Author: admin

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ತುಮಕೂರು ನಗರದ ಅಮಾನಿಕೆರೆ ಉದ್ಯಾನವನದಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ವೀರವನಿತೆ ರಾಣಿ ಲಕ್ಷ್ಮೀಭಾಯಿರವರ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವೀರ ಮಾತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಲಾಯಿತು. ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್. ಕೆ. ನಿಧಿ ಕುಮಾರ್, “ದೇಶದ ಸ್ವಾಭಿಮಾನ ಮತ್ತು ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಅಚಲ ಸಂಕಲ್ಪದಿಂದ ಹೋರಾಡಿದ ರಾಣಿ ಲಕ್ಷ್ಮೀಬಾಯಿ ಅವರು ಮಹಿಳಾ ಶಕ್ತಿಯ ಪ್ರತೀಕವಾಗಿ ಇತಿಹಾಸದಲ್ಲಿ ಅಜರಾಮರರಾಗಿದ್ದಾರೆ. ದತ್ತು ಮಕ್ಕಳಿಗೆ ಸಿಂಹಾಸನದ ಹಕ್ಕಿಲ್ಲ ಎಂಬ ಬ್ರಿಟಿಷರ ನೀತಿಯನ್ನು ಧೈರ್ಯದಿಂದ ದಿಕ್ಕರಿಸಿ, ಮಾತೃಭೂಮಿಯ ಸಾರ್ವಭೌಮತೆಗಾಗಿ ರಣರಂಗದಲ್ಲಿ ವೀರಮರಣವನ್ನಪ್ಪಿದ ಅವರ ಇತಿಹಾಸ ನಮಗೆ ಇಂದಿಗೂ ಪ್ರೇರಣೆ” ಎಂದು ನುಡಿದರು. ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಕಾರ್ಯಾಧ್ಯಕ್ಷರಾದ ಕೆಸ್ತೂರು ನರಸಿಂಹಮೂರ್ತಿ…

Read More

ತುಮಕೂರು: ಪ್ರಧಾನ ಮಂತ್ರಿ ವಿಕಸಿತ ಭಾರತ್ ರೋಜಾರ್ ಯೋಜನೆ (PM–VBRY)ಯ ಯಶಸ್ವಿ ಅನುಷ್ಠಾನದ ಅಂಗವಾಗಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2026ರ ಜೂನ್ 19ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಬೃಹತ್ ರಾಷ್ಟ್ರೀಯ ಕಾರ್ಯಕ್ರಮವನ್ನು ಆಯೋಜಿಸಿದೆ. ಭಾರತದ ಗೌರವಾನ್ವಿತ ಪ್ರಧಾನಮಂತ್ರಿಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ನೇರ ಲಾಭ ವರ್ಗಾವಣೆ (DBT) ಮೂಲಕ ದೇಶದ ಫಲಾನುಭವಿಗಳಿಗೆ ಸುಮಾರು ₹2,400 ಕೋಟಿ ಮೊತ್ತದ ಪ್ರೋತ್ಸಾಹ ಧನವನ್ನು ನೇರವಾಗಿ ವಿತರಿಸಲಿದ್ದಾರೆ. PM–VBRY ಯೋಜನೆಯಡಿ ನೀಡಲಾಗುತ್ತಿರುವ ಈ ಆರ್ಥಿಕ ಬೆಂಬಲವು ದೇಶದಲ್ಲಿ 15 ಲಕ್ಷಕ್ಕೂ ಹೆಚ್ಚು ಜನರಿಗೆ ಹೆಚ್ಚುವರಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನೆರವಾಗಲಿದೆ ಎಂದು ಅಂದಾಜಿಸಲಾಗಿದೆ. ನವದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳನ್ನು ಪ್ರತಿನಿಧಿಸುವ ಉದ್ಯೋಗದಾತರು, ಉದ್ಯೋಗಿ ಫಲಾನುಭವಿಗಳು ಮತ್ತು ಗಣ್ಯರು ಸೇರಿದಂತೆ ಸುಮಾರು 1,200 ಆಹ್ವಾನಿತರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ದೇಶದ ವಿವಿಧ ಪ್ರದೇಶಗಳ ಫಲಾನುಭವಿಗಳೊಂದಿಗೆ ನೇರ ಸಂವಹನ ನಡೆಸಲಿದ್ದು, ಇಡೀ ಕಾರ್ಯಕ್ರಮವು ದೂರದರ್ಶನದಲ್ಲಿ…

