Subscribe to Updates
Get the latest creative news from FooBar about art, design and business.
- ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
- ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ, ಫುಟ್ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
- ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
- ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
- ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
- ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
- ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
- ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
Author: admin
ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು–ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್ ಎಂಎಸ್ ಅಲರ್ಟ್ ರವಾನಿಸಲಾಗುವುದು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕು.…
ತುಮಕೂರು: ಹೇಮಾವತಿ ಹೋರಾಟರರಿಗೆ ಜೈಲಿನಿಂದ ಬಿಡುಗಡೆ ಭಾಗ್ಯ ದೊರಕಿದ್ದು, ಐವರ ಪೈಕಿ ನಾಲ್ವರಿಗೆ ಗುಬ್ಬಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಎಚ್.ಬಿ.ನವಚೇತನ್, ಬೆಣಚಿಕೆರೆ ಲೋಕೇಶ್, ಎಚ್.ಎನ್.ಚೇತನ್, ಬಿ.ವಿ.ಆನಂದ್ ಅವರಿಗೆ ಜಾಮೀನು ದೊರಕಿದೆ. ಹೋರಾಟಗಾರರ ಪರ ಉಚಿತವಾಗಿ ತುಮಕೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆಂಪರಾಜು ವಾದ ಮಂಡನೆ ಮಾಡಿದರು. ಮೇ 31 ರಂದು ತುಮಕೂರಿನ ಗುಬ್ಬಿಯ ಸಂಕಾಪುರದಲ್ಲಿ ಹೇಮಾವತಿ ಕೆನಾಲ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪ್ರತಿಭಟನೆ ನಡೆಸಿದ ಶಾಸಕರು, ಸ್ವಾಮೀಜಿಗಳು, ರೈತ ಮುಖಂಡರು, ರೈತರು ಸೇರಿದಂತೆ 13 ಪ್ರತ್ಯೇಕ ಎಫ್ ಐಆರ್ ದಾಖಲಿಸಿಕೊಂಡು ಪೊಲೀಸರು ಹಲವರನ್ನ ಬಂಧಿಸಿದ್ದರು. ಜೂನ್ 2 ರಂದು ಐವರನ್ನ ಬಂಧಿಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಹೋರಾಟಗಾರರಿಗೆ ಜಾಮೀನು ಮಂಜೂರಾಗಿರುವ ಹಿನ್ನೆಲೆ ಬುಧವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯುಪಿಎಸ್ ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿAಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗದ ಪ್ರವರ್ಗ-1, 2ಎ, 3ಎ ಹಾಗೂ 3ಬಿಗೆ ಸೇರಿದ ಅರ್ಹ ವಿದ್ಯಾರ್ಥಿಗಳು ಜೂನ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಯಾವುದಾದರೊಂದು ಪದವಿ ಪಡೆದಿದ್ದು, ಕುಟುಂಬದ ವಾರ್ಷಿಕ ಆದಾಯ ಮಿತಿ 5 ಲಕ್ಷ ರೂ.ಗಳಾಗಿರಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ಗಳಿಸಿದ ಅಂಕ, ಪ್ರವರ್ಗ ಹಾಗೂ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://bcwd.Karnataka.gov.in ಅಥವಾ Sevasindhuservices.Karnataka.gov.in ಅಥವಾ ಸಹಾಯವಾಣಿ ಸಂಖ್ಯೆ 8050370006ನ್ನು ಸಂಪರ್ಕಿಸಬಹುದೆAದು ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸುಂಕಾಪುರಕ್ಕೆ ನಾಳೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ತುರುವೇಕೆರೆಯಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಾಳೆ ನಾನು ಕೂಡಾ ಅಲ್ಲಿಗೆ ಬರ್ತಿನಿ. ಹೋರಾಟಕ್ಕೆ ಯಾರೆಲ್ಲಾ ಸಹಕಾರ ಕೊಟ್ಟಿದ್ರು ಅವರೆಲ್ಲರೂ ನಾನು ಕೃತಜ್ಞತೆ ಹೇಳ್ತಿನಿ. ಹೋರಾಟಗಾರರ ಮೇಲೆ ಈಗ 13 ಎಫ್ ಐಆರ್ ಹಾಕಿದ್ದಾರೆ. 