Subscribe to Updates
Get the latest creative news from FooBar about art, design and business.
- ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
- ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
- ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
- ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
- ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
- ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
- ಜೂಜಾಟ: 12 ಮಂದಿ ಆರೋಪಿಗಳ ಬಂಧನ
Author: admin
ತುಮಕೂರು: ಬೆಂಗಳೂರಿನ ನಿಮ್ಹಾನ್ಸ್ ಎಪಿಡೀಮಿಯಾಲಜಿ ವಿಭಾಗದ ಜನ ಆರೋಗ್ಯ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಟಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರ ಆಯ್ಕೆಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ತುರುವೇಕೆರೆ, ಚಿಕ್ಕನಾಯಕನಹಳ್ಳಿ, ತಿಪಟೂರು, ಶಿರಾ, ಗುಬ್ಬಿ ಹಾಗೂ ಕುಣಿಗಲ್ ತಾಲ್ಲೂಕುಗಳಿಗೆ ಯುವ ಪರಿವರ್ತಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವವರು ಪದವಿ ಹೊಂದಿದ್ದು, 21 ರಿಂದ 35 ವರ್ಷದೊಳಗಿನವರಾಗಿರಬೇಕು. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 10ರೊಳಗಾಗಿ ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8549890509/ 9353321355ನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಬ್ರಾಹ್ಮಣ ಸಭಾ, ಶ್ರೀ ಶಂಕರ ಸೇವಾ ಸಮಿತಿ ಸಹಯೋಗದಲ್ಲಿ ಮೇ 2ರಂದು ಬೆಳಿಗ್ಗೆ 10:30 ಗಂಟೆಗೆ ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಶಂಕರಾಚಾರ್ಯ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಸಮಾಜದ ಗಣ್ಯರು, ವಿವಿಧ ಸಮುದಾಯದ ಮುಖಂಡರು ಭಾಗವಹಿಸಲಿದ್ದು, ಕಾರ್ಯಕ್ರಮ ಕುರಿತು ಜಿಲ್ಲಾ ಬ್ರಾಹ್ಮಣ ಸಭಾ ಸಂಸ್ಥೆಯ ಉಪಾಧ್ಯಕ್ಷ ಹಾಗೂ ಶೃಂಗೇರಿ ಶಂಕರ ತತ್ವ ಪ್ರಸಾರ ಅಭಿಯಾನದ ಎಂ.ಕೆ. ನಾಗರಾಜರಾವ್ ಉಪನ್ಯಾಸ ನೀಡಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಮುಂಗಾರು ಹಂಗಾಮು ಪ್ರಾರಂಭದ ಮುನ್ನ ಜಮೀನಿನಲ್ಲಿ ಮಾಗಿ ಉಳುಮೆ ಮಾಡುವುದರಿಂದ ಹೊಲದ ಮಣ್ಣಿನ ಸವಕಳಿ ತಡೆದು ಅದರ ಫಲವತ್ತತೆ ಹೆಚ್ಚಳವಾಗಲು ಸಹಕಾರಿಯಾಗಲಿದ್ದು, ರೈತರು ತಪ್ಪದೆ ಮಾಗಿ ಉಳುಮೆ ಮಾಡಬೇಕೆಂದು ಪಾವಗಡ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಅಜಯ್ ಕುಮಾರ್ ಆರ್. ಸಲಹೆ ನೀಡಿದ್ದಾರೆ. ಕೃಷಿ ಭೂಮಿಯಲ್ಲಿ ಅತ್ಯಂತ ಸಹಜವಾಗಿ ನೀರು ಇಂಗಿಸುವ ವಿಧಾನವೇ ಮಾಗಿ ಉಳುಮೆ. ಇಳಿಜಾರಿಗೆ ಅಡ್ಡಲಾಗಿ ಮಾಡುವುದರಿಂದ ಮಣ್ಣಿನ ಸವಕಳಿ ತಡೆದು ಅದರ ಫಲವತ್ತತೆಯನ್ನು ಉಳಿಸಬಹುದು. ಹದವಾಗಿ ಉಳುಮೆ ಮಾಡುವುದರಿಂದ ಹೆಂಟೆಗಳು ಒಡೆಯತ್ತವೆ. ಮಣ್ಣಿನ ಕಣಗಳ ರಚನೆ ಸುಧಾರಿಸುತ್ತದೆ. ಈ ವಿಧಾನದಿಂದ ಮಣ್ಣು ಸಡಿಲವಾಗುವ ಕಾರಣ ಬಿದ್ದ ಮಳೆ ನೀರು ಭೂಮಿಯ ಹೊರ ಪದರದಲ್ಲಿ ಹರಿದು ಹೋಗದೆ ಒಳಗಡೆ ಇಳಿಯುತ್ತದೆ. ಇದರಿಂದ ಜಮೀನು ತೇವಾಂಶದಿAದ ಕೂಡಿರುತ್ತದೆ. ಮಾಗಿ ಉಳುಮೆ ಮಾಡುವುದರಿಂದ ಮಣ್ಣಿನ ಕೆಳ ಪದರದಲ್ಲಿರುವ ರೋಗಾಣುಗಳ ಶೀಲೀಂದ್ರ ಕೀಟಗಳು ಮತ್ತು ಅವುಗಳ ಮೊಟ್ಟೆ, ಕೋಶಗಳು ಬಿಸಿಲಿಗೆ ನಾಶವಾಗುವುದರ ಜೊತೆಗೆ ಪಕ್ಷಿಗಳಿಗೆ ಆಹಾರವಾಗುತ್ತದೆ. ಬೆಳೆಗಳ ತ್ಯಾಜ್ಯ ವಸ್ತುಗಳಾದ ಬೇರು,…
ತುಮಕೂರು: ಬೆಸ್ಕಾಂ ನಗರ ಉಪ ವಿಭಾಗ–1ರ ಗ್ರಾಹಕರು ವಿದ್ಯುತ್ ಸ್ಥಾವರದ ಬಿಲ್ ಮೊತ್ತವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ)ದ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ತಿಳಿಸಿದ್ದಾರೆ. ಸತತವಾಗಿ 2 ತಿಂಗಳು ವಿದ್ಯುತ್ ಬಿಲ್ಲು ಪಾವತಿಸದಿದ್ದಲ್ಲಿ, 3ನೇ ತಿಂಗಳಲ್ಲಿ ಗ್ರಾಹಕರ ವಿದ್ಯುತ್ ಸ್ಥಾವರದ ಮಾಪಕವನ್ನು ಕಳಚಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು. ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ನಂತರ ಅದೇ ವಿದ್ಯುತ್ ಸ್ಥಾವರಕ್ಕೆ ಪುನಃ ವಿದ್ಯುತ್ ಸಂಪರ್ಕ ಬೇಕಾದರೆ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ವಾಸ ಧೃಡೀಕರಣ ಪತ್ರ (Occupancy Certificate)ದೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಎಲ್ಲ ಗ್ರಾಹಕರು ತಮ್ಮ ಬಾಕಿ ವಿದ್ಯುತ್ ಬಿಲ್ಲನ್ನು ತಕ್ಷಣವೇ ಪಾವತಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ನಗರ ಪೊಲೀಸ್ ಠಾಣೆ ಆವರಣದಲ್ಲಿ ಮಾಲೀಕರು ಪತ್ತೆಯಾಗದ 7 ದ್ವಿಚಕ್ರ ವಾಹನಗಳನ್ನು ಮೇ 6ರಂದು ಬೆಳಿಗ್ಗೆ 10:30 ಗಂಟೆಗೆ ಸಾರ್ವಜನಿಕವಾಗಿ ಬಹಿರಂಗ ಹರಾಜು ಮಾಡಲಾಗುವುದು. ಹರಾಜನ್ನು ತುಮಕೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಸಮಕ್ಷಮದಲ್ಲಿ ನಡೆಸಲಾಗುತ್ತಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಸಾರ್ವಜನಿಕರಿಗೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವುದು ಅವರನ್ನು ಸ್ವಾವಲಂಬಿಗಳನ್ನಾಗಿಸುವುದು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಮುಖ ಸಂಕಲ್ಪವಾಗಿದೆ ಎಂದು ಪಾವಗಡ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ.ಎಸ್. ಪಾಪಣ್ಣ ತಿಳಿಸಿದರು. ಪಾವಗಡ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಇಲಾಖಾವಾರು ಮಾಹಿತಿ ಪಡೆದ ಅವರು, ಪಾವಗಡ ತಾಲೂಕಿನಲ್ಲಿ ಗೃಹಲಕ್ಷ್ಮೀ ಯೋಜನೆಯ ಸೌಲಭ್ಯ ಪಡೆಯದವರನ್ನು ಪತ್ತೆ ಹಚ್ಚಿ ಅವರ ಖಾತೆಗೆ 2,000 ರೂ. ಹಣವನ್ನು ತಲುಪಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಖೀಬ್ ಅವರಿಗೆ ಖಡಕ್ ಸೂಚನೆ ನೀಡಿದರು. ಗ್ರಾಮೀಣ ಭಾಗದಲ್ಲಿ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ಹಣ ಯಾಕೆ ಬರುತ್ತಿಲ್ಲ ಎನ್ನುವುದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಅವರು ಸೂಚಿಸಿದರು. ಪಾವಗಡ ತಾಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲೂ ಸಹ ಅನ್ನಭಾಗ್ಯ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಮಧ್ಯವರ್ತಿಗಳ ಮತ್ತು ಕಮಿಷನ್ ದಂಧೆಗೆ ಕಡಿವಾಣ ಹಾಕುವುದರ ಜೊತೆಗೆ ಸಮಯಕ್ಕೆ ಸರಿಯಾಗಿ ಪಡಿತರ ವಿತರಣೆಗೆ ಸೂಚಿಸಿದರು. ಶಕ್ತಿ ಯೋಜನೆಯ ಪ್ರಗತಿಯನ್ನು…
ಇಂದು ನವದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಜಗಜ್ಯೋತಿ ಬಸವೇಶ್ವರರ ೮೯೪ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣನವರು ತಮ್ಮ ಇಲಾಖೆಯ ಮೂಲಕ ಆಯೋಜಿಸಿ, ಅತ್ಯಂತ ಯಶಸ್ವಿಯಾಗಿ ದೆಹಲಿಯ ಸಂಸತ್ತಿನ ಪ್ರೇರಣಾ ಸ್ಥಳದಲ್ಲಿ ಬಸವ ಜಯಂತಿಯನ್ನು ಆಯೋಜಿಸುವಲ್ಲಿ ಸಫಲರಾಗಿದ್ದಾರೆ. ಕಾರ್ಯಕ್ರಮಕ್ಕೆ ಕೇಂದ್ರದ ಸಚಿವರುಗಳನ್ನು, ರಾಜ್ಯದ ಸಂಸದರುಗಳನ್ನು, ಮಠಾಧೀಶರುಗಳನ್ನು ಮತ್ತು ಬಸವಾಭಿಮಾನಿಗಳನ್ನು, ದೆಹಲಿ ಕನ್ನಡಿಗರನ್ನು ವಿ.ಸೋಮಣ್ಣನವರು ಆಹ್ವಾನಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು, ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ್, ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಮತ್ತು ನೂತನ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಸಚಿವ ಪ್ರಹ್ಹಾದ್ ಜೋಶಿ, ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವೆ ಕು. ಶೋಭಾ ಕರಂದ್ಲಾಜೆ, ರೈಲ್ವೆ ರಾಜ್ಯ ಖಾತೆಯ ಸಚಿವ ರವನೀತ ಸಿಂಗ್, ಜಲಶಕ್ತಿ ರಾಜ್ಯ ಖಾತೆಯ ಸಚಿವ ರಾಜಬೂಷಣ್ ಚೌಧರಿ, ಸಂಸದರಾದ ಪಿ.ಸಿ.ಗದ್ದಿಗೌಡರ, ತೇಜಸ್ವಿ ಸೂರ್ಯ, ಮಾಜಿ ಸಂಸದರಾದ ಡಾ. ಉಮೇಶ್ ಜಾದವ್, ಅಣ್ಣಾ ಸಾಹೆಬ್ ಜೊಲ್ಲೆ,…
ಮಂಗಳೂರು: ನಗರದ ಹೊರವಲಯದ ಕುಡುಪು ಸಮೀಪ ವಲಸೆ ಕಾರ್ಮಿಕ ಯುವಕನೊಬ್ಬನನ್ನು ಸುಮಾರು 30 ಜನರ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೇರಳದ ವಯನಾಡು ಜಿಲ್ಲೆಯ ಸುಲ್ತಾನ್ ಬತ್ತೇರಿ ತಾಲೂಕಿನ ಪುಲ್ಪಳ್ಳಿ ಗ್ರಾಮದ ಯುವಕ ಅಶ್ರಫ್ ಹತ್ಯೆಗೀಡಾಗಿರುವ ಯುವಕನಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಒಟ್ಟು 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನ ಸಾಧ್ಯತೆ ಕಂಡು ಬಂದಿದೆ. ಭಾನುವಾರ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಹಿನ್ನೆಲೆ ಪೊಲೀಸರು ಅನುಮಾನದ ಮೇರೆಗೆ ಶವಪರೀಕ್ಷೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ, ಬೆನ್ನಿನ ಭಾಗಕ್ಕೆ ಬಿದ್ದ ಬಲವಾದ ಏಟು, ಶಾಕ್ ಹಾಗೂ ಸರಿಯಾದ ಸಮಯದಲ್ಲಿ ಚಿಕಿತ್ಸೆ ದೊರಕದೇ ಇರುವುದು ಮರಣಕ್ಕೆ ಕಾರಣ ಎಂದು ತಿಳಿದು ಬಂದಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ, ಎ.27ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿಯ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ನಡೆದಿದ್ದು, ಈ ವೇಳೆ ಸಚಿನ್ ಎಂಬ ವ್ಯಕ್ತಿಯೊಂದಿಗೆ ಅಶ್ರಫ್ ಗೆ ವಾಗ್ವಾದ ನಡೆದಿತ್ತು. ಈ ವೇಳೆ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮ ಪಂಚಾಯತ್ ನಲ್ಲಿ 12ನೇ ಶತಮಾನದಲ್ಲಿ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಾಮಾಜಿಕ ನ್ಯಾಯದ ಹರಿಕಾರ ಕಾಯಕಯೋಗಿ ವಿಶ್ವಗುರು ಬಸವಣ್ಣನವರ ಜಯಂತಿ ಆಚರಿಸಲಾಯಿತು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸತ್ಯವತಿ ಪರಮೇಶ್ವರ ಮೇತ್ರೆ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ಗೌರವದ ನಮನಗಳನ್ನು ಸಲ್ಲಿಸಿದರು. ಈ ಸಮಯದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆತ್ಮಾ ರಾಮ್ ಹಾಗೂ ಗ್ರಾಪಂ ಸದಸ್ಯ ದೇವಿದಾಸ ಮಾಳಗೆ, ಗ್ರಾಪಂ ಸದಸ್ಯ ಕರಬಸಪ್ಪಾ ಸೊರಾಳೆ, ಗ್ರಾಪಂ ಸದಸ್ಯ ದೇವಿದಾಸ ಧೋಳೆ ಹಾಗೂ ಗ್ರಾಮದ ಮುಖಂಡರಾದ ವೈಜೀನಾಥ್ ವಲ್ಲೇಪುರೆ, ಭೀಮಣ್ಣ ಗಂದಿಗೆ, ಶಿವರುದ್ರಪ್ಪಾ ಶೆಟ್ಕರ್, ಸತ್ಯನಾರಾಯಣ ರಾಜಪುತ, ಅಮೃತ ವಲ್ಲೇಪೂರೆ, ಮಾಜಿ ಗ್ರಾಪಂ ಸದಸ್ಯ ಸಂಜುಕುಮಾರ್ ಮುಗಟೆ, ಪತ್ರಕರ್ತ ರವಿ ವಲ್ಲೇಪೂರೆ, ರಮೇಶ್ ಮುಗಟೆ, ಮಾದಪ್ಪ ಪಿಟ್ರೆ, ರವಿ ಚಾಬೋಳೆ, ಎಮ್.ಡಿ.ನಯೂಮ, ಅಲಾವುದ್ದೀನ್, ಜೀವನ್ ಮಾಳೆಗೆ, ಸರ್ವಾಣ ಕೆವಳೆ. ಗ್ರಾಮ ಪಂಚಾಯಿತಿ ಸಿಬ್ಬಂದಿ, ಊರಿನ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ: ಅರವಿಂದ…
ತುಮಕೂರು: ರೈತರು ತಮ್ಮ ರಾಸುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಬೇಕೆಂದು ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಹೆಚ್.ಎ.ನಂಜೇಗೌಡ ಮನವಿ ಮಾಡಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ತುಮಕೂರು ಹಾಲು ಒಕ್ಕೂಟದ ಸಹಯೋಗದಲ್ಲಿ ತುಮಕೂರು ತಾಲ್ಲೂಕು ಕೆಸರಮಡು ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಹಮ್ಮಿಕೊಂಡಿರುವ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ(ಎನ್.ಎ.ಡಿ.ಸಿ.ಪಿ.)ಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಡಾ.ವೈ.ಜಿ.ಕಾಂತರಾಜು ಮಾತನಾಡಿ, ಕಾಲುಬಾಯಿ ರೋಗದ ನಿರ್ಮೂಲನೆಯ ಮಹತ್ವವನ್ನು ತಿಳಿಸಿದರು. ರೋಗ ನಿರ್ಮೂಲನೆ ಮಾಡಲು ಲಸಿಕೆಯೊಂದೇ ಮಾರ್ಗವಾಗಿದ್ದು, ಎಲ್ಲಾ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ರೋಗ ನಿರ್ಮೂಲನೆ ಮಾಡಲು ಸಹಕರಿಸಬೇಕೆಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ.ಜಿ.ಮಲ್ಲೇಶಪ್ಪ, ಡಾ.ಎಂ.ಸುರೇಶ್, ಗ್ರಾಮ ಪಂಚಾಯತ್ ಸದಸ್ಯ ಕೃಷ್ಣಪ್ಪ, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ದಿಲೀಪ್, ಕೆಸರುಮಡು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಕೆ.ಹೆಚ್.ಗಂಗಾಧರ್, ಕಾರ್ಯದರ್ಶಿ ರೇಣುಕಾರಾದ್ಯ, ಹಿರಿಯ ಪಶುವೈದ್ಯಕೀಯ…