Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಕೂಡಲೇ ಕಸದ ರಾಶಿಯನ್ನು ತೆರವುಗೊಳಿಸಬೇಕೆಂದು ಸ್ಥಳದಲ್ಲಿದ್ದ ಪಾಲಿಕೆ ಇಂಜಿನಿಯರ್ ಪೂರ್ಣಿಮಾ ಅವರಿಗೆ ಸೂಚನೆ ನೀಡಿದರು. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಶುಕ್ರವಾರ ಬೆಳ್ಳಂಬೆಳಗ್ಗೆಯೇ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದಾಗ ವಾಹನ ನಿಲುಗಡೆ ಮಾಡುವ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡು, ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಲು ಅವಕಾಶ ಮಾಡಿಕೊಡಬೇಕೇ ಹೊರತು ಕಸ ಹಾಕಲು ಬಳಸಬಾರದು. ಇದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗುತ್ತದೆ. ಹೂವು—ಹಣ್ಣು–ತರಕಾರಿ ತ್ಯಾಜ್ಯ ಕೊಳೆತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಮಾರುಕಟ್ಟೆ ಆವರಣದಲ್ಲಿ ಸಮರ್ಪಕವಾಗಿ ಸ್ವಚ್ಛತೆ ನಿರ್ವಹಣೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಂಗಡಿ ಮಾಲೀಕರು, ಅಧಿಕಾರಿಗಳಿಗೆ ತರಾಟೆ: ನಗರದ ಡಿ.ದೇವರಾಜು ಅರಸು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ನಿಲ್ದಾಣದ ಆವರಣದಲ್ಲಿರುವ ಎಸ್ ಎಂಎಲ್ ಕಾಂಡಿಮೆಂಟ್ಸ್…
ತುಮಕೂರು: ಗುಬ್ಬಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ತಾಲ್ಲೂಕು ಯೋಜನಾ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು ಸೇವಾನುಭವದ ಆಧಾರದಲ್ಲಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆಯಾದವರಿಗೆ ಮಾಸಿಕ 20,000 ರೂ.ಗಳ ಗೌರವಧನ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 11ರೊಳಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಇವರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಪದವೀಧರರಾಗಿದ್ದು, ತಂತ್ರಜ್ಞಾನ ಮತ್ತು ತಂತ್ರಾಶದಲ್ಲಿ ಕನಿಷ್ಟ 2 ವರ್ಷಗಳ ಸೇವಾನುಭವ, ಸ್ಥಳೀಯ ಭಾಷೆಯಲ್ಲಿ ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ನವೆಂಬರ್ 20ರಂದು ಸಂಜೆ 5:30 ಗಂಟೆಗೆ 40ನೇ ವರ್ಷದ ಲಕ್ಷದೀಪೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ. ಈ ಸಮಾರಂಭಕ್ಕೆ ಸ್ವಾಮೀಜಿಗಳು, ಗಣ್ಯ ವ್ಯಕ್ತಿಗಳು ಆಗಮಿಸಲಿದ್ದು, ಲಕ್ಷದೀಪೋತ್ಸವ ವಿಶೇಷ ಸೇವೆಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕೆಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜಿ.ಪುರುಷೋತ್ತಮ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ತೆಂಗು ಬೆಳೆಯಲ್ಲಿ ಕೆಂಪು ಮೂತಿ ಹುಳು ಮತ್ತು ಅಣಬೆ ರೋಗ ಬಾಧೆಯು ಹೆಚ್ಚಾಗುತ್ತಿರುವುದರಿಂದ ಸಮಗ್ರವಾಗಿ ಹತೋಟಿ ಮಾಡುವ ಕ್ರಮಗಳ ಕುರಿತು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಲಹೆ ನೀಡಲಾಗಿದೆ. ಕೆಂಪು ಮೂತಿ ಹುಳು: ಕೀಟ ಬಾಧೆಯ ಲಕ್ಷಣ ಹಾಗೂ ನಿರ್ವಹಣೆ ಈ ಕೀಟವನ್ನು ವೈಜ್ಞಾನಿಕವಾಗಿ ರಿಂಕೋಫೋರಸ್ ಫೆರುಜೀನಿಯಸ್ ಎಂದು ಗುರುತಿಸಲಾಗಿದ್ದು, ಈ ಕೀಟವು ತನ್ನ ಜೀವನ ಚಿತ್ರವನ್ನು ಪೂರ್ಣಗೊಳಿಸಲು ತೆಂಗಿನ ಮರವನ್ನು ಅವಲಂಬಿಸುವುದರಿಂದ ಎಲ್ಲಾ ಹಂತದಲ್ಲೂ ತೆಂಗಿಗೆ ಹಾನಿ ಉಂಟು ಮಾಡುತ್ತದೆ. ಈ ಕೆಂಪು ಮೂತಿ ಹುಳುಗಳು ತೆಂಗಿನ ಮರದ ಕಾಂಡದೊಳಗೆ ಸೇರಿಕೊಂಡು ಮೃಧು ಭಾಗಗಳನ್ನು ಕೊರೆಯುವುದರಿಂದ ಪ್ರಾರಂಭದಲ್ಲಿ ಸಣ್ಣ–ಸಣ್ಣ ರಂಧ್ರಗಳು ಕಾಣಿಸಿಕೊಳ್ಳುತ್ತವೆ. ಕೀಟ ಬಾಧೆಗೆ ಒಳಗಾದ ರಂಧ್ರಗಳಿಂದ ಕಂದು ಬಣ್ಣದ ರಸ ಸೋರಿರುವುದು ಹಾಗೂ ಹುಳುಗಳು ತಿಂದು ಹಾಕಿದ ನಾರು ಹೊರಬಂದಿರುವುದನ್ನು ಕಾಣಬಹುದು. ಕೀಟ ಬಾಧೆಯು ತೀವ್ರವಾದಾಗ ಸುಳಿ ಗರಿಗಳು ಒಣಗಿ, ಹಾನಿಗೊಳಗಾದ ಭಾಗಗಳ ಹತ್ತಿರ ಎಲೆಯ ತೊಟ್ಟು ಎಡಮಟ್ಟೆಗಳು ಸೀಳುತ್ತವೆ. ಕೆಂಪು ಮೂತಿ ಹುಳುವಿನ…
ವರದಿ: ಮಂಜುಸ್ವಾಮಿ ಎಂ.ಎನ್. ತುಮಕೂರು : ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿಗಳಾದ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಪರಿಸರವಾದಿಯಾಗಿದ್ದು. ಮಕ್ಕಳಿಲ್ಲದ ಕೊರಗನ್ನು ಬಿಟ್ಟು ಮರಗಳನ್ನೇ ತಮ್ಮ ಮಕ್ಕಳೆಂದು ತೀರ್ಮಾನಿಸಿ ತನ್ನ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋ ಮೀಟರ್ ಹೆದ್ದಾರಿಯ ಉದ್ದಕ್ಕೂ ಸುಮಾರು 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಅನಕ್ಷರಸ್ಥೆಯಾಗಿದ್ದರೂ ತಮ್ಮ ತಾಯಿಪ್ರೇಮವನ್ನು ಈ ಸಸಿಗಳ ಮೇಲೆ ತೋರಿಸಿ, ಅವುಗಳನ್ನು ಮಕ್ಕಳಂತೆ ಬೆಳೆಸಿದ್ದರು. ಇವರ ಕಾರ್ಯವನ್ನು ಗುರುತಿಸಿ ಭಾರತ ಸರ್ಕಾರವು 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ. “ವೃಕ್ಷಮಾತೆ ತಿಮ್ಮಕ್ಕ”ನ ಪರಿಚಯ ಸಾಲು ಮರದ ತಿಮ್ಮಕ್ಕನವರು ಕರ್ನಾಟಕದ ತುಮಕೂರು…
