Author: admin

ಸರಗೂರು: ಮಹಾಡ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು, ಇದನ್ನು ಭಾರತದ ಮಟ್ಟದಲ್ಲಿ ದಲಿತ ಚಳುವಳಿಗೆ ಅಡಿಪಾಯ ಹಾಕಿದ ಅಂಬೇಡ್ಕರ್ ರವರು ಎಂದು ಕರೆಯಲಾಗುತ್ತದೆ ಎಂದು ದಸಂಸ ಅಂಬೇಡ್ಕರ್ ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ದಸಂಸ ಅಂಬೇಡ್ಕರ್ ವಾದ ಸಂಘಟನೆ ವತಿಯಿಂದ ಭಾರತದ ಅಸ್ಪೃಶ್ಯರ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕುಡಿಯುವ ನೀರಿಗಾಗಿ ಅಂಬೇಡ್ಕರ್ ಕೈಗೊಂಡ ಮಹಾಡ್ ‌ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳುವಳಿ. ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ ಹೇಳಿ ಮಾನವ ಹಕ್ಕುಗಳನ್ನು ಎತ್ತಿಹಿಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ಮಹಾಡ್‌ ದಲ್ಲಿ 1927ರ ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ…

Read More

ಬೀದರ್ : ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದಂತೆ ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ನೀರಿನ ಸಮಸ್ಯೆಯ ಕುರಿತು ಪಂಚಾಯತ್‌ ಅಧಿಕಾರಿಗಳಿಂದ ಗ್ರಾಮವಾರು ಮಾಹಿತಿ ಪಡೆದ ಅವರು, ಪ್ರತಿದಿನ ಒಂದಿಲ್ಲೊಂದು ಗ್ರಾಮದ ಜನರು ನೀರಿನ ಸಮಸ್ಯೆ ಹೇಳಿಕೊಂಡು ಬರುತ್ತಿದ್ದಾರೆ. ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಖಾಸಗಿ ಬೋರವೆಲ್ ಇಲ್ಲವೇ ಹೊಸ ಬೋರ್‌ವೆಲ್ ಕೊರೆಸಿ ನೀರು ಸರಬರಾಜು ಮಾಡಬೇಕು. ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು. ಸಮಸ್ಯೆಯ ತೀವ್ರತೆ ಹೆಚ್ಚಿರುವ ಗ್ರಾಮಗಳಲ್ಲಿ…

Read More

ಸುರಪುರವೆಂಬ ಊರಿನಲ್ಲಿ ಒಂದು ನಾಯಿ ಮತ್ತು ಒಂದು ಕೋಳಿಗೆ ಜಗಳ ಹತ್ತಿಕೊಂಡಿತು. ಅದರಂತೆ ಅವರುಗಳ ಹಿರಿಯ ಮುಖಂಡ ಹಿರಿಯ ನಾಯಿ, ಮತ್ತು ಹಿರಿಯ ರಾಣಿ ಕೋಳಿ ಬಳಿ ಬಂದು ನಮ್ಮ ಸಮಸ್ಯೆ ಬಗೆಹರಿಸಿಕೊಡಬೇಕಾಗಿ ಕೇಳಿಕೊಂಡವು. ಮುಖಂಡರುಗಳು ನಿಮ್ಮ ಸಮಸ್ಯೆ ಹೇಳಿ ಎಂದಾಗ ನಾಯಿಯು ಇನ್ನು ಮುಂದೆ ನಾನು ಯಾವಾಗಲೂ ಮನೆ ಕಾಯುವ ಕೆಲಸ ಮಾಡಲಾರೆ, ಈ ಕೋಳಿಯಾದರೋ ಬೆಳಗಿನ ಝಾವ ಎಲ್ಲರನ್ನೂ ಕೂಗಿ ಎಬ್ಬಿಸುವುದೊಂದೇ ಕೆಲಸ ಹಾಗಾಗಿ ಈ ಕೋಳಿಯ ಕೆಲಸ ಇನ್ನುಮಂದೆ ನಾನು ಮಾಡುತ್ತೇನೆ ಎಂದಿತು. ಕೋಳಿಯೂ ಕೂಡ ನಾನು ಊರಿನ ಜನರನ್ನೆಲ್ಲಾ ಎಬ್ಬಿಸಲು ನಾನು ಎಲ್ಲರಿಗಿಂತ ಮೊದಲು ಎದ್ದೂ ಎದ್ದೂ ಸಾಕಾಗಿ ಹೋಗಿದೆ. ಹಾಗಾಗಿ ಈ ನಾಯಿಯಂತೆ ಯಾವಾಗಲೂ ಮನೆಯ ಬಳಿ ಮಲಗಿಕೊಂಡು ಕಾಯುವ ಕೆಲಸ ಮಾಡುತ್ತೇನೆ ಎಂದಿತು. ಇವರುಗಳಿಗೆಲ್ಲಾ ಬುದ್ಧಿ ಕಲಿಸಲು ಮುಖಂಡರುಗಳು ತಮ್ಮ ತಮ್ಮಲ್ಲೇ ಮಾತನಾಡಿಕೊಂಡು ಹಾಗೇ ಆಗಲಿ ಎಂದರು. ಅದೇ ರೀತಿ ಅಂದು ರಾತ್ರಿ ಕೋಳಿಗಳೆಲ್ಲಾ ಸದ್ಯ ಇನ್ನು ಬೆಳಗ್ಗೆ ಬೇಗ ಏಳಬೇಕಿಲ್ಲ ಎಂದು…

