Subscribe to Updates
Get the latest creative news from FooBar about art, design and business.
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
Author: admin
ಮಧುಗಿರಿ : ಪಟ್ಟಣದಲ್ಲಿ ಅಮೃತ್ –02 ಯೋಜನೆ ನಡೆಯುತ್ತಿದ್ದು, ವಾಹನಗಳು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸುತ್ತಿವೆ. ಕಂಡಕಂಡಲ್ಲಿ ಯುಜಿಡಿ ಪೈಪಿನ ಹಾಗೂ ಕುಡಿಯುವ ನೀರಿನ ಪೈಪಿನ ಗುಂಡಿಗಳನ್ನು ಮುಚ್ಚದ ಕಾರಣ ದ್ವಿಚಕ್ರ ವಾಹನಗಳು ಬೀಳುತ್ತಿವೆ. ಇತ್ತ ಪಾದಚಾರಿ ರಸ್ತೆಯನ್ನು ಬೀದಿ ಬದಿಯ ಅಂಗಡಿ ವ್ಯಾಪಾರಿಗಳು ಖಾಯಂ ಆಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಪುರಸಭೆ ಅಧಿಕಾರಿಗಳಿಗೆ ಮಾತ್ರ ಇದು ಕಣ್ಣಿಗೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಈ ಅನಧಿಕೃತವಾಗಿ ಅಂಗಡಿಯವರು ಮುಂಭಾಗದ ಫುಟ್ ಬಾತ್ ಜಾಗವನ್ನು ಕಬ್ಬಿಣದ ಸರಳುಗಳಿಂದ ಒತ್ತುವರಿ ಮಾಡಿಕೊಂಡಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಈಗ ಸಾರಿಗೆ ವಿಭಾಗೀಯ ಕಚೇರಿಯೂ ಬಂದಿದ್ದು ಬಸ್ಸುಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಬಸ್ ನಿಲ್ದಾಣದ ಗಾತ್ರ ಕಿರಿದಾಗುತ್ತಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿದೆ. ಅಂಗಡಿ ಒಳಗೆ ಜಾಗವಿದ್ದರೂ ಎಲ್ಲರೂ ಮುಂಭಾಗದ ಪುರಸಭೆ ಫುಟ್ ಬಾತ್ ಜಾಗದಲ್ಲೇ ಕಬ್ಬಿಣದ ಸರಳುಗಳಿಂದ ತಮ್ಮದೆ ಸ್ವಂತ ಜಾಗವೆಂಬಂತೆ ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಇತ್ತ ಬೆಳಿಗ್ಗೆ…
ಗುಬ್ಬಿ: ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ.ವಿಜಿ ಕುಮಾರಗೆ ಗುಬ್ಬಿ ತಾಲ್ಲೂಕು ಕಾಡುಗೊಲ್ಲ ಸಮುದಾಯದ ಮುಖಂಡ ಕಂಬೇರಹಟ್ಟಿ ಕೆ.ಎಸ್ ನಾಗರಾಜ್ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳನ್ನು ಸಲ್ಲಿಸಿದ್ದಾರೆ. ಡಾ. ವಿ.ಜಿ.ಕುಮಾರ್ ಅವರು ತಮ್ಮ ವೈದ್ಯಕೀಯ ಸೇವಾ ಜೀವನದ ಆರಂಭಿಕ ದಿನಗಳಲ್ಲಿಯೇ ಗುಬ್ಬಿ ಸರ್ಕಾರಿ ಆಸ್ಪತ್ರೆಯಲ್ಲಿ ಸುಮಾರು 7 ರಿಂದ 8 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ, ತಮ್ಮ ಕರ್ತವ್ಯನಿಷ್ಠೆ, ಮಾನವೀಯ ಮೌಲ್ಯಗಳು, ಸರಳ ವ್ಯಕ್ತಿತ್ವ ಹಾಗೂ ಜನಪರ ಸೇವಾ ಮನೋಭಾವದಿಂದ ಸಾರ್ವಜನಿಕರ ಅಪಾರ ಪ್ರೀತಿ ಮತ್ತು ಗೌರವವನ್ನು ಗಳಿಸಿದ್ದಾರೆ. ಇದೀಗ ಅದೇ ತಾಲ್ಲೂಕಿನ ಆರೋಗ್ಯ ಇಲಾಖೆಯ ಪ್ರಮುಖ ಹುದ್ದೆಯಾದ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವುದು ಅವರ ಸೇವಾ ನಿಷ್ಠೆ ಮತ್ತು ಸಮರ್ಪಣೆಗೆ ಸಂದ ಗೌರವವಾಗಿದೆ. ಈ ಕುರಿತು ಶ್ರೀ ಕೃಷ್ಣ ಗ್ರಾನೆಟ್ ಮಾಲೀಕರು ಕಂಬೇರಹಟ್ಟಿ ಕೆ.ಎಸ್. ನಾಗರಾಜ್, ಅವರು ಮಾತನಾಡಿ ಡಾ. ವಿಜಿ ಕುಮಾರ್ ಅವರು ಆರೋಗ್ಯ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಸಮರ್ಥ ವೈದ್ಯರಾಗಿದ್ದು, ಜನಸೇವೆಯ ಬಗ್ಗೆ ವಿಶೇಷ…
