Subscribe to Updates
Get the latest creative news from FooBar about art, design and business.
- ತುಮಕೂರು: ಎರಡು ದಿನ ವಿದ್ಯುತ್ ವ್ಯತ್ಯಯ: ವಿವರಗಳಿಗಾಗಿ ಈ ಸುದ್ದಿ ಓದಿ
- ಆರ್ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ
- “ಗಿಲ್ಲಿ ಒಬ್ಬನನ್ನು ಬಿಟ್ಟು ಮನೆಯವರೆಲ್ಲರೂ ನನಗೆ ಅಣ್ಣಂದಿರು” ಎಂದು ವೀಕ್ಷಕರ ತಲೆಗೆ ಹುಳಬಿಟ್ಟ ರಕ್ಷಿತಾ!
- ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
- ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
- ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
- ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
- ಗುಬ್ಬಿ: SBI ಬ್ಯಾಂಕ್ ನ ಎಟಿಎಂನಿಂದ ಹಣ ದೋಚಿದ ಕಳ್ಳರು
Author: admin
ಬೀದರ್: ಸಂತಪೂರ ವಲಯ ಅರಣ್ಯ ಅಧಿಕಾರಿಗಳು ಸರಿಯಾಗಿ ಕಚೇರಿಗೆ ಬರುತ್ತಿಲ್ಲ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಮತ್ತು ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ದಲಿತ ಸಂಘರ್ಷ ಸಮಿತಿ (ಭೀಮ ಮಾರ್ಗ) ಸಂಘಟನೆ ಔರಾದ್ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದರು. ಸಂತಪೂರ ವಲಯ ಅರಣ್ಯ ಅಧಿಕಾರಿಗಳು ಇವರು ಸರಿಯಾಗಿ ಕಚೇರಿಗೆ ಬರುತ್ತಿಲ್ಲ, ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ಔರಾದ (ಬಾ) ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸವಾಗಿರುವ ಬಗ್ಗೆ ಹಾಗೂ ಔರಾದ( ಬಾ) ತಾಲೂಕಿನಲ್ಲಿ ತೋಳ ಮತ್ತು ಜಿಂಕೆಗಳ ಹಾವಳಿ ತಡೆಗಟ್ಟುವ ಬಗ್ಗೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಸಂದರ್ಭದಲ್ಲಿ ತುಕಾರಾಮ ಹಸನ್ಮುಖಿ ತಾಲೂಕು ಅಧ್ಯಕ್ಷರು ದಲಿತ ಸಂಘರ್ಷ ಸಮಿತಿ ಭೀಮ ಮಾರ್ಗ ಔರಾದ, ನವನಾಥ ಚಟ್ನಾಳ, ಮಲ್ಲಿಕಾರ್ಜುಜೋನೇಕೇರಿ , ಪ್ರಕಾಶ್ ಕಾಂಬಳೆ, ಪ್ರವೀಣ್ ಜೀರಗಾ, ಬಸವರಾಜ್ ಲಾದಾ, ಗೌತಮ್ ಜೀರಗಾ ಮತ್ತಿತರರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಸರಗೂರು: ಚನ್ನಗುಂಡಿ ಕಾಲೋನಿಯ ಆಶ್ರಮ ಶಾಲೆಯನ್ನು ತಮ್ಮೆಲ್ಲರ ಆಶಯದಂತೆ ಹಂತಹಂತವಾಗಿ ಪದವಿ ಪೂರ್ವ ಶಿಕ್ಷಣದವರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ, ಇದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲ್ಲೂಕಿನ ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಗುಂಡಿ ಕಾಲೋನಿಯ ವಾಲ್ಮೀಕಿ ಮಹರ್ಷಿ ಗಿರಿಜನ ಆಶ್ರಮ ಶಾಲೆಯಲ್ಲಿ ಮಂಗಳವಾರದಂದು ಶಾಸಕರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಿ ಹಾಡಿಯ ಮತ್ತು ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ನಂತರ ಮಾತನಾಡಿದರು. ಶಾಲೆಯ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಲಾಗುವುದು, ಆದಿವಾಸಿ ಜನಾಂಗದ ವಸತಿ ರಹಿತರಿಗೆ ವಿಷೇಶ ಘಟಕ ಯೋಜನೆಯಡಿ ವಸತಿ ಮಂಜೂರು ಮಾಡಲು ಕ್ರಮ ವಹಿಸಲಾಗುವುದು ಎಂದರು. ಆದಿವಾಸಿಗಳಿಗೆ ಆರು ತಿಂಗಳು ನೀಡುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಗಳನ್ನು ವರ್ಷಪೂರ್ತಿ ನೀಡುವಂತೆ ಮುಖ್ಯ ಮಂತ್ರಿಗಳ ಗಮನ ಸೆಳೆದು ರಾಜ್ಯಾದ್ಯಾಂತ ಆದಿವಾಸಿಗಳಿಗೆ ವಿತರಿಸಲಾಗುತ್ತಿದೆ ಇದರ ಸದ್ಬಳಕೆಯನ್ನು ಮಾಡಿಕೊಂಡು ಆರೋಗ್ಯವಂತರಾಗಿ ಜೀವನ ನಡೆಸಬೇಕೆಂದರು ಎಂದರು. ಚನ್ನಗುಂಡಿ ಕಾಲೋನಿ, ಅಳಲಹಳ್ಳಿ ಕಾಲೋನಿ, ಯಶವಂತಪುರ, ಎತ್ತಿಗೆ ಗ್ರಾಮಗಳ ಸಿಸಿ ರಸ್ತೆ…
ಕೂಡ್ಲಿಗಿ: ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು , ಶಿಕ್ಷಕರು ವಿದ್ಯಾರ್ಥಿಗಳಿಗೆ ಹೃದಯವಂತಿಕೆಯಿಂದ ಶಿಕ್ಷಣ ನೀಡಬೇಕಿದೆ ಎಂದು ಸಮಾಜ ಸೇವಕರು ಹಾಗೂ ಸ್ನೇಹಿತರ ಬಳಗದ ಅಧ್ಯಕ್ಷರಾದ , ಬಿ.ಅಬ್ದುಲ್ ರಹಮಾನ್ ನುಡಿದರು. ಡಾಕ್ಟರ್ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹುಟ್ಟು ಜನ್ಮದಿನದ ಪ್ರಯುಕ್ತ. ಮೌಲಾನಾ ಅಬುಲ್ ಕಲಾಂ ಆಜಾದ್ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಉರ್ದು ಶಾಲೆಯ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಶಿಕ್ಷಣ ದಿನಾಚರಣೆ ಹಾಗೂ ಅಬುಲ್ ಕಲಾಂ ಆಜಾದ್ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತ, ಇಸ್ಲಾಂ, ಬೌದ್ಧ, ಸಿಖ್ ಸೇರಿದಂತೆ, ಸರ್ವರಲ್ಲಿಯೂ ಮಾನವೀಯ ಮೌಲ್ಯಗಳ ಮೂಲಕ, ಏಕತೆಯನ್ನು ತೋರಿಸಿಕೊಟ್ಟ ಮಹಾನ್ ವ್ಯಕ್ತಿ ಅಬುಲ್ ಕಲಾಂರವರಾಗಿದ್ದಾರೆ. ಅವರು ಆಜಾದ್ ಸ್ವತಂತ್ರ ಹೋರಾಟಗಾರರು, ಸರ್ವರಲ್ಲಿಯೂ ಏಕತೆಯನ್ನು ಸಾರಿದವರು ಎಂದರು. ಮೌಲಾನಾ ಅಬುಲ್ ಕಲಾಂ ಆಜಾದ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಾಮಕೃಷ್ಣ, ಉರ್ದು ಶಾಲೆಯ ಮುಖ್ಯ ಶಿಕ್ಷಕ ಅನಂತಕುಮಾರ್, ವಿಶ್ವಚೇತನ ಸಂಸ್ಥೆಯ…
