Author: admin

ಮಧುಗಿರಿ:  ಸಚಿವ ಕೆ.ಎನ್.ರಾಜಣ್ಣ ಅವರ ತವರು ಕ್ಷೇತ್ರ ಮಧುಗಿರಿ ತಾಲೂಕಿನಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ದೇವಸ್ಥಾನಕ್ಕೆ ಬಂದ ದಲಿತ ಯುವಕನನ್ನು ನಿಂದಿಸಿ ಹೊರಗೆ ಕಳುಹಿಸಿದ ಅಮಾನವೀಯ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಕವಣದಾಲದಲ್ಲಿ ನಡೆದಿದೆ. ಪೂಜೆ ಮಾಡಿಸಲು ನಿನ್ನೆ ಗ್ರಾಮದ ರಾಮಾಂಜನೇಯ ದೇವಾಲಯಕ್ಕೆ ತೆರಳಿದ್ದ ಸ್ವಾಮಿನಾಥ್ ಎಂಬವರು ತೆರಳಿದ್ದರು.  ಈ ವೇಳೆ ಸ್ವಾಮಿನಾಥ್ ನನ್ನು ದಲಿತ ಎನ್ನುವ ಕಾರಣಕ್ಕೆ  ದೇವಾಲಯದಿಂದ ಹೊರಗೆ ಕಳುಹಿಸಿ ಅವಮಾನಿಸಲಾಗಿದೆ. ಹೊರಗೆ ಕಳುಹಿಸಿದ ಬಳಿಕ “ದಲಿತರು ದೇವಾಲಯಕ್ಕೆ ಬರಲ್ಲಾ, ನೀನು ಬರಬಾರದು” ಎಂದು ಜಾತಿ ಪೀಡಕರು ರಾಜಾರೋಷವಾಗಿ ತಾಕೀತು ಮಾಡಿದರು. ಈ ಹಿನ್ನೆಲೆಯಲ್ಲಿ  ನೊಂದ ಯುವಕ ಸ್ವಾಮಿನಾಥನ್ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಘಟನೆ ಹಿನ್ನೆಲೆ ದೇವಸ್ಥಾನಕ್ಕೆ ಆಗಮಿಸಿದ ಪೊಲೀಸರು ಜಾತಿ ಪೀಡಕರಿಗೆ ಬುದ್ಧಿ ಹೇಳಿ, ಕೈತೊಳೆದುಕೊಂಡಿದ್ದಾರೆ. ಇನ್ನೊಂದೆಡೆ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಜಾಣ ಮೌನ ವಹಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಕೇವಲ ಬಿಲ್ ಬರೆಯುವುದಕ್ಕೆ ಸೀಮಿತವಾಗಿದ್ದು, ಪರಿಶಿಷ್ಟರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವ…

Read More

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ 132 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು. ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ ನೂತನ ಕಟ್ಟಡ ವಿನ್ಯಾಸದ ನೀಲನಕ್ಷೆ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚಿಸಿದ ಅವರು, ಪ್ರಸ್ತುತ ಇರುವ ಜಿಲ್ಲಾಸ್ಪತ್ರೆಯ ಕಟ್ಟಡವು 78 ವರ್ಷ ಹಳೆಯದಾಗಿದ್ದು, ಆಧುನೀಕರಿಸಲು ಸಾಧ್ಯವಿಲ್ಲ. ಕಟ್ಟಡದ ಹಲವು ಭಾಗಗಳು ಶಿಥಿಲಗೊಳ್ಳುತ್ತಿವೆ. ಅಲ್ಲದೆ ಹಳೆಯ ಕಟ್ಟಡದ ಮೇಲೆ ಮೇಲಂತಸ್ತುಗಳ ನಿರ್ಮಾಣ ಸಾಧ್ಯವಿಲ್ಲದೆ ಇರುವುದರಿಂದ ನೂತನವಾಗಿ ಸುಸಜ್ಜಿತ ಹಾಗೂ ಆಧುನಿಕವಾದ 300 ಹಾಸಿಗೆಗಳ ಕಟ್ಟಡವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ಕಟ್ಟಡ ಕಾಮಗಾರಿಯನ್ನು ಗಣಿಬಾಧಿತ ಪ್ರದೇಶಗಳ ಸಮಗ್ರ ಪುನಃಶ್ಚೇತನ ಯೋಜನೆಯಡಿ ಕೈಗೊಳ್ಳಲಾಗುವುದು. ಕಾಮಗಾರಿ ಕೈಗೊಳ್ಳುವ ಮುನ್ನ ಬೇರೆ ಜಿಲ್ಲೆಯಲ್ಲಿ ಆಧುನಿಕವಾಗಿ ನಿರ್ಮಿಸಿರುವ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರಲ್ಲದೆ, ಕಟ್ಟಡವನ್ನು ಜಿ+4 ಅಂತಸ್ತುಗಳನ್ನೊಳಗೊಂಡಂತೆ ಆಧುನಿಕವಾಗಿ ವಿನ್ಯಾಸಗೊಳಿಸಬೇಕು ಎಂದು…

Read More

ತುಮಕೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆ–2ನ್ನು ಮೇ 26 ರಿಂದ ಜೂನ್ 2ರವರೆಗೆ ನಡೆಸಲು ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಜಿಲ್ಲೆಯಲ್ಲಿ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ–1ರಲ್ಲಿ ತುಮಕೂರಿನ 6,929 ಹಾಗೂ ಮಧುಗಿರಿಯ 4715 ಸೇರಿ 11,644 ವಿದ್ಯಾರ್ಥಿಗಳು ಉತ್ತೀರ್ಣ ಅಂಕಗಳನ್ನು ಪಡೆದಿರುವುದಿಲ್ಲ. ಉತ್ತೀರ್ಣ ಅಂಕಗಳನ್ನು ಪಡೆಯದಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ–2ಕ್ಕೆ ನೋಂದಾಯಿಸಲು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಉತ್ತೀರ್ಣ ಅಂಕಗಳನ್ನು ಪಡೆಯದಿರುವ ವಿದ್ಯಾರ್ಥಿಗಳು ಮೇ 10ರೊಳಗಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯಲ್ಲಿ ಈವರೆಗೂ ತುಮಕೂರಿನ 6,251 ಹಾಗೂ ಮಧುಗಿರಿಯ 4064 ಸೇರಿ 10,315 ವಿದ್ಯಾರ್ಥಿಗಳು ಮಾತ್ರ ನೋಂದಾಯಿಸಿಕೊಂಡಿದ್ದಾರೆ. ಉಳಿದ 1,329 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಳ್ಳುವಂತೆ ಪೋಷಕರಿಗೆ ಮನವರಿಕೆ ಮಾಡುವಂತೆ ಶಾಲಾ ಮುಖ್ಯ ಶಿಕ್ಷಕರು ಕ್ರಮ ಕೈಗೊಳ್ಳಬೇಕು. ಅಲ್ಲದೆ ಪರೀಕ್ಷೆ 1ರ ಫಲಿತಾಂಶದಲ್ಲಿ ಉತ್ತಮಿಕೆಗೆ ಅವಕಾಶವಿರುವುದರಿಂದ ಆಸಕ್ತ ವಿದ್ಯಾರ್ಥಿಗಳು ಸಹ ಉತ್ತಮಿಕೆಗೆ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಮೇ 5 ರಿಂದ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯವು ಕೆಲ ತಾಲೂಕುಗಳಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ನಿರೀಕ್ಷಿತ ಮಟ್ಟದಲ್ಲಿ ಸಮೀಕ್ಷಾ ಕಾರ್ಯ ನಡೆಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯಕ್ಕೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಡಿಡಿಪಿಐಗಳಿಗೆ ಖಡಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಗ್ರ ಪರಿಶಿಷ್ಟ ಜಾತಿ ಉಪಜಾತಿಯ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಗಣತಿದಾರರು ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸಮೀಕ್ಷೆಯನ್ನು ನಡೆಸಬೇಕು. ನೋಡಲ್ ಅಧಿಕಾರಿಗಳು ಪ್ರತಿ ದಿನಗಳಿಗೊಮ್ಮೆ ಸಮೀಕ್ಷೆ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರತಿದಿನ ಗಣತಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಗಣತಿದಾರರಿಗೆ ಮಾರ್ಗದರ್ಶನ ನೀಡಬೇಕು ಎಂದು ನಿರ್ದೇಶನ ನೀಡಿದರು. ಪರಿಶಿಷ್ಟ ಜಾತಿ ಸಮೀಕ್ಷೆಯನ್ನು ಯಾವುದೇ ಗೊಂದಲಗಳುಂಟಾಗದಂತೆ ನಡೆಸಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕು. ನೆಟ್ವರ್ಕ್ ಸಮಸ್ಯೆ…