ಸರಗೂರು: ಕನ್ನಡ ನಮ್ಮ ನಾಡಿನ ಹೆಮ್ಮೆಯ ಭಾಷೆ ಈ ಭಾಷೆ ಹಲವಾರು ಭಾಷೆಗಳಿಗೆ ತಾಯಿಯಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಹಾಗೂ ಕಸಾಪ ನಿಕಟಪೂರ್ವ ಅಧ್ಯಕ್ಷ ವೈ.ಡಿ.ರಾಜಣ್ಣ ಹೇಳಿದರು. ಪಟ್ಟಣದ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಎಂ.ಎಂ.ಕೆ. ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ 70 ನೇ ಕನ್ನಡ ರಾಜ್ಯೋತ್ಸವವನ್ನು ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಮಾತನಾಡಿದರು. ತನು ಕನ್ನಡ, ನುಡಿ ಕನ್ನಡ, ಮನ ಕನ್ನಡ ಕನ್ನಡ ನಮ್ಮ ಉಸಿರಾಗಿರಲಿ ಅದನ್ನು ಎಲ್ಲರೂ ಉಳಿಸಿ ಬೆಳೆಸೋಣವೆಂದು ಹೇಳಿದರು. ಸಮಾಜ ಸೇವಕಿ ಸುಧಾ ಮೃತ್ಯುಂಜಯಪ್ಪ ಮಾತನಾಡಿ, ‘ನಮ್ಮ ಜೀವನದಲ್ಲಿ ನಮ್ಮ ಆಚಾರ ವಿಚಾರಗಳು, ನಾವು ನಡೆದುಕೊಳ್ಳುವ ರೀತಿ ಮುಖ್ಯವಾಗುತ್ತದೆ. ಏನಾದರೂ ಆಗು ಆದರೆ ಅದಕ್ಕೆ ಮೊದಲು ನೀ ಮಾನವನಾಗು ಎಂಬಂತೆ ಮೊದಲು ನಾವು ಮನುಷ್ಯತ್ವವನ್ನು ಬೆಳೆಸಿಕೊಳ್ಳಬೇಕು ಎಂದರು. ಕೆ.ಎಚ್.ರಾಮಯ್ಯ ವಿದ್ಯಾರ್ಥಿನಿಲಯ ಧರ್ಮದರ್ಶಿ ಕೆ.ಟಿ.ಕೃಷ್ಣಪ್ಪ, ಮಾತನಾಡಿ ಇಂದು ನಾವು ನಮ್ಮ ‘ಕರುನಾಡು’, ‘ಕನ್ನಡಾಂಭೆಯ ನಾಡು’ ಆದ ಕರ್ನಾಟಕದ…
ಶಿರಾ: ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಗುರುವಾರ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ನಡೆದ ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದೇಶದ ಏಕತೆಗಾಗಿ ಪಟೇಲ್ ಅವರು ತೆಗೆದುಕೊಂಡ ದೃಢನಿರ್ಧಾರಗಳಿಂದ ದೇಶ ಇಂದು ಸದೃಢವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಹಾಗೂ ಮಧುಗಿರಿ ಸಂಘಟನಾತ್ಮಕ ಬಿಜೆಪಿ ಘಟಕದ ಅಧ್ಯಕ್ಷ ಚಿದಾನಂದ್ ಎಂ.ಗೌಡ ಮಾತನಾಡಿ, ಒಂದೇ ಭಾರತ– ಆತ್ಮನಿರ್ಭರ ಭಾರತ ಘೋಷವಾಕ್ಯದಡಿಯಲ್ಲಿ ನಗರದಲ್ಲಿ ಏಕತಾ ನಡಿಗೆ ನಡೆಸಲಾಗುತ್ತಿದೆ. ದೇಶದ ಸಂಘಟನೆಯ ದೃಷ್ಟಿಯಿಂದ ಪ್ರತಿಯೊಬ್ಬರು ಏಕತಾ ನಡಿಗೆಯಲ್ಲಿ ಭಾಗವಹಿಸಬೇಕು ಎಂದರು. ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ದಿಶಾ ಸಮಿತಿ ಸದಸ್ಯ ಮದಲೂರು ನರಸಿಂಹಮೂರ್ತಿ, ಮಹಿಳಾ ಮೋರ್ಚಾ ಬಿಜೆಪಿ ಜಿಲ್ಲಾಧ್ಯಕ್ಷೆ ಉಮಾ ವಿಜಯರಾಜ್, ಒಬಿಸಿ ಮೋರ್ಚಾ ಅಧ್ಯಕ್ಷ ಮಾಗೋಡ್ ಪ್ರತಾಪ್, ನಗರಸಭೆ ಸದಸ್ಯ ರಂಗರಾಜು, ತಾ.ಪಂ ಮಾಜಿ ಸದಸ್ಯ ಚಿಕ್ಕಣ್ಣ, ಬರಗೂರು ಶಿವಕುಮಾರ್, ಈರಣ್ಣ…
ತುಮಕೂರು: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅನುಮೋದನೆ ನೀಡಿದ್ದಾರೆ. ಕೊಳವೆ ಬಾವಿಗಳನ್ನು ಕೊರೆಸಿದ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ನಡೆಸಿದರು. ಸಾರ್ವಜನಿಕರಿಗೆ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿಗಳ ನೀರಿನ ಗುಣಮಟ್ಟ ಕಾಪಾಡಲು ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ಮಾಡಿಸಬೇಕು. ಕುಡಿಯುವ ನೀರು ಸುರಕ್ಷಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ವರದಿ ನೀಡುವಂತೆ ಸೂಚನೆ ನೀಡಿದರು. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡುತ್ತಿರುವ ಕೊಳವೆ ಬಾವಿಗಳಿಗೆ ಕಡ್ಡಾಯವಾಗಿ ಕ್ಲೋರಿನೇಷನ್ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ, ಸುರಕ್ಷಿತ ಕುಡಿಯುವ ನೀರು ಒದಗಿಸಬೇಕು ಎಂದರು. ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ 6 ತಿಂಗಳಾದರೂ ಕಾಮಗಾರಿ…
ತಿಪಟೂರು: ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಎಂಬಿಎ ವಿಭಾಗದಿಂದ 2025–26ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. ತುಮಕೂರು ಇನೊವೇಷನ್, ಇಂಕ್ಯೂಬೇಶನ್ ಹಾಗೂ ಎಂಟಪ್ರೆನರ್ಷಿಪ್ ಕೌನ್ಸಿಲ್ ಸಿಇಒ ಸತೀಶ್ ಎಂ.ಭಾವನ್ನ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾರ್ಹತೆ ಹಾಗೂ ನಾಯಕತ್ವ ಕೌಶಲ ಮುಖ್ಯ. ಅಂಕಗಳಿಕೆಗೆ ಸೀಮಿತವಾಗದೆ, ನೈತಿಕ ಮೌಲ್ಯ ಮತ್ತು ಪ್ರಾಯೋಗಿಕ ಜ್ಞಾನದಲ್ಲೂ ಮುಂದುವರಿಯಬೇಕು ಎಂದು ಸಲಹೆ ನೀಡಿದರು. ಸಂಸ್ಥೆ ಖಜಾಂಚಿ ಟಿ.ಎಸ್.ಶಿವಪ್ರಸಾದ್ ಮಾತನಾಡಿ, ಸಂಸ್ಥೆಯಲ್ಲಿ ಒದಗಿಸಿರುವ ಆಧುನಿಕ ಸೌಕರ್ಯ, ತರಬೇತಿ ಕೋರ್ಸ್‌ಗಳು ಮತ್ತು ಇಂಕ್ಯೂಬೇಶನ್ ಲ್ಯಾಬ್‌ಗಳು ಇಂದಿನ ತಂತ್ರಜ್ಞಾನಾಧಾರಿತ ಶಿಕ್ಷಣದ ಅಗತ್ಯತೆಗಳನ್ನು ಪೂರೈಸುವಂತೆ ಸಂಸ್ಥೆ ನಿರಂತರವಾಗಿ ಮುಂದುವರಿಯುತ್ತಿದೆ ಎಂದರು. ಸಂಸ್ಥೆ ಅಧ್ಯಕ್ಷ ಪಿ.