Subscribe to Updates
Get the latest creative news from FooBar about art, design and business.
- ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
- ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
- ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
- ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
- ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
- ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
Author: admin
ಸರಗೂರು: ತಾಲೂಕಿನ ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಶುಕ್ರವಾರ ದಂದು ಆಚರಿಸಲಾಯಿತು. ಪರಿಸರ ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುಂಬ ಸೊಗೆ ಗ್ರಾಮಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಮೂಲಕ ಪೋಷಕರಲ್ಲಿ ಜಾಗೃತಿಯನ್ನು ಮಾಡಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರಹೊಳೆ ವನ್ಯಜೀವಿ ಅರಣ್ಯ ಅಧಿಕಾರಿ ರಶ್ಮಿರವರು ಮಾತನಾಡಿ ಪರಿಸರ ಮತ್ತು ಜೀವವೈವಿಧ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ವಿವರಿಸಿದರು. ಪರಿಸರದ ಮಾಲಿನ್ಯದಿಂದ ಜೀವವೈವಿಧ್ಯ ನಶಿಸುತ್ತಿದೆ. ಹಾಗೆ ಪರಿಸರದ ನಾಶ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನ ಹೆಚ್ಚಾಗುತ್ತಿರುವುದು ಪರಿಸರವನ್ನು ಹಾಳು ಮಾಡುತ್ತಿರುವುದು ಕಾರಣ ಇದರಿಂದ ಮನುಷ್ಯ ಕಾಯಿಲೆಗಳಿಗೆ ಗೊತ್ತಾಗುತ್ತೆನೆ ಹಾಗೂ ಪ್ಲಾಸ್ಟಿಕ್ ನ ಅತಿಯಾದ ಬಳಕೆ ಅದರ ಉತ್ಪಾದನೆ ಉಪಯೋಗ ಎಲ್ಲವೂ ಮನುಷ್ಯನಿಂದಲೇ ಆಗಿದೆ. ಅದನ್ನು ಮರುಬಳಕೆ ಮಾಡದೆ ಪರಿಸರದಲ್ಲೇ ಉಳಿಯುತ್ತಿರುವುದು ಅದು ಭೂಮಿಯಲ್ಲಿ ಕೊಳೆಯದೆ ಹಾಗೂ ಕರಗದ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪ್ಲಾಸ್ಟಿಕ್…
ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಹಲವಾರು ಜನರು ಗಾಯಗೊಂಡ ಘಟನೆಯ ಬಳಿಕ ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಗಮಿತ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ. ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದರು. ಕಮಲ್ ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು. 2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರ ಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ‘ಸ್ಕೆಚ್ ಸಿದ್ಧಪಡಿಸಲು’ ಮತ್ತು ಅದಕ್ಕೆ ಅನುಮೋದನೆ ನೀಡಲು ಆರೋಪಿ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರುದಾರ ರವಿ ಆರೋಪಿಸಿದ ನಂತರ ಲೋಕಾಯುಕ್ತ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಆರೋಪಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಹೆಚ್.