Author: admin

ಕೊರಟಗೆರೆ : ತಾಲ್ಲೂಕಿನ ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಲಸಂದ್ರ ಗ್ರಾಮದ ಕೊಳಗದಮ್ಮ ಮತ್ತು ವಡಸಲಮ್ಮ ದೇವಿಯ ದೇವಸ್ಥಾನ ಅಭಿವೃದ್ಧಿಗೆ ಮುಂದಾದ ಭಕ್ತರು, ದೇವಸ್ಥಾನ ನಿರ್ಮಾಣಕ್ಕಾಗಿ 5 ಹಳ್ಳಿ ಗ್ರಾಮಸ್ಥರು ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಿಂದ ಅಗಮಿಸುತ್ತಿದ್ದಾರೆ. ಕೊಳಗದಮ್ಮ ಸೇವಾ ಸಮಿತಿಯ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಸಾವಿರಾರು ವರ್ಷಗಳ ಇತಿಹಾಸವುಳ್ಳ ವಡಸಲಮ್ಮ ದೇವಿಯು ಅತ್ಯಂತ ಶಕ್ತಿಶಾಲಿಯಾಗಿದ್ದು ಬೇಡಿ ಬರುವ ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುತ್ತಾ, ಸಾವಿರಾರು ಭಕ್ತಾದಿಗಳ ನಂಬಿಕೆಗೆ ಪಾತ್ರಳಾಗಿದ್ದಾಳೆ. ಭಕ್ತರ ಸಹಾಯದಿಂದ ದೇವಸ್ಥಾನ ಜೀರ್ಣೋದ್ಧಾರ ಕಾರ್ಯ ಮಾಡಲು ಮುಂದಾಗಿದ್ದು. ದೇವಸ್ಥಾನ ಅಭಿವೃದ್ಧಿಗಾಗಿ ಐದು ಹಳ್ಳಿಯ ಪಣಗಾರರಾದ ರಾಮೇಗೌಡ್ರು ಹಾಗೂ ಕಮಲಮ್ಮನವರ ಕುಟುಂಬದ ಮಕ್ಕಳು ಮೊಮ್ಮಕ್ಕಳು ಇಂದು ಹತ್ತು ಲಕ್ಷದ ಒಂದು ರೂ. ಗಳನ್ನು  ದೇವಾಲಯದ ನಿರ್ಮಾಣಕ್ಕಾಗಿ ದೇಣಿಗೆ ರೂಪದಲ್ಲಿ ಹಣ ನೀಡಿದ್ದಾರೆ, ಮುಂದಿನ ದಿನಗಳಲ್ಲಿ ದೇವಸ್ಥಾನ ಇನ್ನು ಹೆಚ್ಚು ಅಭಿವೃದ್ಧಿಯಾಗಲಿ ಎಂದರು. ನಟ ಅರ್ಜುನ್ ಯೋಗಿ ಮಾತನಾಡಿ, ವಡಸಲಮ್ಮ ದೇವಿಯ ದೇವಾಲಯವು ಈಗಾಗಲೇ ಒಂದು ಹಂತಕ್ಕೆ ತಲುಪಿದ್ದು,  ನಮ್ಮ…

Read More

ತುಮಕೂರು:  ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮನೋಜ್ (19)ಅಂತ್ಯಕ್ರಿಯೆ ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನದ ನಡುವೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಎಡೆಯೂರು ಬಳಿಯ ‌ನಾಗಸಂದ್ರ ಗ್ರಾಮದಲ್ಲಿ ನಡೆಯಿತು. ಮನೋಜ್ ಅವರ ಅಂತ್ಯಕ್ರಿಯೆ ತೋಟದಲ್ಲಿ ನಡೆಯಿತು.  ಅಂತ್ಯಕ್ರಿಯೆ ವೇಳೆ ಮೃತದೇಹದ ಮುಂದೆ ಕುಟುಂಬಸ್ಥರು ಕಣ್ಟಿರಿಟ್ಟರು. ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರದ ರೆಸಿಡೆನ್ಸಿ ಕಾಲೇಜಿನಲ್ಲಿ ಬಿಬಿಎಂ ಮಾಡುತ್ತಿದ್ದ ಮನೋಜ್,  ಯಲಹಂಕದಲ್ಲಿ ತಂದೆ ತಾಯಿ ಹಾಗೂ ತಂಗಿ ಜೊತೆ ವಾಸವಿದ್ದನು. ನಿನ್ನೆ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ಮನೋಜ್, ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದನು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೀದರ್ : ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲ್ಲೂಕಿನ ಗೋಕುಳ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತುಕಾರಾಮ್ ವಗ್ಗೆ (26) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಿಗ್ಗೆ ಯುವಕನು ಆತ್ಮಹತ್ಯೆಗೆ ಮಾಡಿಕೊಂಡಿದ್ದು, ಈ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೀದರ್ : ಕರ್ನಾಟಕದಲ್ಲಿ ಕೋವಿಡ್–19 ಪ್ರಕರಣಗಳು ಕ್ರಮೇಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರೋಗ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಮೇಲ್ವಿಚಾರಣೆ ಮತ್ತು ನಿರ್ವಹಣೆಯನ್ನು ಮುಂದುವರೆಸಿದ್ದು, ಸಾರ್ವಜನಿಕರು ಭಯಭೀತರಾಗದೆ, ಜಾಗರೂಕರಾಗಿದ್ದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ಬದೋಲೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರು ಭಯಭೀತರಾಗದಂತೆ ಕೆಲಸ ನಿರ್ವಹಿಸುತ್ತಿದೆ. ಯಾವುದೇ ಹೊಸ ರೂಪಾಂತರಗಳು ಅಥವಾ ಸಂಭಾವ್ಯಉಲ್ಬಣ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಂತ್ರಿಸಲು ಸಾರ್ವಜನಿಕರ ನಿರಂತರ ಸಹಕಾರವೂ ಅತ್ಯಗತ್ಯವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಸಾರ್ವಜನಿಕರಿಗೆ ಸಲಹೆಗಳು : ಜಾಗರೂಕರಾಗಿರಿ, ಆತಂಕಪಡಬೇಡಿ, ಅಧಿಕೃತ ಮೂಲಗಳ ಮೂಲಕ ಮಾಹಿತಿ ಪಡೆಯಬೇಕು. ಆರೋಗ್ಯ ಸಿಬ್ಬಂದಿಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು. ಅಗತ್ಯ ಅನುಸರಣೆಗಾಗಿ ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಆರೋಗ್ಯ ಅಧಿಕಾರಿಗಳಿಗೆ ತಿಳಿಸಬೇಕು. ಜನದಟ್ಟಣೆಯ ಸ್ಥಳಗಳಲ್ಲಿ ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ ಜ್ವರ, ಕೆಮ್ಮು, ಎದೆನೋವು…