ಕೆ.ತಿಪ್ಪೇರುದ್ರಪ್ಪ ಮಾತನಾಡಿ, ಸಂಸ್ಥೆ ಗುಣಮಟ್ಟದ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳಿಗೆ ಸಮನ್ವಯ ಸಾಧಿಸುತ್ತಿದೆ. ನಿಮ್ಮೆಲ್ಲರ ಯಶಸ್ಸೇ ಸಂಸ್ಥೆಯ ಸಾಧನೆ ಎಂದರು. ಕಲ್ಪತರು ವಿದ್ಯಾಸಂಸ್ಥೆ ಉಪಾಧ್ಯಕ್ಷ ಬಿ.ಎಸ್.ಉಮೇಶ್, ಬಾಗೇಪಲ್ಲಿ ನಟರಾಜ್, ಟಿ.ಎಸ್.ಬಸವರಾಜು, ಜಿ.ಪಿ.ದೀಪಕ್, ಕಾರ್ಯದರ್ಶಿ ಜಿ.ಎಸ್.ಉಮಾಶಂಕರ್, ಎಂ.ಆ.ಸಂಗಮೇಶ್, ಎಚ್.ಜಿ.ಸುಧಾಕರ್, ಟಿ.ಯು.ಜಗದೀಶಮೂರ್ತಿ ಪ್ರಾಂಶುಪಾಲ ಎಚ್.ಸಿ.ಸತೀಶ್ ಕುಮಾರ್, ಮಿಟ್ಟಾ ಶೇಖರ್…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆಯಲ್ಲಿ ಮೂರು ತಲೆಮಾರುಗಳಿಂದ ವಾಸವಾಗಿರುವ ನೂರಾರು ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸದಿದ್ದರೆ ನವೆಂಬರ್ 17ರಿಂದ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಎಚ್.ಆರ್. ಬೋಜರಾಜು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೆಟ್ಟಿಕೆರೆಯಲ್ಲಿ 2 ಎಕರೆ 28 ಗುಂಟೆ ಜಾಗದಲ್ಲಿ ಮೂವತ್ತು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಬಹುತೇಕ ಬಡವರಿಗೆ ಹಕ್ಕುಪತ್ರ ದೊರೆತಿಲ್ಲ. ಕೇವಲ ಮೂರ್ನಾಲ್ಕು ಕುಟುಂಬಗಳಿಗೆ ಮಾತ್ರ ನೀಡಲಾಗಿದೆ. ಆರು ತಿಂಗಳ ಹಿಂದೆಯೇ ಮುಖ್ಯಮಂತ್ರಿಗೆ ಪತ್ರ ಬರೆದು ಗಮನಕ್ಕೆ ತಂದಿದ್ದೇವೆ ಎಂದರು. ಶಾಸಕ ಸಿ.ಬಿ. ಸುರೇಶ್‌ಬಾಬು ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಸದರಿ ಜಾಗದಲ್ಲಿ ಗುಂಡುತೋಪು ಎಂದು ನಮೂದಾಗಿರುವುದನ್ನು ರದ್ದುಪಡಿಸಿ, ಸರ್ವೆ ನಡೆಸಿದ ಬಳಿಕ ಕಾರ್ಯನಿರ್ವಹಣಾಧಿಕಾರಿಗೆ ಹಸ್ತಾಂತರಿಸಿ ಹಕ್ಕುಪತ್ರ ವಿತರಿಸುವಂತೆ ನಿರ್ದೇಶಿಸಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇದು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅವರು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜಶೇಖರ್, ಮುರಳಿ, ರಾಜಶೇಖರಯ್ಯ, ಆನಂದಪ್ಪ, ನಿಂಗಪ್ಪ, ಚಂದ್ರಯ್ಯ, ರಂಗಮ್ಮ, ರಮ್ಯಾ ಉಪಸ್ಥಿತರಿದ್ದರು. ನಮ್ಮತುಮಕೂರಿನ…