ಸಿರಾ : ಈಗಾಗಲೇ ಕಳೆದ ಸುಮಾರು 8 ವರ್ಷಗಳಲ್ಲಿ ನಗರದಲ್ಲಿ 10 ಕ್ಕೂ ಹೆಚ್ಚು ನಂದಿನಿ ಪಾರ್ಲರ್‌ಗಳನ್ನು ಯಶಸ್ವಿಯಾಗಿ ಆರಂಭಿಸಲಾಗಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾದ ಶಿರಾದಲ್ಲಿ ಮತ್ತೊಂದು ಮಳಿಗೆ ಆರಂಭವಾಗಿರುವುದು ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸಲಿದೆ ಎಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್. ಆರ್. ಗೌಡ ಅಭಿಪ್ರಾಯಪಟ್ಟರು. ನಗರದ ಹೃದಯ ಭಾಗದಲ್ಲಿರುವ ಬುಕ್ಕಪಟ್ಟಣ ವೃತ್ತದಲ್ಲಿ ನೂತನ ನಂದಿನಿ ಕ್ಷೀರ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಂದಿನಿ ಉತ್ಪನ್ನಗಳ ಮಾರಾಟ ಮತ್ತು ಮಾರುಕಟ್ಟೆ ವಿಸ್ತರಣೆಯಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಆದಾಯ ದೊರೆಯಲಿದ್ದು, ರೈತರ ಆರ್ಥಿಕ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ, ನಗರಸಭೆಯ ಅಧ್ಯಕ್ಷರು, ಸದಸ್ಯರು ಹಾಗೂ ಪದಾಧಿಕಾರಿಗಳ ಸಹಕಾರದೊಂದಿಗೆ ನೂತನ ಪಾರ್ಲರ್ ಆರಂಭಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಮಳಿಗೆಯ ನಿರ್ವಹಣೆಯ ಜವಾಬ್ದಾರಿಯನ್ನು ಚನ್ನನಕುಂಟೆ ಕೃಷ್ಣಪ್ಪ ಅವರಿಗೆ ಹಸ್ತಾಂತರಿಸಿದ್ದು,ಅವರು ಗ್ರಾಹಕರಿಗೆ ಗುಣಮಟ್ಟದ ಸೇವೆ ಹಾಗೂ ನಂದಿನಿಯ ವಿವಿಧ ಉತ್ಪನ್ನಗಳನ್ನು ನಿಗದಿತ ಸಮಯಕ್ಕೆ ಲಭ್ಯವಾಗುವಂತೆ ಕಾರ್ಯ ನಿರ್ವಹಿಸುತ್ತಾರೆ ಎಂಬ ವಿಶ್ವಾಸವಿದೆ, ಮುಂಬರುವ ದಿನಗಳಲ್ಲಿ…
ಕೊರಟಗೆರೆ: ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ಕಿರಾಂಪುರ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಅಪೂರ್ವ ಸಿ. ಅನಂತರಾಮು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಂತೆ ಮೈದಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಬಳಿಕ ಅಕ್ಕಿರಾಂಪುರ ಗ್ರಾಮದ ಕರ್ನಾಟಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾರ್ಥಿ ನಿಲಯದ ಕಟ್ಟಡ ದುರಸ್ಥಿ ಕಾರ್ಯಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ, ಕಟ್ಟಡದ ಸ್ಥಿತಿಗತಿಗಳನ್ನು ಅವಲೋಕಿಸಿದರು. ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಅನುಕೂಲತೆ ದೃಷ್ಟಿಯಿಂದ ಅಗತ್ಯ ದುರಸ್ಥಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ದಯಾನಂದ್, ನರೇಗಾ ತಾಂತ್ರಿಕ ಸಂಯೋಜಕ ಗುರುಮೂರ್ತಿ, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರಮೇಶ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.…
ವರದಿ ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ಆರೋಗ್ಯ, ಶಿಕ್ಷಣ, ಪರಿಸರ ಬಗ್ಗೆ ರೋಟರಿ ಸಂಸ್ಥೆ ವಿಶೇಷ ಕಾಳಜಿವಹಿಸಿದ್ದು, ಸಮಾಜಮುಖಿ ಕೆಲಸದಲ್ಲಿ ರೋಟರಿ ಸಂಸ್ಥೆ ಮಾದರಿಯಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ಕೆ. ಶ್ಲಾಘಿಸಿದರು. ಕೊರಟಗೆರೆಯ ಪುರಸಭೆ ಕಾರ್ಯಾಲಯದ ಮುಂಭಾಗದಲ್ಲಿ ರೋಟರಿ ಮಹಿಳಾ ಸಬಲೀಕರಣ ಯೋಜನೆಯಡಿ ರೋಟರಿ ಕ್ಲಬ್ ಕೊರಟಗೆರೆ ಮತ್ತು ರೋಟರಿ ಮಹಾಲಕ್ಷ್ಮಿ ಬೆಂಗಳೂರು ಹಾಗೂ ರೋಟರಿ ಬೆಂಗಳೂರು ಉತ್ತರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆಟೋರಿಕ್ಷಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಅವರ ತಾಲ್ಲೂಕಿನ ದೇವರಹಳ್ಳಿ ಬೆಟ್ಟದಲ್ಲಿ 10 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಈ ಹಿಂದೆ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಚಾಲನೆ ನೀಡಿ ಯಶಸ್ವಿಗೊಳಿಸಿದರು. ಪರಿಸರದ ಉಳಿವಿಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ತಾಲ್ಲೂಕು ಆಡಳಿತದ ಜೊತೆ ಕೈ ಜೋಡಿಸುವಂತೆ ರೋಟರಿ ಸಂಸ್ಥೆ ಮುಖ್ಯಸ್ಥರಿಗೆ ತಿಳಿಸಿದರು. ರೋಟರಿ ಜಿಲ್ಲಾ ಕಾರ್ಯದರ್ಶಿ ಉಮೇಶ್ ಮಾತನಾಡಿ, ರೋಟರಿ ಸಂಸ್ಥೆ ಪರಿಸರಕ್ಕೆ, ಶಿಕ್ಷಣಕ್ಕೆ,…
ಕೊರಟಗೆರೆ: ತಾಲ್ಲೂಕಿನ ತುಂಬುಗಾನಹಳ್ಳಿ ಬಳಿ ಇರುವ 12ನೇ ಕೆ.ಎಸ್.ಆರ್.ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಘಟಕದ ಸಹಾಯಕ ಮೀಸಲು ಉಪನಿರೀಕ್ಷಕ (AR-SI) ಎನ್.ಜಿ. ಪವಾರ್ (54) ಅವರು ಗುರುವಾರ ಮಧ್ಯರಾತ್ರಿ ತೀವ್ರ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನವರಾದ ಪವಾರ್ ಅವರು ಕಳೆದ ನಾಲ್ಕು ವರ್ಷಗಳಿಂದ ಕೊರಟಗೆರೆಯ ಕೆಎಸ್‌ಆರ್‌ಪಿ ಬೆಟಾಲಿಯನ್‌ನಲ್ಲಿ ಎ.ಆರ್. ಎಸ್.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿನ ವಸತಿ ಗೃಹದಲ್ಲಿ ವಾಸವಿದ್ದ ಅವರಿಗೆ ಗುರುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ವೇಳೆಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿ ಸಿಬ್ಬಂದಿ ಅವರನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಅವರು ಹೃದಯಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಪಾಸಣೆ ನಡೆಸಿದ ವೈದ್ಯರು ದೃಢಪಡಿಸಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ಹಾಗೂ ಸಹೋದ್ಯೋಗಿಗಳ ಅಂತಿಮ ದರ್ಶನಕ್ಕಾಗಿ ಬೆಟಾಲಿಯನ್ ಆವರಣದಲ್ಲಿ ಇರಿಸಲಾಗಿತ್ತು. ಬೆಟಾಲಿಯನ್ ನ ಕಮಾಂಡೆಂಟ್…
ಸರಗೂರು: ತಾಲೂಕು ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ. ಗಿರೀಶ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮೈಸೂರಿನ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ 2016 ರಿಂದ 2019 ರವರೆಗೆ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಪಕ್ಷದ ತಾಲೂಕು ಅಧ್ಯಕ್ಷರಾಗಿ ಗಿರೀಶ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಈ ಹಿನ್ನೆಲೆಯಲ್ಲಿ, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸುತ್ತಿರುವ ಅವರ ಸೇವೆಯನ್ನು ಪರಿಗಣಿಸಿ, ಎರಡನೇ ಬಾರಿಗೆ ಸರಗೂರು ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಗ್ರಾಮಾಂತರ ಜಿಲ್ಲಾಧ್ಯಕ್ಷ ಎನ್.ಕೆ. ಸುಬ್ಬಣ್ಣ ತಿಳಿಸಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಚಾಮಲಾಪುರ ಸಿ.ಕೆ. ಗಿರೀಶ್, “ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟನೆ ಮಾಡಲು ಜಿಲ್ಲೆಯಾದ್ಯಂತ ಇರುವ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ವಿವಿಧ ಹಂತಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎಂದರು. ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಘಟಕಗಳು ನೀಡುವ ಸಂಘಟನಾತ್ಮಕ ಚಟುವಟಿಕೆಗಳು, ಜನಪರ ಹೋರಾಟಗಳು ಮತ್ತು ಕಾರ್ಯಕ್ರಮಗಳಿಗೆ…
ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ. ಗಿರೀಶ ಬದೋಲೆ ಅವರು ಅದೇಶ ಹೊರಡಿಸಿದ್ದಾರೆ. ಹುಮ್ನಾಬಾದ್ ತಾಲೂಕಿನ ಸಿತಾಳಗೇರಾ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಬೀರಪ್ಪಾ ಹಾಗೂ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಬ್ದುಲ್ ರಜಾಕ್ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ. ಸಿತಾಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಂಬೂರ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಕುಡಿಯುವ ನೀರಿನ ಮೂಲಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ಪಿಡಿಒ ರಮೇಶ್ ಬೀರಪ್ಪಾ ನಿರ್ಲಕ್ಷ್ಯ ತೋರಿದ್ದರು. ಇದರೊಂದಿಗೆ, ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಬಾಕಿ ಗೌರವಧನ ಪಾವತಿಸಲು ಪಂಚಾಯಿತಿ ಖಾತೆಯಲ್ಲಿ ಹಣ ಇಲ್ಲದಿದ್ದರೂ ಚೆಕ್ ನೀಡಿ ಕರ್ತವ್ಯ ಲೋಪ ಎಸಗಿದ್ದರು. ಈ ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದರೂ ಯಾವುದೇ ಸಮಜಾಯಿಸಿ ಉತ್ತರ ನೀಡದ ಹಿನ್ನೆಲೆಯಲ್ಲಿ,…
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ತೀವ್ರ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ ದಿನನಿತ್ಯ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ದಲಿತರ ಓಣಿಯಲ್ಲಿ ಕಳೆದ 15 ದಿನಗಳಿಂದ ಹನಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಣಿಯಲ್ಲಿ ಸದ್ಯ ಎರಡು ಹ್ಯಾಂಡ್ ಪಂಪ್ ಗಳು, ಮೂರು ಬೋರ್‌ವೆಲ್ ಗಳು ಹಾಗೂ ಒಂದು ಬಾವಿ ಇದ್ದರೂ ಸಹ, ನಿರ್ವಹಣೆಯ ಕೊರತೆಯಿಂದಾಗಿ ದಲಿತ ಸಮುದಾಯಕ್ಕೆ ಮಾತ್ರ ನೀರು ಸಿಗದಂತಾಗಿದೆ. ಈ ಕುರಿತು ಗ್ರಾಮದ ಪ್ರಮುಖರಾದ ಪ್ರಭಾಕರ್ ಇಂಗಳೇ ಹಾಗೂ ಶಾಶ್ವತಿ ಮಾಳೆಗೆ ಅವರು ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ಅವರು ದೂರಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸದ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜಿಲ್ಲಾ…
ಮಧುಗಿರಿ: ಸಸ್ಯಕಾಶಿ, ಸಿದ್ದರ ತಪೋಭೂಮಿಯಲ್ಲಿ ಜೂ.21ರಂದು ಬಾಳೆಹೊನ್ನೂರು ಖಾಸಾ ಶಾಖಾ ಮಠ, ಸಿದ್ದರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ “ಸಿದ್ದಶ್ರೀ ಪ್ರಶಸ್ತಿ” ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು. ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ: ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಡಿಸಿಎಂ…