Author: admin

ಸರಗೂರು:  ತಾಲೂಕಿನ ಹೆಗ್ಗನೂರು ಗ್ರಾಮದ ಜಮೀನಿನಲ್ಲಿ ಗುರುವಾರದಂದು ಅರಣ್ಯ ಇಲಾಖೆ ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದು, ಡ್ರೋನ್ ಕಾಮರಾದಲ್ಲಿ ಹುಲಿ ಹೆಜ್ಜೆ ಗುರುತು ಹಾಗೂ ಹುಲಿ ಕಾಣಿಸಿಕೊಂಡಿಲ್ಲ. ಸರಗೂರು ವಲಯದ ಪ್ರದೇಶ ವ್ಯಾಪ್ತಿಯ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಗ್ಗನೂರು ಗ್ರಾಮದ ಜಮೀನಿನಲ್ಲಿ ಅರಣ್ಯ ಇಲಾಖೆ ಸಾಕಾನೆಗಳಾದ ಪ್ರಶಾಂತ್, ಲಕ್ಷಣ, ಆನೆಗಳ ಸಹಾಯದಿಂದ ಕಾರ್ಯಾಚರಣೆ ಮುಂದುವರಿದಿದೆ. ಡ್ರೋನ್ ಕ್ಯಾಮರಾದಲ್ಲಿ ಗುರುತು ಮತ್ತು ಹುಲಿ  ಸೆರೆಯಾಗಿಲ್ಲ. ಕಾರ್ಯಾಚರಣೆ ಮುಂದುವರಿದಿದೆ ಎಂದು ಸರಗೂರು ವಲಯದ  ಆರ್‌ ಎಫ್‌ ಓ ಅಕ್ಷಯ್ ಕುಮಾರ್ ತಿಳಿಸಿದ್ದಾರೆ. ನಂತರ ಮಾತನಾಡಿದ ಗ್ರಾಮಸ್ಥರ ಮಾಹಿತಿ ಪ್ರಕಾರ, ಜಮೀನಿನಲ್ಲಿ ಹುಲಿ  ಮೇಕೆ ಮರಿ ಮತ್ತು ದನದ ಕರುಗಳನ್ನು ಹೊತ್ತೊಯ್ದು ತಿಂದಿರುವ ಜಾಗದಲ್ಲಿ ಕೂಂಬಿಂಗ್ ಮಾಡಿದ್ದೇವೆ ಪತ್ತೆಯಾಗಿಲ್ಲ.  ಹುಲಿ ದಾಳಿ ಮಾಡಿದೆ ಎಂದು ಗ್ರಾಮಸ್ಥರು ಗಮನಕ್ಕೆ ಬಂದ ಕೂಡಲೇ ನಮ್ಮ ಸಿಬ್ಬಂದಿಗಳು ಸ್ಥಳಕ್ಕೆ ಕಳಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಒಂದೆರಡು ದಿನ ಕಾಲ ಜಿಪ್ ನಲ್ಲಿ ಬಿಟ್ ಹಾಕಿದ್ದೆವು. ಹುಲಿಯ ಚಲವನ…

Read More

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ತಿಮ್ಮಕ್ಕ ಕೊನೆಯುಸಿರೆಳೆದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ 1911 ಜೂನ್‌ 30ರಂದು ಜನಿಸಿದ್ದ  ಅವರು, ವೃಕ್ಷಮಾತೆ ಎಂದೇ ಪ್ರಸಿದ್ಧಿ ಪಡೆದಿದ್ದರು. ಮಾಗಡಿ ತಾಲೂಕಿನ ಚಿಕ್ಕಯ್ಯ ಅವರನ್ನು ವಿವಾಹವಾಗಿದ್ದ ತಿಮ್ಮಕ್ಕ, ಅವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು.  ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ತಿಮ್ಮಕ್ಕ ಅವರ ಮಹತ್ತರ ಸಾಧನೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಪ್ರಶಸ್ತಿ ನೀಡಿ ಸನ್ಮಾನಿಸಿವೆ. ರಾಜ್ಯೋತ್ಸವ ಪ್ರಶಸ್ತಿ, ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ, 2010ನೇ ಸಾಲಿನ ಪ್ರತಿಷ್ಠಿತ ‘ನಾಡೋಜ’ ಪ್ರಶಸ್ತಿ ಸೇರಿ 2019ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರಶಸ್ತಿಗೂ ಇವರು ಪಾತ್ರರಾಗಿದ್ದಾರೆ. 2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ತಿಮ್ಮಕ್ಕನವರಿಗೆ ಗೌರವ ಡಾಕ್ಟರೇಟ್…

Read More

ತುಮಕೂರು: ನವದೆಹಲಿಯಲ್ಲಿ ಸಂಭವಿಸಿದ ಕಾರು ಸ್ಫೋಟದ ಹಿನ್ನೆಲೆಯಲ್ಲಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬನ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ನಗರದ ತಿಲಕ್ ಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಪಿ.ಎಚ್.ಕಾಲೋನಿ ನಿವಾಸಿ ಮುಜಾಯುದ್ದೀನ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದರು. ದೆಹಲಿ ಬಾಂಬ್‌ ಸ್ಫೋಟಕ್ಕೂ, ಈತನಿಗೂ ಯಾವುದೇ ಸಂಬಂಧ ಇಲ್ಲದ ಕಾರಣಕ್ಕೆ ವಿಚಾರಣೆ ನಂತರ ಬಿಟ್ಟು ಕಳುಹಿಸಿದ್ದಾರೆ ಎಂದು ವರದಿ ತಿಳಿಸಿದೆ. ಕಲಿಫತ್‌ ಉಗ್ರ ಸಂಘಟನೆಯೊಂದಿಗೆ ಮುಜಾಯುದ್ದೀನ್ ಗುರುತಿಸಿಕೊಂಡಿದ್ದ. ನಗರದಲ್ಲಿ ಸಭೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ್ದ ಎನ್‌ ಐಎ ತಂಡ ಆತನನ್ನು ಬಂಧಿಸಿ ತಿಹಾರ್ ಜೈಲಿಗೆ ಕಳುಹಿಸಿತ್ತು. ಆರು ತಿಂಗಳು ಶಿಕ್ಷೆ ಅನುಭವಿಸಿ ಹೊರ ಬಂದಿದ್ದ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ತಾಲ್ಲೂಕಿನ ಕಸಬಾ ಹೋಬಳಿ ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗ್ರಾ.ಪಂ. ಅಧ್ಯಕ್ಷೆ ರಂಗಮ್ಮ ರಾಜಣ್ಣ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಅಮೃತ ಮಂಜುನಾಥ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ನೂತನ ಗ್ರಾ.ಪಂ. ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಅಧಿಕೃತ ಘೋಷಣೆ ಮಾಡಿದರು. ಗ್ರಾ.ಪಂ. ನೂತನ ಅಧ್ಯಕ್ಷೆ ಅಮೃತ ಮಂಜುನಾಥ್ ಮಾತನಾಡಿ, ರಾಜ್ಯದ ಗೃಹ ಸಚಿವರು ಮತ್ತು ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್‌ ರವರ ಆಶೀರ್ವಾದದಿಂದ ಮತ್ತು ಹುಲಿಕುಂಟೆ ಗ್ರಾ.ಪಂ. ಎಲ್ಲಾ ಸದಸ್ಯರು ಪಕ್ಷಭೇದ ಮರೆತು ಅಧ್ಯಕ್ಷರಾಗಿ ನನ್ನನ್ನು ಅವಿರೋಧ ಆಯ್ಕೆ ಮಾಡಿದ್ದಾರೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡುವುದಾಗಿ ತಿಳಿಸಿದರು. ಜೆಡಿಎಸ್ ಅಧ್ಯಕ್ಷ ಕಾಮರಾಜು ಮಾತನಾಡಿ, ಹುಲಿಕುಂಟೆ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಅಮೃತ ಮಂಜುನಾಥ್ ಅವರಿಗೆ ಅಭಿನಂದನೆಗಳು. ಎಲ್ಲಾ ಗ್ರಾಮಗಳಿಗೆ ಸರ್ಕಾರದ ಪ್ರತಿ ಸೌಲಭ್ಯವನ್ನು…