Read More

ತುಮಕೂರು :  ಪ್ರೀತಿಸಿ ಮದುವೆಯಾದ ನಂತರ ಮೊದಲ ಪತಿಯ ಮಗುವನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ, ಹಾವು ಕಚ್ಚಿದೆ ಎಂದು ಸುಳ್ಳು ಹೇಳಿ ಅಂತ್ಯ ಸಂಸ್ಕಾರ ಮಾಡಿರುವ ಘಟನೆ ನಡೆದಿದೆ. ತುಮಕೂರಿನ ಸಿದ್ದಲಿಂಗಯ್ಯನ ಪಾಳ್ಯದ ಜಮೀನೊಂದರಲ್ಲಿ ಮಗುವಿನ ಶವ ತೆಗೆದು ಇಂದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ.  ಚಾಮರಾಜನಗರ ಮೂಲದ ಚಂದ್ರಶೇಖರ್‌, ಕಾವ್ಯ ಮಂಡ್ಯ ಜಿಲ್ಲೆ, ಬೆಳ್ಳೂರು ಕ್ರಾಸ್ ಮೂಲದವಳು ತುಮಕೂರು ತಾಲೂಕಿನ ಸಿದ್ಧಲಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದರು. ಕಾವ್ಯಾಗೆ ಈಗಾಗಲೇ ಅಶೋಕ ಎಂಬುವರ ಜತೆ ಮದುವೆಯಾಗಿತ್ತು. ಪ್ರೆಗ್ನೆಂಟ್ ಇದ್ದಾಗಲೇ ಚಂದ್ರಶೇಖರ್ ಜೊತೆ ಓಡಿ ಬಂದಿದ್ದ ಕಾವ್ಯ, ಬಳಿಕ ಮಿಥುನ್ ಗೌಡಗೆ ಜನ್ಮ ನೀಡಿದ್ದಳು. ಮಿಥುನ್ ವಿಚಾರದಲ್ಲಿ ಇಬ್ಬರ ಮಧ್ಯೆ ಕಲಹ ಉಂಟಾಗಿತ್ತು. ಚಂದ್ರಶೇಖರ್‌ ಕ್ರಷರ್ ನಲ್ಲಿ ಲಾರಿ ಡ್ರೈವರ್. ಕಾವ್ಯ ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದಳು. ಮಾರ್ಚ್‌ 20ರಂದು ಕಾವ್ಯಾ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಮಗು ಮೇಲೆ ಚಂದ್ರಶೇಖರ್‌ ಹಲ್ಲೆ ಮಾಡಿದ್ದು, ಪ್ರಜ್ಞೆ ತಪ್ಪಿತ್ತು. ಅಕ್ಕಪಕ್ಕದ ಮನೆಯವರಿಗೆ ಮಗುವಿಗೆ ಹಾವು ಕಚ್ಚಿದೆ ಎಂದು ಹೇಳಿದ್ದ ಆರೋಪಿ…