Read More

ಬೆಂಗಳೂರು: ಭಾರಿ ಕುತೂಹಲ ಮೂಡಿಸಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಮುಕ್ತಾಯಗೊಂಡಿದ್ದು, ಎಲ್ಲ 222 ಶಾಸಕರಿಂದ ಮತದಾನ ನಡೆದಿದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಚುನಾವಣೆ ವೇಳೆ ಕಾಂಗ್ರೆಸ್ ನಾಯಕರ ಜೊತೆಗೆ ಗುರುತಿಸಿಕೊಂಡಿದ್ದು ಕಂಡುಬಂತು. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ನಾಯಕರಿದ್ದ ಕೊಠಡಿಯಲ್ಲಿ ಹೆಬ್ಬಾರ್, ಸೋಮಶೇಖರ್ ಕೂಡ ಉಪಸ್ಥಿತರಿದ್ದರು. ಇನ್ನೂ, ಡಿಸಿಎಂ ಪರಮೇಶ್ವರ್ ಜೊತೆ ಮತಚಲಾಯಿಸಲೆಂದು ಕಾದು ಕಾದು ಕೊನೆಗೆ ಸಿಎಂ ಡಿ.ಕೆ.ಶಿವಕುಮಾರ್ ಒಬ್ಬರೇ ತೆರಳಿ ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಡಾ.ಪರಮೇಶ್ವರ್ ಬರ್ತಾರೆ ಎನ್ನಲಾಗಿತ್ತಾದರೂ 1:30 ಕಳೆದರೂ ಬಂದಿರಲಿಲ್ಲ. ಅನಾರೋಗ್ಯದ ಹಿನ್ನೆಲೆ ತಡವಾಗಿ ಪರಮೇಶ್ವರ್ ಆಗಮಿಸಿದ್ದು, ಮಾಸ್ಕ್ ಹಾಕಿಕೊಂಡು ಬಂದೇ ವೋಟ್ ಮಾಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಉಚ್ಛಾಟಿತ ಶಾಸಕ ಯತ್ನಾಳ್ ಮತ ಹಾಕಲು ಬಂದ ವೇಳೆ ಕಾಂಗ್ರೆಸ್ ನ ಉಗ್ರಪ್ಪ ಆಕ್ಷೇಪ ತೆಗೆದಿದ್ದು, ಮತ ಹಾಕುವ ಬಗ್ಗೆ ಅವರು ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ಮತವನ್ನು ಮತಪೆಟ್ಟಿಗೆಗೆ ಹಾಕಬೇಡಿ ಎಂದು ಚುನಾವಣಾಧಿಕಾರಿಯನ್ನು…

