Subscribe to Updates
Get the latest creative news from FooBar about art, design and business.
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
- ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
- ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
- ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
- ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
- ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
Author: admin
ಬೀದರ್: ಆಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ. ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಪಟ್ಟಣದ ಪ್ರವಾಸಿ ಮಂದಿರದಿಂದ ಎಪಿಎಂಸಿ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯ ನೇತೃತ್ವ ವಹಿಸಿದ್ದ ಶಾಸಕರು ಧ್ವಜ ಹಿಡಿದು ಹೆಜ್ಜೆ ಹಾಕಿದರು. ಎಪಿಎಂಸಿ ಎದುರುಗಡೆಯ ಕನ್ನಾಡಾಂಬೆ ವೃತ್ತದಲ್ಲಿ ಸಾಮಾವೇಶ ನಡೆಯುವ ವೇಳೆ ಶಾಸಕರು ಕುಳಿತಲ್ಲೇ ನಿಶಕ್ತರಾದರು. ಶಾಸಕರು ಮೆರವಣಿಗೆಯಲ್ಲಿ ಕುಣಿದು ದುಡಿದಿದ್ದಾರೆ, ಹೀಗಾಗಿ ಸುಸ್ತಾಗಿ ತಲೆ ಸುತ್ತಿದೆ ಬೇರೆ ಏನೂ ಸಮಸ್ಯೆ ಇಲ್ಲ ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಶಾಸಕರ ಆಪ್ತರು ತಿಳಿಸಿದ್ದಾರೆ. ಯಾತ್ರೆಯಲ್ಲಿ ಬೀದರ್ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಸೇರಿದಂತೆ ಬಿಜೆಪಿ ಮುಖಂಡರು, ವಿವಿಧ ಮಠಾಧೀಶರ, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯದಿಂದ ತುಮಕೂರು ಜಿಲ್ಲೆಗೆ ಕುಡಿಯುವ ನೀರಿಗಾಗಿ ಪ್ರತಿದಿನ 1800 ಕ್ಯೂ ಸೆಕ್ಸ್ ನೀರು ಹರಿದು ಬರುತ್ತಿದೆ. ಹೀಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು , ತುಮಕೂರಿನ ಬುಗುಡನಹಳ್ಳಿ, ಕೆರೆಯಲ್ಲಿ ಸಂಗ್ರಹಿಸಲಾಗುತ್ತಿದೆ. ಮುಂದಿನ 10 ದಿನಗಳವರೆಗೆ ಇದೇ ರೀತಿ ಹೇಮಾವತಿ ಜಲಾಶಯದಿಂದ ನೀರು ಹರಿದು ಬರಲಿದ್ದು ಬುಗುಡನಹಳ್ಳಿ ಕೆರೆ ಸಂಪೂರ್ಣ ಭರ್ತಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಪರಮೇಶ್ವರ್ ಅವರ ಜೊತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ, ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಅಶ್ವಿಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬಳ್ಳಾರಿ: ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಸಂಡೂರು ತಾಲೂಕಿನ ಲಕ್ಷ್ಮಿಪುರ ಗ್ರಾಮದ ನಿವಾಸಿಗಳಾದ ಆಶಾ (28 )ಜಯಲಕ್ಷ್ಮಿ (21), ಒಬ್ಬ ಬಾಲಕ ಮತ್ತು ಬಾಲಕಿ ಅಪಘಾತದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಅದಿರು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಳಗಾವಿ: ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಮನೆಯ ಗೋಡೆ ಕುಸಿದು