Author: admin

ಕೊರಟಗೆರೆ : ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆ ಮಹಿಳೆಯ ಕೈ ಕಾಲು ಕಟ್ಟಿಹಾಕಿ ಬಾಯಿಗೆ ಕವಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ವೃದ್ದೆಯ ಮೈ ಮೇಲೆ ಇದ್ದ 80 ಸಾವಿರ ಮೌಲ್ಯದ ಚಿನ್ನಭರಣ ದೋಚಿ ಪರಾರಿ ಆಗಿರುವ ಘಟನೆ ಮಂಗಳವಾರ ರಾತ್ರಿ ಜರುಗಿದೆ. ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರುಂಕೋಟೆ ಗ್ರಾಪಂ ವ್ಯಾಪ್ತಿಯ ದಾಸಾಲುಕುಂಟೆ ಗ್ರಾಮದ ವೃದ್ದೆ ರತ್ನಮ್ಮ(65) ಕೊಲೆಯಾದ ದುರ್ದೈವಿ. ತನ್ನ ಅಡಿಕೆ ತೋಟದಿಂದ ಮನೆಗೆ ಬರುತ್ತಿದ್ದ ವೇಳೆ ಹಣದ ಆಸೆಯಿಂದ ವೃದ್ದೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ವೃದ್ದೆ ಮಹಿಳೆಯ ಸೊಸೆ ಇಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿ ನೀಡಿದ ದೂರಿನ ಅನ್ವಯ ಸ್ಥಳಕ್ಕೆ ಸಿಪಿಐ ಪುರುಷೋತ್ತಮ, ಪಿಎಸೈ ತಿರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ಸಂಕೇನಹಳ್ಳಿ ಕುಬೇರ ಗಣಪತಿ ದೇವಾಲಯದ ಸಮುದಾಯ ಭವನದ ಕಟ್ಟಡ ಕಾಮಗಾರಿಗೆ ಇತ್ತೀಚಿಗೆ ಕೋಳಾಲ ಜಿಪಂ ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ 5 ಲಕ್ಷ ರೂ. ಧನ ಸಹಾಯ ದೇವಾಲಯದ ನಿರ್ದೇಶಕರಿಗೆ ಹಸ್ತಾಂತರಿಸಿದರು. ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಸಂಕೇನಹಳ್ಳಿ ಗ್ರಾಮದ ಶ್ರೀ ಕುಬೇರ ಗಣಪತಿ ದೇವಾಲಯ ಸಮುದಾಯ ಭವನದ ಕಟ್ಟಡ ಕಾರ್ಮಕ್ರಮದ ವೇಳೆ ಪಿ.ಎನ್.ಕೃಷ್ಣಮೂರ್ತಿ ದಂಪತಿಗಳು ಭೇಟಿ ನೀಡಿ ಧನ ಸಹಾಯ ನೀಡಿ ಉದ್ಘಾಟನೆಗೆ ಮತ್ತಷ್ಟು ಸಹಾಯಹಸ್ತ ನೀಡುವ ಭರವಸೆ ನೀಡಿದರು. ಕೋಳಾಲ ಜಿಪಂ ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿ ಹೋಬಳಿಗೊಂದು ಸಮುದಾಯ ಭವನ ಕಟ್ಟಿಸುವ ಜವಾಬ್ದಾರಿ ನನ್ನದು. ಈಗ ಮಾವತ್ತೂರು ಅರಶೇಶ್ವರಿ ಸಮುದಾಯ ಭವನವೇ ಇದಕ್ಕೆ ಸಾಕ್ಷಿ. ದೇವಾಲಯಗಳ ಜೀರ್ಣೋದ್ದಾರದಿಂದ ಗ್ರಾಮಗಳಲ್ಲಿ ಶಾಂತಿ ನೆಲೆಸಲಿದೆ ಎಂದು ಹೇಳಿದರು. ಬೆಂಗಳೂರಿನ ಚಂದ್ರಕಲಾ ಕೃಷ್ಣಮೂರ್ತಿ ಮಾತನಾಡಿ, ಹಳ್ಳಿಗೊಂದು ದೇವಾಲಯ ಇದ್ದರೇ ಶಾಂತಿ–ನೆಮ್ಮದಿ ತಾನಾಗಿಯೇ ನೆಲೆಸುತ್ತೆ. ಪಿ.ಎನ್.ಕೃಷ್ಣಮೂರ್ತಿ ಅವರು 5 ವರ್ಷ ಕೋಳಾಲ ಜಿಪಂ…

Read More

ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2 ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರೈತರಿಂದ ವಿವಿಧ ಕಂದಾಯ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು. ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಂದಾಯ ಇಲಾಖೆಯ ಸೇವೆಗಳ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು. ಸಿದ್ದಾಪುರ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಕಂದಾಯ ಸೌಲಭ್ಯಗಳ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರ್ ಆರ್ ಟಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ದೂರುಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಧುಗಿರಿ ಪಟ್ಟಣದ ಸರ್ಕಾರಿ ಪಿ ಎಂ ಶ್ರೀ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಠ್ಯ ಪುಸ್ತಕಗಳ ಲಭ್ಯತೆ…

Read More

ತುಮಕೂರು : 2026ರ ನೀಟ್ ಮರು ಪರೀಕ್ಷೆಯನ್ನು ಜೂನ್ 21ರಂದು ತುಮಕೂರು ಜಿಲ್ಲೆಯ ವಿವಿಧ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನೀಟ್ ಪರೀಕ್ಷೆಯು ರಾಷ್ಟ್ರ ಮಟ್ಟದಲ್ಲಿ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ರೀತಿಯ ನಿರ್ಲಕ್ಷ ಅಥವಾ ಲೋಪಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು. ಪ್ರಶ್ನೆ ಪತ್ರಿಕೆಗಳನ್ನು ಏರ್ ಫೋರ್ಸ್ ಭದ್ರತೆಯಲ್ಲಿ ತರಲಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಶ್ನೆಪತ್ರಿಕೆ ಸೋರಿಕೆ ಮುಂತಾದ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಟೆಲಿಗ್ರಾಂ ಸೇರಿದಂತೆ ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆಯ ಮೇಲೂ ನಿಯಂತ್ರಣ ಹೇರಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ದಿನದಂದು ಎಲ್ಲಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ಕಡ್ಡಾಯವಾಗಿ…

Read More

ತುಮಕೂರು: ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹಿಸಿ, ಗ್ರಾಮಸ್ಥರು ಹಾಗೂ ಪೋಷಕರು AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಮೇಲ್ವಿಚಾರಕರ ಮೂಲಕ ಡಿಡಿಪಿಐಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಮಾತನಾಡಿ, ರಾಜ್ಯ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿರುವಂತೆ  ಜೂನ್ ನಿಂದಲೇ ಹೊಸ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗಿದೆ. ಈ ಶಾಲೆಗಳ 3ರಿಂದ 5 ಕಿ.ಮೀ. ವ್ಯಾಪ್ತಿಯ ಶಾಲೆಗಳನ್ನು ವಿಲೀನಗೊಳಿಸಲಾಗುವುದೆಂದು 15 ಅಕ್ಟೋಬರ್ 2025ರ ಆದೇಶವು ತಿಳಿಸುತ್ತದೆ. ಈ ಕುರಿತು ಪಟ್ಟಿ ಕೂಡ ದೊರೆತಿದೆ. ನಮ್ಮೂರ ಶಾಲೆ ಉಳಿಯಬೇಕು ಮತ್ತು ಕೆಪಿಎಸ್ ಯೋಜನೆ ರದ್ದಾಗಬೇಕೆಂದು ಆಗ್ರಹಿಸಿ ಎಐಡಿಎಸ್ ಓ ನೇತೃತ್ವದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ರಚಿಸಿಕೊಂಡು ಕಳೆದ 5 ತಿಂಗಳಿಂದ ಗ್ರಾಮಸ್ಥರು ಹಾಗೂ ಪೋಷಕರು ಹೋರಾಟ ನಡೆಸಿದೆ. ಗ್ರಾಮ ಮಟ್ಟದಿಂದ ಆರಂಭಿಸಿ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ವರೆಗೂ ಪ್ರತಿಭಟನೆ ಹಾಗೂ ಸಮಾವೇಶಗಳನ್ನು ನಡೆಸಲಾಗಿದೆ. ಜನಗಳ ತೀವ್ರ ವಿರೋಧದ…

Read More

ವಿಶೇಷ ವರದಿ | ನಮ್ಮ ತುಮಕೂರು ಡಿಜಿಟಲ್ ಸುದ್ದಿ ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ” (PMVBRY) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಿಸುವ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ತುಮಕೂರಿನ ಎಸ್‌ ಐಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿ ನಡೆಯಲಿದೆ. “ಉದ್ಯೋಗವಾಗಲಿ ಅಥವಾ ಉದ್ಯಮವಾಗಲಿ — ಭಾರತ ಸರ್ಕಾರ ನಿಮ್ಮೊಂದಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತದ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳನ್ನು ವಿತರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಜಿಲ್ಲೆಯ…

