Author: admin

ಬಿದರ್: ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಜೂನ್ ಮಧ್ಯಭಾಗದ ಹೊತ್ತಿಗೆ ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಿದ್ದ ಮಳೆ ಆಗಿಲ್ಲ, ಎಲ್ ನಿನೋ ಪ್ರಭಾವದಿಂದಾಗಿ ಮುಂಗಾರು ಮಳೆ ಕೊರತೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಮಳೆಯ ಸರಾಸರಿ ಪ್ರಮಾಣ ಮತ್ತು ಸರಾಸರಿ ಮಳೆಯ ಅವಧಿ ಕಡಿಮೆ ಆಗುವ ಭೀತಿ ಎದುರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಪಾಯವೂ ಇದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಾಲಿ ನೀರು ಪೂರೈಕೆ ಮಾಡುತ್ತಿರುವ ಜಲ ಮೂಲಗಳ ಜೊತೆಗೆ ಪರ್ಯಾಯ…

Read More

ತುಮಕೂರು: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಎಸ್.ಎಸ್.ಎಲ್.ಸಿ. ನಂತರ ಉನ್ನತ ಶಿಕ್ಷಣ, ವೃತ್ತಿ ಶಿಕ್ಷಣ, ತಾಂತ್ರಿಕ ಶಿಕ್ಷಣ, ಸ್ನಾತಕೋತ್ತರ, ಔದ್ಯೋಗಿಕ ಶಿಕ್ಷಣಗಳಿಗೆ ನಿಯಮಾನುಸಾರ ಆಯ್ಕೆಯಾಗುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸರ್ಕಾರವು ನಿಗದಿಪಡಿಸಿರುವ ಪರೀಕ್ಷಾ ಶುಲ್ಕ, ಬೋಧನಾ ಶುಲ್ಕ, ಪ್ರಯೋಗಾಲಯ ಶುಲ್ಕ ಹಾಗೂ ಗ್ರಂಥಾಲಯ ಶುಲ್ಕ ಮರುಪಾವತಿ ಯೋಜನೆಯಡಿ ಪೋಸ್ಟ್ ಮೆಟ್ರಿಕ್ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಂದ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ(ಎಂ.ಆರ್.ಡಬ್ಲ್ಯೂ), ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ (ಯುಆರ್ಡಬ್ಲ್ಯೂ) ಕಾರ್ಯಕರ್ತರನ್ನು ಅಥವಾ ಇಲಾಖೆಯ ದೂರವಾಣಿ ಸಂಖ್ಯೆ: 0816-2270029 / 2005053ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಉರ್ದು ಶಾಲೆಗಳ ಶೈಕ್ಷಣಿಕ ಪರಿಸ್ಥಿತಿಯನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೆಲವು ಉರ್ದು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ವೇಳೆ ವಿದ್ಯಾರ್ಥಿಗಳ ಗೈರು ಹಾಜರಾತಿ, ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು. ಅಲ್ಪಸಂಖ್ಯಾತ ಸಮುದಾಯದವರು ವಿವಿಧ ಯೋಜನೆಗಳಡಿ ಬ್ಯಾಂಕ್‌ ಗಳಿಗೆ ಸಲ್ಲಿಸಿರುವ ಸಾಲದ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಾಕಿ ಉಳಿದಿರುವ ಅರ್ಜಿಗಳ ಸಂಪೂರ್ಣ ಮಾಹಿತಿಯನ್ನು ಸಲ್ಲಿಸುವಂತೆ ತಿಳಿಸಿದರು. ಇದೇ ವೇಳೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ತುಮಕೂರು ನಗರದಲ್ಲಿ ಪ್ರಾರಂಭಿಸಲಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ…