ಮೂರು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಕೃತಿಕಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆಕೆಯ ತಾಯಿ ರೇಷ್ಮಾ ಮತ್ತು ತಂಗಿ ಖುಷಿ ಗಾಯಗೊಂಡಿದ್ದಾರೆ. ಆದರೆ ಅವರು ಪ್ರಾಣಾಪಾಯದಿಂದ ಪಾರಾಗಿದ್ದು ಅವರನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 7.30 ರ ಸುಮಾರಿಗೆ ಮಹಾಲಿಂಗೇಶ್ವರ ನಗರದಲ್ಲಿ ಈ ಘಟನೆ ಸಂಭವಿಸಿದೆ. ಕೃತಿಕಾ ಮತ್ತು ಆಕೆಯ ಸಹೋದರಿ ಖುಷಿ ಮಲಗಿದ್ದಾಗ, ಭಾರೀ ಮಳೆಯ ಸಮಯದಲ್ಲಿ ಪಕ್ಕದ ಮನೆಯ ಗೋಡೆ ಕುಸಿದು ಅವರ ಮೇಲೆ ಬಿದ್ದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ವಿರುದ್ಧ ಹೋರಾಟ ಜೋರಾಗಿದ್ದು, ಮುಂದಿನ ಹೋರಾಟಕ್ಕೆ ಬಿಜೆಪಿ, ಜೆಡಿಎಸ್ ಶಾಸಕರು ಮಹತ್ವದ ಸಭೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳು, ಹಲವು ಜನ ಪರ ಸಂಘಟನೆಗಳ ಮುಖಂಡರು ಹಾಗೂ ವಿವಿಧ ಮಠಾಧೀಶರು ಹೋರಾಟದ ವಿರುದ್ಧ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ತುಮಕೂರಿನ ಮುರುಘರಾಜೇಂದ್ರ ಸಭಾ ಭವನದಲ್ಲಿ ಸಭೆ ನಡೆಯುತ್ತಿದ್ದು, ಬಿಜೆಪಿ ಶಾಸಕ ಜ್ಯೋತಿ ಗಣೇಶ್, ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿಶಂಕರ್, ಮುಖಂಡ ದಿಲೀಪ್ ಕುಮಾರ್ ಭಾಗಿಯಾಗಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವಾಷಿಂಗ್ಟನ್: ಉಕ್ರೇನ್ ವಿರುದ್ಧ ರಷ್ಯಾ ಮಾರಣಾಂತಿಕ ಡ್ರೋನ್ ದಾಳಿ ನಡೆಸಿರುವ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಲಾಡಿಮಿರ್ ಪುಟಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹುಚ್ಚ ಎಂದು ಕರೆದಿದ್ದಾರೆ. ಭಾನುವಾರ ರಾತ್ರಿ ಉಕ್ರೇನ್ ವಿರುದ್ಧ ರಷ್ಯಾ ಬೃಹತ್ ಡ್ರೋನ್ ದಾಳಿ ನಡೆಸಿದ್ದರಿಂದ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತಾಳ್ಮೆ ಕಳೆದುಕೊಳ್ಳುತ್ತಿರುವುದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದು, ರಷ್ಯಾದ ನಾಯಕನ ವಿರುದ್ಧ ತೀಕ್ಷ್ಣವಾಗಿ ಟೀಕೆಗಳನ್ನು ಮಾಡಿದ್ದಾರೆ. ಪುಟಿನ್ ಜೊತೆಗೆ ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅವರಿಗೆ ಏನೋ ಆಗಿದೆ. ಅವರು ಸಂಪೂರ್ಣವಾಗಿ ಹುಚ್ಚರಾಗಿದ್ದಾರೆ! ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಹಾಗೂ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿ ಉಂಟಾಗಿದೆ. ಸಂಗನಾಳ ಉದಗಿರ್ ರಸ್ತೆ ಮಳೆ ಅಬ್ಬರ ಕೊಚ್ಚಿ ಹೋಗಿದೆ. ರಸ್ತೆ ಸಂಗನಾಳ ನಡುವಿನ ಪ್ರಯಾಣ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ. ರಸ್ತೆ ದುರಸ್ತಿ ಮಾಡುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಔರಾದ್ ಗ್ರಾಮೀಣ ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಹರಿದೇವ್ ಸಂಗನಾಳ ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ವಿಜಯನಗರ ಜಿಲ್ಲೆ ಕೂಡ್ಲಿಗಿ: