Subscribe to Updates
Get the latest creative news from FooBar about art, design and business.
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
- ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
- ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
- ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
- ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
- ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
Author: admin
ಪಾವಗಡ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್.ಎಸ್.ಎಲ್.ಸಿ. ಪರೀಕ್ಷೆ –01 ರ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಿದೆ. ತಾಲ್ಲೂಕಿನ ಕೋಟಾಗುಡ್ಡ ಗ್ರಾಮದಲ್ಲಿ ಇರುವ ಸಹನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಗೀತಾಲಕ್ಷ್ಮಿ ಪಿ. 619 ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾಳೆ. ಈ ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ವಿಚಾರಕ್ಕೆ ಸಂಬಂದಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಜಿಹಾದಿಗಳಿಗೆ ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ನಡೆಯಿತು. ನಗರದ ಟೌನ್ ಹಾರುತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ವಿಧಾನ ಪರಿಷತ್ ಮಾಜಿ ಸದಸ್ಯ ನೆ ಲ ನರೇಂದ್ರ ಬಾಬು ನೇತೃತ್ವದಲ್ಲಿ ಧರಣಿ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ಟಾಪರ್ ಪಟ್ಟಿಯಲ್ಲಿ ತುಮಕೂರು ಜಿಲ್ಲೆಯ ಇಬ್ಬರು ವಿದ್ಯಾರ್ಥಿ ಗಳು ಸೇರಿದ್ದಾರೆ. ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಿಂದ ತಲಾ ಒಬ್ಬರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ತುಮಕೂರಿನ ಚೇತನ ವಿದ್ಯಾ ಮಂದಿರ ಶಾಲೆಯ ಮಹಮದ್ ಮಸ್ತೂರ್ ಅದಿಲ್ 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾರೆ. ಇವರು ಮನ್ಸೂರ್ ಆದಿಲ್ ಹಾಗೂ ಅಫ್ರೋಜ್ ಜಹಾನ್ ದಂಪತಿಯ ಪುತ್ರರಾಗಿದ್ದಾರೆ. ಯಶ್ವಿತಾ ರೆಡ್ಡಿ : ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲೂ ರಾಜ್ಯದಲ್ಲೆ ವಿದ್ಯಾರ್ಥಿನಿ ಪ್ರಥಮ ಸ್ಥಾನ ಪಡೆದಿದ್ದಾರೆ. ಮಧುಗಿರಿಯ ಚಿರಾಕ್ ಪಬ್ಲಿಕ್ ಶಾಲೆಯ ಯಶ್ವಿತಾ ರೆಡ್ಡಿ ಕೆ.ಬಿ. ರಾಜ್ಯ ಟಾಪರ್ ಲಿಸ್ಟ್ ನಲ್ಲಿ 21 ನೇ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಕೆ.ವಿ.ಬಾಬು ರೆಡ್ಡಿ ಹಾಗೂ ಸಂದ್ಯಾ ರೆಡ್ಡಿ ಪುತ್ರಿಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕೂಡ 625 ಕ್ಕೆ 625 ಅಂಕಗಳಿಸಿ ರಾಜ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ತುಮಕೂರು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ತುಮಕೂರು ಶೈಕ್ಷಣಿಕ…