Read More

ತುಮಕೂರು: ರಾಷ್ಟ್ರದ ಗಡಿಯಲ್ಲಿ ಭಾರತ–ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ 3,000 ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆಂಟ್ ಹೋಮ್ ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬಂಧಿಸಿದಂತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು. ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು 18 ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು. ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು…

Read More

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ರಸ್ತೆ ಮೇಲೆ ಪಾಕಿಸ್ತಾನ ಧ್ವಜವನ್ನು ಅಂಟಿಸಿ ಅದರ ಮೇಲೆ ಚಪ್ಪಲಿ ಹಾಗೂ ಮೂತ್ರ ವಿಸರ್ಜನೆ ಮಾಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾವಗಡದ ಶನಿಮಹಾತ್ಮ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿ ಬೀದಿಬದಿ ವ್ಯಾಪಾರಸ್ಥರು, ಲಾರಿ ಹಮಾಲಿಗಳು, ಆಟೋಚಾಲಕರು ಮತ್ತು ಸಾರ್ವಜನಿಕರು ಚಪ್ಪಲಿ ಹಾರ ಹಾಕಿದರು. ಅಲ್ಲದೆ ಕಳ್ಳನಾಟಕ ಆಡುತ್ತಿರುವ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ಉಡುಪಿ: ಕಿರುತೆರೆ ಹಾಸ್ಯನಟ ರಾಕೇಶ್ ಪೂಜಾರಿ ತಮ್ಮ 33ನೇ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ‘ಕಾಮಿಡಿ ಕಿಲಾಡಿಗಳು’ ವೇದಿಕೆ ರಾಕೇಶ್ ಪೂಜಾರಿಯ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್​ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ರಾಕೇಶ್ ಪೂಜಾರಿ ಅಭಿನಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು:  ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ  ಗ್ರಾಮ ದೇವತೆಗಳಿಗೆ ಪೊಲೀಸ್ ಠಾಣೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಸಿರುವ ಅಪರೂಪದ ಪ್ರಸಂಗ ನಡೆದಿದೆ. ತಿಪಟೂರು ನಗರದ ಗ್ರಾಮದೇವತೆ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಕೊಲ್ಲಾಪುರದಮ್ಮ ದೇವರುಗಳಿಗೆ ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿಗಳು ಸಮವಸ್ತ್ರದಲ್ಲಿ ನಿಂತು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಗಳು ಸೀರೆಯನ್ನು ಧರಿಸಿ ಕುಂಕುಮಾರ್ಚನೆ ಸೇರಿದಂತೆ ಮಹಾಮಂಗಳಾರತಿಯನ್ನು ನೆರವೇರಿಸಿದರು. ಠಾಣೆಯೊಳಗೆ ದೇವರಿಗೆ ಗದ್ದುಗೆ ನಿರ್ಮಿಸಿದ್ದರು.  ಇದೇ ವೇಳೆ ಪೊಲೀಸ್ ಠಾಣೆ ಕಟ್ಟಡಕ್ಕೆ ಕಾವು ಕಟ್ಟಲೇ ಮಾಡಿದ ಪೂಜಾರಿಗಳು, ದೇವರಿಂದ ಪೊಲೀಸ್ ಠಾಣೆಯ ನಾಲ್ಕು ದಿಕ್ಕಿನ ಮೂಲೆ ಮೂಲೆಗೆ ನಿಂಬೆ ಹಣ್ಣು ಒಡೆದು ಪೀಡೆ ಪಿಶಾಚಿ ಇನ್ನಿತರೆ ಕೆಟ್ಟ ದೃಷ್ಠಿಗಳಿಂದ ರಕ್ಷಣೆಗಾಗಿ ಮಾಡಿಸುವ ಕಟ್ಟಳೆ ಪೂಜೆ ನೆರವೇರಿಸಲಾಯಿತು. ಸಂವಿಧಾನಿಕ ಸ್ಥಳದಲ್ಲಿ ಮೌಢ್ಯಾಚರಣೆ ಮಾಡಿದ ಪೊಲೀಸರ ನಡೆ ಅಚ್ಚರಿ ಮೂಡಿಸಿದೆ.  ಅದರಲ್ಲೂ ಮುಖ್ಯವಾಗಿ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಈ…