ಕ್ಷೇತ್ರದ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ರವರ ಇಚ್ಛಾಶಕ್ತಿಯ ಮೇರೆಗೆ ಪಟ್ಟಣ ಅಭಿವೃದ್ಧಿಯತ್ತ ಸಾಗುತ್ತಿದೆಯಾದರೂ, ರಾಜೀವ ಗಾಂಧಿನಗರ ಮಾತ್ರ ಅದಕ್ಕೆ ಹೊರತಾಗಿದೆ. ವಿದ್ಯುತ್ ಪರಿವರ್ತಕಗಳು ಪದೆ ಪದೇ ಸುಟ್ಟು ಕರಕಲಾಗುತ್ತಿದ್ದು, ಸಮರ್ಪಕವಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ವಿದ್ಯುತ್ ಸರಬರಾಜು ಕಂಪನಿಯ ನಿರ್ವಹಣೆ ತೀರಾ ಕಳಪೆಯದ್ದಾಗಿದ್ದು, ನಿರ್ಲಕ್ಷ್ಯ ಧೋರಣೆ ತಾಳಲಾಗಿದೆ ಎಂದು ರೈತ ಮುಖಂಡ ಕಾಲ್ಚಟ್ಟಿ ಕೃಷ್ಣಪ್ಪ ಹಾಗೂ ಕಾರ್ಮಿಕ ಮುಖಂಡ ಗುನ್ನಳ್ಳಿ ರಾಘವೇಂದ್ರ ದೂರಿದ್ದಾರೆ. ಕಳೆದ ತಿಂಗಳಿಂದ ನಿರಂತರವಾಗಿ ವಿದ್ಯುತ್ ಕೊರತೆ ಕಾಡುತ್ತಿದೆ , ವರ್ಷದ ಹಿಂದೆ ಜಿಲ್ಲಾಧಿಕಾರಿಗಳು ಜನಸ್ಪಂದನ ಸಂದರ್ಭದಲ್ಲಿ ಬಂದಿದ್ದರು. ಪರಿಶೀಲಿಸಿದರು ಅಹವಾಲು ಆಲಿಸಿದರು ಹೋದರು. ಆದರೆ ದುಸ್ಥಿತಿ ಸಂಪೂರ್ಣ ಸುಧಾರಿಸಿಲ್ಲ , ಪಟ್ಟಣ ಪಂಚಾಯ್ತಿಯಿಂದ ನಿರಂತರ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ, ಆರಂಭಗೊಂಡ ಮಿನಿ ಪೊಲೀಸ್ ಠಾಣೆ ಆರೋಗ್ಯ ಕೇಂದ್ರಗಳು. ಹಲವು ವರ್ಷಗಳಿಂದ ತ್ಯಾಜ್ಯವಸ್ತುಗಳ ಗೋದಾಮಾಗಿದ್ದು, ಶೀಘ್ರವೇ ಪುನಃ ಆರಂಭಿಸಬೇಕಿದೆ. ಪೊಲೀಸ್ ಠಾಣೆ ಹಾಗೂ ಸಾರ್ವಜನಿಕೆ ಆಸ್ಪತ್ರೆಗಳು , ಸುಮಾರು ಒಂದೂವರಿಗೆ ಕಿ.ಮೀ.…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದೆ. ಮೇ 28ರಂದು ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರಿಗಾಳಿ ಸಹಿತ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40–60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ. ಇಂದಿನವರೆಗೆ ಧಾರವಾಡ ಮತ್ತು ಬೆಳಗಾವಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗುರುವಾರದಿಂದ ಹವಾಮಾನ ಪರಿಸ್ಥಿತಿಗಳು ಸರಾಗವಾಗಲಿದ್ದು, ರಾಜ್ಯದಲ್ಲಿ ಎಲ್ಲಿಯೂ ಯಾವುದೇ ರೆಡ್ ಅಲರ್ಟ್‌ಗಳನ್ನು ನೀಡಲಾಗಿಲ್ಲ, ಆದರೆ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳಭಾಗಗಳಿಗೆ ಮಾತ್ರ ಆರೆಂಜ್ ಮತ್ತು ಯೆಲ್ಲೂ ಅಲರ್ಟ್‌ಗಳನ್ನು ನೀಡಲಾಗಿದೆ. ಬೆಂಗಳೂರು, ಮಂಡ್ಯ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಂಗಳವಾರ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು,…
ಬೆಂಗಳೂರು: ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗೇಟ್ ಸಮೀಪ ನಡೆದಿದೆ. ಘಟನೆ ಸಂಬಂಧ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಯಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಜನ್ಮ ದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದ ತಂಡ ದಾಳಿ ನಡೆಸಿ, ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ. ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. 24 ಯುವಕರು, 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…