Subscribe to Updates
Get the latest creative news from FooBar about art, design and business.
- ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
- ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ, ಫುಟ್ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
- ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
- ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
- ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
- ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
- ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
- ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
Author: admin
ಬೀದರ್: ಜಿಲ್ಲೆಯಲ್ಲಿ ಬೀಜ ಹಾಗೂ ರಸಗೊಬ್ಬರದ ಕೊರತೆ ಇಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಯಾ ಉಲ್ ಹಕ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರ ಮಾರಾಟ ಜೋರಾಗಿವುದರಿಂದ ಕೃಷಿ ಇಲಾಖೆಯಿಂದ ಭರದ ಸಿದ್ದತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸೋಯಾ 2.25 ಸಾವಿರ ಹೆಕ್ಟರ್, ತೊಗರಿ 1.18 ಸಾವಿರ ಹೆಕ್ಟರ್, 20 ಸಾವಿರ ಹೆಕ್ಟರ್ ನಲ್ಲಿ ಉದ್ದು ಬಿತ್ತನೆಯಾಗಲಿದೆ. ಎಲ್ಲಾ 30 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ಸಂಗ್ರಹಿಸಲಾಗಿದ್ದು, ಅತಿ ಹೆಚ್ಚಾಗಿ ಸೊಯಾ ಬಿತ್ತನೆಗೆ ಗಡಿ ಜಿಲ್ಲೆಯಲ್ಲಿ ರೈತರು ಮುಂದಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ 95 ಸಾವಿರ ಕ್ವಿಂಟಾಲ್ ಬೀಜಗಳ ಸಂಗ್ರಹ ಲಭ್ಯವಿದೆ. 37 ಸಾವಿರ ಕ್ವಿಂಟಾಲ್ ವಿವಿಧ ರಸಗೊಬ್ಬರ ಬೇಡಿಕೆ ಇರುವುದರಿಂದ ಈಗಾಗಲೇ ಮೂರುವರೆ ಸಾವಿರ ಕ್ವಿಂಟಾಲ್ ಡಿಎಪಿ, ಯೂರಿಯಾ ಗೊಬ್ಬರದ ಸ್ಟಾಕ್ ಸಾಕಷ್ಟು ಪ್ರಮಾಣದಲ್ಲಿದೆ. ಉಳಿದ ರಸಗೊಬ್ಬರ ಸಮಯಕ್ಕೆ ಸರಿಯಾಗಿ ಜಿಲ್ಲೆಗೆ ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ…
ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಡಿ.ರಾಂಪುರ ಗ್ರಾಮದ ಬಳಿ ನಡೆಯುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಅಧಿಕಾರಿಗಳ ಬಳಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಹಾಜರಿದ್ದ ಲಿಂಕೆನಲ್ ವಿರೋಧಿ ಹೋರಾಟಗಾರರು ಹಾಗೂ ರೈತರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಈ ವೇಳೆ ಅವರನ್ನು ಸಮಾಧಾನಪಡಿಸಿದ ಸಚಿವ ಸೋಮಣ್ಣ ಅಧಿಕಾರಿಗಳ ಬಳಿ ವಿಸ್ತೃತ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ರೈತ ಮುಖಂಡರು ಹಾಜರಿದ್ದರು. ಸ್ಥಳ ಪರಿಶೀಲನೆ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಡಿ ರಾಂಪುರ ಗ್ರಾಮದ ಬಳಿ ನಡೆಯುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ವಿವಾದಿತ ಕಾಮಗಾರಿಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ತುಮಕೂರು ಜಿಲ್ಲೆಗೆ ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದಿಂದ ಹರಿದು ಬರುತ್ತಿರುವ ನೀರಿನ ಚಾನಲ್ ಅನ್ನು ಕೂಡ ವೀಕ್ಷಿಸಿದರು. ನಮ್ಮತುಮಕೂರಿನ…
