Subscribe to Updates
Get the latest creative news from FooBar about art, design and business.
- ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
- ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ, ಫುಟ್ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
- ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
- ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
- ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
- ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
- ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
- ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
Author: admin
ಚಿಕ್ಕೋಡಿ: ಆಡಳಿತ ವ್ಯವಸ್ಥೆ ಕುಸಿದಿದೆ, 2 ದಿನದಲ್ಲಿ ನಾನು ರಾಜೀನಾಮೆ ನೀಡಿದರೂ ಆಶ್ಚರ್ಯವಿಲ್ಲ ಎಂದು ಹಿರಿಯ ಶಾಸಕ ರಾಜು ಕಾಗೆ ಸ್ವಪಕ್ಷ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಬಿ.ಆರ್. ಪಾಟೀಲ್ ಆಡಿರುವ ಮಾತುಗಳು ಸುಳ್ಳಲ್ಲ. ಅವರ ಆಡಿಯೋ ವೈರಲ್ ವಿಚಾರಕ್ಕೆ ನನ್ನ ಬೆಂಬಲವಿದೆ ಎಂದರು. ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ನನಗೆ 25 ಕೋಟಿ ರೂಪಾಯಿ ಕಾಮಗಾರಿ ಮಂಜೂರು ಮಾಡಲಾಗಿದೆ. ಇದರಲ್ಲಿ 12 ಕೋಟಿ ರೂಪಾಯಿ ರಸ್ತೆ ಕಾಮಗಾರಿಗೆ ಅನುಮತಿ ನೀಡಲಾಗಿದೆ. ಇನ್ನು 13 ಕೋಟಿ ರೂಪಾಯಿ ಕಾಮಗಾರಿಯ ವರ್ಕ್ ಆರ್ಡರ್ ಸಿಕ್ಕಿಲ್ಲ. 72 ಸಮುದಾಯದ ಭವನಕ್ಕೆ ಅನುಮೋದನೆ ಸಿಕ್ಕಿಲ್ಲ. ಎರಡು ವರ್ಷ ಆಯ್ತು ಇನ್ನೂ ವರ್ಕ್ ಆರ್ಡರ್ ಬಂದಿಲ್ಲ. ಇಲ್ಲಿ ಅಧಿಕಾರಿಗಳನ್ನು ಕೇಳಿದರೆ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು. ಸರ್ಕಾರದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ, ನನ್ನ ಮನಸ್ಸಿಗೆ ನೋವಾಗಿದೆ, ನನಗೆ ರಾಜೀನಾಮೆ ಕೊಡುವ ಮನಸ್ಥಿತಿ…
