮ ವಹಿಸಲಾಗುವುದು, ಪಟ್ಟಣದಲ್ಲಿ ಲಾಟರಿ ಮಾರಾಟ ಮಾಡಲು ಮುಂದಾಗಿರುವ ವ್ಯಕ್ತಿಗಳನ್ನು ಕಂಡು ಬಂದರೆ ಸಾರ್ವಜನಿಕರು ನೇರವಾಗಿ ನನಗೆ ಕರೆ ಮೂಲಕ ತಿಳಿಸಿ, ಎರಡನೇ ಮುಖ್ಯ ರಸ್ತೆಯಲ್ಲಿ ಎಸ್.ಬಿ.ಐ ಬ್ಯಾಂಕ್ ಹಾಗೂ ಕರ್ನಾಟಕ…
ಧಾರವಾಡ: ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ? ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. ತುರ್ತು ಪರಿಸ್ಥಿತಿಯ ಬಗ್ಗೆ ಬಿಜೆಪಿ ಚರ್ಚೆ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ ಎಂದು ಟೀಕಿಸಿದರು. ಇವರ ಪ್ರಕಾರ ನಮ್ಮನ್ನು ಯಾವುದೇ ಬೇರೆ ದೇಶಕ್ಕೆ ಹೋಲಿಸಿ ನೋಡುವಂತಿಲ್ಲ. ಬೇರೆ ರಾಜ್ಯಕ್ಕೂ ಹೋಲಿಸಿ ನೋಡುವಂತಿಲ್ಲ. ನಮ್ಮ ದೇಶವೇ ಗ್ರೇಟ್, ನಮ್ಮ ಪ್ರಧಾನಿಯೇ ಗ್ರೇಟ್. ತುರ್ತು ಪರಿಸ್ಥಿತಿ ಈಗ ಪ್ರಸ್ತುತವೇ? ಚರ್ಚಿಸುವ ವಿಷಯವೇ? ಎಂದು ಅವರು ಕೇಳಿದರು. ಇದೇ ವೇಳೆ, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಆರ್.ಅಶೋಕ್ ಹೇಳಿಕೆಗೆ, ಯಾರು ಸಿಎಂ ಆಗ್ತಾರೆ ಅಂತ ಅಶೋಕ್ ಅವರನ್ನೇ ಕೇಳಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಮಹದೇವಪುರದ ಅಪಾರ್ಟ್ಮೆಂಟ್ವೊಂದರಲ್ಲಿ ಮಹಿಳೆಯೊಬ್ಬಳು ತಾನು ಸಾಕಿದ್ದ ನಾಯಿಯನ್ನೇ ಹತ್ಯೆ ಮಾಡಿ, ಕೊಳೆತು ನಾರುತ್ತಿದ್ದ ನಾಯಿಯ ಮೃತದೇಹದೊಂದಿಗೆ ವಾಸವಿದ್ದ ಶಾಕಿಂಗ್ ಘಟನೆಯೊಂದು ಬೆಳಕಿಗೆ ಬಂದಿದೆ. 38 ವರ್ಷದ ಮಹಿಳೆ ತ್ರಿಪರ್ಣಾ ಪೈಕ್ ದೊಡ್ಡಾನೆಕುಂದಿಯ ಅಕ್ಮೆ ಬ್ಯಾಲೆಟ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಸಂಖ್ಯೆ ಜೆ-404 ರಲ್ಲಿ ವಾಸವಿದ್ದು, ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘವು ಅವರ ಫ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ಬಿಬಿಎಂಪಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಪಶುಸಂಗೋಪನಾ ತಂಡ ಫ್ಲಾಟ್‌ಗೆ ಭೇಟಿ ನೀಡಿದ್ದು, ಈ ವೇಳೆ ಮಹಿಳೆ ಅಧಿಕಾರಿಗಳು ಮನೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಬಳಿಕ ಅಧಿಕಾರಿಗಳು ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿದ್ದಾರೆ. ಈ ವೇಳೆ ಹೊಯ್ಸಳ ಗಸ್ತು ತಿರುಗುವ ತಂಡ ಸ್ಥಳಕ್ಕೆ ಬಂದು ಬಿಬಿಎಂಪಿ ತಂಡವನ್ನು ಒಳಗೆ ಬಿಡುವಂತೆ ಮನವೊಲಿಸಿತು. ಅವರು ಒಳಗೆ ಹೋದಾಗ, ದುರ್ವಾಸಣೆ ಬರುತ್ತಿರುವುದು ಕಂಡು ಬಂದಿದೆ. ಅಲ್ಲದೆ, ಎರಡು ನಾಯಿಗಳನ್ನು ಸರಿಯಾಗಿ ನೋಡಿಕೊಳ್ಳದಿರುವುದೂ ಕಂಡು ಬಂದಿದೆ. ಈ ನಡುವೆ ದುರ್ವಾಸನೆಯ ಮೂಲ ಪತ್ತೆಗೆ ಮುಂದಾದಾಗ ಕೊಳೆತು ನಾರುತ್ತಿದ್ದ…