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿ ಹೋರಾಟಗಾರರಿಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ನಾಲ್ವರಿಗೆ ಹೂವಿನ ಹಾರ ಹಾಕಿ ಬಿಜೆಪಿ ಶಾಸಕ ಸುರೇಶ ಗೌಡ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ ಸ್ವಾಗತಿಸಿದರು. ತುಮಕೂರು ಜಿಲ್ಲಾ ಕಾರಗೃಹದಿಂದ ಬಿಡುಗಡೆ ಎಚ್.ಬಿ.ನವಚೇತನ್, ಬೆಣಚಿಕೆರೆ ಲೋಕೇಶ್, ಎಚ್.ಎನ್.ಚೇತನ್, ಬಿ.ವಿ.ಆನಂದ್ ಅವರನ್ನು ಜೈಲು ಮುಂಭಾಗದಲ್ಲಿಯೇ ಸ್ವಾಗತ ಮಾಡಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಹೇಮಾವತಿ ಲಿಂಕ್ ಕೆ ನಾನು ವಿರೋಧಿ ಹೋರಾಟಗಾರರಿಗೆ ಬಿಜೆಪಿ ಶಾಸಕ ಸುರೇಶ್ ಗೌಡ ನೈತಿಕ ಸ್ಥೈರ್ಯ ತುಂಬಿದರು. ಹೋರಾಟಗಾರರ ಪರ ಉಚಿತವಾಗಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು ವಾದ ಮಂಡನೆ ಮಾಡಿದ್ದರು. ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರು ಸೇರಿ 13 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಐವರನ್ನು ಬಂಧಿಸಲಾಗಿತ್ತು. ಜೂನ್ 2 ರಂದು…
ಕೊರಟಗೆರೆ: ತುಮಕೂರು ಜಿಲ್ಲೆಯ ಹತ್ತು ತಾಲ್ಲೂಕು ಕಚೇರಿಗಳಿಗೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರಿಂದ ದಾಳಿ ನಡೆದಿದ್ದು, ಕೊರಟಗೆರೆ, ಮಧುಗಿರಿ, ಪಾವಗಡ, ಚಿಕ್ಕನಾಯಕನಹಳ್ಳಿ ಸೇರಿದಂತೆ ಹತ್ತು ತಾಲ್ಲೂಕು ಕಛೇರಿಗೆ ಲೋಕಾಯುಕ್ತರು ದಿಢೀರ್ ಭೇಟಿ ನೀಡಿದರು. ಲೋಕಾಯುಕ್ತ ನ್ಯಾಯಾಧೀಶರ ಆದೇಶದಂತೆ ತುಮಕೂರು ಲೋಕಾಯುಕ್ತ ಎಸ್ಪಿ ರವರ ಮಾರ್ಗದರ್ಶನದಂತೆ ದಿಢೀರ್ ಭೇಟಿ ನೀಡಲಾಗಿದೆ. ಹತ್ತು ತಂಡಗಳಾಗಿ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಹತ್ತು ತಾಲ್ಲೂಕು ಕಛೇರಿಗೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ 10:45 ಕ್ಕೆ ಸರಿಯಾಗಿ ತುಮಕೂರು ಲೋಕಾಯುಕ್ತ ಅಧಿಕಾರಿಗಳು ಕೊರಟಗೆರೆಯ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ತಹಶೀಲ್ದಾರ್ ಕೊಠಡಿ ಸೇರಿದಂತೆ ಎಲ್ಲಾ ಸಿಬ್ಬಂದಿಗಳ ಕೊಠಡಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕಚೇರಿ ಒಳಗಿನ ಶೌಚಾಲಯ, ಸಭಾಂಗಣ (ಮೀಟಿಂಗ್ ಹಾಲ್), ಸಕಾಲ ಕೇಂದ್ರ, ಪಹಣಿ ವಿತರಣೆ ಕೇಂದ್ರ, ಸಿಬ್ಬಂದಿಗಳ ಹಾಜರಾತಿ ಪರಿಶೀಲನೆ ನಡೆಸಲಾಯಿತು. ಬಗರ್ ಹುಕ್ಕುಂ ಸಾಗುವಳಿ ಕಡತಗಳ ಪರಿಶೀಲನೆ ಕೂಡ ಮಾಡಲಾಗಿದೆ. ಪರಿಶೀಲನೆ ವೇಳೆ ಕಚೇರಿಯ ಒಳಗೆ ಸಾರ್ವಜನಿಕರನ್ನು ಪ್ರವೇಶಿಸದಂತೆ ಕಚೇರಿಯ ಮುಖ್ಯ ದ್ವಾರವನ್ನು ಲೋಕಾಯುಕ್ತ…
ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನ ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಹಾಗೂ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಕಾರ್ಯಕ್ರಮದಡಿ ಸಹಾಯಧನ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ರೈತರು ಹಾಗೂ ಉದ್ದಿಮೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರಿಗೆ ಅಡಿಕೆ ಸುಲಿಯುವ ಯಂತ್ರ, ದೋಟಿ, ಬ್ರಷ್ಕಟರ್, ಟಿಲ್ಲರ್, ಪವರ್ ವೀಡರ್, ಸ್ಪ್ರೇಯರ್, ರೋಟೋವೇಟರ್, ಡಿಗ್ಗರ್ ಹಾಗೂ ಇತರೆ ಯಂತ್ರಗಳನ್ನು ಖರೀದಿಸಲು ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ/ಅತೀ ಸಣ್ಣ ಹಾಗೂ ಮಹಿಳಾ ರೈತರಿಗೆ ಶೇ.50ರಷ್ಟು ಹಾಗೂ ಸಾಮಾನ್ಯ, ಇತರೆ ವರ್ಗದ ರೈತರಿಗೆ ಶೇ. 