Read More

ಬೀದರ್: ಹುಮನಾಬಾದ ಪಟ್ಟಣದ ಡಾಕ್ಟರ್ ಕಾಲೋನಿ ಹತ್ತಿರ ಐ.ಪಿ.ಎಲ್ ಪಂದ್ಯಾವಳಿ ಹಿನ್ನೆಲೆ ಬೆಟ್ಟಿಂಗ್  ನಲ್ಲಿ  ನಿರತರಾದವರ ಮೇಲೆ  ಹುಮನಾಬಾದ ಪೊಲೀಸರು ದಾಳಿ ನಡೆಸಿ 2,500 ನಗದು ಸಹಿತ 12 ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಐ.ಪಿ.ಎಲ್ ಪಂದ್ಯಾವಳಿಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್ ಜಾಯೆಂಟ್ಸ್ ನಡುವೆ ನಡೆಯುತ್ತಿದ್ದ ಪಂದ್ಯಾಟ ನಡೆಯುತ್ತಿದ್ದ ವೇಳೆ ಹುಮನಾಬಾದ ಪಟ್ಟಣದ ಡಾಕ್ಟರ್ ಕಾಲೋನಿ ಹತ್ತಿರ ಹಣ ಬೆಟ್ಟಿಂಗ್ ಕಟ್ಟುತ್ತಿರುವ ಬಗ್ಗೆ ಬಂದ ನಿಖರ ಮಾಹಿತಿಯ ಮೇರೆಗೆ ಹುಮನಾಬಾದ ಪೊಲೀಸ್ ಠಾಣೆಯ ಪಿ.ಎಸ್.ಐ  ಸುರೇಶ ಚವ್ಹಾಣ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿತು. ದಾಳಿ ವೇಳೆ ಬೆಟ್ಟಿಂಗ್ ನಿರತರಿಂದ 2,500 ರೂ. ನಗದು, 10 ಸಾವಿರ ಮೌಲ್ಯದ 1 ಮೊಬೈಲ್ ಸೇರಿದಂತೆ ಒಟ್ಟು 12,500 ರೂಪಾಯಿ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಯಿತು.  ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ…

Read More

ತುಮಕೂರು:  ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 8ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ ನಡೆಯಲಿದೆ. ಸಂಸದರು ಸಭೆಯಲ್ಲಿ 2024-25ನೇ ಸಾಲಿನ ಮಾರ್ಚ್-2025ರ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಮುಖ್ಯಸ್ಥರು ತಪ್ಪದೆ ಖುದ್ದಾಗಿ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ದಿಶಾ ಸಮಿತಿ ಸದಸ್ಯ ಕಾರ್ಯದರ್ಶಿ ಜಿ.ಪ್ರಭು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಒಂದು ಹುದ್ದೆಯನ್ನು ಭರ್ತಿ ಮಾಡಲು ಬೆಂಗಳೂರಿನ ಸಕಾಲ ಮಿಷನ್‌ ಗೆ ಶಿಫಾರಸ್ಸು ಮಾಡಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾಡಳಿತಕ್ಕೆ ಸಹಕರಿಸಲು ಈ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಅವಶ್ಯಕತೆಯಿದೆ. ಅರ್ಜಿ ನಮೂನೆಯನ್ನು http://tumkur.nic.in ನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ “ಲಕೋಟೆ ಮೇಲೆ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯ ಅರ್ಜಿ” ಎಂದು ನಮೂದಿಸಿರಬೇಕು. ಅರ್ಜಿ ಸಲ್ಲಿಸುವವರು ಬಿ.ಇ./ಬಿ.ಟೆಕ್/ಬಿ.ಸಿ.ಎ. ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್/ಇನ್ಫಾರ್‌ ಮೇಷನ್ ಸೈನ್ಸ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಟೆಲಿಕಾಂ ವಿದ್ಯಾರ್ಹತೆ ಹೊಂದಿರಬೇಕು. ಸೇವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದವರಿಗೆ 27,100 ರೂ.ಗಳ ವೇತನ ನೀಡಲಾಗುವುದು. ಈ ಹುದ್ದೆಯ ಆಯ್ಕೆಯನ್ನು…

