Subscribe to Updates
Get the latest creative news from FooBar about art, design and business.
- ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
- ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ, ಫುಟ್ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
- ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
- ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
- ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
- ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
- ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
- ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
Author: admin
ತುಮಕೂರು: ಜಿಲ್ಲೆಯಾದ್ಯಂತ 13 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 9 ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ–3 ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಜೂನ್ 9 ರಿಂದ 20ರವರೆಗೆ ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್, ಇತರೆ ಸಾಮಾಜಿಕ ಜಾಲತಾಣಗಳ ಮೂಲಕ…
ತುಮಕೂರು: ಹವಾಮಾನ ವೈಪರೀತ್ಯಗಳಿಂದಾದ ಬೆಳೆ ಹಾನಿಯಿಂದ ರೈತರಿಗಾಗುವ ಆರ್ಥಿಕ ನಷ್ಟವನ್ನು ನಿವಾರಿಸಲು ಅನುಷ್ಠಾನ ಮಾಡಲಾಗಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಜೂನ್ 30ರವರೆಗೂ ಅವಕಾಶ ಕಲ್ಪಿಸಲಾಗಿದೆ. ವಿಮಾ ಯೋಜನೆಯ ಅನುಷ್ಠಾನ ಏಜೆನ್ಸಿಯಾಗಿ ಓರಿಯಂಟಲ್ ಇನ್ಸೂರೆನ್ಸ್ ಸಂಸ್ಥೆಯನ್ನು ನಿಗಧಿಪಡಿಸಲಾಗಿದೆ. ಈ ವಿಮಾ ಯೋಜನೆಗೆ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಎಳ್ಳು ಮತ್ತು ಹತ್ತಿ ಬೆಳೆಗಳನ್ನು ಜೂನ್ 30ರೊಳಗಾಗಿ ನೋಂದಾಯಿಸಬೇಕೆಂದು ರೈತರಲ್ಲಿ ಮನವಿ ಮಾಡಲಾಗಿದೆ. ಬೆಳೆಗಳನ್ನು ವಿಮಾ ಯೋಜನೆಗೊಳಪಡಿಸಲು ಪ್ರತಿ ಎಕರೆಗೆ ಹೆಸರು ಬೆಳೆಗೆ 269.13 ರೂ., ಉದ್ದು–265.08 ರೂ., ಎಳ್ಳು–232.70 ರೂ., ಹತ್ತಿ(ಮಳೆಯಾಶ್ರಿತ)–1006.69 ರೂ. ಹಾಗೂ ಹತ್ತಿ(ನೀರಾವರಿ)–1492.33 ರೂ.ಗಳ ವಿಮಾ ಕಂತನ್ನು ಹತ್ತಿರದ ಬ್ಯಾಂಕ್/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಾವತಿಸುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಸರಗೂರು: ತಾಲೂಕಿನ ಎಂಎಂಕೆ ಕಾಲೇಜಿನಲ್ಲಿ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಶುಕ್ರವಾರ ದಂದು ಆಚರಿಸಲಾಯಿತು. ಪರಿಸರ ಸಂರಕ್ಷಣೆಯನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುಂಬ ಸೊಗೆ ಗ್ರಾಮಕ್ಕೆ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಜಾಥಾ ಮೂಲಕ ಪೋಷಕರಲ್ಲಿ ಜಾಗೃತಿಯನ್ನು ಮಾಡಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗರಹೊಳೆ ವನ್ಯಜೀವಿ ಅರಣ್ಯ ಅಧಿಕಾರಿ ರಶ್ಮಿರವರು ಮಾತನಾಡಿ ಪರಿಸರ ಮತ್ತು ಜೀವವೈವಿಧ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರವಾಗಿ ವಿವರಿಸಿದರು. ಪರಿಸರದ ಮಾಲಿನ್ಯದಿಂದ ಜೀವವೈವಿಧ್ಯ ನಶಿಸುತ್ತಿದೆ. ಹಾಗೆ ಪರಿಸರದ ನಾಶ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ತಾಪಮಾನ ಹೆಚ್ಚಾಗುತ್ತಿರುವುದು ಪರಿಸರವನ್ನು ಹಾಳು ಮಾಡುತ್ತಿರುವುದು ಕಾರಣ ಇದರಿಂದ ಮನುಷ್ಯ ಕಾಯಿಲೆಗಳಿಗೆ ಗೊತ್ತಾಗುತ್ತೆನೆ ಹಾಗೂ ಪ್ಲಾಸ್ಟಿಕ್ ನ ಅತಿಯಾದ ಬಳಕೆ ಅದರ ಉತ್ಪಾದನೆ ಉಪಯೋಗ ಎಲ್ಲವೂ ಮನುಷ್ಯನಿಂದಲೇ ಆಗಿದೆ. ಅದನ್ನು ಮರುಬಳಕೆ ಮಾಡದೆ ಪರಿಸರದಲ್ಲೇ ಉಳಿಯುತ್ತಿರುವುದು ಅದು ಭೂಮಿಯಲ್ಲಿ ಕೊಳೆಯದೆ ಹಾಗೂ ಕರಗದ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಹಾಗಾಗಿ ಪ್ಲಾಸ್ಟಿಕ್…
ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಹಲವಾರು ಜನರು ಗಾಯಗೊಂಡ ಘಟನೆಯ ಬಳಿಕ ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಗಮಿತ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಚೆನ್ನೈ: ನಟ, ರಾಜಕಾರಣಿ ಕಮಲ್ ಹಾಸನ್ ಡಿಎಂಕೆ ಬೆಂಬಲದೊಂದಿಗೆ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಮುಂದಿನ ಸೋಮವಾರದವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಕಮಲ್ ಹಾಸನ್ ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್ ಎಂ) ಪಕ್ಷಕ್ಕೆ ನೀಡಲು ನಿರ್ಧರಿಸಿದೆ. ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದರು. ಕಮಲ್ ಹಾಸನ್ 2018 ರಲ್ಲಿ ರಾಜಕೀಯ ಪ್ರವೇಶಿಸಿದರು, ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ಹಾಸನ್ ಅವರ ಪಕ್ಷಕ್ಕೆ ಒಂದು ಸ್ಥಾನವನ್ನು ನೀಡಲು ನಿರ್ಧರಿಸಿದೆ ಎಂದು ಹೇಳಿದ್ದರು. 2024ರ ಲೋಕಸಭಾ ಚುನಾವಣೆಗೆ ಮೊದಲು ಎರಡೂ ಪಕ್ಷಗಳ ನಡುವೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ 1.5 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರೇಂದ್ರ ಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ‘ಸ್ಕೆಚ್ ಸಿದ್ಧಪಡಿಸಲು’ ಮತ್ತು ಅದಕ್ಕೆ ಅನುಮೋದನೆ ನೀಡಲು ಆರೋಪಿ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ದೂರುದಾರ ರವಿ ಆರೋಪಿಸಿದ ನಂತರ ಲೋಕಾಯುಕ್ತ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಆರೋಪಿ ಸರ್ಕಾರಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಹೆಚ್.ಡಿ.ಕೋಟೆ : ಕೃಷ್ಣಾಪುರ ಗ್ರಾಮದ ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರು ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಗೌರವಾಧ್ಯಕ್ಷರು ಮತ್ತು ಡಿಸಿಸಿ ಸದಸ್ಯರು ಹಾಗೂ ತಂಬಾಕು ಮಂಡಳಿಯ ಸದಸ್ಯ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರರ ಪರಶಿವಮೂರ್ತಿ ಕೃಷ್ಣಾಪುರ ಅವರ ಹುಟ್ಟುಹಬ್ಬವನ್ನು ಮಾತಂಗ ಜನಜಾಗೃತಿ ವೇದಿಕೆ ಸೇರಿದಂತೆ ಅಭಿಮಾನಿಗಳು ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪಟಾಕಿ ಸಿಡಿಸಿ ಕೇಕ್ ಕತ್ತರಿಸಿ ಕೃಷ್ಣಾಪುರ ಸರ್ಕಲ್ ಬಳಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು. ನಂತರ ಹುಟ್ಟುಹಬ್ಬ ಕುರಿತು ನಾಗನಹಳ್ಳಿ ಪ್ರದೀಪ್, ಎಡತೊರೆ ಚೆಲುವರಾಜು, ಮಾತಂಗ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರವೀಶ್, ಉಪಾಧ್ಯಕ್ಷ ವಿನೋದ್ ಪ್ರಸಾದ್ ಕೆಟಿಎಸ್, ಕೊತ್ತೇಗಾಲ ಮಹದೇವು, ಕಲ್ಲಟ್ಟಿ ನಾಗೇಶ್, ವನಸಿರಿ ಶಂಕರ್ ಅವರು ಹುಟ್ಟು ಹಬ್ಬ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಸಿ.ಮಂಜುನಾಥ್, ಕರವೇ ಸತೀಶ್ ಗೌಡ, ಉಡ ನಾಗರಾಜ್, ಗುತ್ತಿಗೆದಾರ ಮಹೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್, ಮಲಾರ ಶಿವಣ್ಣ, ಕಳಸೂರು…
ಬೆಂಗಳೂರು: ಆರ್ ಸಿಬಿ (RCB) ಐಪಿಎಲ್ ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ವಿಧಾನಸೌಧದ ಎದುರು ನಡೆಸುವಂತೆ ಕರೆ ಕೊಟ್ಟಿದ್ದೇ ಸರ್ಕಾರ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆರೋಪಿಸಿದೆ ಎಂದು ವರದಿಯಾಗಿದೆ. ಕರ್ನಾಟಕ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ವಿಧಾನಸೌಧ ಗ್ರ್ಯಾಂಡ್ ಸ್ಟೆಪ್ಸ್ ವೇದಿಕೆಯಲ್ಲಿ ಆಟಗಾರರನ್ನು ಸನ್ಮಾನಿಸಿದ್ದಾರೆ. ಸರ್ಕಾರ, ಸಚಿವರ ಮೇಲಿನ ಜನರ ಆಕ್ರೋಶದ ಹಾದಿ ತಪ್ಪಿಸಲು ಎಫ್ ಐಆರ್ ದಾಖಲಿಸಲಾಗಿದೆ ಎಂದು ರಿಟ್ ಅರ್ಜಿಯಲ್ಲಿ ಕೆಎಸ್ ಸಿಎ ಉಲ್ಲೇಖಿಸಿದೆ. ಘಟನೆಯ ಹೊಣೆಯನ್ನು ಕೆಎಸ್ ಸಿಎ ಮೇಲೆ ಹೊರಿಸಲು ಯತ್ನಿಸಲಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜನದಟ್ಟಣೆ ನಿರ್ವಹಣೆ ಆರ್ ಸಿಬಿ ಹಾಗೂ ಪೊಲೀಸರ ಕರ್ತವ್ಯ. ಕರ್ನಾಟಕದ ಕ್ರಿಕೆಟ್ ನಿಯಂತ್ರಣವಷ್ಟೇ ಕೆಎಸ್ ಸಿಎ ಜವಾಬ್ದಾರಿ ಎಂದು ಸಂಸ್ಥೆ ಹೇಳಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಬೆಂಗಳೂರಿನಲ್ಲಿ ಆರ್ ಸಿ ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹೊಣೆಗೇಡಿತನದಿಂದ ನಡೆದುಕೊಂಡಿದೆ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಟೌನ್ ಹಾಲ್ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕ ರವಿ ನೇತೃತ್ವದಲ್ಲಿ ಜಮಾಯಿಸಿದ ಬಿಜೆಪಿ ಪಕ್ಷದ ಕಾರ್ಯಕರ್ತರು, ಸರ್ಕಾರ ತನ್ನ ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳನ್ನು ಅಮಾನತು ಮಾಡುವಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಆರ್ ಸಿಬಿ ವಿಜಯೋತ್ಸವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ್ದರೂ ಅದನ್ನು ಲೆಕ್ಕಿಸದೆ ಸರ್ಕಾರ ಕಾರ್ಯಕ್ರಮ ಆಯೋಜಿಸಿದ್ದು ದುರಂತಕ್ಕೆ ಕಾರಣವಾಗಿದೆ ಎಂದು ದೂರಿದರು. ಸಿಎಂ ಭಾವಚಿತ್ರಕ್ಕೆ ಬೆಂಕಿ: ಬೆಂಗಳೂರಿನಲ್ಲಿ ನಡೆದ ಘಟನೆಯಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ಆರೋಪಿಸಿ ತುಮಕೂರು ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಭಾವಚಿತ್ರಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ…
ಬಾಗೇಪಲ್ಲಿ: ತಾಲೂಕಿನ ಗೋಳೂರು ವಲಯ ವ್ಯಾಪ್ತಿಗೆ ಬರುವ ನಲ್ಲಪ್ಪ ರೆಡ್ಡಪಲ್ಲಿ ಕಾರ್ಯಕ್ಷೇತ್ರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ, (ಬಿ ಸಿ) ಟ್ರಸ್ಟ್ ವತಿಯಿಂದ ವಿಶ್ವ ಪರಿಸರ ಆಚರಣೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಗಂಗುಲಪ್ಪ, ಮಾಜಿ ಗ್ರಾ.ಪಂ. ಸದಸ್ಯರಾದ ಚೌಡಪ್ಪ, ವಲಯದ ಮೇಲ್ವಿಚಾರಕರಾದ ಅರುಣ, ಒಕ್ಕೂಟ ಪದಾಧಿಕಾರಿಗಳು ಸಂಘದ ಸದಸ್ಯರು ಸೇವಾ ಪ್ರತಿನಿಧಿ ನಾಗಮಣಿ ಶಾಲೆಯ ಮುಖ್ಯ, ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————