ಸರಗೂರು: ತಾಲೂಕಿನ ತುಂಬಸೋಗೆ ಗ್ರಾಮದ ಬಳಿ ಕಪಿಲ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯನ್ನು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಶಾಸಕರು, ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ಸಮೀಪದ ತುಂಬಸೋಗೆ ಗ್ರಾಮದಲ್ಲಿ ಮಂಗಳವಾರದಂದು 35 ಲಕ್ಷ ರೂ. ವೆಚ್ಚದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಬಿನಿ ಜಲಾಶಯ ನಿರ್ಮಾಣದ ವೇಳೆ ನಿರ್ಮಿಸಲಾದ ಸೇತುವೆ ತುಂಬಾ ಹಳೆಯದಾಗಿದ್ದು, ಶಿಥಿಲಗೊಂಡಿದೆ. ಹೀಗಾಗಿ ನೂತನವಾಗಿ ನಿರ್ಮಾಣ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ 30 ಕೋಟಿ ರೂ.ಅನುದಾನ ದೊರಕಿದ್ದು, ಎರಡು ಬಸ್ ಹೋಗುವಂತೆ ಸೇತುವೆ ಅಗಲೀಕರಣ ಮಾಡಲಾಗುವುದು. ಇದಲ್ಲದೆ ಸರಗೂರು ಹ್ಯಾಂಡ್ ಪೋಸ್ಟ್ ರಸ್ತೆಯನ್ನು ದ್ವಿಪಥ ರಸ್ತೆ ಮಾಡಲು ಸರಕಾರ ಗಮನಕ್ಕೆ ತರಲಾಗಿದೆ ಎಂದು ಅವರು ಹೇಳಿದರು. ಹೈಟೆಕ್ ಭವನ: ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ವಾಲ್ಮೀಕಿ ಭವನ ಮಾದರಿಯಲ್ಲಿಯೇ ಗ್ರಾಮದಲ್ಲಿ ಭವನ ನಿರ್ಮಾಣಗೊಳ್ಳಬೇಕು. ಶುಭ, ಸಮಾರಂಭಗಳು ನಡೆಯುವಂತೆ ನೋಡಿಕೊಳ್ಳ ಬೇಕು. ಇದಕ್ಕಾಗಿ…
ಕೊರಟಗೆರೆ : ಕಣ್ಣಿನ ಸಮಸ್ಯೆಗಳು ನಮ್ಮ ದೈನಂದಿನ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತವೆ. ಸರಿಯಾದ ಸಮಯದಲ್ಲಿ ತಪಾಸಣೆ ಮಾಡಿಸಿಕೊಳ್ಳುವುದು ಬಹಳ ಮುಖ್ಯ ಎಂದು ಹಾಲಪ್ಪ ಪೌಂಡೇಷನ್ ಅಧ್ಯಕ್ಷರಾದ ಮುರುಳಿಧರ ಹಾಲಪ್ಪ ತಿಳಿಸಿದರು. ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಹಾಲಪ್ಪ ಪೌಂಡೇಷನ್ ವತಿಯಿಂದ ಸತ್ಯ ಸಾಯಿಬಾಬ 100ನೇ ಜನ್ಮ ವರ್ಧಂತಿ ಪ್ರಯುಕ್ತ ಆಯೋಜಿಸಲಾದ ಕಣ್ಣಿನ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ನಿಷೇಧಿಸುವುದರಿಂದ ಆರೋಗ್ಯದ ಮೇಲೆ ಬೀರುವ ದುಷ್ಪಾರಿಣಾಮವನ್ನು ತಪ್ಪಿಸಬಹುದು ಜೊತೆಗೆ ಶಿಕ್ಷಣದಲ್ಲಿ ಉನ್ನತ ಪ್ರಗತಿ ಸಾಧಿಸಬಹುದು. ದೇಶದ ಪ್ರಗತಿಗೆ ಹೆಣ್ಣುಮಕ್ಕಳ ಪಾತ್ರ ಪ್ರಮುಖವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಯತ್ತ ವಿದ್ಯಾರ್ಥಿಗಳು ಹೆಚ್ಚಿನ ಗಮನಹರಿಸಿ ದಿನಪತ್ರಿಕೆ ಓದುವ ಹವ್ಯಾಸ ಹೆಚ್ಚಾಗಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಅಮೆರಿಕಾದ ಡಾ.