Read More

ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಕಸಬಾ ಹೋಬಳಿಯ ವಡ್ಡಗೆರೆ ಗ್ರಾಪಂ ವ್ಯಾಪ್ತಿಯ ಚೀಲಗಾನಹಳ್ಳಿಯಿಂದ ಯಾದಗೆರೆಗೆ ಹೋಗುವ ಹಳ್ಳದ ಸಮೀಪದಲ್ಲಿ ಎರಡು ಚಿರತೆಗಳು ಕಾದಾಟ ಆಡಿ ಎರಡು ವರ್ಷದ ಗಂಡು ಚಿರತೆಯ ಬಾಯಲ್ಲಿ ತೀವ್ರ ರಕ್ತಸ್ರಾವದಿಂದ ನರಳಾಡುತ್ತಿದ್ದ ಚಿರತೆಯನ್ನ ಕಂಡು ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆಯ ಚಲನವಲನವನ್ನ ಪರೀಕ್ಷಿಸಿದಾಗ ಚಿರತೆ ಮೃತಪಟ್ಟಿರುವುದು ದೃಡವಾಗಿದೆ. ಮೃತ ಚಿರತೆಯನ್ನ ಮರಣೋತ್ತರ ಪರೀಕ್ಷೆ ಮಾಡಿ ಮೇಲಾಧಿಕಾರಿಗಳ ಆದೇಶದಂತೆ ಅಗತ್ಯ ಕ್ರಮವಹಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಅರಣ್ಯ ಅಧಿಕಾರಿಗಳು ಹಾಜರಿದ್ದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ : ಇತ್ತೀಚಿಗೆ ನಡೆದ ತುಮಕೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಕೊರಟಗೆರೆಯ ಮೂವರು ಪತ್ರಕರ್ತರು ಜಿಲ್ಲಾ ಸಂಘಕ್ಕೆ ಆಯ್ಕೆಯಾಗಿದ್ದು, ಕೊರಟಗೆರೆ ತಾಲೂಕು ಸಂಘ ಅಭಿನಂದನೆ ಸಲ್ಲಿಸಿದ್ದಾರೆ. ನ. 9ರಂದು ತುಮಕೂರು ಪತ್ರಕರ್ತರ ಭವನದಲ್ಲಿ ನಡೆದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯಲ್ಲಿ ಕೊರಟಗೆರೆ ತಾಲೂಕು ಸಂಘದ ಹಾಲಿ ಅಧ್ಯಕ್ಷ ಕೆ.ವಿ. ಪುರುಷೋತ್ತಮ್, ರಂಗಧಾಮಯ್ಯ, ಯಶಸ್.ಕೆ.ಪದ್ಮನಾಭ್, ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ರಂಗಧಾಮಯ್ಯ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿ 204 ಮತಗಳನ್ನ ಪಡೆದು ಜಯಶೀಲರಾಗಿದ್ದು, ಇನ್ನೂರ್ವ ಸ್ಪರ್ಧಿ ಯಶಸ್.ಕೆ. ಪದ್ಮನಾಬ್ ಅವರು 159  ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಇನ್ನೂ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಕೆ.ವಿ.ಪುರುಷೋತ್ತಮ್ ಅವರು 190 ಮತಗಳನ್ನ ಪಡೆದು ಜಯಶೀಲರಾಗಿ ಕೊರಟಗೆರೆ ತಾಲ್ಲೂಕು ಸಂಘಕ್ಕೆ ಹೆಸರು ತಂದಿದ್ದು, ಕೊರಟಗೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೂವರಿಗೆ ಅಭಿನಂದನೆಗಳನ್ನ ತಿಳಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಸರಗೂರು: ತಾಲೂಕಿನ ಕೋಡಂಬಹಳ್ಳಿ ಗ್ರಾಮದ ರೈತರ ಬಾಳೆ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು ಲಕ್ಷಾಂತರ ರೂ. ಮೌಲ್ಯದ ಬೆಳೆಯನ್ನು ನಾಶ ಮಾಡಿವೆ. ತಾಲೂಕಿನ ಹೂವಿನಕೊಳ ಗ್ರಾಮದ ಜವರಯ್ಯ ಎಂಬುವರ ಜಮೀನಿನಲ್ಲಿ 3 ಎಕರೆ ಜಮೀನು  ಬಾಳೆ ಬೆಳೆದು ಆನೆ ಹಾವಳಿ ಹೆಚ್ಚಾಗಿದ್ದು ಸಂಪೂರ್ಣ ನಾಶ ಮಾಡಿರುವ ಘಟನೆ ಸೋಮವಾರ  ರಾತ್ರಿ ನಡೆದಿದೆ. ಕಾಡಾನೆ ಹಿಂಡು ಬಾಳೆ ತೋಟ ನಾಶಪಡಿಸಿವೆ ಎಂದು ರೈತ ಜವರಯ್ಯ ಅಳಲು ತೋಡಿಕೊಂಡರು ಇನ್ನು 15 ದಿನದಲ್ಲಿ ಕಟಾವಿಗೆ ಬಂದಿದ್ದ 500 ಬಾಳೆ ಗಿಡಗಳನ್ನು ಕಾಡಾನೆಗಳು ನಾಶ ಮಾಡಿವೆ. ಸುಮಾರು ₹5 ಲಕ್ಷದಷ್ಟು ನಷ್ಟವಾಗಿದೆ ಎಂದು ತೋಟದ ಮಾಲಿಕ ಜವರಯ್ಯ ತಿಳಿಸಿದ್ದಾರೆ. ಗ್ರಾಮದಲ್ಲಿ ಐದಾರು ಆನೆಗಳ ಹಿಂಡಿದ್ದು ಎರಡು ಆನೆ ಮಾತ್ರ ತೋಟಕ್ಕೆ ನುಗ್ಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರುತ್ತಿಲ್ಲ ಎಂದು ಆರೋಪಿಸಿದರು. ವರ್ಷ ಪೂರ್ತಿ ಹಗಲು ರಾತ್ರಿ ದುಡಿದು ಬೆಳೆದ ಬೆಳೆ ರೈತನ ಕೈಗೆ ಬಂದ ತುತ್ತು ಕೈಗೆ ಬಾರದಂತಾಗಿದೆ. ಅರಣ್ಯದಂಚಿನ ಗ್ರಾಮದ ರೈತರ ಕೃಷಿ…

Read More

ಬೀದರ್: ಮಳೆ, ಪ್ರವಾಹದಿಂದ ಬೆಳೆ ಹಾನಿಯಾದ ಜಿಲ್ಲೆಯ 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ. ಉಳಿದ ಪರಿಹಾರ ಮೊತ್ತ ನಾಲ್ಕೈದು ದಿನಗಳಲ್ಲಿ ರೈತರ ಖಾತೆಗೆ ಜಮಾ ಆಗಲಿದೆ ಎಂದು  ಇದೇ ವೇಳೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ  ತಿಳಿಸಿದರು. ವರದಿ: ಅರವಿಂದ ಮಲ್ಲೀಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ನಗರದ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆ ನಿರ್ಮಾಣಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಬುಧವಾರ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳನ್ನು ವಾಪಸ್ ಕಳುಹಿಸಿದರು. ವಿಶೇಷ ಭೂಸ್ವಾಧೀನಾಧಿಕಾರಿ ಧರ್ಮಪಾಲ್‌, ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್, ಸಿಬ್ಬಂದಿ ಕೌತಮಾರನಹಳ್ಳಿ ಗ್ರಾಮದ ಬಳಿ ಸಮೀಕ್ಷೆಗೆ ಹೋಗಿದ್ದರು. ಈ ವೇಳೆ ರೈತ ಮುಖಂಡರು, ಗ್ರಾಮಸ್ಥರು ಸಮೀಕ್ಷೆ ಕಾರ್ಯಕ್ಕೆ ಅಡ್ಡಿ ಪಡಿಸಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಯಾವುದೇ ಕಾರಣಕ್ಕೂ ಸಮೀಕ್ಷೆಗೆ ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದರು. ಜಮೀನು ಸರ್ವೆ ಮಾಡುವ ಮುನ್ನ ಗ್ರಾಮ ಸಭೆ ನಡೆಸಬೇಕು. ಏಕಾಏಕಿ ಸಮೀಕ್ಷೆ ಮಾಡುವುದು ಸರಿಯಲ್ಲ. ಜಿಲ್ಲಾಧಿಕಾರಿ ರೈತರ ಜತೆಗೆ ಸಭೆ ನಡೆಸಬೇಕು ಎಂದು ರೈತರು ಒತ್ತಾಯಿಸಿದರು. ರೈತರ ಸಮಸ್ಯೆ ಕೇಳದ ಜಿಲ್ಲಾಧಿಕಾರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಸರ್ಕಾರದ ಬಳಿಗೂ ಒಂದು ನಿಯೋಗ ಹೋಗುತ್ತೇವೆ. ಬಹಳಷ್ಟು ರೈತರು ಈ ಯೋಜನೆ ವಿರೋಧಿಸಿದ್ದಾರೆ. ರೈತರ ಜತೆಗೆ ಸಭೆ ನಡೆಸುವಂತೆ ಒತ್ತಾಯಿಸುತ್ತೇವೆ. ಸಭೆ ನಡೆಸಿದರೆ ರೈತರಿಗೆ ಅಗತ್ಯ…