ತುಮಕೂರು: ಗ್ರಾಮೀಣ ಪ್ರದೇಶ ಹಾಗೂ ಬಡ ವಿದ್ಯಾರ್ಥಿಗಳನ್ನು ದೂರದೃಷ್ಟಿ ಇಟ್ಟುಕೊಂಡು ತಿಪಟೂರು ಬಸವೇಶ್ವರ ವಿದ್ಯಾ ಸಂಸ್ಥೆಯ ಇಂಜಿನಿಯರ್ ಕಾಲೇಜಿಗೆ ಪ್ರವೇಶ ಸಿಇಟಿಗಿಂತಲೂ ಕಡಿಮೆ ಶುಲ್ಕ ನಿಗದಿಪಡಿಸಿದ್ದೇವೆ ಎಂದು ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಹಾಲಪ್ಪನವರು ತಿಳಿಸಿದರು ಎಂಜಿನಿಯರಿಂಗ್ ಕಾಲೇಜಿಗೆ ಸಿಇಟಿ ಮೂಲಕ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿರುವ ಶುಲ್ಕ ಪಾವತಿ ಮಾಡಲಾಗದೆ ಅನೇಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬಡವರು ಎಂಜಿನಿಯರಿಂಗ್ ಮಾಡುವ ಆಸೆ ಇದ್ದರೂ ಬಿ.ಎ., ಬಿಕಾಂ, ಬಿಎಸ್ ಸಿ ಇತರೆ ಪದವಿ ಕೋರ್ಸ್ ಗಳಿಗೆ ಸೇರುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ವಂಚಿತರಾಗುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಿಇಟಿ ಪ್ರವೇಶಕ್ಕೆ ಪಾವತಿಸ ಬೇಕಾದ ಶುಲ್ಕಕ್ಕಿಂತಲೂ ಕಡಿಮೆ ಶುಲ್ಕ ಪಡೆದು ಶಿಕ್ಷಣ ನೀಡುತ್ತಿದ್ದೇವೆ ಎಂದರು. ಪ್ರಾಂಶುಪಾಲ, ಡಾ.ರಾಜಕುಮಾರ್ ಮಾತನಾಡಿ, ನಮ್ಮ ಕಾಲೇಜು ಪ್ರತಿಷ್ಠಿತ ವಿಟಿಯು ಯುನಿವರ್ಸಿಟಿಯಿಂದ ನೋಂದಾಯಿತವಾಗಿದ್ದು, ಇಲ್ಲಿ ವಿಟಿಯು ಸಿಲಬಸ್ ಹೇಳಿಕೊಡುತ್ತೇವೆ, ಎಲ್ಲಾ ಶೈಕ್ಷಣಿಕ ವೇಳಾಪಟ್ಟಿ ಹಾಗೂ ಪರೀಕ್ಷೆಗಳು ವಿಟಿಯು ನಿರ್ದೇಶನದಂತೆ ನಡೆಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಡಾ.ಶಿವಾನಂದಯ್ಯ,…
ದೇವನಹಳ್ಳಿ: ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಜಘಟ್ಟ ಗ್ರಾಮದ ಕೆರೆ ಬಳಿ ನಡೆದಿದೆ. ಜೂ.13ರಂದು ಸೆಲ್ಫಿ ವಿಡಿಯೋ ಮಾಡಿದ ಮಂಜುನಾಥ್, ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರೀತಿಸಿದ ಯುವತಿ ಗಗನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಮಂಜುನಾಥ್, ಆಕೆಗೆ ಬೇರೊಬ್ಬನ ಜೊತೆ ಸಂಬಂಧವಿತ್ತು ಎಂದು ವಿಡಿಯೋದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ ಯುವತಿಯ ಕುಟುಂಬಸ್ಥರ ವಿರುದ್ಧ ಕೂಡ ಮಂಜುನಾಥ್ ಕಿರುಕುಳ ಆರೋಪ ಮಾಡಿದ್ದು, ನನಗೆ ನ್ಯಾಯ ಕೂಡಿಸುವಂತೆ ಹೇಳಿದ್ದಾರೆ. ಮಾತ್ರೆ ಸೇವಿಸಿದ್ದ ಮಂಜುನಾಥ್ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಯುವತಿ ಮತ್ತು ಕುಟುಂಬಸ್ಥರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಕೊಪ್ಪಳ: ಖಾಲಿ ಉಳಿದಿರುವ 8,000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರ ಅವಧಿಯಲ್ಲಿ ಯಾವುದೇ ನೇಮಕಾತಿಗಳೂ ನಡೆದಿಲ್ಲ. ನಮ್ಮ ಸರ್ಕಾರ ಎಲ್ಲವನ್ನೂ ಸರಿಪಡಿಸಿದ್ದು, ಶೀಘ್ರದಲ್ಲೇ 8 ಸಾವಿರ ಕಾನ್ ಸ್ಟೆಬಲ್ ಗಳು, 500 ಸಬ್–ಇನ್ಸ್ ಪೆಕ್ಟರ್ ಗಳನ್ನು ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಯಾವುದೇ ಮಾಹಿತಿ ತನಗೆ ತಿಳಿದಿಲ್ಲ ಎಂದು ಹೇಳಿದರು. ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಒಳಗೊಂಡ ಆಡಿಯೋ ಕ್ಲಿಪ್ ಕುರಿತ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ‘ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ ಹೇಳಿದ್ದೇನೆ. ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತಿಪಟೂರು: 1962ರಲ್ಲಿ ಸ್ಥಾಪಿತವಾದ ಕಲ್ಪತರು ವಿದ್ಯಾ ಸಂಸ್ಥೆಯ ಅಂದಿನಿಂದಲೂ ಇದುವರೆಗೂ ಗ್ರಾಮೀಣ ಬಡಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕಲ್ಪಿಸುವಲ್ಲಿ ಶ್ರಮಿಸುತ್ತಿದೆ ಎಂದು ಶಾಸಕ ಕೆ.ಷಡಕ್ಷರಿ ಹೇಳಿದರು. ಕಲ್ಪತರು ಕಾಲೇಜು ಆವರಣದಲ್ಲಿ ವಜ್ರ ಮಹೋತ್ಸವ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ತುಮಕೂರು ಜಿಲ್ಲೆಯಲ್ಲಿ ಎತ್ತರವಾಗಿ ಬೆಳೆಯುತ್ತಿರುವ ಸಂಸ್ಥೆ ಇದಾಗಿದ್ದು ವಿಶ್ವವಿದ್ಯಾಲಯವಾಗಿ ರೂಪುಗೊಳ್ಳಬೇಕು, ತಮ್ಮ ಸರ್ಕಾರವು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಹೊತ್ತು ನೀಡುತ್ತಿದ್ದು, ಅದರಂತೆ ವಿವಿಧ ಯೋಜನೆಗಳನ್ನು ಕಲ್ಪತರು ನಾಡಿಗೆ ತರುವ ಕಲ್ಪತರು ವಿದ್ಯಾ ಸಂಸ್ಥೆಯ ಬೆಳೆದು ನಿಂತಿದೆ ಎಂದು ಆಶಯ ವ್ಯಕ್ತಪಡಿಸಿದರು. ಕಲ್ಪತರು ವಿದ್ಯಾ ಸಂಸ್ಥೆಯ ಅಧ್ಯಕ್ಷ ಪಿ.ಕೆ.ತಿಪ್ಪೆರುದ್ರಪ್ಪನವರು ಮಾತನಾಡಿ, ಕಾಲೇಜಿನ ಸಂಸ್ಥಾಪಕ ಪ್ರಾಚಾರ್ಯ ಜೆ.ಆರ್. ಮಾಲಿಂಗಯ್ಯ ಮಾತನಾಡಿ, ಕನಸುಗಳಲ್ಲಿ ಒಂದಾದ ಸುಸಜ್ಜಿತ ಸುವ್ಯವಸ್ಥಿತ ಪ್ರಾಥಮಿಕ ಪ್ರೌಢ ಶಿಕ್ಷಣವನ್ನು ಕಲ್ಪತರು ನಾಡಿನ ಮಕ್ಕಳಿಗೆ ನೀಡಬೇಕೆಂಬುದನ್ನು ನನಸಾಗಿಸುತ್ತಿರುವ ಸುದಿನ ಇದಾಗಿದೆ. ಈ ಸತ್ಕಾರ್ಯಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಕರಿಸುತ್ತಿರುವ ಎಲ್ಲರಿಗೂ ವಿದ್ಯಾ ಸಂಸ್ಥೆ ಯು ಚಿರಋಣಿಯಾಗಿರುತ್ತದೆ ಎಂದು ತಿಳಿಸಿದರು.…
ಬೆಂಗಳೂರು: ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಹಾಗೂ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‍ಗೆ ಅವರಿಗೆ ದೇವೇಗೌಡ ಅವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕರ್ನಾಟಕದ ಗ್ರಾಮೀಣ ಭಾಗದ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರಕಾರ ಮಾರುಕಟ್ಟೆ ಮಧ್ಯೆಪ್ರವೇಶ ಮಾಡಿ, ನಫೆಡ್ ಮತ್ತು ಎನ್‍ಸಿಸಿಎಫ್ ಮೂಲಕ ತಕ್ಷಣ ಮಾವು ಖರೀದಿಯನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ವಿವಿಧ ಯೋಜನೆಗಳ ಮೂಲಕ ಸಾಕಷ್ಟು ಆರ್ಥಿಕ ಪ್ರಯೋಜನಗಳನ್ನು ಒದಗಿಸುವ ಮೂಲಕ ಮಾವು ಬೆಳೆಗಾರರಿಗೆ ನೆರವಾಗಬೇಕು. ಬೆಂಬಲ ಬೆಲೆಯಡಿ ಮಾವು ಖರೀದಿಸಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿ ತೋತಾಪುರಿ ಮಾವಿನ ಹಣ್ಣಿನ ನಿಷೇಧವನ್ನು ರದ್ದುಗೊಳಿಸುವಂತೆ ಆಂಧ್ರಪ್ರದೇಶ ಸರಕಾರಕ್ಕೂ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ…
ಬೆಂಗಳೂರು: ಸದ್ಯಕ್ಕೆ ನಾನು ಬಿಜೆಪಿಗೆ ಮರಳುವುದಿಲ್ಲ, ಮೊದಲು ಬಿಜೆಪಿಯಲ್ಲಿನ ಪರಿಸ್ಥಿತಿ ಸರಿ ಹೋಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಬಿಜೆಪಿಗೆ ಮರಳುವ ಪರಿಸ್ಥಿತಿಯಲ್ಲಿಲ್ಲ. ಮೊದಲು ಬಿಜೆಪಿ ಪರಿಸ್ಥಿತಿ ಸರಿಯಾಗಬೇಕು. ವಿಜಯೇಂದ್ರ ಆಹ್ವಾನ ಕೊಟ್ಟಿರುವ ಬಗ್ಗೆ ಗೊತ್ತಿಲ್ಲ. ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ನನ್ನ ಯಡಿಯೂರಪ್ಪ ಸ್ನೇಹ ಬಹಳ ಹಳೆಯದು, ಇವತ್ತಿನದಲ್ಲ. ನಾವಿಬ್ಬರೂ ಪಾರ್ಟ್‌ನರ್ ಶಿಪ್‌ನಲ್ಲಿ ಹಿಂದೆ ಫ್ಯಾಕ್ಟರಿ ಮಾಡಿದ್ದೆವು. ನಮ್ಮಿಬ್ಬರ ಮಧ್ಯೆ ಸ್ನೇಹ ಮುಂದುವರೆಯುತ್ತಿದೆ. ರಾಜಕಾರಣಕ್ಕೂ ಸ್ನೇಹಕ್ಕೂ ಸಂಬಂಧ ಇಲ್ಲ. ನನ್ನ ಹುಟ್ಟುಹಬ್ಬಕ್ಕೆ ಪತ್ರಿಕೆಯಲ್ಲೂ ಅವರು ಶುಭಾಶಯ ಕೋರಿಕೆ ಹಾಕಿಸಿದ್ದರು. ನಮ್ಮ ಮನೆಯ ಕಾರ್ಯಕ್ರಮಗಳಿಗೆ ಅವರು ಬಂದಿದ್ದಾರೆ. ಅವರ ಮನೆ ಕಾರ್ಯಕ್ರಮಗಳಿಗೆ ನಾವು ಹೋಗಿದ್ದೇವೆ. ಸ್ನೇಹ ಬೇರೆ ರಾಜಕಾರಣ ಬೇರೆ ಎಂದು ಈಶ್ವರಪ್ಪ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಹುಬ್ಬಳ್ಳಿ: ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ತೆರಳಿದ್ದ ವೇಳೆ ಮಗುವಿನ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು. ತಕ್ಷಣ ಮಗುವನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಬಳಿಕ ಎರಡು ದಿನದ ಹಿಂದಷ್ಟೇ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಮನೆಗೆ ಮರಳಿದ ನಂತರ ಮತ್ತೆ ಮಗುವಿನ ಮೈಮೇಲೆ ಮತ್ತೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವ ದಾರಿ ಮಧ್ಯೆಯೇ ಸಾವನ್ನಪ್ಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಈ ವರ್ಷಗಳಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೂಗಿ ಹಾಜರಾತಿ ಪಡೆಯುವ ಬದಲು ಶಿಕ್ಷಕರು ಮೊಬೈಲ್ ನಲ್ಲಿ ವಿದ್ಯಾರ್ಥಿಗಳ ಮುಖ ಸ್ಕ್ಯಾನ್ ಮಾಡುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಹಾಜರಾತಿಯನ್ನು ಕೃತಕ ಬುದ್ಧಿಮತ್ತೆ ಚಾಲಿತ, ಮುಖ ಚಹರೆ ಗುರುತು ಆಧಾರಿತವಾಗಿ (ಎಐ ಫೇಶಿಯಲ್ ರಿಕಗ್ನಿಷನ್) ತೆಗೆದುಕೊಳ್ಳಲಾಗುತ್ತದೆ. ಸುಮಾರು 5 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ (ಕೆಎಸ್‌ಡಿಸಿ) ಮೂಲಕ ನಿರ್ವಹಣೆ ಮಾಡಲಾಗುತ್ತದೆ. ಇದಕ್ಕಾಗಿ ಸಾಫ್ಟ್ ವೇರ್ ಕೂಡ ಸಿದ್ಧಪಡಿಸಲಾಗುತ್ತಿದೆ. ಇದು ಗರಿಷ್ಠ ಗೌಪ್ಯತೆ ಮತ್ತು ಸುರಕ್ಷತೆ ಕಾಪಾಡುತ್ತದೆ. ಪ್ರಸಕ್ತ ವರ್ಷದಿಂದಲೇ ಇ–ಹಾಜರಾತಿ ಜಾರಿಗೆ ಬರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ, ನಕಲಿ ದಾಖಲಾತಿ ತೋರಿಸಿ ಸರ್ಕಾರದ ವಿವಿಧ ಸೌಲಭ್ಯ ಪಡೆಯುತ್ತಿರುವ ಶಾಲೆಗಳ ಕಳ್ಳಾಟಕ್ಕೆ ತಡೆ ಹಾಕಲು ಮುಂದಾಗಿರುವ…
ವಾಷಿಂಗ್ಟನ್: ಇಸ್ರೇಲ್- -ಇರಾನ್ ನಡುವೆ ನಡೆಯುತ್ತಿರುವ ಯುದ್ಧಕ್ಕೆ ಅಮೆರಿಕ ಅಧಿಕೃತವಾಗಿ ಎಂಟ್ರಿ ನೀಡಿದೆ. ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಸೇರಿದಂತೆ ಮೂರು ಪ್ರಮುಖ ಪರಮಾಣು ತಾಣಗಳ ಮೇಲೆ ದಾಳಿ ನಡೆಸಿದೆ. ಈ ಕುರಿತು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಘೋಷಣೆ ಮಾಡಿದ್ದಾರೆ. ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ನಲ್ಲಿರುವ ಇರಾನಿನ ಪರಮಾಣು ನೆಲೆಗಳ ಮೇಲೆ ಅಮೆರಿಕವು ಅತ್ಯಂತ ಯಶಸ್ವಿಯಾಗಿ ದಾಳಿಗಳನ್ನು ನಡೆಸಿದೆ. ಎಲ್ಲಾ ವಿಮಾನಗಳು ಈಗ ಇರಾನಿನ ವಾಯುಪ್ರದೇಶದಿಂದ ಹೊರಗಿವೆ ಎಂದು ಟ್ರಂಪ್ ಹೇಳಿದ್ದಾರೆ. ಇರಾನ್ ನಲ್ಲಿರುವ ಫೋರ್ಡೋ, ನಟಾಂಜ್ ಮತ್ತು ಎಸ್ಫಹಾನ್ ಸೇರಿದಂತೆ ಮೂರು ಪರಮಾಣು ತಾಣಗಳ ಮೇಲೆ ನಾವು ನಮ್ಮ ಅತ್ಯಂತ ಯಶಸ್ವಿ ದಾಳಿಯನ್ನು ಪೂರ್ಣಗೊಳಿಸಿದ್ದೇವೆ. ನಮ್ಮ ಎಲ್ಲಾ ವಿಮಾನಗಳು ಈಗ ಇರಾನ್ ವಾಯುಪ್ರದೇಶದ ಹೊರಗೆ ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…