Read More

ಸರಗೂರು: ತಾಲೂಕು ಕೇಂದ್ರದ ಪ್ರವಾಸಿ ಮಂದಿರದಲ್ಲಿ ಗುರುವಾರ ದಲಿತ ಸಂಘರ್ಷ ಸಮಿತಿಯ (ದಸಂಸ) ಎಲ್ಲಾ ಬಣಗಳನ್ನು ಒಗ್ಗೂಡಿಸಿ ಹೊಸ ಒಕ್ಕೂಟ ರಚನೆ ಮಾಡುವ ಕುರಿತು ಪೂರ್ವಭಾವಿ ಸಭೆ ಯಶಸ್ವಿಯಾಗಿ ಜರುಗಿತು. ವಿವಿಧ ಇಲಾಖೆಗಳ ಅಧಿಕಾರಿಗಳಿಂದ ದೀನ ದಲಿತರಿಗೆ ಹಾಗೂ ರೈತರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಇದರ ವಿರುದ್ಧ ಧ್ವನಿ ಎತ್ತಲು ಬೃಹತ್ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ಪದಾಧಿಕಾರಿಗಳು, “ಹಿಂದೆ ಎಚ್.ಡಿ. ಕೋಟೆ ಮತ್ತು ಸರಗೂರು ಒಂದೇ ತಾಲೂಕು ಆಗಿದ್ದಾಗ ಹಲವಾರು ಹೋರಾಟಗಾರರನ್ನು ಹುಟ್ಟುಹಾಕಿದ ಹೆಮ್ಮೆ ದಸಂಸಗಿದೆ. 70ರ ದಶಕದಿಂದಲೂ ಎಲ್ಲಿ ಅನ್ಯಾಯ, ಭ್ರಷ್ಟಾಚಾರ, ಅತ್ಯಾಚಾರ ಹಾಗೂ ದೌರ್ಜನ್ಯಗಳು ನಡೆದವೋ, ಅಲ್ಲೆಲ್ಲಾ ಸಂಘಟನೆಯು ಅನ್ಯಾಯವನ್ನು ಖಂಡಿಸಿ ಹೋರಾಡುತ್ತಾ ಶೋಷಿತರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದೆ. ದಸಂಸ ಕೂಗಿದ ಘೋಷಣೆಗಳು ಕಾನೂನಾಗಿ ಜನಸಾಮಾನ್ಯರಿಗೆ, ನೊಂದವರಿಗೆ ಹಾಗೂ ದೀನದಲಿತರಿಗೆ ನೇರವಾಗಿ ತಲುಪುತ್ತಿದ್ದವು. ಇದರಿಂದಾಗಿ ಅಧಿಕಾರಿ ವರ್ಗದವರು ಭ್ರಷ್ಟಾಚಾರ ಮಾಡಲು ಹೆದರುತ್ತಿದ್ದರು ಮತ್ತು ಸರ್ಕಾರಗಳು ದಸಂಸ ಚಳವಳಿ ಎಂದರೆ ನಡುಗುತ್ತಿದ್ದವು” ಎಂದು ಸ್ಮರಿಸಿದರು. “ಪ್ರಸ್ತುತ…