ನಿತೀನ್ ಶಾ ಶಿಬಿರ ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕಣ್ಣಿನ ಸಮಸ್ಯೆ ಇದ್ದಲ್ಲಿ ನಿರ್ಲಕ್ಷ ತೋರದೆ ಶಿಬಿರದಲ್ಲಿ ಪರೀಕ್ಷೆ ಮಾಡಿಸಿ ವೈದ್ಯರ ಸಲಹೆ ಪಡೆಯುವುದು ಸೂಕ್ತ. ದೃಷ್ಠಿ ದೋಷದಿಂದ ಟಾಪರ್ ವಿದ್ಯಾರ್ಥಿಗಳು…
ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ತಿಪಟೂರು ವಿಭಾಗದ ಇಬ್ಬರು ಎಂಜಿನಿಯರುಗಳು ಮಂಗಳವಾರ ಲೋಕಾಯಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ನಗರದ ಪ್ರವಾಸಿ ಮಂದಿರದ ಬಳಿ 34,500 ಲಂಚದ ಹಣ ತೆಗೆದುಕೊಳ್ಳುವ ಸಮಯದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಸಿ.ಸ್ವಾಮಿ ಎಂಬುವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಲ್ ಮಾಡಿಕೊಡಲು ಹಣಕ್ಕೆ ಒತ್ತಾಯಿಸಿದ್ದ ಮತ್ತೊಬ್ಬ ಎಂಜಿನಿಯರ್ ಸುಹಾಸ್ ಎಂಬುವರನ್ನು ತಿಪಟೂರು ಕಚೇರಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯವರ್ತಿಯಾಗಿ ಕೆಲಸ ಮಾಡಿದ ಕಂಪ್ಯೂಟರ್ ಆಪರೇಟರ್ ಹರೀಶ್ ಎಂಬುವರ ವಿಚಾರಣೆ ಮುಂದುವರಿದಿದೆ. ತಿಪಟೂರು ತಾಲ್ಲೂಕಿನಲ್ಲಿ ಶಾಲೆ ದುರಸ್ತಿ ಮಾಡಿದ 6.50 ಲಕ್ಷ ಬಿಲ್ ಪಾವತಿಗೆ ಹೊಸದುರ್ಗ ಭಾಗದ ಗುತ್ತಿಗೆದಾರ ಸುನಿಲ್ ಮನವಿ ಮಾಡಿಕೊಂಡಿದ್ದರು. ಬಿಲ್ ಹಣ ಪಾವತಿಗೆ 47,500 ಲಂಚಕ್ಕೆ ಇಬ್ಬರು ಎಂಜಿನಿಯರುಗಳು ಬೇಡಿಕೆ ಇಟ್ಟಿದ್ದರು. ಮೊದಲ ಕಂತಿನಲ್ಲಿ 13 ಸಾವಿರವನ್ನು ಕಂಪ್ಯೂಟರ್ ಆಪರೇಟರ್ ಹರೀಶ್ ಬ್ಯಾಂಕ್ ಖಾತೆಗೆ ಸುನಿಲ್ ವರ್ಗಾವಣೆ ಮಾಡಿದ್ದರು. ಉಳಿದ…
ತುಮಕೂರು: ವಿನಾಯಕ ನಗರದ ಗಣಪತಿ ದೇವಸ್ಥಾನದ ಮುಂಭಾಗ, ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ ವತಿಯಿಂದ 4ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಧ್ವಜಾರೋಹಣ ಮಾಡುವುದರ ಮೂಲಕ, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು. ನ.5 ರಂದು ಸಂಜೆ 6.30ಕ್ಕೆ ಶಂಕರ್ ಮೆಲೋಡಿಸ್ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿದ್ದು ಪ್ರಜಾ ಪ್ರಗತಿ ಸಂಪಾದಕರಾದ ಎಸ್.