Read More

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್’ಪಿವರೆಗೆ ಉಚಿತ ವಿದ್ಯುತ್ ಸರಬರಾಜು ಮಾಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆಜೆ.ಜಾರ್ಜ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಸೆಸ್ಕ್ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೃಷಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡುತ್ತಿರುವುದರಿಂದ ಅವುಗಳಿಗೆ ಉಚಿತ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂಬ ಊಹಾಪೋಹಗಳು ಹಬ್ಬುತ್ತಿವೆ. ರೈತರಿಗೆ ಎಷ್ಟು ವಿದ್ಯುತ್ ಪೂರೈಸಲಾಗುತ್ತಿದೆ ಮತ್ತು ಎಷ್ಟು ಸಂಪರ್ಕಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಕೃಷಿ ಪಂಪ್ ಸೆಟ್ ಗಳಿಗೆ 10 ಹೆಚ್’ಪಿ ವರೆಗೆ ಉಚಿತ ವಿದ್ಯುತ್ ಮುಂದುವರೆಯುವುದರ ಜೊತೆಗೆ 7 ಗಂಟೆ ಸಮರ್ಪಕ ವಿದ್ಯುತ್ ಕೂಡ ಪೂರೈಕೆಯಾಗಲಿದೆ. ಇದರಲ್ಲಿ ಅನುಮಾನ ಬೇಡ. ಮುಖ್ಯಮಂತ್ರಿಗಳು ಇತ್ತೀಚೆಗೆ ಹಾಡಿಗಳಿಗೆ ಭೇಟಿ ನೀಡಿದ ಬಳಿಕ ಅವುಗಳಿಗೆ ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಂಡಿದ್ದು, ಅಗತ್ಯ ಮೂಲಸೌಕರ್ಯ ನಿರ್ಮಿಸಲಾಗಿದೆ. 600 ಹೆಚ್ಚು ಹಾಡಿ…

