Subscribe to Updates
Get the latest creative news from FooBar about art, design and business.
- ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
- ಬೀದರ್: ₹83 ಲಕ್ಷ ಶೂಟ್ಔಟ್ ದರೋಡೆ ಪ್ರಕರಣ ಭೇದಿಸಿದ ಪೊಲೀಸರು; ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನ!
- ಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ತಿರುಗಿಸುವ ಆರೋಪ: ತುಮಕೂರಿನಲ್ಲಿ ತೀವ್ರ ಪ್ರತಿಭಟನೆ, ಸಚಿವ ಪರಮೇಶ್ವರ್ ಕಾರಿಗೆ ಮುತ್ತಿಗೆ
- ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ
- ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
Author: admin
ಬೆಂಗಳೂರು: ಯುವತಿಯೊಬ್ಬಳು ಆಟೋ ಚಾಲಕನಿಗೆ ಸಾರ್ವಜನಿಕ ಸ್ಥಳದಲ್ಲೇ ಚಪ್ಪಲಿಯಲ್ಲಿ ಹೊಡೆದ ಅಮಾನವೀಯ ಘಟನೆ ನಗರದ ಬೆಳ್ಳಂದೂರಿನಲ್ಲಿ ನಡೆದಿದೆ. ಆಟೋ ಚಾಲಕ ಬೆಳ್ಳಂದೂರಿಗೆ ಬಾಡಿಗೆಗೆ ಬಂದಿದ್ದರು. ಈ ವೇಳೆ ಸೆಂಟ್ರಲ್ ಮಾಲ್ ಬಳಿ ಬೈಕ್‍ನಲ್ಲಿ ಬಂದ ಯುವತಿ, ನೀನು ನಮ್ಮ ವಾಹನಕ್ಕೆ ಟಚ್ ಮಾಡಿದ್ದೀಯಾ ಎಂದು ಆಟೋ ಚಾಲಕನ ಬಳಿ ಹಿಂದಿಯಲ್ಲಿ ಗಲಾಟೆ ಆರಂಭಿಸಿದ್ದಾಳೆ. ಅಲ್ಲದೇ ಅವರ ಮೇಲೆ ಚಪ್ಪಲಿಯಲ್ಲಿ ಹಲ್ಲೆ ನಡೆಸಿದ್ದಾಳೆ. ಯುವತಿ ಹಲ್ಲೆ ನಡೆಸಿರುವ ವೀಡಿಯೋ ಮೊಬೈಲ್‍ನಲ್ಲಿ ಸೆರೆಯಾಗಿದೆ. ಹಲ್ಲೆ ನಡೆಸುವ ವೇಳೆ, ಸಾರ್ವಜನಿಕರು ಆಟೋ ಚಾಲಕನ ನೆರವಿಗೆ ಬಂದಿದ್ದು, ಯುವತಿಯನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಪೊಲೀಸ್ ಠಾಣೆಗೆ ಬರುವುದಾಗಿ ಹೇಳಿ ಯುವತಿ ಹಾಗೂ ಆಕೆಯ ಜೊತೆಗಿದ್ದ ಯುವಕ ಇಬ್ಬರೂ ಪರಾರಿಯಾಗಿದ್ದಾರೆ. ಈ ವಿಚಾರವಾಗಿ ಯುವತಿಯನ್ನು ಠಾಣೆಗೆ ಕರೆಸಿ ಕಾನೂನಾತ್ಕವಾಗಿ ಕ್ರಮ ಜರುಗಿಸಬೇಕು ಎಂದು ಆಟೋ ಚಾಲಕ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ. ಈ ಕ್ರಮಕ್ಕೆ ಖಾಸಗಿ ಕಂಪನಿಯೊಂದು ಹಣಕಾಸು ಒದಗಿಸಿದ್ದು, ಸಪೋರ್ಟ್ ಫಾರ್ ನೆಟ್ ವರ್ಕ್ ಮತ್ತು ಎಕ್ಸ್ ಟೆನ್ಶನ್ ಹೆಲ್ಪ್ ಏಜೆನ್ಸಿ (SNEHA) ಎಂಬ ಸರ್ಕಾರೇತರ ಸಂಸ್ಥೆಯಿಂದ ಸೈರನ್ ವ್ಯವಸ್ಥೆ ಸ್ಥಾಪಿಸಲಾಗಿದೆ. ಕೊಡಗಿನ ವಿರಾಜಪೇಟೆಯಾದ್ಯಂತ ವನ್ಯಜೀವಿಗಳ ಚಲನೆಯ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆಯನ್ನು SNEHA ಸಂಸ್ಥೆ ಪ್ರಾಯೋಗಿಕವಾಗಿ ಆರಂಭಿಸಿದೆ. ಬಡಗ ಬನಂಗಾಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಘರ್ಷ ವಲಯಗಳಲ್ಲಿ 12 ಅಂತಹ ಸೈರನ್‌ಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿ NGO ಕೆಲಸ ಮಾಡುತ್ತಿದೆ. ಈ ಯೋಜನೆ ಪ್ರಸ್ತುತ ಪ್ರಾಯೋಗಿಕ ಹಂತದಲ್ಲಿದ್ದರೂ, ಸ್ವಯಂಚಾಲಿತ ಎಚ್ಚರಿಕೆ ವ್ಯವಸ್ಥೆಗಳನ್ನು ಪರಿಚಯಿಸುವ ಮೂಲಕ ಅದನ್ನು ಮತ್ತಷ್ಟು ವಿಸ್ತರಿಸಲು SNEHA ಯೋಜಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಮಂಡ್ಯ: ರಾಜ್ಯ ಸರಕಾರವು ನಿನ್ನೆ ಹೊಸ ಆದೇಶ ಹೊರಡಿಸಿದೆ. ಗ್ಯಾರಂಟಿ ಸಮಿತಿ ಅಧ್ಯಕ್ಷ, ಉಪಾಧ್ಯಕ್ಷರ ಗೌರವಧನ ಬಿಡುಗಡೆಗೆ ಆದೇಶ ಮಾಡಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೆ, ಕಸದ ಮೇಲೆ ತೆರಿಗೆ ಹಾಕುವಂತಹ ಸರಕಾರ ಸಿದ್ದರಾಮಯ್ಯರ ನೇತೃತ್ವದ್ದು ಎಂದು ಟೀಕಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಎಲ್ಲ ಶಾಸಕರು ಅನುದಾನವಿಲ್ಲದೆ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಬೆಲೆ ಏರಿಕೆ ಮೂಲಕ ಸರಕಾರವು ಬಡವರಿಗೆ ಬರೆ ಎಳೆಯುತ್ತಿದೆ. ಕೂಡಲೇ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಹೀನಾಯವಾಗಿ ಸೋಲುವುದು ನಿಶ್ಚಿತ ಎಂಬುದು ಸರ್ವೇಯ ಫಲಿತಾಂಶದಿಂದ ಗೊತ್ತಾಗಿದೆ. ಬಡವರ ವಿರೋಧಿ ಸರಕಾರ ತೊಲಗಬೇಕು ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 700 ಬಾಲ್ಯವಿವಾಹಗಳಾಗಿವೆ. ಇದು ನಿಮ್ಮ ಗಮನಕ್ಕೆ ಬಂದಿದೆಯೇ? ನಿಮ್ಮ ಕೆಳಗಿನವರು ನಿಮಗೆ ವರದಿ ಮಾಡುವುದಿಲ್ಲವೇ? ನಿಮಗೆ ದಕ್ಷತೆ ಇಲ್ಲವೇ? ಇದಕ್ಕೆ ಕಡಿವಾಣ ಹಾಕಲು ಕಾನೂನು ಇದ್ದರೂ ಬಳಸದಿರುವುದು ತಪ್ಪಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳನ್ನು ಪ್ರಶ್ನಿಸಿದರು. ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, “ನಿಮ್ಮ ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಆಗುವುದು ನಿಮ್ಮ ಗಮನಕ್ಕೆ ಯಾಕೆ ಬರುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು. ಬಾಲ್ಯದಲ್ಲೇ ತಾಯಂದಿರಾದ ಘಟನೆಗಳೂ ವರದಿಗಳಾಗಿವೆ. ಈ ಬಗ್ಗೆ ಹಲವು ಕಡೆ ಎಫ್ ಐಆರ್ ಕೂಡ ದಾಖಲಾಗಿಲ್ಲ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಇಷ್ಟೊಂದು ಬಾಲ್ಯ ವಿವಾಹಗಳು ನಡೆಯುತ್ತಿರುವುದು ಗಂಭೀರ ವಿಷಯವಲ್ಲವೇ ಎಂದು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಬೆಳಗಾವಿಯಲ್ಲಿ ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ ಶಿಕ್ಷಕನನ್ನು ಅಮಾನತು ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು. ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ನನ್ನ ಇಲಾಖೆಯಲ್ಲಿ ಇಂತಹದ್ದನ್ನ ಸಹಿಸೋಕೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಸರ್ಕಾರಿ ನೌಕರರಿಗೆ ಕಾನೂನು ಇದೆ. ಇಂತಹ ಸಮಸ್ಯೆ ಇದ್ದರೆ ಇಲಾಖೆ ಗಮನಕ್ಕೆ ತರಬೇಕು. ಬಿಇಓ, ಡಿಡಿಪಿಐಗಳ ಗಮನಕ್ಕೆ ತರಬೇಕು. ಏಕಾಏಕಿ ಪ್ರತಿಭಟನೆ ಮಾಡೋದು ಸರಿಯಲ್ಲ ಎಂದಿದ್ದಾರೆ. ಸರ್ಕಾರಿ ನೌಕರರು ಇತಿಮಿತಿಯಲ್ಲಿ ಇರಬೇಕು. ಹೀಗೆ ಮಾಡೋದು ಸರಿಯಲ್ಲ. ಪ್ರತಿಭಟನೆ ಮಾಡೋಕೆ ಸರ್ಕಾರದಲ್ಲಿ ಅವಕಾಶ ಇಲ್ಲ. ಅವರ ಸಮಸ್ಯೆ ಬಗ್ಗೆ ಪ್ರತಿಭಟನೆ ಮಾಡಲಿ. ಅದು ಬಿಟ್ಟು ಇಂತಹ ವಿಷಯಕ್ಕೆ ಪ್ರತಿಭಟನೆ ಮಾಡೋದು ಸರಿಯಲ್ಲ. ಅನೇಕರು ನನಗೆ ಅಮಾನತು ವಾಪಸ್ ಪಡೆದುಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಈಗ ಅಮಾನತು ವಾಪಸ್ ಪಡೆಯಬೇಕು ಅಂತ ಕಡತ ತರಿಸಿದ್ದೇನೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕಾಲುವೆ ಯೋಜನೆ ವಿರೋಧಿಸಿ ರೈತ ಸಂಘಟನೆಗಳು, ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದವು. ನಂತರ ಜಿಲ್ಲಾಡಳಿತ ಯೋಜನಾ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಭರವಸೆ ನೀಡಿದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಅವರೊಂದಿಗೆ ಮಾತನಾಡಿದ್ದು, ಸಮಸ್ಯೆಯನ್ನು ಪರಿಹರಿಸುವಂತೆ ಸೂಚಿಸಿರುವುದಾಗಿ ಹೇಳಿದರು. ಹೇಮಾವತಿ ನದಿ ಕೆನಾಲ್ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು. ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದರು. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ, “ಸರ್ಕಾರವು ಕಾಲುವೆ ನಿರ್ಮಾಣದ ಬಗ್ಗೆ ನಿರ್ಧರಿಸಿ ಸುಮಾರು 1,000 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಿದೆ. ಮೂರು ತಿಂಗಳ ಹಿಂದೆ ನಾವು ಕಾಮಗಾರಿಯನ್ನು ಪ್ರಾರಂಭಿಸಲು ಪ್ರಯತ್ನಿಸಿದಾಗ, ಬಿಜೆಪಿ ಅದನ್ನು ಅವೈಜ್ಞಾನಿಕ ಎಂದು ವಿರೋಧಿಸಿತು. ನಂತರ…
ಚಿಕ್ಕಮಗಳೂರು: ಜನಿಸಿದ ಎರಡೇ ದಿನಕ್ಕೆ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದ ದಂಪತಿ ಹಾಗೂ ನಿವೃತ್ತ ನರ್ಸ್ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನಾ, ಸದಾನಂದ ದಂಪತಿ ಮಗುವನ್ನು ಮಾರಾಟ ಮಾಡಿದ ದಂಪತಿಯಾಗಿದ್ದು, ಕೊಪ್ಪದ ನಿವೃತ್ತ ನರ್ಸ್ ಕುಸುಮ ಎಂಬುವರ ಮೂಲಕ 1 ಲಕ್ಷ ರೂಪಾಯಿಗೆ ಕಾರ್ಕಳದ ರಾಘವೇಂದ್ರ ಎಂಬವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ವಿಚಾರ ತಿಳಿದ ಎನ್.ಆರ್ ಪುರ ಠಾಣೆಯ ಪೊಲೀಸರು ತನಿಖೆ ನಡೆಸಿ, ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಾರ್ಕಳಕ್ಕೆ ತೆರಳಿ ಮಗುವನ್ನು ಸುರಕ್ಷಿತವಾಗಿ ತಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಇನ್ನು, ಮಗು ದತ್ತು ಪಡೆದ ರಾಘವೇಂದ್ರ, ನಿವೃತ್ತ ನರ್ಸ್ ಕುಸುಮ ಅವರ ಸಹೋದರ. ತಮಗೆ ಮಕ್ಕಳು ಇಲ್ಲದೆ ಇರುವುದರಿಂದ ಸಾಕಲು ಮಗು ಪಡೆದಿದ್ದೇನೆ ಎಂದು ರಾಘವೇಂದ್ರ ಪೊಲೀಸರ ಮುಂದೆ ಹೇಳಿದ್ದಾರೆ ಎನ್ನಲಾಗಿದೆ. ರತ್ನಾ–ಸದಾನಂದ…