ಡಿ.ಕೋಟೆ : ಕೃಷ್ಣಾಪುರ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಗೌರವಾಧ್ಯಕ್ಷರು ಮತ್ತು ಡಿಸಿಸಿ ಸದಸ್ಯರು ಹಾಗೂ ತಂಬಾಕು ಮಂಡಳಿಯ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರ ಪರಶಿವಮೂರ್ತಿ ಕೃಷ್ಣಾಪುರ ಅವರ ಹುಟ್ಟುಹಬ್ಬವನ್ನು ಮಾತಂಗ ಜನಜಾಗೃತಿ ವೇದಿಕೆ ಸೇರಿದಂತೆ ಅಭಿಮಾನಿಗಳು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಕೃಷ್ಣಾಪುರ ಸರ್ಕಲ್ ಬಳಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು. ನಂತರ ಹುಟ್ಟುಹಬ್ಬ ಕುರಿತು ನಾಗನಹಳ್ಳಿ ಪ್ರದೀಪ್, ಎಡತೊರೆ ಚೆಲುವರಾಜು, ಮಾತಂಗ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರವೀಶ್, ಉಪಾಧ್ಯಕ್ಷ ವಿನೋದ್ ಪ್ರಸಾದ್ ಕೆಟಿಎಸ್, ಕೊತ್ತೇಗಾಲ ಮಹದೇವು, ಕಲ್ಲಟ್ಟಿ ನಾಗೇಶ್, ವನಸಿರಿ ಶಂಕರ್ ಅವರು ಹುಟ್ಟು ಹಬ್ಬ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಸಿ.ಮಂಜುನಾಥ್, ಕರವೇ ಸತೀಶ್ ಗೌಡ, ಉಡ ನಾಗರಾಜ್, ಗುತ್ತಿಗೆದಾರ ಮಹೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್, ಮಲಾರ ಶಿವಣ್ಣ, ಕಳಸೂರು…
ಬೆಂಗಳೂರು: ಆರ್ ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆರೋಪಿಸಿದೆ ಎಂದು ವರದಿಯಾಗಿದೆ. ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್ ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್ ಸಿಎ ಉಲ್ಲೇಖಿಸಿದೆ. ಘಟನೆಯ ಹೊಣೆಯನ್ನು ಕೆಎಸ್ ಸಿಎ ಮೇಲೆ ಹೊರಿಸಲು ಯತ್ನಿಸಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆ ನಿರ್ವಹಣೆ ಆರ್ ಸಿಬಿ ಹಾಗೂ ಪೊಲೀಸರ ಕರ್ತವ್ಯ. ಕರ್ನಾಟಕದ ಕ್ರಿಕೆಟ್ ನಿಯಂತ್ರಣವಷ್ಟೇ ಕೆಎಸ್ ಸಿಎ ಜವಾಬ್ದಾರಿ ಎಂದು ಸಂಸ್ಥೆ ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಬೆಂಗಳೂರಿನಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹೊಣೆಗೇಡಿತನದಿಂದ ನಡೆದುಕೊಂಡಿದೆ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ಪಕ್ಷದ ಕಾರ್ಯಕರ್ತರು, ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳನ್ನು ಅಮಾನತು ಮಾಡುವಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದರೂ ಅದನ್ನು ಲೆಕ್ಕಿಸದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ದುರಂತಕ್ಕೆ ಕಾರಣವಾಗಿದೆ ಎಂದು ದೂರಿದರು. ಸಿಎಂ ಭಾವಚಿತ್ರಕ್ಕೆ ಬೆಂಕಿ: ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ…
