Author: admin

ಶಿರಾ: ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಳಕ್ಕೆ ಒತ್ತು ನೀಡಿದ್ದು ಬ್ರಿಡ್ಜ್ ಕಂ ಬ್ಯಾರೇಜ್‌ ಗಳನ್ನು ನಿರ್ಮಿಸುವ ಮೂಲಕ ನೀರು ತಡೆ ಹಿಡಿಯಲಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ತಾಲ್ಲೂಕಿನ ಇನಕನಹಳ್ಳಿ ಸಮೀಪ ಈಚೆಗೆ 12 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇನಕನಹಳ್ಳಿ ಮತ್ತು ಕುರುಡನಹಳ್ಳಿ ಭಾಗದ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವುದರಿಂದ 0.71 ಎಂಸಿಎಫ್‌ ಟಿ ನೀರು ಸಂಗ್ರಹವಾಗಲಿದ್ದು, ಇದರಿಂದ ರೈತರಿಗೆ ಅನುಕೂಲವಾಗುವುದು ಎಂದರು. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತಾಲ್ಲೂಕಿಗೆ ಹೆಚ್ಚು ನೀರು ಲಭ್ಯವಾಗಲಿದೆ. 50 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ಗಳನ್ನು ನಿರ್ಮಿಸಲಾಗುತ್ತಿದ್ದು ಈಗ ಐದು ಬ್ಯಾರೇಜ್‌ ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಿ.ಸಿ.ಅಶೋಕ್‌ ಮಾತನಾಡಿ, ಶಾಸಕ ಟಿ.ಬಿ.ಜಯಚಂದ್ರ ಅವರ ಇಚ್ಛಾಶಕ್ತಿಯಿಂದಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬರುವಂತಾಗಿದ್ದು, ತಾಲ್ಲೂಕಿನಲ್ಲಿ ಈ…

Read More

ಚಿಕ್ಕನಾಯಕನಹಳ್ಳಿ: ದತ್ತು ಮಾಸಾಚರಣೆ ಹಿನ್ನೆಲೆಯಲ್ಲಿ ಕಾನೂನುಬದ್ಧವಾಗಿ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಹಶೀಲ್ದಾರ್ ಕಚೇರಿಯಿಂದ ಸರ್ಕಾರಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು. ಪಟ್ಟಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲ್ಲೂಕು ಆಡಳಿತದಿಂದ ನಡೆದ ಜಾಗೃತಿ ಜಾಥಾದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ದತ್ತು ಪ್ರಕ್ರಿಯೆಯ ಮಹತ್ವ, ಕಾನೂನುಬದ್ದವಾಗಿ ಮಕ್ಕಳನ್ನು ದತ್ತು ಪಡೆಯುವುದರಿಂದಾಗುವ ಪ್ರಯೋಜನ ಮತ್ತು ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ ಮಾರ್ಗಸೂಚಿಗಳ ಕುರಿತು ಘೋಷಣೆ ಕೂಗಿದರು. ಅನಧಿಕೃತ ಮತ್ತು ಕಾನೂನುಬಾಹಿರ ದತ್ತು ಪ್ರಕ್ರಿಯೆಗಳ ಅಪಾಯಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಯಿತು. ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ಮಕ್ಕಳನ್ನು ದತ್ತು ತೆಗೆದುಕೊಂಡು ಸಾಕುವುದು ಆ ಮಕ್ಕಳು ಮುಂದೆ ನಮಗೆ ಆಸರೆಯಾಗುವಂತೆ ಬೆಳೆಸುವುದು ಮಕ್ಕಳ ಪೋಷಣೆ ಒಳ್ಳೆಯ ವಿಚಾರ. ಅದು ಕಾನೂನಾತ್ಮಕವಾಗಿರಬೇಕು. ಅದರಿಂದ, ಮಗುವಿಗೂ ಪೋಷಕರಿಗೂ ಒಳ್ಳೆಯದು. ಯಾವುದೇ ಕಾರಣಕ್ಕೂ ಕಾನೂನು ಬಾಹಿರವಾಗಿ ಅನಧಿಕೃತವಾಗಿ ಮಕ್ಕಳನ್ನು ದತ್ತು…