40ರಷ್ಟು(ಗರಿಷ್ಠ 1.25 ಲಕ್ಷ ಅಥವಾ 5 ಯಂತ್ರೋಪಕರಣ ಮಾತ್ರ) ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಹಾಗೂ ಉದ್ದಿಮೆದಾರರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಬೆಳೆ ದೃಢೀಕರಣ, ಚೆಕ್ ಬಂದಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಜಾತಿ ಪ್ರಮಾಣ ಪತ್ರ (ಪ.ಜಾತಿ/ಪ.ಪಂಗಡ ರೈತರಿಗೆ) ಜಂಟಿ ಖಾತೆಯಿದ್ದರೆ ಒಪ್ಪಿಗೆ ಪತ್ರ, ಖಾತೆದಾರರ ಮರಣ ಹೊಂದಿದ್ದಲ್ಲಿ ಮರಣ…
ತುಮಕೂರು: ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ 2025–26ನೇ ಸಾಲಿನ ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು. ಪದವೀಧರರಿಗೆ ಹಾಗೂ ರಂಗಭೂಮಿಯಲ್ಲಿ ಆಸಕ್ತಿ/ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಪ್ರವೇಶಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯದೊಂದಿಗೆ ಕರ್ನಾಟಕ ಹಾಗೂ ಭಾರತದ ಖ್ಯಾತ ರಂಗತಜ್ಞರು/ ಅತಿಥಿ ಉಪನ್ಯಾಸಕರಿಂದ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ www.theatreschoolsanehalli.org ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಜೂನ್ 25ರೊಳಗೆ ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗಶಾಲೆ, ಸಾಣೇಹಳ್ಳಿ–577597, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ. 9448398144 / 8861043553ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಚಾರ್ಯರು…
ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು–ಶೈಕ್ಷಣಿಕ ನೇರಸಾಲ(ಹೊಸದು–ನವೀಕರಣ), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://www.kaushalkar.com ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 2ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸ. 080–22374848/ 7899899039 ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ…
ತುಮಕೂರು: ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆಗಳಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಮಂಗಳವಾರ ಹಮ್ಮಿಕೊಂಡಿದ್ದ ಸ್ನಾತಕೋತರ ವಿಭಾಗಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶಿಕ್ಷಣ ನಾಲ್ಕು ಗೋಡೆಗಳಿಗೆ ಮಾತ್ರ ಸೀಮಿತವಾಗಿರದೆ ಕ್ರೀಡೆಯಂತಹ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳುವಂತಿರಬೇಕು. ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಅತ್ಯವಶ್ಯಕವಾದ ದೈಹಿಕ ಚಟುವಟಿಕೆಯಾಗಿದ್ದು ಉತ್ತಮವಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಲು ಸಹಕಾರಿಯಾಗುತ್ತದೆ ಎಂದರು. ಈಗಿನ ಯುವಜನತೆಯಲ್ಲಿ ಧೈರ್ಯದ ಮನೋಭಾವ ಕಡಿಮೆಯಾಗಿದ್ದು, ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು. ಯಾವುದಕ್ಕೂ ಎದೆಗುಂದದೆ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಮೋಜು–ಮಸ್ತಿಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ದಿಕ್ಕು ತಪ್ಪುತ್ತಿರುವ ಯುವ ಸಮೂಹ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು. ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ. ಪರಶುರಾಮ ಕೆ. ಜಿ., ವಾಣಿಜ್ಯಶಾಸ್ತç ವಿಭಾಗದ ಅಧ್ಯಕ್ಷ ಪ್ರೊ. ಬಿ. ಶೇಖರ್,…