ಬೆಂಗಳೂರು: 2024-2025ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ–1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ ಶೇ.66.14ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಬಾರಿ 22 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಸ್ವಲ್ಪ ಗೊಂದಲ ಇತ್ತು. ಪರೀಕ್ಷೆಯ ಪಾವಿತ್ರತ್ಯೆ ಕಾಪಾಡಬೇಕು ಅಂತ ವೆಬ್ ಕಾಸ್ಟಿಂಗ್ ಮಾಡಿದ್ದೇವೆ. ಕಳೆದ ವರ್ಷ 53% ಫಲಿತಾಂಶ ಬಂದಿತ್ತು. ನಾವು ಗ್ರೇಸ್ ಮಾರ್ಕ್ಸ್ ಕೊಟ್ಟ ಮೇಲೆ 73% ಗೆ ಬಂತು. ಸಿಎಂ ಸಿದ್ದರಾಮಯ್ಯ ಕೂಡ ಇದರ ಬಗ್ಗೆ ಮಾತನಾಡಿದ್ದರು. ಆದಾದ ಮೇಲೆ ಟಾರ್ಗೆಟ್ ಕೊಟ್ಟರು. ಇಲಾಖೆಯಿಂದ ಒಳ್ಳೆಯ ರಿಸಲ್ಟ್ ಬರುವ ರೀತಿಯಲ್ಲಿ ಮಾಡುವಂತೆ ಹೇಳಿದ್ದರು ಎಂದರು. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ(ಶೇ.91.12), ಉಡುಪಿ ಜಿಲ್ಲೆ 2ನೇ ಸ್ಥಾನ(ಶೇ.89.96), ಉತ್ತರ ಕನ್ನಡ ಜಿಲ್ಲೆಗೆ…
ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿ ಪಾಕಿಸ್ತಾನ ಪ್ರವೇಶಿಸಿದ ಗಡಿ ಭದ್ರತಾ ಪಡೆ ಕಾನ್ಸ್ಟೆಬಲ್ ಪಿಕೆ ಸಾಹು ಅವರ ಭವಿಷ್ಯ ಅತಂತ್ರವಾಗಿದೆ. ಬಿಎಸ್ ಎಫ್ ಅಧಿಕಾರಿಗಳು ಮತ್ತು ಪಾಕಿಸ್ತಾನ ರೇಂಜರ್ ಗಳ ನಡುವೆ ಇದುವರೆಗೆ ನಡೆದ ಸಭೆಗಳು ವಿಫಲವಾಗಿವೆ. ಕಳೆದ ಎಂಟು ದಿನಗಳಲ್ಲಿ, ಅವರ ಬಿಡುಗಡೆಗೆ ಸಂಬಂಧಿಸಿದಂತೆ ಎರಡೂ ಪಡೆಗಳ ಅಧಿಕಾರಿಗಳ ನಡುವೆ ಏಳು ಸಭೆಗಳು ನಡೆದಿವೆ. ಆದರೆ ಬಿಎಸ್ ಎಫ್ ಅಧಿಕಾರಿಗಳಿಗೆ ಪ್ರತಿ ಬಾರಿಯೂ ಅವರ ಪಾಕಿಸ್ತಾನಿ ಸಹವರ್ತಿಗಳಿಂದ ಒಂದೇ ರೀತಿಯ ಉತ್ತರ ಬಂದ ಕಾರಣ ಚರ್ಚೆಗಳು ಯಾವುದೇ ಪ್ರಗತಿ ಸಾಧಿಸಿಲ್ಲ ಎಂದು ತಿಳಿದು ಬಂದಿದೆ. ಪಾಕಿಸ್ತಾನ ರೇಂಜರ್ ಗಳು ಈ ವಿಷಯದಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳುತ್ತಾರೆ, ತಮ್ಮ ಹಿರಿಯ ಅಧಿಕಾರಿಗಳಿಂದ ನಿರ್ದೇಶನದ ಕೊರತೆ ಜವಾನನನ್ನು ಭಾರತಕ್ಕೆ ಹಸ್ತಾಂತರಿಸದಿರಲು ಕಾರಣ ಎಂದು ಹೇಳುತ್ತಾರೆ. ಸುಮಾರು 15 ನಿಮಿಷಗಳ ಕಾಲ ನಡೆದ ಪ್ರತಿಯೊಂದು ಸಭೆಯಲ್ಲೂ, ರೇಂಜರ್ ಗಳ ಅಧಿಕೃತ ಸಂಧಾನಕಾರರು ತಮ್ಮ ಉನ್ನತ ಅಧಿಕಾರಿಗಳಿಂದ ಸೂಚನೆಗಳಿಗಾಗಿ ಇನ್ನೂ ಕಾಯುತ್ತಿದ್ದೇವೆ ಎಂದಿದ್ದಾರೆ…
ಮೈಸೂರು: ಭಾರತದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು, ದೇಶದ್ರೋಹಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ. ನಮ್ಮ ದೇಶದ ಅನ್ನ ತಿಂದು, ನಮ್ಮ ನೀರು ಕುಡಿದು ಶತ್ರುಗಳಿಗೆ ಜೈ ಎನ್ನುವವರನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ. ಇದೇ ವೇಳೆ ಸಾಮಾನ್ಯ ಜನಗಣತಿಯ ಜೊತೆಗೆ ಜಾತಿ ಜನಗಣತಿ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಅವರು, ಎಲ್ಲಾ ಸಮುದಾಯಗಳ ನಾಯಕರು ಈ ಪ್ರಯತ್ನವನ್ನು ಬೆಂಬಲಿಸುವಂತೆ ಒತ್ತಾಯಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ರಾಮನಗರ: ತಾನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರ ಪತ್ನಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ರಾಮನಗರ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ತಾಲ್ಲೂಕಿನ ಇಲವಾಲದ ಪವಿತ್ರ ಬಂಧಿತ ಶಿಕ್ಷಕಿಯಾಗಿದ್ದಾರೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಪವಿತ್ರ ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ ಮೂಲದವರು. ಪತಿಯಿಂದ ವಿಚ್ಛೇದನ ಪಡೆದಿರುವ ಆಕೆ ಪ್ರತ್ಯೇಕವಾಗಿ ವಾಸವಾಗಿದ್ದರು. ಮಾನಸಿಕವಾಗಿಯೂ ಕುಗ್ಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತನ್ನ ಚಿತ್ರಗಳನ್ನು ಎಡಿಟ್ ಮಾಡಿ ಸುರೇಶ್ ಚಿತ್ರದೊಂದಿಗೆ ಜೋಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಳು. ವಿಡಿಯೊ ಕೂಡ ಹರಿಬಿಟ್ಟಿದ್ದಳು. ಪವಿತ್ರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಮೈಸೂರಿಗೆ ತೆರಳಿ ಬಂಧಿಸಲಾಯಿತು. ಕೋರ್ಟ್ಗೆ ಹಾಜರುಪಡಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು ಎಂದು ಮೂಲಗಳು ಹೇಳಿವೆ. ಅಕ್ಕಪಕ್ಕದ ಮನೆಯವರ ಕಿರಿಕಿರಿ ಸಹಿಸಲಾರದೇ,ಅವರನ್ನು ಹೆದರಿಸಲು ಈ ರೀತಿಯಾಗಿ ಶಿಕ್ಷಕಿ ವಿಡಿಯೋ ಮಾಡಿ ಹರಿಯಬಿಟ್ಟಿರುವುದಾಗಿ ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಮಂಗಳೂರು: ಮಂಗಳೂರಿನಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ನಡೆಸಲಾಗಿದ್ದು, ಈತ 2022 ರಲ್ಲಿ ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದು, ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಮಂಗಳೂರು ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸೆಕ್ಷನ್ 163 ಜಾರಿಗೊಳಿಸಲಾಗಿದೆ. ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ‘ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್,…
ತುಮಕೂರು: ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಇಂದು ತಮ್ಮ ಹುಟ್ಟುಹಬ್ಬವನ್ನು ಕಾರ್ಮಿಕ ದಿನಾಚರಣೆಯ ಮೂಲಕ ಕಾರ್ಮಿಕರಿಗೆ ಅಗತ್ಯ ಸಾಮಗ್ರಿಗಳನ್ನು ಹಾಗೂ ಅವರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ವಿಭಿನ್ನವಾಗಿ ಆಚರಿಸಿಕೊಂಡರು. ಅಲ್ಲದೆ ಯಾವುದೇ ರೀತಿಯ ಹೂವು ಬೊಕ್ಕೆ ಹಾರ ಸ್ವೀಕರಿಸದೆ ಕೇವಲ ನೋಟ್ ಪುಸ್ತಕಗಳನ್ನು ಅಭಿಮಾನಿಗಳಿಂದ ಸ್ವೀಕರಿಸಿ ಅದನ್ನು ದಾನದ ರೂಪದಲ್ಲಿ ಮಕ್ಕಳಿಗೆ ವಿತರಿಸಿದರು. ಇನ್ನು ಈ ನಡುವೆ ಹುಟ್ಟು ಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯವನ್ನು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ತುಮಕೂರು: ಒನ್ ನೇಷನ್, ಒನ್ ಎಲೆಕ್ಷನ್ ಮಹಿಳಾ ಮೀಸಲಾತಿ ಬಿಲ್ ಮತ್ತು ಜಾತಿಗಣತಿ ಇವೆಲ್ಲಾ ಕೇಂದ್ರ ಸರ್ಕಾರದ, ಮೋದಿ ಅವರ ದೂರದೃಷ್ಟಿಯ ಚಿಂತನೆ ಆಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಗಾಳಿಯಲ್ಲಿ ಗುಂಡು ಹೊಡೆಯೋದನ್ನ ಬಿಟ್ಟು, ರಾಜ್ಯದ ಅಭಿವೃದ್ಧಿಗೆ ಶ್ರಮಿಸೋದು ಉತ್ತಮ. ಪ್ರಧಾನಿ ಮೋದಿ ಅವರ ಯಾವುದೇ ಕಾರ್ಯಕ್ರಮಗಳು ದೂರದೃಷ್ಟಿಯಿಂದ ತುಂಬಿದೆ ಎಂದು ತಿಳಿಸಿದರು. ಮತ್ತೆ ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಜಾತಿ ಗಣತಿ ಮಾಡೋದ್ರಿಂದ ಎಲ್ಲರಿಗೂ ಒಂದು ಸಂದೇಶ ತಲುಪುತ್ತದೆ.ಈ ದೇಶ ಜಾತ್ಯಾತೀತ ರಾಷ್ಟ್ರ, ಸುಮಾರು ವರ್ಷಗಳಿಂದ ಜಾತಿಗಣತಿ ಮಾಡಬೇಕು ಅಂತಿತ್ತು ಹಾಗಾಗಿ ಮಾಡ್ತಿದ್ದೇವೆ ಎಂದರು. ಕಾಂಗ್ರೆಸ್ ನವರು ಇಷ್ಟು ವರ್ಷ ಇದ್ರರಲ್ಲ. ಅವರು ಯಾಕೆ ಜಾತಿಗಣತಿ ಮಾಡಲಿಲ್ಲ.ದೇಶದ ಜ್ವಲಂತ ಸಮಸ್ಯೆಗಳಿಗೆ ಮೋದಿ ಅವರು ಪರಿಹಾರ ಕಂಡುಕೊಂಡಿದ್ದಾರೆ ಎಂದರು. 25 ಕೋಟಿ ಕುಟುಂಬವನ್ನ ಮೇಲೆಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದ ಜಾತಿಗಣತಿಗೆ ಬೆಲೆ ಇಲ್ಲ.ಅದು ಹೊರಟು ಹೊಗಿದೆ. ಜಾತಿಗಣತಿ ಮಾಡೋ ಪವರ್ ಇರೋದು ಕೇಂದ್ರ…