ತುಮಕೂರು: ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿ ಹೋರಾಟ ತೀವ್ರಗೊಂಡಿದ್ದು ಹೆದ್ದಾರಿ ರಸ್ತೆ ತಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನಿಟ್ಟೂರು ಬಳಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಹೇಮಾವತಿ ಲಿಂಕ್ ಕೆನಾಲ್ ಮೂಲಕ ನೀರು ತೆಗೆದುಕೊಂಡು ಮಾಗಡಿ, ರಾಮನಗರಕ್ಕೆ ಹೋದರೆ ತುಮಕೂರು ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೆ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಇಂದು ಬೃಹತ್ ಹೋರಾಟಕ್ಕೆ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಅವರು ಮೇ 31ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 1ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದರು. ಇನ್ನು ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಆದರೆ ನಿಷೇಧಾಜ್ಞೆ ಧಿಕ್ಕರಿಸಿ ರೈತರು, ಮುಖಂಡರು ಹೋರಾಟ ತೀವ್ರಗೊಳಿಸಿದ್ದಾರೆ. ಶಾಸಕರಾದ ಬಿ. ಸುರೇಶ್‌ಗೌಡ,…
ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಇಂದು ತುಮಕೂರಿನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಭಾರೀ ಪ್ರತಿಭಟನೆ ಬೆನ್ನಲ್ಲೇ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಜಿಲ್ಲಾಧಿಕಾರಿ ಪೋನ್ ಮೂಲಕ ಭರವಸೆ ನೀಡಿದ ನಂತರ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರುದ್ಧ ಹೋರಾಟಗಾರರು ಹೋರಾಟ ಕೈಬಿಟ್ಟಿದ್ದಾರೆ. ಸಂಕಾಪುರ ಬಳಿಯ ಕಾಮಗಾರಿ ಬಳಿಗೆ ಬಂದು ರೈತರು ಹೋರಾಟ ಮಾಡಿದ್ದಾರೆ. ರೈತರ ಹೋರಾಟಕ್ಕೆ ಸ್ಪಂದಿಸಿ ಕಾಮಗಾರಿಗೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಶಾಸಕರ ಸಭೆ ಕರೆದು ಮುಂದಿನ ನಿರ್ಧಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸದ್ಯ ಹೋರಾಟಗಾರರಿಂದ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ಪ್ರತಿಭಟನೆಗೂ ಮುನ್ನವೇ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ 10 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾಕಾರರು ಪ್ರತಿಭಟನೆಗೆ ಕರೆ ನೀಡಿದ್ದರು. ಇನ್ನೂ ಮೂರು ಬಸ್ ನಲ್ಲಿ ಆಗಮಿಸಿದ್ದ ಪ್ರತಿಭಟನಕಾರರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಟ್ಟೂರು ಸಮೀಪ ಆಂಜನೇಯಸ್ವಾಮಿ ಬಳಿ ಪ್ರತಿಭಟನಾಕಾರರು ಸೇರಿದ್ದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW