Subscribe to Updates
Get the latest creative news from FooBar about art, design and business.
- ತುಮಕೂರು: ಜಿಲ್ಲೆಯಲ್ಲಿ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತ: ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲೇ ಅಮಾನವೀಯ ಕೃತ್ಯ!
- ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ: ಜೂನ್ 30 ಕೊನೆಯ ದಿನ
- ಸಿರಾ: ಜುಲೈ 19 ರಂದು ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ
- ಜೂ.27—28ರಂದು ಉಚಿತ ಕಿವಿ ತಪಾಸಣೆ ಶಿಬಿರ
- ಸಾಹಿತ್ಯ ಎಂಬುದು ಕತ್ತಲಲ್ಲಿ ಅಡಗಿರುವ ಸಂಪತ್ತು: ರಾಷ್ಟ್ರಕವಿ ಕುವೆಂಪು ಅವರ ಪುತ್ರಿ ತಾರಿಣಿ ಚಿದಾನಂದಗೌಡ
- ತುರುವೇಕೆರೆ: ಜೂ.27ರಂದು ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ
- ಬರ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ
- ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ
Author: admin
ತುಮಕೂರು ಜಿಲ್ಲೆಯ ಬರೊಬ್ಬರಿ 74 ರೌಡಿಶೀಟರ್ ಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸನ್ನಡತೆ ಆಧಾರದ ಮೇಲೆ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ. ತುಮಕೂರು ಎಸ್ ಪಿ ಕಚೇರಿ ಬಳಿಯಿರುವ ಡಿಆರ್ ಗ್ರೌಂಡ್ ನಲ್ಲಿ ರೌಡಿಶೀಟರ್ ಸಭೆ ಕರೆದು, 74 ರೌಡಿಶೀಟರ್ ಗಳನ್ನ ರೌಡಿಶೀಟರ್ ಪಟ್ಟಿಯಿಂದ ಬಿಡುಗಡೆ ಮಾಡಲಾಗಿದೆ. ಸಭೆ ಬಳಿಕ ಮಾತನಾಡಿದ ತುಮಕೂರು ಎಸ್ ಪಿ ಅಶೋಕ್ ಕೆ.ವಿ. ತುಮಕೂರು ಜಿಲ್ಲೆಯಲ್ಲಿ ಒಟ್ಟು 901 ಜನ ರೌಡಿಶೀಟರ್ ಗಳಿದ್ದಾರೆ. ಅವರನ್ನ ಪರಿಶೀಲನೆ ಮಾಡಿದಾಗ ಕೆಲ ರೌಡಿಶೀಟರ್ ಗಳು ಕಳೆದ 10 ವರ್ಷಗಳಿಂದ ಯಾವುದೇ ಕೇಸ್ ಗಳಲ್ಲಿ ಭಾಗಿಯಾಗಿರಲಿಲ್ಲ. ಜೊತೆಗೆ ಅವರ ಮೇಲಿದ್ದ ಕೇಸ್ ಗಳು ಕೋರ್ಟ್ ನಲ್ಲಿ ಖುಲಾಸೆಯಾಗಿದ್ದು, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದೇ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ರು. ಅಂತವರ ಬಗ್ಗೆ ರಿಪೊರ್ಟ್ ಪಡೆದು ಅವರ ಮೇಲಿದ್ದ ರೌಡಿಶೀಟರ್ ಕ್ಲೋಸ್ ಮಾಡಲಾಗಿದೆ ಎಂದು ತಿಳಿಸಿದರು. ಇವತ್ತು ಒಟ್ಟು 74 ಜನ ರೌಡಿಶೀಟರ್ ಗಳನ್ನ ರೌಡಿ ಪಟ್ಟಿಯಿಂದ ಮುಕ್ತಾಯ ಮಾಡಲು ತೀರ್ಮಾನ…