Read More

ಮಧುಗಿರಿ: ಶಾಸಕ ಕೆ.ಎನ್.ರಾಜಣ್ಣ ಮತ್ತು ಜಮೀರ್ ಅಹಮ್ಮದ್ ಖಾನ್ ರವರಿಗೆ ಸಚಿವ ಸ್ಥಾನ ನೀಡುವಂತೆ ಅಲ್ಪ ಸಂಖ್ಯಾತ ಘಟಕದ ಬಾಬಾಫಕ್ರುದ್ದೀನ್ ಆಗ್ರಹಿಸಿದರು. ಅವರು ಅಲ್ಪ ಸಂಖ್ಯಾತ ಘಟಕ ಹಾಗೂ ತಾಲೂಕಿನ ಮುಸ್ಲಿಂ ಸಮುದಾಯದ ವತಿಯಿಂದ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಸಮೀಪ ಕೆ.ಎನ್ ರಾಜಣ್ಣ ಹಾಗೂ ಬಿ.ಜೆಡ್.ಜಮೀರ್ ಅಹಮ್ಮದ್ ಖಾನ್ ರವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಅಹಿಂದ ವರ್ಗದ ಪರವಾಗಿರುವ ನಾಯಕರಾದ ಕೆ.ಎನ್.ರಾಜಣ್ಣ ಮತ್ತು ಜಮೀರ್ ಅಹಮ್ಮದ್ ಖಾನ್ ರವರುಗಳು ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರ ಹಿಡಿಯಲು ಪ್ರಮುಖ ಪಾತ್ರವಹಿಸಿದ್ದಾರೆ. ರಾಜಣ್ಣ ರವರು ಆಲದ ಮರ ಇದ್ದಂತೆ. ಇವರನ್ನು ಡಿ.ಕೆ.ಶಿವಕುಮಾರ್ ರವರ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡರೆ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರಕಿಸುವ ಕಾರ್ಯವಾಗಲಿದೆ. ಜಮೀರ್ ಅಹಮ್ಮದ್ ರವರು ಅಲ್ಪಸಂಖ್ಯಾತ ನಾಯಕರಾಗಿದ್ದು ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ದುಡಿದಿದ್ದಾರೆ. ಮುಂಬರುವ 2028ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಲು ಸಾಧ್ಯವಾಗುತ್ತದೆ ಎಂದರು. ಯುವ ಮುಖಂಡ ರಫೀಕ್ ಅಹಮದ್…

Read More

ಮಧುಗಿರಿ: ತೋಟಗಾರಿಕೆ ಇಲಾಖೆ ವತಿಯಿಂದ 2026-27 ನೆ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್/ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿ, ತೋಟಗಾರಿಕೆ ರೈತರಿಗೆ ಹಾಗೂ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಯೋಜನೆಯ ವಿವಿಧ ಕಾರ್ಯಕ್ರಮಗಳಡಿ ಹಣ್ಣಿನ ಬೆಳೆಗಳಾದ ಬಾಳೆ, ಮಾವು ಹಾಗೂ ದಾಳಿಂಬೆ ಹೊಸ ಪ್ರದೇಶ ವಿಸ್ತರಣೆ, ಪ್ರಧಾನ ಹಣ್ಣಿನ ಬೆಳೆಗಳಾದ ಡ್ರ್ಯಾಗನ್ ಹಣ್ಣು, ಬೆಣ್ಣೆ ಹಣ್ಣು, ಹುಣಸೆ ಹೊಸ ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ನೆರಳು ಪರದೆ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ, ಸಂರಕ್ಷಿತ ಬೇಸಾಯ ಕಾರ್ಯಕ್ರಮದಡಿ ಪ್ಲಾಸ್ಟಿಕ್ ಹೊದಿಕೆ, ಪಕ್ಷಿ ನಿರೋಧಕ ಬಲೆ ಅಳವಡಿಕೆ, ಸಮಗ್ರ ಕೀಟ, ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ, ಕೊಯ್ಲೋತ್ತರ ನಿರ್ವಹಣೆಗಾಗಿ, ಕಡಿಮೆ ವೆಚ್ಚದ ಈರುಳ್ಳಿ ಶೇಖರಣಾ ಘಟಕ, ನೆರವು ನೀಡಲಾಗುವುದು. ಹಳೆ ತೋಟಗಳ ಪುನಶ್ಚೇತನ, ಜೇನು ಸಾಕಾಣಿಕೆ, ಮಿನಿ ಟ್ರ್ಯಾಕ್ಟರ್ ಹಾಗೂ ಇತರೆ ಯಂತ್ರೋಪಕರಣಗಳಿಗೆ ಸಹಾಯಧನ ನೀಡಲಾಗುವುದು. ಮಾರ್ಗಸೂಚಿಯನ್ವಯ ವಿವಿಧ…