ಬಾಗೇಪಲ್ಲಿ: ತಾಲೂಕಿನ ಗೋಳೂರು ವಲಯ ವ್ಯಾಪ್ತಿಗೆ ಬರುವ ನಲ್ಲಪ್ಪ ರೆಡ್ಡಪಲ್ಲಿ ಕಾರ್ಯಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, (ಬಿ ಸಿ) ಟ್ರಸ್ಟ್ ವತಿಯಿಂದ ವಿಶ್ವ ಪರಿಸರ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಗಂಗುಲಪ್ಪ, ಮಾಜಿ ಗ್ರಾ.ಪಂ. ಸದಸ್ಯರಾದ ಚೌಡಪ್ಪ, ವಲಯದ ಮೇಲ್ವಿಚಾರಕರಾದ ಅರುಣ, ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರು ಸೇವಾ ಪ್ರತಿನಿಧಿ ನಾಗಮಣಿ ಶಾಲೆಯ ಮುಖ್ಯ, ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಸರಗೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 12 ವಾರ್ಡ್ನ ನಾಮಧಾರಿ ಸಮುದಾಯದ ಭವನದ ರಸ್ತೆಯ ಬಳಿ ಚರಂಡಿಯಲ್ಲಿ ಕೊಳಚೆ ನೀರು ತುಂಬಿಕೊಂಡು ಹಾಗೂ ಸ್ವಚ್ಛತೆಯಿಲ್ಲದೆ ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ. ಚರಂಡಿಯಲ್ಲಿ ಕೊಳಚೆ ನೀರು ನಿಂತು ಸೊಳ್ಳೆಯ ಉತ್ಪಾದನೆ ಕೇಂದ್ರವಾಗಿ ವಾರ್ಡಿನ ಜನರಿಗೆ ಅನಾರೋಗ್ಯಕ್ಕೆ ತುತ್ತುವಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದರು. 12 ನೇ ವಾರ್ಡ್ ನಾಮಧಾರಿ ಸಮುದಾಯದಲ್ಲಿ ಮದುವೆ ಸಮಾರಂಭ ಮಾಡುವುದರಿಂದ ವಸ್ತುಗಳನ್ನು ಬಿಸಾಕಿ ಹಿಂಬದಿಯ ರಸ್ತೆ ಬದಿಯಲ್ಲಿ ಸಮರ್ಪಕ ಚರಂಡಿಯಿಲ್ಲ ಅಲ್ಲೆ ನೀರು ನಿಂತು ಕೊಂಡುತಿರುಗಾಡಲು ವಾಗುತ್ತಿಲ್ಲ. ಕುಡಿಯುವ ನೀರಿನ ಕೊಳಾಯಿ ಬಳಿ ಬೋಲ್ ವೆಲ್ ಇದ್ದು ಅಲ್ಲಿ ಕೊಳಚೆ ನೀರು ಚರಂಡಿಯಲ್ಲಿ ಸದಾ ನಿಂತಿರುತ್ತದೆ ಎಂದು ಇಲ್ಲಿನ ನಿವಾಸಿಗಳ ಆರೋಪವಾಗಿದೆ. ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಕೊರತೆ ಎದ್ದು ಕಾಣುತ್ತಿದ್ದು, ಚರಂಡಿಗಳ ಅಭಿವೃದ್ಧಿಯಾಗಿಲ್ಲ ಎಂದು ಅಲ್ಲಿನ ಜನರ ಪಟ್ಟಣ ಪಂಚಾಯಿತಿ ಆಡಳಿತದ ಸುಮಾರು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನವಾಗಿಲ್ಲ ಆಡಳಿತ ವಿರುದ್ಧ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ…
ತುಮಕೂರು: ನನ್ನ ಮಗನ ಸಾವಿಗೆ ಕ್ರಿಕೆಟ್ ಮ್ಯಾಚ್ ನಡೆಸಿದವರೆ ಕಾರಣ ಎಂದು ಮೃತ ಮನೋಜ್ ನ ತಾಯಿ ಲಕ್ಷ್ಮಮ್ಮ ಆರೋಪಿಸಿದ್ದಾರೆ. ಯಾರನ್ನು ಮಗ ಅಂತ ಕರೆಯಲಿ ಎಂದು ಮನೋಜ್ ತಾಯಿ ರೋಧಿಸಿದ್ದಾರೆ. ಸ್ನೇಹಿತರು ಕರೆದುಕೊಂಡು ಹೋಗಿ ಕರೆದುಕೊಂಡು ಬಂದಿಲ್ಲ, ಸ್ನೇಹಿತರು ಚೆನ್ನಾಗಿದ್ದಾರೆ ಮಗ ಮೃತಪಟ್ಟಿದ್ದಾನೆ. ಸರಕಾರದ ದುಡ್ಡು ತೆಗೆದುಕೊಂಡು ಏನು ಮಾಡಲಿ, ನನಗೆ ಮಗ ಬೇಕು ಎಂದಿದ್ದಾರೆ. ಮೊಬೈಲ್ ಮರೆತು ಹೋಗಿದ್ದ ವಾಪಸ್ ಬಂದು ತೆಗೆದುಕೊಂಡು ಹೋಗಿದ್ದ ಅದೇ ಕೊನೆಯದಾಗಿತ್ತು ಎಂದಿದ್ದಾರೆ. ಈ ರೀತಿ ಪ್ಲಾನ್ ಮಾಡಬಾರದಿತ್ತು: ಐಪಿಎಲ್ ವಿಜಯೋತ್ಸವದ ಕಾಯಕ್ರಮ ಈ ರೀತಿ ಪ್ಲಾನ್ ಮಾಡಬಾರದಿತ್ತು, ಸರಕಾರ ಬೇಕಾಬಿಟ್ಟಿ ಧೋರಣೆಯಿಂದ ಕಾಯಕ್ರಮ ಮಾಡಿದ್ದರಿಂದ ರಾಜ್ಯದಲ್ಲಿ ೧೧ ಜನ ಮೃತಪಟ್ಟಿದ್ದಾರೆ. ಇದಕ್ಕೆ ನೇರ ಹೊಣೆ ರಾಜ್ಯ ಸರಕಾರವಾಗಿದೆ ಎಂದು ವಿಜಯೋತ್ಸವದ ವೇಳೆ ಮೃತಪಟ್ಟ ಐಪಿಎಲ್ ಅಭಿಮಾನಿ ಮನೋಜ್ ಅವರ ಅಂಕಲ್ ತಿಮ್ಮಪ್ಪ ತಿಳಿಸಿದ್ದಾರೆ. ಮಕ್ಕಳಿಗೆ ವಿದ್ಯಾಬ್ಯಾಸ ಕೊಡಿಸಿ ಮುಂದೆ ಚೆನ್ನಾಗಿರಬಹುದು ಎಂದು ಊರಿಂದ ಊರಿಗೆ ಹೋಗಿ ಕೂಲಿ ಮಾಡಿ ವಿದ್ಯಾಬ್ಯಾಸ ಕೊಡಿಸಿದ್ದಾರೆ.…