Read More

ಬೀದರ್: ಜಿಲ್ಲೆಯ ಔರಾದ ತಾಲೂಕು ಕೇಂದ್ರದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸದೆ ವಂಚಿಸಲಾಗುತ್ತಿದೆ ಎಂದು ಅಹಿಂದ ಸಂಘಟನೆ ದೂರಿದೆ. ಸಂಘಟನೆ ಯುವ ಘಟಕದ ಅಧ್ಯಕ್ಷ ಲಕ್ಷ್ಮಣ ದೇವಕತೆ ಮಂಗಳವಾರ ಜಿಂಟಿ ಕೃಷಿ ನಿರ್ದೇಶಕರಿಗೆ ದೂರು ನೀಡಿದ್ದಾರೆ ನಮ್ಮ ರೈತರಿಗೆ ನಿಯಂತ್ರಿಸಬೇಕಾದ ಬಿತ್ತನೆ ಬೀಜ ಪಕ್ಕದ ಮಹಾರಾಷ್ಟ್ರ, ತೆಲಂಗಾಣದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಔರಾದ್ ತಾಲ್ಲೂಕಿನ ಬಾವಲಗಾಂವ್ ಸಾವರಗಾಂವ್. ಹೊಕ್ರಾಣಾ. ಭಂಡಾರಕುಮಟಾ ಸೇರಿದಂತೆ ಅನೇಕ ಗ್ರಾಮಗಳ ರೈತರಿಗೆ ಇನ್ನು ಬಿತ್ತನೆ ಬೀಜ ಸಿಕ್ಕಿಲ್ಲ ಅಕ್ರಮವಾಗಿ ಬೀಜ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತಿಪಟೂರು: ನಗರದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ದೀನದಯಾಳು ಹಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ನಮ್ರತಾ ಆಯಿಲ್ ಮತ್ತು ಬೆಂಗಳೂರಿನ ವಿ.ಎಸ್.ಕೆ. ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೋಟ್‌ಬುಕ್ ಹಾಗೂ ಲೇಖನಿ ಸಾಮಗ್ರಿ ವಿತರಣಾ ಕಾರ್ಯಕ್ರಮವನ್ನು ಶಾಸಕ ಕೆ. ಷಡಕ್ಷರಿ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಶಾಸಕ ಕೆ. ಷಡಕ್ಷರಿ ಅವರು, “ವಿ.ಎಸ್.ಕೆ. ಫೌಂಡೇಶನ್ ಸಂಸ್ಥೆಯು ಮಾಡುತ್ತಿರುವ ಇಂತಹ ಸಮಾಜ ಸೇವೆಗಳು ಅತ್ಯಂತ ಶ್ಲಾಘನೀಯ. ಇವರ ಸಾಮಾಜಿಕ ಕಾರ್ಯಗಳು ನಿರಂತರವಾಗಿ ಮತ್ತು ಶಾಶ್ವತವಾಗಿ ಮುಂದುವರಿಯಲಿ” ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (BEO) ತಾರಾಮಣಿ ಅವರು ಮಾತನಾಡಿ, “ಯಾವುದೇ ವಿಷಯವಾಗಲಿ, ಕೇವಲ ಓದಿ ಕಲಿಯುವುದಕ್ಕಿಂತ ಬರೆದು ಕಲಿಯುವ ವಿದ್ಯೆ ತಲೆಯಲ್ಲಿ ಹೆಚ್ಚು ಕಾಲ ಉಳಿಯುತ್ತದೆ. ಸಾಮಾಜಿಕ ಸಂಘ ಸಂಸ್ಥೆಗಳು ಶಾಲಾ ಮಕ್ಕಳಿಗೆ ಈ ರೀತಿ ಉಚಿತವಾಗಿ ನೋಟ್‌ ಬುಕ್ ವಿತರಿಸುವುದು ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ತಗತವಾಗಿ ಬಂದಿರುವ ದಾನ ಗುಣವನ್ನು ತೋರಿಸುತ್ತದೆ” ಎಂದರು. ವಿ.ಎಸ್.ಕೆ. ಫೌಂಡೇಶನ್ ಕಾರ್ಯದರ್ಶಿ…