ನಾಗಣ್ಣ ರವರು ಜ್ಯೋತಿಯನ್ನು ಬೆಳಗುವ ಮೂಲಕ ಚಾಲನೆ ನೀಡಿದರು. ಸಾವಿರ ಚಿತ್ರಗಳ ಸರದಾರ ಹಿರಿಯ ಕಲಾವಿದರಾದ ಹೊನವಳ್ಳಿ ಕೃಷ್ಣ ರವರು ಕನ್ನಡ ಭಾಷೆ ನುಡಿ ಹಾಗೂ ಕಾರ್ಯಕ್ರಮದ ಬಗ್ಗೆ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸ್ಪೂರ್ತಿ ಡೆವೆಲಪರ್ಸ್ ಮಾಲೀಕರಾದ ಚಿದಾನಂದ ರವರು ಹಿರಿಯ ಮುಖಂಡರಾದ ಪ್ರಸನ್ನ ಪಚ್ಚಿ, ಜೋಡೆತ್ತು ನಾಗರಾಜು, ಮಧುಸೂದನ್, ಜಿಯ ಉಲ್ಲಾ, ಎಸ್ ಎಲ್ ವಿ ಫರ್ನಿಚರ್ಸ್ ಮಾಲೀಕರಾದ ಶಂಕರ್,ರವರು ಹಾಗೂ ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆಯ ಅಧ್ಯಕ್ಷರಾದ ಲೋಕೇಶ್, ಗೌರವ ಅಧ್ಯಕ್ಷರಾದ ಹೈಟೆಕ್ ರಾಜು,ಕಿರಣ್ ರಾವ್, ಪದಾಧಿಕಾರಿಗಳಾದ ಕುಮಾರ್, ಶಿವರಾಜು,…
ತುಮಕೂರು: ದೇಶದಲ್ಲಿ ಕೋಮು ದ್ವೇಷ ಬಿತ್ತಿ, ಜಾತಿ ಜಾತಿಗಳ ನಡುವೆ ಕೋಮು ಗಲಭೆ ಸೃಷ್ಟಿಸುತ್ತಿರುವ ನೋಂದಣಿಯಾಗದ ಆರ್ ಎಸ್ ಎಸ್ ಸಂಘಟನೆಯನ್ನು ನಿಷೇಧಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಸಮಿತಿ ಮುಖಂಡರು ಮನವಿ ಸಲ್ಲಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರೆ ಮಾಡಿ ಅಶ್ಲೀಲ ಪದ ಬಳಸಿ, ಜೀವ ಬೆದರಿಕೆ ಹಾಕಿದ ಕಿಡಿಗೇಡಿಗಳನ್ನು ಕಾನೂನು ಪ್ರಕಾರ ಶಿಕ್ಷೆಗೆ ಗುರಿಪಡಿಸಬೇಕು. ಉದ್ದೇಶ ಪೂರಕವಾಗಿ ಚಿತ್ತಾಪುರವನ್ನು ಗುರಿಯಾಗಿಸಿಕೊಂಡು ಪಥಸಂಚಲವ ನಡೆಸಲು ಅರ್ ಎಸ್ ಎಸ್ ಮುಂದಾಗಿದ್ದು, ಅದಕ್ಕೆ ಸರ್ಕಾರ ಅನುಮತಿ ನೀಡಬಾರದು ಎಂದು ಒತ್ತಾಯಿಸಿದರು. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ವಕೀಲರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದರು. ಯಾವುದೇ ಕಾರಣಕ್ಕೂ ಆರ್‌ಎಸ್‌ಎಸ್, ವಿಶ್ವ ಹಿಂದೂ ಮಹಾಸಭಾದಂತಹ ಸಂಘಟನೆ ಜತೆಗೆ ಹೊಂದಾಣಿಕ ಮಾಡಿಕೊಳ್ಳಬಾರದು ಎಂದು ಬಿ.ಆರ್.ಅಂಬೇಡ್ಕರ್ ಅವರು ಪರಿಶಿಷ್ಟ ಜಾತಿಗಳ…
ತುಮಕೂರು: ಈ ಬಾರಿ ರಂಗಾಯಣ ವತಿಯಿಂದ ನಾಟಕೋತ್ಸವವನ್ನು ನ.17ರಿಂದ 21ರವರೆಗೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಸತೀಶ್ ತಿಪಟೂರು ಸೋಮವಾರ ತಿಳಿಸಿದರು. ನಗರ ವ್ಯಾಪ್ತಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಬಹುದು. ನಾಟಕೋತ್ಸವದಲ್ಲಿ ಗಣೇಶ ಮಂದಾರ್ತಿ ನಿರ್ದೇಶನದ ‘ಮೈ ಫ್ಯಾಮಿಲಿ’ ನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ದಿನ ಬೆಳಿಗ್ಗೆ 10.30 ಹಾಗೂ ಮಧ್ಯಾಹ್ನ 2 ಗ೦ಟೆಗೆ ನಾಟಕ ಪ್ರದರ್ಶನ ಆರಂಭವಾಗಲಿದೆ. ಪ್ರವೇಶ ದರ ಪ್ರತಿ ವಿದ್ಯಾರ್ಥಿಗೆ 750 ನಿಗದಿಪಡಿಸಲಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ತಂತ್ರಜ್ಞಾನ ಯುಗದ ಇಂದಿನ ಕಾಲಘಟ್ಟದಲ್ಲಿ ಮೊಬೈಲ್ ಮೂಲಕ ಹಲವು ವರ್ಚುವಲ್ ಲೋಕದಲ್ಲಿ ಬದುಕುತ್ತಿದ್ದೇವೆ. ಈ ‘ವಚ್ಯುಯಲ್ ಜಗತ್ತು’ ನಮ್ಮೆಲ್ಲರ ನಿಜ ಬದುಕಿನ ವಾಸ್ತವವಾಗಿದೆ. ಜತೆಗೆ ಪ್ರತಿಯೊಬ್ಬರ ಬದುಕಿನ ಲಯಗಳೂ ಬೇರೆ– ಬೇರೆಯಾಗಿವೆ. ಹೀಗೆ ಅಸಹಜ ಮತ್ತು ಸಹಜ ಬದುಕಿನ ನಡುವಿನ ವ್ಯತ್ಯಾಸಗಳೇ ಅರಿವಾಗದಂತೆ, ಛಿದ್ರಗೊಂಡಂತೆ ಭಾಸವಾಗುತ್ತಿರುವ ಲೋಕವನ್ನು ಪ್ರಕೃತಿ ಸಹಜಲಯ ಮತ್ತು ಭಾವ–ಬಂಧದಲ್ಲಿ ಧ್ಯಾನಿಸುತ್ತಾ ವಾಸ್ತವ ಲೋಕದ ಅರಿವನ್ನು ಪಡೆದುಕೊಳ್ಳುವ ಪ್ರಯತ್ನ…
ತುಮಕೂರು: ಮನೆ–ಮನೆಗೆ ಪೊಲೀಸ್ ಕಾರ್ಯಕ್ರಮದ ಭಾಗವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ನಗರದ ಜಯನಗರದ ಮನೆಗಳಿಗೆ ಸೋಮವಾರ ಭೇಟಿ ನೀಡಿ ಜನರ ಅಹವಾಲು ಕೇಳಿದರು. ಸಾರ್ವಜನಿಕರ ಸಮಸ್ಯೆ ಆಲಿಸುವ ಉದ್ದೇಶದಿಂದ ಮನೆ ಬಾಗಿಲಿಗೆ ಪೊಲೀಸ್ ಎಂಬ ವಿಶೇಷ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಏನಾದರೂ ತೊಂದರೆಯಾದರೆ ಪೊಲೀಸ್ ಸಿಬ್ಬಂದಿ ಬಳಿ ತಿಳಿಸುವಂತೆ ಅರಿವು ಮೂಡಿಸಿದರು. ಈ ಭಾಗದಲ್ಲಿ ಹೆಚ್ಚಿನ ಸಮಸ್ಯೆಗಳು ಇಲ್ಲ. ವಿದ್ಯುತ್ ದೀಪ ಬೆಳಗುವುದಿಲ್ಲ. ರಾತ್ರಿಯಾದರೆ ಕತ್ತಲು ಆವರಿಸುತ್ತದೆ. ದೀಪದ ವ್ಯವಸ್ಥೆ ಮಾಡಿದರೆ ರಸ್ತೆಯಲ್ಲಿ ಓಡಾಡುವವರಿಗೆ ಅನುಕೂಲವಾಗುತ್ತದೆ’ ಎಂದು ಜಯನಗರದ ನಿವಾಸಿಗಳು ಸಚಿವರ ಗಮನಕ್ಕೆ ತಂದರು. ಇದಕ್ಕೂ ಮುನ್ನ ಜಯನಗರ ಪೊಲೀಸ್ ಠಾಣೆಯ ಹೊಸ ಕಟ್ಟಡ, ಪೊಲೀಸ್ ವಸತಿ ಗೃಹ, ಸೈಬರ್ ತರಬೇತಿ ವಿಭಾಗವನ್ನು ಸಚಿವರು ಉದ್ಘಾಟಿಸಿದರು. ನಂತರ ಎಂಪ್ರೆಸ್ ಕಾಲೇಜು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿಗೆ ‘ಪೀಕ್ ಕ್ಯಾಪ್ ವಿತರಿಸಿ ಮಾತನಾಡಿದರು. ‘ಪೊಲೀಸ್ ಸಿಬ್ಬಂದಿಗೆ ರಾಜ್ಯದಲ್ಲಿ 33 ಸಾವಿರ ಮನೆ ನಿರ್ಮಿಸಲಾಗಿದೆ. ಈಗಾಗಲೇ ಶೇ 60ರಷ್ಟು ಸಿಬ್ಬಂದಿಗೆ ಮನ ನೀಡಲಾಗಿದೆ. ಇನ್ನೂ…