ತುಮಕೂರು: ಹುಳಿಯಾರಿನ ವಿಜಯ ಕರ್ನಾಟಕ ವರದಿಗಾರ ಎಚ್.ಎ.ರಮೇಶ್ ಅವರ ಸಂಕಷ್ಟಕ್ಕೆ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಸ್ಪಂದಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಎಚ್.ಎ.ರಮೇಶ್ ಅವರಿಗೆ ಬ್ರೈನ್ ಟ್ಯೂಮರ್ ಆಗಿ ಎರಡು ಕಣ್ಣುಗಳು ಕಾಣದಾಗಿದ್ದವು. ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರೂ ಸಹ ಕಣ್ಣುಗಳು ಮೊದಲಿನಂತಾಗಲಿಲ್ಲ. ವೈದ್ಯರು ಕೂಡ ದೇವರ ಮೇಲೆ ಭಾರ ಹಾಕಿ ಇನ್ನೆರಡು ತಿಂಗಳಲ್ಲಿ ಕಣ್ಣು ಬಂದರು ಬರಬಹುದು ಎಂದು ಹೇಳಿ ಕಳಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸಾಕಿ ಸಲುಹಬೇಕಿದ್ದ ಕುಟುಂಬದ ಯಜಮಾನ ಎರಡು ಕಣ್ಣು ಕಾಣದೆ ಅಸಹಾಯಕ ಸ್ಥಿತಿಗೆ ಜಾರಿಕೊಂಡಿದ್ದ ಪರಿಣಾಮ ಮಕ್ಕಳ ವಿದ್ಯಾಭ್ಯಾಸ ಕುಟುಂಬದ ನಿರ್ವಹಣೆ ನೆನೆದು ಪತ್ನಿ ಚಿಂತಾಕ್ರಾಂತರಾಗಿದ್ದರು. ವಿಷಯ ತಿಳಿದ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ.ಸುರೇಶ್ ಬಾಬು ಅವರು ಪತ್ರಕರ್ತನ ಮನೆಗೆ ಧಾವಿಸಿ ಬಂದು ವೈಯಕ್ತಿಕವಾಗಿ ಐವತ್ತು ಸಾವಿರ ಧನಸಹಾಯ ನೀಡಿದರು. ಅಲ್ಲದೆ ಪತ್ರಕರ್ತರ ಪತ್ನಿಗೆ ಉದ್ಯೋಗ ಕೊಡಿಸುವ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಭರವಸೆಯನ್ನ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿ ಬಂದಿದ್ದಾರೆ. ಶಾಸಕ ಸಿ.ಬಿ.ಸುರೇಶ್…
ಕೊರಟಗೆರೆ : ಗ್ರಾಮೀಣ ಭಾಗದಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಅದನ್ನು ನಿರ್ವಹಿಸುವುದು ಬಹಳ ಕಷ್ಠ. ಡಯಾಲಿಸಿಸ್ ಸೆಂಟರ್ ಕೊರಟಗೆರೆ ಜನತೆಯ ಆಸ್ತಿ, ಇದನ್ನು ನೀವೇ ಕಾಪಾಡಿಕೊಳ್ಳಬೇಕು ಎಂದು ಪಾವಗಡ ರಾಮಕೃಷ್ಣ ಆಶ್ರಮದ ಜಪಾನಂದ ಸ್ವಾಮೀಜಿ ತಿಳಿಸಿದರು. ಸಿದ್ದರಬೆಟ್ಟ ರೋಟರಿ ಸಂಸ್ಥೆ ಮತ್ತು ರೇಣುಕಾ ಆಸ್ಪತ್ರೆ ಸಹಯೋಗದಲ್ಲಿ ನೂತನವಾಗಿ ಆರಂಭಿಸಿದ ರೋಟರಿ–ರೇಣುಕಾ ಡಯಾಲಿಸಿಸ್ ಸೆಂಟರ್‌ನ್ನು ಶ್ರೀಗಳು ತಮ್ಮ ಅಮೃತ ಹಸ್ತದಿಂದ ಚಾಲನೆ ನೀಡಿ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ರಾಮಕೃಷ್ಣ ಆಶ್ರಮದಿಂದ ಈಗಾಗಲೇ ಮಧುಗಿರಿಯಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪಿಸಿ ಪ್ರತಿನಿತ್ಯ ಹತ್ತಾರು ಮಂದಿ ರೋಗಿಗಳಿಗೆ ಹಾರೈಕೆ ಮಾಡುತ್ತಿದ್ದು, ಉಚಿತವಾಗಿ 30 ಸಾವಿರ ಜನರಿಗೆ ಕಣ್ಣಿನ ಶಸ್ತ್ರ ಚಿಕಿತ್ಸೆ, 650 ಮಂದಿ ಅಂಗವಿಕಲರಿಗೆ ಚಿಕಿತ್ಸೆ, ಇಲ್ಲಿಯವರೆಗೂ ತುಮಕೂರು ವಿವಿಯಲ್ಲಿ 8.60 ಲಕ್ಷ ಮಂದಿ ವಿದ್ಯಾರ್ಥಿಗಳಿಗೆ ಆಹಾರ ಒದಗಿಸಿದ್ದು, 4 ಕೋಟಿಗೂ ಅಧಿಕ ಹಣ ಖರ್ಚಾಗಿದೆ. ಆಧ್ಯಾತ್ಮಿಕ ಶಕ್ತಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ಶ್ರೀಮಠ ಸಾಗುತ್ತಿದೆ ಎಂದು ಹೇಳಿದರು. ಸಿದ್ದರಬೆಟ್ಟ…