Read More

ಬಳ್ಳಾರಿ:  ವಾರ್ಷಿಕ ವರದಿಗಳನ್ನು ಸಲ್ಲಿಸದ ಕಾರಣಕ್ಕಾಗಿ ರದ್ದಾಗಿರುವ ಪತ್ರಿಕೆಗಳ ಶೀರ್ಷಿಕೆಗಳನ್ನು ಮರುಸ್ಥಾಪಿಸಲು ಭಾರತ ಸರ್ಕಾರದ ಪತ್ರಿಕೆಗಳ ಪ್ರೆಸ್ ರಿಜಿಸ್ಟರ್ ಜನರಲ್ ಕಚೇರಿಯು ಪ್ರಕಾಶಕರಿಗೆ ಕೊನೆಯ ಅವಕಾಶವನ್ನು ನೀಡಿದೆ. ಪ್ರೆಸ್ ಮತ್ತು ರಿಜಿಸ್ಟ್ರೇಷನ್ ಆಫ್ ಪಿರಿಯಾಡಿಕಲ್ಸ್ ಕಾಯ್ದೆ, 2023 ರ ನಿಯಮಗಳನ್ನು ಪಾಲಿಸದ ಕಾರಣಕ್ಕಾಗಿ ಹಲವು ಪತ್ರಿಕೆಗಳ ಶೀರ್ಷಿಕೆಗಳನ್ನು ರದ್ದುಗೊಳಿಸಲಾಗಿತ್ತು. ಈ ಕುರಿತು ಪ್ರಕಾಶಕರು ಮತ್ತು ಪಾಲುದಾರರಿಂದ ಬಂದ ಮನವಿಗಳನ್ನು ಪುರಸ್ಕರಿಸಿ, ಇಲಾಖೆಯು ಈ ಅಂತಿಮ ಅವಕಾಶವನ್ನು ಕಲ್ಪಿಸಿದೆ. ಬಾಕಿ ಇರುವ ದಂಡವನ್ನು ಪಾವತಿಸಲು ಮತ್ತು ವಾರ್ಷಿಕ ವರದಿಯನ್ನು ಸಲ್ಲಿಸಲು 30 ಜೂನ್ 2026 ಕೊನೆಯ ದಿನವಾಗಿದೆ. ರದ್ದಾದ ಪಟ್ಟಿಯಿಂದ ಶೀರ್ಷಿಕೆಯನ್ನು ತೆಗೆದುಹಾಕಲು, ಪ್ರಕಾಶಕರು ಬಾಕಿ ಇರುವ ದಂಡವನ್ನು ಪಾವತಿಸಬೇಕು ಮತ್ತು 2024-25ರ ಆರ್ಥಿಕ ವರ್ಷದ ವಾರ್ಷಿಕ ವರದಿಯನ್ನು ಪ್ರೆಸ್ ಸೇವಾ ಪೋರ್ಟಲ್ (Press Sewa Portal) ಮೂಲಕ ಕಡ್ಡಾಯವಾಗಿ ಸಲ್ಲಿಸಬೇಕು. ಜೂನ್ 30 ರ ನಂತರ ಯಾವುದೇ ಕಾರಣಕ್ಕೂ ಕಾಲಾವಕಾಶವನ್ನು ವಿಸ್ತರಿಸಲಾಗುವುದಿಲ್ಲ. ಈ ಗಡುವಿನೊಳಗೆ ದಂಡ ಪಾವತಿಸದಿದ್ದರೆ ಶೀರ್ಷಿಕೆಗಳನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು…

Read More

ಬಳ್ಳಾರಿ:  ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಕುರುಗೋಡು ತಾಲೂಕು ಮಟ್ಟದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಂದ ಬೃಹತ್ ಜಾಗೃತಿ ಜಾಥಾ ಮತ್ತು ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುರುಗೋಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲಾ ಮಕ್ಕಳ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಗ್ರೇಡ್-2 ತಹಶೀಲ್ದಾರ ಮಲ್ಲೇಶಪ್ಪ ಅವರು ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಜಾಥಾದ ನಂತರ ಹಮ್ಮಿಕೊಳ್ಳಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ತಾಪಂ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ ಅವರು, ಮಕ್ಕಳು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜೊತೆಗೆ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸಬೇಕು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಮಿಕ ನಿರೀಕ್ಷಕ ಪರಶುರಾಮ್ ಅವರು ಮಾತನಾಡಿ, ಕುರುಗೋಡು ತಾಲೂಕಿನಲ್ಲಿ ಎಲ್ಲಾದರೂ ಶಾಲೆ ಬಿಟ್ಟ ಮಕ್ಕಳು ಅಥವಾ ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಕಂಡುಬಂದಲ್ಲಿ ತಕ್ಷಣವೇ 1098 ಉಚಿತ ಸಹಾಯವಾಣಿಗೆ ಮಾಹಿತಿ ನೀಡಬೇಕು. ಇದರಿಂದ ಅಂತಹ…