ತುಮಕೂರು: ತುಮಕೂರು ನಗರದ ವ್ಯಾಪ್ತಿಯನ್ನು ವಿಸ್ತರಿಸುವ ಸಂಬಂಧ 14 ಗ್ರಾಮ ಪಂಚಾಯಿತಿಗಳನ್ನು ನಗರ ವ್ಯಾಪ್ತಿಗೆ ಒಳಪಡಿಸುವ ಚಿಂತನೆಯ ಇಂಗಿತವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ವ್ಯಕ್ತಪಡಿಸಿದರು. ನಗರದ ಹೊರವಲಯ ಮೈದಾಳ ರಸ್ತೆಯಲ್ಲಿರುವ ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸ್ನಾತಕೋತ್ತರ ಮಹಿಳೆಯರ ವಿದ್ಯಾರ್ಥಿ ನಿಲಯಕ್ಕೆ ಮಂಗಳವಾರ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು ನಗರವನ್ನು ವಿಸ್ತರಿಸುವ ಪ್ರಸ್ತಾವನೆ ಸಿದ್ಧವಿದ್ದು, ಹಂತ ಹಂತವಾಗಿ ವಿಸ್ತರಣಾ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈಗಾಗಲೇ ಮನೆ ಕಟ್ಟಿಕೊಂಡು ವಾಸವಿರುವ ನಿವಾಸಿಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಅವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಸಮರ್ಪಕ ಕುಡಿಯುವ ನೀರು, ರಸ್ತೆ, ಒಳಚರಂಡಿ ವ್ಯವಸ್ಥೆಯಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಗರ ವಿಸ್ತರಣೀಕರಣದಿಂದ ನಾಗರಿಕರಿಗೆ ಮೂಲಭೂತ ಸೌಕರ್ಯಗಳು ತಲುಪುತ್ತವೆ ಎಂದು ತಿಳಿಸಿದರು. ಬಹು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರ ವ್ಯಾಪ್ತಿಯು ಈಗಾಗಲೇ ನೆಲಮಂಗಲದವರೆಗೂ ತಲುಪಿದ್ದು, ತುಮಕೂರನ್ನೂ ಸಹ ತಲುಪುವ ಸಾಧ್ಯತೆ…
ತುಮಕೂರು: ದೃಢನಿರ್ಧಾರ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಐಎಎಸ್ ನಂತಹ ಸಂಕೀರ್ಣ ಪರೀಕ್ಷೆಗಳಲ್ಲಿ ತೇರ್ಗಡೆಯಾಗಬಹುದು. ಈ ಪ್ರಕ್ರಿಯೆಯಲ್ಲಿ ಯಾವುದೇ ಸಣ್ಣಪುಟ್ಟ ಆಕರ್ಷಣೆಗಳಿಗೆ ಒಳಗಾಗಿ ದಾರಿತಪ್ಪಬಾರದು ಎಂದು ಬೆಂಗಳೂರಿನ ಇನ್ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ವಿನಯ್ ಕುಮಾರ್ ಜಿ.ಬಿ. ತಿಳಿಸಿದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ವೃತ್ತಿಮಾರ್ಗದರ್ಶನ ಮತ್ತು ನೇಮಕಾತಿ ಘಟಕವು ಮಂಗಳವಾರ ಹಮ್ಮಿಕೊಂಡಿದ್ದ ಕೇಂದ್ರ ಲೋಕ ಸೇವಾ ಆಯೋಗದ ಪರೀಕ್ಷೆಗಳ ಕುರಿತ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅನೇಕ ಗ್ರಾಮೀಣ ಯುವಕರು ಬಡತನದಲ್ಲೇ ಹುಟ್ಟಿರುತ್ತಾರೆ. ಆದರೆ ಬಡತನದಲ್ಲೇ ಜೀವನ ಕಳೆಯಬೇಕಾಗಿಲ್ಲ. ಅವರು ಐಎಎಸ್‌ನಂತಹ ಉನ್ನತ ಕನಸುಗಳನ್ನು ಕಟ್ಟಿಕೊಂಡು ನನಸಾಗಿಸಲು ದೃಢನಿರ್ಧಾರ ಮಾಡಬೇಕು. ಅಭಿವೃದ್ಧಿಶೀಲ ದೇಶ ಅಭಿವೃದ್ಧಿ ಹೊಂದಿದ ದೇಶವಾಗಿ ಬದಲಾಗಬೇಕಾದರೆ ಅವರ ಕೊಡುಗೆ ಮುಖ್ಯ ಎಂದರು. ಯುಪಿಎಸ್‌ಸಿ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಹಿಂದೆ ಯುವಕರು ದೆಹಲಿಯಂತಹ ದೂರದ ಪ್ರದೇಶಗಳಿಗೆ ಹೋಗಬೇಕಿತ್ತು. ಈಗ ಸಮೀಪದ ಬೆಂಗಳೂರಿನಲ್ಲೇ ಉತ್ಕೃಷ್ಟ ಸೌಲಭ್ಯಗಳಿವೆ. ಐಎಎಸ್ ಆಕಾಂಕ್ಷಿಗಳು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಜಿ.…