Read More

ತುಮಕೂರು : 2026–2027 ಸಾಲಿನ ಎಸ್ ಎಫ್ ಸಿ ಮುಕ್ತನಿಧಿ ಅನುದಾನದಲ್ಲಿ ಹಾಗೂ ನಗರಸಭಾ ನಿಧಿಯಲ್ಲಿ ಶೇ24.1, 7.25 ಹಾಗೂ ಶೇ.5ರ ಅನುದಾನದಡಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದ್ದು, ಸಿರಾನಗರಸಭಾ ವ್ಯಾಪ್ತಿಯಲ್ಲಿ ಬರುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಗಳಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಇತರೆ ಬಡ ಜನಾಂಗದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಬೀದಿ ಬೀದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಹಾಗೂ ಬೀದಿ ಬೀದಿ ವ್ಯಾಪಾರಿಗಳಿಗೆ ಬಿಸಿಲಿನಿಂದ ರಕ್ಷಣೆಗಾಗಿ ಛತ್ರಿ ನೀಡಲಾಗುವುದು. ಆಸಕ್ತ ಫಲಾನುಭವಿಗಳು ನಿಗದಿತ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 18ರೊಳಗಾಗಿ ಪೌರಾಯುಕ್ತರು, ನಗರಸಭೆ, ಶಿರಾ ಇವರಿಗೆ ತಲುಪುವಂತೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಯನ್ನು ನಗರಸಭೆ ಶಿರಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 18 ರಂದು ರಾಷ್ಟ್ರೀಯ ಲೋಕ ಅದಾಲತ್ ಮತ್ತು ನೆಗೋಷಿಯಬಲ್ ಇನ್ಸ್ಟ್ರುಮೆಂಟ್ ಪ್ರಕರಣಗಳ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ.ಜಯಂತ್ ಕುಮಾರ್ ತಿಳಿಸಿದರು. ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವ್ಯಾಜ್ಯಪೂರ್ವ ಪ್ರಕರಣಗಳಿರಬಹುದು ಅಥವಾ ಈಗಾಗಲೇ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿರಬಹುದು ಪ್ರಕರಣಗಳನ್ನು ಕಕ್ಷಿದಾರರು ಹಾಗೂ ವಕೀಲರು ಮುಂದೆ ಬಂದು ಲೋಕ ಅದಾಲತ್ನಲ್ಲಿ ಭಾಗವಹಿಸುವ ಮೂಲಕ ವರ್ಷಾನುಗಟ್ಟಲೆ ನ್ಯಾಯಾಲಯಕ್ಕೆ ಅಲೆದು ಸಮಯ ವ್ಯರ್ಥ ಮಾಡಿಕೊಳ್ಳುವುದನ್ನು ತಪ್ಪಿಸಬಹುದಾಗಿದೆ ಎಂದರು. 2026 ರಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಜಿಲ್ಲಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 1,08,528 ಪ್ರಕರಣಗಳಲ್ಲಿ 14,812 ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ 3,09,047 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ನ್ಯಾಯಾಲಯದಲ್ಲಿ ಬಾಕಿ ಇದ್ದ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳು ಸೇರಿ ಒಟ್ಟು 3,23,859 ಪ್ರಕರಣಗಳನ್ನು ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.…

Read More

ತುಮಕೂರು: ಆಟೋ –ದ್ವಿಚಕ್ರ ವಾಹನಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಕೊರಟಗೆರೆ ತಾಲ್ಲೂಕಿನ ವೆಂಕಟಾಪುರ ಬಳಿ ನಡೆದಿದೆ. ಮೃತ ಯುವಕನನ್ನು ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಹೋಬಳಿಗೆ ಸೇರಿದ ಕಾಳೇನಹಳ್ಳಿಯ ಪವನ್ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ಕಾರ್ತಿಕ್, ಸುಜಯ್ ಅವರ ಜೊತೆ ಬಂದಿದ್ದು, ಈ ಮೂವರೂ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಎದುರಿಗೆ ಬಂದ ಆಟೋಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಪವನ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಉಳಿದಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಪಾವಗಡ: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಎಸ್ ಸಿ/ಎಸ್ ಟಿ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಗ್ರೇಡ್–1 ಪಾವಗಡ ತಿಳಿಸಿದ್ದಾರೆ. ಅರ್ಹ ವಿದ್ಯಾರ್ಥಿಗಳು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಅರ್ಜಿ ಸ್ವೀಕರಿಸುವುದಿಲ್ಲ. ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರದ ಅಧಿಕೃತ SSP ವಿದ್ಯಾರ್ಥಿವೇತನ ಪೋರ್ಟಲ್ ssp.postmatric.karnataka.gov.in ಅಥವಾ ssp.karnataka.gov.in ಬಳಸಬೇಕು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ಸ್ಥಳೀಯ ನಿವಾಸಿಯಾಗಿರಬೇಕು. SC/ST ವರ್ಗದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕುಟುಂಬದ ವಾರ್ಷಿಕ ಆದಾಯ ಮಿತಿ ಅನ್ವಯವಾಗಲಿದೆ. ಹಿಂದಿನ ವರ್ಷ ಉತ್ತಮ ಅಂಕ ಪಡೆದಿರಬೇಕು. ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ RD ನಂಬರ್, SATS ID, ಬ್ಯಾಂಕ್ ಪಾಸ್ಬುಕ್, ಹಿಂದಿನ ವರ್ಷದ ಅಂಕಪಟ್ಟಿ, ಪಾಸ್ಪೋರ್ಟ್ ಸೈಜ್ ಫೋಟೋ. ಅರ್ಜಿ ಸಲ್ಲಿಕೆಯಲ್ಲಿ ತಾಂತ್ರಿಕ ತೊಂದರೆ ಎದುರಾದರೆ ವಿದ್ಯಾರ್ಥಿಗಳು ಪಾವಗಡದ ಸಮಾಜ ಕಲ್ಯಾಣ ಇಲಾಖೆ ಕಚೇರಿ, ಗ್ರೇಡ್–1 ಅನ್ನು…

Read More