100 ಎಫ್ ಐಆರ್ ಗೆ ಇನ್ನು 87 ಖಾಲಿ ಇದೆ. ಹಾಕಿಕೊಳ್ಳಲಿ ಬಿಡಿ ನಾನು ಏನು ಬೇಡ ಅಂತೀನಾ ಎಂದರು. ಮೊನ್ನೆ ಎಸ್ ಪಿ, ಐಜಿ ಮುಂದೆ ಹೇಳಿದ್ದೇವೆ. ರೈತರದ್ದು, ಹಾಗೂ ಸ್ವಾಮೀಜಿಗಳ ಮೇಲೆ ಹಾಕಿರುವ ಎಫ್ ಐಆರ್ ತೆಗಿರಿ ಅಂತ. ನಮ್ಮದು ತೆಗಿರಿ ಅಂತ ನಾವು ಹೇಳಿಲ್ಲ, ನಾವು ಕೇಳೋದು ಇಲ್ಲ. ಸ್ವಾಮೀಜಿಗಳದ್ದನ್ನ ತೆಗಿತೀವಿ ಅಂತ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದಾರೆ. ಅದಕ್ಕೆ ಧನ್ಯವಾದ ಹೇಳ್ತಿನಿ ಎಂದರಲ್ಲದೇ ನಮ್ಮ ಮೇಲೆ ಎಷ್ಟು ಕೇಸ್ ಬೇಕಾದ್ರು ಹಾಕಿಕೊಳ್ಳಲಿ, ನಮ್ಮ ಹೋರಾಟ ನಿರಂತರವಾಗಿ…
ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ 2025–26ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ(PMKSY) ಯೋಜನೆಯಡಿ ಸೂಕ್ಷ್ಮ ಹನಿ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತು ಪಡಿಸಿ ಇತರೆ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಸಹಾಯಧನ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಅರ್ಜಿ ಆಹ್ವಾನಿಸಿದೆ. ಸದರಿ ಯೋಜನೆಯಡಿ ರೈತರಿಗೆ ನೀರಿನ ಸಮರ್ಪಕ ಬಳಕೆಯೊಂದಿಗೆ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ಪಡೆದು ಅವರ ಆರ್ಥಿಕ ಮಟ್ಟ ಸುಧಾರಿಸಲು ಸಹಕಾರಿಯಾಗಿರುತ್ತದೆ. ಹನಿ ನೀರಾವರಿ ಅಳವಡಿಕೆಗೆ ಪ್ರತೀ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂ ಬೆಳೆಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ನೀಡಲಾಗುತ್ತಿದ್ದು, ಎಲ್ಲಾ ವರ್ಗದ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಮೊದಲ 2 ಹೆಕ್ಟೇರ್ ಪ್ರದೇಶದವರೆಗೆ ಇತರೆ ವರ್ಗದ ರೈತರಿಗೆ(ಸಾಮಾನ್ಯ, ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವರ್ಗದ ರೈತರಿಗೆ(RD ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯ) ಶೇ.90ರಷ್ಟು ಮತ್ತು ನಂತರದ 3 ಹೆಕ್ಟೇರ್ ಪ್ರದೇಶದವರೆಗೆ ಎಲ್ಲಾ…
ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಅಟಲ್ ಭೂಜಲ್ ಯೋಜನೆಯಡಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೊಂಡಿರುವುದರಿಂದ ಜೂನ್ 11, 12, 13, 15ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ರಸ್ತೆ, ಪಿಎನ್‌ಆರ್ ಪಾಳ್ಯ, ಕುಪ್ಪೂರು ಹಾಗೂ ಹೊಸಕೆರೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಶಿವಮೊಗ್ಗ: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು. ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಆರೋಪಿ ನಂಬರ್ 1 ಆರ್ ಸಿಬಿ ಅಲ್ಲ. ಆರ್‌ಸಿಬಿ ಕೆಎಸಿಎ, ಡಿಎನ್‍ಎ ಅವರು ಕೂಡ ಆರೋಪಿಗಳೇ ಆಗಿದ್ದಾರೆ. ಮುಖ್ಯಮಂತ್ರಿಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂಬರ್ 3; ನಂತರದ ಹೊಣೆಗಾರರು ಆರ್‌ಸಿಬಿ, ಕೆಎಸಿಎ, ಡಿಎನ್ ಎ ಎಂದು ತಿಳಿಸಿದರು. ಕರ್ತವ್ಯನಿರತ ಹೈಕೋರ್ಟ್ ನ್ಯಾಯಮೂರ್ತಿಗಳಿಂದ…
ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಜೂನ್ 12ಕ್ಕೆ ಕರ್ನಾಟಕ ಹೈಕೋರ್ಟ್ ಮುಂದೂಡಿದೆ. ಮುಚ್ಚಿದ ಲಕೋಟೆಯಲ್ಲಿ ಉತ್ತರ ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರಿಗೆ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ವೇಳೆ, ಅಡ್ವೊಕೇಟ್ ಜನರಲ್ ಶೆಟ್ಟಿ, ‘ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ ಸಲ್ಲಿಸಿಲ್ಲ. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಅದು ವರದಿ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ವಾದಿಸಿದರು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಘಟನೆಯಲ್ಲಿ ಬಂಧಿತರಾಗಿರುವ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯೂ ಇಂದೇ ನಡೆಯಲಿದ್ದು, ಸೂಕ್ಷ್ಮ ಮಾಹಿತಿಯನ್ನು ಅರ್ಜಿದಾರರು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ, ಮುಚ್ಚಿದ ಲಕೋಟೆಯಲ್ಲಿ ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಅನುಮತಿ ಕೇಳಿದರು. ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ…
ತುಮಕೂರು: ವಕೀಲರು ಮತ್ತು ನ್ಯಾಯಾಧೀಶರು ನ್ಯಾಯಾಂಗವೆಂಬ ರಥದ ಎರಡು ಗಾಲಿಗಳು, ಕಿರಿಯ ವಕೀಲರಿಗೆ ನ್ಯಾಯಾಧೀಶರು ಸೂಕ್ತ ಕಾನೂನು ತಿಳುವಳಿಕೆ ನೀಡಿ ತಮ್ಮ ವೃತ್ತಿ ಪಥದಲ್ಲಿ ಯಶಸ್ವಿ ವಕೀಲರಾಗಿ ಬೆಳೆಯಲು ಸೂಕ್ತ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಬೇಕು, ಇಂದು ಜಿಲ್ಲಾ ನ್ಯಾಯಾಲಯದಲ್ಲಿ 1,900 ಜನ ವಕೀಲರಿದ್ದೇವೆ ದಿನೇ ದಿನೇ ವಕೀಲರ ಸಂಖ್ಯೆ,ನ್ಯಾಯಾಲಯಗಳ ಸಂಖ್ಯೆ ಹೆಚ್ಚುತ್ತಿದೆ, ಹಾಗೆಯೇ ಕೇಸುಗಳ ಸಂಖ್ಯೆಯು ಹೆಚ್ಚುತ್ತಿದೆ ಇದಕ್ಕೆ ಸೂಕ್ತ ಮತ್ತು ಅಗತ್ಯ ಮೂಲಭೂತ ಸೌಕರ್ಯಗಳು ಬೇಕು,ಇನ್ನು ಕೆಲವೇ ದಿನಗಳಲ್ಲಿ ವಕೀಲರ ಸಂಘದ 3ನೇ ಮಹಡಿಗೆ ಶಂಕುಸ್ಥಾಪನೆ ಆಗಲಿದೆ, ಹೊಸ ನ್ಯಾಯಾಲಯ ಕಟ್ಟಲು ಮಾನ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ರವರ ಮಾರ್ಗದರ್ಶನದಲ್ಲಿ ಕನಿಷ್ಠ 25 ಎಕರೆ ಜಮೀನು ನೀಡಲು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ,ಇದರ ಬಗ್ಗೆ ಲೋಕಾಯುಕ್ತರಲ್ಲಿ ಸಹ ಮನವಿ ಮಾಡಿದ್ದು ಅದಕ್ಕೆ ಜಿಲ್ಲಾಡಳಿತ ಸ್ಪಂದಿಸುವ ಭರವಸೆ ಇದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಹೆಚ್.ಕೆಂಪರಾಜಯ್ಯನವರು ತಿಳಿಸಿದರು. ಅವರು ಇಂದು ಜಿಲ್ಲಾ ವಕೀಲರ ಸಂಘದಲ್ಲಿ ನಡೆದ…
ತುಮಕೂರು: ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ದಿನಾಂಕ: 11.06.2025 ರಿಂದ 14.06.2025ರವರೆಗೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ 64.5 ರಿಂದ 204. 5ಮಿಮೀ ನಷ್ಟು ಭಾರಿ ಪ್ರಮಾಣದಲ್ಲಿ ಗುಡುಗು–ಸಿಡಿಲು ಸಹಿತ ಗಾಳಿ–ಮಳೆ ಇರುವ ಸಾಧ್ಯತೆಯಿರುವುದರಿಂದ ಜಿಲ್ಲೆಗೆ “ಆರೆಂಜ್ ಮತ್ತು ಯೆಲ್ಲೋ ಅಲರ್ಟ್” ಘೋಷಿಸಲಾಗಿದೆ. ಅದರಂತೆ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ತುಮಕೂರು ರವರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಲು ಈ ಕೆಳಗಿನಂತೆ ಸೂಚಿಸಿರುತ್ತಾರೆ. ಸಾರ್ವಜನಿಕ ಮನವಿ: ಸಿಡಿಲು ಸಹಿತ ಮಳೆಯಾಗುವುದರಿಂದ, ರಾಜ್ಯದಿಂದ ಸಿಡಿಲು ಬಡಿಯುವ ಪ್ರದೇಶದ ಸಾರ್ವಜನಿಕರಿಗೆ ಮುಂಚಿತವಾಗಿ ರವಾನಿಸುವ SMS Alert ನಂತೆ ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚು ಎಚ್ಚರದಿಂದಿರಬೇಕು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶದಲ್ಲಿರುವುದು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಹೊಂದಿರುವ ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರುವುದು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸದಿರಿ ಮಿಂಚು…