ತುಮಕೂರು: ಜಿಲ್ಲೆಯಲ್ಲಿ ಕೈಗೊಂಡಿರುವ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಮಕ್ಕಳು ಹೊರಗುಳಿಯದಂತೆ ಸಮೀಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಗಣತಿದಾರರಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಮೀಕ್ಷೆ ಕುರಿತು ಅಭಿಪ್ರಾಯ ಹಾಗೂ ಸಲಹೆ ಬಗ್ಗೆ ಚರ್ಚಿಸುವ ಸಲುವಾಗಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೆ ಪ್ರತಿ ದಿನ ಸರಾಸರಿ 8207 ಕುಟುಂಬಗಳ ಸಮೀಕ್ಷೆ ನಡೆಸಲಾಗಿದ್ದು, ಶೇಕಡಾ 103ರಷ್ಟು ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು. ಸಮೀಕ್ಷೆಯಿಂದ ಹೊರಗುಳಿದಿರುವ ಕುಟುಂಬಗಳ ಸಮೀಕ್ಷೆಯನ್ನು ಮುಂದಿನ ಮೂರು ದಿನಗಳಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರಲ್ಲದೆ, ಸಮೀಕ್ಷೆಯ ಕೊನೆಯ ದಿನಾಂಕದ ಬಗ್ಗೆ ನಗರ ಸೇರಿದಂತೆ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿದ್ದ ದಲಿತ ಮುಖಂಡರು ಮಾತನಾಡಿ ಪರಿಶಿಷ್ಟ ಜಾತಿಯೇತರ ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಸಮೀಕ್ಷೆಯಲ್ಲಿಯೂ ಗಣತಿದಾರರಿಗೆ ನೈಜ ಮಾಹಿತಿಯನ್ನು ಮರೆಮಾಚಿ ಸುಳ್ಳು ಮಾಹಿತಿ ನೀಡುತ್ತಿದ್ದು, ಸೂಕ್ತ…
ತುಮಕೂರು: ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜಿ.ದಾಕ್ಷಾಯಿಣಿ ನೇಮಕಗೊಂಡಿದ್ದಾರೆ. ಅವರು ಕಳೆದ ಮೂರು ವರ್ಷಗಳಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದ ಪ್ರೊ. ಬಿ. ಕರಿಯಣ್ಣ ಅವರಿಂದ ಅಧಿಕಾರ ಸ್ವೀಕರಿಸಿದರು. ದಾಕ್ಷಾಯಿಣಿಯವರು 29 ವರ್ಷಗಳ ಬೋಧನಾನುಭವ ಹೊಂದಿದ್ದು, ಕಲಾ ಕಾಲೇಜಿನಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್‍ಎಲ್‍ಬಿ, ಎಂ.ಫಿಲ್. ಹಾಗೂ ಪಿಎಚ್.ಡಿ ಪದವಿ ಪಡೆದಿರುತ್ತಾರೆ. ಅವರು ಪ್ರಸಿದ್ಧ ಕ್ಷಯರೋಗ ಹಾಗೂ ಹೃದ್ರೋಗ ತಜ್ಞ ಡಾ. ಗುರುಮಹದೇವಯ್ಯ ಹಾಗೂ ವೈದ್ಯೆ ಡಾ. ಎಂ. ಅನಸೂಯ ಅವರ ಪುತ್ರಿ. ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಡಾ. ದಾಕ್ಷಾಯಿಣಿ ಇದಕ್ಕಾಗಿ ವಿಶ್ವವಿದ್ಯಾನಿಲಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು. ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ 11 ಹಾಗೂ 15ನೇ ವಾರ್ಡಿನಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ವೀಕ್ಷಿಸಿದ ಅವರು, 11ನೇ ವಾರ್ಡಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕುಡಿಯುವ ನೀರು ಪೋಲಾಗುತ್ತಿದ್ದು, ಯಾವೊಬ್ಬ ಗುತ್ತಿಗೆದಾರರು, ಅಧಿಕಾರಿಗಳೂ ಗಮನಿಸದೇ ಇರುವುದು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯತೆ ಎದ್ದು ಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು. ಕಾಮಗಾರಿ ಸ್ಥಳಕ್ಕೆ ಕೂಡಲೇ ಇಂಜಿನಿಯರ್‍ಗಳನ್ನು ನಿಯೋಜಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ನಿರ್ದೇಶನ ನೀಡಿದರು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ನೀರಿನ ಪೈಪ್‍ಲೈನ್‍ಗೆ ಚರಂಡಿ ನೀರು ಮಿಶ್ರಣವಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲವಾಗಿರುವುದರಿಂದ ಮಳೆ ನೀರು ತೆರೆದ ಚರಂಡಿಗೆ ಸೇರಿ…
ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಔಷಧಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ಲಭ್ಯವಿರುವಂತೆ ಕ್ರಮವಹಿಸಬೇಕು. ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು ಎಂದು ನಿರ್ದೇಶಿಸಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರಯೋಗಾಲಯ ಹಾಗೂ ಔಷಧ ಸಂಗ್ರಹಣಾ ಘಟಕಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು. ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಜನರಿಗೆ ಸುಗಮವಾದ, ಸುಸ್ಥಿರವಾದ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ಶಿಥಿಲಗೊಂಡ…
ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ ಎತ್ತಿ ಪ್ರಶ್ನಿಸದೆ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣ ಕೇಂದ್ರ, ಬೆಂಗಳೂರು ಮತ್ತು ಈದಿನ ಡಾಟ್ ಕಾಮ್ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘ಅರಿವೇ ಅಂಬೇಡ್ಕರ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಕಾನೂನು ಜ್ಞಾನವನ್ನು ಹೊಂದಿರಬೇಕು. ಅಸಮಾನತೆ ಗುಲಾಮಗಿರಿಯ ಬದುಕನ್ನು ಬದುಕದೆ ತಮ್ಮ ಹಕ್ಕುಗಳ ಬಗ್ಗೆ ತಿಳಿಯಲು ಹೋರಾಡಿ, ಅನ್ಯಾಯದ ವಿರುದ್ಧ ತಲೆಯೆತ್ತಿದರೆ ಮಾತ್ರ ನಾವು ಬದಲಾವಣೆಯನ್ನು ತರಲು ಸಾಧ್ಯ. ಉತ್ತಮ ಶಿಕ್ಷಣ ಪಡೆದ ಪ್ರತಿಯೊಬ್ಬ ವ್ಯಕ್ತಿಯು ಸಹ ತಮ್ಮ ಸುತ್ತಲಿನ ಪ್ರದೇಶದ ಜನರ ಅಭಿವೃದ್ಧಿಯನ್ನು ಬಯಸಿದರೆ ಅಂತಹವರಲ್ಲಿ ಅಂಬೇಡ್ಕರ್ ಅವರನ್ನು…