ತುಮಕೂರು: ಪಕ್ಷ ಸಂಘಟನೆಗೆ ಅವಕಾಶ ಸಿಕ್ಕರೆ ನಾನು ಸಚಿವ ಸ್ಥಾನವನ್ನು ತೊರೆಯುತ್ತೇನೆ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವಂತಹ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ರಾಜಕಾರಣದಲ್ಲಿ ಅಧಿಕಾರ ಬರುತ್ತೆ ಎಂದರೆ ಯಾರು ಬೇಡ ಅನ್ನುತ್ತಾರೆ ಹೀಗಾಗಿ ನಾನು ಸಾಕಷ್ಟು ನಿರೀಕ್ಷೆಯಲ್ಲಿದ್ದೇನೆ ಎಂದರು. ರಾಜಕಾರಣದಲ್ಲಿ ಯಾರು ಸನ್ಯಾಸಿಗಳಲ್ಲ ಅಧಿಕಾರ ಸಿಗುತ್ತೆ ಅಂತಾನೆ ನಾವು ಹೋರಾಟ ಮಾಡುತ್ತಿರುತ್ತಾರೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಜನ ವಿರೋಧಿ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರಿಗೆ ಮಾತನಾಡಿದ ಅವರು, 15,000 ಲಂಚ ಕೊಟ್ಟವರಿಗೆ ವಸತಿ ಇಲಾಖೆ ವತಿಯಿಂದ ಮನೆಗಳನ್ನು ಮಂಜೂರು ಮಾಡಲಾಗುತ್ತಿದೆ. ಎಲ್ಲ ಇಲಾಖೆಯಲ್ಲಿಯೂ ಅತ್ಯಂತ ಭ್ರಷ್ಟಾಚಾರ ನಡೆಯುತ್ತಿದೆ ಎಂದರು. ಕಾಮಗಾರಿ ನಡೆಸಲು ಗ್ರಾಂಟ್ ಮಂಜೂರು ಮಾಡಿಸಲು ಕೂಡ ಲಂಚ ನೀಡಬೇಕಾಗುತ್ತಿದೆ. ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಮಾಡಿಸಿಕೊಳ್ಳಲು ಕೂಡ ಲಂಚ ನೀಡಬೇಕಾಗುತ್ತದೆ ದಂಧೆ ನಡೆಯುತ್ತಿದೆ. ಪ್ರಾಮಾಣಿಕ ಅಧಿಕಾರಿಗಳಿಗೆ ಈ ಭ್ರಷ್ಟ ಸರ್ಕಾರದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲದಂತಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಅಲ್ಲದೆ ಭ್ರಷ್ಟಾಚಾರದಲ್ಲಿ ಆಗ್ರಹಿಸಿ ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ನೇತೃತ್ವದಲ್ಲಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ನಾಗರಾಜ್ ಜಿಲ್ಲಾಧ್ಯಕ್ಷ ಆಂಜಿನಪ್ಪ ಸೇರಿದಂತೆ ಅನೇಕ ಮಂದಿ ಹಾಜರಿದ್ದರು. ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬಡವರಿಗೆ ಹಂಚಲಾಗುತ್ತಿರುವ ಮನೆಯನ್ನು ಲಂಚ ಸ್ವೀಕಾರ ಮಾಡಿ ಹಂಚುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಸಿದ್ಧರಾಮಯ್ಯ ಇರುವುದರಿಂದ ನಾನು ರಾಜಕಾರಣ ಮಾಡುತ್ತಿರುವುದು. ಅವರಿಲ್ಲದಿದ್ದರೇ ರಾಜಕೀಯ ಬಿಡುತ್ತೇನೆ ಎಂದು ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಪ್ರಕಾರ ಕಾಂಗ್ರೆಸ್‌ನಲ್ಲಿ ಮೂರು ಪವರ್ ಸೆಂಟರ್ ಇದೆ. ಹೈಕಮಾಂಡ್ , ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಂ ಮೂವರು ಪವರ್ ಸೆಂಟರ್ ಇದೆ. ಸಿಎಂ ಬದಲಾವಣೆ ಅನ್ನೋದನ್ನು ಕಾಲ ನಿರ್ಣಯ ಮಾಡಲಿದೆ. ಕೆಲ ಮಾಧ್ಯಮದವರು ರಾಜಣ್ಣನವರು ಸಿದ್ದರಾಮಯ್ಯನವರಿಂದ ದೂರವಾಗಿದ್ದಾರೆಂದು ಸುದ್ದಿ ಮಾಡಿದ್ದಾರೆ. ನಾನು ಯಾವತ್ತೂ ಸಿಎಂ ಸಿದ್ದರಾಮಯ್ಯರ ಜೊತೆ ಇದ್ದೇನೆ. ಇವತ್ತೂ, ನಾಳೆ, ಯಾವತ್ತೂ ನಾನು ಸಿದ್ದರಾಮಯ್ಯ ಬಣ ಎಂದರು. ಆಗಸ್ಟ್– ಸೆಪ್ಟೆಂಬರ್ ಕ್ರಾಂತಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕ್ರಾಂತಿ ಎಂದರೆ ಹಸಿರು ಕ್ರಾಂತಿಯೂ ಆಗಬಹುದು ಅಲ್ವಾ? ಬರೀ ಕಾಂಗ್ರೆಸ್ ನಲ್ಲಿ ಮಾತ್ರ ಕ್ರಾಂತಿ ಎಂದು ಯಾಕೆ ಭಾವಿಸುತ್ತೀರಾ? ಬಿಜೆಪಿಯಲ್ಲೂ ಕ್ರಾಂತಿ ಆಗುತ್ತಿದೆ. ಕೇಂದ್ರದಲ್ಲೂ ಕ್ರಾಂತಿ ಆಗಬಹುದು. ಬಿಜೆಪಿಯಲ್ಲೂ 75 ವರ್ಷದ ನಂತರ ಹುದ್ದೆಯಿಂದ ಕೆಳಗೆ ಇಳಿಬೇಕು. 75 ವರ್ಷ ಆದ ಕಾರಣ ಅಡ್ವಾಣಿಯನ್ನು ಪ್ರಧಾನಿ…
ಸರಗೂರು: ಬಿ ಮಟಕರೆ ಗ್ರಾಮ ಪಂಚಾಯಿತಿ ಮೂರನೇ ಅವಧಿಯ ಉಪಾಧ್ಯಕ್ಷ ಸ್ಥಾನಕ್ಕೆ ಗೌರಿಬಾಯಿ ಹೇಮಾಜಿ ನಾಯ್ಕ ಅವಿರೋಧವಾಗಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಆಯ್ಕೆಗೊಂಡಿದ್ದಾರೆ. ತಾಲೂಕಿನ ಬಿ ಮಟಕೇರೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರದಂದು ಗ್ರಾಪಂ ಆವರಣದಲ್ಲಿ ಚುನಾವಣೆ ನಿಗದಿಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಗೌರಿಬಾಯಿ ಹೇಮಾಜಿನಾಯ್ಕ ರವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದ ಉಪವಿಭಾಗ ಕಬಿನಿ ನೀರಾವರಿ ಇಲಾಖೆ ಸಹಾಯಕ ಎಇಇ ಉಷಾ ಗೌರಿಬಾಯಿ ಹೇಮಾಜಿನಾಯಕ ರವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು. ನೂತನ ಉಪಾಧ್ಯಕ್ಷೆ ಗೌರಿ ಬಾಯಿ ಮಾತನಾಡಿ, ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಜೊತೆಗೂಡಿ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಎಂದು ಹೇಳಿದರು. ನಂತರ ಗ್ರಾಪಂ ಸದಸ್ಯ ಹಾಗೂ ತಾಲ್ಲೂಕು ಎಸ್ಸಿ ಎಸ್ಟಿ ಸಮಿತಿ ಸದಸ್ಯ ಕುರ್ಣೇಗಾಲ ಬೆಟ್ಟ ಸ್ವಾಮಿ ಮಾತನಾಡಿ ಶಾಸಕ ಅನಿಲ್ ಚಿಕ್ಕಮಾದು ರವರ ಮಾರ್ಗದರ್ಶನದಲ್ಲಿ ಎಲ್ಲ ಸದಸ್ಯರ ಸಹಕಾರದಿಂದ ಪಂಚಾಯಿತಿಯ ಎಲ್ಲ ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ರಸ್ತೆ, ಕುಡಿಯುವ ನೀರು, ಸ್ವಚ್ಛತೆಗೆ, ಬೀದಿ…