Read More

ಹುಮನಾಬಾದ್: ಕಬ್ಬಿನ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಹುಮನಾಬಾದ್‌ ನಗರದಲ್ಲಿ ರೈತರಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನೆಯು ಅಂಬೇಡ್ಕರ್ ವೃತ್ತ, ಹಳೆ ತಹಶೀಲ್ದಾರ್ ಕಚೇರಿ ಹಾಗೂ ಶಿವಾಜಿ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಾಗಿತ್ತು. ಟ್ರ್ಯಾಕ್ಟರ್‌ ಗಳಲ್ಲಿ ಹಸಿರು ಶಾಲು ಬೀಸುತ್ತಾ ತಂಡೋಪತಂಡವಾಗಿ ರೈತರು ಆಗಮಿಸಿದರು. ಎತ್ತಿನ ಬಂಡಿ, ಟ್ರ್ಯಾಕ್ಟರ್‌ ಗಳಿಗೆ ಕಬ್ಬು ಕಟ್ಟಿ ವಿನೂತನವಾಗಿ ಹೋರಾಟ ನಡೆಸಿದರು. ಪ್ರತಿಭಟನೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಾಗುತ್ತಿರುವಾಗ ಮಾರ್ಗಮಧ್ಯದಲ್ಲಿ ಪ್ರತಿಭಟನಾ ನಿರತ ರೈತರನ್ನು ಪೊಲೀಸರು ತಡೆದರು. ರೈತರ ಪ್ರತಿಭಟನೆಗೆ ದಲಿತ ಸಂಘಟನೆ, ಕಾರ್ಮಿಕ ಸಂಘಟನೆ ಹಾಗೂ ವಕೀಲ ಸಂಘಟನೆಯವರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದವು. ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಮಧುಗಿರಿ: ಪಕ್ಷ ವಿರೋಧಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಶಾಸಕ ಕೆ.ಎನ್.ರಾಜಣ್ಣ ಇದೀಗ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ನೆಲಕಚ್ಚ ಬಹುದು ಎಂದು ಹೇಳಿಕೆ ನೀಡಿದ್ದು, ಈ ಮೂಲಕ ಪಕ್ಷಾಂತರದ ಪರೋಕ್ಷ ಹೇಳಿಕೆ ನೀಡಿದ್ದಾರೆ ಎನ್ನುವ ಅನುಮಾನಕ್ಕೆ ಕಾರಣವಾಗಿದೆ. ಈಗಾಲೇ ಕಾಂಗ್ರೆಸ್ ನಲ್ಲಿ ಒಂದು ಕಾಲು ಇನ್ನೊಂದು ಕಾಲು ಎಲ್ಲಿಡಬೇಕು ಅಂತ ರಾಜಣ್ಣ ಯೋಚನೆ ಮಾಡ್ತಾ ಇದ್ದಾರೆ ಎನ್ನುವ ಚರ್ಚೆಗಳಾಗ್ತಿವೆ. ಅದಕ್ಕೆ ಪೂರಕವಾಗಿ ಅವರು ಇದೀಗ ಹೇಳಿಕೆ ನೀಡಿದ್ದಾರೆ. ತಾಲ್ಲೂಕಿನ ದೊಡೇರಿಯಲ್ಲಿ ಬುಧವಾರ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, 2004ರಲ್ಲಿ ನಾನು ಜೆಡಿಎಸ್‌ ನಿಂದ ಶಾಸಕನಾಗಿದ್ದಾಗ ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ನೆಲಕಚ್ಚಿತ್ತು. ಮತ್ತೆ ಅಂತಹ ಸಂದರ್ಭ ಬಂದರೂ ಬರಬಹುದು ಎಂದು ಹೇಳಿಕೆ ನೀಡಿದ್ದಾರೆ. ಮುಂದೆ ನಾನು ಯಾವ ಬಾವುಟ ಹಿಡಿಯಬೇಕು ಎಂಬುದನ್ನು ಕಾಯ್ದು ನೋಡೋಣ ಎಂದೂ ಹೇಳಿಕೆ ನೀಡಿದ್ದಾರೆ. ಅಲ್ಲದೇ  ಕಾಂಗ್ರೆಸ್ ಕಾರ್ಯಕರ್ತರು ಮತ್ತು ನನ್ನ ಅಭಿಮಾನಿಗಳು ಇಂದು ಹಮ್ಮಿಕೊಂಡಿದ್ದ ಬೈಕ್‌ ರಾಲಿಯಲ್ಲಿ ಯಾರೂ ಕಾಂಗ್ರೆಸ್…