Read More

ಬಳ್ಳಾರಿ: ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವ ಹಾಗೂ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ಗಾರ್ ಯೋಜನೆ (ಪಿಎಂ–ವಿಬಿಆರ್‌ ವೈ) ಕುರಿತ ಬೃಹತ್ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮವು ಜೂನ್ 19ರಂದು ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನಲ್ಲಿ ನಡೆಯಲಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾರ್ಗದರ್ಶನದಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಸಂಜೆ 4 ಗಂಟೆಗೆ ತೋರಣಗಲ್ಲು ವಿದ್ಯಾನಗರದಲ್ಲಿರುವ ಜೆಎಸ್‌ಡಬ್ಲ್ಯೂ ಟೌನ್‌ಶಿಪ್‌ನ ‘ಜೆಮ್ಯಾಕ್ಸ್’ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಧಾನಿಯಿಂದ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: ಅದೇ ದಿನ ಸಂಜೆ 5 ಗಂಟೆಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪಿಎಂ-ವಿಬಿಆರ್‌ವೈ ಯೋಜನೆಯ ಫಲಾನುಭವಿಗಳಿಗೆ ಸುಮಾರು ₹2,400 ಕೋಟಿ ಪ್ರೋತ್ಸಾಹಧನವನ್ನು ನೇರವಾಗಿ ವಿತರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ತೋರಣಗಲ್ಲಿನಲ್ಲಿ ಆಯೋಜಿಸಲಾಗಿರುವ ವಿಶೇಷ ಸಂಪರ್ಕ ಕಾರ್ಯಕ್ರಮದಲ್ಲಿ ಉದ್ಯೋಗದಾತರು, ಉದ್ಯೋಗಿಗಳು, ಯೋಜನೆಯ ಫಲಾನುಭವಿಗಳು, ವಿವಿಧ…

Read More

ಕೊರಟಗೆರೆ: 6  ಜನ ಕಳ್ಳರ ತಂಡ 2 ದ್ವಿಚಕ್ರ ವಾಹನಗಳಲ್ಲಿ ಬಂದು ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತುಂಬಾಡಿ ಮತ್ತು ಚನ್ನರಾಯನದುರ್ಗ ಮತ್ತು ದೊಗ್ಗನಹಳ್ಳಿ ಗ್ರಾಮದಲ್ಲಿ ಮನೆಗಳ ಬಾಗಿಲು ಹೊಡೆಯಲು ಯತ್ನ ಮಾಡಿರುವ ಘಟನೆ ಮಂಗಳವಾರ ಮಧ್ಯ ರಾತ್ರಿ ನಡೆದಿದೆ. ತುಂಬಾಡಿಯ ಸೂರ್ಯ ನಾರಾಯಣಶೆಟ್ಟಿ ಎಂಬುವರ ಮನೆಯ ಬೀಗ ಹೊಡೆದು 14 ಲಕ್ಷ ನಗದು ಮತ್ತು 11 ಲಕ್ಷ 80 ಸಾವಿರ ಚಿನ್ನ ಬೆಳ್ಳಿಯ ವಿವಿಧ ಒಡವೆಗಳು ಕಳ್ಳತನ ಮಾಡಿದ್ದಾರೆ. ಚನ್ನರಾಯನದುರ್ಗ ಮತ್ತು ದೊಗ್ಗನಹಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸುವಾಗ ಗ್ರಾಮಸ್ಥರ ಎಚ್ಚರಿಕೆಯ ಆಗಮನದಿಂದ ಸ್ಥಳದಿಂದ ಕಳ್ಳರು ಪರಾರಿ ಆಗಿದ್ದಾರೆ. ಸಿಸಿಟಿವಿಯಲ್ಲಿ ಕಳ್ಳರ ದೃಶ್ಯ ಪತ್ತೆ: ತುಂಬಾಡಿಯ ರಾಜ್ಯ ಹೆದ್ದಾರಿ ಸಮೀಪದ 2 ದ್ವಿಚಕ್ರ ವಾಹನದಲ್ಲಿ 6 ಜನ ಕಳ್ಳರ ತಂಡ ನಿಂತಿರುವ ದೃಶ್ಯ ಮತ್ತು ಮನೆಯ ಹಿಂಭಾಗ ಸಂಚರಿಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ತಂಡ, ಸಿಪಿಐ ಮತ್ತು ಪಿ ಎಸ್ ಸಿ ಮತ್ತು ಸಿಬ್ಬಂದಿಗಳು ನೀಡಿ…

Read More