Read More

ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಹೊಸಹಳ್ಳಿ ತಾಂಡಾದಲ್ಲಿ ಶನಿವಾರ ಸಂಜೆ 6 ಗಂಟೆಯಲ್ಲಿ ಬೀದಿ ನಾಯಿಗಳ ದಾಳಿಗೆ ಸುಮಾರು 12 ಕುರಿ ಮರಿಗಳು ಸಾವನ್ನಪ್ಪಿವೆ. ಗ್ರಾಮದ ಕಸನ ನಾಯಕ ಎನ್ನುವವರಿಗೆ ಸೇರಿದ 12 ಕುರಿ ಮರಿಗಳು ಮೇಲೆ 5 ನಾಯಿಗಳು ದಾಳಿ ನಡೆಸಿದ್ದು, 12 ಕುರಿ ಮರಿಗಳು ಸಹ ಸ್ಥಳದಲ್ಲಿಯೇ ಮೃತಪಟ್ಟಿವೆ. ಇತ್ತೀಚಿಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗ ಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದು, ಕುರಿಮರಿಗಳಿಂದ ನಷ್ಟಕ್ಕೊಳಗಾದ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎನ್ನುವ ಒತ್ತಾಯ ಸಾರ್ವಜನಿಕರಿಂದ ಕೇಳಿ ಬಂದಿದೆ. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ತುಮಕೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಅಮಾಯಕ ಹಿಂದೂಗಳ ಹತ್ಯೆಗೆ ಪ್ರತ್ಯುತ್ತರವಾಗಿ ಭಾರತ ಪಾಕಿಸ್ತಾನದ ಮೇಲೆ ಆರಂಭಿಸಿರುವ ʼಆಪರೇಷನ್‌ ಸಿಂಧೂರʼಕ್ಕೆ ತುಮಕೂರು ಜಿಲ್ಲಾ  ವೀರಶೈವ  ಲಿಂಗಾಯತ ಮಹಾಸಭಾ ಹಾಗೂ  ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ  ನಗರದ ಶ್ರೀ ಸೋಮೇಶ್ವರ ದೇಗುಲದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ವಿಶೇಷ ಗಣ ಹೋಮ ನಡೆಸಲಾಯಿತು. ಅಲ್ಲದೆ ಶ್ರೀ ಸೋಮೇಶ್ವರ ಸ್ವಾಮಿ ಗರ್ಭಗುಡಿಯಲ್ಲಿ ವಿಶೇಷ ಅರ್ಚನೆ ಹಾಗೂ ಮಂಗಳಾರತಿ ನಡೆಸಲಾಯಿತು. ದೇಶದ ಪ್ರಧಾನಮಂತ್ರಿ ಸೇರಿದಂತೆ ಪಾಕಿಸ್ತಾನದ ವಿರುದ್ಧ ಹೋರಾಡುತ್ತಿರುವ ಪ್ರತಿಯೊಬ್ಬ ಸೈನಿಕರಿಗೂ ಆಯಸ್ಸು ಹಾಗೂ ಆರೋಗ್ಯ ಹಾಗೂ ಹೋರಾಡುವ ಶಕ್ತಿ ಕರುಣಸಲಿ ಎಂದು ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಮಹಾಸಭಾದ ಜಿಲ್ಲಾಧ್ಯಕ್ಷರಾದ ಡಾ.ಎಸ್.ಪರಮೇಶ್‌, ವೀರಶೈವ ಸಮಾಜದ ಅಧ್ಯಕ್ಷ ಚಂದ್ರಮೌಳಿ,  ದೇಶಪ್ರೇಮಿಗಳು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More