Read More

ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿ, ಡಿಕೆಶಿ ಸಿಎಂ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕಿನ ಹುಲಿಯೂರುದುರ್ಗದಹುಲಿಯೂರಮ್ಮ ದೇವಸ್ಥಾನದಲ್ಲಿ ಈ ಚಂಡಿಕಾ ಹೋಮ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಹುಲಿಯೂರುದುರ್ಗ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ದಂಪತಿ, ವಿ.ಎಸ್.ಎಸ್.ಎನ್. ಅಧ್ಯಕ್ಷ ಮಧು ದಂಪತಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ದಂಪತಿ, ಪಂಚಾಯಿತಿ ಸದಸ್ಯ ನಾಗೇಶ್ ದಂಪತಿ ಸೇರಿದಂತೆ ಹಲವು ನಾಯಕರು ಹೋಮ ಹವನದಲ್ಲಿ ಪಾಲ್ಗೊಂಡಿದ್ದರು. ಕುಣಿಗಲ್ ಶಾಸಕ ರಂಗನಾಥ್ ಹೋಮ ಹವನದಲ್ಲಿ ಭಾಗಿಯಾಗಿ ಮಾತನಾಡಿ, ಹುಲಿಯೂರಮ್ಮ ದೇವಾಲಯ ಬಹುಶಕ್ತಿಯ ಸ್ಥಳ. ಹಿಂದೆಯೂ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಹಳೆಊರಮ್ಮ ದೇವಾಲಯಕ್ಕೆ ಬಂದು ಆಶೀರ್ವಾದ ಪಡೆದಿದ್ದರು. ಇದೇ ರೀತಿಯಾಗಿ ಈ ಬಾರಿ ನಮ್ಮ ನಾಯಕ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸ್ ಪಕ್ಷದ ಎಲ್ಲ ನಾಯಕರಿಗೂ ಒಳ್ಳೆಯದು ಆಗಲಿ ಎಂಬ…

Read More

ಪಾವಗಡ: ಪಟ್ಟಣದ ಕಾಳಿದಾಸ ನಗರದಲ್ಲಿ ಸೋಮವಾರ ರಾತ್ರಿ ಮನೆಯ ಬೀಗ ಒಡೆದು, ನಗದು ಮತ್ತು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಓಬಳಮ್ಮ ಅವರ ಮನೆ ಬೀಗ ಒಡೆದ ಕಳ್ಳರು 2 ಲಕ್ಷ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮನೆಗೆ ಬೀಗ ಹಾಕಿ ಮಹಡಿ ಮೇಲೆ ಮಲಗಿದ್ದರು. ಮನೆಯ ಕಾರ್ಯಕ್ರಮಕ್ಕಾಗಿ ನಗದನ್ನು ಮನೆಯಲ್ಲಿರಿಸಲಾಗಿತ್ತು. ಮನೆಯ ಗೇಟ್ ಹಾರಿ, ಬೀಗ ಒಡೆದು ಕೃತ್ಯ ಎಸಗಲಾಗಿದೆ. ಬೆಳಿಗ್ಗೆ ನಗದು, ಚಿನ್ನದ ಆಭರಣ ಕಳವಾಗಿರುವುದು ತಿಳಿಯಿತು ಎಂದು ಓಬಳಮ್ಮ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಶಿರಾ: ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್‌ ಠಾಣೆಯ ದೊಡ್ಡಬಾಣಗೆರೆಯಲ್ಲಿ ಪುಟೀರಮ್ಮ (86) ಅವರನ್ನು ಕೊಲೆ ಮಾಡಿ 53 ಗ್ರಾಂ ಚಿನ್ನದ ಸರ ಅಪಹರಿಸಿದ್ದ ಶ್ರೀಧರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪುಟೀರಮ್ಮ ಮನೆಯಲ್ಲಿ ಒಂಟಿಯಾಗಿದ್ದಾಗ ಹಿಂದಿನಿಂದ ಬಂದ ಅದೇ ಗ್ರಾಮದ ಶ್ರೀಧರ್ ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿ ಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ. ಪುಟೀರಮ್ಮ ಪುತ್ರ ವೀರಣ್ಣ ನೀಡಿದ ದೂರು ಆಧರಿಸಿ ಪೊಲೀಸರು ಶಿರಾದ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸುಲಿಗೆ ಮಾಡಿದ್ದ ಸರವನ್ನು ಬೆಂಗಳೂರು ಬಾಗಲುಗುಂಟೆಯ ಖಾಸಗಿ ಬ್ಯಾಂಕ್‌ನಲ್ಲಿ 72 ಲಕ್ಷಕ್ಕೆ ಗಿರವಿ ಇಟ್ಟು, ಆ ಹಣದಿಂದ ಮೊಬೈಲ್, ಬಟ್ಟೆ ಇತ್ಯಾದಿಗಾಗಿ ದುಂದು ವೆಚ್ಚ ಮಾಡಿದ್ದಾಗಿ ಒಪ್ಪಿಕೊಂಡಿದ್ದ. ಒತ್ತೆ ಇಟ್ಟಿದ್ದ 36 ಲಕ್ಷ ಮೌಲ್ಯದ ಸರ ಮತ್ತು ಎರಡು ಮೊಬೈಲ್‌ ಗಳನ್ನು ವಶ ಪಡಿಸಿಕೊಂಡಿದ್ದಾರೆ.  ಆರೋಪಿ ಶ್ರೀಧರ್ ಮದ್ಯಪಾನ,…