ತಿಪಟೂರು: ತಾಲ್ಲೂಕಿನ ರಂಗಾಪುರ ಹಾಗೂ ಅನುಗೊಂಡನಹಳ್ಳಿ ಗ್ರಾಮಗಳ ದೊಡ್ಡಕಟ್ಟೆ ಹಾಗೂ ಕಾಳನಕಟ್ಟೆ ಕೆರೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 2024ರಲ್ಲಿ ರೂ.16.85 ಲಕ್ಷ ಮೊತ್ತವನ್ನು ವಿನಿಯೋಗಿಸಿ ಪುನಶ್ಚೇತನಗೊಳಿಸಲಾಗಿತ್ತು. ಸದರಿ ರಂಗಾಪುರದ ದೊಡ್ಡಕಟ್ಟೆ ಹಾಗೂ ಆನುಗೊಂಡನಹಳ್ಳಿ ಕಾಳನಕಟ್ಟೆ ಕೆರೆಗಳ ಹಸ್ತಾಂತರ ಪ್ರಮಾಣ ಪತ್ರವನ್ನು ರಂಗಾಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಶಂಕರ್ ಬೀಳೂರು ರವರಿಗೆ ತಾಲ್ಲೂಕು ಯೋಜನಾಧಿಕಾರಿಗಳಾದ ಉದಯ್ ಕೆ. ರವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಪ್ರಮೋದ್, ವಲಯ ಮೇಲ್ವಿಚಾರಕ ದಿನೇಶ್, ಸಿ.ಎಸ್.ಸಿ. ಸೇವಾದರರಾದ ಆಶಾರವರು ಉಪಸ್ಥಿತರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತಿಪಟೂರು: ತಾಲ್ಲೂಕಿನ ಕಸಬಾ ಹೋಬಳಿ ಕಂಚಾಘಟ್ಟ ಗ್ರಾಮದ ಮಜರೆ ಗೊಲ್ಲರಹಟ್ಟಿ ಗ್ರಾಮ ತಿಪಟೂರು ನಗರಕ್ಕೆ ಹೊಂದಿಕೊಂಡಂತೆ ಇದ್ದು, ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುವ ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯವಿಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ. ನಮ್ಮ ಗ್ರಾಮಕ್ಕೆ ರಸ್ತೆ ಸೌಕರ್ಯ ಕಲ್ಪಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಿಪಟೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಲಾಯಿತು. ಕಾಡುಗೊಲ್ಲ ಸಮಾಜದ ಮುಖಂಡ ಪ್ರಕಾಶ್ ಯಾದವ್ ಮಾತನಾಡಿ, ಕಂಚಾಘಟ್ಟ ಗೊಲ್ಲರ ಹಟ್ಟಿಗೆ ಸೂಕ್ತ ರಸ್ತೆ ಸಂಪರ್ಕವಿಲ್ಲದೆ ಪರದಾಡುವಂತಾಗಿದೆ, ಮಹಿಳೆಯರು ಮಕ್ಕಳು ಪರದಾಡುವಂತಾಗಿದೆ. ಶಾಲಾ ಮಕ್ಕಳು ರಸ್ತೆ ಸಂಪರ್ಕವಿಲ್ಲದೆ, ಸುಮಾರು ಮೂರ್ನಾಲ್ಕು ಕಿಲೋ ಮೀಟರ್ ಸುತ್ತಿಕೊಂಡು ನಗರದ ಶಾಲಾ ಕಾಲೇಜಿಗೆ ತಲುಪಬೇಕು. ಅಂಗವಿಕಲರು ವಯೋವೃದ್ದರ ಸ್ಥಿತಿಯಂತೂ ಅಯೋಮಯವಾಗಿದೆ. ಹಟ್ಟಿಯಲ್ಲಿ ಯಾರಾದರೂ ಅನಾರೋಗ್ಯ ಪೀಡಿತರಾದರೆ ಅಂಬುಲೆನ್ಸ್ ಬರುವುದಕ್ಕೂ ರಸ್ತೆಇಲ್ಲ. ಸರ್ಕಾರ ಕೂಡಲೇ ರಸ್ತೆ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಗ್ರಾಮದ ಮುಖಂಡ ಹೊನ್ನಪ್ಪ ಮಾತನಾಡಿ, ಕಂಚ್ಚಾಘಟ್ಟ ಗೊಲ್ಲರ ಹಟ್ಟಿ ಗ್ರಾಮಕ್ಕೆ ಸರಿಯಾದ ರಸ್ತೆ ಇಲ್ಲ, ಹಿಂದೆ ಇದ್ದ ರಸ್ತೆ ಎತ್ತಿನಹೊಳೆ ಕಾಮಗಾರಿಯಿಂದ ರಸ್ತೆ…