Read More

ಕೊರಟಗೆರೆ: ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ಮಾದರಿಯು ಇದೀಗ ಮೊದಲ ಬಾರಿಗೆ ಕೊರಟಗೆರೆ ಪಟ್ಟಣದ ಶ್ರೀ ಕನ್ನಿಕಾ ಪರಮೇಶ್ವರಿ ಸಮುದಾಯ ಭವನದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಿದ್ದು, ಭಕ್ತರು ಹಾಗೂ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೀದರ ಗ್ರಾಮದ ಶ್ರೀ ವಿನಯ್ ರಾಮ್ ಅವರ ಕನಸಿನ ಯೋಜನೆಯಾದ ಈ ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯು ಈಗಾಗಲೇ ರಾಷ್ಟ್ರ ಹಾಗೂ ಕರ್ನಾಟಕದ 19 ಜಿಲ್ಲೆಗಳು ಸೇರಿದಂತೆ 106 ಕಡೆಗಳಲ್ಲಿ ಪ್ರದರ್ಶನಗೊಂಡು ಗಮನ ಸೆಳೆದಿದೆ. ಇದೀಗ ಕೊರಟಗೆರೆ ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ 107ನೇ ಪ್ರದರ್ಶನ ನಡೆಯುತ್ತಿದ್ದು, ಈಗಾಗಲೇ ಸಾವಿರಾರು ಜನರು ಭೇಟಿ ನೀಡಿ ಶ್ರೀರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಶಾಲಾ–ಕಾಲೇಜು ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ ತಾಲೂಕಿನ ವಿವಿಧ ಗ್ರಾಮಗಳ ಜನರು ಕುಟುಂಬ ಸಮೇತರಾಗಿ ಆಗಮಿಸಿ ಅಯೋಧ್ಯೆಯ ಶ್ರೀರಾಮ ಮಂದಿರದ ಪ್ರತಿರೂಪವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಭಕ್ತಿಭಾವ ಹಾಗೂ ದೇಶಭಕ್ತಿಯ ಸಂದೇಶ ಸಾರುವ ಈ ಪ್ರದರ್ಶನ ಜನರಲ್ಲಿ ವಿಶೇಷ ಆಕರ್ಷಣೆ ಮೂಡಿಸಿದೆ.…

Read More

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸಸ್ಯಕಾಶಿ, ಸಿದ್ದರ ತಪೋ ಭೂಮಿಯಲ್ಲಿ ಜೂ.21 ರಂದು ಬಾಳೆ ಹೊನ್ನೂರು ಖಾಸಾ ಶಾಖಾ ಮಠ, ಸಿದ್ಧರಬೆಟ್ಟದ 20ನೇ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮಿಗಳು ಸ್ವಾಮೀಜಿ ತಿಳಿಸಿದರು. ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಶ್ರೀಮಠ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ ‘‘ಸಿದ್ದಶ್ರೀ ಪ್ರಶಸ್ತಿ’’ ಪ್ರಧಾನ ಮಾಡಲಾಗುತ್ತದೆ ಎಂದು ಹೇಳಿದರು. ಸಾಮೂಹಿಕ ವಿವಾಹ ಮತ್ತು ಜನಜಾಗೃತಿ ಧರ್ಮ ಸಮಾರಂಭ: ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನ ಜಾಗೃತಿ…