Read More

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಇಂದು ಗುರುವಾರ ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಘಟನೆ ಬಗ್ಗೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಕೇಸು ದಾಖಲಿಸಿಕೊಂಡಿದ್ದು, ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳ ಸಮ್ಮುಖದಲ್ಲಿ ವಿಚಾರಣೆ ನಡೆಯಲಿದ್ದು, ಸರ್ಕಾರ ಸಂಪೂರ್ಣ ವಿವರ ನೀಡಬೇಕಿದೆ. ನಿನ್ನೆ ವಿಧಾನ ಸೌಧ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮ ನಡೆಯುವಾಗ ಹೈಕೋರ್ಟ್ ಕಟ್ಟಡದ ಮೇಲೆಯೂ ಜನರು ಏರಿ ವೀಕ್ಷಿಸುತ್ತಿದ್ದರು. ಈ ಸಂದರ್ಭದ ಫೋಟೋ –ವಿಡಿಯೊಗಳು ಸಾಕಷ್ಟು ಹರಿದಾಡಿದ್ದು ಭದ್ರತಾ ಲೋಪವಾಗಿದ್ದು ಸರ್ಕಾರದಿಂದ ಹೈಕೋರ್ಟ್ ವಿವರ ಕೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ (IPL) ಟ್ರೋಪಿ ಎತ್ತಿಹಿಡಿದ ಸಂಭ್ರಮವನ್ನು ಬೆಂಗಳೂರಿನಲ್ಲಿ ನಿನ್ನೆ ಆಚರಿಸಲಾಗಿದ್ದು, ಈ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿ, 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ ಹೀಗಿದೆ: ಭೂಮಿಕ್, 20 ವರ್ಷ (ನೆಲಮಂಗಲ) ಸಹನ 19 ವರ್ಷ (ಕೋಲಾರ) ಪೂರ್ಣಚಂದ, 32 ವರ್ಷ (ಮಂಡ್ಯ) ಚಿನ್ಮಯಿ, 19 ವರ್ಷ ದಿವ್ಯಾಂಶಿ, 13 ವರ್ಷ ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ) ದೇವಿ, 29 ವರ್ಷ ಶಿವಲಿಂಗ್, 17 ವರ್ಷ ಮನೋಜ್, 33 ವರ್ಷ (ತುಮಕೂರು) ಅಕ್ಷತಾ, (ಮಂಗಳೂರು) ಮತ್ತೊಬ್ಬರ ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ ಮೃತರ ಪೈಕಿ ಶ್ರವಣ್, ಭೂಮಿಕ್, ಮನೋಜ್, ಚಿನ್ಮಯಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ಮಧ್ಯರಾತ್ರಿಯೇ ಪೋಷಕರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಮರಣೋತ್ತರ ಪರೀಕ್ಷೆ ಇಂದು ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟವು ಸ್ವಾರ್ಥಕ್ಕಾಗಿ ನಡೆದಿಲ್ಲ ಬದಲಾಗಿ ರೈತರ ನೀರಿಗಾಗಿ ಹೋರಾಟ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯದರು ಧರಣಿ ನಡೆಸುತ್ತಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೋರಾಟ ಮಾಡಿದ್ದೇವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು. ಆದರೆ ಈ ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಅಂದು ಶಾಂತ ರೀತಿಯಿಂದ ಹೋರಾಟ ಮಾಡಿದ್ದೆವು ಎಂದು ಹೇಳಿದ್ದಾರೆ. ಯಾವುದೇ ಸರ್ಕಾರಿ ಆಸ್ತಿಪಾಸ್ತಿ ನಾಶಪಡಿಸಿಲ್ಲ. ಆದರೂ ರೈತರನ್ನು ಹಾಗೂ ಚಳುವಳಿಯನ್ನು ಹತ್ತಿಕ್ಕಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಮ್ಮ ಹಕ್ಕನ್ನು ಹಾಗೂ ಹೋರಾಟವನ್ನು ದಮನ ಮಾಡಬೇಕೆಂಬ ಉದ್ದೇಶವನ್ನು ಹೊಂದಿದ್ದಾರೆ. ರಾಮನಗರಕ್ಕೆ ಅವೈಜ್ಞಾನಿಕವಾಗಿ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗುತ್ತಿರುವುದಕ್ಕೆ…

Read More

ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಹೋರಾಟಗಾರರನ್ನು ಬಂಧಿಸಬಾರದು, ಅಲ್ಲದೆ ಈಗಾಗಲೇ ಸ್ವಾಮೀಜಿಗಳ ಮೇಲೆ ದಾಖಲಾಗಿರುವ FIR ಅನ್ನು ವಾಪಸ್ ಪಡೆಯಬೇಕು ಈ ಕುರಿತಂತೆ ಸರ್ಕಾರದೊಂದಿಗೆ ಮಾತನಾಡುವುದಾಗಿ ಕೇಂದ್ರ ವಲಯ ಐಜಿಪಿ ಲಾಬು ರಾಮ್ ಭರವಸೆ ನೀಡಿದ್ದಾರೆ ಎಂದು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದ್ದಾರೆ. ಅಲ್ಲದೆ ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ನಡೆಸಲಾಗುತ್ತಿರುವ ಧರಣಿಯನ್ನು ಮುಂದೂಡಿದ್ದೇವೆ ಎಂದು ತಿಳಿಸಿದ್ದಾರೆ.ಧರಣಿಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————

Read More

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕಚೇರಿಗೆ ಬಿಜೆಪಿ ಮುಖಂಡರು ಹಾಗೂ ಹೋರಾಟಗಾರರು ಮುತ್ತಿಗೆ ಹಾಕಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ತುಮಕೂರು ನಗರದ ಬಿಎಚ್ ರಸ್ತೆಯಲ್ಲಿ ಸಂಪೂರ್ಣ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲು 10 ಮಂದಿ ಹೋರಾಟಗಾರರು ಅದರಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಅವರುಗಳು ಆಗಮಿಸಿದರು. ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ದಾಖಲಿಸಲಾಗಿರುವ ಎಫ್ ಫೈಯರ್ ಗಳನ್ನು ವೃದ್ಧಿಪಡಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ದಿಢೀರ್ ಧರಣಿ ನಡೆಸಲು ಆರಂಭಿಸಿದರು. ಸ್ಥಳಕ್ಕೆ ಕೇಂದ್ರ ವಲಯ ಐಜಿಪಿ ಲಾಬುರಾಮ್ ಅವರು ಭೇಟಿ ನೀಡಿ ಧರಣಿ ನಿರತರ ಮನವೊಲಿಸಿದರು. ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ…

Read More