ತುಮಕೂರು: ಸುಗಮ್ಯ ಭಾರತ ಯಾತ್ರಾ ಸಮೀಕ್ಷೆಗೆ ಸಂಬಂಧಿಸಿದಂತೆ ಸರ್ಕಾರಿ ಕಚೇರಿ, ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಅಡೆ–ತಡೆ ರಹಿತ ಸೌಲಭ್ಯಗಳ ಆಡಿಟ್ ಮಾಡುವ ಸಲುವಾಗಿ ಅಭಿವೃದ್ಧಿಪಡಿಸಲಾಗಿರುವ ಮೊಬೈಲ್ ಆಪ್ ಅನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗುರುವಾರ ಸಂಜೆ ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಸರ್ಕಾರಿ ಕಚೇರಿ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷ ಚೇತನರಿಗೆ ಕಡ್ಡಾಯವಾಗಿ ಅಡೆ-ತಡೆ ರಹಿತ ವಾತಾವರಣ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರಿ ಕಚೇರಿ ಕಟ್ಟಡಗಳ ಹಾಗೂ ಸಾರ್ವಜನಿಕ ಸ್ಥಳಗಳ ಆಡಿಟಿಂಗ್ ಮಾಡಲು ತರಬೇತಿ ಪಡೆದಿರುವ ವಿ.ಆರ್.ಡಬ್ಲ್ಯೂ, ಅಧಿಕಾರಿಗಳು ಅಗತ್ಯ ಸಹಕಾರ ನೀಡುವ ಮೂಲಕ ಸುಗಮ್ಯ ಭಾರತ ಯಾತ್ರಾ ಸಮೀಕ್ಷಾ ಕಾರ್ಯಕ್ರಮ ಯಶಸ್ವಿಯಾಗುವಂತೆ ಶುಭ ಕೋರಿದರು. ಈ ಸಂದರ್ಭದಲ್ಲಿ ವಿಕಲಚೇತನ ಕಲ್ಯಾಣಾಧಿಕಾರಿ ಬಿ.ಎಸ್.ಚಿದಾನಂದಮೂರ್ತಿ ಸೇರಿದಂತೆ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ಮೌಲ್ಯಾಧಾರಿತ ಜೀವನ ನಡೆಸುವುದು ಮುಖ್ಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಶ್ರೀ ಸ್ವಾಮಿ ಜಪಾನಂದಜಿ ಮಹಾರಾಜ್ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗವು ಪಾವಡಗದ ಶ್ರೀ ರಾಮಕೃಷ್ಣ ಸೇವಾಶ್ರಮ, ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸಮಾಜಕಾರ್ಯ ಗ್ರಾಮೀಣ ಶಿಬಿರ’ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಶಿಕ್ಷಣದಲ್ಲಿ ಮೌಲ್ಯಗಳನ್ನು ಬಿತ್ತುವುದು ಅಗತ್ಯವಾಗಿದೆ. ನಾಗರಿಕರಾದ ನಾವು ಸೇವೆಯ ಹೃದಯವಂತಿಕೆ ಹೊಂದಬೇಕು ಎಂದರು. ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಪೆÇ್ರ ಪರಶುರಾಮ್ ಕೆ. ಜಿ. ಮಾತನಾಡಿ, ಸಮಾಜಕ್ಕೆ ಶ್ರೀ ರಾಮಕೃಷ್ಣ ಸೇವಾ ಆಶ್ರಮದ ಕೊಡುಗೆ ಅಪಾರವಾದದ್ದು. ಆಶ್ರಮದ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾಲಯದಲ್ಲಿ ಆರಂಭವಾಗಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆ ರಾಷ್ಟ್ರಮಟ್ಟದಲ್ಲಿ ಹೆಮ್ಮೆ ತಂದಿದೆ ಎಂದರು. ಮಧುಗಿರಿ ವಿಜ್ಞಾನ ಕೇಂದ್ರದ ಕಾರ್ಯದರ್ಶಿಯವರಾದ ಶ್ರೀ ಕೆ ಎನ್ ನರಸಿಂಹಮೂರ್ತಿ ಮಾತನಾಡಿ, ಓದುವ ಸಮಯದಲ್ಲೇ ಸಮಾಜಕಾರ್ಯದ ಒಲವು ಹೊಂದಿರುವುದು ಹೆಮ್ಮೆಯ…