Read More

ತುಮಕೂರು: ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡಿಸಿಕೊಂಡು ಕೂಲಿ ಕೊಡದೆ ಪರಾರಿಯಾದ ಗಾರ್ಮೆಂಟ್ಸ್ ಮಾಲೀಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾರ್ಮಿಕರು ಜನವಾದಿ ಮಹಿಳಾ ಸಂಘಟನೆ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿತು. ‘ಕ್ಯಾತ್ಸಂದ್ರದ ಆರ್.ವಿ.ಲೈಫ್ ಸ್ಟೈಲ್ ಗಾರ್ಮೆಂಟ್‌ನಲ್ಲಿ ಕೆಲಸ ಮಾಡಿದ ಕಾರ್ಮಿಕರಿಗೆ 3–4 ತಿಂಗಳಿನಿಂದ ಕೂಲಿ ನೀಡಿಲ್ಲ. ಅವರು ನೀಡಿದ್ದ ಚೆಕ್‌ ಬೌನ್ಸ್ ಆಗಿದೆ. ಈಗ ಮಾಲೀಕರು ಕಾರ್ಖಾನೆ ಮುಚ್ಚಿಕೊಂಡು ಪರಾರಿಯಾಗಿದ್ದಾರೆ. 25–30 ಮಹಿಳಾ ಕಾರ್ಮಿಕರಿಗೆ ವೇತನ ಕೊಟ್ಟಿಲ್ಲ ಎಂದು ಜನವಾದಿ ಮಹಿಳಾ ಸಂಘಟನೆ ಜಿಲ್ಲಾ ಸಂಚಾಲಕಿ ಟಿ.ಆರ್.ಕಲ್ಪನಾ ಹೇಳಿದರು. ಸುಮಾರು 9 ತಿಂಗಳು ಕಾಲ ಕ್ಯಾತ್ಸಂದ್ರ, ಬಡ್ಡಿಹಳ್ಳಿ ಭಾಗದಲ್ಲಿ ಉತ್ಪಾದನಾ ಚಟುವಟಿಕೆ ನಡೆಸಿದ್ದರು. ಭಾನುವಾರ ಸಹ ರಜೆ ನೀಡದೆ ಕೆಲಸ ಮಾಡಿಸಿಕೊಂಡಿದ್ದರು. ಇದಕ್ಕೆ ನೀಡಬೇಕಾದ ವೇತನ ಸಹ ನೀಡಿಲ್ಲ ಎಂದರು. ಕಾರ್ಮಿಕರಿಗೆ ಬರಬೇಕಾದ ಕೂಲಿ ಕೊಡಿಸಿ, ಅವರ ಬದುಕಿಗೆ ನೆರವಾಗಬೇಕು ಎಂದು ಒತ್ತಾಯಿಸಿ ಕಾರ್ಮಿಕ ಅಧಿಕಾರಿ, ಡಿವೈಎಸ್‌ ಪಿ, ಹೆಚ್ಚುವರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.  ಸಿಐಟಿಯು ಜಿಲ್ಲಾ…