Read More

ಪಾವಗಡ: ಪಾವಗಡ ತಾಲ್ಲೂಕು ಕಾಡುಗೊಲ್ಲ ಯುವ ಸೇನೆಯ ವತಿಯಿಂದ ಜುಲೈ ತಿಂಗಳಲ್ಲಿ ಮೂರನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಎಸ್ ಎಸ್ ಎಲ್ಸಿ, ದ್ವಿತೀಯ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.80 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಜುಲೈ 10 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ರಾಜಣ್ಣ– 97991 38727, ದಿವ್ಯತೇಜ ಯಾದವ್-86603 89238, ಈರಣ್ಣ-82966 20877 ರವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ರಾಜ್ಯದಲ್ಲಿ ಮಹಿಳಾ ಹಾಗೂ ಮಕ್ಕಳ ಸುರಕ್ಷತೆಗೆ ನಿರಂತರ ಶ್ರಮವಹಿಸುತ್ತಿರುವ ಡಾ.ನಾಗಲಕ್ಷ್ಮೀ ಚೌಧರಿಯವರು ಪಟ್ಟಣದ ಕೆಲ ವಾರ್ಡ್ ಗಳಿಗೆ ಭೇಟಿ ನೀಡಿ ಮಹಿಳೆಯರ ಸಮಸ್ಯೆ ಆಲಿಸಿದರು. ಇಡೀ ರಾಜ್ಯದಲ್ಲಿ ಅನೇಕ ಮಹಿಳೆಯರಿಗೆ ನ್ಯಾಯ ದೊರಕಿಸುವಲ್ಲಿ ಅತ್ಯಂತ ಪರಿಶ್ರಮವಹಿಸಿ ಹಗಲಿರುಳು ದುಡಿಯುತ್ತಿರುವ ಡಾ. ನಾಗಲಕ್ಷ್ಮೀ ಯವರಿಗೆ ಅಭಿಮಾನಿಗಳ ಮಹಾಪೂರವೇ ಹರಿದು ಬಂದು ಸನ್ಮಾನಿಸುವ ಮೂಲಕ ಗೌರವ ನೀಡಿದರು. ವಾರ್ಡ್ ಗಳಲ್ಲಿನ ಅನೇಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ಮಹಿಳೆಯರು ಹಾಗೂ ಮಕ್ಕಳು ಆತ್ಮಸ್ಥೈರ್ಯದಿಂದ ಜೀವನ ನಡೆಸಿ ಸಮಾಜದ ಮುಖ್ಯ ವಾಹಿನಿ ಬರುವಂತ್ತಾಗಬೇಕಾಗಿದ್ದು, ಶಿಕ್ಷಣದಲ್ಲಿ ಅತ್ಯಂತ ಸಾಮರ್ಥ್ಯವನ್ನು ಕಂಡು ಕೊಳ್ಳವಂತ್ತಾಗಿ ಗುರು ಹಿರಿಯರಿಗೆ ಗೌರವಿಸುವ ಸಮಾಜ ನಿರ್ಮಾಣಕ್ಕೆ ಎಲ್ಲಾರೂ ಬದ್ಧರಾಗಬೇಕು ಎಂದರು. ರಾಜ್ಯ ಸೇರಿದಂತೆ ಎಲ್ಲಾ ಗ್ರಾಮಗಳಲ್ಲಿನ ಮಹಿಳಾ ಶೋಷಣೆಯನ್ನು ತೀವ್ರ ರೂಪದಲ್ಲಿ ಖಂಡಿಸಿ ನೊಂದ ಕುಟುಂಬಗಳಿಗೆ ಸಮರ್ಪಕ ನ್ಯಾಯ ಹೊಂದಿಸುವಂತಹ ಕೆಲಸ ಮಾಡುತ್ತಿರುವ ಡಾ.ನಾಗಲಕ್ಷ್ಮೀ ಚೌಧರಿ ಯವರಿಗೆ ಕೃತಜ್ಞತೆಯೊಂದಿಗೆ ಮೆಚ್ಚುಗೆ…

Read More

ಸರಗೂರು: ಹಳೇ ಮೈಸೂರು ಪ್ರಾಂತ್ಯದ ಪರಿಶಿಷ್ಟ ಪಂಗಡ (ST) ಸಮಾಜದ ರಾಜಕೀಯ ನಾಯಕರಿಗೆ ಪ್ರಸ್ತುತ ಸರ್ಕಾರದಲ್ಲಿ ಯಾವುದೇ ಸಚಿವ ಸ್ಥಾನ ನೀಡಿಲ್ಲ. ಆದ್ದರಿಂದ ಈ ಪ್ರಾಂತ್ಯದ ಯುವ ನಾಯಕರಾಗಿರುವ ಹೆಗ್ಗಡದೇವನಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಮುಂದಿನ ಎರಡನೇ ಸುತ್ತಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಪಪಂ ಸದಸ್ಯ ಹಾಗೂ ನಾಯಕ ಸಮಾಜದ ತಾಲೂಕು ಉಪಾಧ್ಯಕ್ಷ ಶ್ರೀನಿವಾಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕ ಅನಿಲ್ ಚಿಕ್ಕಮಾದು ಅವರು ಹೆಗ್ಗಡದೇವನಕೋಟೆ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಹಳೇ ಮೈಸೂರು ಭಾಗದ ಏಕೈಕ ಪರಿಶಿಷ್ಟ ಪಂಗಡದ ಶಾಸಕರಾಗಿರುವ ಇವರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ನಾಯಕ ಸಮಾಜದ ಪ್ರಭಾವಿ ಮುಖಂಡರಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ನಾಯಕ ಸಮಾಜದ ಮತದಾರರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವಲ್ಲಿ ಮತ್ತು ಪಕ್ಷದ ಗೆಲುವಿನಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು” ಎಂದು ತಿಳಿಸಿದರು. “ತಮ್ಮ ಅಧಿಕಾರ ಅವಧಿಯಲ್ಲಿ ಯಾವುದೇ ಕಪ್ಪು…

Read More