Read More

ತುಮಕೂರು:  ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗಾಗಿ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಮೈಸೂರಿನ ಫುಡ್ ಕ್ರಾಫ್ಟ್ ಇನ್ ಸ್ಟಿಟ್ಯೂಟ್(FCI) ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್(IHM) ಸಂಸ್ಥೆಗಳ ಮೂಲಕ ನೀಡಲಾಗುವುದು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹುದ್ದೆಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಕನಿಷ್ಠ 8ನೇ ತರಗತಿ ಪಾಸಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು. ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಮಾರ್ಚ್ 21ರೊಳಗಾಗಿ ನಗರದ ಅಶೋಕ ರಸ್ತೆ, ರೆಡ್‌ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ ಎಫ್ 232ರಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ…

Read More

ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ನಿರ್ಮಿಸಲಾಗಿರುವ ಉಪ–ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ರಾಜ್ಯ ಸಣ್ಣ ನೀರಾವರಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಶುಕ್ರವಾರ ಬೆಳಗ್ಗೆ 10ಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ.  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮೋಶನ್ ಸೊಸೈಟಿ (ಕೆಸ್ಟೆಪ್ಸ್) ಅನುದಾನದಲ್ಲಿ ಈ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗಿದೆ. ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವರು ಹಾಗೂ ತುಮಕೂರು ಸಂಸದರಾದ ಮಾನ್ಯ ಶ್ರೀ ವಿ. ಸೋಮಣ್ಣ, ಕರ್ನಾಟಕದ ಗೃಹಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಜಿ.ಪರಮೇಶ್ವರ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಈ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರೂ ಆಗಿರುವ ಕುಲಪತಿಗಳಾದ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾ ಜಮ್ ಜಮ್ ಉಪಸ್ಥಿತರಿರುವರು. ವಿಜ್ಞಾನವನ್ನು…

Read More

ಕೊರಟಗೆರೆ: 18ನೇ ಶತಮಾನದ ಆದಿ ಭಾಗದಲ್ಲಿ ಕೊರಟಗೆರೆ ಪ್ರಾಂತ್ಯಕ್ಕೆ ದೊರೆಯಾಗಿದ್ದ ಕುರಂಗರಾಜ ದಕ್ಷಿಣ ಭಾರತದ ಮೊದಲ ದಲಿತ ಜನಾಂಗದ ನಾಯಕ ಎಂದು ಕವಿಗಳಾದ ಡಾ.ಶಿವಣ್ಣ ತಿಮ್ಲಾಪುರ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ‘ಚಕೋರ’ ಉಪನ್ಯಾಸಮಾಲಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ಥಳೀಯ ದೊರೆ ಕುರಂಗರಾಜನು ತನ್ನ ಆಳ್ವಿಕೆಯಲ್ಲಿ ದೇವಾಲಯಗಳನ್ನು ಕಟ್ಟಿದ್ದು, ಚರ್ಮದ ನಾಣ್ಯಗಳನ್ನು ಬಳಕೆಗೆ ತಂದಿದ್ದು ಮುಂತಾದ ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಜನಸಾಮಾನ್ಯರ ದೊರೆಯಾಗಿದ್ದ ಎಂಬುದಾಗಿ ಆತನ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಈರಪ್ಪ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಳೀಯ ಇತಿಹಾಸದ ಪರಿಚಯ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿ ಆಗಬೇಕಿದೆ ಎಂದರು. ಕುರಂಗರಾಜನನ್ನು ಕುರಿತು ಕುರಂಗರಾಜ ವೈಭವ ಎಂಬ ಕಾದಂಬರಿಯನ್ನು ರಚಿಸಿ ಮತ್ತು ಅದನ್ನು ನಾಟಕ ರೂಪಕ್ಕೆ ಅಳವಡಿಸಿ ಜನಪ್ರಿಯಗೊಳಿಸಿದ ಡಾ.ಓ.ನಾಗರಾಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕುರಂಗರಾಜ ಇಡೀ ಕೊರಟಗೆರೆಯ ತಳ ಸಮುದಾಯಕ್ಕೆ…

Read More