Read More

ಸರಗೂರು:  ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡಿನ ಸದಸ್ಯೆ ಚೈತ್ರ ಸ್ವಾಮಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಆಯೋಜಿಸಿದ್ದ ಪಕ್ಷ ಸಭೆಯಲ್ಲಿ  ಪಟ್ಟಣ ಪಂಚಾಯಿತಿ ಎರಡನೇ ವಾರ್ಡಿನ ಸದಸ್ಯೆ ಚೈತ್ರ ಸ್ವಾಮಿ ಹಾಗೂ ಪತಿಯಾದ ಸ್ವಾಮಿ ಕೂಡಾ ಕಾಂಗ್ರೆಸ್ ಗೆ ಬರಮಾಡಿಕೊಳ್ಳಲಾಯಿತು. ನಂತರ ಕಾಂಗ್ರೆಸ್ ಪಕ್ಷದ ಟೌನ್ ಅಧ್ಯಕ್ಷ ಹಾಗೂ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಕಾಂಗ್ರೆಸ್ ತತ್ವ, ಆದರ್ಶ ಮತ್ತು ನೈತಿಕ ಮೌಲ್ಯಗಳನ್ನು ಮೆಚ್ಚಿ ಯಾರೇ ಬಂದರೂ ಪಕ್ಷಕ್ಕೆ ಸ್ವಾಗತಿಸಲಾಗುವುದು,  ಈ ಸಭೆ ಶಾಸಕ ಅನಿಲ್ ಚಿಕ್ಕಮಾದುರವರ ಸಮ್ಮುಖದಲ್ಲಿ ನಡೆಯಬೇಕಾದ ಸಭೆ, ಕಾರಣಾಂತರದಿಂದ ಇಲ್ಲದ ಕಾರಣ ಪ.ಪಂ. ಸದಸ್ಯರು ಹಾಗೂ ಪಟ್ಟಣ ಮುಖಂಡರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷವನ್ನು ತೊರೆದ  ಕಾಂಗ್ರೆಸ್ ಪಕ್ಷಕ್ಕೆ ಚೈತ್ರ ಸ್ವಾಮಿ ರವರಿಗೆ ಪಕ್ಷದ ಶಾಲು ಹೊದಿಸಿ ಹಾಗೂ ಬಾವುಟ ಹಿಡಿದು…

Read More

ಕೊರಟಗೆರೆ: ತಾಲ್ಲೂಕಿನ ಕಸಬಾ ವಿಎಸ್ ಎಸ್ ಎನ್ ನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಹಿಂದೆ ಅಧ್ಯಕ್ಷರಾಗಿದ್ದ ವಿನಯ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದರು. ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದೆ. ತಾಲ್ಲೂಕಿನ ಕಸಬಾ ಹೋಬಳಿಯ ಗುಂಡಿನಪಾಳ್ಯ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿ ಸಿ ರಮೇಶ್ ನಾಮಪತ್ರ ಸಲ್ಲಿಸಿದ್ದರು.  ನಿಗದಿತ ಸಮಯದಲ್ಲಿ ಪ್ರತಿಸ್ಪರ್ಧಿಯಾಗಿ ಯಾರೂ ನಾಮಪತ್ರ ಸಲ್ಲಿಸದ ಕಾರಣ ನೂತನ ಅಧ್ಯಕ್ಷರಾಗಿ ಜಿ.ಸಿ.ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ನಂತರ ಮಾತನಾಡಿದ ನೂತನ ಅಧ್ಯಕ್ಷರಾದ ಜಿ.ಸಿ.ರಮೇಶ್, ಸರ್ವ ಸದಸ್ಯರ ಒಗ್ಗಟ್ಟಿನಿಂದ ನಾನು ನೂತನವಾಗಿ ಕಸಬಾ ವಿಎಸ್ ಎಸ್ ಎನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಮಾನ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ಆದೇಶಗಳಂತೆ ಮಾಜಿ ಸಹಕಾರ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣರವರ ಮಾರ್ಗದರ್ಶನದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತೇನೆ ಎಂದರು. ನಂತರ ಮಾತನಾಡಿದ ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷರಾದ ವಿನಯ್ ಕುಮಾರ್, ಆಡಳಿತ…

Read More