Read More

ಕುಣಿಗಲ್‌: ನರೇಗಾ ಯೋಜನೆಯ ಶೇ.40 ಸಾಮಗ್ರಿ ಬಿಲ್ ಪಾವತಿಗೆ ಆಗ್ರಹಿಸಿ ತಾಲ್ಲೂಕಿನ ಚೌಡನಕುಪ್ಪೆ ಗ್ರಾಮ ಪಂಚಾಯಿತಿಯ ಕೆಲ ಸದಸ್ಯರು ಕಚೇರಿಗೆ ಬೀಗ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು. ಚೌಡನಕುಪ್ಪೆ ಗ್ರಾಮ ಪಂಚಾಯಿತಿಯ ಹುಲಿಕಟ್ಟೆ ಸದಸ್ಯೆ ಭಾಗ್ಯಮ್ಮ ಅವರ ಪತಿ ರವಿಕುಮಾರ್ (ಜೆಡಿಎಸ್ ಬೆಂಬಲಿತ) ಮತ್ತು ಸುನೀಲ್ 2021ನೇ ಸಾಲಿನಿಂದ ಈವರೆಗೆ ನರೇಗಾ ಯೋಜನೆಯಲ್ಲಿ ನಡೆಸಿರುವ ಶಾಲಾ ಕಾಂಪೌಂಡ್, ಚರಂಡಿ, ಸಿ.ಸಿ. ರಸ್ತೆ ಇತ್ಯಾದಿ ಕಾಮಗಾರಿಯ ಬಾಪ್ತನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೃಷ್ಣಗೌಡ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳು ನಿಯಮ ಪಾಲನೆ ಮಾಡದೆ ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದಾಯ ಕಾಮಗಾರಿ ಮತ್ತು ವೈಯುಕ್ತಿಕ ಕಾಮಗಾರಿಗಳ ಸಾಮಾಗ್ರಿ ಬಾಬು ಬಿಡುಗಡೆಯಾಗಿದ್ದರೂ, ಪಾವತಿಗೆ ನಿರಾಕರಿಸಿದ ಕಾರಣ ಗ್ರಾಮಸ್ಥರು ಪರದಾಡುವಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸೂಚನೆ ನೀಡಿದ್ದರೂ ಪ್ರಯೋಜನವಾಗಿಲ್ಲ. ನೂತನ ಕಚೇರಿ ಉದ್ಘಾಟನೆಗೆ ಸಿದ್ಧವಾಗಿದ್ದು, ಹಳೆ ಕಚೇರಿಯಲ್ಲಿನ ನಿರುಪಯುಕ್ತ ಸಾಮಗ್ರಿಗಳನ್ನು ವಿಲೇವಾರಿ ಮಾಡುವಲ್ಲಿ ಹಾಗೂ…

Read More